Tag: ಮೀನಾಕ್ಷಿ ಚೌಧರಿ

  • ನಾಗಾರ್ಜುನ ಅಕ್ಕಿನೇನಿ ಸೋದರಳಿಯನ ಜೊತೆ ಮೀನಾಕ್ಷಿ ಚೌಧರಿ ಮದುವೆ?- ಸ್ಪಷ್ಟನೆ ನೀಡಿದ ನಟಿ

    ನಾಗಾರ್ಜುನ ಅಕ್ಕಿನೇನಿ ಸೋದರಳಿಯನ ಜೊತೆ ಮೀನಾಕ್ಷಿ ಚೌಧರಿ ಮದುವೆ?- ಸ್ಪಷ್ಟನೆ ನೀಡಿದ ನಟಿ

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ (Nagarjuna Akkineni) ಪುತ್ರ ನಾಗಚೈತನ್ಯ ಮತ್ತು ಶೋಭಿತಾ ಮದುವೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಬೆನ್ನಲ್ಲೇ ನಾಗಾರ್ಜುನ ಸಹೋದರಿ ಪುತ್ರ ಸುಶಾಂತ್ ಮದುವೆಯ ಬಗ್ಗೆ ಹರಿದಾಡುತ್ತಿದೆ. ‘ಗುಂಟೂರು ಖಾರಂ’ ನಟಿ ಮೀನಾಕ್ಷಿ ಚೌಧರಿ (Meenakshi Chaudhary) ಜೊತೆ ಸುಶಾಂತ್ (Sushanth) ಮದುವೆ (Wedding) ಆಗಲಿದ್ದಾರೆ ಎನ್ನಲಾದ ಸುದ್ದಿಗೆ ಸ್ವತಃ ನಟಿ ಸ್ಪಷ್ಟನೆ ನೀಡಿದ್ದಾರೆ.

    ಸಂದರ್ಶನವೊಂದರಲ್ಲಿ ಮೀನಾಕ್ಷಿ ಚೌಧರಿ ಮಾತನಾಡಿ, ಸುಶಾಂತ್ ಜೊತೆಗಿನ ಮದುವೆ ವಿಚಾರ ಅದು ವದಂತಿಯಷ್ಟೇ ಎಂದಿದ್ದಾರೆ. ನಾನು ಅವರೊಂದಿಗೆ ಮದುವೆಯಾಗುತ್ತಿಲ್ಲ. ಈ ವದಂತಿಗಳು ಹೇಗೆ ಬರುತ್ತದೆ ಎಂಬುದು ತಿಳಿಯುತ್ತಿಲ್ಲ ಎಂದರು. ನಾನು ಸಿಂಗಲ್ ಆಗಿದ್ದೇನೆ, ಎಂಗೇಜ್ ಆಗೋದ್ದಕ್ಕೆ ರೆಡಿಯಿಲ್ಲ ಎಂದು ನಟಿ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ಸಲ್ಮಾನ್ ಖಾನ್ ಜೊತೆ ಈದ್, ಹೋಳಿ ಹಾಡಿಗೆ ಹೆಜ್ಜೆ ಹಾಕಲಿದ್ದಾರೆ ರಶ್ಮಿಕಾ

    2021ರಲ್ಲಿ ಸುಶಾಂತ್‌ಗೆ ನಾಯಕಿಯಾಗಿ ಮೀನಾಕ್ಷಿ ತೆಲುಗು ಸಿನಿಮಾವೊಂದರಲ್ಲಿ ನಟಿಸಿದರು. ಅಲ್ಲಿಂದ ಇವರಿಬ್ಬರ ನಡುವೆ ಸಮ್‌ಥಿಂಗ್ ಸಮ್‌ಥಿಂಗ್ ಇದೆ ಎಂದು ವದಂತಿ ಹಬ್ಬಿತ್ತು. ಅದಕ್ಕೀಗ ನಟಿಯ ಕಡೆಯಿಂದ ಉತ್ತರ ಸಿಕ್ಕಿದೆ. ಇದನ್ನೂ ಓದಿ:‘ಗುಗ್ಗು ನನ್ನ ಮಗ’ ಎಂದ ರಜತ್- Bigg Boss ಡೋರ್ ಓಪನ್ ಮಾಡಿ ಎಂದು ಪಟ್ಟು ಹಿಡಿದ ಸುರೇಶ್

    ಇನ್ನೂ ‘ಗುಂಟೂರು ಖಾರಂ’ ಚಿತ್ರದಲ್ಲಿ ಮಹೇಶ್ ಬಾಬುಗೆ ಜೊತೆ ಮೀನಾಕ್ಷಿ ನಟಿಸಿದ್ದರು. ವಿಜಯ್ ದಳಪತಿ ನಟನೆಯ ಗೋಟ್ ಚಿತ್ರದಲ್ಲಿ ಹೀರೋಯಿನ್ ಆಗಿ ನಟಿಸಿದರು. ಇದೀಗ ವರುಣ್ ತೇಜ್ ನಟನೆಯ ಮಟ್ಕಾ, ವಿಶ್ವಕ್ ಸೇನ್ ಹೊಸ ಚಿತ್ರಕ್ಕೆ ಮೀನಾಕ್ಷಿ ನಾಯಕಿಯಾಗಿ ನಟಿಸಿದ್ದಾರೆ. ಈ ಸಿನಿಮಾ ರಿಲೀಸ್‌ಗೆ ರೆಡಿಯಿದೆ.

  • ವರುಣ್ ತೇಜ್ ಚಿತ್ರಕ್ಕೆ ‘ಮಟ್ಕಾ’ ಟೈಟಲ್: ಐಟಂ ಹಾಡಿಗೆ ಕುಣಿವ ನೋರಾ ಫತೇಹಿ

    ವರುಣ್ ತೇಜ್ ಚಿತ್ರಕ್ಕೆ ‘ಮಟ್ಕಾ’ ಟೈಟಲ್: ಐಟಂ ಹಾಡಿಗೆ ಕುಣಿವ ನೋರಾ ಫತೇಹಿ

    ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗಬಾಬು ಸುಪುತ್ರ ವರುಣ್ ತೇಜ್ (Varun Tej)  ನಟನೆಯ 14ನೇ ಸಿನಿಮಾದ ಮುಹೂರ್ತ ಸಮಾರಂಭ ಹೈದರಾಬಾದ್ ನಲ್ಲಿಂದು ಅದ್ಧೂರಿಯಾಗಿ ನೆರವೇರಿದೆ. ನಿರ್ದೇಶಕ ಮಾರುತಿ ಕ್ಯಾಮೆರಾಗೆ ಚಾಲನೆ ಕೊಟ್ಟಿದ್ದಾರೆ. ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದರು. ಹರೀಶ್ ಶಂಕರ್ ಮಟ್ಕಾ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು.

    ವರುಣ್ ತೇಜ್ ನಟನೆಯ 14ನೇ ಸಿನಿಮಾಗೆ ಮಟ್ಕಾ (Matka) ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಇದು ಜೂಟಾಟದ ಕಥೆಯಾಧಾರಿತ ಸಿನಿಮಾ. 1958ರಿಂದ 82ರ ಅವಧಿಯಲ್ಲಿ ವೈಜಾಗ್ ನಲ್ಲಿ ನಡೆದ ಸತ್ಯ ಘಟನೆಯಾಧಾರಿತ ಚಿತ್ರವಾಗಿದೆ. ಬರೋಬ್ಬರಿ 24 ವರ್ಷದ ಹಿಂದಿನ ಕಥೆಯಾಧಾರಿತ ಸಿನಿಮಾವಾಗಿರುವ ಮಟ್ಕಾದಲ್ಲಿ ವರುಣ್ ತೇಜ್ ನಾಲ್ಕು ವಿಭಿನ್ನ ಶೇಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೆಗಾ ಪ್ರಿನ್ಸ್ ಸಿನಿಕರಿಯರ್ ನ ಅತಿ ಹೆಚ್ಚು ಬಜೆಟ್‌ನ ಚಿತ್ರ ಎಂಬ ನಿರೀಕ್ಷೆ ಹುಟ್ಟಿಸಿದೆ. ಇದನ್ನೂ ಓದಿ:ವಿಜಯ್ ದೇವರಕೊಂಡ ಜೊತೆಗಿನ ಸೆಲ್ಫಿ ಶೇರ್‌, ಹಳೆಯ ನೆನಪು ಬಿಚ್ಚಿಟ್ಟ ರಶ್ಮಿಕಾ

    ಫಲಾಸ ಸಿನಿಮಾ ಖ್ಯಾತಿಯ ಕರುಣ ಕುಮಾರ್ (Karuna Kumar) ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮಟ್ಕಾ ಸಿನಿಮಾದಲ್ಲಿ ನಾಯಕಿಯಾಗಿ ಮೀನಾಕ್ಷಿ ಚೌಧರಿ (Meenakshi Chaudhary) ನಟಿಸುತ್ತಿದ್ದು, ನವೀನ್ ಚಂದ್ರ, ಕನ್ನಡದ ಕಿಶೋರ್, ಅಜಯ್ ಘೋಷ್, ಮೈಮ್ ಗೋಪಿ, ರೂಪಲಕ್ಷ್ಮಿ, ವಿಜಯರಾಮ ರಾಜು, ಜಗದೀಶ್, ರಾಜ್ ತಿರಂದಾಸ್ ಸೇರಿದಂತೆ ಹಲವರು ನಟಿಸುತ್ತಿದ್ದಾರೆ. ಇನ್ನು, ಮಟ್ಕಾದ ಸ್ಪೆಷಲ್ ನಂಬರ್ ಗೆ ಬಾಲಿವುಡ್ ಬ್ಯೂಟಿ ನೋರಾ ಫತೇಹಿ (Nora Fatehi) ಮೆಗಾ ಪ್ರಿನ್ಸ್ ವರುಣ್ ತೇಜ್ ಜೊತೆ ಸೊಂಟ ಬಳುಕಿಸಲಿದ್ದಾರೆ.

    ವೈರಾ ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್‌ನಡಿಯಲ್ಲಿ ಮೋಹನ್ ಚೆರುಕುರಿ ಮತ್ತು ಡಾ ವಿಜೇಂದರ್ ರೆಡ್ಡಿ ಟೀಗಾಲ ಅದ್ಧೂರಿಯಾಗಿ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಜಿ ವಿ ಪ್ರಕಾಶ್ ಕುಮಾರ್ ಸಂಗೀತ ನೀಡುತ್ತಿದ್ದು, ಪ್ರಿಯ ಸೇಠ್ ಛಾಯಾಗ್ರಹಣ, ಕಾರ್ತಿಕ್ ಶ್ರೀನಿವಾಸ್ ಆರ್ ಸಂಕಲನ, ಸುರೇಶ್ ಕಲಾ ನಿರ್ದೇಶನವಿದೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಮಟ್ಕಾ ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ತಯಾರಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಹೇಶ್‌ ಬಾಬು ಸಿನಿಮಾ ಬಗ್ಗೆ ಅಪ್‌ಡೇಟ್‌ ಹಂಚಿಕೊಂಡ ಮೀನಾಕ್ಷಿ ಚೌಧರಿ

    ಮಹೇಶ್‌ ಬಾಬು ಸಿನಿಮಾ ಬಗ್ಗೆ ಅಪ್‌ಡೇಟ್‌ ಹಂಚಿಕೊಂಡ ಮೀನಾಕ್ಷಿ ಚೌಧರಿ

    ತೆಲುಗಿನ ಕಿಲಾಡಿ, ಹಿಟ್ ಸಿನಿಮಾಗಳ ಮೂಲಕ ಗಮನ ಸೆಳೆದ ಯುವ ನಟಿ ಮೀನಾಕ್ಷಿ ಚೌಧರಿ (Meenakshi Chaudhary)  ಅವರು ಗುಂಟೂರು ಖಾರಂ (Guntur Kaaram) ಸಿನಿಮಾದ ವಿಚಾರವಾಗಿ ಭಾರೀ ಸದ್ದು ಮಾಡ್ತಿದ್ದಾರೆ. ಮಹೇಶ್ ಬಾಬು ಸಿನಿಮಾ ಬಗ್ಗೆ ರಿಯಾಕ್ಟ್ ಮಾಡಿರೋ ನಾಯಕಿ ಮೀನಾಕ್ಷಿ, ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ಲೀಕ್ ಆಗೋದ್ದಕ್ಕೂ ಮುಂಚೆಯೇ ಎಚ್ಚರ ವಹಿಸಿದ್ದಾರೆ. ಓಪನ್ ವೇದಿಕೆಯಲ್ಲಿ ನೋ ಲೀಕ್ಸ್ ಅಂತಾ ನಟಿ ಪ್ರತಿಕ್ರಿಯಿಸಿದ್ದಾರೆ.

    ‘ಸರ್ಕಾರು ವಾರಿ ಪಾಟ’ ಸಿನಿಮಾದ ಸಕ್ಸಸ್ ನಂತರ ಮಹೇಶ್ ಬಾಬು (Mahesh Babu) ಗುಂಟೂರು ಖಾರಂ ಸಿನಿಮಾ ಎತ್ತಿಕೊಂಡಿರೋದು ಗೊತ್ತೆಯಿದೆ. ಈ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಟಾಲಿವುಡ್ ಪ್ರಿನ್ಸ್‌ಗೆ ಪೂಜಾ ಹೆಗ್ಡೆ- ಶ್ರೀಲೀಲಾ ನಾಯಕಿಯಾಗಿದ್ದರು. ಟೀಮ್ ಜೊತೆ ಕಿರಿಕ್ ಮಾಡಿಕೊಂಡು ಪೂಜಾ ಹೆಗ್ಡೆ ಹೊರ ನಡೆದರು. ಅವರ ಮೀನಾಕ್ಷಿ ಎಂಟ್ರಿಯಾಗಿ ಎಂದು ಹೇಳಲಾಗಿತ್ತು. ಆದರೆ ಯಾವುದೇ ಅಧಿಕೃತ ಅಪ್‌ಡೇಟ್ ಸಿಕ್ಕಿರಲಿಲ್ಲ. ಈಗ ಸ್ವತಃ ನಟಿಯೇ ಈ ಬಗ್ಗೆ ಉತ್ತರಿಸಿದ್ದಾರೆ. ಇದನ್ನೂ ಓದಿ:ನಟಿ ಶುಭ ಪೂಂಜಾಗೆ ಜಿಜಿ ಕೇರ್ ಟೇಕರ್ ಆಗಿದ್ದೇಕೆ?: ಕಾಂಪೌಂಡರ್ ಕ್ಯಾರೆಕ್ಟರ್ ಸೀಕ್ರೆಟ್ ರಿವೀಲ್

    ಇತ್ತೀಚೆಗೆ ಮೀನಾಕ್ಷಿ ಚೌಧರಿ ಅವರು ಸಿನಿಮಾವೊಂದರ ಪ್ರೀ-ರಿಲೀಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ವೇದಿಕೆ ಏರಿದ ಅವರಿಗೆ ‘ಗುಂಟೂರು ಖಾರಂ’ ಸಿನಿಮಾ ಬಗ್ಗೆ ಕೇಳಲಾಯಿತು. ಆ ಸಿನಿಮಾದಲ್ಲಿ ನಾನು ಇರುವುದು ಖುಷಿಯ ವಿಚಾರ. ನಾನು ಮೊದಲಿನಿಂದಲೂ ಮಹೇಶ್ ಬಾಬು ಅವರ ದೊಡ್ಡ ಅಭಿಮಾನಿ. ಈಗತಾನೇ ಮೊದಲ ಹಂತದ ಶೂಟಿಂಗ್ ಮುಗಿಸಿದ್ದೇವೆ. ಮೊದಲ ದಿನ ನನ್ನ ಭಾಗದ ಚಿತ್ರೀಕರಣ ಮಹೇಶ್ ಬಾಬು ಜೊತೆಗೆ ಇತ್ತು. ಈ ಅವಕಾಶ ನೀಡಿದ್ದಕ್ಕೆ ಮಹೇಶ್ ಬಾಬು, ನಿರ್ದೇಶಕ ತ್ರಿವಿಕ್ರಂ ಶ್ರೀನಿವಾಸ್ (Trivikaram Srinivas) ಅವರಿಗೆ ಧನ್ಯವಾದಗಳು. ಅವರಿಬ್ಬರದ್ದು ಹಿಟ್ ಕಾಂಬಿನೇಷನ್ ಎಂದು ಮೀನಾಕ್ಷಿ ಅವರು ಖುಷಿಯಿಂದ ಮಾತನಾಡಿದ್ದಾರೆ.

    ವೇದಿಕೆ ಮೇಲೆ ಮೀನಾಕ್ಷಿ ಚೌಧರಿ ಅವರು ಇನ್ನಷ್ಟು ಮಾತನಾಡಲಿ ಎಂಬುದು ಎಲ್ಲರ ಬಯಕೆ ಆಗಿತ್ತು. ನಿರೂಪಕಿ ಕೂಡ ಮೇಲಿಂದ ಮೇಲೆ ಪ್ರಶ್ನೆಗಳನ್ನ ಕೇಳುತ್ತಲೇ ಇದ್ದರು. ಆದರೆ ಜಾಸ್ತಿ ಬಾಯಿ ಬಿಟ್ಟರೆ ವಿಷಯ ಲೀಕ್ ಆಗುತ್ತದೆ ಎಂಬುದು ಮೀನಾಕ್ಷಿಗೆ ಅರ್ಥವಾಯ್ತು. ಹಾಗಾಗಿ ಅವರು ನೋ ಲೀಕ್ಸ್ ಎಂದು ಜೋರಾಗಿ ಹೇಳಿದರು. ಆ ಮೂಲಕ ಸಿನಿಮಾದ ಬಗೆಗಿನ ಯಾವುದೇ ಪ್ರಮುಖ ವಿಷಯಗಳನ್ನು ಅವರು ಬಿಟ್ಟುಕೊಟ್ಟಿಲ್ಲ. ವೇದಿಕೆಯಲ್ಲಿ ನೆಚ್ಚಿನ ನಟ ಮಹೇಶ್ ಬಾಬು ಜೊತೆ ಮಾತನಾಡಿದ್ದಕ್ಕೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಈ ಸಿನಿಮಾದ ಹೆಚ್ಚಿನ ಮಾಹಿತಿಗೆ ಮುಂದಿನ ದಿನಗಳವರೆಗೂ ಕಾಯಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸ್ಟಾರ್ ನಟಿಯರಿಗೆ ಕೊಕ್ ನೀಡಿ, ಯುವ ನಟಿಗೆ ಅವಕಾಶ ಕೊಟ್ಟ ಗುಂಟೂರು ಖಾರಂ

    ಸ್ಟಾರ್ ನಟಿಯರಿಗೆ ಕೊಕ್ ನೀಡಿ, ಯುವ ನಟಿಗೆ ಅವಕಾಶ ಕೊಟ್ಟ ಗುಂಟೂರು ಖಾರಂ

    ಹೇಶ್ ಬಾಬು (Mahesh Babu) ಮುಖ್ಯ ಭೂಮಿಕೆಯ ಗುಂಟೂರು ಖಾರಂ (Guntur Kharam) ಸಿನಿಮಾಗೆ ನಾಯಕಿ ಯಾರು ಎನ್ನುವ ಚರ್ಚೆ ಹಲವು ದಿನಗಳಿಂದ ನಡೆಯುತ್ತಲೇ ಇದೆ. ಪೂಜಾ ಹೆಗಡೆ (Pooja Hegde) ಬಿಟ್ಟು ಹೋದ ಸ್ಥಾನವನ್ನು ತುಂಬುವವರು ಯಾರು? ಎನ್ನುವ ಪ್ರಶ್ನೆ ಮೂಡಿತ್ತು. ಶ್ರೀಲೀಲಾ, ತ್ರಿಷಾ ಸೇರಿದಂತೆ ಹಲವರು ಹೆಸರು ನಾಯಕಿ ಸ್ಥಾನಕ್ಕಾಗಿ ಕೇಳಿ ಬಂದಿತ್ತು. ಈ ಎಲ್ಲ ಸ್ಟಾರ್ ನಟಿಯರಿಗೆ ಕೊಕ್ ನೀಡಿ, ಯುವ ನಟಿಗೆ ಮಣೆ ಹಾಕಿದೆ ಚಿತ್ರತಂಡ.

    ಹೌದು, ಈ ಹಿಂದೆ ಕನ್ನಡದ ನಟಿ ಶ್ರೀಲೀಲಾ ಅಥವಾ ಸ್ಟಾರ್ ನಟಿ ತ್ರಿಷಾ ಈ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಲಿದ್ದಾರೆ ಎನ್ನುವ ಸುದ್ದಿಯಿತ್ತು. ಆದರೆ, ಇದೀಗ ಬಂದ ಮಾಹಿತಿಯ ಪ್ರಕಾರ, ಯುವ ನಟಿ ಮೀನಾಕ್ಷಿ ಚೌಧರಿ (Meenakshi Chaudhary) ಎಂಟ್ರಿಯಾಗಿದೆ.  ಕಿರುತೆರೆಯ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟವರು ಮೀನಾಕ್ಷಿ. ಆನಂತರ ಸಿನಿಮಾ ರಂಗವನ್ನು ಪ್ರವೇಶ ಮಾಡಿದವರು. ಹಿಟ್ : ದಿ ಸೆಕೆಂಡ್ ಕೇಸ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ಇವರು ನಟಿಸಿದ್ದಾರೆ. ಇದನ್ನೂ ಓದಿ: ಹೃದಯ ಕಿತ್ತು ಎದೆಗೆ ಹಚ್ಚಿಕೊಂಡು ಪಾರ್ಟಿಗೆ ಬಂದ ಉರ್ಫಿ ಜಾವೇದ್

    ಮೀನಾಕ್ಷಿ ನಾಯಕಿಯಾಗಿ ನಟಿಸುತ್ತಿದ್ದರೆ, ಹಾಟ್ ಬ್ಯೂಟಿ ರಮ್ಯಾ ಕೃಷ್ಣ (Ramya Krishna) ವಿಶೇಷ ಪಾತ್ರವೊಂದನ್ನು ಮಾಡಲಿದ್ದಾರೆ. ಬಾಹುಬಲಿ ಸಿನಿಮಾದಲ್ಲಿ ಶಿವಗಾಮಿನಿ ಪಾತ್ರ ಮಾಡಿದ್ದ ರಮ್ಯಾ ಕೃಷ್ಣ ಅಲ್ಲಿಂದ ಅವರು ಮತ್ತೆ ಬೇಡಿಕೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಮಹೇಶ್ ಬಾಬು ಸಿನಿಮಾವನ್ನು ರಮ್ಯಾ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರಿಗಾಗಿಯೇ ಪಾತ್ರವನ್ನು ಹಿಗ್ಗಿಸಿದ್ದಾರಂತೆ ಚಿತ್ರತಂಡ.

     

    ಗುಂಟೂರು ಖಾರಂ’ ಸಿನಿಮಾ ಶೂಟಿಂಗ್ ಪದೇ ಪದೇ ತಡವಾಗುತ್ತಿದೆ. ಚಿತ್ರಕಥೆಯಲ್ಲಿ ಬದಲಾವಣೆ ಮಾಡುತ್ತಿದ್ದು ಬರುವ ಸಂಕ್ರಾಂತಿಗೂ ಸಿನಿಮಾ ರಿಲೀಸ್ ಆಗಲ್ಲ ಎನ್ನುವ ವಾದ ಶುರುವಾಗಿದೆ. ಟಾಲಿವುಡ್ ಮಾತ್ರವಲ್ಲದೇ ಬಾಲಿವುಡ್‌ನಲ್ಲೂ ಬೇಡಿಕೆ ಸೃಷ್ಟಿಸಿಕೊಂಡಿರುವ ಪೂಜಾ ಹೆಗ್ಡೆಗೆ ಈಗ ಡೇಟ್ಸ್ ಸಮಸ್ಯೆ ಕಾರಣದಿಂದಾಗಿ ಶೂಟಿಂಗ್ ಮುಂದೂಡಲ್ಪಟ್ಟಿತ್ತು. ಕೆಲವು ದೃಶ್ಯಗಳನ್ನು ರೀಶೂಟ್ ಮಾಡುವಂತೆ ಮಹೇಶ್ ಬಾಬು ತಿಳಿಸಿದ್ದಾರೆ ಎಂದೂ ಹೇಳಲಾಗುತ್ತಿದೆ. ಹೀಗಾಗಿ ಎಲ್ಲ ಪಕ್ಕಾ ಮಾಡಿಕೊಂಡೇ ಈ ಬಾರಿ ಚಿತ್ರೀಕರಣಕ್ಕೆ ಹೊರಡಲಿದೆ ಚಿತ್ರತಂಡ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]