Tag: ಮಿಲಿಟರಿ

  • ಲಾಹೋರ್‌ನಲ್ಲಿ ಅಲ್ಲೋಲ ಕಲ್ಲೋಲ – ಮಿಲಿಟರಿ ವಿಮಾನ ನಿಲ್ದಾಣದ ಬಳಿ ಮೂರು ಸ್ಫೋಟ

    ಲಾಹೋರ್‌ನಲ್ಲಿ ಅಲ್ಲೋಲ ಕಲ್ಲೋಲ – ಮಿಲಿಟರಿ ವಿಮಾನ ನಿಲ್ದಾಣದ ಬಳಿ ಮೂರು ಸ್ಫೋಟ

    ಇಸ್ಲಾಮಾಬಾದ್‌: ಪಾಕಿಸ್ತಾನದ (Pakistan) ಲಾಹೋರ್ (Lahore) ನಗರದಲ್ಲಿ ಗುರುವಾರ ಬೆಳಿಗ್ಗೆ ಮೂರು ಸ್ಫೋಟಗಳು (Blast) ಸಂಭವಿಸಿವೆ ಎಂದು ಪಾಕ್‌ ಮಾಧ್ಯಮಗಳು ವರದಿ ಮಾಡಿವೆ.

    ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ ಹೊರಗೆ ಸ್ಫೋಟಗಳು ಸಂಭವಿಸಿವೆ. ಸ್ಫೋಟದ ನಂತರ ಸೈರನ್‌ಗಳು ಮೊಳಗಿವೆ. ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಇದನ್ನೂ ಓದಿ: Operation Sindoor | ಭಾರತದ ದಾಳಿಯಲ್ಲಿ 31 ಮಂದಿ ಹತ್ಯೆ, 46 ಮಂದಿಗೆ ಗಾಯ – ಹೊಣೆ ಹೊತ್ತ ಪಾಕ್‌ ಸೇನೆ


    ಸ್ಥಳೀಯ ಭದ್ರತಾ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ ಪ್ರದೇಶವನ್ನು ಸೀಲ್ ಮಾಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಪಾಕಿಸ್ತಾನ ವಾಯುಪಡೆಯ (ಪಿಎಎಫ್) ತರಬೇತಿ ಸಮಯದಲ್ಲಿ ಸ್ಫೋಟ ಸಂಭವಿಸಿದೆ.

    ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಆವರಣದಲ್ಲಿ ನೆಲೆಗೊಂಡಿರುವ ಕಟ್ಟಡದಿಂದ ಕಪ್ಪು ಹೊಗೆ ಬರುತ್ತಿರುವ ದೃಶ್ಯದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: 9 ಉಗ್ರ ಅಡಗು ತಾಣಗಳ ಮಟಾಶ್ – ಯಾವ್ಯಾವ ಪ್ರದೇಶದಲ್ಲಿ ಯಾವ ಉಗ್ರ ಸಂಘಟನೆ ಇತ್ತು? ಅವುಗಳ ಪಾತ್ರ ಏನು?

    ಮುನ್ನೆಚ್ಚರಿಕೆ ಕ್ರಮವಾಗಿ, ವಾಲ್ಟನ್ ರಸ್ತೆಯಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ಲಾಹೋರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದೆ. ಈ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

  • ಅಜರ್‌ಬೈಜಾನ್, ಅರ್ಮೇನಿಯನ್ ಪ್ರತ್ಯೇಕತಾವಾದಿಗಳ ನಡುವಿನ ಯುದ್ಧ ಅಂತ್ಯ

    ಅಜರ್‌ಬೈಜಾನ್, ಅರ್ಮೇನಿಯನ್ ಪ್ರತ್ಯೇಕತಾವಾದಿಗಳ ನಡುವಿನ ಯುದ್ಧ ಅಂತ್ಯ

    ಬಾಕು: ಅಜರ್‌ಬೈಜಾನ್‌ನಲ್ಲಿ (Azerbaijan) ನಡೆಯುತ್ತಿದ್ದ ಸೇನೆ ಹಾಗೂ ಪ್ರತ್ಯೇಕತಾವಾದಿ ಅರ್ಮೇನಿಯನ್ ಹೋರಾಟಗಾರರ ನಡುವಿನ ಯುದ್ಧ ಕೊನೆಯಾಗಿದೆ. ಪ್ರತ್ಯೇಕವಾದಿ ಹೋರಾಟಗಾರರು ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಶರಣಾಗಿದ್ದಾರೆ. ಈ ಮೂಲಕ ಬೇರ್ಪಟ್ಟಿದ್ದ ನಾಗೋರ್ನೊ-ಕರಾಬಖ್ (Karabakh) ಮೇಲೆ ಸರ್ಕಾರ ಮರಳಿ ನಿಯಂತ್ರಣವನ್ನು ಪಡೆದುಕೊಂಡಿದೆ ಎಂದು ಅಜರ್‌ಬೈಜಾನ್ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಹೇಳಿದ್ದಾರೆ.

    ಬೇರ್ಪಟ್ಟ ಪ್ರದೇಶವನ್ನು ಅಜರ್‌ಬೈಜಾನ್‌ನ  ಉಳಿದ ಭಾಗಗಳ ಮರುಜೋಡಣೆ ಕುರಿತು ಇಂದು (ಗುರುವಾರ) ಯೆವ್ಲಾಖ್ ನಗರದಲ್ಲಿ ಮಾತುಕತೆ ನಡೆಯಲಿದೆ. ಈ ವೇಳೆ ಸರ್ಕಾರದ ಪ್ರತಿನಿಧಿಗಳು ಹಾಗೂ ಪ್ರತ್ಯೇಕವಾದಿಗಳ ಮುಖಂಡರು ಭಾಗವಹಿಸಲಿದ್ದಾರೆ. ಈ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಅರ್ಮೇನಿಯನ್ ನಿಯಂತ್ರಿತ ಕರಾಬಾಕ್‌ನಲ್ಲಿ ಅಜರ್‌ಬೈಜಾನ್‌ ಮಿಲಿಟರಿ ದಾಳಿ – 25 ಮಂದಿ ಸಾವು

    ಸೋಮವಾರ ನಡೆದಿದ್ದ ಮಿಲಿಟರಿ ದಾಳಿಯಿಂದಾಗಿ 25 ಮಂದಿ ಸಾವನ್ನಪ್ಪಿದ್ದರು. ಘಟನೆಯಲ್ಲಿ ಸ್ಥಳೀಯ ಇಬ್ಬರು ಸೇರಿದಂತೆ 138 ಜನರು ಗಾಯಗೊಂಡಿದ್ದರು. ಈ ಬಗ್ಗೆ ಪ್ರತ್ಯೇಕತಾವಾದಿ ಅರ್ಮೇನಿಯನ್ ಮಾನವ ಹಕ್ಕುಗಳ ಅಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು.

    ಸೋವಿಯತ್ ಒಕ್ಕೂಟವು ಇಲ್ಲಿಂದ ಬೇರ್ಪಟ್ಟ ನಂತರ ಅರ್ಮೇನಿಯನ್ ಪ್ರತ್ಯೇಕತಾವಾದಿಗಳು 1990ರ ದಶಕದ ಆರಂಭದಲ್ಲಿ ಅಜರ್‌ಬೈಜಾನ್ ಪ್ರದೇಶವನ್ನು ವಶಪಡಿಸಿಕೊಂಡರು. ಅಲ್ಲಿಂದ ಇಲ್ಲಿಯವರೆಗೂ ನಡೆದ ಘರ್ಷಣೆಯಲ್ಲಿ ಸುಮಾರು 30,000 ಜನರನ್ನು ಬಲಿ ತೆಗೆದುಕೊಂಡಿದೆ. ಇದನ್ನೂ ಓದಿ: ನೀರಿನ ಸೆಲೆ ಇರುವ ಗ್ರಹ ಪತ್ತೆ; ಇಲ್ಲಿದ್ಯಾ ಜೀವಿಗಳ ನೆಲೆ? – ನಾಸಾ ಹೇಳೋದೇನು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅರ್ಮೇನಿಯನ್ ನಿಯಂತ್ರಿತ ಕರಾಬಾಕ್‌ನಲ್ಲಿ ಅಜರ್‌ಬೈಜಾನ್‌ ಮಿಲಿಟರಿ ದಾಳಿ – 25 ಮಂದಿ ಸಾವು

    ಅರ್ಮೇನಿಯನ್ ನಿಯಂತ್ರಿತ ಕರಾಬಾಕ್‌ನಲ್ಲಿ ಅಜರ್‌ಬೈಜಾನ್‌ ಮಿಲಿಟರಿ ದಾಳಿ – 25 ಮಂದಿ ಸಾವು

    ಬಾಕು: ಅಜರ್‌ಬೈಜಾನ್ ಮಿಲಿಟರಿ (Azerbaijani Military) ದಾಳಿಯಿಂದಾಗಿ 25 ಮಂದಿ ದಾರುಣ ಸಾವನ್ನಪ್ಪಿದ್ದಾರೆ ಎಂದು ಪ್ರತ್ಯೇಕತಾವಾದಿ ಅರ್ಮೇನಿಯನ್ ಮಾನವ ಹಕ್ಕುಗಳ ಅಧಿಕಾರಿ ಹೇಳಿದ್ದಾರೆ. ಘಟನೆಯಲ್ಲಿ ಸ್ಥಳೀಯ ಇಬ್ಬರು ಸೇರಿದಂತೆ 138 ಜನರು ಗಾಯಗೊಂಡಿದ್ದಾರೆ.

    ಅರ್ಮೇನಿಯನ್-ನಿಯಂತ್ರಿತ ಕರಾಬಾಖ್‌ನಲ್ಲಿ ಕಾರ್ಯಾಚರಣೆಗೆ ಅಜರ್‌ಬೈಜಾನ್ ಸೈನ್ಯ ಕಳುಹಿಸಿದೆ. ಈ ಪ್ರದೇಶವನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಯತ್ನಿಸಲಾಗಿದೆ. ನೆರೆಯ ಅರ್ಮೇನಿಯಾದೊಂದಿಗೆ ಯುದ್ಧದ ಬೆದರಿಕೆಯನ್ನು ಹಾಕಲಾಗಿದೆ. ಇದನ್ನೂ ಓದಿ: ಉಲ್ಟಾ ಹೊಡೆದ ಕೆನಡಾ- ಭಾರತವನ್ನು ಪ್ರಚೋದಿಸುತ್ತಿಲ್ಲವೆಂದ ಟ್ರುಡೋ

    ಕರಾಬಾಖ್ ಅಂತಾರಾಷ್ಟ್ರೀಯವಾಗಿ ಅಜರ್‌ಬೈಜಾನ್ ಪ್ರದೇಶವೆಂದು ಗುರುತಿಸಲ್ಪಟ್ಟಿದೆ. ಆದರೆ ಅದರ ಭಾಗವನ್ನು ಪ್ರತ್ಯೇಕತಾವಾದಿ ಅರ್ಮೇನಿಯನ್ ಅಧಿಕಾರಿಗಳು ನಿಯಂತ್ರಿಸುತ್ತಿದ್ದಾರೆ. ಈ ಪ್ರದೇಶ ನಮ್ಮ ಪೂರ್ವಜರ ತಾಯ್ನಾಡು ಎಂದು ಹೇಳುತ್ತಿದ್ದಾರೆ.

    ಈ ಪ್ರದೇಶವು ಎರಡು ಯುದ್ಧಗಳ ಕೇಂದ್ರವಾಗಿದೆ. ಅಜರ್‌ಬೈಜಾನ್ ಪಡೆಗಳು ಇದುವರೆಗೆ 60 ಕ್ಕೂ ಹೆಚ್ಚು ಮಿಲಿಟರಿ ಪೋಸ್ಟ್‌ಗಳನ್ನು ವಶಪಡಿಸಿಕೊಂಡಿದೆ. ಇತರ ಯಂತ್ರಾಂಶಗಳೊಂದಿಗೆ 20 ಮಿಲಿಟರಿ ವಾಹನಗಳನ್ನು ನಾಶಪಡಿಸಿವೆ ಬಾಕು ರಕ್ಷಣಾ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಒಂದೇ ಕುಟುಂಬದ ದಂಪತಿ, ಇಬ್ಬರು ಮಕ್ಕಳು, 3 ನಾಯಿಗಳಿಗೆ ಗುಂಡಿಕ್ಕಿ ಹತ್ಯೆ

    ಯುರೋಪಿಯನ್‌ ಒಕ್ಕೂಟ, ಫ್ರಾನ್ಸ್ ಮತ್ತು ಜರ್ಮನಿ ರಾಷ್ಟ್ರಗಳು ಅಜರ್‌ಬೈಜಾನ್ ಮಿಲಿಟರಿ ಕ್ರಮವನ್ನು ಖಂಡಿಸಿವೆ. ಕರಾಬಾಖ್‌ನ ಭವಿಷ್ಯದ ದೃಷ್ಟಿಯಿಂದ ಅರ್ಮೇನಿಯಾದೊಂದಿಗೆ ಶಾಂತಿ ಮಾತುಕತೆಗೆ ಕರೆ ನೀಡಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 13 ವರ್ಷ ಭಾರತಾಂಬೆಯ ಸೇವೆ ಮಾಡಿದ ಕೊಡಗಿನ ಯೋಧ ಅನಾರೋಗ್ಯದಿಂದ ನಿಧನ

    13 ವರ್ಷ ಭಾರತಾಂಬೆಯ ಸೇವೆ ಮಾಡಿದ ಕೊಡಗಿನ ಯೋಧ ಅನಾರೋಗ್ಯದಿಂದ ನಿಧನ

    ಮಡಿಕೇರಿ: ಬೆಂಗಳೂರಿನ (Bengaluru) ಮಿಲಿಟರಿ (Military) ಎಂಇಜಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧರೊಬ್ಬರು (Soldier) ಶುಕ್ರವಾರ ಅನಾರೋಗ್ಯದಿಂದ (Illness) ನಿಧನರಾಗಿದ್ದಾರೆ.

    ಮಡಿಕೇರಿ (Madikeri) ತಾಲೂಕಿನ ಭಾಗಮಂಡಲ ಸಮೀಪದ ಸಣ್ಣಪುಲಿಕೋಟು ಗ್ರಾಮದ ಜಿತಿನ್ (31) ಮೃತಪಟ್ಟ ಯೋಧ. ಸಣ್ಣಪುಲಿಕೋಟು ಗ್ರಾಮದ ಕಾಳಪ್ಪ ಮತ್ತು ದಮಯಂತಿ ಪುತ್ರರಾಗಿರುವ ಜಿತಿನ್ 2012ರಲ್ಲಿ ಮಿಲಿಟರಿ ಸೇವೆಗೆ ಸೇರಿದ್ದು, 11 ವರ್ಷಗಳ ಸೇವೆಯನ್ನು ಪೂರೈಸಿದ್ದಾರೆ. ಆರಂಭದಲ್ಲಿ ಬೆಂಗಳೂರಿನಲ್ಲಿ ತರಬೇತಿಗೆ ಸೇರಿದ್ದು, ಜಮ್ಮು ಹಾಗೂ ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸಿ ಬಳಿಕ ಬೆಂಗಳೂರಿನಲ್ಲಿ ನಾಯಕ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ರೈತನ ಬದುಕಿಗೆ ಗ್ಯಾರಂಟಿ ಕೊಡಲು ಸಾಧ್ಯವಿಲ್ಲವೇ?: ಹೆಚ್‍ಡಿಕೆ ಕಿಡಿ

    ವಿದೇಶಕ್ಕೆ ತೆರಳುವ ಉದ್ದೇಶದಿಂದ ಜಿತಿನ್ ಹೆಚ್ಚಿನ ತರಬೇತಿಯನ್ನು ಪಡೆಯುತ್ತಿದ್ದರು. ಪ್ಯಾರಾಚೂಟ್ ತರಬೇತಿ ಪಡೆಯುತ್ತಿದ್ದ ಸಂದರ್ಭ ಬಿದ್ದು ಅವರ ಕಿಡ್ನಿಗೆ ತೊಂದರೆಯಾಗಿತ್ತು. ಇದಕ್ಕೆ ಸೂಕ್ತ ಚಿಕಿತ್ಸೆಯನ್ನು ಪಡೆದಿದ್ದರು. ತರಬೇತಿ ಮುಕ್ತಾಯ ಹಂತದಲ್ಲಿದ್ದು, ಕೊನೆಯ ದಿನವಾದ ಶುಕ್ರವಾರ ಬೆಳಗ್ಗಿನ ಜಾವ ಓಟದ ಸಂದರ್ಭ ಕುಸಿದು ಬಿದ್ದಿದ್ದಾರೆ. ಅವರನ್ನು ಕಮಾಂಡೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಬಳಿಕ ಐಸಿಯುಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಗಣೇಶನ ಹಬ್ಬ ಸೆ.18ಕ್ಕಾ ಅಥವಾ 19ಕ್ಕಾ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    ಒಂದೂವರೆ ವರ್ಷಗಳ ಹಿಂದಷ್ಟೇ ಜಿತಿನ್ ವನಿತಾ ಎಂಬವರನ್ನು ವಿವಾಹವಾಗಿದ್ದರು. ಅವರ ಪತ್ನಿ ವೀರಾಜಪೇಟೆ ಎಸ್‌ಬಿಐ ಬ್ಯಾಂಕ್ ಉದ್ಯೋಗಿಯಾಗಿದ್ದು, ಆ ಕೆಲಸ ಬಿಟ್ಟು ಒಂದು ವರ್ಷದಿಂದ ಬೆಂಗಳೂರಿನಲ್ಲಿ ಪತಿಯೊಂದಿಗೆ ವಾಸವಿದ್ದರು. ಜಿತಿನ್ ಮೃತ ದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಸೇನಾ ಗೌರವ ಸಲ್ಲಿಸಿ ಶುಕ್ರವಾರ ಸಂಜೆ ಬೆಂಗಳೂರಿನಿಂದ ಕಳುಹಿಸಿಕೊಡಲಾಗಿದೆ. ಶನಿವಾರ ಸಣ್ಣಪುಲಿಕೋಟು ಮೇಲ್ಕಟ್ಟು ಶಾಲೆಯ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಪೂಜೆಗೆ ತೆರಳಿದ್ದ ವೈದ್ಯ ಹೇಮಾವತಿ ನದಿಯಲ್ಲಿ ಮುಳುಗಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಕ್, ಚೀನಾಗೆ ಠಕ್ಕರ್ ಕೊಡಲು ಅತ್ಯಾಧುನಿಕ ಡ್ರೋಣ್ ನಿಯೋಜನೆ

    ಪಾಕ್, ಚೀನಾಗೆ ಠಕ್ಕರ್ ಕೊಡಲು ಅತ್ಯಾಧುನಿಕ ಡ್ರೋಣ್ ನಿಯೋಜನೆ

    ನವದೆಹಲಿ: ಭಾರತೀಯ ವಾಯುಪಡೆಯು (Indian Air Force) ಚೀನಾ (China) ಮತ್ತು ಪಾಕಿಸ್ತಾನ (Pakistan) ಎರಡೂ ಗಡಿಗಳ ಮೇಲೆ ಏಕಕಾಲಕ್ಕೆ ಕಣ್ಗಾವಲಿರಿಸುವ ಸಾಮರ್ಥ್ಯವುಳ್ಳ 4 ಸರ್ವೇಕ್ಷಣಾ ಡ್ರೋನ್‌ಗಳನ್ನ ನಿಯೋಜಿಸಿದೆ. ಹೆರಾನ್ ಮಾರ್ಕ್-2 ಹೆಸರಿನ ಡ್ರೋಣ್ ಏಕಕಾಲದಲ್ಲಿ ಚೀನಾ ಮತ್ತು ಪಾಕಿಸ್ತಾನ ಗಡಿಗಳಲ್ಲಿ ಗಸ್ತು ತಿರುಗುವ ಸಾಮರ್ಥ್ಯ ಹೊಂದಿದೆ.

    ಗಡಿಯಲ್ಲಿ 4 ಹೆರಾನ್ ಮಾರ್ಕ್-2 ಡ್ರೋನ್‌ಗಳನ್ನು (Heron Mark-2 Drones) ನಿಯೋಜಿಸಲಾಗಿದೆ. ದೀರ್ಘ-ಶ್ರೇಣಿಯ ಕ್ಷಿಪಣಿಗಳು ಹಾಗೂ ಶಸ್ತ್ರಾಸ್ತ್ರಗಳ ವ್ಯವಸ್ಥೆ ಹೊಂದಿದೆ. ಜೊತೆಯಲ್ಲೇ ಹತ್ತಾರು ಅತ್ಯಾಧುನಿಕ ಶಸ್ತ್ರಾಸ್ತ್ರಗಳೂ ಈ ಡ್ರೋನ್‌ಗಳಲ್ಲಿ ಇರಲಿವೆ. ಭಾರತದ ಉತ್ತರ ವಲಯದ ಗಡಿಯ ಮುಂಚೂಣಿ ಪ್ರದೇಶಗಳಲ್ಲಿ ಈ ಡ್ರೋನ್‌ಗಳನ್ನು ಅಳವಡಿಕೆ ಮಾಡಲಾಗಿದೆ. ಇದನ್ನೂ ಓದಿ: ಪಾಕ್, ಚೀನಾಕ್ಕೆ ಠಕ್ಕರ್ – ಶ್ರೀನಗರದಲ್ಲಿ ಮೇಲ್ದರ್ಜೆಗೆರಿಸಿದ MiG- 29 ಯುದ್ಧ ವಿಮಾನ ನಿಯೋಜನೆ

    ಹೆರಾನ್ ಮಾರ್ಕ್-2 ವಿಶೇಷತೆ ಏನು?
    ಈ ಡ್ರೋನ್‌ಗಳು ಉಪಗ್ರಹಗಳ ಜೊತೆಗೆ ಸಂವಹನ ಸಂಪರ್ಕ ಹೊಂದಿರುತ್ತವೆ. ಭಾರತೀಯ ವಾಯುಪಡೆಯು ಅತ್ಯಂತ ಸುದೀರ್ಘ ಸಮಯದಿಂದ ಈ ರೀತಿಯ ಡ್ರೋನ್‌ಗಳ ಅಗತ್ಯತೆಯನ್ನ ಪ್ರತಿಪಾದಿಸಿತ್ತು. ಈ ಡ್ರೋನ್‌ಗಳು ಅತಿ ದೂರದವರೆಗೆ ಇಂಧನ ಮರುಭರ್ತಿ ಇಲ್ಲದೇ ಸಂಚರಿಸಬಲ್ಲವು. ಒಮ್ಮೆ ಇಂಧನ ಭರ್ತಿಯಾದರೆ 36 ಗಂಟೆ ಕಾಲ ಕಾರ್ಯ ನಿರ್ವಹಿಸಬಲ್ಲವು. ಲೇಸರ್ ತಂತ್ರಜ್ಞಾನದ ಮೂಲಕ ಶತ್ರುಗಳ ನೆಲೆ ಗುರುತಿಸಬಲ್ಲವು. ಅತಿ ದೂರದಿಂದಲೇ ಶತ್ರುಗಳ ನೆಲೆಯನ್ನ ಗುರುತಿಸುವ ಸಾಮರ್ಥ್ಯ ಡ್ರೋನ್‌ಗಳಿಗೆ ಇರುವ ಕಾರಣ, ಇವುಗಳ ನೆರವಿನಿಂದ ವಾಯುಪಡೆಯ ಫೈಟರ್ ಜೆಟ್‌ಗಳು ಶತ್ರುಗಳ ನೆಲೆಗಳನ್ನು ದೂರಗಾಮಿ ಕ್ಷಿಪಣಿಗಳ ಮೂಲಕ ನಾಶಪಡಿಸಬಹುದಾಗಿದೆ ಎಂದು ವಾಯುಪಡೆ ತಿಳಿಸಿದೆ.

    ಹೆರಾನ್ ಮಾರ್ಕ್-2 ಡ್ರೋನ್ ದೃಷ್ಟಿಯ ವ್ಯಾಪ್ತಿಯ ಆಚೆಗಿನ ಸರ್ವೇಕ್ಷಣೆಗೂ ನೆರವಾಗಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಇವುಗಳ ನೆರವಿನಿಂದ ಇಡೀ ದೇಶವನ್ನ ಒಂದೇ ಸ್ಥಳದಿಂದ ಸರ್ವೇಕ್ಷಣೆ ಮಾಡಲು ಸಾಧ್ಯ ಎಂದು ಡ್ರೋನ್ ಸ್ವಾಡರ್ನ್‌ನ ವಿಂಗ್ ಕಮಾಂಡರ್ ಪಂಕಜ್ ರಾಣಾ ತಿಳಿಸಿದ್ದಾರೆ. ಇದನ್ನೂ ಓದಿ: ಉಡುಪಿ ಮಾದರಿ ಮತ್ತೊಂದು ಕೇಸ್‌; ಹಾಸ್ಟೆಲ್‌ ಹುಡ್ಗೀರ ಬೆತ್ತಲೆ ವೀಡಿಯೋ ಸೆರೆ ಹಿಡಿದು ಸೀನಿಯರ್‌ಗೆ ಕಳಿಸ್ತಿದ್ದ ವಿದ್ಯಾರ್ಥಿನಿ

    ದಿನದ 24 ಗಂಟೆಯೂ ಕಾರ್ಯನಿರ್ವಹಿಸಬಲ್ಲ ಸಾಮರ್ಥ್ಯ ಹೊಂದಿರುವ ಈ ಡ್ರೋನ್‌ಗಳು ಯಾವುದೇ ಹವಾಮಾನದಲ್ಲೂ ಕೆಲಸ ಮಾಡುತ್ತವೆ. ಅದಕ್ಕಾಗಿ ಇವುಗಳ ಎಂಜಿನ್ ಸಾಮರ್ಥ್ಯವನ್ನೂ ಹೆಚ್ಚಿಸಲಾಗಿದೆ. ಒಂದೇ ಕಾರ್ಯಾಚರಣೆಗಳಲ್ಲಿ ಈ ಡ್ರೋನ್‌ಗಳು ಹಲವು ವಲಯಗಳ ಕಾರ್ಯಗಳನ್ನು ಸುದೀರ್ಘ ಕಾಲ ನಿರ್ವಹಿಸುವ ಸಾಮರ್ಥ್ಯ ಹೊಂದಿವೆ. ಬೇಹುಗಾರಿಕೆ, ಸರ್ವೇಕ್ಷಣೆ ಹಾಗೂ ಭಾರತೀಯ ವಾಯುಪಡೆಗೆ ಮಾಹಿತಿ ರವಾನಿಸುವ ಕಾರ್ಯಗಳನ್ನು ಈ ಡ್ರೋನ್ ಮಾಡುತ್ತದೆ ಎಂದು ರಾಣಾ ವಿವರಿಸಿದ್ದಾರೆ.

    ಎರಡು ದಿನಗಳ ಹಿಂದೆಯಷ್ಟೇ ಭಾರತೀಯ ವಾಯುಪಡೆ ಹಾರುವ ಶವಪೆಟ್ಟಿಗೆ ಎಂದೇ ಕುಖ್ಯಾತಿ ಪಡೆದಿದ್ದ ಮಿಗ್-21 ವಿಮಾನಗಳ ಬದಲಿಗೆ ಮೇಲ್ದರ್ಜೆಗೇರಿಸಿದ ಮಿಗ್-29 ಫೈಟರ್ ಜೆಟ್‌ಗಳನ್ನ ಗಸ್ತಿಗೆ ನಿಯೋಜನೆ ಮಾಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಉಕ್ರೇನ್ ವಿರುದ್ಧ ಯುದ್ಧಕ್ಕೆ ರಷ್ಯಾದಲ್ಲಿ ಮತ್ತೆ 4 ಲಕ್ಷ ಸೈನಿಕರ ನೇಮಕ?

    ಉಕ್ರೇನ್ ವಿರುದ್ಧ ಯುದ್ಧಕ್ಕೆ ರಷ್ಯಾದಲ್ಲಿ ಮತ್ತೆ 4 ಲಕ್ಷ ಸೈನಿಕರ ನೇಮಕ?

    ಮಾಸ್ಕೋ: ಉಕ್ರೇನ್ (Ukrain) ದೇಶದೊಂದಿಗೆ ಸುದೀರ್ಘ ಹೋರಾಟವನ್ನು ನಡೆಸುವ ಸಲುವಾಗಿ ರಷ್ಯಾ (Russia) ದೇಶವು ಈ ವರ್ಷ 4 ಲಕ್ಷ ಗುತ್ತಿಗೆ ಸೈನಿಕರನ್ನು ನೇಮಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

    ಉಕ್ರೇನ್ ಮುಂಬರುವ ತಿಂಗಳುಗಳಲ್ಲಿ ಯುರೋಪ್ (Europe) ಮತ್ತು ಯುಎಸ್‌ನಲ್ಲಿ (US) ತರಬೇತಿಯಿಂದ ಹೊಸ ಪಡೆಗಳೊಂದಿಗೆ ಮತ್ತು ಹೊಸದಾಗಿ ಸರಬರಾಜು ಮಾಡಿದ ಟ್ಯಾಂಕ್‌ಗಳು, ಶಸ್ತ್ರಸಜ್ಜಿತ ವಾಹನಗಳು ಮತ್ತು ಇತರ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಪ್ರತಿದಾಳಿಯನ್ನು ಪ್ರಾರಂಭಿಸಲು ಯೋಜಿಸುತ್ತಿದೆ. ಇದನ್ನೂ ಓದಿ: ಅದಾನಿ ಬಳಿಕ ಡಾರ್ಸೆ ಕಂಪನಿ ವಿರುದ್ಧ ರಿಪೋರ್ಟ್‌ ಔಟ್‌ – ಷೇರು ಮೌಲ್ಯ ಭಾರೀ ಕುಸಿತ 

    ತನ್ನ ಶ್ರೇಣಿಯನ್ನು ತುಂಬಿಸಲು ಮತ್ತು ವಿಸ್ತರಿಸಲು, ರಷ್ಯಾ ಈಗಾಗಲೇ ಗುತ್ತಿಗೆ ಸೈನಿಕರಿಗೆ ನೇಮಿಸುವ ಅಭಿಯಾನವನ್ನು ಪ್ರಾರಂಭಿಸಿದೆ. ಇದರಲ್ಲಿ ಸೈನಿಕರು ವೇತನಕ್ಕಾಗಿ ಹಲವಾರು ವರ್ಷಗಳವರೆಗೆ ಸೇವೆ ಸಲ್ಲಿಸುತ್ತಾರೆ. ಪ್ರಾದೇಶಿಕ ಅಧಿಕಾರಿಗಳಿಗೆ ನೇಮಕಾತಿಗಾಗಿ ಕೋಟಾಗಳನ್ನು ನೀಡಲಾಗಿದ್ದು, ಡ್ರಾಫ್ಟ್ ಬೋರ್ಡ್‌ಗಳಿಗೆ ಬರಲು ಸಂಭಾವ್ಯ ಸ್ವಯಂಸೇವಕರಿಗೆ ಸಮನ್ಸ್ ನೀಡುತ್ತಿದ್ದಾರೆ. ಆರಂಭದಲ್ಲಿ ಅಧಿಕಾರಿಗಳು, ಅನುಭವಿಗಳು ಮತ್ತು ಗ್ರಾಮೀಣ ನಿವಾಸಿಗಳನ್ನು ಗುರಿಯಾಗಿಸಿಕೊಂಡು ನೇಮಕಾತಿಯನ್ನು ನಡೆಸುವ ಸಾಧ್ಯತೆಯಿದೆ. ಇದನ್ನೂ ಓದಿ: ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿದೆ – CBIನಿಂದ 3ನೇ ಚಾರ್ಜ್‌ಶೀಟ್‌ ಸಲ್ಲಿಕೆ

    ಆದರೆ ಈ ವರ್ಷ 4 ಲಕ್ಷ ಗುತ್ತಿಗೆ ಸೈನಿಕರನ್ನು ಆಕರ್ಷಿಸುವ ಗುರಿಯು ಅವಾಸ್ತವಿಕವಾಗಿದೆ. 2022ರ ಫೆಬ್ರವರಿ 24 ರಂದು ಆಕ್ರಮಣವನ್ನು ಪ್ರಾರಂಭಿಸುವ ಮೊದಲು ರಷ್ಯಾ ಹೊಂದಿದ್ದ ವೃತ್ತಿಪರ ಪಡೆಗಳ ಒಟ್ಟು ಸಂಖ್ಯೆಗೆ ಇದು ಸರಿಸುಮಾರು ಸಮಾನವಾಗಿದೆ ಎಂದು ಕೆಲವು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: PublicTV Explainer: ನಿತ್ಯಾನಂದನ ಕೈಲಾಸದಲ್ಲಿರಲು ಈ ರೂಲ್ಸ್ ಫಾಲೋ ಮಾಡ್ಲೇಬೇಕಂತೆ 

    ರಕ್ಷಣಾ ಸಚಿವ (Defence Minister) ಸೆರ್ಗೆಯ್ ಶೋಯಿಗು (Sergei Shoigu) ಡಿಸೆಂಬರ್‌ನಲ್ಲಿ ರಷ್ಯಾ ಒಪ್ಪಂದದ ಸೈನಿಕರ ಸಂಖ್ಯೆಯನ್ನು 2023ರ ಅಂತ್ಯದ ವೇಳೆಗೆ 5,21,000 ಕ್ಕೆ ಹೆಚ್ಚಿಸುವುದಾಗಿ ಹೇಳಿದರು. ಇದು ಆಕ್ರಮಣದ ಮೊದಲು 4,05,000 ಆಗಿತ್ತು. ಈ ಪಡೆಗಳು ವಿಶಿಷ್ಟವಾಗಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸುತ್ತವೆ. ಇದನ್ನೂ ಓದಿ: ಶಾಲೆಯಲ್ಲಿ ಬ್ರೆಡ್‌ ಮಾರಾಟ ಮಾಡಿ iPhone-14 ಖರೀದಿಸಿದ 12ರ ಬಾಲಕಿ

    ಕಳೆದ ವರ್ಷದ ಕೊನೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ರಷ್ಯಾದ ಮಿಲಿಟರಿಯ (Military) ಗಾತ್ರವನ್ನು ಪ್ರಸ್ತುತ 1.15 ಮಿಲಿಯನ್‌ನಿಂದ 1.5 ಮಿಲಿಯನ್‌ಗೆ ಹೆಚ್ಚಿಸುವ ಯೋಜನೆಯನ್ನು ಅನುಮೋದಿಸಿದರು. ಈ ಯೋಜನೆಯು 2026ರ ವೇಳೆಗೆ ಜಾರಿಗೆ ಬರುವ ನಿರೀಕ್ಷೆಯಿದೆ. ಇದನ್ನೂ ಓದಿ: ಉಕ್ರೇನ್‌ ಶಾಲೆ ಮೇಲೆ ರಷ್ಯಾ ಡ್ರೋನ್‌ ದಾಳಿ – 3 ಸಾವು

  • ಏರ್‌ಬಸ್‌ ಜೊತೆಗೂಡಿ ವಾಯುಸೇನೆಗೆ ವಿಮಾನ ತಯಾರಿಸಲಿದೆ ಟಾಟಾ ಸಮೂಹ

    ಏರ್‌ಬಸ್‌ ಜೊತೆಗೂಡಿ ವಾಯುಸೇನೆಗೆ ವಿಮಾನ ತಯಾರಿಸಲಿದೆ ಟಾಟಾ ಸಮೂಹ

    – ವಡೋದರಾದಲ್ಲಿ ನಿರ್ಮಾಣ, ಅ.30ಕ್ಕೆ ಮೋದಿ ಶಂಕುಸ್ಥಾಪನೆ
    – ಯುರೋಪ್‌ ಹೊರಗಡೆ ತೆರೆಯುತ್ತಿರುವ ಮೊದಲ ಏರ್‌ಬಸ್‌ ಘಟಕ

    ನವದೆಹಲಿ: ಏರ್‌ ಇಂಡಿಯಾ ಖರೀದಿಸಿದ್ದ ಟಾಟಾ ಸಮೂಹ(Tata Group) ಈಗ  ವಿಮಾನ ತಯಾರಿಸಲು ಮುಂದಾಗಿದೆ.

    ಹೌದು. ಜಗತ್ತಿನ ದೊಡ್ಡ ವಿಮಾನ ತಯಾರಿಕಾ ಕಂಪನಿಗಳ ಪೈಕಿ ಒಂದಾಗಿರುವ ಯುರೋಪ್‌ ಮೂಲದ ಏರ್‌ಬಸ್‌(Airbus) ಜೊತೆಗೂಡಿ ಮೇಕ್‌ ಇನ್‌ ಇಂಡಿಯಾ(Make In India) ಅಡಿ ಟಾಟಾ ಸಮೂಹ ವಾಯುಸೇನೆಗೆ C-295MW ವಿಮಾನವನ್ನು ನಿರ್ಮಾಣ ಮಾಡಲಿದೆ.

    ಗುಜರಾತಿನ ವಡೋದರಾದಲ್ಲಿ(Vadodara) ನಿರ್ಮಾಣ ಘಟಕ ಆರಂಭವಾಗಲಿದ್ದು ಪ್ರಧಾನಿ ನರೇಂದ್ರ ಮೋದಿ(Narenndra Modi) ಅ.30 ರಂದು ಶಂಕುಸ್ಥಾಪನೆ ನಡೆಸಲಿದ್ದಾರೆ. ಯೋಜನೆಯ ಒಟ್ಟು ವೆಚ್ಚ 21,935 ಕೋಟಿ ರೂ. ಆಗಿದ್ದು ವಿಮಾನವನ್ನು ನಾಗರಿಕ ಉದ್ದೇಶಗಳಿಗಾಗಿಯೂ ಬಳಸಬಹುದಾಗಿದೆ.

    ಯುರೋಪ್‌ ಹೊರಗಡೆ ಏರ್‌ಬಸ್‌ ಕಂಪನಿ ತನ್ನ ತಯಾರಿಕಾ ಘಟಕ ತೆರೆಯುತ್ತಿರುವುದು ಇದೇ ಮೊದಲಾಗಿರುವ ಕಾರಣ ಈ ಯೋಜನೆ ಭಾರೀ ಮಹತ್ವ ಪಡೆದಿದೆ. ಇದನ್ನೂ ಓದಿ: ಸೆಮಿಕಂಡಕ್ಟರ್‌ ಘಟಕ ಸ್ಥಾಪನೆಗೆ ಕರ್ನಾಟಕವನ್ನು ಬಿಟ್ಟು ಗುಜರಾತ್‌ ಆಯ್ಕೆ ಮಾಡಿದ್ದು ಯಾಕೆ – ಪ್ರಶ್ನೆಗೆ ಉತ್ತರ ಕೊಟ್ಟ ವೇದಾಂತ ಕಂಪನಿ

    ಏನಿದು ಯೋಜನೆ?
    ರಕ್ಷಣೆಯಲ್ಲಿ ಸ್ವಾವಲಂಬಿಯಾಗಲು ಭಾರತ ಮುಂದಾಗುತ್ತಿದ್ದು ಈ ನಿಟ್ಟಿನಲ್ಲಿ ಮೇಕ್‌ ಇನ್‌ ಇಂಡಿಯಾದ ಅಡಿ ಹಲವು ಯೋಜನೆಗಳನ್ನು ಕೈಗೆತ್ತಿಕೊಂಡಿದೆ. 2021ರ ಸೆಪ್ಟೆಂಬರ್‌ನಲ್ಲಿ ರಕ್ಷಣೆಗೆ ಸಂಬಂಧಿಸಿದ ಉಪಸಮಿತಿ ಏರ್‌ಬಸ್‌ ಕಂಪನಿಯ ಜೊತೆ 56 C-295MW ಸರಕು ವಿಮಾನ ಖರೀದಿ ಸಂಬಂಧ ಒಪ್ಪಂದ ನಡೆಸಿತ್ತು. ಏರ್‌ಬಸ್‌ ಕಂಪನಿ ಮೊದಲು ಹಾರಾಟಕ್ಕೆ ಯೋಗ್ಯವಾಗಿರುವ 16 ವಿಮಾನಗಳನ್ನು ನೀಡಬೇಕು. ಬಳಿಕ 40 ವಿಮಾನಗಳನ್ನು ಭಾರತದಲ್ಲೇ ತಯಾರಿಸಿ ವಾಯುಸೇನೆಗೆ ಹಸ್ತಾಂತರಿಸಬೇಕು ಎಂದು ಒಪ್ಪಂದದಲ್ಲಿ ತಿಳಿಸಲಾಗಿತ್ತು.

    ವಾಯುಸೇನೆಗೆ 56 ವಿಮಾನಗಳ ವಿತರಣೆಯನ್ನು ಪೂರ್ಣಗೊಳಿಸಿದ ನಂತರ, ಏರ್‌ಬಸ್ ಡಿಫೆನ್ಸ್ ಭಾರತದಲ್ಲಿ ತಯಾರಿಸಿದ ವಿಮಾನಗಳನ್ನು ಸಿವಿಲ್ ಆಪರೇಟರ್‌ಗಳಿಗೆ ಮಾರಾಟ ಮಾಡಬಹುದು. ಅಷ್ಟೇ ಅಲ್ಲದೇ ಭಾರತ ಸರ್ಕಾರ ಅನುಮತಿ ನೀಡಿದ ದೇಶಗಳಿಗೆ ರಫ್ತು ಮಾಡಬಹುದಾಗಿದೆ

    C-295MW ಸಮಕಾಲೀನ ತಂತ್ರಜ್ಞಾನದೊಂದಿಗೆ 5-10 ಟನ್ ಸಾಮರ್ಥ್ಯದ ಸಾರಿಗೆ ವಿಮಾನವಾಗಿದ್ದು ಅದು ವಾಯುಸೇನೆಯ ಹಳೆಯ ಅವ್ರೋ ವಿಮಾನವನ್ನು ಬದಲಾಯಿಸುತ್ತದೆ. ಎಲ್ಲಾ 56 ವಿಮಾನಗಳಿಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ಭಾರತ್ ಡೈನಾಮಿಕ್ಸ್ ಲಿಮಿಟೆಡ್‌ ಅಭಿವೃದ್ಧಿ ಪಡಿಸಿರುವ ಸ್ಥಳೀಯ ಎಲೆಕ್ಟ್ರಾನಿಕ್ ವಾರ್‌ಫೇರ್ ಸೂಟ್‌ಗಳನ್ನು ಅಳವಡಿಸಲಾಗುತ್ತದೆ.

    ಮುಂದಿನ ದಿನಗಳಲ್ಲಿ ಭಾರತದಲ್ಲಿ ವಾಯು ಸಾರಿಗೆ ದೊಡ್ಡ ಉದ್ಯಮವಾಗಿ ಬೆಳೆಯುವುದರಿಂದ ಆಮದು ಅವಲಂಬನೆಯನ್ನು ಕಡಿಮೆ ಮಾಡಲಿದೆ. ಹೆಚಿನ ರಫ್ತು ಮಾಡುವುದರ ಜೊತೆಗೆ ದೇಶೀಯ ವಿಮಾನಯಾನ ತಯಾರಿಕೆಯನ್ನು ವೃದ್ಧಿಸಲಿದೆ.

    ಭಾರತದಲ್ಲಿ ಮಿಲಿಟರಿ ವಿಮಾನಗಳನ್ನು ಎಚ್‌ಎಎಲ್‌ ಕಂಪನಿ ತಯಾರಿಸುತ್ತಿದೆ. ಆದರೆ ವಿದೇಶಿ ಕಂಪನಿ ಮಿಲಿಟರಿ ವಿಮಾನಗಳನ್ನು ದೇಶದಲ್ಲಿ ತಯಾರಿಸಲು ಮುಂದಾಗುತ್ತಿರುವುದು ಇದೇ ಮೊದಲು.

    Live Tv
    [brid partner=56869869 player=32851 video=960834 autoplay=true]

  • ಸೇನಾ ಹೆಲಿಕಾಪ್ಟರ್‌ಗಳನ್ನು ಅಭಿವೃದ್ಧಿಪಡಿಸಲು ಖಾಸಗಿ ಕಂಪನಿಗಳಿಗೆ ರಕ್ಷಣಾ ಸಚಿವಾಲಯದಿಂದ ಅನುಮತಿ

    ಸೇನಾ ಹೆಲಿಕಾಪ್ಟರ್‌ಗಳನ್ನು ಅಭಿವೃದ್ಧಿಪಡಿಸಲು ಖಾಸಗಿ ಕಂಪನಿಗಳಿಗೆ ರಕ್ಷಣಾ ಸಚಿವಾಲಯದಿಂದ ಅನುಮತಿ

    ನವದೆಹಲಿ: ಭಾರತೀಯ ಮಿಲಿಟರಿ ಹಾರ್ಡ್ವೇರ್ ವಲಯದಲ್ಲಿ `ಆತ್ಮ ನಿರ್ಭರ ಭಾರತ್’ಗೆ ಉತ್ತೇನ ನೀಡಲು ರಕ್ಷಣಾ ಸಚಿವಾಲಯ ಮುಂದಾಗಿದ್ದು, ಅದಕ್ಕಾಗಿ ರಕ್ಷಣಾ ಸ್ವಾಧೀನ ಪ್ರಕ್ರಿಯೆ (DAP) ಕೈಪಿಡಿಯನ್ನು ತಿದ್ದುಪಡಿ ಮಾಡಲು ನಿರ್ಧರಿಸಿದೆ. ಇದರೊಂದಿಗೆ ಖಾಸಗಿ ವಲಯವು ಭಾರತೀಯ ರಕ್ಷಣಾ PSUಗಳೊಂದಿಗೆ (ಸಾರ್ವಜನಿಕ ವಲಯದ ಉದ್ಯಮ) ಅಗತ್ಯವಿರುದ್ಧ ಶಸ್ತ್ರಾಸ್ತ್ರಗಳನ್ನು ಉತ್ಪಾದಿಸಲು ಅನುವು ಮಾಡಿಕೊಡುತ್ತದೆ ಎಂದು ವರದಿಯಾಗಿದೆ.

    ಅಧಿಕಾರಿಗಳ ಪ್ರಕಾರ, ಉದ್ಯಮದಲ್ಲಿನ ಈ ಸಹಯೋಗವನ್ನು ಭಾರತೀಯ ಮಲ್ಟಿ-ರೋಲ್ ಹೆಲಿಕಾಪ್ಟರ್ (IMRH) ತಯಾರಿಕೆ ಮತ್ತು ಅಭಿವೃದ್ಧಿಯಲ್ಲಿ ಪರೀಕ್ಷಿಸಲಾಗುತ್ತದೆ. ಅಂತಿಮವಾಗಿ ಭಾರತೀಯ ಮಿಲಿಟರಿಯ ಪ್ರಸ್ತುತ ದಾಸ್ತಾನುಗಳಲ್ಲಿ ರಷ್ಯಾದ ನಿರ್ಮಿತ ಎಲ್ಲಾ Mi-17 ಮತ್ತು Mi-8 ಹೆಲಿಕಾಪ್ಟರ್‌ಗಳನ್ನು ಬದಲಾಯಿಸುತ್ತದೆ. ಇದರೊಂದಿಗೆ ವಾಯು ದಾಳಿ, ಜಲಾಂತರ್ಗಾಮಿ ನೌಕೆಗಳು, ಮಿಲಿಟರಿ ಸಾರಿಗೆ ಹಾಗೂ ಮೊದಲಾದ ವಿಭಾಗಗಳಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಇದನ್ನೂ ಓದಿ: ಹೈದರಾಬಾದ್‍ಗೆ ಬರುತ್ತಿದ್ದ ಇಂಡಿಗೋ ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶ

    ಖಾಸಗಿ ವಲಯದ ಕಂಪನಿಗಳು ಈಗಾಗಲೇ ಯೋಜನೆಯಲ್ಲಿ ಭಾಗವಹಿಸಲು ಉತ್ಸುಕತೆ ತೋರಿದ್ದು, ಮುಂದಿನ 7 ವರ್ಷಗಳಲ್ಲಿ ಶಸ್ತ್ರಾಸ್ತ್ರ ಉತ್ಪಾದನೆ ಪ್ರಾರಂಭಿಸಲು ರಕ್ಷಣಾ ಸಚಿವಾಲಯ ತಿಳಿಸಿದೆ. ಫ್ರೆಂಚ್ ಸಫ್ರಾನ್ ಕಂಪನಿಯು ಈಗಾಗಲೇ (ಜುಲೈ 8ರಂದು) ಭಾರತೀಯ HAL ಸಹಿಹಾಕಿದೆ. ಈ ಮೂಲಕ ನೌಕಾರೂಪ ಸೇರಿದಂತೆ IMRH ಎಂಜಿನ್ ಅನ್ನು ಉತ್ಪಾದಿಸಿ, ಅಭಿವೃದ್ಧಿಪಡಿಸಲು ಹಾಗೂ ಹೊಸದಾಗಿ ಜಂಟಿ ಉದ್ಯಮ ಸೃಷ್ಟಿಸಲು ಮುಂದಾಗಿವೆ ಎಂದು ಮಾಧ್ಯಮಗಳು ವರದಿಮಾಡಿವೆ.

    ಖಾಸಗಿ ವಲಯದ ಕಂಪೆನಿಗಳು ಉತ್ಪಾದನೆಯ ಶೇ.25 ಪ್ರತಿಶತವನ್ನು 3ನೇ ದೇಶಗಳಿಗೆ ರಫ್ತುಮಾಡಲು ಹಾಗೂ ವಿದೇಶಿ ವಿನಿಮಯವನ್ನೂ ಮಾಡಿಕೊಳ್ಳಲು ಅನುಮತಿಸಲಾಗುತ್ತದೆ. ಅಭಿವೃದ್ಧಿ ಹೊಂದಿದ IMRH ಅನ್ನು ಖರೀದಿಸಲು ಭಾರತೀಯ ಸಶಸ್ತ್ರ ಪಡೆಗಳಿಗೆ ತಿಳಿಸಲಾಗಿದೆ. ಮುಂದಿನ 5 ವರ್ಷಗಳಲ್ಲಿ ಹೆಲಿಕಾಪ್ಟರ್ ತಯಾರಿಸಿದರೆ, ಸಮಯಕ್ಕೆ ಮುಂಚಿತವಾಗಿ ಖರೀದಿಸುವಂತೆ ಖಾಸಗಿ ಕಂಪನಿಗಳು ಕೋರಿವೆ.

    ಖಾಸಗಿ ವಲಯವು ಶೇ.51 ಪ್ರತಿಶತ ಪಾಲನ್ನು ಸ್ವಾಧೀನಪಡಿಸಿಕೊಳ್ಳಲು ಹಾಗೂ ಭಾರತೀಯ ಪಿಎಸ್‌ಯು ಗಳೊಂದಿಗೆ ಜಂಟಿ ಉದ್ಯಮ ರೂಪಿಸಲು ಅನುಮತಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ದೇವಸ್ಥಾನದ ಆವರಣದಲ್ಲಿ ಮಾಂಸ ಎಸೆದ ದುಷ್ಕರ್ಮಿಗಳು- 3 ಮಾಂಸದ ಅಂಗಡಿಗಳಿಗೆ ಬೆಂಕಿ

    IMRH ಮುಂಬರುವ 5 ರಿಂದ 7 ವರ್ಷಗಳಲ್ಲಿ ಹೆಲಿಕಾಪ್ಟರ್‌ಗಳನ್ನು ಹೊರತರುವ ನಿರೀಕ್ಷೆಯಿದೆ. ಭಾರತೀಯ ನೌಕಾಪಡೆಯು ತನ್ನ ಮೊದಲ ಜಲಾಂತರ್ಗಾಮಿ ವಿರೋಧಿ ಯುದ್ಧದ ಸಿರ್ಕೋರ್ಸ್ಕಿ MH-60R ಸೀಹಾಕ್ ಹೆಲಿಕಾಪ್ಟರ್‌ಗಳನ್ನು ಈ ವರ್ಷದ ಅಂತ್ಯದ ವೇಳೆಗೆ ಭಾರತದಲ್ಲಿ ವಿತರಿಸುವ ನಿರೀಕ್ಷೆಯಿದೆ. ಮೊದಲ 2-3 ಹೆಲಿಕಾಪ್ಟರ್‌ಗಳನ್ನು ಈಗಾಗಲೇ USನ  ಸ್ಯಾನ್ ಡಿಯಾಗೋ ನೌಕಾ ನಿಲ್ದಾಣದಿಂದ ತರಬೇತಿ ಉದ್ದೇಶಗಳಿಗಾಗಿ ಭಾರತೀಯ ನೌಕಾಪಡೆಗೆ ಹಸ್ತಾಂತರಿಸಲಾಗಿದೆ. ಉಳಿದ 21 ಹೆಲಿಕಾಪ್ಟರ್‌ಗಳ ವಿತರಣೆಗಳು 2.3 ಶತಕೋಟಿ ಡಾಲರ್ ಫೆಬ್ರವರಿ 2020ರ ಒಪ್ಪಂದದಂತೆ ಆಗಲಿದೆ ಎಂದು ರಕ್ಷಣಾ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರತಕ್ಕೆ 500 ದಶಲಕ್ಷ ಡಾಲರ್ ಮಿಲಿಟರಿ ನೆರವು ನೀಡಲು ಮುಂದಾದ ಅಮೆರಿಕ

    ಭಾರತಕ್ಕೆ 500 ದಶಲಕ್ಷ ಡಾಲರ್ ಮಿಲಿಟರಿ ನೆರವು ನೀಡಲು ಮುಂದಾದ ಅಮೆರಿಕ

    ವಾಷಿಂಗ್ಟನ್: ರಷ್ಯಾದ ಮೇಲಿನ ಶಸ್ತ್ರಾಸ್ತ ಅವಲಂಬನೆಯನ್ನು ಕಡಿತಗೊಳಿಸಲು ಅಮೆರಿಕವು ಭಾರತಕ್ಕಾಗಿ ಬೃಹತ್ ಮಿಲಿಟರಿ ಪ್ಯಾಕೇಜ್ ನೀಡಲು ಮುಂದಾಗುತ್ತಿದೆ.

    ಭಾರತವು ರಷ್ಯಾದ ಮೇಲಿನ ಶಸ್ತ್ರಾಸ್ತಗಳ ಅವಲಂಬನೆಯನ್ನು ಕಡಿಮೆಗೊಳಿಸಲು ಜೊತೆಗೆ ಅಮೆರಿಕ-ಭಾರತದ ನಡುವಿನ ಮಿಲಿಟರಿ ಸಂಬಂಧವನ್ನು ಮತ್ತಷ್ಟು ಬಲಗೊಳಿಸಲು ಅಮೆರಿಕ 500 ಮಿಲಿಯನ್ ಡಾಲರ್‌ಗಳ (ಸುಮಾರು 3,800 ಕೋಟಿ ರೂ.) ಬೃಹತ್ ಮೊತ್ತದ ಪ್ಯಾಕೇಜ್ ಅನ್ನು ಸಿದ್ಧಪಡಿಸಿಕೊಂಡಿದೆ ಎಂದು ಅಮೆರಿಕ ಮೂಲಗಳು ತಿಳಿಸಿವೆ. ಇದನ್ನೂ ಓದಿ: 132 ಪ್ರಯಾಣಿಕರಿದ್ದ ಚೀನಾ ವಿಮಾನ ಪತನ ಉದ್ದೇಶಪೂರ್ವಕ – ಅಮೆರಿಕ ವರದಿ ಹೇಳಿದ್ದೇನು?

    Military (1)

    ಸ್ಟಾಕ್‌ಹೋಮ್ ಇಂಟರ್‌ನ್ಯಾಶನಲ್ ಪೀಸ್ ರಿಸರ್ಚ್ ಸಂಸ್ಥೆಯ ಪ್ರಕಾರ ಕಳೆದ ದಶಕದಲ್ಲಿ ಭಾರತವು ಯುಎಸ್‌ನಿಂದ 4 ಶತಕೋಟಿ ಡಾಲರ್ (ಅಂದಾಜು 3 ಸಾವಿರ ಕೋಟಿ) ಹಾಗೂ ರಷ್ಯಾದಿಂದ 25 ಶತಕೋಟಿ ಡಾಲರ್ (ಅಂದಾಜು 19 ಸಾವಿರ ಕೋಟಿ) ಗಿಂತ ಹೆಚ್ಚಿನ ಮೌಲ್ಯದ ಮಿಲಿಟರಿ ಉಪಕರಣಗಳನ್ನು ಖರೀದಿಸಿದೆ.

    ಸದ್ಯ ಅಮೆರಿಕದಿಂದ ಮೆಗಾ ಆಫರ್ ಸಿದ್ಧವಾಗುತ್ತಿದೆ. ಆದರೆ ಭಾರತದ ವಿದೇಶಾಂಗ ಸಚಿವಾಲಯ ಈವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ಮರಿಯುಪೋಲ್‍ನಲ್ಲಿ ರಷ್ಯಾಗೆ ಶರಣಾದ ಉಕ್ರೇನ್ ಸೈನಿಕರು

    ಅಮೆರಿಕ ಅಧ್ಯಕ್ಷ ಜೋ ಬೈಡನ್ ಆಡಳಿತವು ಭಾರತವನ್ನು ದೀರ್ಘಾವಧಿಯ ಭದ್ರತಾ ಪಾಲುದಾರರಾಗಿ ಮಾಡಿಕೊಳ್ಳಲು ಈ ಉಪಕ್ರಮ ರೂಪಿಸಿದೆ. ವಾಷಿಂಗ್ಟನ್ ಭಾರತವನ್ನು ವಿಶ್ವಾಸ ಪಾಲುದಾರನಾಗಿ ಕಾಣಲು ಬಯಸುತ್ತದೆ. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಅಗತ್ಯ ಸಾಧನಗಳನ್ನು ಸರಬರಾಜು ಮಾಡಲಿದೆ. ಇದನ್ನು ಖಚಿತಪಡಿಸಿಕೊಳ್ಳಲು ಅಮೆರಿಕ ಮುಂದಾಗಿದೆ ಎಂದು ಯುಎಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಫೈಟರ್ ಜೆಟ್‌ಗಳು, ನೌಕಾಪಡೆಯ ಹಡಗುಗಳು ಮತ್ತು ಯುದ್ಧ ಟ್ಯಾಂಕರ್‌ಗಳಂತಹ ಪ್ರಮುಖ ಶಸ್ತ್ರಾಸ್ತಗಳನ್ನು ಭಾರತಕ್ಕೆ ನೀಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

  • ಮಿಲಿಟರಿ ಮೇಲೆ ಅತಿಹೆಚ್ಚು ಖರ್ಚು ಮಾಡುವ ದೇಶಗಳಲ್ಲಿ ಭಾರತಕ್ಕೆ ಮೂರನೇ ಸ್ಥಾನ

    ಮಿಲಿಟರಿ ಮೇಲೆ ಅತಿಹೆಚ್ಚು ಖರ್ಚು ಮಾಡುವ ದೇಶಗಳಲ್ಲಿ ಭಾರತಕ್ಕೆ ಮೂರನೇ ಸ್ಥಾನ

    ನವದೆಹಲಿ: ಕೊರೊನಾ ಸಂಕಷ್ಟ, ಹಲವು ಆರ್ಥಿಕ ಸಮಸ್ಯೆಗಳ ನಡುವೆಯೂ ಅಮೆರಿಕ ಚೀನಾದ ಬಳಿಕ ಭಾರತ ಮಿಲಿಟರಿ ಮೇಲೆ ಅತಿ ಹೆಚ್ಚು ಖರ್ಚು ಮಾಡುತ್ತಿದೆ ಎಂದು ಸ್ಟಾಕ್‍ಹೋಮ್ ಇಂಟರ್‌ ನ್ಯಾಷನಲ್ ಪೀಸ್ ರಿಸರ್ಚ್ ಇನ್ಸ್ಟಿಟ್ಯೂಟ್ (SIPRI) ತಿಳಿಸಿದೆ. ವಿಶ್ವದ ಎಲ್ಲ ದೇಶಗಳ ಮಿಲಿಟರಿ ಹೂಡಿಕೆಗಳ ಮೇಲಿನ ಅಧ್ಯಯನದ ಬಳಿಕ ಅದು ತನ್ನ ವರದಿಯನ್ನು ಪ್ರಕಟಿಸಿದೆ.

    SIPRI ವರದಿಯ ಪ್ರಕಾರ ವಿಶ್ವದಲ್ಲಿ ಐದು ರಾಷ್ಟ್ರಗಳು ಮಿಲಿಟರಿ ಮೇಲೆ ಹೆಚ್ಚು ಖರ್ಚು ಮಾಡುತ್ತಿವೆ. ವಿಶ್ವದ ದೊಡ್ಡಣ್ಣ ಅಮೆರಿಕ ಮೊದಲ ಸ್ಥಾನದಲ್ಲಿದ್ದರೆ, ಚೀನಾ, ಭಾರತ, ಬ್ರಿಟನ್ ಮತ್ತು ರಷ್ಯಾ ನಂತರದ ಸ್ಥಾನಗಳಲ್ಲಿದೆ. 2021ರಲ್ಲಿ ವಿಶ್ವದ ಎಲ್ಲ ದೇಶಗಳು ಮಿಲಿಟರಿ ಮೇಲೆ 2.1 ಟ್ರಿಲಿಯನ್ ಯುಎಸ್ ಡಾಲರ್ ಖರ್ಚು ಮಾಡಿದ್ದು ಇದರಲ್ಲಿ ಈ ಐದು ದೇಶಗಳು 62% ಖರ್ಚು ಹೊಂದಿವೆ. ಇದನ್ನೂ ಓದಿ: ಪಿಎಂ ಮನೆ ಮುಂದೆ ಎಲ್ಲ ಧರ್ಮದ ಸಾಲುಗಳನ್ನು ಪಠಿಸಲು ಅವಕಾಶ ಕೊಡಿ: NCP ನಾಯಕಿ

    2021 ರಲ್ಲಿ ಭಾರತವೂ 76.6 ಶತಕೋಟಿ ಡಾಲರ್ ಮಿಲಿಟರಿ ಮೇಲೆ ಖರ್ಚು ಮಾಡಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ 0.9% ಹಾಗೂ 2012ಕ್ಕೆ ಹೋಲಿಸಿದರೆ 33% ನಷ್ಟು ಖರ್ಚು ಹೆಚ್ಚಾಗಿದೆ. ಭಾರತ ಚೀನಾ ಮತ್ತು ಭಾರತ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಪರಿಸ್ಥಿತಿ ಹೆಚ್ಚಾಗುತ್ತಿರುವ ಹಿನ್ನೆಲೆ ಭಾರತ ಮಿಲಿಟರಿ ಮೇಲೆ ಖರ್ಚು ಹೆಚ್ಚಿಸಲಾಗಿದೆ. ಅಲ್ಲದೇ ಇದು ಮಿಲಿಟರಿ ಶಸ್ತ್ರಾಸ್ತ್ರಗಳ ಉತ್ಪಾದನೆ ಸ್ವಾವಲಂಬನೆಯನ್ನು ಒಳಗೊಂಡಿದೆ.

    ಜಾಗತಿಕ ದೇಶಗಳ ಒಟ್ಟು ಮಿಲಿಟರಿ ಖರ್ಚುನಲ್ಲಿ ಅಮೆರಿಕ 38% ಹೂಡಿಕೆ ಹೊಂದಿದ್ದರೆ ಚೀನಾ 14% ಖರ್ಚು ಮಾಡುತ್ತಿದೆ. ಚೀನಾ 27 ವರ್ಷಗಳಿಂದ ಗಣನೀಯವಾಗಿ ಮಿಲಿಟರಿ ಖರ್ಚು ಹೆಚ್ಚು ಮಾಡುತ್ತಾ ಬಂದಿದೆ. 2016 ರಿಂದ 2019 ವರೆಗೂ ಮಿಲಿಟರಿ ಮೇಲೆ ಖರ್ಚು ಕಡಿಮೆ ಮಾಡಿದ್ದ ರಷ್ಯಾ ಈಗ ಮತ್ತೆ ತನ್ನ ಖರ್ಚು ಹೆಚ್ಚಿಸಿದೆ. ಉಕ್ರೇನ್‍ನಲ್ಲಿ ಮಿಲಿಟರಿ ವೆಚ್ಚವು 2021 ರಲ್ಲಿ 5.9 ಶತಕೋಟಿಗೆ ಕುಸಿದಿದ್ದರೂ, ಅದು ಅದರ GDP ಯ 3.2 ಶೇಕಡಾವನ್ನು ಹೊಂದಿದೆ. ಇದನ್ನೂ ಓದಿ: ಸರ್ಕಾರ ಕತ್ತೆ ಕಾಯ್ತಿದ್ಯಾ? ಕಡ್ಲೆಪುರಿ ತಿಂತಿದ್ಯಾ? ಆರೋಪಿ ವಿರುದ್ಧ FIR ದಾಖಲಿಸಿಲ್ಲ ಯಾಕೆ – ಪ್ರಿಯಾಂಕ್ ಖರ್ಗೆ ಪ್ರಶ್ನೆ