Tag: ಮುಂಡ್ವಾ ಪೊಲೀಸ್ ಠಾಣೆ

  • ಸೋದರಮಾವನ ಜೊತೆ ಸೇರಿ ಪತಿಯನ್ನೇ ಕೊಂದಳು!

    ಸೋದರಮಾವನ ಜೊತೆ ಸೇರಿ ಪತಿಯನ್ನೇ ಕೊಂದಳು!

    ಮುಂಬೈ: ಪತಿಯ ಕುಡಿತದಿಂದ ಬೇಸತ್ತು ಪತ್ನಿ ಸೋದರಮಾವನ ಸಹಾಯದಿಂದ ಕೊಲೆ ಮಾಡಿದ ಘಟನೆಯೊಂದು ಪುಣೆಯಲ್ಲಿ ಬೆಳಕಿಗೆ ಬಂದಿದೆ.

    ಮೃತ ವ್ಯಕ್ತಿಯನ್ನು ಕಪ್ತಾನ್‍ಸಿಂಗ್ ನಾಯಕ್(37) ಎಂದು ಗುರುತಿಸಲಾಗಿದೆ. ಅಂಜಲಿ ಚವ್ಹಾಣ್ ನಾಯಕ್(32) ಮತ್ತು ಸೋದರಮಾವ ಗಜೇಂದ್ರ ಚಿತ್ತಾರಸಿಂಗ್ ನಾಯಕ್(36) ಸೇರಿ ಕಪ್ತಾನ್‍ಸಿಂಗ್ ನಾಯಕ್‍ನನ್ನು ಕೊಂದಿದ್ದಾರೆ. ಪ್ರಸ್ತುತ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಎಂದಿಗೂ ಮನೆಗೆ ಬಾರದ ಮಾಲಕಿಗಾಗಿ ಕಾಯುತ್ತಿರುವ ನಾಯಿ – ವೀಡಿಯೋ ವೈರಲ್!

    POLICE JEEP

    ಕಾರಣವೇನು?
    ಕಪ್ತಾನ್‍ಸಿಂಗ್ ಮತ್ತು ಅವರ ಪತ್ನಿ ಅಂಜಲಿ ಚವ್ಹಾಣ್-ನಾಯಕ್ ಮುಂಡ್ವಾದ ಕೇಶವನಗರ ಪ್ರದೇಶದಲ್ಲಿ ವಾಸಿಸುತ್ತಿದ್ದರು. ಮೃತ ವ್ಯಕ್ತಿ ದೆಹಲಿ ಮೂಲದವರಾಗಿದ್ದು, ಪುಣೆಯಲ್ಲಿ ವಾಸವಾಗಿದ್ದರು. ಕಪ್ತಾನ್‍ಸಿಂಗ್ ದಿನಗೂಲಿ ಕೆಲಸ ಮಾಡುತ್ತಿದ್ದು, ಕುಡಿತದ ಚಟ ಇತ್ತು.

    ಅಲ್ಲದೆ ಕುಡಿದು ಬಂದು ದಿನನಿತ್ಯ ಅಂಜಲಿ ಮೇಲೆ ಹಲ್ಲೆ ಮಾಡುತ್ತಿದ್ದ. ಇದರಿಂದ ಬೇಸತ್ತ ಅಂಜಲಿ ಭಾನುವಾರ ಮಧ್ಯಾಹ್ನ, ತನ್ನ ಸಹೋದರಿಯ ಪತಿಯಿಂದ ಸಹಾಯ ಕೇಳಿದ್ದಾಳೆ. ಈ ಸಂಬಂಧ ಇಬ್ಬರು ಸೇರಿ ತಮ್ಮ ಮನೆಯಲ್ಲೇ ಕಪ್ತಾನ್ ಸಿಂಗ್‍ನನ್ನು ಹೊಡೆದು ಕೊಂದಿದ್ದಾರೆ. ಇದನ್ನೂ ಓದಿ: ಪಿಂಚಣಿ ಪಡೆಯಲು ಚಿಕ್ಕಪ್ಪನ ಶವವನ್ನ ಪೋಸ್ಟ್ ಆಫೀಸ್‍ಗೇ ತಂದ!

    ಮುಂಡ್ವಾ ಪೊಲೀಸ್ ಠಾಣೆಯ ಪೊಲೀಸರಿಗೆ ಈ ಮಾಹಿತಿ ತಿಳಿದ ತಕ್ಷಣ ಇಬ್ಬರನ್ನು ಬಂಧಿಸಿದ್ದಾರೆ. ಪ್ರಸ್ತುತ ಇವರಿಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302(ಕೊಲೆ) ಮತ್ತು 34 ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.