Tag: ಮಿಜೋರಾಂ

  • ಮಿಜೋರಾಂನಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಆಟ

    ಮಿಜೋರಾಂನಲ್ಲಿ ಪ್ರಾದೇಶಿಕ ಪಕ್ಷಗಳದ್ದೇ ಆಟ

    ನವದೆಹಲಿ: ಈಶಾನ್ಯ ರಾಜ್ಯ ಮಿಜೋರಾಂನಲ್ಲಿ ಮೊದಲ ಹಂತದಲ್ಲೇ ಎಂದರೆ ನವೆಂಬರ್ 7 ರಂದೇ ಎಲ್ಲಾ 40 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. 80.66% ರಷ್ಟು ಮತದಾನವಾಗಿತ್ತು. ಇಲ್ಲಿ ಸದ್ಯ ಬಿಜೆಪಿ ಬೆಂಬಲಿತ ಮಿಜೋ ನ್ಯಾಷನಲ್ ಫ್ರಂಟ್ (MNF) ಸರ್ಕಾರವಿದೆ. ಈ ಬಾರಿಯ ಚುನಾವಣೆಯಲ್ಲಿ ಅಧಿಕಾರ ಉಳಿಸಿಕೊಳ್ಳಲು ಎಂಎನ್‌ಎಫ್, ಅಧಿಕಾರ ಕೈಗೆಟುಕಿಸಿಕೊಳ್ಳಲು ಕಾಂಗ್ರೆಸ್ ಮತ್ತು ಹೊಸ ಪಕ್ಷವಾದ ಜೋರಂ ಪೀಪಲ್ಸ್ ಮೂವ್‌ಮೆಂಟ್ (ZPM) ಪ್ರತ್ಯೇಕವಾಗಿ ಕಸರತ್ತು ಮಾಡಿವೆ.

    ಮಣಿಪುರ ಹಿಂಸಾಚಾರ ಇಲ್ಲಿನ ಚುನಾವಣೆಯಲ್ಲಿ ಪರಿಣಾಮ ಬೀರಿದಂತೆ ಕಾಣಿಸಿಕೊಂಡಿದೆ. ಮತ್ತೆ ಪ್ರಾದೇಶಿಕ ಪಕ್ಷಗಳೇ ಇಲ್ಲಿ ಮೇಲುಗೈ ಸಾಧಿಸಿದಂತೆ ಕಂಡು ಬಂದಿದೆ. ಯಾವುದೇ ಪಕ್ಷಕ್ಕೆ ಬಹುಮತ ಬರೋದು ಅನುಮಾನವಾಗಿದ್ದರೂ ಹೊಸ ಪಕ್ಷವಾದ ಝಡ್‌ಪಿಎಂ ಜೊತೆ ಅಧಿಕಾರದಲ್ಲಿರೋ ಎಂಎನ್‌ಎಫ್‌ಗೆ ಟಫ್ ಸ್ಪರ್ಧೆಯಿದೆ.

    ಯಾವ ಸಮೀಕ್ಷೆ ಏನು ಹೇಳಿದೆ?
    ಒಟ್ಟು 40 ಕ್ಷೇತ್ರಗಳಲ್ಲಿ ಸರಳ ಬಹುಮತಕ್ಕೆ 21 ಸ್ಥಾನಗಳ ಅಗತ್ಯವಿದೆ.
    ಜನ್‌ಕಿ ಬಾತ್: ಎಂಎನ್‌ಎಫ್ 10-14, ಕಾಂಗ್ರೆಸ್ 05-09, ಬಿಜೆಪಿ 00-02, ಝಡ್‌ಪಿಎಂ 15-25
    ಸಿ-ವೋಟರ್: ಎಂಎನ್‌ಎಫ್ 15-21, ಕಾಂಗ್ರೆಸ್ 02-08, ಬಿಜೆಪಿ 0-5, ಝಡ್‌ಪಿಎಂ 12-18
    ಇಂಡಿಯಾ ಟಿವಿ: ಎಂಎನ್‌ಎಫ್ 14-18, ಕಾಂಗ್ರೆಸ್ 08-10, ಬಿಜೆಪಿ 0-2, ಝಡ್‌ಪಿಎಂ 12-16
    ಪೀಪಲ್ಸ್ ಪಲ್ಸ್: ಎಂಎನ್‌ಎಫ್ 16-20, ಕಾಂಗ್ರೆಸ್ 08-10, ಬಿಜೆಪಿ 0-2, ಝಡ್‌ಪಿಎಂ 12-17
    ಆಕ್ಸಿಸ್ ಮೈ ಇಂಡಿಯಾ: ಎಂಎನ್‌ಎಫ್ 3-7, ಕಾಂಗ್ರೆಸ್ 0-4, ಬಿಜೆಪಿ 0-2, ಝಡ್‌ಪಿಎಂ 28-35 ಇದನ್ನೂ ಓದಿ: ರಾಜಸ್ಥಾನದಲ್ಲಿ ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ

    ಮಿಜೋರಾಂನಲ್ಲಿ 2018ರ ಚುನಾವಣೆಯಲ್ಲಿ ಎಂಎನ್‌ಎಫ್ 26 ಸ್ಥಾನಗಳು(37.6% ಮತ), ಕಾಂಗ್ರೆಸ್ 5 ಸ್ಥಾನಗಳು (29.98% ಮತ) ಹಾಗೂ ಬಿಜೆಪಿ 1 ಸ್ಥಾನವನ್ನು (8.1% ಮತ) ಗೆದ್ದಿತ್ತು. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಸರಳ ಬಹುಮತ

  • ಕೈಕೊಟ್ಟ EVM; ವೋಟ್ ಮಾಡಲಾಗದೇ ಮಿಜೋರಾಂ ಸಿಎಂ ವಾಪಸ್

    ಕೈಕೊಟ್ಟ EVM; ವೋಟ್ ಮಾಡಲಾಗದೇ ಮಿಜೋರಾಂ ಸಿಎಂ ವಾಪಸ್

    ಐಜ್ವಾಲ್: ಮಿಜೋರಾಂ (Mizoram) ಹಾಗೂ ಛತ್ತೀಸ್‌ಗಢ ವಿಧಾನಸಭೆಗೆ ಇಂದು (ಮಂಗಳವಾರ) ಮೊದಲ ಹಂತದ ಮತದಾನ ಪ್ರಾರಂಭವಾಗಿದೆ. ಮತದಾನದ ದಿನದಂದು ಮಿಜೋರಾಂನ ಮುಖ್ಯಮಂತ್ರಿ ರಾಜಧಾನಿ ಐಜ್ವಾಲ್‌ನ (Aizawl) ಮತಗಟ್ಟೆಯನ್ನು ತಲುಪಿದರೂ ಮತಚಲಾಯಿಸಲಾಗದೆ ವಾಪಸಾಗಿದ್ದಾರೆ.

    ಮಿಜೋರಾಂ ಮುಖ್ಯಮಂತ್ರಿ ಮತ್ತು ಎಂಎನ್‌ಎಫ್ ಅಧ್ಯಕ್ಷ ಝೋರಂತಂಗ (Zoramthanga) ಅವರು ಚುನಾವಣೆಗೆ ಮತಚಲಾಯಿಸಲು ತೆರಳಿದರೂ ಇವಿಎಂ (EVM) ಯಂತ್ರ ಕೈಕೊಟ್ಟ ಕಾರಣ ಮತಚಲಾಯಿಸಲಾಗಲಿಲ್ಲ ಎಂದು ತಿಳಿಸಿದ್ದಾರೆ. ಮತಯಂತ್ರ ಕಾರ್ಯನಿರ್ವಹಿಸದ ಕಾರಣ ಕೆಲ ಸಮಯ ಪ್ರಯತ್ನಿಸಿದೆ. ಆದರೆ ಮತಚಲಾಯಿಸಲು ಆಗದೇ ಹೋದ ಕಾರಣ ಬೆಳಗ್ಗೆ ಸಭೆಯ ನಂತರ ನನ್ನ ಕ್ಷೇತ್ರಕ್ಕೆ ಭೇಟಿ ನೀಡಿ ಮತಯಾಚನೆ ಮಾಡುತ್ತೇನೆ ಎಂದು ಹೇಳಿದ್ದಾರೆ.

    ಮಿಜೋರಾಂನಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ. ಈಶಾನ್ಯ ರಾಜ್ಯಾದ್ಯಂತ 1,276 ಮತಗಟ್ಟೆಗಳಲ್ಲಿ 8,00,000 ಕ್ಕೂ ಹೆಚ್ಚು ಅರ್ಹ ಮತದಾರರು ಇಂದು ಮತಚಲಾಯಿಸುವ ನಿರೀಕ್ಷೆಯಿದೆ. ಇದನ್ನೂ ಓದಿ: ಚುನಾವಣೆ ದಿನವೇ ಮಾವೋವಾದಿಗಳಿಂದ ಸ್ಫೋಟ – ಕರ್ತವ್ಯದಲ್ಲಿದ್ದ ಯೋಧನಿಗೆ ಗಾಯ

     

    ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ರಾಜ್ಯದ ಜನರಲ್ಲಿ ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಮಿಜೋರಾಂ, ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನ ಇಂದು

  • ಮಿಜೋರಾಂ, ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನ ಇಂದು

    ಮಿಜೋರಾಂ, ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನ ಇಂದು

    ನವದೆಹಲಿ: ಮಿಜೋರಾಂ ಮತ್ತು ಛತ್ತೀಸ್‌ಗಢ ವಿಧಾನಸಭೆಗೆ ಇಂದು (ಮಂಗಳವಾರ) ಮೊದಲ ಹಂತದ ಮತದಾನ ಶುರುವಾಗಿದೆ. ಛತ್ತೀಸ್‌ಗಢದ 90 ವಿಧಾನಸಭಾ ಕ್ಷೇತ್ರಗಳ ಪೈಕಿ 20 ವಿಧಾನಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 17 ರಂದು ಉಳಿದ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

    ಮಿಜೋರಾಂ‌ನಲ್ಲಿ 40 ವಿಧಾನಸಭಾ ಕ್ಷೇತ್ರಗಳಿದ್ದು, ಮತದಾನಕ್ಕೆ ಎಲ್ಲ ತಯಾರಿ ಮಾಡಿಕೊಂಡಿದೆ. ರಾಜ್ಯದ 1,276 ಮತದಾನ ಕೇಂದ್ರಗಳಲ್ಲಿ 149 ದೂರದ ಮತಗಟ್ಟೆಗಳಾಗಿವೆ. ಅಂತರರಾಜ್ಯ ಮತ್ತು ಅಂತರಾಷ್ಟ್ರೀಯ ಗಡಿಗಳಲ್ಲಿ ಸುಮಾರು 30 ಮತಗಟ್ಟೆಗಳನ್ನು ನಿರ್ಣಾಯಕ ಮತ್ತು ದುರ್ಬಲ ಎಂದು ಘೋಷಿಸಲಾಗಿದೆ.

    ರಾಜ್ಯದಾದ್ಯಂತ ಮತ್ತು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನ ಅಂತರರಾಷ್ಟ್ರೀಯ ಗಡಿಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಿಜೋರಾಂ ಮ್ಯಾನ್ಮಾರ್‌ನೊಂದಿಗೆ 510 ಕಿಮೀ ಸರಂಧ್ರ ಗಡಿಯನ್ನು ಮತ್ತು ಬಾಂಗ್ಲಾದೇಶದೊಂದಿಗೆ 318 ಕಿಮೀ ಗಡಿಯನ್ನು ಹಂಚಿಕೊಂಡಿದೆ.

    ಛತ್ತೀಸ್‌ಗಢ ಮೊದಲ ಹಂತದ ಮತದಾನದಲ್ಲಿ ಬಸ್ತಾರ್ ವಿಭಾಗದ 12 ಸೇರಿದಂತೆ 20 ಕ್ಷೇತ್ರಗಳು ಸೇರಿವೆ. ಈ 20 ಕ್ಷೇತ್ರಗಳು ನಕ್ಸಲ್ ಪೀಡಿತ ಬಸ್ತಾರ್ ವಿಭಾಗದಲ್ಲಿ ಏಳು ಜಿಲ್ಲೆಗಳಲ್ಲಿ ಹರಡಿವೆ. ನಾಲ್ಕು ಹೆಚ್ಚುವರಿ ಜಿಲ್ಲೆಗಳಲ್ಲಿ ರಾಜನಂದಗಾಂವ್, ಮೊಹ್ಲಾ-ಮನ್ಪುರ್-ಅಂಬಗಢ್ ಚೌಕಿ, ಕಬೀರ್ಧಾಮ್ ಮತ್ತು ಖೈರಾಘರ್-ಚುಯಿಖಾದನ್-ಗಂಡೈ ಕ್ಷೇತ್ರಗಳು ಸೇರಿವೆ. ಮೊದಲ‌ ಹಂತದಲ್ಲಿ ಅಂದಾಜು 40,78,681 ಮತದಾರರು ಮತ ಚಲಾಯಿಸಲಿದ್ದಾರೆ.‌ ಈ ಪೈಕಿ 19,93,937 ಪುರುಷರು, 20,84,675 ಮಹಿಳೆಯರು ಮತ್ತು ತೃತೀಯಲಿಂಗಕ್ಕೆ ಸೇರಿದ 69 ಮಂದಿ ಇದ್ದಾರೆ. 25 ಮಹಿಳೆಯರು ಸೇರಿದಂತೆ 223 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ನಿರ್ಧರಿಸುತ್ತಾರೆ.

    ದೂರದ ಒಳ ಪ್ರದೇಶಗಳಲ್ಲಿ ಇರುವ 156 ಕ್ಕೂ ಹೆಚ್ಚು ಮತಗಟ್ಟೆಗಳಿಗೆ, ಚುನಾವಣಾ ಸಿಬ್ಬಂದಿ ಮತ್ತು ಇವಿಎಂಗಳನ್ನು ಹೆಲಿಕಾಪ್ಟರ್‌ಗಳ ಮೂಲಕ ಗೊತ್ತುಪಡಿಸಿದ ಸ್ಥಳಗಳಿಗೆ ಸಾಗಿಸಲಾಗುತ್ತಿದೆ. ಭದ್ರತಾ ಮುನ್ನೆಚ್ಚರಿಕೆಯಾಗಿ ಬಿಜಾಪುರ, ನಾರಾಯಣಪುರ, ಅಂತಗಢ, ದಾಂತೇವಾಡ ಮತ್ತು ಕೊಂಟಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟು 149 ಮತಗಟ್ಟೆಗಳನ್ನು ಹತ್ತಿರದ ಪೊಲೀಸ್ ಠಾಣೆಗಳಿಗೆ ಮತ್ತು ಭದ್ರತಾ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

  • ಪಂಚ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ – ನ.7 ಕ್ಕೆ ಮೊದಲ, ನ.30 ರಂದು ಕೊನೆ ಚುನಾವಣೆ

    ಪಂಚ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟ – ನ.7 ಕ್ಕೆ ಮೊದಲ, ನ.30 ರಂದು ಕೊನೆ ಚುನಾವಣೆ

    – ಡಿ.3 ಕ್ಕೆ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟ

    ನವದೆಹಲಿ: ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆಗಳಿಗೆ ಕೊನೆಗೂ ಚುನಾವಣಾ ದಿನಾಂಕ ಘೋಷಣೆಯಾಗಿದೆ. ನವೆಂಬರ್‌ 7 ರಿಂದ 30 ರ ವರೆಗೆ ಪಂಚ ರಾಜ್ಯಗಳಿಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

    ನವೆಂಬರ್‌ 7 ರಂದು ಮಿಜೋರಾಂನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಛತ್ತೀಸಗಢದಲ್ಲಿ ನ.7 ಮತ್ತು ನ.17 ರಂದು ಎರಡು ಹಂತಗಳಲ್ಲಿ ಮತದಾನ ಇರುತ್ತದೆ. ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯು ನ.17 ರಂದು ಒಂದೇ ಹಂತದಲ್ಲಿ ನಡೆಯಲಿದೆ. ನಂತರ ನ.23 ರಂದು ರಾಜಸ್ಥಾನದಲ್ಲಿ ಮತ್ತು ನ.30 ರಂದು ತೆಲಂಗಾಣದಲ್ಲಿ ಮತದಾನ ನಡೆಯಲಿದೆ. ಇದನ್ನೂ ಓದಿ: 5 ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಇಂದು ಪ್ರಕಟ

    ಡಿಸೆಂಬರ್‌ 3 ಕ್ಕೆ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಮಿಜೋರಾಂನಲ್ಲಿ 8.52 ಲಕ್ಷ, ಛತ್ತೀಸ್‌ಗಢದಲ್ಲಿ 2.03 ಕೋಟಿ, ಮಧ್ಯಪ್ರದೇಶದಲ್ಲಿ 5.6 ಕೋಟಿ, ರಾಜಸ್ಥಾನದಲ್ಲಿ 5.25 ಕೋಟಿ ಮತ್ತು ತೆಲಂಗಾಣದಲ್ಲಿ 3.17 ಕೋಟಿ ಮತದಾರರಿದ್ದಾರೆ. ಸುಮಾರು 60 ಲಕ್ಷ ಯುವಜನತೆ ಮೊದಲ ಬಾರಿಗೆ (18-19 ವರ್ಷ) 5 ರಾಜ್ಯಗಳ ಚುನಾವಣೆಗಳಲ್ಲಿ ಭಾಗವಹಿಸುತ್ತಾರೆ. ಅರ್ಹತಾ ದಿನಾಂಕಗಳ ತಿದ್ದುಪಡಿಯಿಂದಾಗಿ 15.39 ಲಕ್ಷ ಯುವ ಮತದಾರರು ಚುನಾವಣೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಇದನ್ನೂ ಓದಿ: ಇಸ್ರೇಲ್‍ನಲ್ಲಿ ಸಿಲುಕಿದ್ದ 18,000 ಭಾರತೀಯರು ಸೇಫ್

    ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಾಗಿ ಒಟ್ಟು 679 ವಿಧಾನಸಭಾ ಕ್ಷೇತ್ರಗಳಲ್ಲಿ 1.77 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ರಾಜೀವ್‌ ಕುಮಾರ್‌ ಮಾಹಿತಿ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್ – ದಿನಾಂಕ ಘೋಷಣೆ ಯಾವಾಗ?

    ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ಫಿಕ್ಸ್ – ದಿನಾಂಕ ಘೋಷಣೆ ಯಾವಾಗ?

    ನವದೆಹಲಿ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಅಕ್ಟೋಬರ್ 8 ಮತ್ತು 10 ರ ನಡುವೆ ಪ್ರಕಟಿಸುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ. ನವೆಂಬರ್ ಎರಡನೇ ವಾರದಿಂದ ಡಿಸೆಂಬರ್ ಮೊದಲ ವಾರದ ನಡುವೆ ಮತದಾನ ನಡೆಯುವ ಸಾಧ್ಯತೆ ಇದೆ.

    ರಾಜಸ್ಥಾನ, ಮಧ್ಯಪ್ರದೇಶ, ಮಿಜೋರಾಂ ಮತ್ತು ತೆಲಂಗಾಣ ಒಂದೇ ಹಂತದಲ್ಲಿ 2018 ರಲ್ಲಿ ಕಳೆದ ಬಾರಿಯಂತೆ ಮತದಾನ ಮಾಡಬಹುದು ಎಂದು ಆಯೋಗದ ಮೂಲಗಳು ತಿಳಿಸಿವೆ. ಛತ್ತೀಸ್‌ಗಢದಲ್ಲಿ, 2018 ರಲ್ಲಿ ನಡೆದ ಮತದಾನದಂತೆಯೇ ಎರಡು ಹಂತಗಳಲ್ಲಿ ಮತದಾನ ನಡೆಯುವ ಸಾಧ್ಯತೆಯಿದೆ ಎಂದು ಹೇಳಿವೆ. ಇದನ್ನೂ ಓದಿ: ವೀಲಿಂಗ್‌ ಮಾಡಿದ ಬೈಕ್‌ ಸುಟ್ಟು ಹಾಕಿ, 45 ಲಕ್ಷ ಸಬ್‌ಸ್ಕ್ರೈಬ್‌ ಇರೋ ಯೂಟ್ಯೂಬ್‌ ಚಾನೆಲನ್ನು ಕಿತ್ತಾಕಿ: ಹೈಕೋರ್ಟ್‌ ಚಾಟಿ

    ಎಲ್ಲಾ ಐದು ರಾಜ್ಯಗಳ ಮತದಾನದ ದಿನಾಂಕಗಳು ವಿಭಿನ್ನವಾಗಿರಬಹುದು. ಅಕ್ಟೋಬರ್ 10 ರಿಂದ 15 ರ ನಡುವೆ ಐದು ರಾಜ್ಯಗಳಲ್ಲಿ ಮತ ಎಣಿಕೆ ಒಟ್ಟಿಗೆ ನಡೆಯಲಿದೆ. ಮಿಜೋರಾಂನ ಶಾಸಕಾಂಗ ಸಭೆಯ ಅವಧಿಯು ಈ ವರ್ಷ ಡಿಸೆಂಬರ್ 17 ರಂದು ಕೊನೆಗೊಳ್ಳುತ್ತದೆ. ಬಿಜೆಪಿಯ ಮಿತ್ರಪಕ್ಷವಾದ ಮಿಜೋ ನ್ಯಾಷನಲ್ ಫ್ರಂಟ್ ಈಶಾನ್ಯ ರಾಜ್ಯದಲ್ಲಿ ಅಧಿಕಾರದಲ್ಲಿದೆ.

    ತೆಲಂಗಾಣ, ರಾಜಸ್ಥಾನ, ಛತ್ತೀಸ್‌ಗಢ ಮತ್ತು ರಾಜಸ್ಥಾನದ ಶಾಸಕಾಂಗ ಸಭೆಗಳ ಅವಧಿಯು ಮುಂದಿನ ವರ್ಷದ ಜನವರಿಯಲ್ಲಿ ವಿವಿಧ ದಿನಾಂಕಗಳಲ್ಲಿ ಕೊನೆಗೊಳ್ಳುತ್ತದೆ. ಕೆ. ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ ತೆಲಂಗಾಣದಲ್ಲಿ ಆಡಳಿತದಲ್ಲಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಆಡಳಿತದಲ್ಲಿದೆ. ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರವಿದೆ. ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಅಗ್ನಿ ಅವಘಡ – 6 ಮಂದಿ ಸಾವು, 40 ಮಂದಿಗೆ ಗಾಯ

    ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸುವ ಮೊದಲು, ರಾಜಸ್ಥಾನ, ಮಿಜೋರಾಂ, ಮಧ್ಯಪ್ರದೇಶ, ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ಚುನಾವಣಾ ಸಿದ್ಧತೆಗಳ ಬಗ್ಗೆ ಚುನಾವಣಾ ಆಯೋಗ ಪರಿಶೀಲನೆ ನಡೆಸಿದೆ. ಚುನಾವಣಾ ಕಾರ್ಯವನ್ನು ಸುಗಮವಾಗಿ ನಡೆಸಲು ಕಾರ್ಯತಂತ್ರವನ್ನು ಅಂತಿಮಗೊಳಿಸಲು ಚುನಾವಣಾ ಸಂಸ್ಥೆ ತನ್ನ ವೀಕ್ಷಕರ ಸಭೆಯನ್ನು ಶುಕ್ರವಾರ ನಡೆಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 17 ಮಂದಿ ದುರ್ಮರಣ

    ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 17 ಮಂದಿ ದುರ್ಮರಣ

    ಐಜ್ವಾಲ್: ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು (Railway Bridge Collapse) ಬಿದ್ದ ಪರಿಣಾಮ 17 ಮಂದಿ ದುರ್ಮರಣಹೊಂದಿರುವ ಘಟನೆ ಮಿಜೋರಾಂನಲ್ಲಿ (Mizoram) ನಡೆದಿದೆ.

    ಮಿಜೋರಾಂನ ಐಜ್ವಾಲ್‌ನಿಂದ (Aizawl) ಸುಮಾರು 21 ಕಿ.ಮೀ ದೂರದಲ್ಲಿರುವ ಸಾಯಿರಾಂಗ್ (Sairang) ಪ್ರದೇಶದಲ್ಲಿ ಈ ದುರ್ಘಟನೆ ವರದಿಯಾಗಿದೆ. ಇನ್ನೂ ಹಲವರು ಸ್ಥಳದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ರಕ್ಷಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಸೇತುವೆ ಕುಸಿದ ಸಂದರ್ಭದಲ್ಲಿ ಸುಮಾರು 35-40 ಕಟ್ಟಡ ಕಾರ್ಮಿಕರು ಸ್ಥಳದಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ. ಇದನ್ನೂ ಓದಿ: 146 ಪ್ರಯತ್ನಗಳ ಪೈಕಿ 69 ಚಂದ್ರಯಾನಗಳು ಯಶಸ್ವಿ – ಸಾವಿರಾರು ಕೋಟಿ ಖರ್ಚು ಮಾಡುವ ಯೋಜನೆಯ ಪ್ರಮುಖ ಉದ್ದೇಶವೇನು?

    ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಐಜ್ವಾಲ್ ಬಳಿಯ ಸಾಯಿರಾಂಗ್‌ನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಇಂದು ಕುಸಿದಿದೆ. ಕನಿಷ್ಠ 17 ಕಾರ್ಮಿಕರ ಸಾವಾಗಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ದುರಂತದಿಂದ ತೀವ್ರ ದುಃಖವಾಗಿದೆ. ನಾನು ಎಲ್ಲಾ ಮೃತರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಬಂದ ಜನರಿಗೆ ಕೃತಜ್ಞತೆಯನ್ನು ತಿಳಿಸುತ್ತೇನೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಯೋಗಿ ಅವರ ಕಾಲು ಮುಟ್ಟಿ ರಜನಿ ನಮಸ್ಕರಿಸಿದ್ದು ತಪ್ಪೇನೂ ಇಲ್ಲ: ಅಣ್ಣಾಮಲೈ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಲ್ಲು ಕ್ವಾರಿ ಕುಸಿತ – 8ಕ್ಕೇರಿದ ಸಾವಿನ ಸಂಖ್ಯೆ, ನಾಲ್ವರಿಗಾಗಿ ಹುಡುಕಾಟ

    ಕಲ್ಲು ಕ್ವಾರಿ ಕುಸಿತ – 8ಕ್ಕೇರಿದ ಸಾವಿನ ಸಂಖ್ಯೆ, ನಾಲ್ವರಿಗಾಗಿ ಹುಡುಕಾಟ

    ಐಜ್ವಾಲ್: ಮಿಜೋರಾಂನಲ್ಲಿ ಸೋಮವಾರ ಕಲ್ಲು ಕ್ವಾರಿಯೊಂದು ಕುಸಿದು ಬಿದ್ದ ಪರಿಣಾಮ ಹಲವು ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದರು. ಬಳಿಕ ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿ, ಮಂಗಳವಾರ ಬಿಹಾರದ 8 ಕಾರ್ಮಿಕರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಇನ್ನೂ 4 ಕಾರ್ಮಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

    ಸೋಮವಾರ ಮಿಜೋರಾಂನ ಹ್ನಾಥಿಯಾಲ್ ಗ್ರಾಮದ ಬಳಿ ಇದ್ದ ಕಲ್ಲು ಕ್ವಾರಿ ಕುಸಿದು ಬಿದ್ದಿದೆ. ಇದರ ಪರಿಣಾಮ 12 ಕಾರ್ಮಿಕರು ಮಣ್ಣಿನಡಿ ಸಿಲುಕಿಕೊಂಡಿದ್ದರು.

    ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅವರ ಗುರುತು ಪತ್ತೆಹಚ್ಚಲಾಗುತ್ತಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಅವರ ಪತ್ತೆಯಾಗುವವರೆಗೂ ಶೋಧ ಮುಂದುವರಿಸಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಿಳಿಸಿದೆ. ಇದನ್ನೂ ಓದಿ: ಬೇಕಂತಲೇ ಕಾರಿಗೆ ಡಿಕ್ಕಿ- ಓವರ್ ಟೇಕ್ ಮಾಡಿ ಸಾರಿ ಕೇಳುವ ನೆಪದಲ್ಲಿ ದೋಚಿ ಎಸ್ಕೇಪ್

    ಮೂಲಗಳ ಪ್ರಕಾರ, ಹ್ನಾಥಿಯಾಲ್ ಜಿಲ್ಲೆಯ ಮೌದರ್ಹ್‌ನಲ್ಲಿರುವ ಖಾಸಗಿ ಕಂಪನಿಯ ಕಾರ್ಮಿಕರು ತಮ್ಮ ಊಟದ ವಿರಾಮದ ಬಳಿಕ ಕಲ್ಲು ಕ್ವಾರಿ ಬಳಿಗೆ ಮರಳಿದ್ದರು. ಈ ವೇಳೆ ಏಕಾಏಕಿ ಕಲ್ಲು ಕ್ವಾರಿ ಕುಸಿತಗೊಂಡಿದೆ. ಕಾರ್ಮಿಕರೊಂದಿಗೆ 5 ಹಿಟಾಚಿ ಅಗೆಯುವ ಯಂತ್ರಗಳು ಮತ್ತು ಇತರ ಡ್ರಿಲ್ಲಿಂಗ್ ಯಂತ್ರಗಳು ಮಣ್ಣಿನಡಿ ಹೂತುಹೋಗಿವೆ.

    ತಕ್ಷಣ ಲೀಟ್ ಗ್ರಾಮ ಮತ್ತು ಹ್ನಾಥಿಯಾಲ್ ಪಟ್ಟಣದ ಸ್ವಯಂಸೇವಕರು ರಕ್ಷಣಾ ಕಾರ್ಯಾಚರಣೆಗೆ ಸ್ಥಳಕ್ಕೆ ಧಾವಿಸಿದರು. ರಾಜ್ಯ ವಿಪತ್ತು ನಿರ್ವಹಣಾ ಪಡೆ, ಗಡಿ ಭದ್ರತಾ ಪಡೆ ಮತ್ತು ಅಸ್ಸಾಂ ರೈಫಲ್ಸ್ ಸಹ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡುತ್ತಿದೆ. ಇದನ್ನೂ ಓದಿ: ನೀಟ್‍ನಲ್ಲಿ ರ‍್ಯಾಂಕ್ ಗಳಿಸಿದ ಕೊಪ್ಪಳ ಪ್ರತಿಭಾವಂತನಿಗೆ ಬೇಕಿದೆ ಸಹಾಯ ಹಸ್ತ

    Live Tv
    [brid partner=56869869 player=32851 video=960834 autoplay=true]

  • ಕಲ್ಲು ಕ್ವಾರಿ ಕುಸಿತ – 15 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

    ಕಲ್ಲು ಕ್ವಾರಿ ಕುಸಿತ – 15 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

    ಐಜ್ವಾಲ್: ಕಲ್ಲು ಕ್ವಾರಿ (Stone Quarry) ಕುಸಿದು 15ಕ್ಕೂ ಹೆಚ್ಚು ಕಾರ್ಮಿಕರು (labourers) ಮಣ್ಣಿನಡಿ ಸಿಲುಕಿರುವ ಘಟನೆ ಮಿಜೋರಾಂನಲ್ಲಿ (Mizoram) ನಡೆದಿದೆ.

    ಮಿಜೋರಾಂನ ಹ್ನಾಥಿಯಾಲ್ ಗ್ರಾಮದ ಬಳಿ ಇದ್ದ ಕಲ್ಲು ಕ್ವಾರಿಯಲ್ಲಿ 15ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕ್ವಾರಿ ಕುಸಿದು ಕ್ವಾರಿಗೆ ಮಣ್ಣು ಆವರಿಸಿದೆ. ಏಕಾಏಕಿ ಮಣ್ಣು ಕುಸಿದ ಪರಿಣಾಮ ಕ್ವಾರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ.

    ಕನಿಷ್ಟ 15 ಮಂದಿ ಮಣ್ಣಿನಡಿಯಲ್ಲಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ಮಣ್ಣಿನಡಿ ಡ್ರಿಲ್ಲಿಂಗ್ ಯಂತ್ರಗಳು ಹೂತುಹೋಗಿವೆ. 5ಕ್ಕೂ ಹೆಚ್ಚು ಜೆಸಿಬಿಗಳು (JCB) ಮಣ್ಣು ತೆರವುಗೊಳಿಸುವ ಕಾರ್ಯಯದಲ್ಲಿ ತೊಡಗಿಕೊಂಡಿದೆ.

    Live Tv
    [brid partner=56869869 player=32851 video=960834 autoplay=true]

  • ವೈದ್ಯನ ಮೇಲೆ ಹಲ್ಲೆ ನಡೆಸಿದ ಮಿಜೋರಾಂ ಸಿಎಂ ಪುತ್ರಿ – ತಂದೆಯಿಂದಲೇ ಸಾರ್ವಜನಿಕವಾಗಿ ಕ್ಷಮೆ

    ವೈದ್ಯನ ಮೇಲೆ ಹಲ್ಲೆ ನಡೆಸಿದ ಮಿಜೋರಾಂ ಸಿಎಂ ಪುತ್ರಿ – ತಂದೆಯಿಂದಲೇ ಸಾರ್ವಜನಿಕವಾಗಿ ಕ್ಷಮೆ

    ಐಜ್ವಾಲ್: ಮಿಜೋರಾಂ ಮುಖ್ಯಮಂತ್ರಿಯ ಪುತ್ರಿ ಏಕಾಏಕಿ ವೈದ್ಯರೊಬ್ಬರ ಮೇಲೆ ಹಲ್ಲೆ ನಡೆಸಿದ ವೀಡಿಯೋ ವೈರಲ್ ಆಗಿದೆ. ಈ ಹಿನ್ನೆಲೆ ಆಕೆಯ ತಂದೆ, ಮಿಜೋರಾಂನ ಸಿಎಂ ಝೋರಂತಂಗ ಅವರು ಖುದ್ದಾಗಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ.

    ಸಿಎಂ ಪುತ್ರಿ ಮಿಲಾರಿ ಚಾಂಗ್ಟೆ ರಾಜ್ಯದ ರಾಜಧಾನಿ ಐಜ್ವಾಲ್‌ನಲ್ಲಿ ಚರ್ಮರೋಗ ತಜ್ಞನನ್ನು ಭೇಟಿಯಾಗಲು ಬಯಸಿದ್ದರು. ಆದರೆ ಭೇಟಿಗೂ ಮೊದಲು ಅಪಾಯಿಂಟ್‌ಮೆಂಟ್ ತೆಗೆದುಕೊಂಡು ಬರುವಂತೆ ಸೂಚಿಸಲಾಗಿತ್ತು. ಇದರಿಂದ ಕೋಪಗೊಂಡ ಚಾಂಗ್ಟೆ ವೈದ್ಯನ ಮೇಲೆ ಹಲ್ಲೆ ನಡೆಸಿದ್ದಾರೆ.

    ಘಟನೆ ಬುಧವಾರ ನಡೆದಿರುವುದಾಗಿ ತಿಳಿದುಬಂದಿದ್ದು, ಹಲ್ಲೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವೀಡಿಯೋದಲ್ಲಿ ಮುಖ್ಯಮಂತ್ರಿಗಳ ಮಗಳು ವೈದ್ಯರ ಬಳಿ ಹೋಗುವುದು ಹಾಗೂ ವೈದ್ಯನಿಗೆ ಹೊಡೆದಿರುವುದು ಕಂಡುಬಂದಿದೆ. ಈ ವೀಡಿಯೋ ಕಳೆದ 2 ದಿನಗಳಿಂದ ವೈರಲ್ ಆಗುತ್ತಿದ್ದು, ಬಳಿಕ ಮುಖ್ಯಮಂತ್ರಿ ಹಾಗೂ ಅವರ ಕುಟುಂಬದ ಸದಸ್ಯರು ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಜೀವ ಬೆದರಿಕೆ- ತನಿಖೆ ಮಾಡಿಸ್ತೀವಿ ಎಂದ ಸಿಎಂ

    ಈ ಘಟನೆಯ ವಿರುದ್ಧ ಭಾರತೀಯ ವೈದ್ಯಕೀಯ ಸಂಘದ(ಐಎಂಎ) ಮಿಜೋರಾಂ ಘಟಕ ಪ್ರತಿಭಟನೆ ಆರಂಭಿಸಿದ್ದು, ವೈದ್ಯರು ಕಪ್ಪು ಬ್ಯಾಡ್ಜ್ ಧರಿಸಿ ಕೆಲಸ ಮಾಡಿರುವುದಾಗಿ ವರದಿಯಾಗಿದೆ.

    ಅಂತಿಮವಾಗಿ ಮಿಜೋರಾಂ ಸಿಎಂ ಇನ್‌ಸ್ಟಾಗ್ರಾಮ್‌ನ ಅಧಿಕೃತ ಖಾತೆ ಮೂಲಕ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಐಜ್ವಾಲ್ ಮೂಲದ ಚರ್ಮರೋಗ ವೈದ್ಯರೊಂದಿಗೆ ತಮ್ಮ ಮಗಳು ತೋರಿದ ದುರ್ವರ್ತನೆಗೆ ನಾನು ಕ್ಷಮೆ ಯಾಚಿಸುತ್ತೇನೆ. ನಾನು ಯಾವುದೇ ರೀತಿಯಲ್ಲೂ ಆಕೆಯ ನಡವಳಿಕೆಯನ್ನು ಸಮರ್ಥಿಸುವುದಿಲ್ಲ ಎಂದು ಬರೆದಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್ ಅವರೇ ದೆಹಲಿ ಮದ್ಯ ಅಕ್ರಮದ ಕಿಂಗ್‌ಪಿನ್, ಬಂಧನ ಹತ್ತಿರದಲ್ಲೇ ಇದೆ: ಬಿಜೆಪಿ

    Live Tv
    [brid partner=56869869 player=32851 video=960834 autoplay=true]

  • ಹೆಂಡತಿಯನ್ನು ತಬ್ಬಿ ಕೊಂದೇ ಬಿಟ್ಟ – ಇದು ಸೂಸೈಡ್‌ ಬಾಂಬರ್‌ ಸಿಟ್ಟಿನ ಕಥೆ

    ಹೆಂಡತಿಯನ್ನು ತಬ್ಬಿ ಕೊಂದೇ ಬಿಟ್ಟ – ಇದು ಸೂಸೈಡ್‌ ಬಾಂಬರ್‌ ಸಿಟ್ಟಿನ ಕಥೆ

    ಐಜ್ವಾಲ್: ಪತ್ನಿಯ ಮೇಲೆ ಕೋಪ ಮಾಡಿಕೊಂಡು ಬೇರೆಯಾಗಿ ವಾಸಿಸುತ್ತಿದ್ದ ಗಂಡನೊಬ್ಬ ಆಕೆಯನ್ನು ಕೊಲ್ಲಲು ತನ್ನ ಬಟ್ಟೆಯೊಳಗೆ ಜಿಲೆಟಿನ್ ಬಾಂಬ್ ಇಟ್ಟುಕೊಂಡು ಆಕೆಯನ್ನು ಗಟ್ಟಿಯಾಗಿ ತಬ್ಬಿಕೊಂಡಿದ್ದಾನೆ. ಬಾಂಬ್ ಸ್ಫೋಟವಾಗಿ ಗಂಡ-ಹೆಂಡತಿ ಇಬ್ಬರೂ ಸಾವನ್ನಪ್ಪಿರುವ ಘಟನೆ ಮಿಜೋರಾಂನ ಲುಂಗೇಲಿಯಲ್ಲಿ ನಡೆದಿದೆ.

    61 ವರ್ಷದ ಮಹಿಳೆ ಮತ್ತು ಈಕೆಯ ಪತಿ ರೋಹ್‍ಮಿಂಗ್ಲಿಯಾನ ಮೃತರಾಗಿದ್ದಾರೆ. ನಿನ್ನೆ ಮಧ್ಯಾಹ್ನ 12:15ರ ವೇಳೆಗೆ ಬಾಂಬ್ ಸ್ಫೋಟವಾಗಿದೆ. ಆತ್ಮಾಹುತಿ ಬಾಂಬ್ ಸಿಡಿಸಿ ಹೆಂಡತಿಯನ್ನು ಕೊಲ್ಲಲು ಮುಂದಾದ ಗಂಡ, ಆ ರೀತಿಯ ನಿರ್ಧಾರ ತೆಗೆದುಕೊಳ್ಳಲು ಕಾರಣವೇನೆಂಬ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ಇದನ್ನೂ ಓದಿ: ಒಳಗಡೆ ಇರೋ ವಸ್ತುಗಳನ್ನು ನೋಡಿ ರೆಸಿಪಿ ವಿವರ ನೀಡಲಿದೆ ಅಮೆಜಾನ್‌ ಸ್ಮಾರ್ಟ್‌ ಫ್ರಿಡ್ಜ್‌

     

    ಮಹಿಳೆ ರೋಹ್‍ಮಿಂಗ್ಲಿಯಾನನ್ನು ಎರಡನೇ ಮದುವೆಯಾಗಿದ್ದಳು. ಇಬ್ಬರ ನಡುವೆ ಜಗಳ ನಡೆದಿದ್ದರಿಂದ ಪ್ರತ್ಯೇಕವಾಗಿ ಒಂದು ವರ್ಷದಿಂದ ವಾಸವಾಗಿದ್ದರು. ಆದರೆ ಅವರು ನಿನ್ನೆ ಒಂದೇ ಕಡೆ ಸೇರಿದ್ದರು. ತರಕಾರಿ ಮಾರುತ್ತಿದ್ದ ಆ ಮಹಿಳೆಯನ್ನು ಹುಡುಕಿ ಬಂದ ಆಕೆಯ ಪತಿ, ಆಕೆಯ ಜೊತೆಯಲ್ಲಿದ್ದ ಮಗಳನ್ನು ದೂರ ಕಳಿಸಿದ್ದ. ಮಗಳು ದೂರ ಹೋದ ನಂತರ ಪತ್ನಿಯನ್ನು ಕೊಲೆ ಮಾಡಲು ಮುಂದಾಗಿದ್ದಾನೆ. ಇದನ್ನೂ ಓದಿ:RSS ಜಾತಿ, ಧರ್ಮ ಮೀರಿದ ಮಾತೃಹೃದಯಿ ಸಂಘಟನೆ: ಜಗ್ಗೇಶ್

    ಪ್ರತ್ಯಕ್ಷದರ್ಶಿಗಳು ತಿಳಿಸಿರುವ ಪ್ರಕಾರ, ತರಕಾರಿ ಮಾರುತ್ತಾ ಗಾಡಿಯ ಬಳಿ ಕುಳಿತಿದ್ದ ಹೆಂಡತಿಯ ಪಕ್ಕದಲ್ಲೇ ಕುಳಿತ ಆಕೆಯ ಗಂಡ ತನಗಾಗಿ ಒಂದು ಸಿಗರೇಟ್ ತಂದುಕೊಡುವಂತೆ ಕೇಳಿದ್ದ. ಆಕೆ ಸಿಗರೇಟ್ ತಂದು ಕೊಟ್ಟಾಗ ಅದನ್ನು ಬಾಯಿಗಿಟ್ಟುಕೊಂಡ ಆತ ಎದ್ದು ನಿಂತವನೇ ತಲೆ ಸುತ್ತುಬಂದಂತೆ ನಟಿಸಿ ಕೆಳಗೆ ಬೀಳುವವನಿದ್ದ. ಆಗ ಎದ್ದು ನಿಂತ ಆತನ ಹೆಂಡತಿಯನ್ನು ಜೋರಾಗಿ ತಬ್ಬಿಕೊಂಡ ಕೂಡಲೇ ಬಾಂಬ್ ಸ್ಫೋಟವಾಗಿತ್ತು. ಸುತ್ತಮುತ್ತಲಿದ್ದವರು ನೋಡನೋಡುತ್ತಿದ್ದಂತೆಯೇ ಅವರಿಬ್ಬರ ದೇಹ ಛಿದ್ರವಾಗಿತ್ತು ಎಂದಿದ್ದಾರೆ. ಇದನ್ನೂ ಓದಿ: ಪಿಡಿಒನಿಂದ ರಾಷ್ಟ್ರಪತಿವರೆಗೆ RSS ಕಾರ್ಯಕರ್ತರೇ ಇರೋದು- ಹೆಚ್‍ಡಿಕೆಗೆ ಸುನೀ

    ಈ ಘಟನೆ ಬಳಿಕ ಅವರ ಮಗಳು ನಾಪತ್ತೆಯಾಗಿದ್ದಾಳೆ. ಬಾಂಬ್ ತಯಾರಿಸಲು ಬಳಸುವ ಜಿಲೆಟಿನ್ ಅನ್ನು ಬಟ್ಟೆಯೊಳಗೆ ಇಟ್ಟುಕೊಂಡಿದ್ದ ಗಂಡ ತಾನೂ ಸತ್ತು ಹೆಂಡತಿಯನ್ನೂ ಕೊಂದಿದ್ದಾನೆ.