Tag: ಮುಖ್ಯ ಕಾರ್ಯದರ್ಶಿ

  • ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಕಾರು ಡಿಕ್ಕಿ – ಬೈಕ್ ಸವಾರ ಸಾವು

    ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಕಾರು ಡಿಕ್ಕಿ – ಬೈಕ್ ಸವಾರ ಸಾವು

    ಚಿತ್ರದುರ್ಗ: ಕಂದಾಯ ಇಲಾಖೆ (Department of Revenue) ಪ್ರಧಾನ ಕಾರ್ಯದರ್ಶಿ (Principal Secretary) ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹೊಳಲ್ಕೆರೆ (Holalkere) ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಡೆದಿದೆ.

    ಬುಧವಾರ ರಾತ್ರಿ 10 ಗಂಟೆಯ ಸಮಯದಲ್ಲಿ ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಎಂಬವರಿಗೆ ಸೇರಿದ ಕಾರು (Car) ರಿವರ್ಸ್ ತೆಗೆಯುವ ಸಂದರ್ಭ ಕುನಗಲಿ ಗ್ರಾಮದ ಬಸವರಾಜಪ್ಪ (68) ಅವರ ಬೈಕ್‌ಗೆ (Bike) ಡಿಕ್ಕಿಯಾಗಿದೆ. ಘಟನೆಯಿಂದ ಬೈಕ್ ಸವಾರ ಬಸವರಾಜಪ್ಪಗೆ ಗಂಭೀರ ಗಾಯಗಳಾಗಿದ್ದವು. ಇದನ್ನೂ ಓದಿ: ಮಾಜಿ ಸಂಸದರ ಪತ್ನಿಯ ಕತ್ತಿಗೆ ಕೈ ಹಾಕಿ ಮಾಂಗಲ್ಯ ಸರ ಕಳ್ಳತನ

    ಗಂಭೀರ ಗಾಯಗೊಂಡಿದ್ದ ಪರಿಣಾಮ ಬಸವರಾಜಪ್ಪನನ್ನು ಶಿವಮೊಗ್ಗ (Shivamogga) ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಕಂದಾಯ ಸಚಿವರಾದ ಕೃಷ್ಣಭೈರೇಗೌಡರ ಜೊತೆಗೆ ಮುಖ್ಯ ಕಾರ್ಯದರ್ಶಿ ತೆರಳಿದ್ದ ವೇಳೆ ಅಪಘಾತವಾಗಿದೆ (Accident) ಎಂದು ತಿಳಿದುಬಂದಿದೆ. ಈ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಕಾರು ಚಾಲಕ ಧನುಷ್ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಟಿಬೆಟಿಯನ್ ಕಾಲೋನಿಯಲ್ಲಿ ಮಾಜಿ ಸೈನಿಕನಿಂದ ಯುವಕನ ಹತ್ಯೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

    ಬೆಂಗಳೂರು: ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದರು.

    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಿದ್ದಾರೆ.

    ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ 4ನೇ ಮಹಿಳೆಯಾಗಿದ್ದು, ರಾಜ್ಯ ಸರ್ಕಾರದ 39 ನೇ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಇದನ್ನೂ ಓದಿ: ತಾಯಿ ಹೀರಾಬೆನ್ ಸ್ಕೆಚ್‍ನ್ನು ಮೋದಿಗೆ ಉಡುಗೊರೆಯಾಗಿ ನೀಡಿದ ಮಹಿಳಾ ಅಭಿಮಾನಿ

    ಮಹಿಳೆಯರ ದರ್ಬಾರ್:
    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ ರತ್ನ ಪ್ರಭ ಅಲಂಕರಿಸಿದ್ದರು.

    ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದರು ಎಂಬುದು ಗಮನಾರ್ಹ ಅಂಶವಾಗಿತ್ತು. ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ 3 ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ. ಇದನ್ನೂ ಓದಿ: ಕರ್ನಾಟದಲ್ಲಿದ್ದಿದ್ದರೆ ನಿಮ್ಮ ಸಂತೋಷದಲ್ಲಿ ನಾನೂ ಭಾಗಿಯಾಗ್ತಿದ್ದೆ: ಮೋದಿ

    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆಆರ್ ಮಹಾಲಕ್ಷ್ಮಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.

    ವಂದಿತಾ ಶರ್ಮಾ ಅವರ ನೇಮಕಾತಿಯಲ್ಲಿ ರಾಜ್ಯ ಸರ್ಕಾರವು ಎಂದಿನಂತೆ ಸೇವಾ ಹಿರಿತನವನ್ನು ಪುರಸ್ಕರಿಸಿದೆ. ವಂದಿತಾ ಶರ್ಮಾ ಅವರ ಅಧಿಕಾರಾವಧಿ 2022ರ ನವೆಂಬರ್ 30 ರವರೆಗೆ ಇದೆ. ವಂದಿತಾ ಶರ್ಮಾ ಅವರ ಪತಿಯೂ ಕೂಡಾ ಭಾರತೀಯ ಆಡಳಿತ ಸೇವೆಯ ಅಧಿಕಾರಿಯಾಗಿ, ಪ್ರಸ್ತುತ ಹಣಕಾಸು ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಅಲ್ಲದೆ ಇದೇ ದಿನದಿಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಹುದ್ದೆಯ ಅಧಿಕ ಪ್ರಭಾರವನ್ನೂ ವಹಿಸಿಕೊಂಡಿದ್ದಾರೆ.

  • ಕರ್ನಾಟಕದ ಮುಖ್ಯ ಕಾರ್ಯದರ್ಶಿಯಾಗಿ ರವಿಕುಮಾರ್ ನೇಮಕ

    ಕರ್ನಾಟಕದ ಮುಖ್ಯ ಕಾರ್ಯದರ್ಶಿಯಾಗಿ ರವಿಕುಮಾರ್ ನೇಮಕ

    ಬೆಂಗಳೂರು: ನಿರೀಕ್ಷೆಯಂತೆ ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಪಿ.ರವಿಕುಮಾರ್ ನೇಮಕವಾಗಿದ್ದಾರೆ. ಪಿ ರವಿಕುಮಾರ್ ಅವರನ್ನು ಮಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಿ ಇಂದು ಸರ್ಕಾರ ಆದೇಶಿಸಿದೆ.

    ಹಾಲಿ ಸಿಎಸ್ ಟಿ ಎಂ ವಿಜಯ್ ಭಾಸ್ಕರ್ ಸೇವಾವಧಿ ನಾಳೆ ಮುಕ್ತಾಯವಾಗಲಿದ್ದು, ತೆರವಾಗಲಿರುವ ಸ್ಥಾನಕ್ಕೆ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿರುವ ಪಿ ರವಿಕುಮಾರ್‌ನ್ನು  ನೇಮಿಸಲಾಗಿದೆ.

    ಪಿ ರವಿಕುಮಾರ್ 1984ರ ಬ್ಯಾಚ್  ಐಎಎಸ್ ಅಧಿಕಾರಿಯಾಗಿದ್ದಾರೆ. ನಾಳೆ ವಿಧಾನಸೌಧದಲ್ಲಿ ಪಿ ರವಿಕುಮಾರ್‌ಗೆ ವಿಜಯಭಾಸ್ಕರ್ ಅವರು ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಪಿ ರವಿಕುಮಾರ್ ಸರ್ಕಾರದ 38ನೇ ಮುಖ್ಯಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ.

    1984 ಬ್ಯಾಚ್‍ನ ಅಧಿಕಾರಿಯಾಗಿರುವ ರವಿ ಕುಮಾರ್ ಹಿರಿತನದ ಆಧಾರದ ಮೇಲೆ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಕರ್ನಾಟಕ ಕೇಡರ್‌ನ  ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲಾಧಿಕಾರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ನಿರ್ದೇಶಕ, ಸಹಕಾರ, ಸಾರಿಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.

    ಕೆಪಿಟಿಸಿಎಲ್ ಎಂಡಿ, ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಪ್ರಸ್ತುತ ರಾಜ್ಯ ಸರ್ಕಾರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿರುವ ರವಿ ಕುಮಾರ್ ಅವರ ಸೇವಾವಧಿ 2022ರ ಮೇ ವರೆಗೆ ಇದೆ. 1 ವರ್ಷ 5 ತಿಂಗಳು ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿ ರವಿ ಕುಮಾರ್ ಸೇವೆಯಲ್ಲಿ ಇರಲಿದ್ದಾರೆ

  • ಗಣ್ಯರ ಜಯಂತಿ ಹೆಸ್ರಲ್ಲಿ ಕೋಟ್ಯಂತರ ರೂ. ಗುಳುಂ- ಆರ್‌ಟಿಐ ಕಾರ್ಯಕರ್ತ ದೂರು

    ಗಣ್ಯರ ಜಯಂತಿ ಹೆಸ್ರಲ್ಲಿ ಕೋಟ್ಯಂತರ ರೂ. ಗುಳುಂ- ಆರ್‌ಟಿಐ ಕಾರ್ಯಕರ್ತ ದೂರು

    ಬೆಂಗಳೂರು: ಗಣ್ಯರ ಜಯಂತಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿಯನ್ನು ಅಧಿಕಾರಿಗಳು ದುರುಪಯೋಗ ಪಡಿಸಿಕೊಂಡಿದ್ದಾರೆ. ಆರ್‌ಟಿಐ ಕಾರ್ಯಕರ್ತರೊಬ್ಬರು ಈ ಬಗ್ಗೆ ಅರೋಪಿಸಿ, ಸೂಕ್ತ ತನಿಖೆ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

    ಆರ್‌ಟಿಐ ಕಾರ್ಯಕರ್ತ ಮರಿಲಿಂಗಗೌಡ ಪಾಟೀಲ್ ಅನ್ಮೋರಿ ಎಂಬವರು ಕೋಟ್ಯಂತರ ರೂ. ವೆಚ್ಚದಲ್ಲಿ ಆಚರಿಸಿದ ವಿವಿಧ ಜಯಂತಿಗಳ ಬಗ್ಗೆ ಮಾಹಿತಿ ಕೊಡಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಗಳ ವಿರುದ್ಧ ದೂರು ನೀಡಿದ್ದಾರೆ.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ಹಲವಾರು ಗಣ್ಯರ ಜಯಂತಿ ಹೆಸರಲ್ಲಿ ಬರೋಬ್ಬರಿ 17 ಕೋಟಿ 65 ಲಕ್ಷ ರೂನ್ನು ಖರ್ಚು ಮಾಡಲಾಗಿದೆ. ಅನೇಕರ ಹೆಸರೇ ಗೊತ್ತಿಲ್ಲದ ಜಯಂತಿ ಆಚರಣೆ ಮಾಡಿದ್ದೇವೆ ಎಂದು ಅಧಿಕಾರಿಗಳು ಹಣ ಬಿಡುಗಡೆ ಮಾಡಿದ್ದಾರೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಜಯಂತಿ ಆಚರಣೆ ಮಾಡಿದ್ದೇವೆ ಎಂದು ದಾಖಲೆಯಲ್ಲಿ ತೋರಿಸಿದ್ದಾರೆ. ಆದರೆ ನಿಜವಾಗಿಯೂ ಈ ಜಯಂತಿ ಆಚರಣೆಗಳು ನಡೆದಿವೆಯಾ? ಯಾವಾಗ ಆಚರಣೆ ಮಾಡಿದ್ದಾರೆ? ಯಾರು ಅತಿಥಿಯಾಗಿದ್ರು? ಎಲ್ಲಿ ಆಚರಣೆ ಮಾಡಿದ್ದಾರೆ? ಎಂಬುವುದರ ಬಗ್ಗೆ ಮಾಹಿತಿ ನೀಡಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ.

    2013 ರಿಂದ 2018 ವರೆಗೆ ನಡೆದ ವಿವಿಧ ಗಣ್ಯರ ಜಯಂತಿಗಳ ದಾಖಲೆ ಸಂಗ್ರಹಿಸಿದ ಆರ್ ಟಿ ಐ ಕಾರ್ಯಕರ್ತ ಮರಿಲಿಂಗಗೌಡ ಪಾಟೀಲ್ ಅನ್ಮೋರಿ, ಬೆರಳೆಣಿಕೆಯಷ್ಟು ಜಯಂತಿಗಳ ಆಚರಣೆ ಮಾತ್ರ ನೋಡಿದ್ದೇವೆ. ಕೆಲ ಅಧಿಕಾರಿಗಳು ಜಯಂತಿ ಮಾಡದೆ ಸುಳ್ಳು ದಾಖಲೆ ನೀಡಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಯಾವ ಜಯಂತಿಗೆ ಎಷ್ಟು ಖರ್ಚು?:
    1. ದೇವರ ದಾಸಿಮಯ್ಯ ಜಯಂತಿ – 69 ಲಕ್ಷ
    2. ಭಗವಾನ್ ಮಹವೀರ್ ಜಯಂತಿ – 69 ಲಕ್ಷ
    3. ಅಕ್ಕಮಹಾದೇವಿ ಜಯಂತಿ – 10 ಲಕ್ಷ
    4. ಬಸವ ಜಯಂತಿ – 69 ಲಕ್ಷ
    5. ಶಂಕರ ಜಯಂತಿ – 10 ಲಕ್ಷ
    6. ಭಗೀರಥ ಜಯಂತಿ – 69 ಲಕ್ಷ

    7. ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ – 15 ಲಕ್ಷ
    8. ಶ್ರೀ ಕೃಷ್ಣ ಜಯಂತಿ – 69 ಲಕ್ಷ
    9. ಬ್ರಹ್ಮಶ್ರೀ ನಾರಾಯಣಗುರು ಜಯಂತಿ – 69 ಲಕ್ಷ
    10. ವಿಶ್ವಕರ್ಮ ಜಯಂತಿ – 69 ಲಕ್ಷ
    11. ಟಿಪ್ಪು ಸುಲ್ತಾನ್ ಜಯಂತಿ – 69 ಲಕ್ಷ
    12. ಕನಕ ಜಯಂತಿ – 69 ಲಕ್ಷ

    13. ಸಿದ್ದರಾಮ ಜಯಂತಿ – 69 ಲಕ್ಷ
    14. ಅಂಬಿಗರ ಚೌಡಯ್ಯ ಜಯಂತಿ – 69 ಲಕ್ಷ
    15. ವಾಲ್ಮೀಕಿ ಜಯಂತಿ – 69 ಲಕ್ಷ
    16. ಶಿವಾಜಿ ಜಯಂತಿ – 69ಲಕ್ಷ
    17. ದಲಿತ ವಚನಕಾರರ ಜಯಂತಿ – 69 ಲಕ್ಷ
    18. ಸರ್ವಜ್ಞ ಜಯಂತಿ – 69 ಲಕ್ಷ
    19. ಭಗೀರಥ ಜಯಂತಿ – 69 ಲಕ್ಷ
    20. ವಿವೇಕಾನಂದ ಜಯಂತಿ – 40 ಲಕ್ಷ