Tag: ಮುಖಾಮುಖಿ ಡಿಕ್ಕಿ

  • ಎರಡು ಬಸ್ ಮುಖಾಮುಖಿ ಡಿಕ್ಕಿ: ಸ್ಥಳದಲ್ಲಿಯೇ 3 ಕನ್ನಡಿಗರು ಸೇರಿ 7 ಜನರ ಸಾವು!

    ಎರಡು ಬಸ್ ಮುಖಾಮುಖಿ ಡಿಕ್ಕಿ: ಸ್ಥಳದಲ್ಲಿಯೇ 3 ಕನ್ನಡಿಗರು ಸೇರಿ 7 ಜನರ ಸಾವು!

    ಚೆನ್ನೈ: ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ ಹೊಡೆದು ಕರ್ನಾಟಕ ಮೂಲದ ಮೂವರು ಸೇರಿ ಒಟ್ಟು 7 ಮಂದಿ ಮೃತಪಟ್ಟ ಘಟನೆ ಸೇಲಂ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಮಿಂಗಮ್ ಬಳಿ ನಡೆದಿದೆ.

    ಇಂದು ಬೆಳಗಿನ ಜಾವ ಘಟನೆ ನಡೆದಿದ್ದು, ಧರ್ಮಾಪುರಿಯಿಂದ ಬರುತ್ತಿದ್ದ ಬಸ್ ಚಾಲಕನು ರಸ್ತೆ ಮಧ್ಯದಲ್ಲಿ ನಿಂತಿದ್ದ ಲಾರಿಯನ್ನು ತಪ್ಪಿಸಲು ಮುಂದಾಗಿದ್ದ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಎದುರಿಗೆ ಬರುತ್ತಿದ್ದ (ಕೇರಳದ ಪಲಕ್ಕಡ್ ಕಡೆಗೆ ಹೊರಟಿದ್ದ) ಓಮಿನಿ ಬಸ್ಸಿಗೆ ಡಿಕ್ಕಿ ಹೊಡೆದಿದೆ.

    ವೇಗವಾಗಿದ್ದ ಎರಡೂ ಬಸ್ಸುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಓಮಿನಿ ಬಸ್ ಸಂಪೂರ್ಣವಾಗಿ ಜಖಂಗೊಂಡಿದೆ. ಅದರಲ್ಲಿದ್ದ ಕೆಲವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅವರ ದೇಹಗಳು ಗುರುತು ಸಿಗದಂತಾಗಿದೆ. ಅಪಘಾತದಲ್ಲಿ 11 ಮಹಿಳೆಯರು ಸೇರಿದಂತೆ 37 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅವರಲ್ಲಿ ಕೆಲವರನ್ನು ಮೋಹನ್ ಕುಮಾರಂಗಳಂ ಸರ್ಕಾರಿ ವೈದ್ಯಕೀಯ ಆಸ್ಪತ್ರೆಗೆ ಹಾಗೂ ಉಳಿದವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

    ಈ ಕುರಿತು ಸುರಮಂಗಲಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಟೋಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಮಹಿಳೆ ದುರ್ಮರಣ, ಮೂವರು ಗಂಭೀರ

    ಆಟೋಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಮಹಿಳೆ ದುರ್ಮರಣ, ಮೂವರು ಗಂಭೀರ

    ಚಿತ್ರದುರ್ಗ: ಎರಡು ಆಟೋಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮಹಿಳೆ ಮೃತಪಟ್ಟ ದುರ್ಘಟನೆ ಚಿತ್ರದುರ್ಗ ತಾಲೂಕಿನ ಬಿಳಿಚೋಡು ಗ್ರಾಮದ ಸಮೀಪದಲ್ಲಿ ನಡೆದಿದೆ.

    ಕಾಕಬಾಳು ಗ್ರಾಮದ ಶಾರದಮ್ಮ (55) ಮೃತ ಮಹಿಳೆ. ಬೆಳಗ್ಗೆ ತರಕಾರಿ ಸಾಗಿಸುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

    ಎಂದಿನಂತೆ ಗುರುವಾರ ಬೆಳಗ್ಗೆ ಕಾಕಬಾಳು ಗ್ರಾಮದ ಸುತ್ತಮುತ್ತಲಿನ ಗ್ರಾಮದ ರೈತರು ಚಿತ್ರದುರ್ಗದ ಮಾರುಕಟ್ಟೆಗೆ ಆಟೋದಲ್ಲಿ ತರಕಾರಿ ಸಾಗಿಸುತ್ತಿದ್ದರು. ಬಿಳಿಚೋಡು ಗ್ರಾಮದ ಸಮೀಪದಲ್ಲಿ ತರಕಾರಿ ಹಾಗೂ ಪ್ರಯಾಣಿಕರಿದ್ದ ಎರಡು ಆಟೋಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಶಾರದಮ್ಮ ಮೃತ ಪಟ್ಟಿದ್ದಾರೆ.

    ಎರಡು ಆಟೋ ಮುಂಭಾದಲ್ಲಿ ಕುಳಿತಿದ್ದ ಮೂವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಆಟೋ ಸಂಪೂರ್ಣ ಜಖಂಗೊಂಡಿದ್ದು, ರಸ್ತೆ ಬದಿಯಲ್ಲಿ ತರಕಾರಿ ಚಲ್ಲಾಪಿಲ್ಲಿಯಾಗಿ ಬಿದ್ದಿವೆ.

    ಭರಮಸಾಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.