Tag: ಮುಂಬೈ ಕೋರ್ಟ್

  • ಲೈಂಗಿಕ ದೌರ್ಜನ್ಯ ಕೇಸ್‌ | ಕ್ರಿಕೆಟಿಗ ಪೃಥ್ವಿ ಶಾಗೆ 100 ರೂ. ದಂಡ ವಿಧಿಸಿದ ಮುಂಬೈ ಕೋರ್ಟ್

    ಲೈಂಗಿಕ ದೌರ್ಜನ್ಯ ಕೇಸ್‌ | ಕ್ರಿಕೆಟಿಗ ಪೃಥ್ವಿ ಶಾಗೆ 100 ರೂ. ದಂಡ ವಿಧಿಸಿದ ಮುಂಬೈ ಕೋರ್ಟ್

    ಮುಂಬೈ: ಸೋಷಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಸಪ್ನಾ ಗಿಲ್ ತಮ್ಮ ವಿರುದ್ಧ ಸಲ್ಲಿಸಿದ್ದ ದೂರಿಗೆ ಉತ್ತರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ ಕಾರಣ ಕ್ರಿಕೆಟಿಗ ಪೃಥ್ವಿ ಶಾಗೆ (Prithvi Shaw) ಮುಂಬೈ ಕೋರ್ಟ್‌ 100 ರೂ. ದಂಡ ವಿಧಿಸಿದೆ. ದೂರಿಗೆ ಉತ್ತರಿಸುವಂತೆ ಕೋರ್ಟ್ (Mumbai Court) ಹೇಳಿದ್ದರೂ ಉತ್ತರಿಸದ ಹಿನ್ನೆಲೆ 100 ರೂ. ದಂಡ ವಿಧಿಸಿದ್ದು, ಅರ್ಜಿ ವಿಚಾರಣೆಯನ್ನ ಡಿಸೆಂಬರ್ 16ಕ್ಕೆ ಮುಂದೂಡಿದೆ.

    2024ರ ಏಪ್ರಿಲ್‌ನಲ್ಲಿ ದಿನೋಶಿ ಸೆಷನ್ಸ್ ಕೋರ್ಟ್‌ನಲ್ಲಿ (Dindoshi sessions court) ಹಿಂದಿನ ಮ್ಯಾಜಿಸ್ಟ್ರೇಟ್‌ ನೀಡಿದ್ದ ಆದೇಶವನ್ನು ಪರಿಷ್ಕರಿಸುವಂತೆ ಇನ್‌ಫ್ಲುಯೆನ್ಸರ್ ಸಪ್ನಾ ಗಿಲ್‌ (Sapna Gill) ಅರ್ಜಿ ಸಲ್ಲಿಸಿದ್ದರು. ಆ ನಂತರ ಶಾ ವಿರುದ್ಧ ಎಫ್‌ಐಆರ್‌ ದಾಖಲಿಸಲು ನಿರಾಕರಿಸಿ ಪ್ರಾಥಮಿಕ ತನಿಖೆಗೆ ಆದೇಶಿಸಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ನೀಡಲು ಪೃಥ್ವಿ ಶಾಕೆ ಸೂಚಿಸಿತ್ತು. ಆದ್ರೆ ಪೃಥ್ವಿ ಶಾ ಉತ್ತರ ನೀಡಲು ನಿರ್ಲಕ್ಷ್ಯ ವಹಿಸಿದ್ದಾರೆ. ಹೀಗಾಗಿ 100 ರೂ. ದಂಡ ವಿಧಿಸಿರುವ ಕೋರ್ಟ್‌, ಉತ್ತರ ನೀಡಲು ಮತ್ತೊಂದು ಅವಕಾಶ ನೀಡಿ, ಡಿ.16ಕ್ಕೆ ವಿಚಾರಣೆ ಮುಂದೂಡಿದೆ. ಇದನ್ನೂ ಓದಿ: ಕ್ರಿಕೆಟಿಗ ಪೃಥ್ವಿ ಶಾ ಕಾರಿನ ಮೇಲೆ ದಾಳಿ – ಸಿನಿ ತಾರೆ ಸಪ್ನಾ ಗಿಲ್ ಅರೆಸ್ಟ್

    ಸಪ್ನಾ ಗಿಲ್‌ ಪರ ವಕೀಲರ ವಾದ ಏನು?
    ಪೃಥ್ವಿ ಶಾ ನ್ಯಾಯಾಂಗದ ಪ್ರಕ್ರಿಯೆಯ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹಲವು ಬಾರಿ ಸಮನ್ಸ್‌ ನೀಡಿದ್ದರೂ ಪ್ರಕರಣವನ್ನು ಉತ್ತರ ಕೊಟ್ಟಿಲ್ಲ. ಹೀಗಾಗಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಕ್ರಮ ವಹಿಸಬೇಕು ಅನ್ನೋದು ಸಪ್ನಾ ಪರ ವಕೀಲ ಅಲಿ ಕಾಶಿಫ್ ಖಾನ್ ಅವರ ವಾದವಾಗಿದೆ.  ಇದನ್ನೂ ಓದಿ: ಹಸಿರು ಉಡುಗೆಯಲ್ಲಿ ಸಪ್ನಾ ಶೈನ್ – ಕೊಹ್ಲಿ ಜೊತೆ ಜಗಳವಾಡಿದ್ರೆ ಇನ್ನೂ ಫೇಮಸ್ ಆಗ್ತೀರಿ: ನೆಟ್ಟಿಗರಿಂದ ತರಾಟೆ

    Sapna gill 4

    ಏನಿದು ಲೈಂಗಿಕ ದೌರ್ಜನ್ಯ ಕೇಸ್‌?
    2023ರ ಫೆಬ್ರವರಿ 15ರಂದು ಪೃಥ್ವಿ ಶಾ ಮುಂಬೈನ ಸಾಂತ್ರಾಕ್ರೂಜ್‌ನಲ್ಲಿರುವ ಪಂಚತಾರಾ ಹೋಟೆಲ್‌ಗೆ ಊಟಕ್ಕೆ ಹೋಗಿದ್ದರು. ಈ ವೇಳೆ ಸಪ್ನಾ ಗಿಲ್ ಮತ್ತು ಅವರ ತಂಡ ಪೃಥ್ವಿ ಶಾ ಅವರೊಂದಿಗೆ ಸೆಲ್ಫಿಗೆ ಒತ್ತಾಯಿಸಿದ್ದರು. ಈ ವೇಳೆ ಪೃಥ್ವಿ ಶಾ ನಿರಾಕರಿಸಿದ್ದು, ನಾನು ಸ್ನೇಹಿತರೊಂದಿಗೆ ಊಟಕ್ಕೆ ಬಂದಿದ್ದೇನೆ. ಯಾರಿಗೂ ತೊಂದರೆ ಕೊಡಲು ಬಯಸುವುದಿಲ್ಲ ಎಂದು ಹೇಳಿದ್ದರು. ಆದರೂ ಸೆಲ್ಫಿಗೆ ಒತ್ತಾಯಿಸಿದ್ದರಿಂದ ಹೋಟೆಲ್ ವ್ಯವಸ್ಥಾಪಕರಿಗೆ ಪೃಥಿ ಶಾ ತಿಳಿಸಿದ್ದರು.  ಇದನ್ನೂ ಓದಿ: ಪೃಥ್ವಿ ಶಾ ಯಾರು ಅಂತಾನೇ ಗೊತ್ತಿಲ್ಲ, ಆತ ಕುಡಿದು ಬಂದಿದ್ದ – ಸಪ್ನಾ ಗಿಲ್

    ಬಳಿಕ ಹೋಟೆಲ್‌ನವರು ಆ ಗುಂಪನ್ನು ಹೊರಗೆ ಕಳಿಸಿದ್ದರು. ಇದರಿಂದ ಕೆರಳಿದ ಆ ಗುಂಪು, ಅವರು ಊಟ ಮುಗಿಸಿ ಹೊರಗೆ ಬರುತ್ತಿದ್ದಂತೆ ಬೇಸ್‌ಬಾಲ್ ಬ್ಯಾಟ್‌ಗಳಿಂದ ಬಿಎಂಡಬ್ಲ್ಯೂ ಕಾರಿನ ಮೇಲೆ ಅಟ್ಯಾಕ್ ಮಾಡಿದ್ದರು. ಕಾರಿನ ಹಿಂಭಾಗ, ಮುಂಭಾಗದ ಗಾಜುಗಳನ್ನು ಚಚ್ಚಿ ಪುಡಿಪುಡಿ ಮಾಡಿದ್ದರು. ಅಷ್ಟೇ ಅಲ್ಲ, ಪೃಥ್ವಿ ಸ್ನೇಹಿತನಿಂದ 50 ಸಾವಿರ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಅಷ್ಟರಲ್ಲಿ ಪೃಥ್ವಿ ಶಾ ಅವರನ್ನು ಬೇರೆ ಕಾರಿನಲ್ಲಿ ಕಳುಹಿಸಲಾಗಿತ್ತು. ಈ ಸಂಬಂಧ ಓಶಿವಾರಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸಪ್ನಾಗಿಲ್‌ರನ್ನ ಬಂಧಿಸಲಾಗಿತ್ತು. ಆ ಬಳಿಕ ಪೃಥ್ವಿ ಶಾ ವಿರುದ್ಧವೇ ಸಪ್ನಾ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದರು.

  • ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ ಕೇಸ್‌ – ಪ್ರಿಯಕರನಿಗೆ ಜಾಮೀನು

    ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ ಕೇಸ್‌ – ಪ್ರಿಯಕರನಿಗೆ ಜಾಮೀನು

    – ನಾನ್‌ವೆಜ್ ಸೇವನೆ ಬಿಡುವಂತೆ ಪದೇ ಪದೇ ಒತ್ತಾಯಿಸುತ್ತಿದ್ದ ಪ್ರಿಯಕರ

    ಮುಂಬೈ: ಒಂದು ತಿಂಗಳ ಹಿಂದೆಯಷ್ಟೇ ಏರ್‌ ಇಂಡಿಯಾ ಪೈಲಟ್‌ (Air India Pilot) ಆತ್ಮಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಆಕೆಯ ಪ್ರಿಯಕರನಿಗೆ ಮುಂಬೈ ಕೋರ್ಟ್‌ (Mumbai Court) ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

    ಆಹಾರ ಪದ್ಧತಿ ಬದಲಾಯಿಸುವಂತೆ ಮತ್ತು ಮಾಂಸಾಹಾರ (Nonveg Food) ಸೇವಿಸುವುದನ್ನು ನಿಲ್ಲಿಸುವಂತೆ ಪ್ರಿಯಕರ ಒತ್ತಡ ಹೇರಿದ ಪರಿಣಾಮ ಏರ್ ಇಂಡಿಯಾ ಪೈಲಟ್ ಸೃಷ್ಟಿ ತುಲಿ (25) ಅಂಧೇರಿಯ ಮರೋಲ್ ಪ್ರದೇಶದಲ್ಲಿರುವ ‘ಕನಕಿಯಾ ರೈನ್ ಫಾರೆಸ್ಟ್’ ಬಾಡಿಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಕಳೆದ ನವೆಂಬರ್‌ 25ರಂದು ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಳು. ಘಟನೆ ಬೆಳಕಿಗೆ ಬಂದ ಮರುದಿನವೇ ಆಕೆಯ ಗೆಳೆಯನನ್ನ ಪೊಲೀಸರು ಬಂಧಿಸಿದ್ದರು. ಬಿಎನ್‌ಎಸ್‌ ಸೆಕ್ಷನ್‌ 108 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

    ಪ್ರಕರಣದ ವಿಚಾರಣೆಗಾಗಿ ಇಂದು ಆರೋಪಿಯನ್ನ ಮುಂಬೈನ ಸೆಷನ್‌ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ (ದಿಂಡೋಶಿ ನ್ಯಾಯಾಲಯ) ಟಿ.ಟಿ ಅಗ್ಲಾವ್ ಜಾಮೀನು ನೀಡಿ ಆದೇಶಿಸಿದ್ದಾರೆ. ಆದ್ರೆ ಪೊಲೀಸರಿಗೆ ಇನ್ನೂ ಕೋರ್ಟ್‌ ಆದೇಶದ ಪ್ರತಿ ಲಭ್ಯವಾಗಿಲ್ಲ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ದೆಹಲಿ, ಉತ್ತರಾಖಂಡ್‌ನಲ್ಲಿ ಮಳೆ; ಪಶ್ಚಿಮ ಹಿಮಾಲಯದಲ್ಲಿ ಹಿಮಪಾತ – ಹವಾಮಾನ ಇಲಾಖೆ ಮುನ್ನೆಚ್ಚರಿಕೆ

    ತುಳಿ ಅವರ ತಂದೆ ನೀಡಿದ ದೂರಿನಲ್ಲಿ ಆರೋಪಿಗಳು ಮತ್ತು ಅವರ ಮಗಳು ಆತ್ಮಹತ್ಯೆಗೆ ಐದು-ಆರು ದಿನಗಳ ಮೊದಲು ಒಂದೇ ಕೋಣೆಯಲ್ಲಿ ವಾಸಿಸುತ್ತಿದ್ದರು. ಆದರೆ, ಘಟನೆ ನಡೆದ ದಿನ ಆರೋಪಿಗಳು ದೆಹಲಿಗೆ ತೆರಳಿದ್ದರು. ಇದನ್ನೂ ಓದಿ: ನಾನ್‌ವೆಜ್ ಸೇವನೆ ಬಿಡುವಂತೆ ಒತ್ತಡ; ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ – ಪ್ರಿಯಕರ ಅರೆಸ್ಟ್

    ಏನಿದು ಪ್ರಕರಣ?
    ಆರೋಪಿ ಆದಿತ್ಯ ಸೃಷ್ಟಿಯನ್ನು ಪದೇಪದೇ ಸಾರ್ವಜನಿಕವಾಗಿ ಅವಮಾನಿಸುವುದಲ್ಲದೇ ಆಕೆಯ ಆಹಾರ ಪದ್ಧತಿ ಬದಲಾಯಿಸುವಂತೆ ಹೇಳುತ್ತಿದ್ದ. ಅಲ್ಲದೇ ಮಾಂಸಾಹಾರ ಸೇವನೆ ಬಿಡುವಂತೆ ಆಕೆಯ ಮೇಲೆ ಒತ್ತಡ ಹೇರಿದ್ದ ಎಂದು ಸೃಷ್ಟಿ ಚಿಕ್ಕಪ್ಪ ಆರೋಪಿಸಿದ್ದಾರೆ. ಈ ವಿಷಯವಾಗಿ ಇಬ್ಬರ ನಡುವೆ ಜಗಳವಾಗಿತ್ತು.

    ನಂತರ ದೆಹಲಿಗೆ ತೆರಳುತ್ತಿದ್ದ ಪ್ರಿಯಕರ ಆದಿತ್ಯನಿಗೆ ಸೃಷ್ಟಿ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಳು. ಇದನ್ನು ತಿಳಿದ ಆದಿತ್ಯ ತಕ್ಷಣವೇ ಆಕೆ ಇದ್ದ ಫ್ಲ್ಯಾಟ್‌ಗೆ ಬಂದು ನೋಡಿದಾಗ ಬಾಗಿಲು ಲಾಕ್ ಆಗಿತ್ತು. ಈ ವೇಳೆ ನಕಲಿ ಕೀ ತಯಾರಕರನ್ನು ಕರೆಸಿ ಬಾಗಿಲು ತೆಗೆದು ನೋಡಿದಾಗ ಸೃಷ್ಟಿ ಡೇಟಾ ಕೇಬಲ್ ಸಹಾಯದಿಂದ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಆಕೆಯನ್ನು ಅಂಧೇರಿಯ ಸೆವೆನ್ ಹಿಲ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟು ಹೊತ್ತಿಗಾಗಲೇ ಆಕೆಯ ಪ್ರಾಣಪಕ್ಷಿ ಹಾರಿಹೋಗಿತ್ತು.

    ಸೃಷ್ಟಿ ಉತ್ತರ ಪ್ರದೇಶ ಮೂಲದವಳಾಗಿದ್ದು, ಕಳೆದ ವರ್ಷ ಜೂನ್‌ನಿಂದ ಮುಂಬೈನಲ್ಲಿ ನೆಲೆಸಿದ್ದಳು. 2 ವರ್ಷಗಳ ಹಿಂದೆ ದೆಹಲಿಯಲ್ಲಿ ವಾಣಿಜ್ಯ ಪೈಲಟ್ ಕೋರ್ಸ್ ಓದುತ್ತಿರುವಾಗ ಆದಿತ್ಯನನ್ನ ಭೇಟಿಯಾಗಿದ್ದಳು. ನಂತರ ಇವರಿಬ್ಬರ ಸ್ನೇಹ ಪ್ರೀತಿಗೆ ಬದಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮನಮೋಹನ್‌ ಸಿಂಗ್‌ಗೆ ಅಂತಿಮ ನಮನ ಸಲ್ಲಿಸಿದ ರಾಹುಲ್‌, ಸೋನಿಯಾ ಗಾಂಧಿ

  • ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಪೊಲೀಸ್‌ ಕಸ್ಟಡಿಗೆ ಓರ್ವ ಕೊಲೆ ಆರೋಪಿ

    ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ: ಪೊಲೀಸ್‌ ಕಸ್ಟಡಿಗೆ ಓರ್ವ ಕೊಲೆ ಆರೋಪಿ

    ಮುಂಬೈ: ಮಹಾರಾಷ್ಟ್ರದ (Maharashtra) ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ (Baba Siddique Murder Case)  ಸಂಬಂಧ ಓರ್ವ ಕೊಲೆ ಆರೋಪಿಯನ್ನು ಅ.21 ರವರೆಗೆ ಪೊಲೀಸ್‌ ಕಸ್ಟಡಿಗೆ ಮುಂಬೈ ಕೋರ್ಟ್ (Mumbai Case) ಒಪ್ಪಿಸಿದೆ

    ಬಂಧಿತ ಆರೋಪಿಗಳನ್ನು ಹರಿಯಾಣ ಮೂಲದ ಗುರ್ಮೈಲ್ ಸಿಂಗ್ ಹಾಗೂ ಉತ್ತರ ಪ್ರದೇಶ ಮೂಲದ ಧರ್ಮರಾಜ್ ಸಿಂಗ್ ಕಶ್ಯಪ್ ಎಂದು ಗುರುತಿಸಲಾಗಿದೆ. ಇಂದು (ಅ.13) ಬೆಳಗ್ಗೆ ಮುಂಬೈ ಪೊಲೀಸರು ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮುಂಬೈನ ಎಸ್ಪ್ಲೇನೇಡ್‌ ಕೋರ್ಟ್‌ಗೆ (Esplanade Court) ಹಾಜರುಪಡಿಸಿದ್ದಾರೆ.ಇದನ್ನೂ ಓದಿ: ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಸಿರಾಜ್‌ – ಪೊಲೀಸ್‌ ಡ್ರೆಸ್‌ನಲ್ಲಿ ವೇಗಿ

    ಇಬ್ಬರು ಆರೋಪಿಗಳ ಪೈಕಿ ಗುರ್ಮೈಲ್ ಸಿಂಗ್‌ನನ್ನು ಅ.21ರವರೆಗೆ ಮುಂಬೈ ಕ್ರೈಂ ಬ್ರ್ಯಾಂಚ್‌ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ. ಆರೋಪಿ ಧರ್ಮರಾಜ್ ಸಿಂಗ್ ಕಶ್ಯಪ್ ತಾನು ಅಪ್ರಾಪ್ತ ಎಂದು ಹೇಳಿಕೊಂಡಿದ್ದ. ಅದಕ್ಕೆ ಕೋರ್ಟ್, ಆತನಿಗೆ ಮೂಳೆ ಪರೀಕ್ಷೆಯ ಬಳಿಕ ಮತ್ತೆ ಕೋರ್ಟ್‌ಗೆ ಹಾಜರುಪಡಿಸುವಂತೆ ಸೂಚಿಸಿದೆ.

    ಆಸಿಫೀಕೇಶನ್ ಪರೀಕ್ಷೆ (Ossification Test) (ಮೂಳೆ ಪರೀಕ್ಷೆ) ಎಂದರೆ ಮೂಳೆಗಳ ಸಮ್ಮಿಲನದ ಆಧಾರದ ಮೇಲೆ ವಯಸ್ಸಿನ ಪತ್ತೆ ಹಚ್ಚುವಿಕೆ ಪರೀಕ್ಷೆಯಾಗಿರುತ್ತದೆ. ಸಾಮಾನ್ಯವಾಗಿ ಯಾವುದೇ ಪ್ರಕರಣದಲ್ಲಿ ವಯಸ್ಸು ಪತ್ತೆ ಹಚ್ಚಲು ಈ ಪರೀಕ್ಷಾ ವಿಧಾನವನ್ನು ಬಳಸುತ್ತಾರೆ.

    ಆರೋಪಿ ಸಿದ್ದಾರ್ಥ ಅಗರವಾಲ್‌ನ ವಕೀಲರು ಮಾತನಾಡಿ, ಪೊಲೀಸರು ಆರೋಪಿಗಳನ್ನು ಹಾಜರುಪಡಿಸಿದ್ದಾರೆ. ನಾವು ಕೆಲವು ಆಧಾರಗಳನ್ನು ನೀಡಿದ್ದೇವೆ. ಅವುಗಳ ಆಧಾರದ ಮೇಲೆ ಓರ್ವ ಆರೋಪಿಗೆ ಪೊಲೀಸ್‌ ಕಸ್ಟಡಿಗೆ ವಹಿಸಿದೆ. ಇನ್ನೋರ್ವ ಆರೋಪಿಯನ್ನು ಆಸಿಫೀಕೇಶನ್ ಪರೀಕ್ಷೆಗೆ ಕಳಿಸಿದ್ದಾರೆ.

    ಮುಂಬೈ ಪೊಲೀಸರ ಮಾಹಿತಿ ಪ್ರಕಾರ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಗುರುತಿಸಲಾಗಿದ್ದು, ಮೊಹಮ್ಮದ್ ಜೀಶನ್ ಅಖ್ತರ್ ಎಂದು ಪತ್ತೆಹಚ್ಚಲಾಗಿದೆ. ಸದ್ಯ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ.ಇದನ್ನೂ ಓದಿ: ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ಮಹೇಲಾ ಜಯವರ್ಧನೆ ಮರುನೇಮಕ

  • ಮಸೀದಿ ಪಕ್ಕ ನಿಂತಿದ್ದ ಹುಡ್ಗಿಯನ್ನ ʻಹಾಟ್‌ʼ ಅಂತ ಕರೆದಿದ್ದ ವೃದ್ಧ – 7 ವರ್ಷಗಳ ಬಳಿಕ 3 ವರ್ಷ ಜೈಲು ಶಿಕ್ಷೆ

    ಮುಂಬೈ: ಅಪ್ರಾಪ್ತ ಹುಡುಗಿಯನ್ನು ಅನುಚಿತವಾಗಿ ಸ್ಪರ್ಶಿಸಿ ʻಹಾಟ್‌ʼಎಂದು ಕರೆದಿದ್ದಕ್ಕಾಗಿ 50 ವರ್ಷದ ವೃದ್ಧನಿಗೆ ಮುಂಬೈ ವಿಶೇಷ ನ್ಯಾಯಾಲಯವು (Mumbai Speical Court) 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

    ಈ ಕೃತ್ಯವು ಆರೋಪಿಯು ಲೈಂಗಿಕ ದೌರ್ಜನ್ಯ ಎಸಗುವ ಉದ್ದೇಶವನ್ನು ತೋರಿಸುತ್ತದೆ ಎಂದು ಕೋರ್ಟ್‌ ಗಮನಿಸಿದೆ. ಈ ಹಿನ್ನೆಲೆಯಲ್ಲಿ 2016ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 3 ವರ್ಷ ಜೈಲು (Jail) ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ಸಂಸತ್‌ ಮೇಲಿನ ದಾಳಿ ಗಂಭೀರವಾದದ್ದು; ಚರ್ಚೆ ಬೇಡ, ವಿಸ್ತೃತ ತನಿಖೆಯಾಗಲಿ: ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ

    ವಿಶೇಷ ಪೋಕ್ಸೊ ನ್ಯಾಯಾಲಯದ (POCSO Court) ನ್ಯಾಯಾಧೀಶರಾದ ಎಸ್.ಸಿ ಜಾಧವ್ ಅವರು ಡಿಸೆಂಬರ್ 14 ರಂದು ಆರೋಪಿಗೆ ಭಾರತೀಯ ದಂಡ ಸಂಹಿತೆಗೆ (IPC) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಹಿಂಬಾಲಿಸುವುದು ಮತ್ತು ಕಿರುಕುಳ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆಯ ನಿಬಂಧನೆಗಳ ಅಡಿಯಲ್ಲಿ ದೋಷಿ ಎಂದು ಪರಿಗಣಿಸಿ ತೀರ್ಪು ನೀಡಿದ್ದಾರೆ.

    ಈ ಪ್ರಕರಣವು 2016ರ ಮೇ 24ರಂದು ನಡೆದಿತ್ತು. ಆಗ ಹುಡುಗಿಗೆ 13 ವರ್ಷ ವಯಸ್ಸಾಗಿತ್ತು. ಸಂತ್ರಸ್ತೆ ಮತ್ತು ಪ್ರಾಸಿಕ್ಯೂಷನ್‌ ಸಾಕ್ಷಿಯ ಒಟ್ಟಾರೆ ಸಾಕ್ಷ್ಯವನ್ನು ಪರಿಶೀಲಿಸಿಸಲಾಯಿತು. ಈ ವೇಳೆ ಹುಡುಗಿ ಆ ದಿನಾಂಕದಂದು ಅಂದು ಮಸೀದಿ ಬಳಿ ನಿಂತಿದ್ದಾಗ ಆರೋಪಿ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದ, ಜೊತೆಗೆ ಆಕೆ ತುಂಬಾ ʻಹಾಟ್‌ʼ ಆಗಿ ಕಾಣ್ತಿದ್ದಾಳೆ ಎಂದು ಕರೆದಿದ್ದ. ಅಷ್ಟೇ ಅಲ್ಲದೇ ಆಕೆ ಕೆನ್ನೆಗೆ ಮುತ್ತಿಡಲು ಬಯಸಿದ್ದ, ಆಕೆಯನ್ನು ತನ್ನೊಂದಿಗೆ ಕೆರೆದುಕೊಂಡು ಹೋಗಬೇಕು ಅನ್ನಿಸುತ್ತದೆ ಎಂಬ ಮಾತುಗಳನ್ನಾಡಿರುವುದು ಸಾಬೀತಾಗಿದೆ.

    ಆರೋಪಿಯ ಈ ಹೇಳಿಕೆಗಳು ಲೈಂಗಿಕ ದೌರ್ಜನ್ಯ ಎಸಗುವ ಉದ್ದೇಶ ಸೂಚಿಸುತ್ತದೆ ಎಂಬುದನ್ನು ಗಮನಿಸಿ ಆರೋಪಿಗೆ ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ನನ್ನ 3ನೇ ಅವಧಿಯಲ್ಲಿ ಭಾರತ ಟಾಪ್‌-3 ಆರ್ಥಿಕತೆಯಲ್ಲಿ ಒಂದಾಗಲಿದೆ: ಮೋದಿ ಮತ್ತೊಂದು ಗ್ಯಾರಂಟಿ 

  • ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿದೆ – CBIನಿಂದ 3ನೇ ಚಾರ್ಜ್‌ಶೀಟ್‌ ಸಲ್ಲಿಕೆ

    ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿದೆ – CBIನಿಂದ 3ನೇ ಚಾರ್ಜ್‌ಶೀಟ್‌ ಸಲ್ಲಿಕೆ

    ನವದೆಹಲಿ: 2015-16ರ ಅವಧಿಯಲ್ಲಿ ತಮ್ಮ ಕಿಂಗ್‌ಫಿಷರ್ ಏರ್‌ಲೈನ್ಸ್ ನಗದು ಕೊರತೆ ಎದುರಿಸುತ್ತಿದ್ದ ಸಮಯದಲ್ಲೇ ಉದ್ಯಮಿ ವಿಜಯ ಮಲ್ಯ (Vijaya Mallya) ಇಂಗ್ಲೆಂಡ್ ಮತ್ತು ಫ್ರಾನ್ಸ್ ದೇಶಗಳಲ್ಲಿ 330 ಕೋಟಿ ರೂ. (ಬ್ರಿಟನ್ ನಲ್ಲಿ 80 ಕೋಟಿ ರೂ., ಫ್ರಾನ್ಸ್‌ನಲ್ಲಿ 250 ಕೋಟಿ ರೂ. ಮೌಲ್ಯದ ಆಸ್ತಿ) ಮೌಲ್ಯದ ಆಸ್ತಿ ಖರೀದಿಸಿದ್ದಾರೆ ಎಂದು ಕೇಂದ್ರೀಯ ತನಿಖಾ ದಳ (CBI) ಮುಂಬೈ ಸಿಬಿಐ ವಿಶೇಷ ನ್ಯಾಯಾಲಯಕ್ಕೆ (CBI Speical Court) ಸಲ್ಲಿಸಿರುವ 3ನೇ ಪೂರಕ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದೆ.

    ಅಷ್ಟೇ ಅಲ್ಲದೇ 2017ರಲ್ಲಿ ವಿಜಯ ಮಲ್ಯ ಅವರ ಆಸ್ತಿ ಮೌಲ್ಯ 7,500 ಕೋಟಿ ರೂ. ಎಂದು ಸ್ವಿಸ್ ಬ್ಯಾಂಕ್ (Swiss Bank) ಅಂದಾಜಿಸಿದ್ದು, ಬ್ಯಾಂಕ್‌ಗಳ ಸಾಲ ತೀರಿಸಲು ಬೇಕಾದಷ್ಟು ಹಣ ಅವರ ಬಳಿ ಇದೆ. ಯುಕೆನಲ್ಲಿ ಸುಮಾರು 44 ಮದ್ಯ ಘಟಕಗಳನ್ನ ಅವರು ಸ್ಥಾಪಿಸಿದ್ದರು. ಆ ಮೂಲಕ ಅವರು ಯುರೋಪಿನಾದ್ಯಂತ ಹಲವಾರು ಕಡೆ ಹೂಡಿಕೆ ಮತ್ತು ಆಸ್ತಿ ಖರೀದಿಸಿದ್ದಾರೆ ಎಂದು ಹೇಳಿದೆ.

    900 ಕೋಟಿ ರೂ.ಗಿಂತಲೂ ಹೆಚ್ಚು ಮೊತ್ತದ ಐಡಿಬಿಐ ಬ್ಯಾಂಕ್ (ADBI Bank) -ಕಿಂಗ್‌ಫಿಷರ್ ಏರ್‌ಲೈನ್ಸ್ (Kingfisher Airlines) ಸಾಲ ವಂಚನೆ ಪ್ರಕರಣದಲ್ಲಿ ವಿಜಯ ಮಲ್ಯ ಆರೋಪಿಯಾಗಿದ್ದು, ಈ ಸಂಬಂಧ ಸಿಬಿಐ ಇತ್ತೀಚೆಗೆ ಇಲ್ಲಿನ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಪೂರಕ ಚಾರ್ಜ್‌ಶೀಟ್‌ ಸಲ್ಲಿಸಿದೆ. ಇದನ್ನೂ ಓದಿ: ಬೆಡ್‌ರೂಂನಲ್ಲಿ ಮಲಗಿದ್ದ 6 ಅಡಿ ಬುಸ್ ಬುಸ್ ಹಾವು – ಎದ್ನೋ ಬಿದ್ನೋ ಅಂತಾ ಓಡಿದ ಮಹಿಳೆ!

    ಸಿಬಿಐ ಹಿಂದಿನ ಚಾರ್ಜ್‌ಶೀಟ್‌ಗಳಲ್ಲಿ ಹೆಸರಿಸಲಾದ ಎಲ್ಲಾ 11 ಆರೋಪಿಗಳ ಜೊತೆಗೆ, ತನಿಖಾ ಸಂಸ್ಥೆ ತನ್ನ ಇತ್ತೀಚಿನ ಪೂರಕ ಆರೋಪ ಪಟ್ಟಿಯಲ್ಲಿ ಐಡಿಬಿಐ ಬ್ಯಾಂಕ್‌ನ ಮಾಜಿ ಜನರಲ್ ಮ್ಯಾನೇಜರ್ ಬುದ್ಧದೇವ್ ದಾಸ್‌ಗುಪ್ತಾ ಅವರ ಹೆಸರನ್ನು ಸೇರಿಸಿದೆ. ಇದನ್ನೂ ಓದಿ: ಪೊಲೀಸರ ಭರ್ಜರಿ ಕಾರ್ಯಾಚರಣೆ – ದಾಖಲೆ ಇಲ್ಲದ 9 ಕೆಜಿ ಚಿನ್ನ ಜಪ್ತಿ

    2009ರ ಅಕ್ಟೋಬರ್‌ನಲ್ಲಿ 150 ಕೋಟಿ ರೂ. ಅಲ್ಪಾವಧಿ ಸಾಲ ಮಂಜೂರಾತಿ ಮತ್ತು ವಿತರಣೆಗಾಗಿ ದಾಸ್‌ಗುಪ್ತಾ ಅವರು ತಮ್ಮ ಹುದ್ದೆ ದುರುಪಯೋಗಪಡಿಸಿಕೊಂಡಿದ್ದಾರೆ. ವಿಜಯ ಮಲ್ಯ ಜೊತೆ ಸೇರಿ ಪಿತೂರಿ ನಡೆಸಿದ್ದಾರೆ. ಏರ್‌ಲೈನ್ಸ್‌ಗೆ ಸಾಲ ನೀಡುವ ವಿಚಾರದಲ್ಲಿ ಅವರು ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಸಿಬಿಐ ತಿಳಿಸಿದೆ.

  • ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುವುದು ಲೈಂಗಿಕ ಉದ್ದೇಶವನ್ನು ಸೂಚಿಸುತ್ತದೆ: ಮುಂಬೈ ಕೋರ್ಟ್

    ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುವುದು ಲೈಂಗಿಕ ಉದ್ದೇಶವನ್ನು ಸೂಚಿಸುತ್ತದೆ: ಮುಂಬೈ ಕೋರ್ಟ್

    ಮುಂಬೈ: ಒಬ್ಬ ವ್ಯಕ್ತಿ ಮತ್ತೊಬ್ಬರ ಎದುರು ಹಸ್ತಮೈಥುನ ಮಾಡಿಕೊಳ್ಳುವುದು ಲೈಂಗಿಕ ಉದ್ದೇಶವನ್ನು ಸೂಚಿಸುತ್ತದೆ ಎಂದು ಮುಂಬೈನ ವಿಶೇಷ ನ್ಯಾಯಾಲಯ ಹೇಳಿದ್ದು, ಈ ಸಂಬಂಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ 60 ವರ್ಷದ ವ್ಯಕ್ತಿಯೊಬ್ಬನಿಗೆ ಜೈಲು ಶಿಕ್ಷೆ ವಿಧಿಸಿದೆ.

    ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಧೀಶ ಪ್ರಿಯಾ ಬಣಕಾರ್ ಅವರು, ಆಗಸ್ಟ್ 29 ರಂದು ಆರೋಪಿಯನ್ನು ತಪ್ಪಿತಸ್ಥನೆಂದು ಘೋಷಿಸಿ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದರು. ಗುರುವಾರ ಈ ತೀರ್ಪು ನೀಡಿದ್ದಾರೆ.

     

    ನಾಲ್ಕು ವರ್ಷದ ಬಾಲಕ ತನ್ನ ಮನೆಯ ಸಮೀಪವಿರುವ ಆರೋಪಿಯ ಟೈಲರಿಂಗ್ ಅಂಗಡಿಗೆ ಹೋದಾಗ, ಆರೋಪಿ ತನ್ನ ಖಾಸಗಿ ಅಂಗವನ್ನು ಸ್ಪರ್ಶಿಸುತ್ತಿರುವುದನ್ನು ನೋಡಿದನು ಎಂಬುದು ಪ್ರಕರಣವಾಗಿದೆ. ಇದನ್ನೂ ಓದಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ವಜ್ರಕುಮಾರ್ ಇನ್ನಿಲ್ಲ

    ಪೋಕ್ಸೊ ಕಾಯ್ದೆಯಡಿ ದಾಖಲಾಗಿರುವ ದೂರಿನ ಪ್ರಕಾರ ಆರೋಪಿ ತನ್ನ ಖಾಸಗಿ ಅಂಗವನ್ನು ಬಾಲಕನಿಗೆ ತೋರಿಸಿದ್ದಾನೆ. ಆದರೆ ಬಾಲಕನನ್ನು ಅಂಗಡಿಗೆ ಕರೆದಿಲ್ಲ, ಬಾಲಕನ ಬಳಿಯೂ ಹೋಗಿಲ್ಲ ಎಂದು ಆರೋಪಿ ಪರ ವಕೀಲರು ವಾದಿಸಿದ್ದಾರೆ. ಈ ಕೃತ್ಯವನ್ನು ಬಾಲಕ ಆಕಸ್ಮಿಕವಾಗಿ ನೋಡಿದ್ದು ನಿಜ ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಹೇಳಿದೆ.

    court order law

     

    ಆರೋಪಿಯ ಅಂಗಡಿ ಚಿಕ್ಕದಾಗಿದ್ದು, ದಾರಿಹೋಕರು ಈತನ ಕೃತ್ಯವನ್ನು ನೋಡಿರಬಹುದು. ಹೀಗಾಗಿ ಆತ ಮರೆಮಾಚಿ ಹಸ್ತಮೈಥುನ ಮಾಡುತ್ತಿದ್ದ ಎಂದು ಹೇಳಲಾಗದು. ಬಾಲಕ ಈತನ ಕೃತ್ಯವನ್ನು ನೋಡಿದಾಗ, ಅದನ್ನು ಮರೆಮಾಚದೇ ಏನನ್ನೋ ವಿವರಿಸಲು ಹೇಳಲು ಯತ್ನಿಸಿದ್ದಾನೆ ಎಂದು ನ್ಯಾಯಾಲಯ ತಿಳಿಸಿದೆ.

    ಹಸ್ತಮೈಥುನ ಒಂದು ಲೈಂಗಿಕ ಕ್ರಿಯೆಯಾಗಿದೆ. ಒಬ್ಬ ವ್ಯಕ್ತಿ ಮತ್ತೋರ್ವ ವ್ಯಕ್ತಿಯ ಎದುರು ಹಸ್ತಮೈಥುನ ಮಾಡಿಕೊಳ್ಳುವುದು ಲೈಂಗಿಕ ಉದ್ದೇಶವನ್ನು ವ್ಯಕ್ತಪಡಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಆಮ್ ಆದ್ಮಿ ಪಕ್ಷದ ಶಾಸಕಿ ಮೇಲೆ ಎಲ್ಲರೆದುರು ಹಲ್ಲೆ ನಡೆಸಿದ ಪತಿ

    ಬಾಲಕನ ಮೇಲೆ, ಆತನ ಕುಟುಂಬಸ್ಥರ ಮೇಲೆ ಮತ್ತು ಸಮಾಜದ ಮೇಲೂ ಇಂತಹ ಘಟನೆಗಳು ಪರಿಣಾಮಕಾರಿಯಾಗಿದೆ. ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಮಕ್ಕಳು ಸುರಕ್ಷಿತರಾಗಿರುವುದಿಲ್ಲ ಮತ್ತು ಸಮಾಜದಲ್ಲಿ ಆತಂಕಕಾರಿ ಪರಿಸ್ಥಿತಿಯನ್ನು ಉಂಟುಮಾಡುತ್ತದೆ. ಖಂಡಿತವಾಗಿಯೂ, ಇಂತಹ ಘಟನೆಯು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡುತ್ತದೆ. ಸಂತ್ರಸ್ತರ ಮನಸ್ಸಿನಲ್ಲಿ ದೀರ್ಘಕಾಲದವರೆಗೆ ಹಾಗೆಯೇ ಉಳಿದುಬಿಡುತ್ತದೆ ಎಂದು ನ್ಯಾಯಾಧೀಶರು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುಸ್ಲಿಂ ಮಹಿಳೆಯರನ್ನ ಗುರಿಯಾಗಿಸಿದ್ದ ಬುಲ್ಲಿ ಬಾಯ್ ಆ್ಯಪ್ ಸೃಷ್ಟಿಕರ್ತನಿಗೆ ಜಾಮೀನು

    ಮುಸ್ಲಿಂ ಮಹಿಳೆಯರನ್ನ ಗುರಿಯಾಗಿಸಿದ್ದ ಬುಲ್ಲಿ ಬಾಯ್ ಆ್ಯಪ್ ಸೃಷ್ಟಿಕರ್ತನಿಗೆ ಜಾಮೀನು

    ಮುಂಬೈ: ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅಶ್ಲೀಲವಾಗಿ ಚಿತ್ರಿಸಿ ಅವರನ್ನು ಹರಾಜು ಹಾಕುತ್ತಿದ್ದ ಬುಲ್ಲಿ ಬಾಯ್ ಆ್ಯಪ್ ಸೃಷ್ಟಿಕರ್ತ ನೀರಜ್ ಬಿಷ್ಣೋಯ್ ಮತ್ತು ಇತರ ಇಬ್ಬರು ಆರೋಪಿಗಳಿಗೆ ಮುಂಬೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

    ನೀರಜ್ ಬಿಷ್ಣೋಯ್, ಔಮ್ಕಾರೇಶ್ವರ್ ಠಾಕೂರ್ ಮತ್ತು ನೀರಜ್ ಸಿಂಗ್ ಅವರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎ.ಬಿ.ಶರ್ಮಾ ಇಂದು ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿಗಳಿಗೆ ತಲಾ 50 ಸಾವಿರ ಬಾಂಡ್‌ನೊಂದಿಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಇದನ್ನೂ ಓದಿ: ಮಹಿಳೆಯರ ಫೋಟೋ ಹರಾಜು ಹಾಕುತ್ತಿದ್ದ ಆನ್‌ಲೈನ್ ಆ್ಯಪ್ ನಿಷೇಧ

    ಆರೋಪಿಗಳು ನ್ಯಾಯಾಲಯದ ಪೂರ್ವಾನುಮತಿಯಿಲ್ಲದೆ ವಿದೇಶ ಪ್ರಯಾಣ ಮಾಡುವುದನ್ನು ನಿರ್ಬಂಧಿಸಲಾಗಿದೆ. ಪ್ರತಿ ತಿಂಗಳಿಗೊಮ್ಮೆ ಪೊಲೀಸರ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

    ವಕೀಲ ಶಿವಂ ದೇಶಮುಖ್ ಅವರ ಮೂಲಕ ಸಲ್ಲಿಸಿದ ಜಾಮೀನು ಅರ್ಜಿಯಲ್ಲಿ, ಬಿಷ್ಣೋಯ್ ಅವರನ್ನು ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಗಿದೆ. ಹಾಗಾಗಿ ಸಮಾನತೆ ನೀಡುವಂತೆ ಕೋರಲಾಗಿತ್ತು. ಅರ್ಜಿಯನ್ನು ಪರಿಗಣಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಆ್ಯಪ್‍ನಲ್ಲಿ ಮಹಿಳೆಯರ ಮಾರಾಟ – ಬೆಂಗಳೂರಿನ 21 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿ ವಶಕ್ಕೆ

    ಏನಿದು ಬುಲ್ಲಿ ಬಾಯ್ ಪ್ರಕರಣ?
    ಬುಲ್ಲಿ ಬಾಯ್ ಹೆಸರಿನಲ್ಲಿದ್ದ ಆ್ಯಪ್, ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿ ಅವರನ್ನು ಅಶ್ಲೀಲವಾಗಿ ಚಿತ್ರಿಸಿ ಹರಾಜು ಹಾಕಲಾಗುತ್ತಿತ್ತು. ಅದಕ್ಕೆ ಈ ಆ್ಯಪ್ ವಿರುದ್ಧ ಎಲ್ಲ ಕಡೆಯಿಂದ ತೀವ್ರ ವಿರೋಧ ವ್ಯಕ್ತವಾದ ಬಳಿಕ ಕೇಂದ್ರ ಸರ್ಕಾರ ಆ್ಯಪ್ ಅನ್ನು ನಿಷೇಧಿಸಿತ್ತು. ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ ಮುಂಬೈ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು. ಬೆಂಗಳೂರಿನ ಓರ್ವ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನೂ ವಶಕ್ಕೆ ಪಡೆಯಲಾಗಿತ್ತು.

    Live Tv

  • 2 ತಿಂಗಳ ಬಳಿಕ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಜಾಮೀನು

    2 ತಿಂಗಳ ಬಳಿಕ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಜಾಮೀನು

    ಮುಂಬೈ: ಅಶ್ಲೀಲ ಚಿತ್ರಗಳನ್ನು ನಿರ್ಮಿಸಿದ ಆರೋಪ ಹಿನ್ನೆಲೆ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾಗೆ 2 ತಿಂಗಳ ಬಳಿಕ ಮುಂಬೈ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

    ಅಶ್ಲೀಲ ಚಿತ್ರಗಳನ್ನು ನಿರ್ಮಿಸಿ, ಮೊಬೈಲ್ ಅಪ್ಲಿಕೇಶನ್ ನಲ್ಲಿ ಅಪ್ಲೋಡ್ ಮಾಡಿದವರ ವಿರುದ್ಧ ಪೊಲೀಸರು ಫೆಬ್ರವರಿಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಕುಂದ್ರಾ ಪ್ರಮುಖ ಸಂಚುಕೋರ ವ್ಯಕ್ತಿಯಾಗಿದ್ದರೆಂಬ ಆರೋಪವಿದೆ. ಕುಂದ್ರಾ ಅವರನ್ನು ಜುಲೈ 19ರಂದು ಬಂಧಿಸಿ ತನಿಖೆ ಒಳಪಡಿಸಿದ್ದರು. ಪ್ರಕರಣದಲ್ಲಿ ಕುಂದ್ರಾ ವಿರುದ್ಧ ಸಾಕಷ್ಟು ಸಾಕ್ಷ್ಯಗಳು ಸಿಕ್ಕಿವೆ ಎಂದು ಪೊಲೀಸರು ತಿಳಿಸಿದ್ದರು. ಗುರುವಾರ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 1,400 ಪುಟಗಳ ಆರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದನ್ನೂ ಓದಿ: ನೀಲಿ ಚಿತ್ರ ನಿರ್ಮಾಣ – ಶಿಲ್ಪಾ ಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಅರೆಸ್ಟ್

    50 ಸಾವಿರ ರೂಪಾಯಿ ಶ್ಯೂರಿಟಿ, ವೈಯಕ್ತಿಕ ಬಾಂಡ್, ತನಿಖಾಧಿಕಾರಿಗಳು ಕರೆದಾಗ ವಿಚಾರಣೆಗೆ ಹಾಜರಾಗಬೇಕೆಂದು ಷರತ್ತು ವಿಧೀಸಿ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ರಾಜ್ ಕುಂದ್ರಾ ಅಶ್ಲೀಲ ಸಿನಿಮಾ ಕೇಸ್ – ಕೋದಂಡರಾಮ ಸಿನಿಮಾ ನಟಿಗೂ ಇದ್ಯಾ ಲಿಂಕ್?

  • ರಿಯಾ ಸೋದರ ಶೌವಿಕ್ ಚಕ್ರವರ್ತಿಗೆ ಜಾಮೀನು

    ರಿಯಾ ಸೋದರ ಶೌವಿಕ್ ಚಕ್ರವರ್ತಿಗೆ ಜಾಮೀನು

    ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಸಹೋದರ ಶೌವಿಕ್ ಚಕ್ರವರ್ತಿಗೆ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ. ಈ ಮೂಲಕ ಕಳೆದ ಮೂರು ತಿಂಗಳ ಬಳಿಕ ಶೌವಿಕ್ ಜೈಲಿನಿಂದ ಬಿಡುಗಡೆಯಾದಂತಾಗಿದೆ.

    ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಸಿಬಿ ರಿಯಾ ಚಕ್ರವರ್ತಿ ಹಾಗೂ ಶೌವಿಕ್ ಚಕ್ರವರ್ತಿ ಇಬ್ಬರನ್ನು ಬಂಧಿಸಿತ್ತು. ಈ ಹಿಂದೆ ರಿಯಾ ಚಕ್ರವರ್ತಿಗೆ ನ್ಯಾಯಾಲಯ ಜಾಮೀನು ನೀಡಿತ್ತು. ಇದೀಗ ಅವರ ಸಹೋದರ ಶೌವಿಕ್ ಚಕ್ರವರ್ತಿಗೆ ವಿಶೇಷ ನ್ಯಾಯಾಲಯ ಜಾಮೀನು ಪ್ರಕಟಿಸಿದೆ.

    ಸೆಪ್ಟೆಂಬರ್ 4ರಂದು ನಟ ಸುಶಾಂತ್ ಸಿಂಗ್ ರಜಪೂತ್ ಮ್ಯಾನೇಜರ್ ಸ್ಯಾಮ್ಯುಯೆಲ್ ಮಿರಾಂಡಾ ಜೊತೆಗೆ ಶೌವಿಕ್ ಚಕ್ರವರ್ತಿಯನ್ನು ಬಂಧಿಸಲಾಗಿತ್ತು. ಬಳಿಕ ಇಬ್ಬರನ್ನೂ ಎನ್‍ಸಿಬಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಜೂನ್‍ನಲ್ಲಿ ಸುಶಾಂತ್ ಸಿಂಗ್ ಸಾವಿನ ಸುತ್ತ ಡ್ರಗ್ಸ್ ಸೇವನೆ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಎನ್‍ಸಿಬಿ ವಿವಿಧ ಸೆಕ್ಷನ್‍ಗಳಡಿ ಎಫ್‍ಐಆರ್ ದಾಖಲಿಸಿತ್ತು.

    ಮುಂಬೈ ಕೋರ್ಟ್ ಇತ್ತೀಚಿನ ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಎನ್‍ಸಿಬಿ ಅಧಿಕಾಗಳ ಮುಂದೆ ಹೇಳಿಕೆ ನೀಡಿರುವುದು ಹಾಗೂ ತಪ್ಪೊಪ್ಪಿಕೊಂಡಿರುವುದು ಸ್ವೀಕಾರಾರ್ಹವಲ್ಲ ಎಂದು ಹೇಳಿದೆ. ಚಕ್ರವರ್ತಿ ನವೆಂಬರ್ ಮೊದಲ ವಾರದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ ನಲ್ಲಿ ಶೌವಿಕ್ ಚಕ್ರವರ್ತಿಗೆ ಜಾಮೀನು ನೀಡಲು ಕೋರ್ಟ್ ನಿರಾಕರಿಸಿತ್ತು. ಆದರೆ ಈ ವೇಳೆ ಸಹೋದರಿ, ನಟಿ ರಿಯಾ ಚಕ್ರವರ್ತಿಗೆ ಜಾಮೀನು ನೀಡಲಾಗಿತ್ತು.

  • ಕಚೇರಿ ಹಾನಿ: 2 ಕೋಟಿ ರೂ. ಪರಿಹಾರ ಕೇಳಿದ ಕಂಗನಾ

    ಕಚೇರಿ ಹಾನಿ: 2 ಕೋಟಿ ರೂ. ಪರಿಹಾರ ಕೇಳಿದ ಕಂಗನಾ

    ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ತಮ್ಮ ಕಚೇರಿ ಹಾನಿ ಮಾಡಿದ್ದಕ್ಕೆ 2 ಕೋಟಿ ರೂ. ಪರಿಹಾರ ಕೋರಿ ಮುಂಬೈ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

    ಕಳೆದ ಸೆಪ್ಟೆಂಬರ್ 9 ರಂದು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಕಂಗನಾ ಅವರ ಮುಂಬೈನ ಬಾಂದ್ರಾದಲ್ಲಿರುವ ಪಾಲಿ ಹಿಲ್ ಬಂಗಲೆಯನ್ನು ಅಕ್ರಮ ಕಟ್ಟಡ ಎಂದು ಪರಿಗಣಿಸಿ ತೆರವು ಕಾರ್ಯಾಚರಣೆ ಮಾಡಿತ್ತು.

    ಕೋರ್ಟಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಕಂಗನಾ ಅವರು, ಬಿಎಂಸಿ ಈಗಾಗಲೇ ಬಂಗಲೆಗೆ ಶೇ.40ರಷ್ಟು ಹಾನಿ ಮಾಡಿದೆ. ಅಲ್ಲದೆ ಬಂಗಲೆಯ ಒಳಗಡೆ ಇದ್ದ ಕೆಲವೊಂದು ಅಪರೂಪದ ಕಲಾತ್ಮಕ ವಸ್ತುಗಳನ್ನು ಕೂಡ ನಾಶಪಡಿಸಿದೆ. ಹೀಗಾಗಿ ಬಿಎಂಸಿ ತನಗೆ 2 ಕೋಟಿ ರೂ. ಪರಿಹಾರ ನೀಡಬೇಕು ಎಂದು ತಿಳಿಸಿದ್ದಾರೆ.

    ಸೆಪ್ಟೆಂಬರ್ 7 ರಂದು ಬಿಎಂಸಿ ನೋಟಿಸ್ ಕಳುಹಿಸುವ ಮೂಲಕ ಕಿರುಕುಳ ನೀಡಲು ಹೊರಟಿದೆ. ಅಲ್ಲದೆ ಕೊರೊನಾ ಸಾಂಕ್ರಾಮಿಕ ರೋಗದ ಮಧ್ಯೆ ತಾನು ಮನಾಲಿಯಲ್ಲಿದ್ದಾಗ 24 ಗಂಟೆಯೊಳಗಡೆ ನೋಟಿಸ್‍ಗೆ ಉತ್ತರ ನೀಡಲು ತಿಳಿಸಿದ್ದರು ಎಂದು ಆರೋಪಿಸಿದ್ದಾರೆ. ಅದಾದ ಎರಡು ದಿನಗಳ ಬಳಿಕ ಕಂಗನಾ ಮುಂಬೈಗೆ ವಾಪಸ್ಸಾಗಿದ್ದರು. ಈ ವೇಳೆ ಅವರಿಗೆ ಸಾಕಷ್ಟು ಬೆದರಿಕೆ ಕರೆಗಳು ಬರಲು ಆರಂಭವಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ದೂರು ನೀಡಿದ್ದರ ಪರಿಣಾಮ ಅವರಿಗೆ ಕೇಂದ್ರ ಸರ್ಕಾರ ‘ವೈ-ಪ್ಲಸ್’ ಭದ್ರತೆ ಒದಗಿಸಿತ್ತು.

    ಕಂಗನಾ ಸಲ್ಲಿಸುವ ಅರ್ಜಿ ಸಂಬಂಧ ಸೆಪ್ಟೆಂಬರ್ 22 ರಂದು ಮುಂಬೈ ಹೈಕೊರ್ಟ್‍ನಲ್ಲಿ ವಿಚಾರಣೆ ನಡೆಯಲಿದೆ.