Tag: ಮಿಚೌಂಗ್ ಚಂಡಮಾರುತ

  • ಚೆನ್ನೈನಲ್ಲಿ ಸೈಕ್ಲೋನ್ ಅಬ್ಬರ – ವಿಮಾನಗಳು ಬೆಂಗಳೂರಿಗೆ ಡೈವರ್ಟ್

    ಚೆನ್ನೈನಲ್ಲಿ ಸೈಕ್ಲೋನ್ ಅಬ್ಬರ – ವಿಮಾನಗಳು ಬೆಂಗಳೂರಿಗೆ ಡೈವರ್ಟ್

    ಚಿಕ್ಕಬಳ್ಳಾಪುರ: ತಮಿಳುನಾಡಿನಲ್ಲಿ (Tamil Nadu) ಮಿಚಾಂಗ್ ಚಂಡಮಾರುತ (Michaung Cyclone)) ಅಬ್ಬರದ ಹಿನ್ನೆಲೆ ಚೆನ್ನೈನಲ್ಲಿ (Chennai) ಭಾರೀ ಮಳೆಯಾಗುತ್ತಿದೆ. ಹೀಗಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನಗಳನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Kempegowda International Airport) ಡೈವರ್ಟ್ ಮಾಡಲಾಗಿದೆ.

    ಕಳೆದ ರಾತ್ರಿಯಿಂದ ಈವರೆಗೂ 27 ವಿಮಾನಗಳು ಡೈವರ್ಟ್ ಆಗಿವೆ. ದೇಶ-ವಿದೇಶಗಳಿಂದ ಬಂದ ಎಮಿರೇಟ್ಸ್, ಲೂಫ್ತಾನ್ಸ, ಏರ್ ಇಂಡಿಯಾ ಎಕ್ಸ್‌ಪ್ರೆಸ್ ಸೇರಿದಂತೆ 27 ವಿಮಾನಗಳು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿವೆ. ಹೀಗಾಗಿ ಮುಂಜಾನೆಯಿಂದ ಮತ್ತೆ ಚೆನ್ನೈಗೆ ತೆರಳಬಹುದು ಎಂದು ಪ್ರಯಾಣಿಕರು ನೀರಿಕ್ಷೆಯಿಂದ ಕಾಯುವಂತಾಗಿದೆ. ಆದರೆ ಮಳೆ ನಿಲ್ಲುವ ಮನ್ಸೂಚನೆ ಇಲ್ಲದ ಕಾರಣ ವಿಮಾನಗಳು ಟೇಕಾಫ್ ಆಗದೆ ಹಾಗೆ ನಿಂತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಇದನ್ನೂ ಓದಿ: Cyclone Michaung ಎಫೆಕ್ಟ್- ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯ ಎಚ್ಚರಿಕೆ

    ಚಂಡಮಾರುತ ಅಬ್ಬರ ಹಿನ್ನೆಲೆ ಮಂಗಳವಾರ ತಮಿಳುನಾಡಿನ 4 ಜಿಲ್ಲೆಗಳಲ್ಲಿ ರಜೆ (Holiday) ಘೋಷಿಸಲಾಗಿದೆ. ಚೆನ್ನೈ, ತಿರುವಳ್ಳೂರ್, ಕಾಂಚೀಪುರಂ ಹಾಗೂ ಚೆಂಗಲಪಟ್ಟು ಜಿಲ್ಲೆಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: Cyclone Michaung- ನೆಲ್ಲೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬಾಲಕ ದುರ್ಮರಣ

  • Cyclone Michaung ಎಫೆಕ್ಟ್- ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯ ಎಚ್ಚರಿಕೆ

    Cyclone Michaung ಎಫೆಕ್ಟ್- ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯ ಎಚ್ಚರಿಕೆ

    ಬೆಂಗಳೂರು: ಮಿಚೌಂಗ್ ಚಂಡಮಾರುತದ (Cyclone Michaung) ಪರಿಣಾಮ ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯೊಂದನ್ನು ನೀಡಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಿಚೌಂಗ್ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಎರಡು ದಿನ ಭಾರೀ ಮಳೆಯಾಗುವ (Rain) ಸಾಧ್ಯತೆಗಳಿವೆ ಎಂದು ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ.

    ರಾಜಧಾನಿಯಲ್ಲಿ ಚಂಡಮಾರುತ ಎಫೆಕ್ಟ್ ನಿಂದಾಗಿ ಇಂದು ಬೆಳ್ಳಂಬೆಳಗ್ಗೆ ಚುಮುಚುಮು ಚಳಿ ಶುರುವಾಗಿದೆ. ಆಂಧ್ರ, ಒಡಿಶಾ, ತಮಿಳುನಾಡಲ್ಲಿ ಭಾರೀ ಮಳೆ ಸಾಧ್ಯತೆ ಹಿನ್ನೆಲೆ ರಾಜ್ಯದಲ್ಲೂ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: Cyclone Michaung- ನೆಲ್ಲೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬಾಲಕ ದುರ್ಮರಣ

    ಸದ್ಯ ಬಂಗಾಳಕೊಲ್ಲಿಯಲ್ಲಿ 18 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದೆ. ಗಂಟೆಗೆ 100 ಕಿಮೀ ವೇಗದಲ್ಲಿ ಈ ಚಂಡಮಾರುತ ಇರಲಿದ್ದು, ಆಂಧ್ರದ ನೆಲ್ಲೂರು, ಮಚಲಿಪಟ್ಟಣದ ಕರಾವಳಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆ ಕರ್ನಾಟಕಕ್ಕೂ ಸೈಕ್ಲೋನ್ ಎಫೆಕ್ಟ್ ತಟ್ಟುವ ಸಾಧ್ಯತೆಗಳು ದಟ್ಟವಾಗಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.