Tag: ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿ

  • ಕೋವಿಡ್ ಪರಿಹಾರ ನಿಧಿಗೆ ಒಂದು ತಿಂಗಳ ವೇತನ ನೀಡಿದ ಕಂಡಕ್ಟರ್

    ಕೋವಿಡ್ ಪರಿಹಾರ ನಿಧಿಗೆ ಒಂದು ತಿಂಗಳ ವೇತನ ನೀಡಿದ ಕಂಡಕ್ಟರ್

    ಧಾರವಾಡ: ಕೋವಿಡ್-19 ಪರಿಹಾರ ನಿಧಿಗೆ ಜಿಲ್ಲೆಯ ಕಂಡಕ್ಟರ್ ಒಬ್ಬರು ತಮ್ಮ ಒಂದು ತಿಂಗಳ ವೇತನ ನೀಡಿ ಮಾನವೀಯತೆ ಮೆರೆದಿದ್ದಾರೆ.

    ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸವರಾಜ ನೀಲಪ್ಪ ಗಾಣಿಗೇರ ಅವರು ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ 25 ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡಿದ್ದಾರೆ. ಬಸವರಾಜ ಅವರು ನವಲಗುಂದ ತಾಲೂಕಿನ ಶಿರಕೋಳ ಗ್ರಾಮದ ನಿವಾಸಿಯಾಗಿದ್ದು, ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದ ಒಂದನೇ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

    ಚೆಕ್ ಸ್ವೀಕರಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್ ಅವರು, ಸಾರಿಗೆ ಸಂಸ್ಥೆಯ ಕಂಡಕ್ಟರ್ ಬಸವರಾಜ ಅವರು ಸ್ವಯಂ ಪ್ರೇರಣೆಯಿಂದ ತಮ್ಮ ಒಂದು ತಿಂಗಳ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ನೀಡಿರುವುದು ಸಮಾಜಕ್ಕೆ ಮಾದರಿಯಾದ ಕಾರ್ಯವಾಗಿದೆ. ಜಿಲ್ಲಾಡಳಿತ ಈ ಕಾರ್ಯವನ್ನು ಪ್ರಶಂಸಿಸುತ್ತದೆ ಎಂದರು.

    ಈ ವೇಳೆ ವಾ.ಕ.ರ.ಸಾ.ಸಂ ವಿಭಾಗೀಯ ನಿಯಂತ್ರಕರಾದ ವಿವೇಕಾನಂದ ವಿಶ್ವಜ್ಞ, ಹನುಮಂತ ಬೋಜೇದಾರ್, ಬಸವರಾಜ ಅವಾರಿ, ಎಂ.ಎಸ್.ರೋಣದ, ವೆಂಕಟೇಶ್ ಹರ್ತಿ, ಡಾ.ಪಿ.ವಿ.ಸವದಿ ಇದ್ದರು.

  • ಕೊರೊನಾ ವಿರುದ್ಧದ ಹೋರಾಟಕ್ಕೆ ಮೂರುಸಾವಿರಮಠ ಶ್ರೀಗಳಿಂದ 10 ಲಕ್ಷ ರೂ. ದೇಣಿಗೆ

    ಕೊರೊನಾ ವಿರುದ್ಧದ ಹೋರಾಟಕ್ಕೆ ಮೂರುಸಾವಿರಮಠ ಶ್ರೀಗಳಿಂದ 10 ಲಕ್ಷ ರೂ. ದೇಣಿಗೆ

    ಹುಬ್ಬಳ್ಳಿ: ಹೆಮ್ಮಾರಿ ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ನಗರದ ಪ್ರಖ್ಯಾತ ಮೂರುಸಾವಿರ ಮಠದಿಂದ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ 10 ಲಕ್ಷ ರೂ. ದೇಣಿಗೆ ನೀಡಲಾಗಿದೆ.

    ಮೂರುಸಾವಿರ ಮಠದ ಜಗದ್ಗುರು ಗುರುಸಿದ್ದ ರಾಜಯೋಗೀಂದ್ರ ಶ್ರೀಗಳು 10 ಲಕ್ಷ ರೂ. ಚೆಕ್ ಅನ್ನು ಸಚಿವ ಜಗದೀಶ್ ಶೆಟ್ಟರ್ ಅವರ ಮೂಲಕ ಸರ್ಕಾರಕ್ಕೆ ಹಸ್ತಾಂತರಿಸಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಬಿಜೆಪಿ ಮುಖಂಡ ಪ್ರದೀಪ್ ಶೆಟ್ಟರ್, ಶಂಕ್ರಣ್ಣ ಮುನವಳ್ಳಿ ಸೇರಿದಂತೆ ಮಠದ ಉನ್ನತ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

    ಇದಕ್ಕೂ ಮುನ್ನ ಸಿದ್ದಗಂಗಾ ಮಠ ಹಾಗೂ ಸಿದ್ದಗಂಗಾ ವಿದ್ಯಾಸಂಸ್ಥೆ ವತಿಯಿಂದ 50 ಲಕ್ಷ ರೂ.ವನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡಲಾಗಿತ್ತು. ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಏಪ್ರಿಲ್ 4ರಂದು ಮಠದಿಂದ 25 ಲಕ್ಷ ರೂ. ಹಾಗೂ ವಿದ್ಯಾಸಂಸ್ಥೆಯಿಂದ 25 ಲಕ್ಷ ರೂ. ಸೇರಿ ಒಟ್ಟು 50 ಲಕ್ಷ ರೂ.ಗಳ ಡಿಡಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಮೂಲಕ ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದ್ದರು.

    ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕೋರಿರುವ ಆರ್ಥಿಕ ನೆರವಿಗೆ ಮೈಸೂರಿನ ಶ್ರೀ ಸುತ್ತೂರು ಮಠವು ಏಪ್ರಿಲ್ 1ರಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿತ್ತು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಇವತ್ತು ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದರು. ಈ ವೇಳೆ ಜೆಎಸ್‍ಎಸ್ ಮಹಾವಿದ್ಯಾಪೀಠ ಹಾಗೂ ಸಂಸ್ಥೆಯ ನೌಕರರಿಂದ 50 ಲಕ್ಷ ರೂ.ಗಳ ದೇಣಿಗೆಯನ್ನು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳು ಸಚಿವರಿಗೆ ನೀಡಿದ್ದರು.

  • ಕೊರೊನಾ ವಿರುದ್ಧದ ಹೋರಾಟಕ್ಕೆ 2 ಕೋಟಿ ರೂ. ದೇಣಿಗೆ ನೀಡಿದ ಪವನ್ ಕಲ್ಯಾಣ್

    ಕೊರೊನಾ ವಿರುದ್ಧದ ಹೋರಾಟಕ್ಕೆ 2 ಕೋಟಿ ರೂ. ದೇಣಿಗೆ ನೀಡಿದ ಪವನ್ ಕಲ್ಯಾಣ್

    ಹೈದರಾಬಾದ್: ಜನಸೇನಾ ಪಕ್ಷದ ಮುಖ್ಯಸ್ಥ, ಪವರ್ ಸ್ಟಾರ್ ಪವನ್ ಕಲ್ಯಾಣ್ ಅವರು ಕೊರೊನಾ ವಿರುದ್ಧದ ಹೋರಾಟಕ್ಕೆ ಎರಡು ಕೋಟಿ ರೂ. ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ.

    ಕೊರೊನಾ ವೈರಸ್ ದೇಶಾದ್ಯಂತ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಪವನ್ ಕಲ್ಯಾಣ್ ಸಹಾಯಕ್ಕೆ ಮುಂದಾಗಿದ್ದಾರೆ. ಅವರು ಆಂಧ್ರ ಪ್ರದೇಶ, ತೆಲಂಗಾಣ ಹಾಗೂ ಕೇಂದ್ರ ಸರ್ಕಾರಕ್ಕೆ ಸೇರಿ ಒಟ್ಟು 2 ಕೋಟಿ ರೂ. ದೇಣಿಗೆ ನೀಡಲಿದ್ದಾರೆ. ಇದನ್ನೂ ಓದಿ: ಕೊರೊನಾ ಪರಿಹಾರ ನಿಧಿಗೆ ತನ್ನ 6 ತಿಂಗ್ಳ ಸಂಬಳ ನೀಡಿದ ಭಾರತದ ಕುಸ್ತಿಪಟು

    ಈ ಕುರಿತು ಟ್ವೀಟ್ ಮಾಡಿವ ಪವನ್ ಕಲ್ಯಾಣ್, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ ತಲಾ 50 ಲಕ್ಷ ರೂ.ನಂತೆ 1 ಕೋಟಿ ರೂ. ದೇಣಿಗೆ ನೀಡುತ್ತೇನೆ. ಅಷ್ಟೇ ಅಲ್ಲದೆ ಪ್ರಧಾನ ಮಂತ್ರಿ ವಿಪತ್ತು ಪರಿಹಾರ ನಿಧಿಗೆ ಒಂದು ಕೋಟಿ ನೀಡಲು ನಿರ್ಧರಿಸಿರುವೆ ಎಂದು ತಿಳಿಸಿದ್ದಾರೆ

    ಇನ್ನೊಂದೆಡೆ ಪವನ್ ಕಲ್ಯಾಣ್ ಅವರು ಕೇಂದ್ರ ಸರ್ಕಾರದ ಸಂದೇಶ ಮತ್ತು ಸಲಹೆಯನ್ನು ಸ್ವಾಗತಿಸಿದ್ದಾರೆ. ‘ಪ್ರಧಾನಿ ನರೇಂದ್ರ ಮೋದಿ ಅವರು ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಪೂರ್ಣ ಬೆಂಬಲ ನೀಡುತ್ತೇನೆ. ಜನಸೇನಾ ಪಕ್ಷದ ಮುಖ್ಯಸ್ಥರು ಹಾಗೂ ದೇಶದ ಪ್ರತಿಯೊಬ್ಬ ಪ್ರಜೆ ಪ್ರಧಾನಿ ಮೋದಿ ಅವರ ಸಲಹೆಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ. ಜೊತೆಗೆ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಹಾಗೂ ಇತರರ ಸೇವೆಗಳನ್ನು ಪವನ್ ಕಲ್ಯಾಣ್ ಶ್ಲಾಘಿಸಿದ್ದಾರೆ.

    ಪವನ್ ಕಲ್ಯಾಣ್ ಅವರು ಸಿನಿಮಾ ಕ್ಷೇತ್ರಕ್ಕೆ ಪುನರಾಗಮನ ಮಾಡಿದ್ದು, ಮುಂಬರುವ ಅವರ ‘ವಕೀಲ್ ಸಾಬ್’ ಚಿತ್ರವನ್ನು ವೇಣು ಶ್ರೀರಾಮ್ ನಿರ್ದೇಶಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅಂಜಲಿ ಮತ್ತು ನಿವೇತಾ ಥಾಮಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.