Tag: ಮೀಡಿಯಾ

  • ಇನ್ಮುಂದೆ ನಾನು ಮೀಡಿಯಾ ಅಡ್ರೆಸ್‌ ಮಾಡಲ್ಲ: ಪರಮೇಶ್ವರ್‌

    ಇನ್ಮುಂದೆ ನಾನು ಮೀಡಿಯಾ ಅಡ್ರೆಸ್‌ ಮಾಡಲ್ಲ: ಪರಮೇಶ್ವರ್‌

    ಬೆಂಗಳೂರು: ಇನ್ಮುಂದೆ ನಾನು ಮೀಡಿಯಾ (Media) ಅಡ್ರೆಸ್ ಮಾಡಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ (Parameshwar) ಹೇಳಿದ್ದಾರೆ.

    ಇಂದು ಬೆಳಗ್ಗೆ ನಿವಾಸದ ಮುಂದೆ ನಿಂತಿದ್ದ ಮಾಧ್ಯಮಗಳ ಕೇಳಿದ ಪ್ರಶ್ನೆಗೆ, ಇನ್ಮುಂದೆ ನಾನು ಮೀಡಿಯಾ ಅಡ್ರೆಸ್ ಮಾಡಲ್ಲ. ನನಗೆ ಇನ್‌ಸ್ಟ್ರಕ್ಷನ್‌ ಬಂದಿದೆ. ಏನಾದರೂ ಇದ್ದರೆ ನಾನೇ ಕರೆದು ಬಂದು ಮಾತನಾಡುತ್ತೇನೆ. ಸುಮ್ನೆ ನೀವು ಇಲ್ಲಿ ಕಾಯೋದು ಬೇಡ ಎಂದು ತಿಳಿಸಿದರು. ಇದನ್ನೂ ಓದಿ: ಮುಸ್ಲಿಂ ಯುವತಿ, ಹಿಂದೂ ಯುವಕನ ಮೇಲೆ ನೈತಿಕ ಪೊಲೀಸ್‌ಗಿರಿ ಪ್ರಕರಣ – ಅಪ್ರಾಪ್ತ ಸೇರಿ ಐವರ ಬಂಧನ

    ಸುದ್ದಗುಂಟೆಪಾಳ್ಯದ ಭಾರತಿ ಲೇಔಟ್‌ನಲ್ಲಿ ಏ. 3ರಂದು ಮಧ್ಯರಾತ್ರಿ ಯುವತಿಯನ್ನು ಹಿಂಬಾಲಿಸಿ ಯುವಕನೊಬ್ಬ ಅನುಚಿತವಾಗಿ ವರ್ತಿಸಿದ್ದ. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಪರಮೇಶ್ವರ್‌ ದೊಡ್ಡ ನಗರದಲ್ಲಿ ಅಲ್ಲಿ ಇಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಎಂದು ಹೇಳಿದ್ದರು. ಈ ಹೇಳಿಕೆಗೆ ಭಾರೀ ಟೀಕೆ ವ್ಯಕ್ತವಾಗಿತ್ತು. ಇದನ್ನೂ ಓದಿ: ಪತ್ನಿಯ ಜೊತೆಗಿದ್ದ ಪ್ರಿಯಕರನ ಬರ್ಬರ ಹತ್ಯೆ – ಒಂದೇ ಗಂಟೆಯಲ್ಲಿ ಪತ್ತೆ ಹಚ್ಚಿದ ತಾರಾ!

    ವಿರೋಧ ವ್ಯಕ್ತವಾಗುತ್ತಿದ್ದಂತೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ಒಂದು ವೇಳೆ ನನ್ನ ಹೇಳಿಕೆ ನಾಡಿನ ತಾಯಂದಿರ ಮನಸ್ಸಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದರು.

    ನನ್ನ ಹೇಳಿಕೆಯನ್ನು ಬೇರೆಬೇರೆ ರೂಪಕ್ಕೆ ತೆಗೆದುಕೊಂಡು ಹೋಗಬೇಕಿಲ್ಲ‌. ಬಿಜೆಪಿಯವರು ಉದ್ದೇಶಪೂರ್ವಕವಾಗಿ ನನ್ನ ಹೇಳಿಕೆಯನ್ನು ರಾಜಕೀಯಕ್ಕೆ ಬಳಕೆ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದರು.

  • ಕ್ಷಮೆ ಕೇಳಿ ಪತ್ರ ಬರೆದ ದರ್ಶನ್: ಮಾಧ್ಯಮ ನಡುವಿನ ವಿವಾದ ಸುಖಾಂತ್ಯ

    ಕ್ಷಮೆ ಕೇಳಿ ಪತ್ರ ಬರೆದ ದರ್ಶನ್: ಮಾಧ್ಯಮ ನಡುವಿನ ವಿವಾದ ಸುಖಾಂತ್ಯ

    ಮಾಧ್ಯಮಗಳಿಗೆ (Media) ಅವಾಚ್ಯ ಪದಗಳಿಂದ ನಿಂದಿಸಿದ್ದರು ಎನ್ನುವ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ನಟ ದರ್ಶನ (Darshan) ಮೇಲೆ ಅಘೋಷಿತ ನಿರ್ಬಂಧ ಹೇರಲಾಗಿತ್ತು. ಅವರ ಕುರಿತಾದ ಯಾವುದೇ ಸುದ್ದಿಗಳನ್ನು ಪ್ರಸಾರ ಮತ್ತು ಪ್ರಕಟಿಸದಂತೆ ಮಾಧ್ಯಮ ಸಂಸ್ಥೆಗಳು ನಿರ್ಧಾರ ತೆಗೆದುಕೊಂಡಿದ್ದವು. ಈ ಘಟನೆಗೆ ಸಂಬಂಧಿಸಿದಂತೆ ನಟ ದರ್ಶನ್ ಕ್ಷಮೆ ಕೇಳಿದ್ದರಿಂದ ವಿವಾದ (Controversy) ಸುಖಾಂತ್ಯವಾಗಿದೆ.

      

    ಈ ಕುರಿತಂತೆ ವರಮಹಾಲಕ್ಷ್ಮೀ ಹಬ್ಬದ ದಿನದಂದು ಪತ್ರ ಬರೆದಿರುವ ದರ್ಶನ್, ‘ಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು. ಈ ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ ಮಿತ್ರಾ ರಾಕ್ ಲೈನ್ ವೆಂಕಟೇಶ್ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾಂತ್ಯಗೊಂಡಿದೆ’ ಎಂದು ಬರೆದಿದ್ದಾರೆ. ಇದನ್ನೂ ಓದಿ:ಧನ್ಯಾ, ಶರ್ಮಿಳಾ ಮಾಂಡ್ರೆ ಜೊತೆ ದಿಗಂತ್ ಡ್ಯುಯೇಟ್

    ಮುಂದುವರೆದ ಪತ್ರದಲ್ಲಿ, ‘ಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದ್ದೇಶಪೂರ್ವಕವಾಗಿ ವೈರಲ್ ಆಗಿ, ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ. ಆ ವ್ಯಕ್ತಿ ಯಾವ ದುರುದ್ದೇಶದಿಂದ ಮಾಡಿದರೋ ಗೊತ್ತಿಲ್ಲ. ಆದರೂ, ಆ ವ್ಯಕ್ತಿಗೆ ಒಳ್ಳೆಯದಾಗಲಿ. ಮುಂದೆ ಆ ವ್ಯಕ್ತಿ ಈ ರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ’ ಎಂದು ಬರೆದಿದ್ದಾರೆ.

    ‘ಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಅಯಾಚಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮೆ ಇರಲಿ. ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮಗಳ ಅಗತ್ಯವಿದೆ. ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ. ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪ್ರಚಾರದ ಪಾಲೂ ಸಾಕಷ್ಟಿದೆ. ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ. ಕನ್ನಡ, ಕನ್ನಡಿಗರು, ಕನ್ನಡ ನೆಲ ಜಲ, ಕನ್ನಡ ಚಿತ್ರರಂಗದ ಪ್ರಗತಿಗೆ ಜೊತೆಯಾಗಿ ಕೆಲಸ ಮಾಡೋಣ. ಪ್ರೀತಿಯಿರಲಿ. ನನ್ನ ಪ್ರೀತಿಯ ಸೆಲೆಬ್ರಿಟಿಗಳು ನನ್ನ ಭಾವನೆಯನ್ನು ಗೌರವಿಸುತ್ತಾರೆಂದು ಭಾವಿಸುತ್ತೇನೆ’ ಎಂದು ಕ್ಷಮೆ ಕೇಳುವ ಮೂಲಕ ಪತ್ರ ಮುಗಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹೆರಿಗೆ ಬಳಿಕ ಕ್ಯಾಮೆರಾ ಮುಂದೆ ನುಸ್ರತ್ ಜಹಾನ್ – ಮಗುವಿನ ತಂದೆ ಬಗ್ಗೆ ಹೇಳಿದ್ದೇನು?

    ಹೆರಿಗೆ ಬಳಿಕ ಕ್ಯಾಮೆರಾ ಮುಂದೆ ನುಸ್ರತ್ ಜಹಾನ್ – ಮಗುವಿನ ತಂದೆ ಬಗ್ಗೆ ಹೇಳಿದ್ದೇನು?

    ಕೋಲ್ಕತ್ತಾ: ಬೆಂಗಾಲಿ ನಟಿ ಹಾಗೂ ಟಿಎಂಸಿ ಸಂಸದೆ ನುಸ್ರತ್ ಜಹಾನ್ ತಮ್ಮ ಚೊಚ್ಚಲ ಹೆರಿಗೆ ನಂತರ ಇದೇ ಪ್ರಥಮ ಬಾರಿಗೆ ಕ್ಯಾಮೆರಾ ಮುಂದೆ ಕಾಣಿಸಿಕೊಂಡಿದ್ದಾರೆ.

    ಆಗಸ್ಟ್ 8 ರಂದು ಗಂಡು ಮಗುವಿಗೆ ಜನ್ಮ ನೀಡಿದ ನುಸ್ರತ್ ಜಹಾನ್, ಒಂದು ತಿಂಗಳ ಒಳಗೆ ಇದೀಗ ಕೆಲಸವನ್ನು ಪುನರಾಂಭಿಸಿದ್ದಾರೆ. ಈ ಮಧ್ಯೆ ಶುಕ್ರವಾರ ಸಾರ್ವಜನಿಕವಾಗಿ ಕಾಣಿಸಿಕೊಂಡ ನುಸ್ರತ್ ಜಹಾನ್ ಮಗುವಿನ ತಂದೆ ಬಗ್ಗೆ ಮಾಧ್ಯಮದ ಎದುರಿಗೆ ಮಾತನಾಡಿದ್ದಾರೆ.  ಇದನ್ನೂ ಓದಿ:  ಗಂಡು ಮಗುವಿಗೆ ಜನ್ಮ ನೀಡಿದ ಸಂಸದೆ ನುಸ್ರತ್ ಜಹಾನ್

    Nusrat Jahan

    ಮಾಧ್ಯಮದವರು ಮಗುವಿನ ಮುಖವನ್ನು ಯಾವಾಗ ಮೊದಲ ಬಾರಿಗೆ ನೋಡಬಹುದು ಎಂದು ಪ್ರಶ್ನಿಸಿದಾಗ, ಅದನ್ನು ನೀವು ಅವನ ತಂದೆಯೊಂದಿಗೆ ಕೇಳಬೇಕು. ಸದ್ಯ ಅವರು ಯಾರನ್ನು ನೋಡಲು ಬಿಡುತ್ತಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ:  ಕುಣಿದು ಕುಪ್ಪಳಿಸಿ ದುರ್ಗಾ ಪೂಜೆ ನೆರವೇರಿಸಿದ ಸಂಸದೆ ನುಸ್ರತ್ ಜಹಾನ್

    ಆಗಸ್ಟ್ 8ರಂದು ಕೋಲ್ಕತ್ತಾದ ನಿಯೀಟಿಯಾ ಆಸ್ಪತ್ರೆಯಲ್ಲಿ ನುಸ್ರತ್ ಜಹಾನ್ ಗಂಡು ಮಗುವಿಗೆ ಜನ್ಮ ನೀಡಿದ್ದರು. ನುಸ್ರತ್ ಮತ್ತು ಉದ್ಯಮಿ ನಿಖಿಲ್ ಜೈನ್ 2019ರಲ್ಲಿ ಟರ್ಕಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಆ ಬಳಿಕ ಕೆಲ ಕಾರಣಗಳಿಂದ ಇವರಿಬ್ಬರ ನಡುವೆ ಪರಸ್ಪರ ಬಿರುಕು ಮೂಡಿ ಬೇರೆ ಬೇರೆಯಾಗಿದ್ದರು ಎಂಬ ಸುದ್ದಿ ಆಗಾಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ಕುರಿತಂತೆ ನುಸ್ರತ್ ನಿಖಿಲ್ ಜೈನ್ ಜೊತೆಗಿನ ಮದುವೆಗೆ ಯಾವುದೇ ಮಾನ್ಯತೆ ಇಲ್ಲ. ಟರ್ಕಿಯಲ್ಲಿ ಮದುವೆ ನಡೆದಿದ್ದು, ಟರ್ಕಿ ಕಾನೂನಿನ ಪ್ರಕಾರ ಇದಕ್ಕೆ ಮಾನ್ಯತೆ ಇಲ್ಲ. ಭಾರತದಲ್ಲೂ ಅಧಿಕೃತವಾಗಿ ಯಾವುದೇ ಕಾನೂನಿನ ಪ್ರಕಾರ ನಾವು ಮದುವೆ ಆಗಿಲ್ಲ ನಮ್ಮದು ಲಿವ್ ಇನ್ ರಿಲೇಷನ್ ಶಿಪ್ ಅಷ್ಟೇ ಎಂದಿದ್ದರು.

  • ಕರಾಚಿಯಲ್ಲಿ ಚಾಕೋಲೇಟ್ ಬಿರಿಯಾನಿ – ರುಚಿ ಹೇಗಿತ್ತು ಗೊತ್ತಾ?

    ಕರಾಚಿಯಲ್ಲಿ ಚಾಕೋಲೇಟ್ ಬಿರಿಯಾನಿ – ರುಚಿ ಹೇಗಿತ್ತು ಗೊತ್ತಾ?

    ಸಾಮಾನ್ಯವಾಗಿ ಬಿರಿಯಾನಿ ಎಂದರೆ ಎಲ್ಲರಿಗೂ ಬಹಳ ಇಷ್ಟವಾಗುತ್ತದೆ. ಆದರೆ ಯಾರಾದರೂ ಚಾಕೋಲೇಟ್ ಬಿರಿಯಾನಿ ಬಗ್ಗೆ ಕೇಳಿದ್ದೀರಾ? ಹೌದು ಕರಾಚಿಯಲ್ಲಿ ಚಾಕೋಲೇಟ್ ಬಿರಿಯಾನಿಯನ್ನು ಮಾರಾಟ ಮಾಡಲಾಗುತ್ತಿದೆ. ಸದ್ಯ ಚಾಕೋಲೇಟ್ ಬಿರಿಯಾನಿಯನ್ನು ತಯಾರಿಸಿರುವ ವೀಡಿಯೋವನ್ನು ಪಾಕಿಸ್ತಾನ ಯೂಟ್ಯೂಬ್ ಚಾನೆಲ್‍ವೊಂದು ಶೇರ್ ಮಾಡಿಕೊಂಡಿದೆ. ಇದೀಗ ಈ ಡಿಫರೆಂಟ್ ಫುಡ್‍ನ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ವೀಡಿಯೋದಲ್ಲಿ ವ್ಯಕ್ತಿಯೊಬ್ಬರು ಕರಾಚಿಯಲ್ಲಿ ಚಾಕೋಲೇಟ್ ಬಿರಿಯಾನಿ ಮಾರಾಟ ಮಾಡುವ ಅಂಗಡಿಗೆ ಭೇಟಿ ನೀಡುತ್ತಾರೆ. ನಂತರ ಒಂದು ಪ್ಲೇಟ್‍ನಲ್ಲಿ ಬಿರಿಯಾನಿಯನ್ನು ಆರ್ಡರ್ ಮಾಡುತ್ತಾರೆ. ಬಳಿಕ ಸಪ್ಲೇಯರ್ ಒಂದು ಪ್ಲೇಟ್‍ನಲ್ಲಿ ಬಿರಿಯಾನಿ ಇಟ್ಟು ಅದರ ಮೇಲೆ ಒಂದು ಗ್ಲಾಸ್ ಚಾಕೋಲೇಟ್ ಸಾಸ್‍ನನ್ನು ಸುರಿಯುತ್ತಾರೆ.

    ನಂತರ ವ್ಯಕ್ತಿ ಬಿರಿಯಾನಿಯನ್ನು ಚಾಕೋಲೇಟ್ ಜೊತೆಗೆ ಬೆರೆಸಿ ಆನಂದದಿಂದ ಸವಿದು, ಕ್ಯಾ ಬಾತ್ ಹೈ, ವಾವ್, ಬಹಳ ರುಚಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಇಲ್ಲಿಯವರೆಗೂ 22,000 ವೀವ್ಸ್ ಹಾಗೂ ಹಲವಾರು ಕಾಮೆಂಟ್‌ಗಳು ಹರಿದು ಬರುತ್ತಿದೆ. ಇದನ್ನೂ ಓದಿ: ಮಳೆಗಾಲದ ಸ್ಪೆಷಲ್ ಹಲಸಿನ ಹಣ್ಣಿನ ಹಲ್ವ

    https://youtu.be/lT7K9GhZEeA

  • ರೆಸಾರ್ಟಿನಲ್ಲಿ ಕೋತಿಗಳ ಪಾರ್ಟಿ- ವೀಡಿಯೋ ವೈರಲ್

    ರೆಸಾರ್ಟಿನಲ್ಲಿ ಕೋತಿಗಳ ಪಾರ್ಟಿ- ವೀಡಿಯೋ ವೈರಲ್

    ಮುಂಬೈ: ಮಹಾರಾಷ್ಟ್ರಾದ್ಯಂತ ಕೋವಿಡ್-19 ನಿರ್ಬಂಧಗಳು ಜಾರಿಯಲ್ಲಿರುವುದರಿಂದ ಕೆಲವು ಮಂಗಗಳು ಮನುಷ್ಯರು ನಡೆಸುತ್ತಿದ್ದ ಐಷಾರಾಮಿ ಜೀವನವನ್ನು ನಡೆಸುತ್ತಿದೆ. ಹೌದು ಮಹಾಬಲೇಶ್ವರದಲ್ಲಿರುವ ರೆಸಾರ್ಟ್ ನಲ್ಲಿರುವ ಸ್ವಿಮ್ಮಿಂಗ್ ಪೂಲ್‍ನಲ್ಲಿ ಕೋತಿಗಳು ಸ್ವಿಮ್ಮಿಂಗ್ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಕೋತಿಗಳು ರೆಸಾರ್ಟ್ ನಲ್ಲಿ ಯಾರು ಇಲ್ಲದೇ ಇರುವುದನ್ನು ಕಂಡು ಈಜುಕೊಳಕ್ಕೆ ಜಿಗಿಯುವ ಮೂಲಕ ಬಿಸಿಲಿನ ಶಾಖದಿಂದ ತಂಪು ಮಾಡಿಕೊಂಡಿದೆ.

    ವೀಡಿಯೋದಲ್ಲಿ ಕೋತಿಗಳು ಸ್ವಿಮ್ಮಿಂಗ್ ಪೂಲ್ ಬಳಿ ನೆರಳಿಗಾಗಿ ಹಾಕಿರುವ ದೊಡ್ಡದೊಂದು ಛತ್ರಿ ಮೇಲೆ ಏರಿ ಅದರ ಮೇಲಿಂದ ಈಜುಕೊಳಕ್ಕೆ ಜಿಗಿಯುತ್ತದೆ. ಮತ್ತೆ ಮೇಲೆ ಎದ್ದು ಬಂದು ಮತ್ತೆ ಸ್ವಿಮ್ಮಿಂಗ್ ಪೂಲ್ ಒಳಗೆ ಜಿಗಿದು ಆನಂದಿಸುತ್ತಿರುವುದನ್ನು ಕಾಣಬಹುದಾಗಿದೆ.

    ಈ ವೀಡಿಯೋವನ್ನು ಎನ್‍ಬಿಇಎ ಸ್ಟಾರ್ ರೆಕ್ಸ್ ಚಾಪ್ಮನ್ ಎಂಬ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಲಾಗಿದ್ದು, 27 ಲಕ್ಷಕ್ಕಿಂತ ಹೆಚ್ಚು ವ್ಯೂವ್ ಆಗಿದೆ. 1 ಲಕ್ಷಕ್ಕೂ ಅಧಿಕ ಲೈಕ್ಸ್ ಮತ್ತು 21,000 ರಿಟ್ವೀಟ್‍ಗಳು ಆಗಿದೆ.

  • ಮೀಡಿಯಾದಲ್ಲಿ ಮಿಂಚಲು ವ್ಯವಸ್ಥೆಯನ್ನ ಅವ್ಯವಸ್ಥೆ ಮಾಡಬೇಡಿ: ಸಂಸದ ಸುರೇಶ್

    ಮೀಡಿಯಾದಲ್ಲಿ ಮಿಂಚಲು ವ್ಯವಸ್ಥೆಯನ್ನ ಅವ್ಯವಸ್ಥೆ ಮಾಡಬೇಡಿ: ಸಂಸದ ಸುರೇಶ್

    – ಸರ್ಕಾರ ಸಾರ್ವಜನಿಕರ ಹಿತಕಾಯುವ ಕೆಲಸ ಮಾಡುತ್ತಿದೆ

    ರಾಮನಗರ: ಸೋಶಿಯಲ್ ಮೀಡಿಯಾ, ಮಾಧ್ಯಮದಲ್ಲಿ ಮಿಂಚಲು ಗುಂಪು ಗುಂಪಾಗಿ ಸೇರಬೇಡಿ. ದೇಣಿಗೆ ಮತ್ತೊಂದು ಮಗದೊಂದು ಅಂತೇಳಿ ಬೀದಿಗೆ ಬರಬೇಡಿ. ಬಂದು ವ್ಯವಸ್ಥೆಯನ್ನು ಅವ್ಯವಸ್ಥೆ ಮಾಡಬೇಡಿ ಎಂದು ಬೆಂಗಳೂರು ಗ್ರಾಮಾಂತರ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

    ಇಂದು ನಗರದಲ್ಲಿ ಮಾತನಾಡಿದ ಅವರು, ಸಾರ್ವಜನಿಕರೇ ನಿಮ್ಮ ಬದುಕು, ನಿಮ್ಮ ಜೀವ ನಿಮ್ಮ ಕೈನಲ್ಲಿಯೇ ಇದೆ. ನೀವು ಮನೆಯಲ್ಲಿಯೇ ಉಳಿದುಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಅಲ್ಲದೇ ಯಾರೂ ಹೊರಗೆ ಬರಬೇಡಿ ಅಂದರೂ ಹೊರಗೆ ಬರುತ್ತಿದ್ದಾರೆ ದೇಣಿಗೆ, ಮಾನವೀಯತೆ ಅಂತೇಳಿ ಓಡಾಡುತ್ತಿದ್ದಾರೆ. ಸಾರ್ವಜನಿಕರ ಹಿತಕಾಯುವ ಕೆಲಸ ಸರ್ಕಾರ ಮಾಡುತ್ತಿದೆ ಎಂದರು.

    ಸರ್ಕಾರಿ ಅಧಿಕಾರಿಗಳಿಗೆ ಕೆಲಸ ಮಾಡಲು ಅವಕಾಶ ಮಾಡಿಕೊಡಿ. ಅದನ್ನ ಬಿಟ್ಟು ದೇಣಿಗೆ ಸಂಗ್ರಹ ಅಂತೆಲ್ಲ ಓಡಾಡಬೇಡಿ, ಸರ್ಕಾರವಿದೆ ಏನೇ ಸಹಾಯ ಮಾಡುವುದಿದ್ದರು ಸರ್ಕಾರ, ಜಿಲ್ಲಾಡಳಿತಕ್ಕೆ ನೀಡಿ ಅದನ್ನು ಬಡವರು ನಿರ್ಗತಿಕರಿಗೆ ತಲುಪಿಸುವ ವ್ಯವಸ್ಥೆ ಆಗುತ್ತೆ. ಹೋಂ ಕ್ವಾರಂಟೈನ್‍ನಲ್ಲಿ ಇರುವವರನ್ನು ಕೇವಲ 14 ದಿನಕ್ಕೆ ಹೊರಗೆ ಬಿಡಬೇಡಿ. ಅಮೆರಿಕದಲ್ಲಿ 14 ದಿನಗಳ ಬಳಿಕವೇ ಸಾಕಷ್ಟು ಪ್ರಕರಣಗಳು ದೃಢಪಟ್ಟಿವೆ ಎಂದು ತಿಳಿಸಿದರು.

    ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೊರೊನಾಗೆ ಸಂಬಂಧಿಸಿದಂತೆ ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ಪ್ರತಿ ದಿನ ಆಟೋ ಮೂಲಕ ಪ್ರಚಾರ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ರೇಷ್ಮೆ ಬೆಳೆಗಾರರು ಬೆಳೆದಂತಹ ರೇಷ್ಮೆಯನ್ನು ರೀಲರ್‍ಗಳು ಖರೀದಿಸುತ್ತಿಲ್ಲ. ಇದರಿಂದ ರೇಷ್ಮೆ ಬೆಳೆಗಾರರಿಗೆ ತೊಂದರೆಯಾಗುತ್ತಿದೆ. ರೇಷ್ಮೆ ಮಾರುಕಟ್ಟೆಯು ಬಂದ್ ಆಗಿದೆ. ಹೀಗಾಗಿ ರಾಜ್ಯ ಸರ್ಕಾರ ರೈತರ ನಷ್ಟ ತುಂಬಿಕೊಡಬೇಕು ಎಂದು ಬೇಡಿಕೆ ಸಲ್ಲಿಸಿದರು.

    ಗ್ರಾಮಗಳಲ್ಲಿ ಶುದ್ಧಕುಡಿಯುವ ನೀರಿನ ಘಟಕಗಳ ಬಳಿಯೇ ಹೆಚ್ಚಿನ ಜನ ಸೇರುತ್ತಾರೆ. ಹೀಗಾಗಿ ಅಲ್ಲಿಗೆ ಒಬ್ಬ ಸಿಬ್ಬಂದಿ ನೇಮಿಸಬೇಕು. ನೀರಿನ ಕಾರ್ಖಾನೆಗಳ ಮೂಲಕವೇ ನೀರು ಪೂರೈಸಲು ಸೂಚನೆ ನೀಡಬೇಕು. ಇಂದಿರಾ ಕ್ಯಾಂಟಿನ್ ಮೂಲಕ ದಿನಕ್ಕೆ ಕನಿಷ್ಟ 500 ಪ್ಯಾಕೆಟ್ ಆಹಾರಗಳನ್ನು ಸಿದ್ಧಪಡಿಸಿ, ನಿರ್ಗತಿಕರಿಗೆ ನೀಡಬೇಕು. ಇಷ್ಟು ಮಾತ್ರವಲ್ಲದೇ ಜಿಲ್ಲಾಡಳಿತವು ಇರುವ ಅನುದಾನದಲ್ಲಿ ಶೇ.10ರಷ್ಟು ಮಾತ್ರವೇ ಆರೋಗ್ಯಕ್ಕೆ ಖರ್ಚು ಮಾಡಬೇಕು ಎಂಬ ಸರ್ಕಾರ ನಿಯಮ ಸರಿ ಇಲ್ಲ. ಇದನ್ನು ಸಡಿಲಿಸಬೇಕು ಎಂದು ಅಗ್ರಹಿಸಿದರು.

    ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್, ಸ್ಯಾನಿಟೈಸರ್ ನೀಡಬೇಕು. ಸರ್ಕಾರದಿಂದಲೇ ಉಚಿತವಾಗಿ ಮಾಸ್ಕ್ ಗಳನ್ನು ನೀಡುವ ಕೆಲಸವಾಗಬೇಕು. ಗ್ರಾಮಗಳಲ್ಲಿ ಟೈಂಪಾಸ್ ಮಾಡುವವರಿಗೆ ಸಾಕಷ್ಟು ಅರಿವು ಮೂಡಿಸಬೇಕು ಎಂದು ಮನವಿ ಸಲ್ಲಿಸಿದರು.