ಬೆಂಗಳೂರು: ನಟ ಅರ್ಜುನ್ ಸರ್ಜಾ ಪರವಾಗಿ ನಟ ದೃವ ಸರ್ಜಾ ಅವರು ನಟಿ ಶ್ರುತಿ ಹರಿಹರನ್ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ರದ್ದು ಪಡಿಸಲು ನ್ಯಾಯಾಲಯ ನಿರಾಕರಿಸಿದೆ. ಪರಿಣಾಮ ದೃವ ಸರ್ಜಾರ ಅರ್ಜಿ ಊರ್ಜಿತವಾಗಿದ್ದು, ಶ್ರುತಿ ಹರಿಹರನ್ ಅವರಿಗೆ ಸಂಕಷ್ಟ ಎದುರಾಗಿದೆ.
ತಮ್ಮ ಮೇಲೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದು ಪಡಿಸುವಂತೆ ಕೋರಿ ನಟಿ ಶ್ರುತಿ ಹರಿಹರನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್, ಶ್ರುತಿ ಹರಿಹರಿನ್ ಅವರ ಅರ್ಜಿಯನ್ನು ಇಂದು ವಜಾಗೊಳಿಸಿದೆ.
ನಟ ಅರ್ಜನ್ ಸರ್ಜಾ ವಿರುದ್ಧ ಮೀಟೂ ಆರೋಪ ಮಾಡಿದ್ದ ಶ್ರುತಿ ಹರಿಹರನ್ ಅವರ ವಿರುದ್ಧ ಅರ್ಜುನ್ ಸರ್ಜಾ ಅವರ ಕುಟುಂಬಸ್ಥರು ಮಾನನಷ್ಟ ಮೊಕದ್ದಮೆ ದಾಖಲಿಸಲು ನಿರ್ಧರಿಸಿದ್ದರು. ಈ ಹಿನ್ನೆಲೆಯಲ್ಲಿ ದೃವ ಸರ್ಜಾ ಅವರು ಶ್ರುತಿ ಹರಿಹರನ್ ಅವರ ವಿರುದ್ಧ 5 ಕೋಟಿ ರೂ. ಪರಿಹಾರ ಕೋರಿ ಮೊಕದ್ದಮೆ ದಾಖಲಿಸಿದ್ದರು.
ಬೆಂಗಳೂರು: ಖ್ಯಾತ ಗಾಯಕ ರಘು ದೀಕ್ಷಿತ್ ಹಾಗೂ ಡ್ಯಾನ್ಸರ್ ಮಯೂರಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಪಡೆಯುವುದಕ್ಕೆ ನಿರ್ಧರಿಸಿದ್ದಾರೆ.
ಕಳೆದ ಒಂದು ವರ್ಷದಿಂದ ರಘು ಮತ್ತು ಮಯೂರಿ ಬೇರೆ ಬೇರೆಯಾಗಿ ವಾಸಿಸುತ್ತಿದ್ದು, ಇದೀಗ ಕೌಟುಂಬಿಕ ಕಲಹ ನ್ಯಾಯಾಲಯಕ್ಕೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಕೆಲ ತಿಂಗಳ ಹಿಂದೆ ರಘು ದೀಕ್ಷಿತ್ ಮೇಲೆ ಮೀಟೂ ಆರೋಪ ಕೇಳಿ ಬಂದಾಗಲೇ ದಂಪತಿಯ ಮಧ್ಯೆ ಇದ್ದ ಮನಸ್ತಾಪ ಬಯಲಾಗಿತ್ತು. ಇದೀಗ ಜೋಡಿ ಬೇರೆಯಾಗಿರೋದು ಖಚಿತವಾಗಿದೆ.
ಸದ್ಯಕ್ಕೆ ನ್ಯಾಯಾಲಯ ದಂಪತಿಗೆ 6 ತಿಂಗಳ ಗಡುವು ನೀಡಿದ್ದು, ಡಿಸೆಂಬರ್ ನಲ್ಲಿ ವಿಚಾರಣೆ ನಡೆಸುವುದಾಗಿ ಹೇಳಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಮೀಟೂ ಆರೋಪ:
ಗಾಯಕಿ ಚಿನ್ಮಯಿ ಶ್ರೀಪಾದ ಅವರು ರಘು ದೀಕ್ಷಿತ್ ವಿರುದ್ಧ ಮೀಟೂ ಆರೋಪ ಮಾಡಿದ್ದರು. ಚಿನ್ಮಯ್ ತನ್ನ ಸ್ನೇಹಿತರಿಗೆ ಆದ ಅನುಭವಗಳನ್ನು 2 ಪತ್ರಗಳ ಮೂಲಕ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು.
ಈ ಆರೋಪ ಕೇಳಿಬರುತ್ತಿದ್ದಂತೆಯೇ ಪ್ರತಿಕ್ರಿಯಿಸಿದ್ದ ಗಾಯಕ ರಘು ದೀಕ್ಷಿತ್, ಚಿನ್ಮಯಿ ಶ್ರೀಪಾದ್ ಕಾರ್ಯವನ್ನು ಶ್ಲಾಘಿಸಿದ್ದರು. ಆದರೆ ಅವರು ಹೇಳಿದ್ದರಲ್ಲಿ ಕೆಲ ಭಾಗ ನಿಜವಿದ್ದರೂ, ಎಲ್ಲವೂ ನಿಜವಲ್ಲ ಎಂದು ತಮ್ಮ ಟ್ವಿಟ್ಟರಿನಲ್ಲಿ ಪ್ರಕಟಿಸಿದ್ದರು. ನಾನು ಆಕೆಯನ್ನ ಹಗ್ ಮಾಡಿ ಕಿಸ್ ಮಾಡುವುದಕ್ಕೆ ಪ್ರಯತ್ನಿಸಿದ್ದು ನಿಜ, ಆದರೆ ಅದಕ್ಕೆ ನಾನು ಕ್ಷಮೆ ಕೂಡ ಕೇಳಿದ್ದೇನೆ. ಈಗಲೂ ಕ್ಷಮೆ ಕೇಳುತ್ತೇನೆ ಅಂದಿದ್ದರು.
ರಘು ದೀಕ್ಷಿತ್ ಬಗ್ಗೆ ಆರೋಪ ಬರುತ್ತಿದ್ದಂತೆಯೇ ಪತ್ನಿ ಮಯೂರಿ ಕೂಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದರು. “ಲೈಂಗಿಕ ಕಿರುಕುಳಕ್ಕೆ ಬಲಿಪಶುಗಳಾದ ಪರವಾಗಿ ನಾನು ಸದಾ ನಿಲ್ಲುತ್ತೇನೆ. ಅಲ್ಲದೆ ಸದಾ ನನ್ನ ಬೆಂಬಲವಿದೆ. ಇಂತಹ ಕಿರುಕುಳ ಆದಾಗ ಕಾನೂನು ಹೋರಾಟ ಮಾಡೋದು ಸೂಕ್ತ ಎನಿಸಿಸುತ್ತದೆ. ಯಾಕೆಂದರೆ ಆಗ ಇತರೆ ಮಹಿಳೆಯರ ಘನತೆಗೆ ಚ್ಯುತಿ ತರುವ ಧೈರ್ಯ ಪುರುಷರಿಗೆ ಬರಲ್ಲವೆಂದು ಅಂದುಕೊಂಡಿದ್ದೇನೆ” ಎಂದು ಹೇಳಿದ್ದರು.
ಬೆಂಗಳೂರು: ನಟಿ ಶೃತಿ ಹರಿಹರನ್ ಅವರು ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ `ಲೈಂಗಿಕ ಕಿರುಕುಳ’ ಆರೋಪ ಮಾಡಿರುವುದು ಇದೀಗ ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲದೇ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಈ ಬೆನ್ನಲ್ಲೇ ಇದಕ್ಕೆ ಇದೀಗ ಧರ್ಮದ ನಂಟು ಅಂಟಿಸಲಾಗಿದೆ.
ಅರ್ಜುನಾ ಸರ್ಜಾ ಅವರು ಹನುಮ ಭಕ್ತ, ಆರೋಪದ ಹಿಂದೆ ಹಿಂದೂ ವಿರೋಧಿ ಅಜೆಂಡಾವಿದೆ. ಸರ್ಜಾ ಅವರು ಹಿಂದೂಧರ್ಮ ಅನುಸರಿಸುತ್ತಾರೆ. ಅವರು ಚೆನ್ನೈನಲ್ಲಿ ಹನುಮನ ಮೂರ್ತಿ ನಿರ್ಮಿಸಿದ್ದಾರೆ. ಅರ್ಜುನ್ ಸರ್ಜಾ ಅವರ ತಂದೆ ಆರ್‍ಎಸ್‍ಎಸ್‍ನಲ್ಲಿದ್ದವರು ಎಂದು ಅರ್ಜುನ್ ಸರ್ಜಾ ಪರ ಕನ್ನಡ ಹೋರಾಟಗಾರ, ಉದ್ಯಮಿ ಪ್ರಶಾಂತ್ ಸಂಬರ್ಗಿ ನಿಂತಿದ್ದಾರೆ.
ಶೃತಿ ಹರಿಹರನ್ ತಂದೆ ಕಮ್ಯೂನಿಸ್ಟ್ ಬೆಂಬಲಿಗರು. ಶೃತಿ ಹರಿಹರನ್ ಅವರ ಮೀಟೂ ಆರೋಪದ ಹಿಂದೆ ಮೋದಿ ವಿರೋಧಿ, ಹಿಂದೂ ವಿರೋಧಿ, ಬಿಜೆಪಿ ವಿರೋಧಿ ಅಜೆಂಡಾವಿದೆ. ಕವಿತಾ ಲಂಕೇಶ್, ನಟ ಚೇತನ್, ರೂಪಾ ಅಯ್ಯರ್ ಇವರೆಲ್ಲ ಕನ್ನಡ ಸಿನಿಮಾ ಲೋಕದ ಎಡಪಂಥಿಯರು. ಪ್ರಕಾಶ್ ರೈ ಅಂತ ವುಮೆನೈಜರ್ ಹಿಂದೆ ಮುಂದೆ ನೋಡದೆ ಸಪೋರ್ಟ್ ಮಾಡ್ತಿದ್ದಾರೆ. ಇದು ಸಂಪೂರ್ಣ ವ್ಯವಸ್ಥಿತವಾದ ಪೊಲಿಟಿಕಲ್ ಡ್ರಾಮಾ ಎಂದು ಪ್ರಶಾಂತ್ ಸಂಬರ್ಗಿ ಕಿಡಿಕಾರಿದ್ದಾರೆ. ಇದನ್ನು ಓದಿ: ತಾವೇ ಆಂಜನೇಯ ಮೂರ್ತಿಗೆ ಕೆತ್ತನೆ ಮಾಡಿದ ಅರ್ಜುನ್ ಸರ್ಜಾ – ವಿಡಿಯೋ
ಶೃತಿ ಹರಿಹರನ್ ಆರೋಪವೇನು?:
ಮ್ಯಾಗಜೀನ್‍ವೊಂದರ ಸಂದರ್ಶನದ ವೇಳೆ ನಟ ಅರ್ಜುನ್ ವಿರುದ್ಧ ಆರೋಪ ಮಾಡಿದ ಶೃತಿ ಹರಿಹರನ್, ವಿಸ್ಮಯ ಚಿತ್ರೀಕರಣದ ವೇಳೆ ತನ್ನ ಮೇಲಾದ ಲೈಂಗಿಕ ಕಿರುಕುಳವಾದ ಅನುಭವವನ್ನು ಬಿಚ್ಚಿಟ್ಟಿದ್ದರು. ಕಳೆದ ವರ್ಷ `ವಿಸ್ಮಯ’ ಅನ್ನೋ ಸಿನಿಮಾವೊಂದನ್ನು ನಾನು ಮಾಡಿದ್ದೆ. ಚಿತ್ರದಲ್ಲಿ ಅರ್ಜುನ್ ಅರ್ಜಾ ಅವರು ನನ್ನ ಸಹನಟನಾಗಿ ಅಭಿನಯಿಸಿದ್ದರು. ಚಿತ್ರದಲ್ಲಿ ನಾನು ಅವರ ಹೆಂಡತಿಯಾಗಿ ನಟಿಸುತ್ತಿದ್ದೆ, ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ `ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?’ ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ಆ ಅಪ್ಪುಗೆಯಿಂದ ಒಮ್ಮೆಲೆ ನಾನು ತಬ್ಬಿಬ್ಬಾಗಿದ್ದು, ಆ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿದ್ದು, ಕೂಡಲೇ ನಿರ್ದೇಶಕರ ಬಳಿ ತೆರಳಿ `ಇನ್ನು ಮುಂದೆ ನಾನು ರಿಹರ್ಸಲ್ ಗೆ ಬರಲ್ಲ, ಬರೀ ಶೂಟಿಂಗ್ ಗಷ್ಟೇ ಕರೆಯಿರಿ’ ಅಂತ ಹೇಳಿ ಬಂದುಬಿಟ್ಟೆ. ಆ ಬಳಿಕ ನಾನು ಬರೀ ಶೂಟಿಂಗ್ ಗೆ ಮಾತ್ರ ಹೋಗಿ ಬರುತ್ತಿದ್ದೆ ಅಂತ ಶೃತಿ ಹೇಳಿದ್ದರು.
ಇಷ್ಟೆಲ್ಲಾ ಆದ್ರೂ ಅರ್ಜುನ್ ಸರ್ಜಾ ಮಾತ್ರ ವಿಚಲಿತನಾದಂತೆ ಕಾಣಲಿಲ್ಲ. ಯಾಕಂದ್ರೆ ಅದಾದ ಬಳಿಕ ಅವರು ನನ್ನ ಜೊತೆ ಮಾತನಾಡುವಾಗಲೂ ಬಳಸಿದ ಭಾಷೆ ಸಭ್ಯವಾಗಿರಲಿಲ್ಲ. ಪದೇ ಪದೇ ಡಿನ್ನರ್ ಗೆ ಕರೆಯುತ್ತಿದ್ದರು. `ರೆಸಾರ್ಟ್ ಗೆ ಹೋಗೋಣ ಬಾ’ ಎಂದು ಕರೆಯಲು ಆರಂಭಿಸಿದ್ರು. ಹೀಗೆ ಕರೆಯುವಾಗ ನಾನು ನೇರವಾಗಿ `ಇಲ್ಲ, ನಾನು ಬರಲ್ಲ’ ಅಂತ ಹೇಳುತ್ತಿದ್ದೆನು. ನನ್ನ ಈ ಮಾತುಗಳನ್ನೂ ಅವರು ಗಂಭೀರವಾಗಿ ತೆಗೆದುಕೊಳ್ಳುತ್ತಿರಲಿಲ್ಲ. `ನೋ ಅಂದ್ರೆ ನೋ’ ಎಂಬುದರ ಅರ್ಥವೇ ಅವರಿಗೆ ಆಗುತ್ತಿಲ್ಲವಲ್ಲ ಅಂತ ನನಗೆ ನಿಜವಾಗಿಯೂ ಅಚ್ಚರಿಯಾಗುತ್ತಿತ್ತು. ಯಾಕಂದ್ರೆ ಅವರಿಗೆ ಹೀಗೆ ಕರೆದಾಗ ಯಾರೂ `ನೋ’ ಅಂತ ಹೇಳಿರಲಿಲ್ಲವೋ ಏನೋ, ಅದಕ್ಕೆ ಅವರು ನನ್ನ ನೇರ ಮಾತುಗಳನ್ನು ಕಡೆಗಣಿಸುತ್ತಿದ್ದರು ಅಂತ ಅವರು ತನಗಾದ ಅನುಭವವನ್ನು ಬಿಚ್ಚಿಟ್ಟಿದ್ದರು.
ಅರ್ಜುನ್ ಸರ್ಜಾ ಹೇಳಿದ್ದೇನು?
ಶೃತಿ ಆರೋಪದಿಂದ ನನಗೆ ತುಂಬಾ ನೋವಾಗಿದೆ. ಇದೂವರೆಗೂ ನಾನು 60 ರಿಂದ 70 ನಟಿಯರ ಜೊತೆ ನಟಿಸಿದ್ದೇನೆ. ಯಾರೂ ಸಹ ಈ ರೀತಿಯ ಆರೋಪ ಮಾಡಿಲ್ಲ. ಜೊತೆಯಲ್ಲಿಯೂ ಕೂರಿಸಿಕೊಂಡು ದೃಶ್ಯದಲ್ಲಿ ಹೇಗೆ ನಟಿಸಬೇಕು? ಡೈಲಾಗ್ ನಲ್ಲಿ ಏನಾದರೂ ಬದಲಾವಣೆ ಮಾಡಬೇಕು ಎಂಬುದರ ಕುರಿತು ಚರ್ಚಿಸುತ್ತೇವೆ. ನಮ್ಮ ವೃತ್ತಿಯನ್ನು ಮುಂದಿಟ್ಟುಕೊಂಡು ಇಂತಹ ಕೆಳಮಟ್ಟದಲ್ಲಿ ನಾನು ಎಂದೂ ಇಳಿದಿಲ್ಲ. ನಮ್ಮ ಪ್ರೊಫೆಶನ್ ಮುಂದೆ ಇಟ್ಟುಕೊಂಡು ಒಂದು ಹೆಣ್ಣಿನ ಮೈ ಮುಟ್ಟಬೇಕು ಎಂಬ ಚೀಪ್ ಮೆಂಟಾಲಿಟಿ ನನ್ನಲ್ಲಿ ಇಲ್ಲ. ನಾನು ಮೀಟೂ ವೇದಿಕೆ ಬಗ್ಗೆ ತುಂಬಾ ಗೌರವ ಹೊಂದಿದ್ದೇನೆ. ಈ ದೊಡ್ಡ ಅಭಿಯಾನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಶೃತಿ ಮಾತನಾಡುವ ಮಾತುಗಳಿಗೆ ಯಾವುದಾದರೂ ಆಧಾರವಿದೆಯಾ? ಶೃತಿ ಆರೋಪದ ವಿರುದ್ಧ ನಾನು ಮಾನನಷ್ಟ ಮೊಕದ್ದಮೆ ಹಾಕುತ್ತೇನೆ ಅಂತ ಹೇಳಿದ್ದರು.
ನಾನು ಪ್ರತಿಕ್ರಿಯಿಸಬಾರದು ಅಂತಾ ನಿರ್ಧರಿಸಿದ್ದೆ. ಆದ್ರೆ `ಮೌನಂ ಸಮ್ಮತಿ ಲಕ್ಷ್ಮಣಂ’ ಎಂದು ಅರ್ಥವಾಗುತ್ತದೆ ಎಂದು ಪಬ್ಲಿಕ್ ಟಿವಿ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದೇನೆ. ಒಂದೂವರೆ ವರ್ಷದ ಹಿಂದೆ ನಡೆದ ಸಿನಿಮಾ ಮುಗಿದಿದೆ. ಅಂದೇ ನಿರ್ದೇಶಕರಿಗೆ ಅಥವಾ ಚಲನಚಿತ್ರ ಮಂಡಳಿಗೆ ದೂರು ಕೊಡಬೇಕಿತ್ತು. ಇಷ್ಟು ದಿನ ಸುಮ್ಮನಿದ್ದು ಈವಾಗ ಯಾಕೆ ಹೇಳುತ್ತಿದ್ದಾರೆಂದು ಗೊತ್ತಿಲ್ಲ ಎಂದು ತಿಳಿಸಿದ್ದರು.