ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ವೊಂದು (Mini Truck) ಪೆಟ್ರೋಲ್ ಬಂಕ್‌ಗೆ ನುಗ್ಗಿದ ಘಟನೆ ಬೆಂಗಳೂರಿನ (Bengaluru) ಚಾಮರಾಜಪೇಟೆ (Chamrajpet) ಮುಖ್ಯರಸ್ತೆಯ ನಯಾರಾ ಪೆಟ್ರೋಲ್ ಬಂಕ್‌ನಲ್ಲಿ ನಡೆದಿದೆ.
ಚಾಮರಾಜಪೇಟೆ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸನ್‌ಪ್ಯೂರ್ ಎಣ್ಣೆ ಸಾಗಾಟ ಮಾಡುತ್ತಿದ್ದ ಟ್ರಕ್ ನುಗ್ಗಿದ ಪರಿಣಾಮ ಪೆಟ್ರೋಲ್ ಬಂಕ್‌ನ (Petrol Bunk) ಶೌಚಾಲಯದ ಕಟ್ಟಡ ಜಖಂಗೊಂಡಿದೆ. ಅಲ್ಲದೇ ಡಿಕ್ಕಿಯ ರಭಸಕ್ಕೆ ಒಂದು ಬೈಕ್ ಕೂಡ ಲಾರಿಯಡಿಗೆ ಸಿಲುಕಿ ಸಂಪೂರ್ಣ ಜಖಂಗೊಂಡಿದೆ. ಇದನ್ನೂ ಓದಿ: ಬಿಗ್‌ಬಾಸ್‌ಗೆ ಬಿಗ್ ರಿಲೀಫ್ – ಸಮಸ್ಯೆ ಇತ್ಯರ್ಥಕ್ಕೆ 10 ದಿನ ಕಾಲಾವಕಾಶ
ಆಟೋ ರಿಕ್ಷಾ ರೈಸನ್‍ನಿಂದ ರಾಜ್ಯದ ರಾಜಧಾನಿ ಭೋಪಾಲ್ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರಕ್‍ಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಆಟೋ ರಿಕ್ಷಾದಲ್ಲಿದ್ದ ನಾಲ್ವರು ಮೃತಪಟ್ಟರೆ ಟ್ರಕ್‍ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತೆ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಆರ್ಭಟ – GRPA ಆ್ಯಕ್ಷನ್ ಪ್ಲಾನ್‌ನಂತೆ ರೆಡ್‌ಅಲರ್ಟ್ ಘೋಷಣೆ
ಜಿಲ್ಲಾ ಕೇಂದ್ರದಿಂದ 22 ಕಿ.ಮೀ ದೂರದಲ್ಲಿರುವ ಉಮ್ರಾವ್‍ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಟೆಡಿಯಾ ಸೇತುವೆ ಬಳಿ ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಮೃತ್ ಮೀನಾ ತಿಳಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟು 2 ವರ್ಷ ಸಹಿಸಿಕೊಳ್ಳಬೇಕು: ಹಣಕಾಸು ಸಚಿವ
ವೇಗದ ಚಾಲನೆ ಮಾಡಿದ್ದಕ್ಕೆ ಆಟೋ ರಿಕ್ಷಾ ಮತ್ತು ಟ್ರಕ್ ಚಾಲಕನ ವಿರುದ್ಧ ಪ್ರತ್ಯೇಕ ಎರಡು ಪ್ರಕರಣ ದಾಖಲಿಸಲಾಗಿದೆ.
– ಮುಂದಿನ ತಿಂಗ್ಳು ಮದ್ವೆ ನಿಶ್ಚಯವಾಗಿದ್ದ ಯುವಕ
– ದೇವರ ದರ್ಶನಕ್ಕೆ ಹೊರಟಿದ್ದ ಕುಟುಂಬ
– ನಿದ್ದೆಯಲ್ಲಿದ್ದವರು ಏಳಲೇ ಇಲ್ಲ
ಗಾಂಧಿನಗರ: ಗುಜರಾತಿನ ವಡೋದರ ಬಳಿ ನಡೆದ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸೇರಿ 11 ಜನರು ಮೃತಪಟ್ಟಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ಇಡೀ ಕುಟುಂಬವೊಂದು ನಾಶವಾಗಿದೆ. ಮೂವರು ಪುರುಷರು ಸೇರಿದಂತೆ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮೃತ ಸುರೇಶ್ ಮದುವೆ ಮುಂದಿನ ತಿಂಗಳು ನಿಶ್ಚಯವಾಗಿತ್ತು. ಸೂ ರತ್ ನಗರದ ನಿವಾಸಿಯಾಗಿದ್ದ ಕುಟುಂಬ ವಾಸಿಸುತ್ತಿದ್ದ ಸೊಸೈಟಿಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.
ಆಸ್ಪತ್ರೆಗೆ ಬರುವ ಮೊದಲೇ ಒಂಬತ್ತು ಜನರು ಸಾವನ್ನಪ್ಪಿದ್ದರು. ಇನ್ನಿಬ್ಬರಿಗೆ ಚಿಕಿತ್ಸೆ ನೀಡುವಷ್ಟರಲ್ಲಿ ಪ್ರಾಣ ಬಿಟ್ಟಿದ್ದರು. ಐವರು ಮಹಿಳೆಯರು, ನಾಲ್ಕು ಜನ ಪುರಷರು ಮತ್ತು ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 11 ಜನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹೆಚ್ಚು ರಕ್ತಸ್ರಾವವಾದ ಹಿನ್ನೆಲೆ ಎಲ್ಲರ ಸಾವು ಆಗಿದೆ ಎಂದು ವಡೋದರ ಸಯ್ಯಾಜಿ ಆಸ್ಪತ್ರೆಯ ವೈದ್ಯ ರಂಜನ್ ಮಾಹಿತಿ ನೀಡಿದ್ದಾರೆ.
ಮಲಗಿದ್ದವರು ಏಳಲೇ ಇಲ್ಲ: ವಡೋದರ ಜಿಲ್ಲೆಯ ವಾಘೋಡಿಯಾ ಚೌಕ್ ಬಳಿಯಲ್ಲಿ ಬೆಳಗಿನ ಜಾವ ಸುಮಾರು ಮೂರು ಗಂಟೆಗೆ ಅಪಘಾತ ಸಂಭವಿಸಿದೆ. ಮೃತರು ಮಿನಿ ಟ್ರಕ್ ಬಾಡಿಗೆ ಪಡೆದು ಸೂರತ್ ನಿಂದ ಪಾಗಾಗಢದ ಮೂಲಕ ಡಾಕೋರ್ ದೇವಸ್ಥಾನಕ್ಕೆ ತೆರಳುತ್ತಿದ್ದರು. ಅಪಘಾತದ ವೇಳೆ ಪ್ರಯಾಣಿಕರೆಲ್ಲರೂ ನಿದ್ರೆಯಲ್ಲಿದ್ದರು. ಘಟನೆಯ ಬಳಿಕ ಪ್ರಯಾಣಿಕರು ಚೀರಾಟ ಕೇಳಿದ ಸ್ಥಳೀಯರು ಸಹಾಯಕ್ಕೆ ಆಗಮಿಸಿ ಅಂಬುಲೆನ್ಸ್ ಗೆ ಫೋನ್ ಮಾಡಿ ವಿಷಯ ತಿಳಿಸಿದ್ದರು. ಜನರು ವಾಹನದಲ್ಲಿ ಸಿಲುಕಿದ್ದವರು ರಕ್ಷಣಾ ಕಾರ್ಯಕ್ಕೆ ಮುಂದಾಗಿ ಪ್ರಾಣ ಉಳಿಸಲು ಹರಸಾಹಸಪಟ್ಟಿದ್ದರು.
Saddened by the loss of lives due to a road accident near Vadodara. Instructed officials to do needful. May those who have been injured recover at the earliest. I pray for the departed souls.
ವಾಘೋಡಿಯಾ ಚೌಕ್ ಬಳಿ ದೇವಸ್ಥಾನಕ್ಕೆ ಹೊರಟ್ಟಿದ್ದ ಮಿನಿ ಟ್ರಕ್ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 11 ಜನರು ಮೃತಪಟ್ಟಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಅಪಘಾತದಲ್ಲಿಯ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಗುಜರಾತ ಸಿಎಂ ವಿಜಯ್ ರೂಪಾನಿ ಸೂಚಿಸಿದ್ದಾರೆ.
– ಲಾರಿ ಡಿಕ್ಕಿ ರಭಸಕ್ಕೆ 4 ಜನ ಅಪ್ಪಚ್ಚಿ, ಸಾವಿನ ಸಂಖ್ಯೆ 7ಕ್ಕೆ
– 4 ಜನರ ಸ್ಥಿತಿ ಚಿಂತಾಜನಕ
ರಾಯಚೂರು: ಕೊರೊನಾ ವೈರಸ್ ಭಯದಿಂದ ಲಾಕ್‍ಡೌನ್ ಮಧ್ಯ ತಮ್ಮ ಗ್ರಾಮಗಳಿಗೆ ಮರಳುತ್ತಿದ್ದ ರಾಯಚೂರು ಜಿಲ್ಲೆಯ 30 ಜನರಿದ್ದ ಮಿನಿ ಟ್ರಕ್ಗೆ ಲಾರಿ ಡಿಕ್ಕಿ ಹೊಡೆದು ಏಳ ಜನ ಮೃತಪಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಸುರಪೂರ ತಾಲೂಕಿನ ಕಕ್ಕೇರಿ ಗ್ರಾಮದ ಬಸಮ್ಮ, ಹನುಮಂತ, ಲಿಂಗಸ್ಗೂರು ತಾಲೂಕಿನ ರಾಯದುರ್ಗ ಗ್ರಾಮದ ಶ್ರೀದೇವಿ, ರಂಗಪ್ಪ, ಶರಣಪ್ಪ, ಅಮರಪ್ಪ ಹಾಗೂ ಚಿಂಚರಕಿ ಗ್ರಾಮದ ಕೊಳ್ಳಪ್ಪ ಮೃತ ದುರ್ದೈವಿಗಳು. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಹೈದರಾಬಾದ್‍ನ ಉಸ್ಮಾನಿಯಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಆಗಿದ್ದೇನು?:
ಕೊರೊನಾ ವೈರಸ್‍ನಿಂದ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದ್ದು, ರಾಯಚೂರಿನ ರಸ್ತೆ ನಿರ್ಮಾಣ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದರು. ಜೊತೆಗೆ ಕೊರೊನಾ ಭಯಕ್ಕೆ ಸೂರ್ಯಪೇಟೆಯಿಂದ 30 ಜನರು ತಮ್ಮ ಗ್ರಾಮಗಳಿಗೆ ಮಿನಿ ಟ್ರಕ್‍ನಲ್ಲಿ ಸಾಗಿಸುತ್ತಿದ್ದರು. ಶಂಶಾಬಾದ್ ಬಳಿ ವೇಗವಾಗಿ ಬಂದ ಲಾರಿ ಚಾಲಕ ನಿಯಂತ್ರಣ ತಪ್ಪಿ ಹಿಂಬದಿಯಿಂದ ಮಿನಿ ಟ್ರಕ್‍ಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ ಮಿನಿ ಟ್ರಕ್‍ನಲ್ಲಿದ್ದ ನಾಲ್ವರು ಸ್ಥಳದಲ್ಲಿ ಪ್ರಾಣಬಿಟ್ಟಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದರು.
ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಶಂಶಾಬಾದ್ ಗ್ರಾಮೀಣ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಆರ್.ವೆಂಕಟೇಶ್ ಅವರು ಪರಿಶೀಲನೆ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡವರನ್ನು ಶಂಶಾಬಾದ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿದ್ದರಿಂದ ಗಾಯಾಳುಗಳನ್ನು ಹೈದರಾಬಾದ್‍ನ ಉಸ್ಮಾನಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಚಿಕಿತ್ಸೆ ಫಲಿಸದೆ ಮೂವರು ಸಾವನ್ನಪ್ಪಿದ್ದಾರೆ. ಉಳಿದ ನಾಲ್ವರಿಗೆ ಇನ್ನೂ ಚಿಕಿತ್ಸೆ ಕೊಡಲಾಗುತ್ತದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ರಾಯಚೂರು ಎಸ್‍ಪಿ, ತೆಲಂಗಾಣದಕ್ಕೆ ಗುಳೆ ಹೋಗಿದ್ದ ರಾಯಚೂರಿನ ಜನರು ಕೊರೊನಾ ವೈರಸ್ ಹರಡುವ ಭೀತಿಯ ಹಿನ್ನೆಲೆಯಲ್ಲಿ ತಮ್ಮ ಗ್ರಾಮಗಳಿಗೆ ಮಾರ್ಚ್ 27ರಂದು ಬೆಳಗಿನ ಜಾವ 12ಗಂಟೆ ಸುಮಾರಿಗೆ ವಾಪಸ್ ಆಗುತ್ತಿದ್ದರು. ಆದರೆ ಶಂಶಾಬಾದ್ ರಿಂಗ್ ರೋಡ್‍ನಲ್ಲಿ ಕಾರ್ಮಿಕರಿದ್ದ ಮಿನಿ ಟ್ರಕ್ ಕೆಟ್ಟು ನಿಂತಿತ್ತು. ಅದನ್ನು ರಿಪೇರಿ ಮಾಡುತ್ತಿದ್ದಾಗ ಹಿಂದುಗಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಅಪಘಾತದ ಸ್ಥಳದಲ್ಲಿಯೇ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಮೂವರು ಉಸ್ಮಾನಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ರಾಯಚೂರು: ಲಾರಿ ಹಾಗೂ ಕೂಲಿ ಕಾರ್ಮಿಕರಿದ್ದ ಮಿನಿ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ ರಾಯಚೂರು ಜಿಲ್ಲೆಯ 5 ಜನ ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತೆಲಂಗಾಣದ ಶಂಶಾಬಾದ್ ಬಳಿ ಘಟನೆ ನಡೆದಿದೆ.
ಘಟನೆಯಲ್ಲಿ ಮೂವರು ಮಹಿಳೆಯರು, ಬಾಲಕಿ, ಬಾಲಕ ಸೇರಿ ಒಟ್ಟು ಐವರು ಮೃತಪಟ್ಟಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಶಂಶಾಬಾದ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಲಾರಿ ಚಾಲಕ ನಿರ್ಲಕ್ಷದಿಂದ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
5 persons died&6 injured after collision between lorry & mini truck in Shamshabad,Telangana. Mini-truck was carrying 30 people who were going to Raichur,Karnataka amid #CoronavirusLockdown. Injured shifted to hospital: R Venkatesh,Circle Inspector,Shamshabad Rural Police Station. pic.twitter.com/XWmOSV86gW
ಕೊರೊನಾ ವೈರಸ್‍ನಿಂದ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದ್ದು, ರಾಯಚೂರಿನ ರಸ್ತೆ ನಿರ್ಮಾಣ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನೆಲೆಯಲ್ಲಿ ಸೂರ್ಯಪೇಟೆಯಿಂದ 30 ಜನರು ತಮ್ಮ ಗ್ರಾಮಗಳಿಗೆ KA 36 B 8264 ನಂಬರಿನ ಮಿನಿ ಟ್ರಕ್‍ನಲ್ಲಿ ಸಾಗಿಸುತ್ತಿದ್ದರು. ಶಂಶಾಬಾದ್ ಬಳಿ ವೇಗವಾಗಿ ಬಂದ GJ 06 BT 0823 ನಂಬರಿನ ಲಾರಿ ಚಾಲಕ ನಿಯಂತ್ರಣ ತಪ್ಪಿ ಹಿಂಬದಿಯಿಂದ ಮಿನಿ ಟ್ರಕ್‍ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಐವರು ಸ್ಥಳದಲ್ಲಿ ಪ್ರಾಣಬಿಟ್ಟಿದ್ದು, 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಶಂಶಾಬಾದ್ ಗ್ರಾಮೀಣ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‍ಪೆಕ್ಟರ್‍ಆರ್.ವೆಂಕಟೇಶ್ ಅವರು ಪರಿಶೀಲನೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.
Those travelling in the mini-truck were road construction workers/labourers and were going back to their homes in Raichur District of Karnataka, from Suryapet in Telangana: R Venkatesh, Circle Inspector, Shamshabad Rural Police Station. https://t.co/heQkMt1PgU