Tag: ಮಿಸಲಾತಿ

  • ಮೀಸಲಾತಿ ವಿಚಾರಕ್ಕೆ ಜೈಲಿಗೋದರೂ ಚಿಂತೆಯಿಲ್ಲ ; SDPI ಎಚ್ಚರಿಕೆ

    ಮೀಸಲಾತಿ ವಿಚಾರಕ್ಕೆ ಜೈಲಿಗೋದರೂ ಚಿಂತೆಯಿಲ್ಲ ; SDPI ಎಚ್ಚರಿಕೆ

    ಚಿತ್ರದುರ್ಗ: ನಮ್ಮ ಹೆಣ್ಮಕ್ಕಳು ಧರಿಸುವ ಹಿಜಬ್ (Hijab) ಹಾಗೂ ಅಜಾನ್ (Azan) ವಿಚಾರದಲ್ಲಿ ‌ಸರ್ಕಾರಕ್ಕೆ ನಮ್ಮ ತಲೆ ಕೊಟ್ಟೆವು. ಆದರೆ ಮೀಸಲಾತಿ (Reservation) ವಿಚಾರದಲ್ಲಿ ಜೈಲಿಗೆ ಹೋದರೂ ಚಿಂತೆಯಿಲ್ಲವೆಂದು ಎಸ್‌ಡಿಪಿಐ (SDPI) ಕಾರ್ಯದರ್ಶಿ ಜಾಕೀರ್ ಹುಸೇನ್ ಎಚ್ಚರಿಕೆ ನೀಡಿದರು.

    ಚಿತ್ರದುರ್ಗ (Chitradurga) ನಗರದ ಒನಕೆ ಓಬವ್ವ ವೃತ್ತದಲ್ಲಿ ಎಸ್‌ಡಿಪಿಐ ಕಾರ್ಯಕರ್ತರಿಂದ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ‌ಮುಸ್ಲಿಂ ಸಮುದಾಯಕ್ಕೆ 2ಬಿ ಮೀಸಲಾತಿ‌ ರದ್ದುಗೊಳಿಸಿದ್ದಕ್ಕೆ ಬಿಜೆಪಿ (BJP) ಸರ್ಕಾರದ ವಿರುದ್ಧ ಕಿಡಿಕಾರಿದರು. ಮುಸ್ಲಿಂ ಸಮುದಾಯಕ್ಕೆ 2ಬಿ ಮೀಸಲಾತಿಯನ್ನು ಪುನರ್ ಸ್ಥಾಪಿಸುವಂತೆ ಆಗ್ರಹಿಸಿದರು. ಬೊಮ್ಮಯಿ ನೇತೃತ್ವದ ಈ ಬಿಜೆಪಿ ಸರ್ಕಾರ ನಮ್ಮ ಹಕ್ಕನ್ನು ಹೀನಾಯವಾಗಿ ಕಸಿದುಕೊಂಡಿದೆ. ನಮ್ಮ ಹಕ್ಕು ನಮಗೆ ವಾಪಸ್ ಕೊಡದಿದ್ದರೆ ಬೃಹತ್ ಪ್ರತಿಭಟನೆ ನಡೆಸಿವುದಾಗಿ ಕಿಡಿಕಾರಿದರು. ಇದನ್ನೂ ಓದಿ: ಬಂಜಾರ ಸಮುದಾಯದ ಅಭಿವೃದ್ಧಿಗೆ ಬಿಎಸ್‌ವೈ ಸಾಕಷ್ಟು ಕೊಡುಗೆ ನೀಡಿದ್ದಾರೆ- ಆರಗ

    ನಾವು ಹಿಜಬ್ ಸೇರಿದಂತೆ ಅಜಾನ್‌ಗೆ ನಾವು ತಲೆ‌‌ ಕೊಟ್ಟೆವು. ಆದರೆ ಮೀಸಲಾತಿ ವಿಚಾರದಲ್ಲಿ ತಲೆ‌ ಹೋದರೂ ಚಿಂತೆಯಿಲ್ಲ, ಜೈಲಿಗೆ ಹೋದರು ಚಿಂತೆಯಿಲ್ಲ. ನಾವೆಲ್ಲ ಉಗ್ರ ಹೋರಾಟ ಮಾಡುತ್ತೇವೆಂದು ಜಾಕೀರ್ ಹುಸೇನ್ ಸರ್ಕಾರಕ್ಕೆ ಎಚ್ಚರಿಸಿದರು. ಈ ವೇಳೆ ಜಿಲ್ಲಾಧ್ಯಕ್ಷ‌ ಬಾಳೇಕಾಯಿ ಶ್ರೀನಿವಾಸ್ ಸೇರಿದಂತೆ ಎಸ್‌ಡಿಪಿಐ ಕಾರ್ಯಕರ್ತರು ಇದ್ದರು. ಇದನ್ನೂ ಓದಿ: ರಾಹುಲ್ ಗಾಂಧಿ ಕ್ಷಮೆ ಕೇಳದಿದ್ರೆ ಮತ್ತೊಂದು FIR ದಾಖಲಿಸುತ್ತೇನೆ: ರಂಜಿತ್ ಸಾವರ್ಕರ್

  • ಮೇಲ್ವರ್ಗದ ಬಡವರಿಗೆ ಶೇ.10 ಮೀಸಲಾತಿ ಅಳಿವು-ಉಳಿವು- ಇಂದು ಸುಪ್ರೀಂನಲ್ಲಿ ನಿರ್ಧಾರ

    ಮೇಲ್ವರ್ಗದ ಬಡವರಿಗೆ ಶೇ.10 ಮೀಸಲಾತಿ ಅಳಿವು-ಉಳಿವು- ಇಂದು ಸುಪ್ರೀಂನಲ್ಲಿ ನಿರ್ಧಾರ

    ನವದೆಹಲಿ: ಶಿಕ್ಷಣ (Education) ಹಾಗೂ ಸರ್ಕಾರಿ ಉದ್ಯೋಗದಲ್ಲಿ (Government Job) ಆರ್ಥಿಕವಾಗಿ ಹಿಂದುಳಿದ ಮೇಲರ್ಗದ ಬಡ ಅಭ್ಯರ್ಥಿಗಳಿಗೆ ಶೇ.10ರಷ್ಟು ಮೀಸಲಾತಿ (Reservation) ನೀಡಲು ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಂದಿದ್ದ 103ನೇ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆ ಕುರಿತಂತೆ ಸುಪ್ರೀಂಕೋರ್ಟ್ (Supreme Court) ಸೋಮವಾರ ಮಹತ್ವದ ತೀರ್ಪು ಪ್ರಕಟಿಸಲಿದೆ.

    ಹೀಗಾಗಿ `ಮೇಲ್ವರ್ಗದ ಮೀಸಲು’ ಎಂದೇ ಕರೆಯಲ್ಪಡುವ ಈ ಮೀಸಲಾತಿ ಮುಂದುವರಿಯುತ್ತದೆಯೇ? ಅಥವಾ ರದ್ದಾಗುತ್ತದೆಯೇ? ಅಥವಾ ಬದಲಾವಣೆಯಾಗುತ್ತದೆಯೇ ಎಂಬ ಕುತೂಹಲ ಗರಿಗೆದರಿದೆ. ಇದನ್ನೂ ಓದಿ: ಹೇಮಾವತಿ ಹಿನ್ನೀರಿನಲ್ಲಿ ತೇಲುವ ಹಡಗು- ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಶೆಟ್ಟಿಹಳ್ಳಿ ಚರ್ಚ್

    ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ (CJI) ಉದಯ್ ಉಮೇಶ್ ಲಲಿತ್ (UU Lalit), ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ, ನ್ಯಾಯಮೂರ್ತಿ ಎಸ್.ರವೀಂದ್ರ ಭಟ್, ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಹಾಗೂ ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ತೀರ್ಪು ಪ್ರಕಟಿಸಲಿದೆ. ಇದನ್ನೂ ಓದಿ: ಚಂದ್ರಗ್ರಹಣ – ನಾಳೆ ರಾಜ್ಯದಲ್ಲಿ ಹಲವು ದೇವಾಲಯಗಳು ಬಂದ್

    court order law

    ಏನಿದು ಪ್ರಕರಣ?
    ಶಿಕ್ಷಣ ಹಾಗೂ ಉದ್ಯೋಗದಲ್ಲಿ ಸಾಮಾಜಿಕ ಸಮಾನತೆ ತರಲು ಮೇಲ್ವರ್ಗಗಳಲ್ಲಿರುವ ಬಡವರಿಗೆ ಕೇಂದ್ರ ಸರ್ಕಾರ 2019ರಲ್ಲಿ ಶೇ.10 ಮೀಸಲಾತಿ ನೀಡಿ ಕಾಯ್ದೆ ಜಾರಿಗೊಳಿಸಿತ್ತು. ಇದು ಒಟ್ಟು ಮೀಸಲಾತಿಗೆ ಇರುವ ಶೇ.50 ಮಿತಿಗೆ ಹೊರತಾಗಿದೆ. ಇದನ್ನು ಪ್ರಶ್ನಿಸಿ 40ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿದ್ದವು, ಸಾಂವಿಧಾನಿಕ ಪೀಠ ಅವುಗಳ ವಿಚಾರಣೆ ಪೂರ್ಣಗೊಳಿಸಿದ್ದು, ಇಂದು ಮೀಸಲಾತಿ ಬಗ್ಗೆ ತೀರ್ಪು ಪ್ರಕಟಿಸಲಿದೆ.

    Live Tv
    [brid partner=56869869 player=32851 video=960834 autoplay=true]

  • ಮುಸ್ಲಿಮರಿಗೂ ಮೀಸಲಾತಿ ಹೆಚ್ಚಿಸಿ – ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ

    ಮುಸ್ಲಿಮರಿಗೂ ಮೀಸಲಾತಿ ಹೆಚ್ಚಿಸಿ – ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ

    ಬೆಳಗಾವಿ: ರಾಜ್ಯದಲ್ಲಿನ ಮುಸ್ಲಿಂ (Muslims) ಅಲ್ಪಸಂಖ್ಯಾತರಿಗೂ ಮೀಸಲಾತಿ (Reservation) ಪ್ರಮಾಣ ಹೆಚ್ಚಿಸುವಂತೆ ಆಗ್ರಹಿಸಿ ಉತ್ತರ ಕರ್ನಾಟಕ ಅಂಜುಮನ್-ಎ-ಇಸ್ಲಾಂ ಸಂಘಟನೆ (Muslim Organization) ಜಿಲ್ಲಾಡಳಿತದ ಮೂಲಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದೆ.

    ಇಲ್ಲಿನ ಜಿಲ್ಲಾಡಳಿತದ ಎದುರು ಪ್ರತಿಭಟನೆ ನಡೆಸಿದ ಸಂಘಟನೆ ಪ್ರಮುಖರು, ರಾಜ್ಯದಲ್ಲಿ ಮುಸ್ಲಿಂ (Muslims) ಅಲ್ಪಸಂಖ್ಯಾತರು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಜನಸಂಖ್ಯೆಗೆ (Population) ಅನುಗುಣವಾಗಿ ನೋಡಿದರೂ ಶೈಕ್ಷಣಿಕ ಸಂಸ್ಥೆಗಳಲ್ಲಾಗಲಿ, ಸರ್ಕಾರಿ ಉದ್ಯೋಗ ಕ್ಷೇತ್ರಗಳಲ್ಲಾಗಲಿ ಸಮರ್ಥವಾದ ಪ್ರಾತಿನಿಧ್ಯ ಹೊಂದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪತ್ರಕರ್ತರಿಗೆ ಸಿಎಂ ಕಚೇರಿಯಿಂದ ಲಂಚ ಆರೋಪ – ಬೊಮ್ಮಾಯಿ ರಾಜೀನಾಮೆಗೆ ಸುರ್ಜೇವಾಲಾ ಆಗ್ರಹ

    2006ರಲ್ಲಿ ಸಾಚಾರ ಸಮಿತಿಯು ಭಾರತೀಯ ಮುಸ್ಲಿಮರು (Indian Muslims) ಎದುರಿಸುತ್ತಿರುವ ಪರಿಸ್ಥಿತಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗಿಂತಲೂ ಹೆಚ್ಚಿನದ್ದಾಗಿದೆ. ಇಂದಿಗೂ ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದ ಯಾವುದೇ ನಾಗರಿಕರ ವರ್ಗಗಳ ಏಳಿಗೆಗಾಗಿ, ರಾಜ್ಯಾಧೀನ ಸೇವೆಗಳಲ್ಲಿ ಸಾಕಷ್ಟು ಪ್ರಾತಿನಿಧ್ಯ ಹೊಂದಿಲ್ಲದೇ ಇರುವುದರಿಂದ ಹಾಗೂ ಸಂವಿಧಾನದ (Constitution Of India) 15 (4) ನೇ ಮತ್ತು 16 (4)ನೇ ವಿಧಿಯು ಹಿಂದುಳಿದ ಯಾವುದೇ ನಾಗರಿಕರ ವರ್ಗಗಳ ಪರವಾಗಿ ನೇಮಕಾತಿ ಹುದ್ದೆಗಳಲ್ಲಿ ಮೀಸಲಾತಿಗಾಗಿ ಉಪಬಂಧ ಕಲ್ಪಿಸಲು ರಾಜ್ಯಕ್ಕೆ ಅಧಿಕಾರ ನೀಡಿರುವುದರಿಂದ ಶೀಘ್ರವೇ ಒಂದು ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಸಮಿತಿಯ ಮೂಲಕ ಶೈಕ್ಷಣಿಕ ಸ್ಥಿತಿಗತಿ ಕುರಿತು ವರದಿ ಪಡೆದು ರಾಜ್ಯದ ಮುಸ್ಲಿಂ ಅಲ್ಪಸಂಖ್ಯಾತರ ಮೀಸಲಾತಿ ಪ್ರಮಾಣವನ್ನು ಶೇ.4 ರಿಂದ ಶೇ.8ಕ್ಕೆ ಹೆಚ್ಚಿಸಿ ನ್ಯಾಯ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮರೆಯದ ಮಾಣಿಕ್ಯನಿಗೆ ನನ್ನದೊಂದು ನಮನ: ಕನ್ನಡದಲ್ಲಿಯೇ ಕೇಜ್ರಿವಾಲ್ ಟ್ವೀಟ್

    ಪ್ರತಿಭಟನೆ ವೇಳೆ ಜೆ.ಎಸ್.ಹಡಗಲಿ, ಎ.ಬಿ.ಅತ್ತಾರ, ಹೆಚ್.ಎಂ.ಕೊಪ್ಪದ, ಜೆ.ಎನ್.ಗಲಗಲಿ, ವಾಹಿದ ಅತ್ತಾರ ಮೊದಲಾದವರು ಇದ್ದರು.

    Live Tv
    [brid partner=56869869 player=32851 video=960834 autoplay=true]