Tag: ಮಿಥುನ್ ಚಕ್ರವರ್ತಿ

  • 70th National Film Awards: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಮಿಥುನ್ ಚಕ್ರವರ್ತಿ

    70th National Film Awards: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಮಿಥುನ್ ಚಕ್ರವರ್ತಿ

    70ನೇ ರಾಷ್ಟ್ರ ಪ್ರಶಸ್ತಿ ಸಮಾರಂಭ ಇಂದು (ಅ.8) ದೆಹಲಿಯಲ್ಲಿ ನಡೆದಿದೆ. ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ನಟಿಸುತ್ತಿರುವ ಹಿರಿಯ ನಟ ಮಿಥುನ್ ಚಕ್ರವರ್ತಿಗೆ (Mithun Chakraborty) ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಇದನ್ನೂ ಓದಿ:70th National Film Awards: ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

    ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ. ಹಿರಿಯ ನಟ ಮಿಥುನ್ ಚಕ್ರವರ್ತಿ ಅವರು ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ್ದಾರೆ. ಇನ್ನೂ ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಈ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಅದಷ್ಟೇ ಅಲ್ಲ, ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ `ಕೆಜಿಎಫ್ 2’ಗೆ ರಾಷ್ಟ್ರ ಪ್ರಶಸ್ತಿ ದಕ್ಕಿದೆ. ಚಿತ್ರದ ನಿರ್ಮಾಣ ಸಂಸ್ಥೆಯ ರೂವಾರಿ ವಿಜಯ್ ಕಿರಗಂದೂರು ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.

    70ನೇ ರಾಷ್ಟ್ರ ಪ್ರಶಸ್ತಿ ಪಡೆದ ವಿಜೇತರ ಪಟ್ಟಿ ಈ ಕೆಳಗಿನಂತಿದೆ:

    ಅತ್ಯುತ್ತಮ ನಟ- ರಿಷಬ್ ಶೆಟ್ಟಿ (ಕಾಂತಾರ)
    ಅತ್ಯುತ್ತಮ ನಟಿ – ನಿತ್ಯಾ ಮೆನನ್ ಮತ್ತು ಮಾನಸಿ ಪರೇಖ್
    ಅತ್ಯುತ್ತಮ ಚಲನಚಿತ್ರ- ಆಟಂ (ಮಲಯಾಳಂ)
    ಅತ್ಯುತ್ತಮ ಜನಪ್ರಿಯ ಚಿತ್ರ- ಕಾಂತಾರ (ಕನ್ನಡ)
    ಅತ್ಯುತ್ತಮ ನಿರ್ದೇಶಕ – ಸೂರಜ್ ಬರ್ಜಾತ್ಯ
    ಅತ್ಯುತ್ತಮ ಪೋಷಕ ನಟಿ – ನೀನಾ ಗುಪ್ತಾ
    ಅತ್ಯುತ್ತಮ ಪೋಷಕ ನಟ – ಪವನ್ ರಾಜ್ ಮಲ್ಹೋತ್ರಾ
    ಅತ್ಯುತ್ತಮ ಚೊಚ್ಚಲ ಚಿತ್ರ- ಫೌಜಾ, ಪ್ರಮೋದ್ ಕುಮಾರ್
    ಅತ್ಯುತ್ತಮ ತೆಲುಗು ಚಿತ್ರ – ಕಾರ್ತಿಕೇಯ 2
    ಅತ್ಯುತ್ತಮ ತಮಿಳು ಚಿತ್ರ – ಪೊನ್ನಿಯಿನ್ ಸೆಲ್ವನ್ -ಭಾಗ 1
    ಅತ್ಯುತ್ತಮ ಪಂಜಾಬಿ ಚಿತ್ರ – ಬಾಘಿ ದಿ ಧೀ
    ಅತ್ಯುತ್ತಮ ಒಡಿಯಾ ಚಿತ್ರ – ದಮನ್
    ಅತ್ಯುತ್ತಮ ಮಲಯಾಳಂ ಚಿತ್ರ – ಸೌದಿ ವೇಲಕ್ಕ ಸಿಸಿ 225/2009 (ತರುಣ್ ಮೂರ್ತಿ)
    ಅತ್ಯುತ್ತಮ ಮರಾಠಿ ಚಿತ್ರ – ವಾಲ್ವಿ
    ಅತ್ಯುತ್ತಮ ಕನ್ನಡ ಚಿತ್ರ – ಕೆಜಿಎಫ್ ಪಾರ್ಟ್ 2
    ಅತ್ಯುತ್ತಮ ಹಿಂದಿ ಚಿತ್ರ – ಗುಲ್‌ಮೊಹರ್
    ವಿಶೇಷ ಪ್ರಶಸ್ತಿ- ಗುಲ್‌ಮೊಹರ್‌ನಲ್ಲಿ ಮನೋಜ್ ಬಾಜಪೇಯಿ ಮತ್ತು ಕಾಲಿಖಾನ್‌ನಲ್ಲಿ ಸಂಜೋಯ್ ಸಲಿಲ್ ಚೌಧರಿ
    ಅತ್ಯುತ್ತಮ ಆ್ಯಕ್ಷನ್ ನಿರ್ದೇಶನ – ಕೆಜಿಎಫ್ ಚಾಪ್ಟರ್ 2 (ಅನ್ಬರಿವ್)
    ಅತ್ಯುತ್ತಮ ಸಾಹಿತ್ಯ – ಫೌಜಾ
    ಅತ್ಯುತ್ತಮ ಸಂಗೀತ ನಿರ್ದೇಶಕ – ಪ್ರೀತಮ್ (ಹಾಡುಗಳು), ಎ.ಆರ್.ರೆಹಮಾನ್ (ಹಿನ್ನೆಲೆ ಸಂಗೀತ)
    ಅತ್ಯುತ್ತಮ ಮೇಕಪ್ – ಅಪರಾಜಿತೋ
    ಅತ್ಯುತ್ತಮ ಕಾಸ್ಟ್ಯೂಮ್ – ನಿಕ್ಕಿ ಜೋಶಿ (ಕಛ್ ಎಕ್ಸ್ಪ್ರೆಸ್)
    ಅತ್ಯುತ್ತಮ ಪ್ರೊಡಕ್ಷನ್ ಡಿಸೈನ್ – ಅಪರಾಜಿತೋ
    ಅತ್ಯುತ್ತಮ ಸಂಕಲನ – ಆಟಂ
    ಅತ್ಯುತ್ತಮ ಸೌಂಡ್ ಡಿಸೈನ್ – ಪೊನ್ನಿಯಿನ್ ಸೆಲ್ವನ್ -ಪಾರ್ಟ್ 1
    ಅತ್ಯುತ್ತಮ ಚಿತ್ರಕಥೆ – ಆಟಂ
    ಅತ್ಯುತ್ತಮ ಸಂಭಾಷಣೆ – ಗುಲ್‌ಮೊಹರ್
    ಅತ್ಯುತ್ತಮ ಛಾಯಾಗ್ರಹಣ – ಪೊನ್ನಿಯಿನ್ ಸೆಲ್ವನ್ -ಭಾಗ 1
    ಅತ್ಯುತ್ತಮ ಗಾಯಕಿ- ಬಾಂಬೆ ಜಯಶ್ರೀ (ಚಾಯುಂ ವೆಲ್ಲಿ, ಸೌದಿ ವೆಲ್ಲಕ ಮಲಯಾಳಂ ಸಿನಿಮಾ)
    ಅತ್ಯುತ್ತಮ ಗಾಯಕ- ಅರಿಜಿತ್ ಸಿಂಗ್ (ಕೇಸರಿಯಾ ಸಾಂಗ್ ‘ಬ್ರಹ್ಮಾಸ್ತ್ರ’ ಸಿನಿಮಾ)

  • ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಘೋಷಣೆ

    ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಘೋಷಣೆ

    ಮುಂಬೈ: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ (Mithun Chakraborty) ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು (Dadasaheb Phalke Award) ಘೋಷಣೆ ಮಾಡಿದ್ದು, ಅ.08 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನು (70th National Film Awards) ಸ್ವೀಕರಿಸಲಿದ್ದಾರೆ.

    ಈ ಕುರಿತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಿಥುನ್ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಭಾರತೀಯ ಚಿತ್ರರಂಗಕ್ಕೆ ಅವರ ಅಪ್ರತಿಮ ಕೊಡುಗೆಗಾಗಿ ಪೌರಾಣಿಕ ನಟರಾದ ಶಾ.ಮಿಥುನ್ ಚಕ್ರವರ್ತಿಯವರನ್ನು ದಾದಾಸಾಹೇಬ್ ಫಾಲ್ಕೆ ತೀರ್ಪುಗಾರರ ಸಮಿತಿಯು ಆಯ್ಕೆ ಮಾಡಿದೆ. ಅ.8 ರಂದು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಬರೆದುಕೊಂಡಿದ್ದು, ಪೋಸ್ಟ್ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ಬಾಹ್ಯಾಕಾಶ ನಿಲ್ದಾಣ ತಲುಪಿತು ಕ್ರ್ಯೂ-9 ಮಿಷನ್ – ಅಪ್ಪಿಕೊಂಡು ಸ್ವಾಗತಿಸಿದ ಗಗನಯಾನಿಗಳು

    ದಾದಾಸಾಹೇಬ್ ಫಾಲ್ಕೆ ಆಯ್ಕೆ ಸಮಿತಿಯು ಭಾರತೀಯ ಚಿತ್ರರಂಗಕ್ಕೆ ಅಪ್ರತಿಮ ಕೊಡುಗೆಗಾಗಿ ಖ್ಯಾತ ನಟ, ಶಾ. ಮಿಥುನ್ ಚಕ್ರವರ್ತಿ ಅವರಿಗೆ ಪ್ರಶಸ್ತಿ ನೀಡಲು ನಿರ್ಧರಿಸಿದೆ ಎಂದು ಘೋಷಿಸಲು ಸಂತೋಷವಾಗುತ್ತದೆ ಎಂದಿದ್ದಾರೆ. ಜೊತೆಗೆ ಈ ವರ್ಷದ ಆರಂಭದಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣವನ್ನು ಘೋಷಿಸಲಾಗಿತ್ತು.

    ಮಿಥುನ್ ಚಕ್ರವರ್ತಿ ಹಿನ್ನೆಲೆ:
    ಕಲ್ಕತ್ತಾದಲ್ಲಿ ಜನಿಸಿದ ಇವರು, 1976ರ ಮೃಗಯಾ (Mrigayaa) ಸಿನಿಮಾದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ಈ ಸಿನಿಮಾದ ಅತ್ಯುತ್ತಮ ನಟನೆಯಿಂದಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ತಂದುಕೊಟ್ಟಿತು. ಬಳಿಕ 1992 ರಲ್ಲಿ ತೆರೆ ಕಂಡ ತಹದರ್ ಕಥಾ ಹಾಗೂ 1998ರಲ್ಲಿ ತೆರೆ ಕಂಡಿದ್ದ ಸ್ವಾಮಿ ವಿವೇಕಾನಂದ ಸಿನಿಮಾದ ಪಾತ್ರಗಳಿಗಾಗಿ ಎರಡು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ಇತ್ತೀಚಿಗೆ ತೆರೆ ಕಂಡಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್‌ನಲ್ಲಿ (The Kashmiri Files) ಕಾಣಿಸಿಕೊಂಡಿದ್ದರು.ಇದನ್ನೂ ಓದಿ: ಮುಡಾದಲ್ಲಿ ಸಿಎಂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಸಿದ್ದರಾಮಯ್ಯರ ರಾಜೀನಾಮೆ ಅನಿವಾರ್ಯ: ವಿಜಯೇಂದ್ರ

  • ಮಿಥುನ್ ಚಕ್ರವರ್ತಿಗೆ ಬ್ರೈನ್ ಸ್ಟ್ರೋಕ್- ಆರೋಗ್ಯ ಸ್ಥಿತಿ ಹೇಗಿದೆ?

    ಮಿಥುನ್ ಚಕ್ರವರ್ತಿಗೆ ಬ್ರೈನ್ ಸ್ಟ್ರೋಕ್- ಆರೋಗ್ಯ ಸ್ಥಿತಿ ಹೇಗಿದೆ?

    ಬಾಲಿವುಡ್‌ನ (Bollywood) ಖ್ಯಾತ ನಟ ಕಮ್ ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿಗೆ (Mithun Chakraborty) ತೀವ್ರ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ (ಫೆ.10) ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿತ್ತು. ಇದೀಗ ನಟ ಮಿಥುನ್ ಅವರ ಹೆಲ್ತ್ ಬಗ್ಗೆ ಅಪ್‌ಡೇಟ್ ಹೊರಬಿದ್ದಿದೆ. ಅವರಿಗೆ ಆಗಿದ್ದು ಬ್ರೈನ್ ಸ್ಟ್ರೋಕ್ (Brain Stroke) ಎಂಬ ವಿಚಾರ ತಿಳಿದು ಬಂದಿದೆ.

    ಮಿಥುನ್ ಈಗ ಐಸಿಯುನಿಂದ ಹೊರಬಂದಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ನಟಿ ದೇಬಶ್ರೀ ರಾಯ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಮಿಥುನ್ ಅವರು ಈಗ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದಾರೆ. ಸರಿಯಾದ ಸಮಯಕ್ಕೆ ಆಡ್ಮಿಟ್ ಮಾಡಿದ ಕಾರಣ ಚಿಂತಿಸುವ ಅಗತ್ಯವಿಲ್ಲ. ಶುಗರ್ ಮಟ್ಟ ಕೂಡ ಕಡಿಮೆ ಆಗಿದೆ. ಈಗ ಅವರು ಐಸಿಯುನಿಂದ ಹೊರಬಂದಿದ್ದಾರೆ. ಚೇತರಿಸಿಕೊಳ್ಳುತ್ತಿದ್ದಾರೆ ಎಂದು ದೇಬಶ್ರೀ ರಾಯ್ ತಿಳಿಸಿದ್ದಾರೆ. ಸದ್ಯ 73 ವರ್ಷ ವಯಸ್ಸಿನ ನಟ ಮಿಥುನ್ ಆರೋಗ್ಯದಲ್ಲಿ ಚೇತರಿಕೆ ಕಂಡಿರುವ ವಿಚಾರ ತಿಳಿದು ಅಭಿಮಾನಿಗಳು ನಿರಾಳವಾಗಿದ್ದಾರೆ. ಇದನ್ನೂ ಓದಿ:ಬಾಲಿವುಡ್‌ನತ್ತ ‘ಆರ್‌ಆರ್‌ಆರ್’ ಹೀರೋ ರಾಮ್ ಚರಣ್

    ಮಿಥುನ್ ಚಕ್ರವರ್ತಿ ಅವರು 1976ರಿಂದ ಚಿತ್ರೋದ್ಯಮದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ರಾಷ್ಟ್ರ ಪ್ರಶಸ್ತಿ ಸೇರಿದಂತೆ ಹಲವಾರು ಪ್ರತಿಷ್ಠಿತ ಗೌರವಗಳನ್ನು ಅವರು ಪಡೆದಿದ್ದಾರೆ. ಡಿಸ್ಕೋ ಡ್ಯಾನ್ಸರ್, ಜಂಗ್, ಪ್ರೇಮ್ ಪ್ರತಿಜ್ಞಾ, ಪ್ಯಾರ್ ಜುಕ್ತಾ ನಹೀ, ಮರ್ದ್ ಮುಂತಾದ ಸಿನಿಮಾಗಳಲ್ಲಿ ನಟಿಸಿ ಅವರು ಹೆಸರುವಾಸಿ ಆಗಿದ್ದಾರೆ.

  • ತೀವ್ರ ಎದೆನೋವು: ಆಸ್ಪತ್ರೆಗೆ ದಾಖಲಾದ ಖ್ಯಾತ ನಟ ಮಿಥುನ್ ಚಕ್ರವರ್ತಿ

    ತೀವ್ರ ಎದೆನೋವು: ಆಸ್ಪತ್ರೆಗೆ ದಾಖಲಾದ ಖ್ಯಾತ ನಟ ಮಿಥುನ್ ಚಕ್ರವರ್ತಿ

    ಬಾಲಿವುಡ್ ನ ಖ್ಯಾತ ನಟ ಹಾಗೂ ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿ (Mithun Chakravarty) ಅವರಿಗೆ ತೀವ್ರ ಎದೆ ನೋವು (Chest Pain) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋಲ್ಕತ್ತದ ಖಾಸಗಿ (Hospital) ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

    ಮಿಥುನ್ ಚಕ್ರವರ್ತಿ ಅವರ ಕುಟುಂಬದವರಾಗಲಿ ಅಥವಾ ಅಧಿಕೃತವಾಗಿ ಈ ಮಾಹಿತಿ ಇರದೇ ಇದ್ದರೂ, ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದ ಕಾರಣದಿಂದಾಗಿ ನೆಚ್ಚಿನ ನಟನ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಆತಂಕ ಶುರುವಾಗಿದೆ.

     

    ಇಂದು ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ತಡ ಮಾಡದೇ ಆಸ್ಪತ್ರೆಗೆ ದಾಖಲಿಸಿದ್ದಾರಂತೆ. ಈಗಾಗಲೇ ಚಿಕಿತ್ಸೆ ಕೂಡ ನೀಡಲಾಗಿದೆ ಎಂದು ವರದಿಗಳು ಆಗುತ್ತಿವೆ. ಅವರ ಆರೋಗ್ಯದ ಬಗ್ಗೆ ಕುಟುಂಬಸ್ಥರೇ ತಿಳಿಸಬೇಕಿದೆ.

  • ಮೆಗಾಸ್ಟಾರ್ ಚಿರಂಜೀವಿಗೆ ಪದ್ಮವಿಭೂಷಣ ಪ್ರಶಸ್ತಿ

    ಮೆಗಾಸ್ಟಾರ್ ಚಿರಂಜೀವಿಗೆ ಪದ್ಮವಿಭೂಷಣ ಪ್ರಶಸ್ತಿ

    ಣರಾಜ್ಯೋತ್ಸವದ ಮುನ್ನಾ ದಿನ 2024ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು (Padma Awards 2024) ಪ್ರಕಟಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಈ ಪ್ರಶಸ್ತಿ ದೊರೆತಿದೆ. ಸಾಧಕರಿಗೆ ಪದ್ಮ ವಿಭೂಷಣ, ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ. ಅದರಂತೆ ಹಲವು ವರ್ಷಗಳಿಂದ ಕಲಾ ಸೇವೆ ಮಾಡಿರುವ ಮೆಗಾಸ್ಟಾರ್ ಚಿರಂಜೀವಿಗೆ ಪದ್ಮವಿಭೂಷಣ ಪ್ರಶಸ್ತಿ ದೊರೆತಿದೆ. ಇದನ್ನೂ ಓದಿ:ಕರ್ನಾಟಕದ ಇಬ್ಬರು ಸೇರಿ 34 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ

    ಕಲೆ ಕ್ಷೇತ್ರದಲ್ಲಿ ಪದ್ಮವಿಭೂಷಣ ಪ್ರಶಸ್ತಿ ಭಾಜನರಾದವರು

    1. ವೈಜಯಂತಿಮಾಲಾ ಬಾಲಿ (ತಮಿಳುನಾಡು)

    2.ಮೆಗಾಸ್ಟಾರ್ ಚಿರಂಜೀವಿ (ಆಂಧ್ರಪ್ರದೇಶ)

    3.ಪದ್ಮ ಸುಬ್ರಹ್ಮಣ್ಯಂ (ತಮಿಳುನಾಡು)

    ಕಲೆ ಕ್ಷೇತ್ರದಲ್ಲಿ ಪದ್ಮ ಭೂಷಣ ಪ್ರಶಸ್ತಿ ಭಾಜನರಾದವರು

    ಮಿಥುನ್ ಚಕ್ರವರ್ತಿ

    ದತ್ತಾತ್ರೇಯ ಅಂಬಾದಾಸ್ ಮೇಲು

    ಉಷಾ ಉತ್ತುಪ್

    ತಮಿಳಿನ ನಟ ವಿಜಯಕಾಂತ್

  • ಟಿಎಂಸಿಯ 21 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಆದರೆ ಬಿಜೆಪಿಯಲ್ಲಿ ಆಕ್ಷೇಪವಿದೆ: ಮಿಥುನ್ ಚಕ್ರವರ್ತಿ

    ಟಿಎಂಸಿಯ 21 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಆದರೆ ಬಿಜೆಪಿಯಲ್ಲಿ ಆಕ್ಷೇಪವಿದೆ: ಮಿಥುನ್ ಚಕ್ರವರ್ತಿ

    ಕೋಲ್ಕತ್ತಾ: ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನ (TMC) 21 ಶಾಸಕರು (MLA) ತಮ್ಮೊಂದಿಗೆ ನೇರ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ (BJP) ನಾಯಕ ಮತ್ತು ನಟ ಮಿಥುನ್ ಚಕ್ರವರ್ತಿ (Mithun Chakraborty) ಮತ್ತೊಮ್ಮೆ ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದಾರೆ.

    ಕೋಲ್ಕತ್ತಾದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಿಥುನ್ ಚಕ್ರವರ್ತಿ, 21 ಟಿಎಂಸಿ ಶಾಸಕರು ಇನ್ನೂ ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ನಾನು ಇದನ್ನು ಮೊದಲೇ ಹೇಳಿದ್ದೇನೆ. ಮತ್ತೆ ಮತ್ತೆ ಹೇಳುತ್ತಿದ್ದೇನೆ ಎಂದು ಹೇಳಿದರು.

    ಟಿಎಂಸಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದರೂ ಅವರನ್ನು ತೆಗೆದುಕೊಳ್ಳುವ ಬಗ್ಗೆ ನಮ್ಮ ಪಕ್ಷದೊಳಗೆ ಆಕ್ಷೇಪಗಳಿವೆ ಎಂದು ನನಗೆ ತಿಳಿದಿದೆ. ಕೊಳೆತ ಆಲೂಗಡ್ಡೆಯನ್ನು ತೆಗೆದುಕೊಳ್ಳಲು ಆಗುವುದಿಲ್ಲ ಎಂದು ಹಲವರು ಹೇಳಿದ್ದಾರೆ. ಆದರೆ ನಾನು ಇದನ್ನು ಹೇಳುವುದಿಲ್ಲ. ಹಾಗೂ ಅದೇ ತಪ್ಪನ್ನು ಮತ್ತೆ ಪುನರಾವರ್ತಿಸುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 30 ಕೇಸ್‌ ಎದುರಿಸಿದ್ದೇವೆ, ಯಾವನಿಗೂ ಹೆದರಿ ಓಡಿ ಹೋಗುವ ಪ್ರಶ್ನೆಯೇ ಇಲ್ಲ: ವಿಜಯೇಂದ್ರ

    ಇತ್ತೀಚೆಗೆ ಮಿಥುನ್ ಚಕ್ರವರ್ತಿ ಬಿಜೆಪಿ ಮುಖಂಡರ ಜೊತೆ ಸಭೆ ನಡೆಸಿ, ಟಿಎಂಸಿ ಶಾಸಕರು ತಮ್ಮ ಸಂಪರ್ಕದಲ್ಲಿರುವ ಬಗ್ಗೆ ತಿಳಿಸಿದ್ದರು. ಅವರು 21ಕ್ಕೂ ಹೆಚ್ಚು ಶಾಸಕರು ಸಂಪರ್ಕದಲ್ಲಿದ್ದಾರೆ ಆದರೆ ನಿಖರವಾದ ಸಂಖ್ಯೆ ತಿಳಿಸಲು ಸಾಧ್ಯವಿಲ್ಲ ಎಂದಿದ್ದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಸರ್ಕಾರ ಉರುಳಿಸುವ ಶಕ್ತಿ ಇದೆ – ಸತೀಶ್ ಜಾರಕಿಹೊಳಿ

    Live Tv
    [brid partner=56869869 player=32851 video=960834 autoplay=true]

  • ಬ್ರೇಕಿಂಗ್ ನ್ಯೂಸ್ ಬೇಕಾ? TMCಯ 38 ಶಾಸಕರು ಬಿಜೆಪಿಯೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ: ಮಿಥುನ್ ಚಕ್ರವರ್ತಿ

    ಬ್ರೇಕಿಂಗ್ ನ್ಯೂಸ್ ಬೇಕಾ? TMCಯ 38 ಶಾಸಕರು ಬಿಜೆಪಿಯೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ: ಮಿಥುನ್ ಚಕ್ರವರ್ತಿ

    ಕೋಲ್ಕತ್ತಾ: ತೃಣಮೂಲ ಕಾಂಗ್ರೆಸ್‌ನ 38 ಶಾಸಕರೊಂದಿಗೆ ಬಿಜೆಪಿ ಸಂಪರ್ಕದಲ್ಲಿದೆ ಹಾಗೂ ಅವರು ವಿರೋಧ ಪಕ್ಷದವರಾಗಿದ್ದರೂ ಬಿಜೆಪಿಯೊಂದಿಗೆ ಅತ್ಯಂತ ಉತ್ತಮ ಸಂಬಂಧವನ್ನೇ ಹೊಂದಿದ್ದಾರೆ ಎಂದು ನಟ, ಬಿಜೆಪಿ ನಾಯಕ ಮಿಥುನ್ ಚಕ್ರವರ್ತಿ ಹೇಳಿಕೆ ನೀಡಿದ್ದಾರೆ.

    ಕೋಲ್ಕತ್ತಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಮಗೆ ಬ್ರೇಕಿಂಗ್ ನ್ಯೂಸ್ ಬೇಕಾ? 38 ಶಾಸಕರು ಬಿಜೆಪಿಯೊಡನೆ ಉತ್ತಮ ಸಂಬಂಧ ಹೊಂದಿದ್ದು, ಅವರ ಪೈಕಿ 21 ಶಾಸಕರು ಬಿಜೆಪಿಯೊಂದಿಗೆ ನೇರ ಸಂಪರ್ಕದಲ್ಲಿದ್ದಾರೆ ಎಂದಿದ್ದಾರೆ.

    ಕಳೆದ ವರ್ಷ ಬಂಗಾಳ ವಿಧಾನಸಭೆ ಚುನಾವಣೆಗೂ ಮುನ್ನ ನಟನಾದ ನನ್ನನ್ನು ಬಿಜೆಪಿ ತನ್ನ ಮಡಿಲಿಗೆ ಹಾಕಿಕೊಂಡಿತ್ತು. ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ದೊಡ್ಡ ಗೆಲುವು ಸಾಧಿಸುವ ಪ್ರಯತ್ನದಲ್ಲಿತ್ತು. ಆದರೆ ಬಿಜೆಪಿ ಮುಸ್ಲಿಂ ವಿರೋಧಿ ಎಂದು ವಾದಿಸಿದ ಇತರ ಪಕ್ಷದವರಿಂದಾಗಿ ಹಿನ್ನಡೆಯಾಯಿತು ಎಂದರು. ಇದನ್ನೂ ಓದಿ: ಕಾಶ್ಮೀರಿ ಪಂಡಿತರ‍್ಯಾರು ಕಣಿವೆಯನ್ನು ತೊರೆದಿಲ್ಲ: ಕೇಂದ್ರ ಸಚಿವ

    ಬಿಜೆಪಿ ನಿಜವಾಗಿಯೂ ಮುಸ್ಲಿಂ ವಿರೋಧಿಯೇ ಆಗಿದ್ದರೆ, ದೇಶದ 3 ಮುಸ್ಲಿಂ ತಾರೆಗಳ(ಸಲ್ಮಾನ್ ಖಾನ್, ಶಾರೂಕ್ ಖಾನ್, ಅಮೀರ್ ಖಾನ್) ಸಿನಿಮಾಗಳು ಹಿಟ್ ಆಗಲು ಹೇಗೆ ಸಾಧ್ಯ? 18 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಬಿಜೆಪಿ ಆ 3 ತಾರೆಗಳನ್ನು ದ್ವೇಷಿಸಿದರೆ ಅಥವಾ ಹಿಂದೂಗಳು ಅವರನ್ನು ಪ್ರೀತಿಸದೇ ಹೋದರೆ ಅವರ ಚಿತ್ರಗಳು ದೊಡ್ಡದಾಗಿ ಕಲೆಕ್ಷನ್ ಮಾಡುತ್ತಿತ್ತಾ ಎಂದು ಪ್ರಶ್ನಿಸಿದ್ದಾರೆ.

    ಒಬ್ಬ ವ್ಯಕ್ತಿ ತನ್ನ ತಪ್ಪಿನ ಯಾವುದೇ ಪುರಾವೆಗಳಿಲ್ಲದೇ ಹೋದರೆ ಆತ ಜಗತ್ತಿಗೆ ಹೆದರಲು ಯಾವುದೇ ಕಾರಣಗಳಿರುವುದಿಲ್ಲ. ಆದರೆ ಆತ ತಪ್ಪು ಮಾಡಿದ್ದರೆ, ಜಗತ್ತಿನ ಯಾವ ಶಕ್ತಿಯೂ ಆತನನ್ನು ರಕ್ಷಿಸಲು ಸಾಧ್ಯವಿಲ್ಲ. ಇದಕ್ಕೆ ಉತ್ತಮ ಉದಾಹರಣೆಯೇ ಪಾರ್ಥ ಚಟರ್ಜಿ. ಅವರ ಆಪ್ತೆಯ ಮನೆಯಿಂದ 21 ಕೋಟಿ ರೂ. ಇಡಿ ವಶಪಡಿಸಿಕೊಂಡ ಬಳಿಕ ಚಟರ್ಜಿ ಹಾಗೂ ಅವರ ಆಪ್ತೆಯನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಚಟರ್ಜಿ ನನ್ನ ಮನೆಯನ್ನು ಮಿನಿ ಬ್ಯಾಂಕ್ ಆಗಿ ಬಳಸಿಕೊಂಡಿದ್ದರು: ಆಪ್ತೆ ಅರ್ಪಿತಾ

    Live Tv
    [brid partner=56869869 player=32851 video=960834 autoplay=true]

  • ಬೆಂಗಳೂರಿನ ಆಸ್ಪತ್ರೆಯಿಂದ ನಟ ಮಿಥುನ್ ಚಕ್ರವರ್ತಿ ಡಿಸ್ಚಾರ್ಜ್

    ಬೆಂಗಳೂರಿನ ಆಸ್ಪತ್ರೆಯಿಂದ ನಟ ಮಿಥುನ್ ಚಕ್ರವರ್ತಿ ಡಿಸ್ಚಾರ್ಜ್

    ಮುಂಬೈ: ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇಂದು ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಡಿಸ್ಚಾರ್ಜ್ ಆಗಿದ್ದಾರೆ.

    72 ವರ್ಷದ ನಟ ಕೆಲ ದಿನಗಳ ಹಿಂದೆ ಹೊಟ್ಟೆನೋವು ಹಾಗೂ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವಿಚಾರವನ್ನು ನಟನ ಮಗ ಮಿಮೋಹ್‌ ಚಕ್ರವರ್ತಿ ತಿಳಿಸಿದ್ದರು. ತಂದೆ ಕಿಡ್ನಿ ಸ್ಟೋನ್‍ನಿಂದ ಬಳಲುತ್ತಿದ್ದು, ಹೀಗಾಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತಸೆ ಕೊಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದರು.

    ಇಂದು ತಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಫಿಟ್ ಆ್ಯಂಡ್ ಫೈನ್ ಆಗಿದ್ದಾರೆ ಎಂದು ತಿಳಿಸಿದ್ದಾರೆ. ಮಿಥುನ್ ಅವರು ಆಸ್ಪತ್ರೆಗೆ ದಾಖಲಾದ ವಿಚಾರ ಗೊತ್ತಾಗುತ್ತಿದ್ದಂತೆಯೇ ಹಲವರು ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಅಂತೆಯೇ ಬಿಜೆಪಿ ಪಕ್ಗಷದ ರಾಷ್ಟ್ರೀಯ ಕಾರ್ಯದರ್ಶಿ ಡಾ. ಅನುಪಮ್ ಹಜ್ರಾ ಟ್ವೀಟ್ ಮಾಡಿ, ಆದಷ್ಟು ಶೀಘ್ರವಾಗು ಗುಣಮುಖರಾಗಿ ಬನ್ನಿ ಎಂದು ಹರಸಿದ್ದಾರೆ. ಇದನ್ನೂ ಓದಿ: ದುನಿಯಾ ವಿಜಯ್ ಮತ್ತು ಬಾಲಯ್ಯ ನಟನೆಯ ಚಿತ್ರಕ್ಕೆ ಟೈಟಲ್ ಫಿಕ್ಸ್

  • ಮೇ 13ರಿಂದ ಕನ್ನಡದಲ್ಲೂ ನೋಡಿ ‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ

    ಮೇ 13ರಿಂದ ಕನ್ನಡದಲ್ಲೂ ನೋಡಿ ‘ದಿ ಕಾಶ್ಮೀರಿ ಫೈಲ್ಸ್’ ಸಿನಿಮಾ

    ಕೇವಲ ಹಿಂದಿಯಲ್ಲಿ ಮಾತ್ರ ರಿಲೀಸ್ ಆಗಿದ್ದ ದಿ ಕಾಶ್ಮೀರಿ ಫೈಲ್ಸ್ ಸಿನಿಮಾ, ಇದೀಗ ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಡಬ್ ಆಗಿ ಜೀ 5 ಓಟಿಸಿಯಲ್ಲಿ ರಿಲೀಸ್ ಆಗುತ್ತಿದೆ. ಕಾಶ್ಮೀರ ಪಂಡಿತರ ಮೇಲಾದ ದೌರ್ಜನ್ಯ, ನಿರಾಶ್ರಿತರ ಹತ್ಯೆ ಕುರಿತು ತಯಾರಿಸಿದ್ದ ಈ ಸಿನಿಮಾ ಬಾಕ್ಸಾಫೀಸ್‌ನ್ನು ಕೊಳ್ಳೆ ಹೊಡೆದಿತ್ತು. ಇದನ್ನೂ ಓದಿ : ಪುನೀತ್‌ಗೆ ಅವಮಾನ: ತಿರುಪತಿ ತಿರುಮಲ ದೇವಸ್ಥಾನಕ್ಕೆ ಅಭಿಮಾನಿಗಳು ಮುತ್ತಿಗೆ

    ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರು, ಸೆಲೆಬ್ರಿಟಿಗಳು, ಜನಸಾಮಾನ್ಯರು ಸಿನಿಮಾ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇಷ್ಟೆಲ್ಲಾ ಸಂಚಲನ ಸೃಷ್ಟಿಸಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾ ಮೇ 13ಕ್ಕೆ ಜೀ5 ಒಟಿಟಿಯಲ್ಲಿ ಪ್ರಿಮಿಯರ್ ಆಗಲಿದೆ. ಇದನ್ನೂ ಓದಿ : ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಅತಿರಥ ಮಹಾರಥ ತಾರಬಳಗ ನಟಿಸಿದ್ದರು. ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ ಮತ್ತು ದರ್ಶನ್ ಕುಮಾರ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಅಮೋಘವಾಗಿ ಅಭಿನಯಿಸಿದ್ದರು. ಇದನ್ನೂ ಓದಿ : ವಾಮನ ತೆಕ್ಕೆಗೆ ತುಳುನಾಡ ಬೆಡಗಿ ರಚನಾ ರೈ

    1991ರ ಸಮಯದಲ್ಲಿ ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆ ಹಾಗೂ ವಲಸೆಯನ್ನು ಸಿನಿಮಾವನ್ನು ಕಟ್ಟಿಕೊಡಲಾಗಿತ್ತು. ಹೀಗಾಗಿ ಈ ಸಿನಿಮಾ ಬಗ್ಗೆ ವಿರೋಧವೂ ವ್ಯಕ್ತವಾಗಿತ್ತು. ವಿರೋಧ ನಡುವೆಯೂ ಕಾಶ್ಮೀರ್ ಫೈಲ್ಸ್ ಗೆಲುವಿನ ನಗೆ ಬೀರಿತ್ತು. ಬಾಲಿವುಡ್ ನಲ್ಲಿ ತಯಾರಾಗಿದ್ದ ಈ ಸಿನಿಮಾ ಕೇವಲ ಹಿಂದಿ ಭಾಷೆಯಲ್ಲಿ ತೆರೆಗೆ ಬಂದಿತ್ತು. ಆದ್ರೇ ಜೀ 5 ಒಟಿಟಿಯಲ್ಲಿ ನಾಲ್ಕು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಸಿನಿಮಾ ಒಟಿಟಿಯಲ್ಲಿ ಪ್ರದರ್ಶನ ಕಾಣಲಿದೆ.

  • ದಿ ಕಾಶ್ಮೀರ್ ಫೈಲ್ಸ್ ಸಿನಿಮಾ: ಕ್ಷಮೆ ಕೋರಿದ ಪ್ರಕಾಶ್ ಬೆಳವಾಡಿ

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ: ಕ್ಷಮೆ ಕೋರಿದ ಪ್ರಕಾಶ್ ಬೆಳವಾಡಿ

    ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ತಯಾರಾದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ಭಾರೀ ಚರ್ಚೆಗೆ ಕಾರಣವಾಗಿದೆ. ಕಾಶ್ಮೀರ ಪಂಡಿತರ ಮಾರಣಹೋಮ ಘಟನೆ ಕುರಿತಾದ ಸಿನಿಮಾ ಇದಾಗಿದ್ದು, ಚಿತ್ರದ ಬಗ್ಗೆ ಪರ ಮತ್ತು ವಿರೋಧಗಳು ಕೇಳಿ ಬರುತ್ತಿವೆ. ಇದನ್ನೂ ಓದಿ : ‘ಪುಷ್ಪ ಪಾರ್ಟ್ 10’ ಸಿನಿಮಾಗೆ ನಟ ಮಾಸ್ಟರ್ ಆನಂದ್ ಮಗಳು ಹೀರೋಯಿನ್

    ಒಂದು ಸಮುದಾಯದ ಓಲೈಕೆಗಾಗಿ ಮಾಡಿದ ಸಿನಿಮಾ ಇದು ಎಂದು ಕೆಲವರು ವಾದಿಸಿದರೆ, ಕಾಶ್ಮೀರಿ ಪಂಡಿತರ ವಸ್ತುಸ್ಥಿತಿಯ ಬಗ್ಗೆ ಮುಖಕ್ಕೆ ಹೊಡೆದಂತೆ ನಿರ್ದೇಶಕರು ಹೇಳಿದ್ದಾರೆ ಎನ್ನುವುದು ಮತ್ತೊಂದು ವಾದ. ಈ ವಾದ ವಿವಾದ ಏನೇ ಇರಲಿ, ಈ ಚಿತ್ರದಲ್ಲಿ ಕನ್ನಡದ ಹೆಸರಾಂತ ನಟ, ಪತ್ರಕರ್ತ ಪ್ರಕಾಶ್ ಬೆಳವಾಡಿ ಮಹತ್ವದ ಪಾತ್ರವೊಂದನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ತಾವು ಏಕೆ ನಟಿಸಲು ಒಪ್ಪಿಕೊಂಡೆ ಅನ್ನುವ ಕುರಿತು ಮಾತನಾಡಿದ್ದಾರೆ. ಇದನ್ನೂ ಓದಿ : ಪುನೀತ್ ಹುಟ್ಟುಹಬ್ಬಕ್ಕೆ ಹೊಸ ಸಾಂಗ್: ಒಂದಾಯಿತು ‘ಗೊಂಬೆ ಹೇಳತೈತೆ’ ಕಾಂಬಿನೇಷನ್

    “ಕಾಶ್ಮೀರಿ ಪಂಡಿತರ ಮಾರಣಹೋಮ ನಡೆದಾಗ ನಾನು ಪತ್ರಕರ್ತನಾಗಿದ್ದೆ. ಆ ಸಮಯದಲ್ಲಿ ನಿಜವಾಗಿಯೂ ಅಲ್ಲಿ ಏನು ನಡೆಯಿತು ಎಂದು ತಿಳಿದಿರಲಿಲ್ಲ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ನನಗೆ ಸಿನಿಮಾದ ಚಿತ್ರಕಥೆ ಕಳುಹಿಸಿದಾಗ ಗಾಬರಿ ಆಯಿತು. ತಿಳಿದುಕೊಂಡಿರುವ ಇತಿಹಾಸವೇ ಬೇರೆ, ಆಗಿರುವ ಘಟನೆಯೇ ಬೇರೆಯಾಗಿತ್ತು. ಹಾಗಾಗಿ ನಾನು ಆ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡೆ’ ಎಂದಿದ್ದಾರೆ ಪ್ರಕಾಶ್ ಬೆಳವಾಡಿ. ಇದನ್ನೂ ಓದಿ : ಕಿರುತೆರೆಯ ನಟ, ನಿರ್ದೇಶಕ ರವಿಕಿರಣ್ ಪುತ್ರ ಸಿನಿಮಾಗೆ ರಂಗಕ್ಕೆ ಎಂಟ್ರಿ

    “ಈ ಸಮಾಜದ ಪರವಾಗಿ ನಾನು ಕಾಶ್ಮೀರಿ ಪಂಡಿತರಿಗೆ ಕ್ಷಮೆ ಕೇಳಬೇಕು. ನಾನು ಅಪರಾಧಿ ಭಾವದಲ್ಲಿದ್ದೇನೆ. ಒಬ್ಬ ಪತ್ರಕರ್ತನಾಗಿಯೂ ನನಗೆ ನಿಜವಾದ ಇತಿಹಾಸವನ್ನು ಜನರಿಗೆ ತಿಳಿಸುವುದಕ್ಕೆ ಆಗಲಿಲ್ಲ. ಆ ಅಪರಾಧಿ ಭಾವದಿಂದಲೇ ಆ ಸಿನಿಮಾದಲ್ಲಿ ನಟಿಸಿದೆ. ಈ ಸಿನಿಮಾದ ಮೂಲಕವಾದರೂ, ನನ್ನ ಅಪರಾಧಿ ಭಾವವನ್ನು ಕಡಿಮೆ ಮಾಡಿಕೊಳ್ಳುತ್ತೇನೆ’ ಎನ್ನುವುದು ಅವರ ಮಾತು. ಇದನ್ನೂ ಓದಿ : ಪೂಜಾ ಹೆಗ್ಡೆ ಅವಕಾಶ ಕಿತ್ತುಕೊಂಡ ರಶ್ಮಿಕಾ ಮಂದಣ್ಣ

    ಈ ಸಿನಿಮಾದ ಮೂಲಕ 1990ರಲ್ಲಿ ನಡೆದ ಕ್ರೂರ ಘಟನೆಯ ಸತ್ಯಾಸತ್ಯತೆಯನ್ನು ತಿಳಿಸುವ ಪ್ರಯತ್ನ ಮಾಡಿದ್ದಾರಂತೆ ನಿರ್ದೇಶಕರು. ಹಲವು ವರ್ಷಗಳ ಕಾಲ ಘಟನೆಯ ಬಗ್ಗೆ ಸಂಶೋಧನೆ ಮಾಡಿ, ಸಂದರ್ಶಿಸಿ ಚಿತ್ರಕಥೆ ಹೆಣೆದಿದ್ದಾರಂತೆ. ಅನುಪಮ್ ಖೇರ್, ಪಲ್ಲವಿ ಜೋಸಿ, ಮಿಥುನ್ ಚಕ್ರವರ್ತಿ ಸೇರಿದಂತೆ ಹಲವು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇದನ್ನೂ ಓದಿ : ಚಕ್ಡಾ ಎಕ್ಸ್ ಪ್ರೆಸ್ ಸಿನಿಮಾಗಾಗಿ ಅನುಷ್ಕಾ ಬೌಲಿಂಗ್ ಪ್ರಾಕ್ಟಿಸ್

    ಈ ಸಿನಿಮಾದ ಕುರಿತಂತೆ ಈಗಾಗಲೇ ಜಮ್ಮು ಕಾಶ್ಮೀರ ಜಿಲ್ಲಾ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಈ ಸಿನಿಮಾದಲ್ಲಿ ಸ್ಕ್ವಾಡ್ರನ್ ಲೀಡರ್ ರವಿ ಖನ್ನಾ ಅವರ ಗೌರವಕ್ಕೆ ಧಕ್ಕೆ ಆಗುವ ರೀತಿಯಲ್ಲಿ ಪಾತ್ರ ತೋರಿಸಲಾಗಿದೆ ಎಂದು ರವಿ ಖನ್ನಾ ಪತ್ನಿ ದೂರು ದಾಖಲಿಸಿದ್ದಾರೆ.