Tag: ಮಿಲಿಂಗ್ ಗೌತಮ್

  • ‘ಹುಲಿ ನಾಯಕ’ ಮೋಷನ್ ಪೋಸ್ಟರ್ ರಿಲೀಸ್: ಕುತೂಹಲಕ್ಕೆ ಕಾರಣವಾದ ಪೋಸ್ಟರ್

    ‘ಹುಲಿ ನಾಯಕ’ ಮೋಷನ್ ಪೋಸ್ಟರ್ ರಿಲೀಸ್: ಕುತೂಹಲಕ್ಕೆ ಕಾರಣವಾದ ಪೋಸ್ಟರ್

    ಡಿ.ಜೆ ಚಕ್ರವರ್ತಿ (ಚಕ್ರವರ್ತಿ ಚಂದ್ರಚೂಡ) ನಿರ್ದೇಶನದಲ್ಲಿ ಮೂಡಿ ಬರಲಿರುವ ಹುಲಿ ನಾಯಕ ಸಿನಿಮಾದ ಮೋಷನ್ ಪೋಸ್ಟರ್  (Motion poster) ರಿಲೀಸ್ ಆಗಿದೆ. ಬಿಡುಗಡೆಯಾದ ಪೋಸ್ಟರ್ ನಲ್ಲಿ ಹತ್ತು ಹಲವು ಕೌತುಕದ ವಿಷಯಗಳು ತುಂಬಿವೆ. ವೀರ ಸಂಗೊಳ್ಳಿ ರಾಯಣ್ಣನ ಗಿಗಿ ಪದವನ್ನು ಬಳಸಿಕೊಂಡು ಅನ್ಯಾಯಕ್ಕೊಳಗಾದವರ ನ್ಯಾಯ ಕೇಳುತ್ತಿದ್ದಾರೆ ನಿರ್ದೇಶಕ. ಟ್ಯಾಗ್ ಲೈನ್ ಆಗಿ ಜಸ್ಟಿಸ್ ಫಾರ್ ಸೌಮ್ಯ ಎಂದು ಹೆಸರಿಟ್ಟಿದ್ದಾರೆ. ಹೀಗಾಗಿ ಈ ಸಿನಿಮಾದಲ್ಲಿ ಏನೆಲ್ಲ ವಿಷಯಗಳು ಇರಲಿವೆ ಎನ್ನುವುದು ಸದ್ಯಕ್ಕಿರುವ ಕ್ಯೂರಿಯಾಸಿಟಿ.

    ಹುಲಿ ನಾಯಕ ಚಿತ್ರಕ್ಕೆ ಕಿಚ್ಚ ಸುದೀಪ್ ಸಾಥ್ ನೀಡಿದ್ದಾರೆ. ಜನವರಿಯಿಂದ ಚಿತ್ರೀಕರಣಕ್ಕೆ ನಿರ್ದೇಶಕರು ಪ್ಲ್ಯಾನ್ ಮಾಡಿದ್ದು, ಅದಕ್ಕೂ ಮುನ್ನ ತಮ್ಮ ಚಿತ್ರದ ನಾಯಕನಿಗೆ ಭರ್ಜರಿ ತಯಾರಿಯನ್ನೂ ಮಾಡಿಸುತ್ತಿದ್ದಾರೆ ಚಕ್ರವರ್ತಿ. ಸಿನಿಮಾ ಶುರುವಾಗುವ ಮುನ್ನವೇ ಆಡಿಯೋ ರೈಟ್ಸ್ ಭರ್ಜರಿ ಮೊತ್ತಕ್ಕೆ ಸೇಲ್ ಆಗಿದ್ದು, ಚಿತ್ರದ ಬಗ್ಗೆ ಈಗಿನಿಂದಲೇ ಹೈಪ್ ಕ್ರಿಯೇಟ್ ಆಗುತ್ತಿದೆ.

    ವರ ಮಹಾಲಕ್ಷ್ಮಿ ಹಬ್ಬದ ಶುಭ ಸಂದರ್ಭದಂದು ರಿಯಲ್ ಸ್ಟಾರ್ ಉಪೇಂದ್ರ (Upendra) ತುಂಬು ಪ್ರೀತಿಯಿಂದ ಮಯೂರ ಮೋಶನ್ ಪಿಕ್ಚರ್ಸ್ ಸಂಸ್ಥೆ ಲಾಂಛನದಲ್ಲಿ ಮಂಜುನಾಥ್. ಡಿ ನಿರ್ಮಿಸುತ್ತಿರುವ, ಡಿ.ಜೆ ಚಕ್ರವರ್ತಿ (DJ Chakravarty) ನಿರ್ದೇಶನದ ಹಾಗೂ ಮಿಲಿಂದ್ ಗೌತಮ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರದ ಶೀರ್ಷಿಕೆ (Title) ಅನಾವರಣಗೊಳಿಸಿದ್ದರು.

    ಚಿತ್ರದ ಹೆಸರು ‘ಹುಲಿ ನಾಯಕ’ (Huli Nayaka) ಎಂದು ಘೋಷಣೆ ಮಾಡಿದ ಉಪೇಂದ್ರ, ಈ ಐತಿಹಾಸಿಕ ಚಿತ್ರ ಯಶಸ್ವಿಯಾಗಲಿ‌. ನಿರ್ದೇಶಕ ಡಿ.ಜೆ.ಚಕ್ರವರ್ತಿ, ನಿರ್ಮಾಪಕ ಮಂಜುನಾಥ್ ಹಾಗೂ ನಾಯಕ ಮಿಲಿಂದ್ ಗೌತಮ್ ಅವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದರು.

    ಅನ್ ಲಾಕ್  ರಾಘವ ನಂತರ ಮಿಲಿಂದ್ ಗೌತಮ್ (Milind Gautam) ಸತತ ಮೂರು ತಿಂಗಳುಗಳಿಂದ ಈ ಸಿನಿಮಾಗಾಗಿ ತಯಾರಿ ನಡೆಸುತ್ತಿದ್ದಾರೆ. ಈಗಾಗಲೇ ಬೇರೆ ಬೇರೆ ನಿರ್ದೇಶಕರಿಗೆ ಹಲವು ಸಿನಿಮಾಗಳನ್ನು ಬರೆಯುತ್ತಿರುವ ಚಕ್ರವರ್ತಿ ಈ ಸಿನಿಮಾವನ್ನು ತಾವೇ ಬರೆದು ನಿರ್ದೇಶಿಸುತ್ತಿದ್ದಾರೆ.

     

    ಮಣಿಕಾಂತ್ ಕದ್ರಿ ಸಂಗೀತ, ಮಧು ತುಂಬನಕೆರೆ ಸಂಕಲನ, ಯೋಗೇಶ್ವರನ್ ಛಾಯಾಗ್ರಹಣ, ಕಾರ್ಯಕಾರಿ ನಿರ್ಮಾಪಕರಾಗಿ ಪ್ರಶಾಂತ್ ಬಾಗೂರು, ಡಿಜಿಟಲ್ ಮಾರ್ಕೆಟಿಂಗ್ ಸುನೀಲ್ ಮಾನೆ, ಸಹ ನಿರ್ದೇಶಕರಾಗಿ ಚಂದ್ರಶೇಖರ ಮುದಬಾವಿ ಮುಂತಾದವರ ತಂಡವಿದೆ.

  • ಅನ್ ಲಾಕ್ ರಾಘವನ ವಿಭಿನ್ನ ಪ್ರಯತ್ನ : ಹಾಡಿನಲ್ಲೇ ಫೈಟ್ ಮಿಕ್ಸ್

    ಅನ್ ಲಾಕ್ ರಾಘವನ ವಿಭಿನ್ನ ಪ್ರಯತ್ನ : ಹಾಡಿನಲ್ಲೇ ಫೈಟ್ ಮಿಕ್ಸ್

    ಚಿತ್ರೀಕರಣ ಶುರುವಾದಾಗಿನಿಂದಲೂ, ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟಿಸಿರುವ ಚಂದನವನದ ಚಿತ್ರಗಳಲ್ಲಿ ಒಂದು ‘ಅನ್‌ಲಾಕ್ ರಾಘವ’ (Unlock Raghava). ಈಗಾಗಲೇ ಡಬ್ಬಿಂಗ್ ಮುಗಿಸಿರುವ ಅನ್‌ಲಾಕ್ ರಾಘವ ಚಿತ್ರದ ಪೋಸ್ಟ್ ಪ್ರೊಡಕ್ಷನ್‌ ಕಾರ್ಯ ಭರದಿಂದ ಸಾಗಿದೆ. ವಿಶೇಷವೆಂದರೆ ಈ ಸಿನಿಮಾದ ಫೈಟ್‌ಗಳು (Fights) ಈಗಾಗಲೇ ಎಲ್ಲರ ಗಮನ ಸೆಳೆದಿದೆ.

    ಈ ಚಿತ್ರದಲ್ಲಿ ನಾಲ್ಕೂವರೆ ಫೈಟ್ ಗಳಿವೆ. ಈ ಅರ್ಧ ಫೈಟ್ ಒಂದು ಹಾಡಿನ ನಡುವೆ ಬರುತ್ತದೆ. ಚಿತ್ರಕತೆಯ ಹಂತದಲ್ಲಿ ಈ ಹಾಡನ್ನು ನಾವು ಸೇರಿಸಿರಲಿಲ್ಲ. ಬಳಿಕ, ಆ ಸೀಕ್ವೆನ್ಸ್ ನಲ್ಲಿ ಒಂದು ಹಾಡಿದ್ದರೆ ಹೇಗೆ ಎಂಬ ಆಲೋಚನೆ ಬಂತು. ಅದನ್ನು ಇನ್ ಕಾರ್ಪೋರೇಟ್ ಮಾಡಿದಾಗ ಈ ಸೀಕ್ವೆನ್ಸ್ ತುಂಬಾ ಬ್ಯೂಟಿಫುಲ್ ಆಗಿ ಮೂಡಿಬಂದಿದೆ. ನಮ್ಮ ಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರು ಡಬ್ಬಿಂಗ್ ಸಮಯದಲ್ಲಿ ಆ ಹಾಡನ್ನು ನೋಡಿ, ಬಹಳ ಮೆಚ್ಚಿದ್ದಾರೆ. ಜೊತೆಗೆ ಆ ಹಾಡು, ಸಿನಿಮಾದ ಟ್ರಂಪ್ ಕಾರ್ಡ್ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದಿದ್ದಾರೆ. ಈ ಆಲೋಚನೆಗೆ ಸಾಥ್ ಕೊಟ್ಟ ನಿರ್ಮಾಪಕರಾದ ಮಂಜುನಾಥ ಡಿ ಅವರು, ಸಂಗೀತ ನಿರ್ದೇಶಕರಾದ ಅನೂಪ್ ಸೀಳಿನ್, ಡಿಒಪಿ ಲವಿತ್,  ಸಾಹಸ ನಿರ್ದೇಶಕರಾದ ಅರ್ಜುನ್ ಮಾಸ್ಟರ್,  ನೃತ್ಯ ನಿರ್ದೇಶಕರಾದ ಮುರುಳಿ ಮಾಸ್ಟರ್, ಎಡಿಟರ್ ಅಜಯ್ ಎಲ್ಲರಿಗೂ ತುಂಬಾ ಥ್ಯಾಂಕ್ಸ್. ಕಾಂತಾರ ಸಿನಿಮಾದ ವರಾಹ ರೂಪಂ ಹಾಡನ್ನು ಹಾಡಿರುವ ಸಾಯಿ ವಿಘ್ನೇಶ್ ಈ ಹಾಡನ್ನು ಹಾಡಿರುವುದು ಮತ್ತೊಂದು ವಿಶೇಷ ಎಂದಿದ್ದಾರೆ ಚಿತ್ರದ ನಿರ್ದೇಶಕರಾದ ದೀಪಕ್ ಮಧುವನಹಳ್ಳಿ.

    ಎಡಿಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್‌ಗೆ ಹೋಗುವ ಮುನ್ನ ಅನ್‌ಲಾಕ್ ರಾಘವ ಸಿನಿಮಾವನ್ನು ನೋಡಿರುವ ಚಲನಚಿತ್ರ ನಿರ್ಮಾಪಕರು ಹಾಗೂ ಚಿತ್ರ ತಂಡ ಸಂತೋಷ ಪಟ್ಟಿದ್ದಾರೆ. ಈ ವರ್ಷದ ನಿರೀಕ್ಷಿತ ಚಲನಚಿತ್ರಗಳಲ್ಲಿ,  ನಮ್ಮ ಅನ್‌ಲಾಕ್ ರಾಘವ ಸಿನಿಮಾ ಸೇರುವುದರಲ್ಲಿ ಯಾವುದೇ ಅನುಮಾನವೇ ಇಲ್ಲ ಎಂದು ನಿರ್ಮಾಪಕರು ಹರ್ಷ ವ್ಯಕ್ತಪಡಿಸಿದ್ದಾರೆ.

    ಇಡೀ ಸಿನಿಮಾದಲ್ಲಿ ನಾಯಕರಾದ ಮಿಲಿಂದ್ ಗೌತಮ್ ಅವರು ತುಂಬಾ ಹ್ಯಾಂಡ್ಸಮ್ ಆಗಿ ಮಿಂಚಿದ್ದಾರೆ. ಬಹಳ ಮುಖ್ಯವಾಗಿ ಸಾಹಸ ಸೀಕ್ವೆನ್ಸ್ ಗಳನ್ನು ನೋಡಿದಾಗ ನಮ್ಮ ಕನ್ನಡಕ್ಕೆ ಪ್ರಾಮಿಸಿಂಗ್ ಕಮರ್ಷಿಯಲ್ ಹೀರೋ ಆಗುವುದರಲ್ಲಿ ಅನುಮಾನವೇ ಇಲ್ಲ. ಜೊತೆಗೆ ಬ್ಯೂಟಿಫುಲ್ ಆಗಿರೋ ನಾಯಕಿ ರೇಚಲ್ ಡೇವಿಡ್ ಅವರೊಂದಿಗಿನ ಎಲ್ಲಾ ಸೀನ್‌ಗಳು ಮ್ಯಾಜಿಕಲ್ ಆಗಿ ಮೂಡಿಬಂದಿವೆ ಎನ್ನುತ್ತಿದೆ ಚಿತ್ರ ತಂಡ.

    ಇಲ್ಲಿಯವರೆಗೂ ನಮಗೆ ಸಿಕ್ಕಿರುವ ಮಾಹಿತಿಯಂತೆ ಅನ್‌ಲಾಕ್ ರಾಘವ ಚಿತ್ರ ಕಲರ್‌ಫುಲ್ ಆಗಿದ್ದು, ಹ್ಯೂಮರಸ್ ಮಜವನ್ನು ಉಣ ಬಡಿಸೋ ಕಮರ್ಷಿಯಲ್ ಸಿನಿಮಾ ಆಗಿದೆ.  ಈಗಾಗಲೇ ಎಡಿಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್‌ ನ ಉಳಿದ ಹಂತಗಳಲ್ಲಿ ತೊಡಗಿಸಿಕೊಂಡಿರುವ ಅನ್‌ಲಾಕ್ ರಾಘವ ಬೇಗನೇ ತೆರೆಗಪ್ಪಳಿಸಿ,    ಚಿತ್ರಪ್ರೇಮಿಗಳಿಗೆ ಮನರಂಜನೆ ಉಣಬಡಿಸಲಿದ್ದಾನೆ ಎಂಬ ಕಾತುರದಲ್ಲಿ ಸಿನಿಪ್ರೇಮಿಗಳಿದ್ದಾರೆ.

    ಅನ್‌ಲಾಕ್ ರಾಘವ ಚಿತ್ರವನ್ನು ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರ್‌ ನಡಿ ಮಂಜುನಾಥ ಡಿ ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ (Deepak Madhuvanahalli) ಅವರು ನಿರ್ದೇಶಕರ ಕ್ಯಾಪ್ ತೊಟ್ಟಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಮುರಳಿ ಮಾಸ್ಟರ್ ಹಾಗೂ ಧನಂಜಯ್ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ಹಾಡುಗಳು ಮೂಡಿಬಂದಿದ್ದು, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ.

    ಮಿಲಿಂದ್ ಗೌತಮ್ (Milind Gautham)ನಾಯಕನಾಗಿ ಹಾಗೂ ರೇಚಲ್ ಡೇವಿಡ್ (Rachel David) ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗು ಸುರೇಶ್, ಅಥರ್ವ ಪ್ರಕಾಶ್, ಶ್ರೀದತ್ತ, ಬೃಂದಾ ವಿಕ್ರಮ್ ಮೊದಲಾದವರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]