Tag: ಮುಖ್ಯ ಚುನಾವಣಾ ಆಯುಕ್ತ

  • ಫೆ.18ಕ್ಕೆ ರಾಜೀವ್ ಕುಮಾರ್ ನಿವೃತ್ತಿ – ಯಾರಾಗ್ತಾರೆ ಮುಂದಿನ ಮುಖ್ಯ ಚುನಾವಣಾ ಆಯುಕ್ತ?

    ಫೆ.18ಕ್ಕೆ ರಾಜೀವ್ ಕುಮಾರ್ ನಿವೃತ್ತಿ – ಯಾರಾಗ್ತಾರೆ ಮುಂದಿನ ಮುಖ್ಯ ಚುನಾವಣಾ ಆಯುಕ್ತ?

    ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ (CEC) ರಾಜೀವ್‌ ಕುಮಾರ್‌ (Rajiv Kumar) ಅವರ ಅಧಿಕಾರ ಅವಧಿ ಇದೇ ಫೆ.18ರಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣಾ ಆಯುಕ್ತರ ಹೆಸರನ್ನು ಅಂತಿಮಗೊಳಿಸಲು ಪ್ರಧಾನಿ ಮಟ್ಟದ ಉನ್ನತ ಮಟ್ಟದ ಆಯ್ಕೆ ಸಮಿತಿ ಸೋಮವಾರ ಸಭೆ ಸೇರುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

    ಪ್ರಧಾನಿ ನೇತೃತ್ವದ ಆಯ್ಕೆ ಸಮಿತಿಯಲ್ಲಿ ಪಿಎಂ ಮೋದಿ (PM Modi), ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi), ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇದ್ದಾರೆ. ಪ್ರಧಾನಿಗಳ ಅಧಿಕೃತ ನಿವಾಸದಲ್ಲೇ ಸಭೆ ನಡೆಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

    ಮೊದಲು ಸರ್ಚಿಂಗ್‌ ಕಮಿಟಿಯಿಂದ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳ ಹೆಸರನ್ನು ಸಮಿತಿ ಶಿಫಾರಸು ಮಾಡಲಿದೆ. ನಂತರ ಅಧ್ಯಕ್ಷರು ಶಿಫಾರಸಿನ ಆಧಾರದ ಮೇಲೆ ಮುಂದಿನ ಸಿಇಸಿಯನ್ನು ನೇಮಿಸಲಿದ್ದಾರೆ. ಇದನ್ನೂ ಓದಿ: ಕಳ್ಳರ ಹಾವಳಿಗೆ ಒನಕೆ ಓಬವ್ವನ ರೂಪ ತಾಳಿದ ಮಹಿಳೆಯರು – ರಾತ್ರಿ ಗಸ್ತು ಸಂಚಾರ

    ರಾಜೀವ್ ಕುಮಾರ್ ನಂತರ ಜ್ಞಾನೇಶ್ ಕುಮಾರ್ ಅತ್ಯಂತ ಹಿರಿಯ ಚುನಾವಣಾ ಆಯುಕ್ತರಾಗಿದ್ದು, ಅವರ ಅಧಿಕಾರ ಅವಧಿಯು ಜನವರಿ 26, 2029ರ ವರೆಗೆ ಇದೆ. ನಂತರದಲ್ಲಿ ಸುಖಬೀರ್ ಸಿಂಗ್ ಸಂಧು ಇದ್ದಾರೆ.

    ರಾಜೀವ್‌ ಕುಮಾರ್‌ ಮುಂದಿನ ನಡೆ ಏನು?
    ನಿವೃತ್ತಿ ಬಳಿಕ ತಮ್ಮ ಮುಂದಿನ ನಡೆ ಏನೆಂಬುದನ್ನು ಈಗಾಗಲೇ ರಾಜೀವ್‌ ಕುಮಾರ್‌ ಬಹಿರಂಗಪಡಿಸಿದ್ದಾರೆ. ನಿವೃತ್ತಿ ಬಳಿಕ ಮುಂದಿನ ನಾಲ್ಕೈದು ತಿಂಗಳು ಹಿಮಾಲಯಕ್ಕೆ ತೆರಳುವುದಾಗಿ ಹೇಳಿದ್ದಾರೆ. ನನಗೆ ಸ್ವಲ್ಪ ಏಕಾಂತ ಮತ್ತು ಸ್ವಯಂ ಅಧ್ಯಯನ ಬೇಕಿರುವುದರಿಂದ ಆತ್ಮಾವಲೋಕನ ಮಾಡಿಕೊಳ್ಳುವತ್ತ ಕಾಲ ಕಳೆಯುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉದಯಗಿರಿ ಗಲಭೆ ಕೇಸ್‌ – ದಾಂಧಲೆ ಮಾಡುವವರ ವಿರುದ್ಧ ಬುಲ್ಡೋಜರ್‌ ಕ್ರಮ ಆಗುತ್ತಾ? – ಪರಮೇಶ್ವರ್‌ ಹೇಳಿದ್ದೇನು?

  • ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್‌ ಕುಮಾರ್‌ ನೇಮಕ

    ಮುಖ್ಯ ಚುನಾವಣಾ ಆಯುಕ್ತರಾಗಿ ರಾಜೀವ್‌ ಕುಮಾರ್‌ ನೇಮಕ

    ನವದೆಹಲಿ: ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗಿ ಗುರುವಾರ ನೇಮಕಗೊಂಡಿದ್ದಾರೆ.

    ಹಾಲಿ ಸುಶೀಲ್ ಚಂದ್ರ ಅವರ ಅಧಿಕಾರವಧಿ ಮೇ 14ಕ್ಕೆ ಮುಗಿಯಲಿದೆ. ಮೇ 15 ರಂದು ರಾಜೀವ್‌ ಕುಮಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಕಾನೂನು ಸಚಿವಾಲಯ ಹೊರಡಿಸಿದ ಅಧಿಸೂಚನೆ ತಿಳಿಸಿದೆ. ಇದನ್ನೂ ಓದಿ: ಮೇ 17ರ ಒಳಗಡೆ ಜ್ಞಾನವಾಪಿ ಮಸೀದಿಯ ಸಮೀಕ್ಷೆ ನಡೆಸಿ: ಕೋರ್ಟ್‌

    ಸಚಿವಾಲಯದ ಅಧಿಸೂಚನೆಯನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಕೇಂದ್ರ ಸಚಿವ ಕಿರಣ್‌ ರಿಜಿಜು ಅವರು, ರಾಜೀವ್‌ ಕುಮಾರ್‌ ಅವರಿಗೆ ಶುಭಾಶಯ ತಿಳಿಸಿದ್ದಾರೆ.

    ರಾಜೀವ್‌ ಕುಮಾರ್‌ ಅವರು 2020ರಿಂದ ಈವರೆಗೂ ಚುನಾವಣಾ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. 1984ನೇ ಬ್ಯಾಚ್‌ನ ಜಾರ್ಖಂಡ್‌ ಕೇಡರ್‌ ಅಧಿಕಾರಿಯಾಗಿದ್ದಾರೆ. ಇದನ್ನೂ ಓದಿ: ಅಂಧ ವ್ಯಕ್ತಿ ಮಗಳ ಕನಸ್ಸನ್ನು ಕೇಳಿ ಮೋದಿ ಭಾವುಕ – ವೀಡಿಯೋ ವೈರಲ್

  • ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ಸುನಿಲ್ ಅರೋರಾ ನೇಮಕ

    ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ಸುನಿಲ್ ಅರೋರಾ ನೇಮಕ

    ನವದೆಹಲಿ: ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ಸುನಿಲ್ ಅರೋರಾ ಅವರನ್ನು ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ನೇಮಿಸಿದ್ದಾರೆ.

    ಓಂ ಪ್ರಕಾಶ್ ರಾವತ್ ಅವರ ನಿವೃತ್ತಿಯಿಂದ ತೆರವಾಗಿದ್ದ ಸ್ಥಾನಕ್ಕೆ ಸುನಿಲ್ ಅರೋರಾ ಅವರನ್ನು ನೇಮಕ ಮಾಡಲಾಗಿದೆ. ಸುನಿಲ್ ಅವರಿಗೆ ಇಂದು ಅಧಿಕಾರ ಹಸ್ತಾಂತರಿಸಲಾಗಿದ್ದು, ಅಕ್ಟೋಬರ್ 2021ರವೆರೆಗೆ ಕಾರ್ಯನಿರ್ವಹಿಸಲಿದ್ದಾರೆ. ಸುನಿಲ್ ಅರೋರಾ ಅವರು 2017 ಆಗಸ್ಟ್ 31ರಂದು ಚುನಾವಣಾ ಆಯುಕ್ತರಾಗಿ ನೇಮಕವಾಗಿದ್ದರು.

    ಈ ಮೂಲಕ ಮುಂಬರುವ ಲೋಕಸಭಾ ಚುನಾವಣೆ ಹಾಗೂ ಜಮ್ಮು-ಕಾಶ್ಮೀರ, ಓಡಿಶಾ, ಮಹಾರಾಷ್ಟ್ರ, ಹರಿಯಾಣ, ಆಂಧ್ರ ಪ್ರದೇಶ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳ ಚುನಾವಣೆಯ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.

    ಸುನಿಲ್ ಅರೋರಾ ಅವರು 1980ರ ಬ್ಯಾಚ್‍ನ ರಾಜಸ್ಥಾನದ ಐಎಎಸ್ ಅಧಿಕಾರಿಯಾಗಿದ್ದಾರೆ. 1993-1998ರವರೆಗೆ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ ಕೇಂದ್ರ ಹಣಕಾಸು, ಯೋಜನಾ ಆಯೋಗ ಹಾಗೂ ಜವಳಿ ಸೇರಿದಂತೆ ವಿವಿಧ ಸಚಿವಾಲಯಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕೌಶಲ್ಯಾಭಿವೃದ್ಧಿ ಸಚಿವಾಲಯ ಹಾಗೂ ಮಾಹಿತಿ ಮತ್ತು ಪ್ರಸಾರ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.

    ಅಧಿಕಾರ ಸ್ವೀಕರಿಸಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸುನಿಲ್ ಅರೋರಾ ಅವರು, 2019ರ ಲೋಕಸಭಾ ಚುನಾವಣೆಗಾಗಿ ಆಂತರಿಕ ಸಿದ್ಧತೆಗಳನ್ನು ಆಯೋಗ ಆರಂಭಿಸಿದೆ. ಪ್ರತಿಯೊಬ್ಬರೂ ಮತದಾನ ಮಾಡುವ ಹಕ್ಕನ್ನು ಹೊಂದುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv