Tag: ಮಿಚೆಲ್‌ ಮಾರ್ಚ್‌

  • ಬ್ಯಾಟಿಂಗ್‌ನಲ್ಲಿ ಕೈಕೊಟ್ಟರೂ ಬೌಲಿಂಗ್‌ನಲ್ಲಿ ಕೈಹಿಡಿದ ಮ್ಯಾಕ್ಸಿ – ಪಂದ್ಯ ಸೋತು ಸರಣಿ ಗೆದ್ದ ಭಾರತ

    ಬ್ಯಾಟಿಂಗ್‌ನಲ್ಲಿ ಕೈಕೊಟ್ಟರೂ ಬೌಲಿಂಗ್‌ನಲ್ಲಿ ಕೈಹಿಡಿದ ಮ್ಯಾಕ್ಸಿ – ಪಂದ್ಯ ಸೋತು ಸರಣಿ ಗೆದ್ದ ಭಾರತ

    ರಾಜ್‌ಕೋಟ್‌: ಗ್ಲೇನ್‌ ಮ್ಯಾಕ್ಸ್‌ವೆಲ್‌ (Glenn Maxwell) ಮಿಂಚಿನ ಬೌಲಿಂಗ್‌ ದಾಳಿಯಿಂದ ಆಸ್ಟ್ರೇಲಿಯಾ (Australia) ತಂಡವು ಅಂತಿಮ ಪಂದ್ಯದಲ್ಲಿ ಭಾರತದ ವಿರುದ್ಧ 66 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಆದ್ರೆ ಕಳೆದ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದ ಭಾರತ 2-1 ಅಂತರದಲ್ಲಿ ಸರಣಿ ಗೆದ್ದು ಬೀಗಿದೆ.

    ಇಲ್ಲಿನ ಸೌರಾಷ್ಟ್ರ ಕ್ರೀಡಾಂಗಣದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 352 ರನ್‌ ಗಳಿಸಿತ್ತು. 353 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಟೀಂ ಇಂಡಿಯಾ 49.4 ಓವರ್‌ಗಳಲ್ಲಿ 286 ರನ್‌ ಗಳಿಗೆ ಆಲೌಟ್‌ ಆಯಿತು. ಇದನ್ನೂ ಓದಿ: 20 ಓವರ್‌ಗಳಲ್ಲಿ 314 ರನ್‌, 9 ಎಸೆತಗಳಲ್ಲಿ ಸ್ಫೋಟಕ ಫಿಫ್ಟಿ; T20 ಕ್ರಿಕೆಟ್‌ನಲ್ಲಿ ವಿಶ್ವದಾಖಲೆ ನಿರ್ಮಿಸಿದ ನೇಪಾಳ

    ಆರಂಭಿಕರಾಗಿ ಕಣಕ್ಕಿಳಿದ ರೋಹಿತ್‌ ಶರ್ಮಾ (Rohit Sharma) ಹಾಗೂ ವಾಷಿಂಗ್ಟನ್‌ ಸುಂದರ್‌ ಜೋಡಿ 10.5 ಓವರ್‌ಗಳಲ್ಲಿ 74 ರನ್‌ ಜೊತೆಯಾಟ ನೀಡಿತ್ತು. ಆರಂಭದಿಂದಲೇ ಆಸೀಸ್‌ ಬೌಲರ್‌ಗಳನ್ನ ಬೆಂಡೆತ್ತಲು ಶುರು ಮಾಡಿದ ನಾಯಕ ರೋಹಿತ್‌ ಶರ್ಮಾ 31 ಎಸೆತಗಳಲ್ಲಿ 5 ಸಿಕ್ಸರ್‌, 3 ಬೌಂಡರಿಯೊಂದಿಗೆ ಅರ್ಧಶತಕ ಸಿಡಿಸಿದರು. ಇದೇ ವೇಳೆ ಮ್ಯಾಕ್ಸ್‌ವೆಲ್‌ ಬೌಲಿಂಗ್‌ನಲ್ಲಿ ಸಿಕ್ಸ್‌ ಸಿಡಿಸಲು ಯತ್ನಿಸಿದ ಸುಂದರ್‌ ಬೌಂಡರಿ ಲೈನ್‌ನಲ್ಲಿ ಕ್ಯಾಚ್‌ ನೀಡಿ ನಿರ್ಗಮಿಸಿದರು. ಇದನ್ನೂ ಓದಿ: Ind vs Aus: ವೈಟ್‌ವಾಶ್‌ನಿಂದ ತಪ್ಪಿಸಿಕೊಳ್ಳಲು ಆಸೀಸ್‌ ತವಕ – ಭಾರತಕ್ಕೆ 353 ರನ್‌ಗಳ ಗುರಿ

    57 ಎಸೆತಗಳಲ್ಲಿ 81 ರನ್‌ (6 ಸಿಕ್ಸರ್‌, 5 ಬೌಂಡರಿ) ಗಳಿಸಿ ಆಡುತ್ತಿದ್ದ ರೋಹಿತ್‌ ಶರ್ಮಾ‌, ಮ್ಯಾಕ್ಸ್‌ವೆಲ್‌ ಬೌಲಿಂಗ್‌ನಲ್ಲೇ ಸುಲಭ ಕ್ಯಾಚ್‌ಗೆ ತುತ್ತಾದರು. ಈ ಬೆನ್ನಲ್ಲೇ ರೋಹಿತ್‌ ಶರ್ಮಾ ಜೊತೆಗೂಡಿ 2ನೇ ವಿಕೆಟ್‌ಗೆ 61 ಎಸೆತಗಳಲ್ಲಿ 71 ರನ್‌ ಜೊತೆಯಾಟ ನೀಡಿದ್ದ ವಿರಾಟ್‌ ಕೊಹ್ಲಿ ಸಹ 56 ರನ್‌ (61 ಎಸೆತ, 1 ಸಿಕ್ಸರ್‌, 5 ಬೌಂಡರಿ) ಗಳಿಸಿ ಮ್ಯಾಕ್ಸ್‌ವೆಲ್‌ಗೆ ವಿಕೆಟ್‌ ಒಪ್ಪಿಸಿದರು. ನಂತರ ತಂಡದಲ್ಲಿ ಗೆಲುವಿನ ಭರವಸೆ ಮೂಡಿಸಿದ್ದ ಶ್ರೇಯಸ್‌ ಅಯ್ಯರ್‌ ಕೂಡ 48 ರನ್‌ (43 ಎಸೆತ, 2 ಸಿಕ್ಸರ್‌, 1 ಬೌಂಡರಿ) ಗಳಿಸಿ ಪೆವಿಲಿಯನ್‌ ಸೇರಿಕೊಂಡರು.

    ಬ್ಯಾಟಿಂಗ್‌ನಲ್ಲಿ ಕೇವಲ 5 ರನ್‌ ಗಳಿಸಿ ಕೈಕೊಟ್ಟಿದ್ದ ಮ್ಯಾಕ್ಸ್‌ವೆಲ್‌ ಟೀಂ ಇಂಡಿಯಾ ವಿರುದ್ಧ ಮಿಂಚಿನ ಬೌಲಿಂಗ್‌ ದಾಳಿ ನಡೆಸುವ ಮೂಲಕ ಆಸೀಸ್‌ ತಂಡದ ಗೆಲುವಿಗೆ ಕಾರಣವಾದರು. 10 ಓವರ್‌ಗಳಲ್ಲಿ 40 ರನ್‌ ಬಿಟ್ಟುಕೊಟ್ಟ ಮ್ಯಾಕ್ಸ್‌ವೆಲ್‌, ವಾಷಿಂಗ್ಟನ್‌ ಸುಂದರ್‌, ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ಶ್ರೇಯಸ್‌ ಅಯ್ಯರ್‌ ಪ್ರಮುಖರ ವಿಕೆಟ್‌ ಪಡೆಯುವ ಮೂಲಕ ಗೆಲುವು ತಂದುಕೊಟ್ಟರು.

    ಉಳಿದಂತೆ ಟೀಂ ಇಂಡಿಯಾ ಪರ ಕೆ.ಎಲ್‌ ರಾಹುಲ್‌ 26 ರನ್‌, ರವೀಂದ್ರ ಜಡೇಜಾ 35 ರನ್‌, ಸೂರ್ಯಕುಮಾರ್‌ ಯಾದವ್‌ 8 ರನ್‌, ಕುಲ್ದೀಪ್‌ ಯಾದವ್‌ 2 ರನ್‌, ಜಸ್ಪ್ರೀತ್‌ ಬುಮ್ರಾ 5 ರನ್‌ ಹಾಗೂ ಮೊಹಮ್ಮದ್‌ ಸಿರಾಜ್‌ 1 ರನ್‌ ಗಳಿಸಿದ್ರೆ, ಪ್ರಸಿದ್ಧ್‌ ಕೃಷ್ಣ ರನ್‌ ಗಳಿಸದೇ ಅಜೇಯರಾಗುಳಿದರು. ಆಸೀಸ್‌ ಪರ ಜಾಶ್‌ ಹ್ಯಾಜಲ್‌ವುಡ್‌ 2 ವಿಕೆಟ್‌ ಕಿತ್ತರೆ, ಮಿಚೆಲ್‌ ಸ್ಟಾರ್ಕ್‌, ಪ್ಯಾಟ್‌ ಕಮ್ಮಿನ್ಸ್‌, ಕ್ಯಾಮರೂನ್‌ ಗ್ರೀನ್‌, ತನ್ವೀರ್‌ ಸಂಘ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಕ್ರೀಸ್‌ಗಿಳಿದ ಆಸ್ಟ್ರೇಲಿಯಾದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಟೀಂ ಇಂಡಿಯಾ ಬೌಲರ್‌ಗಳನ್ನ ಬೆಂಡೆತ್ತಿದರು. ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್‌ ವಾರ್ನರ್‌ ಹಾಗೂ ಮಿಚೆಲ್‌ ಮಾರ್ಷ್‌ ಮೊದಲ ವಿಕೆಟ್‌ಗೆ 8.1 ಓವರ್‌ಗಳಲ್ಲಿ 78 ರನ್‌ಗಳ ಜೊತೆಯಾಟ ನೀಡಿದರು. 34 ಎಸೆತಗಳಲ್ಲಿ 56 ರನ್‌ (4 ಸಿಕ್ಸರ್‌, 6 ಬೌಂಡರಿ) ಗಳಿಸಿ ಡೇವಿಡ್‌ ವಾರ್ನರ್‌ ಔಟಾಗುತ್ತಿದ್ದಂತೆ, ಮಿಚೆಲ್‌ ಮಾರ್ಷ್‌ ಹಾಗೂ ಸ್ಟೀವ್‌ ಸ್ಮಿತ್‌ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. 2ನೇ ವಿಕೆಟ್‌ಗೆ ಈ ಜೋಡಿ 119 ಎಸೆತಗಳಲ್ಲಿ 137 ರನ್‌ ಬಾರಿಸಿತ್ತು.

    ಕಳೆದ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ಮಿಚೆಲ್‌ ಮಾರ್ಷ್‌ ಅಂತಿಮ ಪಂದ್ಯದಲ್ಲಿ ಶತಕ ವಂಚಿತರಾಗಿ ನಿರ್ಗಮಿಸಿದರು. 84 ಎಸೆತಗಳನ್ನು ಎದುರಿಸಿದ ಮಾರ್ಷ್‌ 96 ರನ್‌ (13 ಬೌಂಡರಿ, 3 ಸಿಕ್ಸರ್‌) ಬಾರಿಸಿದ್ರೆ, ಸ್ಟೀವ್‌ ಸ್ಮಿತ್‌ 61 ಎಸೆತಗಳಲ್ಲಿ 74 ರನ್‌ (8 ಬೌಂಡರಿ, 1 ಸಿಕ್ಸರ್‌) ರನ್‌ ಚಚ್ಚಿದರು. 27 ಓವರ್‌ಗಳಲ್ಲಿ ಕೇವಲ 1 ವಿಕೆಟ್‌ ಕಳೆದುಕೊಂಡಿದ್ದ ಆಸೀಸ್‌ ಪಡೆ 400 ರನ್‌ಗಳನ್ನು ಕಲೆಹಾಕುವ ಭರವಸೆ ಮೂಡಿಸಿತ್ತು. ಆದ್ರೆ ಸ್ಟೀವ್‌‌ ಸ್ಮಿತ್‌, ಮಿಚೆಲ್‌ ಮಾರ್ಚ್‌ ವಿಕೆಟ್‌ ಪತನ ಬಳಿಕ ರನ್‌ ವೇಗ ಕೂಡ ಕಡಿಮೆಯಾಯಿತು.

    ಅಂತಿಮವಾಗಿ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 352 ರನ್‌ ಗಳಿಸಿತು. ಆಸೀಸ್‌ ಪರ ಮಾರ್ನಸ್‌ ಲಾಬುಶೇನ್‌ 72 ರನ್‌ (9 ಬೌಂಡರಿ, 58 ಎಸೆತ), ಅಲೆಕ್ಸ್‌ ಕ್ಯಾರಿ 11 ರನ್‌, ಗ್ಲೇನ್‌ ಮ್ಯಾಕ್ಸ್‌ವೆಲ್‌ 5 ರನ್‌, ಕ್ಯಾಮರೂನ್‌ ಗ್ರೀನ್‌ 9 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಕೊನೆಯಲ್ಲಿ ಪ್ಯಾಟ್‌ ಕಮ್ಮಿನ್ಸ್‌ 19 ರನ್‌ ಹಾಘೂ ಮಿಚೆಲ್‌ ಸ್ಟಾರ್ಕ್‌ 1 ರನ್‌ ಗಳಿಸಿ ಅಜೇಯರಾಗುಳಿದರು.

    ಟೀಂ ಇಂಡಿಯಾ ಪರ ವೇಗಿ ಜಸ್ಪ್ರೀತ್‌ ಬುಮ್ರಾ 3 ವಿಕೆಟ್‌ ಕಿತ್ತರೆ, ಕುಲ್ದೀಪ್‌ ಯಾದವ್‌ 2 ವಿಕೆಟ್‌ ಹಾಗೂ ಮೊಹಮ್ಮದ್‌ ಸಿರಾಜ್‌, ಪ್ರಸಿದ್ಧ್‌ ಕೃಷ್ಣ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Ind vs Aus: ವೈಟ್‌ವಾಶ್‌ನಿಂದ ತಪ್ಪಿಸಿಕೊಳ್ಳಲು ಆಸೀಸ್‌ ತವಕ – ಭಾರತಕ್ಕೆ 353 ರನ್‌ಗಳ ಗುರಿ

    Ind vs Aus: ವೈಟ್‌ವಾಶ್‌ನಿಂದ ತಪ್ಪಿಸಿಕೊಳ್ಳಲು ಆಸೀಸ್‌ ತವಕ – ಭಾರತಕ್ಕೆ 353 ರನ್‌ಗಳ ಗುರಿ

    ರಾಜ್‌ಕೋಟ್‌: ಇಲ್ಲಿನ ಸೌರಾಷ್ಟ್ರ ಕ್ರೀಡಾಂಗಣದಲ್ಲಿ ಭಾರತದ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿರುವ ಆಸ್ಟ್ರೇಲಿಯಾ (Australia) 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 352 ರನ್‌ ಗಳಿಸಿ ಭಾರತಕ್ಕೆ (Team India) 353 ರನ್‌ಗಳ ಗುರಿ ನೀಡಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ವೈಟ್‌ವಾಶ್‌ನಿಂದ ತಪ್ಪಿಸಿಕೊಳ್ಳುವ ತವಕದಲ್ಲಿದೆ.

    ಟಾಸ್‌ ಗೆದ್ದು ಮೊದಲು ಕ್ರೀಸ್‌ಗಿಳಿದ ಆಸ್ಟ್ರೇಲಿಯಾದ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಟೀಂ ಇಂಡಿಯಾ (Team India) ಬೌಲರ್‌ಗಳನ್ನ ಬೆಂಡೆತ್ತಿದರು. ಆರಂಭಿಕರಾಗಿ ಕಣಕ್ಕಿಳಿದ ಡೇವಿಡ್‌ ವಾರ್ನರ್‌ ಹಾಗೂ ಮಿಚೆಲ್‌ ಮಾರ್ಷ್‌ (Mitchell March) ಮೊದಲ ವಿಕೆಟ್‌ಗೆ 8.1 ಓವರ್‌ಗಳಲ್ಲಿ 78 ರನ್‌ಗಳ ಜೊತೆಯಾಟ ನೀಡಿದರು. 34 ಎಸೆತಗಳಲ್ಲಿ 56 ರನ್‌ (4 ಸಿಕ್ಸರ್‌, 6 ಬೌಂಡರಿ) ಗಳಿಸಿ ಡೇವಿಡ್‌ ವಾರ್ನರ್‌ ಔಟಾಗುತ್ತಿದ್ದಂತೆ, ಮಿಚೆಲ್‌ ಮಾರ್ಷ್‌ ಹಾಗೂ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿದರು. 2ನೇ ವಿಕೆಟ್‌ಗೆ ಈ ಜೋಡಿ 119 ಎಸೆತಗಳಲ್ಲಿ 137 ರನ್‌ ಬಾರಿಸಿತ್ತು. ಇದನ್ನೂ ಓದಿ: ಶ್ರೇಯಸ್‌, ಗಿಲ್‌ ದ್ವಿಶತಕ ಜೊತೆಯಾಟ, ಸೂರ್ಯನ ಆರ್ಭಟ – ಆಸೀಸ್‌ಗೆ ದಾಖಲೆಯ 400 ರನ್‌ಗಳ ಗುರಿ

    ಕಳೆದ ಎರಡು ಪಂದ್ಯಗಳಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ್ದ ಮಿಚೆಲ್‌ ಮಾರ್ಷ್‌ ಅಂತಿಮ ಪಂದ್ಯದಲ್ಲಿ ಶತಕ ವಂಚಿತರಾಗಿ ನಿರ್ಗಮಿಸಿದರು. 84 ಎಸೆತಗಳನ್ನು ಎದುರಿಸಿದ ಮಾರ್ಷ್‌ 96 ರನ್‌ (13 ಬೌಂಡರಿ, 3 ಸಿಕ್ಸರ್‌) ಬಾರಿಸಿದ್ರೆ, ಸ್ಟೀವ್‌ ಸ್ಮಿತ್‌ (Steve Smith) 61 ಎಸೆತಗಳಲ್ಲಿ 74 ರನ್‌ (8 ಬೌಂಡರಿ, 1 ಸಿಕ್ಸರ್‌) ರನ್‌ ಚಚ್ಚಿದರು. 27 ಓವರ್‌ಗಳಲ್ಲಿ ಕೇವಲ 1 ವಿಕೆಟ್‌ ಕಳೆದುಕೊಂಡಿದ್ದ ಆಸೀಸ್‌ ಪಡೆ 400 ರನ್‌ಗಳನ್ನು ಕಲೆಹಾಕುವ ಭರವಸೆ ಮೂಡಿಸಿತ್ತು. ಆದ್ರೆ ಸ್ಟೀವ್‌‌ ಸ್ಮಿತ್‌, ಮಿಚೆಲ್‌ ಮಾರ್ಚ್‌ ವಿಕೆಟ್‌ ಪತನ ಬಳಿಕ ರನ್‌ ವೇಗ ಕೂಡ ಕಡಿಮೆಯಾಯಿತು. ಇದನ್ನೂ ಓದಿ: World Cup 2023: ಇನ್ನೂ ವೀಸಾ ಸಿಕ್ಕಿಲ್ಲ – ಪಾಕಿಸ್ತಾನ ಆಟಗಾರರಿಗೆ ಶುರುವಾಯ್ತು ಹೊಸ ಸಮಸ್ಯೆ

    ಅಂತಿಮವಾಗಿ ಆಸ್ಟ್ರೇಲಿಯಾ 50 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 352 ರನ್‌ ಗಳಿಸಿತು. ಆಸೀಸ್‌ ಪರ ಮಾರ್ನಸ್‌ ಲಾಬುಶೇನ್‌ 72 ರನ್‌ (9 ಬೌಂಡರಿ, 58 ಎಸೆತ), ಅಲೆಕ್ಸ್‌ ಕ್ಯಾರಿ 11 ರನ್‌, ಗ್ಲೇನ್‌ ಮ್ಯಾಕ್ಸ್‌ವೆಲ್‌ 5 ರನ್‌, ಕ್ಯಾಮರೂನ್‌ ಗ್ರೀನ್‌ 9 ರನ್‌ ಗಳಿಸಿ ಪೆವಿಲಿಯನ್‌ ಸೇರಿದರು. ಕೊನೆಯಲ್ಲಿ ಪ್ಯಾಟ್‌ ಕಮ್ಮಿನ್ಸ್‌ 19 ರನ್‌ ಹಾಘೂ ಮಿಚೆಲ್‌ ಸ್ಟಾರ್ಕ್‌ 1 ರನ್‌ ಗಳಿಸಿ ಅಜೇಯರಾಗುಳಿದರು.

    ಟೀಂ ಇಂಡಿಯಾ ಪರ ವೇಗಿ ಜಸ್ಪ್ರೀತ್‌ ಬುಮ್ರಾ (Jasprit Bumrah) 3 ವಿಕೆಟ್‌ ಕಿತ್ತರೆ, ಕುಲ್ದೀಪ್‌ ಯಾದವ್‌ 2 ವಿಕೆಟ್‌ ಹಾಗೂ ಮೊಹಮ್ಮದ್‌ ಸಿರಾಜ್‌, ಪ್ರಸಿದ್ಧ್‌ ಕೃಷ್ಣ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 4 ವರ್ಷಗಳ ಬಳಿಕ ತವರಿನಲ್ಲಿ ಸರಣಿ ಸೋಲು – ನಂ.1 ಪಟ್ಟ ಕಳೆದುಕೊಂಡ ಭಾರತ

    4 ವರ್ಷಗಳ ಬಳಿಕ ತವರಿನಲ್ಲಿ ಸರಣಿ ಸೋಲು – ನಂ.1 ಪಟ್ಟ ಕಳೆದುಕೊಂಡ ಭಾರತ

    ಚೆನ್ನೈ: ತವರಿನಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ನಡೆದ 3 ಪಂದ್ಯಗಳ ಏಕದಿನ ಕ್ರಿಕೆಟ್ ಸರಣಿಯಲ್ಲಿ ಟೀಂ ಇಂಡಿಯಾ (Team India) 1-2 ಅಂತರದಲ್ಲಿ ಸೋತು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಂ.1 ಸ್ಥಾನ ಕಳೆದುಕೊಂಡಿದೆ.

    ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಮೂರನೇ ಪಂದ್ಯದಲ್ಲಿ 21 ರನ್‌ಗಳ ಜಯ ಸಾಧಿಸಿದ ಆಸ್ಟ್ರೇಲಿಯಾ ತಂಡ ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇದನ್ನೂ ಓದಿ: ಬೆಂಗಳೂರು ಸೇರಿದಂತೆ 12 ಸ್ಥಳಗಳಲ್ಲಿ ವಿಶ್ವಕಪ್‌ ಟೂರ್ನಿ – ಮೋದಿ ಸ್ಟೇಡಿಯಂನಲ್ಲಿ ಫೈನಲ್‌

    2023ರ ಜನವರಿಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ 3-0 ಅಂತರದ ವೈಟ್‌ವಾಶ್ ಗೆಲುವು ದಾಖಲಿಸಿದ ಭಾರತ ತಂಡ ಒಡಿಐನಲ್ಲಿ ನಂ.1 ತಂಡವಾಗಿ ಹೊರಹೊಮ್ಮಿತ್ತು. ಆಸ್ಟ್ರೇಲಿಯಾ ಎದುರು ಮೊದಲ ಪಂದ್ಯದಲ್ಲಿ 5 ವಿಕೆಟ್‌ಗಳ ಜಯ ದಾಖಲಿಸಿದರೂ ಸತತ 2 ಪಂದ್ಯಗಳ ಸೋಲಿನಿಂದಾಗಿ ಏಕದಿನ ರ‍್ಯಾಂಕಿಂಗ್‌ನಲ್ಲಿ ನಂ.1 ಪಟ್ಟ ಕಳೆದುಕೊಂಡಿದೆ. ಇದು 4 ವರ್ಷಗಳ ನಂತರ ಭಾರತ ತವರಿನಲ್ಲಿ ಸೋತ ಮೊದಲ ದ್ವಿಪಕ್ಷೀಯ ಸರಣಿಯಾಗಿದೆ. 2019ರಲ್ಲಿ ಆರನ್ ಫಿಂಚ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಕೊಹ್ಲಿ (Virat Kohli) ನಾಯತ್ವದಲ್ಲಿ ಟೀಂ ಇಂಡಿಯಾವನ್ನು ಮಣಿಸಿ ಸರಣಿ ಗೆದ್ದುಕೊಂಡಿತ್ತು.

    ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ಭಾರತ ತಂಡದ ಶಿಸ್ತಿನ ಬೌಲಿಂಗ್ ದಾಳಿಯೆದುರು 49 ಓವರ್‌ಗಳಲ್ಲಿ 269 ರನ್ ಗಳಿಸಿ ಆಲ್‌ಔಟ್ ಆಯಿತು. 270 ರನ್‌ಗಳ ಗುರಿ ಪಡೆದ ಟೀಂ ಇಂಡಿಯಾ 49.1 ಓವರ್‌ಗಳಲ್ಲಿ 248 ರನ್‌ಗಳಿಗೆ ಸರ್ವಪತನ ಕಂಡು, ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿತು. ಇದನ್ನೂ ಓದಿ: WPL 2023: ಡೆಲ್ಲಿ ಕ್ಯಾಪಿಟಲ್ಸ್‌ಗೆ 5 ವಿಕೆಟ್‌ಗಳ ಜಯ – ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

    ಚೇಸಿಂಗ್ ಆರಂಭಿದ ಭಾರತ (Team India) ಉತ್ತಮ ಆರಂಭ ಪಡೆಯುವಲ್ಲಿ ಯಶಸ್ವಿಯಾದರೂ, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ಸ್ಮ್ಯಾನ್‌ಗಳ ವೈಫಲ್ಯ ಕಂಡಿತು. ಆರಂಭಿಕರಾದ ರೋಹಿತ್ ಶರ್ಮಾ (Rohit Sharma), ಶುಭಮನ್ ಗಿಲ್ ಜೋಡಿ ಮೊದಲ ವಿಕೆಟ್ ಪತನಕ್ಕೆ 9.1 ಓವರ್‌ಗಳಲ್ಲಿ 65 ರನ್ ಜೊತೆಯಾಟವಾಡಿದ್ದರು. 17 ಎಸೆತಗಳಲ್ಲಿ 30 ರನ್ ಗಳಿಸಿದ ರೋಹಿತ್ ಶರ್ಮಾ ಔಟಾಗುತ್ತಿದ್ದಂತೆ ಇತ್ತ 49 ಎಸೆತಗಳಲ್ಲಿ 37 ರ್ ಗಳಿಸಿದ್ದ ಶುಭಮನ್ ಗಿಲ್ ಸಹ ಔಟಾದರು. ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿ ಅರ್ಧಶತಕ ಬಾರಿಸಿದರೂ, 72 ಎಸೆತಗಳಲ್ಲಿ 54 ರನ್ ಗಳಿಸಿದ್ದಾಗ ವಿಕೆಟ್ ಕೈಚೆಲ್ಲಿದರು.

    ಮಧ್ಯಮ ಕ್ರಮಾಂಕದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಲು ಯತ್ನಿಸಿದ ಕೆ.ಎಲ್ ರಾಹುಲ್ ಸಿಕ್ಸರ್ ಸಿಡಿಸುವ ಬರದಲ್ಲಿ ಬೌಂಡರಿ ಕ್ಯಾಚ್ ನೀಡಿ ಪೆವಿಲಿಯನ್ ಸೇರಿಕೊಂಡರು. ಇತ್ತ ಸ್ಥಿರವಾಗಿ ಬ್ಯಾಟಿಂಗ್ ನಡೆಸುತ್ತಿದ್ದ ಹಾರ್ದಿಕ್ ಪಾಂಡ್ಯ ಸಹ 40 ಎಸೆತಗಳಲ್ಲಿ 40 ರನ್ ಗಳಿಸಿ ಔಟಾದರು. ಇದೇ ಹಾದಿಯಲ್ಲಿ ಒಂದೊಂದೇ ವಿಕೆಟ್ ಪತನಗೊಂಡಿತು. ಅಂತಿಮವಾಗಿ ಭಾರತ 49.1 ಓವರ್‌ಗಳಲ್ಲಿ 248 ರನ್ ಗಳಿಗೆ ಆಲೌಟ್ ಆಯಿತು.

    ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಆಡಮ್ ಝಾಂಪ 10 ಓವರ್‌ಗಳಲ್ಲಿ 45 ರನ್ ನೀಡಿ 4 ವಿಕೆಟ್ ಕಿತ್ತರು. ಆಸ್ಟೋನ್ ಅಗರ್ 2 ವಿಕೆಟ್ ಪಡೆದರೆ, ಮಾರ್ಕಸ್ ಸ್ಟೋಯ್ನಿಸ್, ಸೇನ್ ಅಬಾಟ್ ತಲಾ ಒಂದೊಂದು ವಿಕೆಟ್ ಪಡೆದರು.

    ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡದಲ್ಲಿ ಯಾರೋಬ್ಬರೂ ಅರ್ಧಶತಕ ಸಿಡಿಸಿಲ್ಲವಾದರೂ 269 ರನ್‌ಗಳ ಸಾಧಾರಣ ಮೊತ್ತ ಕಲೆಹಾಕುವಲ್ಲಿ ಯಶಸ್ವಿಯಾಯಿತು. ಟ್ರಾವಿಸ್ ಹೆಡ್ 33 ರನ್, ಮಿಚೆಲ್ ಮಾರ್ಷ್ (Mitchell Marsh) 47 ರನ್, ಅಲೆಕ್ಸ್ ಕ್ಯಾರಿ 38 ರನ್ ಗಳಿಸಿ ತಂಡಕ್ಕೆ ನೆರವಾದರು.

    ಭಾರತದ ಪರ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಮತ್ತು ಕುಲ್‌ದೀಪ್ ಯಾದವ್ ತಲಾ 3 ಕಿತ್ತರೆ, ಮೊಹಮ್ಮದ್ ಸಿರಾಜ್, ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದು ಆಸೀಸ್ ಅಬ್ಬರಕ್ಕೆ ಬ್ರೇಕ್ ಹಾಕಿದ್ದರು.