Tag: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

  • ಮಗನಿಗೆ ಶಹಬ್ಬಾಶ್ ಎಂದ ಮಾಜಿ ಪ್ರಧಾನಿ ದೇವೇಗೌಡ!

    ಮಗನಿಗೆ ಶಹಬ್ಬಾಶ್ ಎಂದ ಮಾಜಿ ಪ್ರಧಾನಿ ದೇವೇಗೌಡ!

    ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ಮಗ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಅವರಿಗೆ ಶಹಬ್ಬಾಶ್ ಅಂದಿದ್ದಾರೆ.

    ಹೌದು. ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಇಳಿಸಿದ್ದ ಕುಮಾರಸ್ವಾಮಿ ನಿರ್ಧಾರಕ್ಕೆ ದೊಡ್ಡಗೌಡರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಒಳ್ಳೆಯ ನಿರ್ಧಾರ ಅಂತ ಹೇಳುವ ಮೂಲಕ ಸೆಸ್ ಇಳಿಸಿರುವ ಕುರಿತು ಸರ್ಕಾರದ ಬೆನ್ನು ತಟ್ಟಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಜನರ ಮೇಲಿನ ಹಣದ ಹೊರೆಯನ್ನು ಕಡಿಮೆ ಮಾಡಿಕೊಡುವುದಾಗಿ ನರೇಂದ್ರ ಮೋದಿ ಸರ್ಕಾರವನ್ನು ಕೇಳಿಕೊಂಡಿದ್ದಾರೆ.

    ದಿನನಿತ್ಯ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ದರ ಏರಿಕೆಯಾಗುತ್ತಿದೆ. ಸಾರ್ವಜನಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಇಂದು ಪೆಟ್ರೋಲ್, ಡೀಸೆಲ್ ರೇಟ್ ಮೇಲಿನ ಸೆಸ್ ಕಡಿತಗೊಳಿಸುತ್ತಿದೆ.

    ಈ ಕುರಿತು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕಲಬುರಗಿಯಲ್ಲಿ ಮಾತನಾಡಿ, ಸಮ್ಮಿಶ್ರ ಸರ್ಕಾರ ರಚನೆ ಬಳಿಕ 40 ಸಾವಿರ ಕೋಟಿ ರೂ. ಮೊತ್ತದಷ್ಟು ರೈತರ ಸಾಲ ಮನ್ನಾ ಘೋಷಿಸಿದ್ದ ಎಚ್‍ಡಿಕೆ, ಅದಕ್ಕಾಗಿ ಹಣ ಹೊಂದಿಸಲು ಸೆಸ್ ಹೆಚ್ಚಿಸಿದ್ದರು. ಬಜೆಟ್ ನಲ್ಲಿ ಕುಮಾರಸ್ವಾಮಿ ಪೆಟ್ರೋಲ್ ಮೇಲಿನ ಸುಂಕವನ್ನು ಶೇ.30 ರಿಂದ ಶೇ.32ಕ್ಕೆ ಹೆಚ್ಚಿಸಿದ್ದರೆ ಡೀಸೆಲ್ ಮೇಲಿನ ಸುಂಕವನ್ನು ಶೇ.19 ರಿಂದ ಶೇ.21ಕ್ಕೆ ಏರಿಸಿದ್ದರು. ಆದರೆ ಬಂದ್ ದಿನವೇ ಸೆಸ್ ಇಳಿಸುವ ಸುಳಿವನ್ನು ನೀಡಿದ್ದರು. ಇದರಂತೆ ಲೀಟರ್ ಪೆಟ್ರೋಲ್, ಡೀಸೆಲ್‍ಗೆ 2 ರೂ ಇಳಿಕೆಯಾಗಲಿದೆ.

    ನೆರೆರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಸರ್ಕಾರ ವಿಧಿಸುವ ಸೆಸ್ ಕಡಿಮೆಯಾದರೂ ತೈಲಬೆಲೆ ಹೆಚ್ಚಳದಿಂದ ಜನಸಾಮಾನ್ಯರಿಗೆ ಹೊರೆಯಾಗಿರುವ ಕಾರಣ ಸೆಸ್ ಕಡಿಮೆ ಮಾಡಲು ಸಿಎಂ ತೀರ್ಮಾನಿಸಿದ್ದಾರೆ. ಇತ್ತ ತೈಲ ಬೆಲೆ ನಿತ್ಯ ಹೆಚ್ಚಾಗುತ್ತಿದ್ದು ಇಂದು ಕೂಡ ಲೀಟರ್ ಪೆಟ್ರೋಲ್‍ಗೆ 15 ಪೈಸೆ, ಡೀಸೆಲ್ 6 ಪೈಸೆಯಷ್ಟು ಹೆಚ್ಚಳವಾಗಿದೆ. ರಾಜಸ್ಥಾನ, ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳ ಸರ್ಕಾರದ ನಡೆಯನ್ನು ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರ ಅನುಸರಿಸಿದ್ದು ರಾಜ್ಯದಲ್ಲೂ ಪೆಟ್ರೋಲ್ ಡೀಸೆಲ್ ದರ ಇಳಿಕೆ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=xjRf1PNpmvg