Tag: ಮಾಹಿತಿ ಆಯುಕ್ತ

  • ರಾಜ್ಯ ಮಾಹಿತಿ ಆಯುಕ್ತರಾಗಿ ಮೂವರು ಪ್ರಮಾಣ ವಚನ ಸ್ವೀಕಾರ

    ರಾಜ್ಯ ಮಾಹಿತಿ ಆಯುಕ್ತರಾಗಿ ಮೂವರು ಪ್ರಮಾಣ ವಚನ ಸ್ವೀಕಾರ

    ಬೆಂಗಳೂರು: ನೂತನವಾಗಿ ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾಗಿ (Karnataka State Information Commissioners ) ನೇಮಕವಾಗಿರುವ ಡಾ. ರಿಚರ್ಡ್ ವಿನ್ಸೆಂಟ್‌ ಡಿಸೋಜ, ಬಿ. ವೆಂಕಟ್ ಸಿಂಗ್ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

    ಇಂದು ರಾಜಭವನದ ಬ್ಯಾಂಕ್ವೇಟ್ ‌ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸರಳ ಸಮಾರಂಭದಲ್ಲಿ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ನೂತನವಾಗಿ ನೇಮಕವಾಗಿರುವ ಗೌರವಾನ್ವಿತ ರಾಜ್ಯ ಮಾಹಿತಿ ಆಯುಕ್ತರುಗಳಿಗೆ ಅಧಿಕಾರ ಪ್ರಮಾಣ ವಚನ ಬೋಧಿಸಿದರು. ಇದನ್ನೂ ಓದಿ: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ಮೂಗುದಾರ

     

    ಬೆಂಗಳೂರು ಪೀಠಕ್ಕೆ ನೂತನವಾಗಿ ನೇಮಕವಾಗಿರುವ ರಾಜ್ಯ ಮಾಹಿತಿ ಅಯುಕ್ತರುಗಳಾದ ಡಾ. ರಿಚರ್ಡ್ ವಿನ್ಸೆಂಟ್‌ ಡಿಸೋಜ ಹಾಗೂ ಡಾ. ಮಹೇಶ್ ವಾಳ್ವೇಕರ್ ಅವರು ದೇವರ ಹೆಸರಿನಲ್ಲಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರೆ, ಕಲಬುರಗಿ ಪೀಠಕ್ಕೆ ನೇಮಕವಾಗಿರುವ ಬಿ. ವೆಂಕಟ್ ಸಿಂಗ್ ಅವರು ದೇವರು ಮತ್ತು ಸಂವಿಧಾನದ ಹೆಸರಿನಲ್ಲಿ ಅಧಿಕಾರ ಪ್ರಮಾಣ ವಚನ ಸ್ವೀಕರಿಸಿದರು.

    ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾದ ಅಶಿತ್ ಮೋಹನ್ ಪ್ರಸಾದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಶ್, ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರುಗಳು ಹಾಗೂ ಮಾಹಿತಿ ಆಯೋಗದ ನಿವೃತ್ತ ಮಾಹಿತಿ ಆಯುಕ್ತರು ಸೇರಿದಂತೆ ಇತರೆ ಗಣ್ಯರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ರಾಜ್ಯ ಮಾಹಿತಿ ಆಯುಕ್ತರಾಗಿ ಬದ್ರುದ್ದೀನ್ ಕೆ.ಮಾಣಿ ಸೇರಿದಂತೆ 7 ಮಂದಿ ಪ್ರಮಾಣವಚನ ಸ್ವೀಕಾರ

    ರಾಜ್ಯ ಮಾಹಿತಿ ಆಯುಕ್ತರಾಗಿ ಬದ್ರುದ್ದೀನ್ ಕೆ.ಮಾಣಿ ಸೇರಿದಂತೆ 7 ಮಂದಿ ಪ್ರಮಾಣವಚನ ಸ್ವೀಕಾರ

    ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗಕ್ಕೆ ನೂತನವಾಗಿ ನೇಮಕವಾಗಿರುವ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು (Karnataka Chief Information Commissioner) ಹಾಗೂ ರಾಜ್ಯ ಮಾಹಿತಿ ಆಯುಕ್ತರುಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ರಾಜಭವನದ ಗಾಜಿನಮನೆಯಲ್ಲಿ ನಡೆಯಿತು.

    ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Tawar Chandra Gehlot) ಪ್ರಮಾಣ ವಚನ ಬೋಧನೆ ಮಾಡಿದರು. ರಾಜ್ಯ ಮುಖ್ಯ ಮಾಹಿತಿ ಆಯುಕ್ತರಾದ ಆಶಿತ್ ಮೋಹನ್ ಪ್ರಸಾದ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇದನ್ನೂ ಓದಿ: ಇದನ್ನೂ ಓದಿ: ದ್ರಾವಿಡ್‌ ಕಾರಿಗೆ ಗುದ್ದಿದ ಗೂಡ್ಸ್‌ ಆಟೋ

     

    ರಾಜ್ಯ ಮಾಹಿತಿ ಆಯುಕ್ತರಾಗಿ ಪಬ್ಲಿಕ್‌ ಟಿವಿಯ ಮಾಜಿ ಉದ್ಯೋಗಿ ಬದ್ರುದ್ದೀನ್ ಕೆ.ಮಾಣಿ (Badruddin Mani), ಕೆ. ರಮಣ್‌, ಡಾ.ಹರೀಶ್‌ಕುಮಾರ್‌, ನಾರಾಯಣ್‌ ಜಿ. ಚನ್ನಾಳ್‌, ನಿವೃತ್ತ ಐಎಎಸ್‌ ಅಧಿಕಾರಿ ಬಿ.ಆರ್‌. ಮಮತಾ, ಹಿರಿಯ ಪತ್ರಕರ್ತರಾದ ರುದ್ರಣ್ಣ ಹರ್ತಿಕೋಟೆ, ಎಸ್‌. ರಾಜಶೇಖರ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು.