Tag: ಮಿನಿ ಬಸ್

  • ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಮಿನಿ ಬಸ್ ಪಲ್ಟಿ – 9 ಮಂದಿ ಸಾವು, 33 ಮಂದಿಗೆ ಗಾಯ

    ಪಂಜಾಬ್‌ನ ಹೋಶಿಯಾರ್‌ಪುರದಲ್ಲಿ ಮಿನಿ ಬಸ್ ಪಲ್ಟಿ – 9 ಮಂದಿ ಸಾವು, 33 ಮಂದಿಗೆ ಗಾಯ

    ಚಂಡೀಗಢ: ನಿಯಂತ್ರಣ ತಪ್ಪಿ ಮಿನಿ ಬಸ್ (Mini Bus) ಪಲ್ಟಿಯಾದ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, 33 ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್‌ನ (Punjab) ಹೋಶಿಯಾರ್‌ಪುರ (Hoshiarpur) ಜಿಲ್ಲೆಯ ಸಗ್ರಾನ್ ಗ್ರಾಮದ ಬಳಿ ನಡೆದಿದೆ.

    ಸುಮಾರು 40 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ ಹಾಜಿಪುರ ಪಟ್ಟಣದಿಂದ ದಸುಯಾಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ಮುಕೇರಿಯನ್ ಉಪ ಪೊಲೀಸ್ ವರಿಷ್ಠಾಧಿಕಾರಿ ಕುಲ್ವಿಂದರ್ ಸಿಂಗ್ ವಿರ್ಕ್ ತಿಳಿಸಿದ್ದಾರೆ. ಇದನ್ನೂ ಓದಿ: ಶಿರಸಿ ನಗರಸಭೆಯಲ್ಲಿ 21 ಲಕ್ಷ ಮೌಲ್ಯದ ಐರನ್ ಪೈಪ್ ಕಳ್ಳತನ ಕೇಸ್‌ – ನಗರಸಭೆ ಕಮಿಷನರ್, ಮಾಜಿ ಅಧ್ಯಕ್ಷ ಸೇರಿ 7 ಆರೋಪಿಗಳು

    ಗಾಯಾಳು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ದಸುಯಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ್ಷಣವೇ ಸ್ಥಳೀಯ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದ್ದಾರೆ. ಗಾಯಾಳು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ದಸುಯಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿಯ ಸೀರಿಯಲ್ ಫಸ್ಟ್ ಲುಕ್ ಔಟ್

    ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಂಭೀರವಾಗಿ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಸರ್ಕಾರದಿಂದ ನೀಡಲಾಗುವುದು. ಗಾಯಾಳುಗಳ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ಸಹ ಸರ್ಕಾರ ಭರಿಸುತ್ತದೆ ಎಂದು ಡಿಸಿ ಜೈನ್ ತಿಳಿಸಿದ್ದಾರೆ. ಇದನ್ನೂ ಓದಿ: KSRTC ಬಸ್‌ನಲ್ಲಿ ಹೃದಯಾಘಾತ – ಆಸ್ಪತ್ರೆಯಲ್ಲಿ ವೈದ್ಯರಿಲ್ಲದೇ ವ್ಯಕ್ತಿ ಸಾವು

    ಮೃತರನ್ನು ಬುಧಾಬಾರ್ ಗ್ರಾಮದ ರಾಜು ಬಾಲಾ (5), ಮೀನಾ (30), ಕಾಂಗ್ರಾ ಜಿಲ್ಲೆಯ (ಹಿಮಾಚಲ ಪ್ರದೇಶ) ಲವ್ ಕುಮಾರ್ (50), ಹಾಲೇರ್ ಗ್ರಾಮದ ಗುರ್ಮಿತ್ ರಾಮ್ (65), ಜಲಾಲ್ ಚಕ್ ಗ್ರಾಮದ ಸತ್ವಿಂದರ್ ಕೌರ್ (55), ದಾಸುಯಾದ ಬಲ್ಬೀರ್ ಕೌರ್ (60), ಗುರುದಾಸ್ಪುರ ಜಿಲ್ಲೆಯ ಸಂಜೀವ್ ಕುಮಾರ್ (30) ಮತ್ತು ಸಹೋರಾ ಗ್ರಾಮದ ಸುಬಾಗ್ ರಾಣಿ (55) ಎಂದು ಗುರುತಿಸಲಾಗಿದೆ ಎಂದು ಸಿವಿಲ್ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ. ಮನಮೋಹನ್ ಸಿಂಗ್ ಮಾಹಿತಿ ನೀಡಿದ್ದಾರೆ. ಸುಮಾರು 50 ವರ್ಷ ವಯಸ್ಸಿನ ಒಬ್ಬ ವ್ಯಕ್ತಿಯ ಗುರುತು ಇನ್ನೂ ದೃಢಪಟ್ಟಿಲ್ಲ ಎಂದು ಸಿಂಗ್ ಹೇಳಿದರು. ಇದನ್ನೂ ಓದಿ: Shivamogga | ದೆವ್ವ ಬಿಡಿಸುತ್ತೇನೆಂದು ಚಿತ್ರಹಿಂಸೆ – ಮಹಿಳೆ ಸಾವು

    ಆಸ್ಪತ್ರೆಗೆ ದಾಖಲಾಗಿರುವ 33 ಜನರಲ್ಲಿ, ಗಂಭೀರವಾಗಿ ಗಾಯಗೊಂಡಿರುವ ಮೂವರು, ಸಹೋರಾದ ರಾಜ್ ರಾಣಿ (55), ಚಕ್ರಾಲ್‌ನ ಸಂಜೀವ್ ಸಿಂಗ್ (45) ಮತ್ತು ಖುಷಿ ಮೆಹ್ತಾ (22) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉನ್ನತ ವೈದ್ಯಕೀಯ ಕೇಂದ್ರಗಳಿಗೆ ಕಳುಹಿಸಲಾಗಿದೆ. ಆರು ಜನರನ್ನು ಪ್ರಥಮ ಚಿಕಿತ್ಸೆ ನೀಡಿದ ನಂತರ ಬಿಡುಗಡೆ ಮಾಡಲಾಗಿದೆ. ಉಳಿದ 24 ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಡಾ.ಸಿಂಗ್ ಮಾಹಿತಿ ನೀಡಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಮಗೆ ಕುಡಿಯೋಕೆ ನೀರು ಕೊಡಿ: ಸಿಎಂಗೆ ವಿದ್ಯಾರ್ಥಿನಿ ಪತ್ರ

  • ಮದುವೆಗೆ ಹೋಗಿದ್ದ ಮಿನಿ ಬಸ್ ಪಲ್ಟಿ – 30 ಜನರಿಗೆ ಗಾಯ

    ಮದುವೆಗೆ ಹೋಗಿದ್ದ ಮಿನಿ ಬಸ್ ಪಲ್ಟಿ – 30 ಜನರಿಗೆ ಗಾಯ

    ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಮಿನಿ ಬಸ್ (Mini Bus) ಪಲ್ಟಿಯಾಗಿದ್ದು, 30ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯವಾಗಿದೆ. ಈ ಪೈಕಿ ನಾಲ್ವರು ಮಹಿಳೆಯರ ಸ್ಥಿತಿ ಗಂಭೀರವಾಗಿದೆ.

    ಘಟನೆ ಹಾವೇರಿ (Haveri) ತಾಲೂಕಿನ ದೇವಗಿರಿ (Devagiri) ಗ್ರಾಮದ ಎಂಜಿನಿಯರಿಂಗ್ ಕಾಲೇಜು ಬಳಿ ನಡೆದಿದೆ. ಕರ್ಜಗಿ ಗ್ರಾಮದಲ್ಲಿ ಮದುವೆ ಮುಗಿಸಿಕೊಂಡು ವಾಪಸ್ ಊರಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ದೇವಗಿರಿ ಗ್ರಾಮದ ಬಳಿ ಇರುವ ಕೆರೆ ಪಕ್ಕದ ತಗ್ಗು ಪ್ರದೇಶಕ್ಕೆ ಮಿನಿ ಬಸ್ ಉರುಳಿ ಬಿದ್ದಿದೆ.

    ತಕ್ಷಣ ಸ್ಥಳೀಯರು ಹಾಗೂ ಅಂಬುಲೆನ್ಸ್ ಸಿಬ್ಬಂದಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅಲ್ಲದೆ ಗಂಭೀರವಾಗಿ ಗಾಯಗೊಂಡವರಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ರಸ್ತೆಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಗೆ ಬೈಕ್ ಡಿಕ್ಕಿ – ಬಾಲಕಿ ದಾರುಣ ಸಾವು

    ಪ್ರಯಾಣಿಕರು ಗ್ರಾಮದಿಂದ ತಡಸ ಗ್ರಾಮಕ್ಕೆ ಹೊರಟ್ಟಿದ್ದರು. ಕೆಲ ಸಂಬಂಧಿಕರನ್ನು ತಡಸ ಗ್ರಾಮಕ್ಕೆ ಬಿಟ್ಟು ಬಾಗಲಕೋಟೆಗೆ ಮಿನಿ ಬಸ್ ಹೋಗಬೇಕಿತ್ತು. ಚಾಲಕನ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಮನೆಯಲ್ಲಿರುವಾಗಲೇ ಎನ್‌ಸಿಪಿ ಶಾಸಕರ ಬಂಗಲೆಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಪ್ಪಿದ ಭಾರೀ ದುರಂತ – ಮಿನಿ ಬಸ್‌ನಲ್ಲಿ ಸುಧಾರಿತ ಸ್ಫೋಟಕ ಸಾಧನ ಪತ್ತೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಪೊಲೀಸರು ಶುಕ್ರವಾರ ರಾಂಬನ್ (Ramban) ಜಿಲ್ಲೆಯಲ್ಲಿ ಮಿನಿ ಬಸ್‌ನಲ್ಲಿ (Mini Bus) ಅಳವಡಿಸಲಾಗಿದ್ದ ಸುಧಾರಿತ ಸ್ಫೋಟಕ ಸಾಧನವನ್ನು (IED) ವಶಪಡಿಸಿಕೊಂಡು, ಅದನ್ನು ನಿಷ್ಕ್ರಿಯಗೊಳಿಸಿರುವುದಾಗಿ ತಿಳಿಸಿದ್ದಾರೆ.

    ಸುಮಾರು 20 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್‌ನಲ್ಲಿ ಅನುಮಾನಾಸ್ಪದ ವಸ್ತುವನ್ನು ಸಾಗಿಸುತ್ತಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ಬಳಿಕ ಮಿನಿ ಬಸ್ ಒಂದನ್ನು ತಪಾಸಣೆಗೆ ಒಳಪಡಿಸಲಾಯಿತು ಎಂದು ಎಸ್‌ಎಸ್‌ಪಿ ಮೋಹಿತಾ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಕಚೇರಿಯಿಂದ ಕಾಣೆಯಾಯ್ತಾ ಬಿಬಿಎಂಪಿ ಫೈಲ್? – ಸಾವಿರಾರು ಕೋಟಿ ರೂ. ವ್ಯವಹಾರದ ಕಡತ ನಾಪತ್ತೆ

    ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಮೊದಲಿಗೆ ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಬಳಿಕ ಬಸ್ ಅನ್ನು ಸಂಪೂರ್ಣವಾಗಿ ಶೋಧಿಸಲಾಯಿತು. ಹುಡುಕಾಟದ ವೇಳೆ ಅನುಮಾನಾಸ್ಪದ ಬ್ಯಾಗ್ ಒಂದು ಪತ್ತೆಯಾಗಿದ್ದು, ಅದನ್ನು ತೆರೆದು ನೋಡಿದಾಗ ಅದರಲ್ಲಿ ಐಇಡಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಬಣ ಸಂಘರ್ಷ – ಡಿಕೆಶಿ ನಡೆಗೆ ಸಿದ್ದರಾಮಯ್ಯ ಕೊತಕೊತ!

    ಐಇಡಿ ಪತ್ತೆಯಾಗುತ್ತಲೇ ಸಿಆರ್‌ಪಿಎಫ್ ಮತ್ತು ಸೇನೆಯ ತಂಡ ಸ್ಥಳಕ್ಕೆ ಆಗಮಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದೆ. ಈ ಮೂಲಕ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.

    Live Tv
    [brid partner=56869869 player=32851 video=960834 autoplay=true]

  • BMTCಯಿಂದ ಸಿಹಿಸುದ್ದಿ- ಶೀಘ್ರದಲ್ಲೇ ಹೋಂ ಟು ಮೆಟ್ರೋ ಸ್ಟೇಷನ್ ಮಿನಿಬಸ್

    BMTCಯಿಂದ ಸಿಹಿಸುದ್ದಿ- ಶೀಘ್ರದಲ್ಲೇ ಹೋಂ ಟು ಮೆಟ್ರೋ ಸ್ಟೇಷನ್ ಮಿನಿಬಸ್

    ಬೆಂಗಳೂರು: ಸಿಲಿಕಾನ್ ಸಿಟಿಯ ಮೆಟ್ರೋ (Namma Metro) ಪ್ರಯಾಣಿಕರಿಗೆ ಬಿಎಂಟಿಸಿ (BMTC) ಸಿಹಿಸುದ್ದಿ ನೀಡುತ್ತಿದೆ. ಮನೆ ಬಳಿಯಿಂದಲೇ ಮೆಟ್ರೋ ನಿಲ್ದಾಣಕ್ಕೆ ತೆರಳಲು ಬಸ್ ಸೇವೆ ಕಲ್ಪಿಸಲು ಮುಂದಾಗಿದೆ. ಬಿಎಂಟಿಸಿ ಮತ್ತು ಬೆಂಗಳೂರು ಮೆಟ್ರೋ ನಿಗಮ (BMRCL) ಒಪ್ಪಂದ ಮೇರೆಗೆ ಬಿಎಂಟಿಸಿ ಮಿನಿಬಸ್ ಆರಂಭಿಸ್ತಾ ಇದ್ದು ಶೀಘ್ರದಲ್ಲೆ ಟೆಂಡರ್ ಕರೆಯಲಿದೆ.

    ಬೆಂಗಳೂರಿನಂತಹ ಮಹಾನಗರದಲ್ಲಿ ಬಿಎಂಟಿಸಿ ಸೇವೆ ಹೇರಳವಾಗಿದೆ. ಮುಖ್ಯರಸ್ತೆಗಳಿಂದ ಮೆಟ್ರೋ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸ್ತಿವೆ, ಬೆಂಗಳೂರಿನ ಗಲ್ಲಿಗಳಿಂದ, ಅಪಾರ್ಟ್‌ ಮೆಂಟ್‍ಗಳಿಂದ ನೇರವಾಗಿ ಬಸ್ ಸೇವೆ ಇಲ್ಲ. ಹೀಗಾಗಿ ಮೆಟ್ರೋ ಪ್ರಯಾಣ ಮತ್ತಷ್ಟು ಸುಲಭ ಮಾಡಲು ಬಿಎಂಆರ್ ಸಿಎಲ್ ಮುಂದಾಗಿದೆ. ನೇರವಾಗಿ ಮನೆಗಳಿಂದ ಮತ್ತು ಅಪಾರ್ಟ್‌ ಮೆಂಟ್‍ ಗಳಿಂದ ಸಂಪರ್ಕ ಕಲ್ಪಿಸುವ ಮಿನಿ ಬಸ್‍ಸೇವೆ ಒದಗಿಸಲು ಮುಂದಾಗಿದೆ. ಇದಕ್ಕಾಗಿ ಮಿನಿ ಬಸ್‍ಗಳನ್ನ ನೀಡುವಂತೆ ಬಿಎಂಟಿಸಿ ಮುಂದೆ ಬಿಎಂಆರ್ ಸಿಎಲ್ ಪ್ರಸ್ತಾಪ ಇಟ್ಟಿದ್ದು ಇದನ್ನ ಕಾರ್ಯ ರೂಪಕ್ಕೆ ತರಲು ಬಿಎಂಟಿಸಿ ಮುಂದಾಗಿದೆ.

    ಈಗಾಗಲೇ ನಗರದಲ್ಲಿ 200 ಮೆಟ್ರೊ ಪೀಢರ್ ಬಸ್‍ಗಳಿವೆ ಅವುಗಳು ಬಡಾವಣೆಗಳ ಒಳಗಡೆ ಅಥವಾ ವಸತಿ ಸಮುಚ್ಚಯಗಳಿಗೆ ಹೋಗಲ್ಲ. 7 ಮೀಟರ್ ಉದ್ದದ 100 ಮಿನಿ ಬಸ್‍ಗಳನ್ನ ಖರೀದಿ ಮಾಡಿ ಶೀಘ್ರದಲ್ಲೆ ಟೆಂಡರ್ ಕರೆದು ರಸ್ತೆಗೆ ಇಳಿಸಲಿದ್ದೇವೆ ಅಂತಾ ಬಿಎಂಟಿಸಿಯ ಮಾಹಿತಿ ತಂತ್ರಜ್ಞಾನದ ನಿರ್ದೇಶಕ ಸೂರ್ಯಸೇನ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಚಳಿಗೆ ನಡುಗಿದ ಬೆಂಗಳೂರು – ಕಳೆದ 10 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು

    ಒಟ್ಟಾರೆ ಮನೆ ಬಾಗಿಲಿನಿಂದ ಮೆಟ್ರೋ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮಿನಿ ಬಸ್ ಸೇವೆ ನೀಡಲು ಬಿಎಂಟಿಸಿ ನಿರ್ಧರಿಸಿದ್ದು, ಇದು ಆದಷ್ಟು ಬೇಗ ಜಾರಿ ಆಗಲಿ ಅನ್ನೋದು ಎಲ್ಲರ ಆಶಯವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಲಾರಿಗೆ ಮಿನಿ ಬಸ್ ಡಿಕ್ಕಿ – ಬೆಂಕಿ ಹೊತ್ತಿಕೊಂಡು ಇಬ್ಬರು ಸಜೀವ ದಹನ

    ಲಾರಿಗೆ ಮಿನಿ ಬಸ್ ಡಿಕ್ಕಿ – ಬೆಂಕಿ ಹೊತ್ತಿಕೊಂಡು ಇಬ್ಬರು ಸಜೀವ ದಹನ

    ಬಾಗಲಕೋಟೆ: ಲಾರಿಗೆ ಡಿಕ್ಕಿ ಹೊಡೆದು ಮಿನಿ ಲಕ್ಷುರಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸಜೀವ ದಹನವಾದ ಘಟನೆ ಬಾಗಲಕೋಟೆಯ ಉತ್ತೂರು ಬಳಿ ಮುಧೋಳ-ಯಾದವಾಡ ರಸ್ತೆಯಲ್ಲಿ ನಡೆದಿದೆ.

    ಲಾರಿ, ಮಿನಿ ಬಸ್ ಡಿಕ್ಕಿ ಹೊಡೆದ ರಬಸಕ್ಕೆ ಬಸ್ ರಸ್ತೆ ಕೆಳಗಿನ ಹೊಲಕ್ಕೆ ತಿರುಗಿದೆ. ಈ ವೇಳೆ ಹೊಲದಲ್ಲಿ ಟಿಸಿ ಇದ್ದ ವಿದ್ಯುತ್ ಕಂಬಕ್ಕೆ ಬಸ್ ಗುದ್ದಿದೆ ಎನ್ನಲಾಗ್ತಿದೆ. ಪರಿಣಾಮ ಬಸ್ ಧಗಧಗನೇ ಹೊತ್ತಿ ಉರಿದಿದ್ದು, ಇಬ್ಬರು ಸಜೀವ ದಹನವಾಗಿದ್ದಾರೆ.

    ಬಸ್ಸಿನಲ್ಲಿದ್ದ ಅನೇಕರು ಹೊರ ಬಂದಿದ್ದರಿಂದ ಹಲವು ಪ್ರಯಾಣಿಕರ ಪ್ರಾಣ ಉಳಿದಿದೆ. ಈ ಮೂಲಕ ಸ್ವಲ್ಪದರಲ್ಲೆ ಭಾರೀ ದುರಂತ ತಪ್ಪಿದೆ.

    ಘಟನೆ ನಡೆಯುತ್ತಿದ್ದಂತೆಯೇ ಮಾಹಿತಿ ಅರಿತ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ 50 ಅಡಿ ಆಳಕ್ಕೆ ಬಿದ್ದ ಮಿನಿ ಬಸ್

    ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ 50 ಅಡಿ ಆಳಕ್ಕೆ ಬಿದ್ದ ಮಿನಿ ಬಸ್

    – 5 ಸಾವು, 7 ಜನ ಗಂಭೀರ

    ಮುಂಬೈ: ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮಿನಿ ಬಸ್ ಸೇತುವೆ ಮೇಲಿಂದ 50 ಅಡಿ ಆಳಕ್ಕೆ ಬಿದ್ದಿದೆ.

    ಇಂದು ಬೆಳಗ್ಗೆ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಂಬ್ರಜ್ ಬಳಿ ಅಪಘಾತ ನಡೆದಿದೆ, ಮೂವರು ಪುರುಷರು, ಓರ್ವ ಮಹಿಳೆ ಮತ್ತು ಮೂರು ವರ್ಷದ ಮಗು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ತಲುಪಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ರವಾನಿಸಿದ್ದಾರೆ.

    ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಬೆಳಗಿನ ಜಾವ ಮಂಜು ಕವಿದ್ದರಿಂದ ಅಪಘಾತ ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

  • ಬೆಳ್ಳಂಬೆಳಗ್ಗೆ ಕಂಠಪೂರ್ತಿ ಮದ್ಯ ಕುಡಿದು ಮಿನಿ ಬಸ್ ಚಾಲನೆ- 4 ಆಟೋ, ಬೈಕ್ ಜಖಂ

    ಬೆಳ್ಳಂಬೆಳಗ್ಗೆ ಕಂಠಪೂರ್ತಿ ಮದ್ಯ ಕುಡಿದು ಮಿನಿ ಬಸ್ ಚಾಲನೆ- 4 ಆಟೋ, ಬೈಕ್ ಜಖಂ

    – ತಪ್ಪಿದ ಭಾರೀ ಅನಾಹುತ, ಮೂವರಿಗೆ ಗಂಭೀರ ಗಾಯ
    – ಮಿನಿ ಬಸ್ ಚಾಲಕನನ್ನು ವಶಕ್ಕೆ ಪಡೆದ ಪೊಲೀಸ್

    ಬೆಂಗಳೂರು: ಬೆಳ್ಳಂಬೆಳಗ್ಗೆ ಕಂಠಪೂರ್ತಿ ಮದ್ಯ ಕುಡಿದು ಮಿನಿ ಬಸ್ ಚಾಲಕನೊಬ್ಬ ಸರಣಿ ಅಪಘಾತ ನಡೆಸಿರುವ ಘಟನೆ ಬೆಂಗಳೂರಿನ ಯಶವಂತಪುರ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.

    ವೆಂಕಟರಮಣಪ್ಪ ಮದ್ಯ ಕುಡಿದು ಮಿನಿ ಬಸ್ ಓಡಿಸಿದ ಚಾಲಕ. ಘಟನೆಯಲ್ಲಿ ಆಟೋ ಚಾಲಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮಿನಿ ಬಸ್ ಚಾಲಕ ವೆಂಕಟರಮಣಪ್ಪ ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ಪೀಣ್ಯ ಕಡೆಯಿಂದ ಯಶವಂತಪುರ ಕಡೆ ವೇಗವಾಗಿ ಹೋಗುತ್ತಿದ್ದ. ಆದರೆ ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಆಟೋ ಸ್ಟ್ಯಾಂಡ್‍ಗೆ ನುಗ್ಗಿತ್ತು. ಪರಿಣಾಮ ನಾಲ್ಕು ಆಟೋ ಹಾಗೂ ಒಂದು ಬೈಕ್ ಜಖಂಗೊಂಡಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

    ಆಟೋ ಸ್ಟ್ಯಾಂಡ್‍ನಲ್ಲಿದ್ದ ಚಾಲಕರು ಮಿನಿ ಬಸ್ ಚಾಲಕ ವೆಂಕಟರಮಣಪ್ಪನನ್ನ ವಶಕ್ಕೆ ಪಡೆದು ವಿಚಾರಿಸಿದಾಗ ಎಣ್ಣೆ ಹೊಡೆದಿರುವುದು ಖಚಿತವಾಗಿತ್ತು. ಈ ಸಂಬಂಧ ಆಟೋ ಚಾಲಕರು ಯಶವಂತಪುರ ಸಂಚಾರಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಥಳಕ್ಕೆ ಬಂದ ದೌಡಾಯಿಸಿದ ಪೊಲೀಸರು ವೆಂಕಟರಮಣಪ್ಪನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದರು. ಬಳಿಕ ವೆಂಕಟರಣಪ್ಪನನ್ನು ಆಸ್ಪತ್ರೆಗೆ ಕರೆದೊಯ್ದು ಆಲ್ಕೋ ಹಾಲ್ ಪರಿಶೀಲನೆ ಮಾಡಿಸಿದಾಗ ಆರೋಪಿಯು ಮದ್ಯ ಸೇವಿಸಿದ್ದು ದೃಡಪಟ್ಟಿದೆ. ಹೀಗಾಗಿ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಮಿನಿಬಸ್ ಪಲ್ಟಿ- ಇಬ್ಬರ ಕಾಲು ಮುರಿತ, 20ಕ್ಕೂ ಹೆಚ್ಚು ಜನರಿಗೆ ಗಾಯ

    ಮಿನಿಬಸ್ ಪಲ್ಟಿ- ಇಬ್ಬರ ಕಾಲು ಮುರಿತ, 20ಕ್ಕೂ ಹೆಚ್ಚು ಜನರಿಗೆ ಗಾಯ

    ರಾಮನಗರ: ಗಾರ್ಮೆಂಟ್ಸ್ ನೌಕರರನ್ನು ಕರೆ ತರುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಇಬ್ಬರಿಗೆ ಕಾಲು ಮುರಿದು, 20ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಕನಕಪುರ ತಾಲೂಕಿನ ಕಾಳೇಗೌಡನದೊಡ್ಡಿ ಗ್ರಾಮದ ಬಳಿ ನಡೆದಿದೆ.

    ಕನಕಪುರ ಹೊರ ವಲಯದ ಶಿವನೇಗೌಡನದೊಡ್ಡಿ ಗ್ರಾಮದ ಬಳಿಯ ಲಗೂನಾ ಗಾರ್ಮೆಂಟ್ಸ್ ಗೆ ಇಂದು ಬೆಳಿಗ್ಗೆ ನೌಕರರನ್ನು ಮಿನಿ ಬಸ್‍ನಲ್ಲಿ ಕರೆತರಲಾಗುತ್ತಿತ್ತು. ಸುಮಾರು 30 ಜನರಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಚರಂಡಿಗೆ ಉರುಳಿ ಬಿದ್ದಿದೆ.

    ಚಾಲಕನ ಬದಲಿಗೆ ಗಾರ್ಮೆಂಟ್ಸ್ ನ ಟೈಲರ್ ಓರ್ವ ಮಿನಿಬಸ್ ಚಲಾಯಿಸಿದ್ದೆ ಈ ದುರ್ಘಟನೆಗೆ ಕಾರಣವಾಗಿದೆ. ಕಾಲು ಮುರಿತಕ್ಕೆ ಒಳಗಾದವರಿಗೆ ಪ್ರಥಮ ಚಿಕಿತ್ಸೆ ನೀಡಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸಣ್ಣಪುಟ್ಟ ಗಾಯಗಳಗೆ ಒಳಗಾದವರನ್ನು ಕನಕಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಬಗ್ಗೆ ಕನಕಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಬೆಂಗ್ಳೂರಲ್ಲಿ ಟೆಂಪೊಗೆ ಮಿನಿ ಬಸ್ ಡಿಕ್ಕಿ- ಮೂವರಿಗೆ ಗಂಭೀರ ಗಾಯ

    ಬೆಂಗ್ಳೂರಲ್ಲಿ ಟೆಂಪೊಗೆ ಮಿನಿ ಬಸ್ ಡಿಕ್ಕಿ- ಮೂವರಿಗೆ ಗಂಭೀರ ಗಾಯ

    ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ 407 ಟೆಂಪೊಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ನವರಂಗ್ ಸಿಗ್ನಲ್ ಬಳಿ ನಡೆದಿದೆ.

    ಡಿಕ್ಕಿ ಹೊಡೆದ ರಭಸಕ್ಕೆ ಟೆಂಪೊ ಪಲ್ಟಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಇನ್ನು ಬಸ್ ಮಲ್ಲೇಶ್ವರಂನಿಂದ ವಿಜಯನಗರಕ್ಕೆ ಹೋಗುತ್ತಿತ್ತು ಎನ್ನಲಾಗಿದೆ.

    ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಕಾರಣ ಕೆಲ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

    ಈ ಸಂಬಂಧ ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.