Tag: ಮುಖ್ಯಮಂತ್ರಿ ಪರಿಹಾರ ನಿಧಿ

  • ಉಕ್ರೇನ್‍ನಿಂದ ಸುರಕ್ಷಿತವಾಗಿ ಮಗಳು ಭಾರತಕ್ಕೆ – ಪ್ರಯಾಣದ ಖರ್ಚನ್ನು ಪಿಎಂ ಕೇರ್ಸ್ ಫಂಡ್‍ಗೆ ನೀಡಿದ ತಂದೆ

    ಉಕ್ರೇನ್‍ನಿಂದ ಸುರಕ್ಷಿತವಾಗಿ ಮಗಳು ಭಾರತಕ್ಕೆ – ಪ್ರಯಾಣದ ಖರ್ಚನ್ನು ಪಿಎಂ ಕೇರ್ಸ್ ಫಂಡ್‍ಗೆ ನೀಡಿದ ತಂದೆ

    ಶಿಮ್ಲಾ: ರಷ್ಯಾ, ಉಕ್ರೇನ್ ನಡುವಿನ ಯುದ್ಧದಲ್ಲಿ ಸಿಲುಕಿದ್ದ ಮಗಳನ್ನು ಅಪಾಯದಿಂದ ಪಾರು ಮಾಡಿ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತಂದ ಕಾರಣಕ್ಕೆ ತಂದೆಯೊಬ್ಬರು ಪಿಎಂ ಕೇರ್ಸ್ ಫಂಡ್‍ಗೆ ಹಣವನ್ನು ದೇಣಿಗೆಯಾಗಿ ನೀಡಿದ್ದಾರೆ.

    ಯುದ್ಧದ ನಡುವೆ ಬಂಕರ್‌ನಲ್ಲಿ ಉಳಿದುಕೊಂಡಿದ್ದ 32 ಜನ ಹಿಮಾಚಲಪ್ರದೇಶದ ವಿದ್ಯಾರ್ಥಿಗಳ ತಂಡ ಭಾನುವಾರ ಸುರಕ್ಷಿತವಾಗಿ ದೆಹಲಿ ಬಂದು ತಲುಪಿತ್ತು. ಈ ತಂಡದಲ್ಲಿ ಅಂಕಿತಾ ಠಾಕೂರ್ ಕೂಡ ಒಬ್ಬರಾಗಿದ್ದರು. ಅಂಕಿತಾ ಠಾಕೂರ್ ಹಿಮಾಚಲಪ್ರದೇಶದ ಹಮೀರ್‍ಪುರ ಜಿಲ್ಲೆಯ ಚುನ್ಹಾಲ್ ಗ್ರಾಮದವರು. ಉನ್ನತ ವ್ಯಾಸಂಗಕ್ಕಾಗಿ ಉಕ್ರೇನ್‍ಗೆ ತೆರಳಿದ್ದರು. ಈ ಮಧ್ಯೆ ಉಕ್ರೇನ್‍ನಲ್ಲಿ ಯುದ್ಧ ಆರಂಭವಾಗಿ ಸಂಕಷ್ಟಕ್ಕೆ ಸಿಲುಕಿದ್ದರು. ಇದನ್ನೂ ಓದಿ: ಭಾರತದ ಮೇಲೆ ಯುದ್ಧದ ಎಫೆಕ್ಟ್: ಖಾದ್ಯತೈಲ, ಗೋಧಿ, ಸಿಮೆಂಟ್, ಕಬ್ಬಿಣ ದುಬಾರಿ

    ಅಂಕಿತಾ ಠಾಕೂರ್ ತಂದೆ ಜಿಪಿ ಸಿಂಗ್ ಆರ್ಯುವೇದ ವೈದ್ಯರು. ತಾಯಿ ಅನಿತಾ ದೇವಿ ಗೃಹಿಣಿ. ಮಗಳು ಅಂಕಿತಾ ಠಾಕೂರ್‌ರನ್ನು ಉನ್ನತ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‍ಗೆ ಕಳುಹಿಸಿದ್ದರು. ಈ ನಡುವೆ ಏಕಾಏಕಿ ರಷ್ಯಾ, ಉಕ್ರೇನ್ ಮೇಲೆ ಯುದ್ಧ ಘೋಷಿಸಿತ್ತು. ಈ ವೇಳೆ ಮಗಳ ಸ್ಥಿತಿಯನ್ನು ಕಂಡು ಮರುಗಿದ್ದ ಪೋಷಕರು ಮಗಳನ್ನು ಹೇಗಾದರೂ ಮಾಡಿ ಕರೆ ತನ್ನಿ ಎಂದು ಸರ್ಕಾರದ ಬಳಿ ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಖಾರ್ಕಿವ್‌ನಲ್ಲಿ ಸಿಲುಕಿದ್ದ ಎಲ್ಲಾ ಭಾರತೀಯರ ರಕ್ಷಣೆ – ಎಂಇಎ

    ಕಡೆಗೂ ಯುದ್ಧದ ನಡುವೆ ಕೆಂದ್ರ ಸರ್ಕಾರದ ಯಶಸ್ವಿ ಕಾರ್ಯಚರಣೆ ಆಪರೇಷನ್ ಗಂಗಾದಡಿ ಅಂಕಿತಾ ಠಾಕೂರ್‌ರನ್ನು ಯಶಸ್ವಿಯಾಗಿ ತಾಯ್ನಾಡಿಗೆ ಮರಳಿದರು. ಇದರಿಂದ ಆಕೆಯ ಪೋಷಕರು ತುಂಬಾ ಸಂತೋಷಗೊಂಡಿದ್ದಾರೆ. ಮಗಳ ಮುಖ ಮತ್ತೆ ನೋಡಳು ಸಿಗುತ್ತೋ ಇಲ್ಲವೋ ಎಂಬ ಆತಂಕದಲ್ಲಿದ್ದ ಜಿಪಿ ಸಿಂಗ್ ಮತ್ತು ಅನಿತಾ ದೇವಿಗೆ ಮಗಳು ಮತ್ತೆ ಮನೆಗೆ ಬಂದಾಗ ಸಂತಸವಾಗಿದೆ. ಈ ಸಂತಸದ ನಡುವೆ ಅಂಕಿತಾ ಠಾಕೂರ್‍ರನ್ನು ಸುರಕ್ಷಿತವಾಗಿ ಕರೆತಂದ ಕಾರಣಕ್ಕಾಗಿ ಅದರ ಖರ್ಚು ಎಂಬಂತೆ, ಜಿಪಿ ಸಿಂಗ್ ಕೇಂದ್ರ ಸರ್ಕಾರದ ಪಿಎಂ ಕೇರ್ಸ್ ಫಂಡ್‍ಗೆ 21 ಸಾವಿರ ರೂ. ಮತ್ತು ರಾಜ್ಯ ಸರ್ಕಾರದ ಮುಖ್ಯಮಂತ್ರಿ ಪರಿಹಾರ ನಿಧಿಗೆ 11 ಸಾವಿರ ರೂ. ದೇಣಿಗೆಯಾಗಿ ನೀಡಿದ್ದಾರೆ.

    ಉಕ್ರೇನ್‍ನಿಂದ ದೆಹಲಿವರೆಗೆ ಕೇಂದ್ರ ಸರ್ಕಾರ ಅಂಕಿತಾ ಠಾಕೂರ್‌ರನ್ನು ಕರೆತಂದರೆ, ದೆಹಲಿಯಿಂದ ಹಿಮಾಚಲಪ್ರದೇಶಕ್ಕೆ ರಾಜ್ಯ ಸರ್ಕಾರ ಕರೆ ತಂದಿತ್ತು. ಈ ಖರ್ಚನ್ನು ಇದೀಗ ಜಿಪಿ ಸಿಂಗ್ ನೀಡಿ ಔದಾರ್ಯ ಮೆರೆದಿದ್ದಾರೆ. ಇದನ್ನೂ ಓದಿ: ಜೀವದ ಮೇಲೆ ಅಸೆ ಬಿಟ್ಟು, ಒಂದು ವಾರ ನಡೆದುಕೊಂಡು ಬಂದು ಉಕ್ರೇನ್ ದಾಟಿದೆ: ಸೀನ್ಯ

    ಹಿಮಾಚಲ ಪ್ರದೇಶದ 130ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉಕ್ರೇನ್‍ನಲ್ಲಿ ಶಿಕ್ಷಣ ಪಡೆಯುತ್ತಿದ್ದರು ಎಂಬ ಮಾಹಿತಿ ಸರ್ಕಾರ ನೀಡಿದೆ. ಅಲ್ಲದೆ ಬಜೆಟ್ ಅಧಿವೇಶನದಲ್ಲಿ ಸಿಎಂ ಜೈ ರಾಮ್ ಠಾಕೂರ್ ಉಕ್ರೇನ್‍ನಲ್ಲಿ ಸಿಲುಕಿರುವ ಹಿಮಾಚಲ ಪ್ರದೇಶದ ವಿದ್ಯಾರ್ಥಿಗಳ ರಕ್ಷಣಾ ಕಾರ್ಯಚರಣೆ ಬಗ್ಗೆ ವಿದೇಶಾಂಗ ಸಚಿವಾಲಯದ ಜೊತೆ ಮಾತನಾಡಿದ್ದರು. ಈಗಾಗಲೇ ಕೆಲ ವಿದ್ಯಾರ್ಥಿಗಳು ಸುರಕ್ಷಿತವಾಗಿ ರಾಜ್ಯಕ್ಕೆ ಆಗಮಿಸಿದ್ದು, ಇನ್ನಷ್ಟು ವಿದ್ಯಾರ್ಥಿಗಳು ಬರಬೇಕಾಗಿದೆ.

    ಉಕ್ರೇನ್‍ಗೆ ವಿದ್ಯಾರ್ಥಿಗಳು ಸ್ವತಂ ಖರ್ಚಿನಲ್ಲಿ ಹೋಗಿದ್ದಾರೆ. ಹೀಗಾಗಿ ಅವರನ್ನು ಭಾರತ ಸರ್ಕಾರ ಮಾನವೀಯತೆ ದೃಷ್ಟಿಯಿಂದ ಉಚಿತವಾಗಿ ಕರೆ ತಂದರೂ ವಿಮಾನ ಪ್ರಯಾಣದ ವೆಚ್ಚವನ್ನು ಅವರು ನೀಡಬೇಕು. ಜನರ ತೆರಿಗೆ ದುಡ್ಡಿನಿಂದ ಅವರು ವಿದೇಶದಿಂದ ಬರುವುದು ಸರಿಯಲ್ಲ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡಯುತ್ತಿದೆ. ಈ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮಗಳ ವಿಮಾನ ಪ್ರಯಾಣದ ಖರ್ಚನ್ನು ಪಿಎಂ ಕೇರ್ಸ್ ಫಂಡ್‌ಗೆ ಜಿಪಿ ಸಿಂಗ್ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.

  • ಆಂಧ್ರ ಪ್ರದೇಶ ಪ್ರವಾಹ – 1 ಕೋಟಿ ರೂ. ದೇಣಿಗೆ ಕೊಟ್ಟ ಪ್ರಭಾಸ್

    ಆಂಧ್ರ ಪ್ರದೇಶ ಪ್ರವಾಹ – 1 ಕೋಟಿ ರೂ. ದೇಣಿಗೆ ಕೊಟ್ಟ ಪ್ರಭಾಸ್

    ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಸುರಿದ ಭಾರೀ ಮಳೆ ಹಾಗೂ ಪ್ರವಾಹದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರ ನೆರವಿಗೆ ಟಾಲಿವುಡ್ ನಟ ಪ್ರಭಾಸ್ ಸಹಾಯ ಹಸ್ತಚಾಚಿದ್ದಾರೆ.

    ಕಳೆದ ಎರಡು ವಾರ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಭಾಗಗಳು ತೀವ್ರ ಹಾನಿಗೊಳಗಾಗಿವೆ. ಅದರಲ್ಲಿಯೂ ಎರಡನೇ ಬಾರಿ ಸುರಿದ ಭಾರೀ ಮಳೆಗೆ ರಾಜ್ಯದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಸದ್ಯ ಜನರಿಗೆ ಸಹಾಯ ಮಾಡಲು ಪ್ರಭಾಸ್ ಅವರು ಮುಖ್ಯಮಂತ್ರಿ ಪರಿಹಾರ ನಿಧಿಗೆ(ಸಿಎಂಆರ್‍ಎಫ್) 1 ಕೋಟಿ ರೂ. ದೇಣಿಗೆ ನೀಡಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶ ಪ್ರವಾಹ ಸಂತ್ರಸ್ತರಿಗೆ ಮಿಡಿದ ಟಾಲಿವುಡ್ ಸ್ಟಾರ್ಸ್

    ಇತ್ತೀಚೆಗಷ್ಟೇ ಜನರ ಕಷ್ಟಕ್ಕೆ ಮಿಡಿದ ಟಾಲಿವುಡ್ ಮೆಗಾ ಸ್ಟಾರ್ ನಟ ಚಿರಂಜೀವಿ, ಜೂನಿಯರ್ ಎನ್‍ಟಿಆರ್ ಮತ್ತು ಸೂಪರ್ ಸ್ಟಾರ್ ಮಹೇಶ್ ಬಾಬು, ರಾಮ್ ಚರಣ್‍ತೇಜ ಅವರು ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಲು ಆಂಧ್ರಪ್ರದೇಶ ಸಿಎಂ ಪರಿಹಾರ ನಿಧಿಗೆ ತಲಾ 25 ಲಕ್ಷ ರೂ. ದೇಣಿಗೆ ನೀಡಿದ್ದರು. ಇದೀಗ ಪ್ರಭಾಸ್ ನೆರವಿಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶ ಪ್ರವಾಹ – ತಲಾ 25 ಲಕ್ಷ ದೇಣಿಗೆ ನೀಡಿದ ಚಿರಂಜೀವಿ, ರಾಮ್‍ಚರಣ್

    ಪ್ರಸ್ತುತ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಬಿಗ್ ಬಜೆಟ್ ಪ್ಯಾನ್ ಇಂಡಿಯನ್ ಸಿನಿಮಾ ರಾಧೆ ಶ್ಯಾಮ್‍ದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ರಾಧಾ ಕೃಷ್ಣ ಕುಮಾರ್ ಅವರು ಆ್ಯಕ್ಷನ್ ಕಟ್ ಹೇಳಿದ್ದು, ಪ್ರಭಾಸ್‍ಗೆ ಜೋಡಿಯಾಗಿ ಪೂಜಾ ಹೆಗ್ಡೆ ನಟಿಸಿದ್ದಾರೆ. ಇನ್ನೂ ಈ ಸಿನಿಮಾ ರಾಧೆ ಶ್ಯಾಮ್ 2022ರ ಜನವರಿ 14ರಂದು ತೆರೆ ಕಾಣಲಿದೆ.

  • ಆಂಧ್ರಪ್ರದೇಶ ಪ್ರವಾಹ – ತಲಾ 25 ಲಕ್ಷ ದೇಣಿಗೆ ನೀಡಿದ ಚಿರಂಜೀವಿ, ರಾಮ್‍ಚರಣ್

    ಆಂಧ್ರಪ್ರದೇಶ ಪ್ರವಾಹ – ತಲಾ 25 ಲಕ್ಷ ದೇಣಿಗೆ ನೀಡಿದ ಚಿರಂಜೀವಿ, ರಾಮ್‍ಚರಣ್

    ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಮೆಗಾಸ್ಟಾರ್ ಚಿರಂಜೀವಿ ಹಾಗೂ ನಟ ರಾಮ್ ಚರಣ್ ತೇಜ ಸಂತ್ರಸ್ತರಿಗೆ ಸಹಾಯ ಹಸ್ತಚಾಚಿದ್ದಾರೆ.

    ಆಂಧ್ರಪ್ರದೇಶದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ಹಾನಿಯುಂಟಾಗಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನೂ ಜನರ ಕಷ್ಟಕ್ಕೆ ಟಾಲಿವುಡ್ ನಟ ಜೂನಿಯರ್ ಎನ್‍ಟಿಆರ್ ಮತ್ತು ಸೂಪರ್ ಸ್ಟಾರ್ ಮಹೇಶ್ ಬಾಬು ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದವರಿಗೆ ಸಹಾಯ ಮಾಡಲು ಆಂಧ್ರಪ್ರದೇಶ ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡುವುದಾಗಿ ಬುಧವಾರ ಘೋಷಿಸಿದ್ದರು. ಇದನ್ನೂ ಓದಿ: ಐರಾಗೆ ಹುಟ್ಟುಹಬ್ಬದ ಸಂಭ್ರಮ – ನಿನ್ನ ಕೈ ಹಿಡಿಯಲು ಯಾವಾಗಲೂ ಇರುತ್ತೇನೆ ಅಂದ ರಾಧಿಕಾ

    ಇದೀಗ ನಟ ಚಿರಂಜೀವಿ ಮತ್ತು ಅವರ ಪುತ್ರ ರಾಮ್ ಚರಣ್ ತೇಜ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಲಾ 25 ಲಕ್ಷ ರೂ. ನೀಡುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ. “ಆಂಧ್ರಪ್ರದೇಶದಲ್ಲಿ ಪ್ರವಾಹ ಮತ್ತು ಧಾರಾಕಾರ ಮಳೆಯಿಂದಾಗಿ ವ್ಯಾಪಕವಾಗಿ ಹಾನಿಯುಂಟಾಗಿರುವ ವಿಚಾರ ಬಹಳ ನೋವುಂಟು ಮಾಡಿದೆ. ಪ್ರವಾಹದಿಂದ ಉಂಟಾದ ವ್ಯಾಪಕ ವಿನಾಶ ಮತ್ತು ಹಾನಿಯಿಂದ ನನಗೆ ನೋವಾಗಿದೆ. ಸಂತ್ರಸ್ತರಿಗೆ ಸಹಾಯ ಮಾಡಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ.25 ಲಕ್ಷ ರೂ. ಕೊಡುಗೆ ನೀಡುತ್ತಿದ್ದೇನೆ ಎಂದು ಚಿರಂಜೀವಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಆಂಧ್ರಪ್ರದೇಶ ಪ್ರವಾಹ ಸಂತ್ರಸ್ತರಿಗೆ ಮಿಡಿದ ಟಾಲಿವುಡ್ ಸ್ಟಾರ್ಸ್

    ಮತ್ತೊಂದೆಡೆ ರಾಮ್‍ಚರಣ್ ತೇಜ ಅವರು, ಭಯಾನಕ ಪ್ರವಾಹದಿಂದಾಗಿ ಆಂಧ್ರಪ್ರದೇಶದ ಜನತೆ ಅನುಭವಿಸುತ್ತಿರುವ ಕಷ್ಟವನ್ನು ನೋಡಲು ಹೃದಯ ಭಾರವೆನಿಸುತ್ತಿದೆ. ಜನರಿಗೆ ಸಹಾಯ ಮಾಡಲು ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿಯ ನನ್ನದೊಂದು ಪುಟ್ಟ ಕಾಣಿಕೆ ನೀಡುತ್ತಿದ್ದೇನೆ ಎಂದು  ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.

  • 5 ಲಕ್ಷ ದೇಣಿಗೆ ನೀಡಿದ ಬಿಗ್‍ಬಾಸ್ ಸ್ಪರ್ಧಿ ದೀಪಿಕಾ ದಾಸ್

    5 ಲಕ್ಷ ದೇಣಿಗೆ ನೀಡಿದ ಬಿಗ್‍ಬಾಸ್ ಸ್ಪರ್ಧಿ ದೀಪಿಕಾ ದಾಸ್

    ಬೆಂಗಳೂರು: ಕೊರೊನಾ ಸೋಂಕಿತರ ನೆರವಿಗಾಗಿ ಈಗಾಗಲೇ ಕೆಲ ನಟ-ನಟಿಯರು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ. ಇದೀಗ ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ಸ್ಪರ್ಧಿ ದೀಪಿಕಾ ದಾಸ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ದೇಣಿಗೆ ನೀಡಿದ್ದಾರೆ.

    ದೀಪಿಕಾ ದಾಸ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ದೇಣಿಗೆ ನೀಡಿರುವ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಮಾನವೀಯತೆಗಾಗಿ, ನಮ್ಮ ದೇಶ ಮತ್ತು ನಮ್ಮ ಸಹ ನಾಗರಿಕರಿಗಾಗಿ ಸಹಾಯ ಮಾಡುವ ಸಮಯ ಈಗ ಬಂದಿದೆ. ಹೀಗಾಗಿ ಅವರಿಗೆ ಸಹಾಯ ಮಾಡೋಣ. ನಾನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೋವಿಡ್-19 ತಡೆಗೆ 5 ಲಕ್ಷ ಕೊಡುತ್ತಿದ್ದೇವೆ” ಎಂದು ಹೇಳಿದ್ದಾರೆ.

    “ಸಾಗರದ ಪ್ರತಿ ಹನಿಗೂ ಮೌಲ್ಯವಿದೆ. ಆದ್ದರಿಂದ ಕೊವೀಡ್-19 ಪರಿಸ್ಥಿತಿಯ ವಿರುದ್ಧ ಹೋರಾಡಲು ಸಹಾಯ ಮಾಡಬೇಕೆಂದು ನಾನು ನಿಮ್ಮೆಲ್ಲರನ್ನೂ ಕೇಳಿಕೊಳ್ಳುತ್ತೇನೆ. ಇದು ಯಾವ ದೊಡ್ಡಸ್ತಿಕೆ ತೋರುವುದಕ್ಕಲ್ಲ. ನೀವು ಕೂಡ ಈ ಕೆಲಸದಲ್ಲಿ ಭಾಗಿ ಆಗಲಿ ಎಂದು ಹೇಳಿದೆ. ಎಲ್ಲರೂ ಸಹಾಯ ಮಾಡೋಣ” ಎಂದು ಮನವಿ ಮಾಡಿಕೊಂಡಿದ್ದಾರೆ.

    ಜೊತೆಗೆ ತಾವು ನೀಡುತ್ತಿರುವ 5 ಲಕ್ಷ ರೂಪಾಯಿಗಳ ಚೆಕ್ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅಲ್ಲದೇ ಇತರಿಗೂ ಸಹಾಯ ಮಾಡುವಂತೆ ತಿಳಿಸಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಬ್ಯಾಂಕ್ ವಿವರಗಳಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.

    https://www.instagram.com/p/B-ZA2TeFwfW/

    ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಕೂಡ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ. ಇಂದು ಬೆಳಗ್ಗೆ ಮುಯಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಪುನೀತ್, ಮುಖ್ಯಮಂತ್ರಿಗಳಿಗೆ 50 ಲಕ್ಷ ಚೆಕ್ ಹಸ್ತಾಂತರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಎಸ್‍ವೈ, ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು ಕೋವಿಡ್_19 ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು ಬಲಪಡಿಸುವ ಕೋರಿಕೆಗೆ ಸ್ಪಂದಿಸಿ, 50 ಲಕ್ಷ ರೂಪಾಯಿಗಳ ದೇಣಿಗೆಯ ಚೆಕ್ ಹಸ್ತಾಂತರಿಸಿದರು ಎಂದು ಫೋಟೋ ಸಮೇತ ಬರೆದುಕೊಂಡಿದ್ದಾರೆ.

  • ಸಿಎಂ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ ಪವರ್ ಸ್ಟಾರ್

    ಸಿಎಂ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ ಪವರ್ ಸ್ಟಾರ್

    ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಭೀತಿ ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಡೀ ರಾಜ್ಯ ಮಾತ್ರವಲ್ಲದೇ ದೇಶವೇ ಲಾಕ್ ಡೌನ್ ಆಗಿದೆ. ಈ ಹಿನ್ನೆಲೆಯಲ್ಲಿ ಇಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ದೇಣಿಗೆ ನೀಡಿದ್ದಾರೆ.

    ಇಂದು ಬೆಳಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಪುನೀತ್, ಮುಖ್ಯಮಂತ್ರಿಗಳಿಗೆ 50 ಲಕ್ಷ ಚೆಕ್ ಹಸ್ತಾಂತರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಎಸ್‍ವೈ, ಖ್ಯಾತ ನಟ ಪುನೀತ್ ರಾಜ್ ಕುಮಾರ್ ಅವರು ಕೋವಿಡ್_19 ಮುಖ್ಯಮಂತ್ರಿಗಳ ಪರಿಹಾರ ನಿಧಿಯನ್ನು ಬಲಪಡಿಸುವ ಕೋರಿಕೆಗೆ ಸ್ಪಂದಿಸಿ, 50 ಲಕ್ಷ ರೂಪಾಯಿಗಳ ದೇಣಿಗೆಯ ಚೆಕ್ ಹಸ್ತಾಂತರಿಸಿದರು ಎಂದು ಫೋಟೋ ಸಮೇತ ಬರೆದುಕೊಂಡಿದ್ದಾರೆ.

    ಈ ಹಿಂದೆ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ 50 ಲಕ್ಷ ದೇಣಿಗೆ ನೀಡಿದ್ದರು. ಅವರು ಈ ಬಗ್ಗೆ ಟ್ವೀಟ್ ಮಾಡಿದ್ದ ಸಂಸದೆ, ಕೋವಿಡ್ -19 ಮಹಾಮಾರಿ ದೇಶದಲ್ಲಿ ಹರಡುತ್ತಿದ್ದು, ಅದರ ವಿರುದ್ಧದ ಹೋರಾಟದ ಸಂದರ್ಭದಲ್ಲಿ ನನ್ನ ಕಳಕಳಿಯ ಕೊಡುಗೆಯಾಗಿದೆ. ಮೊದಲಿಗೆ ಮಂಡ್ಯದ ಮಿಮ್ಸ್ ಗೆ ಕೊರೊನ ವಿರುದ್ಧ ಹೊರಾಡುವ ಸಲುವಾಗಿ ವೆಂಟಿಲೇಟರ್ ಮತ್ತು ಅಗತ್ಯ ಸಲಕರಣೆಗಳನ್ನು ಖರೀದಿಸಲು ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ 50 ಲಕ್ಷ ರೂ. ಗಳನ್ನು ನೀಡಿದ್ದೇನೆ ಎಂದು ಲೆಟರ್ ಪೋಸ್ಟ್ ಮಾಡಿದ್ದರು.

    ಇನ್ನೊಂದು ಟ್ವೀಟ್ ಮಾಡಿ, ಪ್ರಧಾನ ಮಂತ್ರಿಗಳ ತುರ್ತು ಪರಿಹಾರ ನಿಧಿಗೆ ನನ್ನ ಎರಡು ತಿಂಗಳ ವೇತನ 2 ಲಕ್ಷ ರೂ. ಗಳನ್ನು ದೇಣಿಗೆಯಾಗಿ ನೀಡಿದ್ದೇನೆ. ಅಲ್ಲದೆ ಎರಡು ತಿಂಗಳ ವೇತನ 2 ಲಕ್ಷ ರೂ. ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19ಕ್ಕೆ ನೀಡಿದ್ದೇನೆ ಎಂದು ಬರೆದುಕೊಂಡು ನರೇಂದ್ರ ಮೋದಿ, ಬಿಎಸ್ ಯಡಿಯೂರಪ್ಪ, ಶ್ರೀರಾಮುಲುಗೆ ಟ್ಯಾಗ್ ಮಾಡಿದ್ದರು.

  • ಕೆಎಸ್‍ಸಿಎ ವತಿಯಿಂದ ಸಿಎಂ ಪರಿಹಾರ ನಿಧಿಗೆ 10 ಲಕ್ಷ ದೇಣಿಗೆ

    ಕೆಎಸ್‍ಸಿಎ ವತಿಯಿಂದ ಸಿಎಂ ಪರಿಹಾರ ನಿಧಿಗೆ 10 ಲಕ್ಷ ದೇಣಿಗೆ

    ಬೆಂಗಳೂರು: ನೆರೆ ಸಂತ್ರಸ್ತರ ನೆರವಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿ (ಕೆಎಸ್‍ಸಿಎ) ಮುಂದಾಗಿದ್ದು, ಸಿಎಂ ಪರಿಹಾರ ನಿಧಿಗೆ 10 ಲಕ್ಷ ರೂ. ದೇಣಿಗೆ ನೀಡಿದೆ.

    ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಟಿ-20 ಸರಣಿಯ ಮೂರನೇ ಹಾಗೂ ಕೊನೆಯ ಪಂದ್ಯವು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭಗೊಂಡಿದೆ. ಇದಕ್ಕೂ ಮುನ್ನ ಸ್ಟೇಡಿಯಂನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಎಸ್‍ಸಿಎ ಅಧಿಕಾರಿಗಳು 10 ಲಕ್ಷ ರೂ. ಚೆಕ್ ನೀಡಿದರು. ಈ ವೇಳೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕೋಚ್ ರವಿಶಾಸ್ತ್ರಿ ಇದ್ದರು.

    ಟೀಂ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ಆಟಗಾರರು ಸ್ಟೇಡಿಯಂಗೆ ಬರುತ್ತಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೂಡ ಸ್ಟೇಡಿಯಂಗೆ ಪ್ರಯಾಣ ಬೆಳೆಸಿದರು. ಆದರೆ ಸಂಚಾರ ಅಸ್ತವ್ಯಸ್ತವಾಗಿದ್ದರಿಂದ ಸಿಎಂ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಎರಡು ಮೂರು ನಿಮಿಷಗಳ ಕಾಲ ಟ್ರಾಫಿಕ್‍ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಬಳಿಕ ಸ್ಟೇಡಿಯಂಗೆ ಆಗಮಿಸಿದ ಅವರನ್ನು ಆಡಳಿತ ಮಂಡಳಿ ಸ್ವಾಗತಿಸಿತು.

    ಸಿಎಂ ಯಡಿಯೂರಪ್ಪ ಅವರು ವಿರಾಟ್ ಕೊಹ್ಲಿ ಹಾಗೂ ರವಿಶಾಸ್ತ್ರಿ ಅವರಿಗೆ ಧನ್ಯವಾದ ಹೇಳಿದರು. ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಬಿ.ಎಸ್. ಯಡಿಯೂರಪ್ಪನವರಿಗೆ ಸಾಥ್ ನೀಡಿದರು.

  • ಸಿಎಂಗೆ ರಾಖಿ ಕಟ್ಟಿದ ಯುವತಿ

    ಸಿಎಂಗೆ ರಾಖಿ ಕಟ್ಟಿದ ಯುವತಿ

    ಬೆಂಗಳೂರು: ಮಾತು ಬಾರದ ಯುವತಿ ಇಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರಾಖಿ ಕಟ್ಟಿ ರಕ್ಷಾ ಬಂಧನದ ಶುಭ ಕೋರಿದ್ದಾರೆ.

    ಯುವತಿ ರಾಖಿ ಕಟ್ಟುತ್ತಿದ್ದಂತೆ ಸಿಎಂ 2 ಸಾವಿರ ರೂ. ನೀಡಲು ಮುಂದಾದರು. ಈ ವೇಳೆ ಯುವತಿ ಹಣ ಬೇಡ, ನನಗೆ ಉದ್ಯೋಗ ಕೊಡಿಸಿ ಎಂದು ಸನ್ನೆ ಮೂಲಕವೇ ಮನವಿ ಮಾಡಿಕೊಂಡಳು. ಯುವತಿಯ ಮನವಿಗೆ ಸ್ಪಂದಿಸಿದ ಸಿಎಂ ಉದ್ಯೋಗ ನೀಡುವ ಭರವಸೆಯನ್ನು ನೀಡಿದರು.

    ಇದಕ್ಕೂ ಮುನ್ನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೃಷಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ ವಿವಿಧ ದೇವಸ್ಥಾನಗಳಿಂದ ಕೊಡುಗು ಸಂತ್ರಸ್ತರಿಗೆ ಸಂಗ್ರಹವಾಗಿರುವ ಮೊತ್ತವನ್ನು ಸಿಎಂ ತಿಳಿಸಿದರು. ಸಭೆಯಲ್ಲಿ ಕೃಷಿ ಸಚಿವ ಶಿವಶಂಕರ ರೆಡ್ಡಿ, ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.

    ಕುಕ್ಕೆ ಸುಬ್ರಮಣ್ಯ ದೇಗುಲದಿಂದ 3 ಕೋಟಿ ರೂ., ಮಂದಾರ್ತಿ ದುರ್ಗಾಪರಮೇಶ್ವರಿ 50 ಲಕ್ಷ ರೂ., ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಿಂದ 1 ಕೋಟಿ ರೂ., ಮೈಸೂರು ಚಾಮುಂಡೇಶ್ವರಿ ದೇಗುಲ 1 ಕೋಟಿ ರೂ., ಕೊಪ್ಪಳದ ಹುಲಿಗೆಮ್ಮ ದೇಗುಲ 50 ಲಕ್ಷ ರೂ., ನಂಜನಗೂಡು ಶ್ರೀಕಂಠೇಶ್ವರ್ ದೇಗುಲ 1 ಕೋಟಿ ರೂ., ಸವದತ್ತಿ ಯಲ್ಲಮ್ಮ ದೇಗುಲ 50 ಲಕ್ಷ ರೂ., ಕಟೀಲು ದುರ್ಗಾಪರಮೇಶ್ವರಿ ದೇಗುಲ 75 ಲಕ್ಷ ರೂ., ಘಾಟಿ ಸುಬ್ರಮಣ್ಯ ದೇಗುಲ 50 ಲಕ್ಷ ರೂ., ಬೆಂಗಳೂರಿನ ಬನಶಂಕರಿ ದೇಗುಲ 50 ಲಕ್ಷ ರೂ., ಮಂಗಳೂರಿನ ಅನಂತ ಪದ್ಮನಾಭ 10 ಲಕ್ಷ ರೂ., ಕದ್ರಿ ಮಂಜುನಾಥ ದೇಗುಲ 10 ಲಕ್ಷ ರೂ., ಬೇಲೂರು ಚೆನ್ನಕೇಶವ ದೇಗುಲ 10 ಲಕ್ಷ ರೂ., ಮಾಲೂರು ಚಿಕ್ಕತಿರುಪತಿ ದೇಗುಲ 25 ಲಕ್ಷ ರೂ., ಬಂಗಾರಪೇಟೆ ಬಂಗಾರು ದೇಗುಲ 10 ಲಕ್ಷ ರೂ., ಶ್ರೀರಂಗಪಟ್ಟಣ ನಿಮಿಷಾಂಭ ದೇಗುಲ 25 ಲಕ್ಷ ರೂ., ತಲಕಾಡು ವೈದ್ಯನಾಥೇಶ್ವರ 10 ಲಕ್ಷ ರೂ., ಶ್ರೀರಂಗಪಟ್ಟಣ ರಂಗನಾಥ ಸ್ವಾಮಿ 25 ಲಕ್ಷ ರೂ. ಹಾಗೂ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ 10 ಲಕ್ಷ ರೂ. ಬಂದಿದ್ದು, ಒಟ್ಟು 12.1 ಕೋಟಿ ರೂ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಂಗ್ರಹವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv