Tag: ಮುಜರಾಯಿ

  • ಗಾಳಿ ಆಂಜನೇಯ ದೇಗುಲ ಭಕ್ತರಿಗೆ ಗುಡ್‌ನ್ಯೂಸ್ – ಶೀಘ್ರದಲ್ಲೇ ಹೋಮ, ಹವನ ಮಾಡಿಸೋಕೆ ಆನ್‌ಲೈನ್ ಸೇವೆ ಆರಂಭ

    ಗಾಳಿ ಆಂಜನೇಯ ದೇಗುಲ ಭಕ್ತರಿಗೆ ಗುಡ್‌ನ್ಯೂಸ್ – ಶೀಘ್ರದಲ್ಲೇ ಹೋಮ, ಹವನ ಮಾಡಿಸೋಕೆ ಆನ್‌ಲೈನ್ ಸೇವೆ ಆರಂಭ

    ಬೆಂಗಳೂರು: ಗಾಳಿ ಆಂಜನೇಯ ದೇವಸ್ಥಾನ (Gali Anjaneya Temple) ಮುಜರಾಯಿ ವ್ಯಾಪ್ತಿಗೆ ಬಂದ ಬೆನ್ನಲ್ಲೆ ಭಕ್ತರಿಗೆ ಗುಡ್ ನ್ಯೂಸ್ ನೀಡಿದೆ. ಶೀಘ್ರದಲ್ಲೇ ಹೋಮ, ಹವನ ಮಾಡಿಸಲು ಆನ್‌ಲೈನ್ ಬುಕ್ಕಿಂಗ್ ಸೇವೆಯನ್ನು ಆರಂಭಿಸಲು ಮುಂದಾಗಿದೆ.ಇದನ್ನೂ ಓದಿ: 10,000 ಕೊಡ್ತೀನಿ ಬಾ – ಯುವತಿಯನ್ನು ಮಂಚಕ್ಕೆ ಕರೆದ ಕಾಮುಕ ಪ್ರಿನ್ಸಿಪಾಲ್ ಅರೆಸ್ಟ್

    ಮುಜರಾಯಿ ಇಲಾಖೆ (Muzrai Department) ಆಯುಕ್ತ ವೆಂಕಟೇಶ್ ಅವರು `ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಗಾಳಿ ಆಂಜನೇಯ ದೇವಸ್ಥಾನದ ಯಂತ್ರ, ಪ್ರಸಾದವನ್ನು ಆನ್‌ಲೈನ್ ಮೂಲಕ ರಾಜ್ಯದ ಮೂಲೆ ಮೂಲೆಗೂ ತಲುಪಿಸಲು ಮುಜರಾಯಿ ಇಲಾಖೆ ನಿರ್ಧರಿಸಿದೆ. ಜೊತೆಗೆ ಹೋಮ, ಹವನ ಮಾಡಿಸಲು ಶೀಘ್ರದಲ್ಲೇ ಆನ್‌ಲೈನ್ ಬುಕ್ಕಿಂಗ್ ಸೇವೆಯನ್ನು ಆರಂಭಿಸಲು ಮುಂದಾಗಿದೆ ಎಂದು ತಿಳಿಸಿದ್ದಾರೆ.

    ಇನ್ನೂ ದೇಗುಲ ಮುಜರಾಯಿ ವ್ಯಾಪ್ತಿಗೆ ಸೇರಿದ ಬಳಿಕ ಭಕ್ತರ ಸಂಖ್ಯೆಯಲ್ಲಿ ಹೆಚ್ಚಾಗಿದೆ. ಅಲ್ಲದೇ ಪೂಜಾದರ, ಹೋಮ, ಹವನ, ಪ್ರಸಾದ ದರದಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಹೀಗಾಗಿ ಆನ್‌ಲೈನ್ ಮೂಲಕ ಎಲ್ಲಾ ಸೇವೆಗಳನ್ನು ಭಕ್ತರಿಗೆ ಸಿಗುವಂತೆ ಮಾಡಲು ಮುಜರಾಯಿ ಇಲಾಖೆ ಮುಂದಾಗಿದೆ ಎಂದಿದ್ದಾರೆ.ಇದನ್ನೂ ಓದಿ: ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋದ್ರೆ ಎಸ್‌ಐಟಿ ಮುಖ್ಯಸ್ಥರ ಬದಲಾವಣೆ – ಸಿಎಂ

  • ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಿಗೆ ಫೆನ್ಸಿಂಗ್ – ಒತ್ತುವರಿ ಆಗಿದ್ರೆ ಕೋರ್ಟ್ ಮೂಲಕ ತೆರವು

    ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಿಗೆ ಫೆನ್ಸಿಂಗ್ – ಒತ್ತುವರಿ ಆಗಿದ್ರೆ ಕೋರ್ಟ್ ಮೂಲಕ ತೆರವು

    ಬೆಂಗಳೂರು: ವಕ್ಫ್ ಆಸ್ತಿ ವಿವಾದದ ಬಳಿಕ ಮುಜರಾಯಿ ಇಲಾಖೆ (Muzrai Department) ತಮ್ಮ ದೇವಸ್ಥಾನಗಳ (Temple) ಆಸ್ತಿ ರಕ್ಷಣೆಗೆ ಮುಂದಾಗಿದೆ. ಬೆಂಗಳೂರಿನಲ್ಲಿ (Bengaluru) ಇರುವ ಮುಜರಾಯಿ ಇಲಾಖೆ ದೇವಸ್ಥಾನಗಳ ಆಸ್ತಿ ಸರ್ವೆ ಮಾಡಿ ಫೆನ್ಸಿಂಗ್ ಹಾಕಲು ಸಿದ್ಧತೆ ನಡೆದಿದೆ. ಶೀಘ್ರದಲ್ಲೇ ಸರ್ವೆ ಆರಂಭಿಸಿ ಒತ್ತುವರಿ ಆಗಿದ್ದರೆ ತೆರವು ಮಾಡಲು ಮುಂದಾಗಿದೆ.

    ವಕ್ಫ್ ವಿವಾದ ಜೋರಾಗಿರುವ ಹೊತ್ತಲ್ಲೇ ಮುಜರಾಯಿ ಇಲಾಖೆ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳ ಜಾಗ ರಕ್ಷಣೆಗೆ ಮುಂದಾಗಿದೆ. ದೇವಸ್ಥಾನದ ಜಾಗಗಳನ್ನು ಸರ್ವೆ ಮಾಡಲು ಜಾಗಕ್ಕೆ ಬೇಲಿತಂತಿ (Fencing) ಹಾಕಲು ನಿರ್ಧಾರ ಮಾಡಿದೆ. ಶೀಘ್ರದಲ್ಲೇ ಸರ್ವೆ ಆರಂಭ ಮಾಡಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿದೆ. ಇದನ್ನೂ ಓದಿ: ರಸ್ತೆ ಅಪಘಾತ: ದರ್ಶನ್‌ ʻಕಾಟೇರʼ ಸಿನಿಮಾದಲ್ಲಿ ನಟಿಸಿದ್ದ ಬಾಲನಟ ರೋಹಿತ್‌ಗೆ ಗಾಯ

    ಬೆಂಗಳೂರಿನಲ್ಲೂ ಸಾವಿರಾರು ಎಕರೆ ಮುಜರಾಯಿ ಜಾಗ ಇದೆ. ಆ ಜಾಗ ಒತ್ತುವರಿ ಆಗಿದೆಯಾ ಎಂದು ಪರಿಶೀಲನೆ ಮಾಡಲಿದ್ದು, ಸರ್ವೆ ಮಾಡಿದಾಗ ಒತ್ತುವರಿ ಆಗಿದ್ದರೆ ಕೂಡಲೇ ಕೋರ್ಟ್ ಮೂಲಕ ತೆರವಿಗೆ ಪರ್ಮಿಷನ್ ತಂದು ತೆರವು ಮಾಡುತ್ತೇವೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಗುಲ್ಮಾರ್ಗ್‌ನಲ್ಲಿ ಈ ಸೀಸನ್ನಿನ ಮೊದಲ ಹಿಮಪಾತ, ಶ್ರೀನಗರದಲ್ಲಿ ಮಳೆ

  • ದೇವಸ್ಥಾನಗಳ ಕಾಮಗಾರಿಗಳಿಗೆ ಬ್ರೇಕ್‌ – ವಿರೋಧ ವ್ಯಕ್ತವಾಗುತ್ತಿದ್ದಂತೆ ಸುತ್ತೋಲೆ ವಾಪಸ್‌

    ದೇವಸ್ಥಾನಗಳ ಕಾಮಗಾರಿಗಳಿಗೆ ಬ್ರೇಕ್‌ – ವಿರೋಧ ವ್ಯಕ್ತವಾಗುತ್ತಿದ್ದಂತೆ ಸುತ್ತೋಲೆ ವಾಪಸ್‌

    ಬೆಂಗಳೂರು: ದೇವಸ್ಥಾನಗಳ (Temple) ಅಭಿವೃದ್ಧಿಗೆ ಬಿಡುಗಡೆ ಮಾಡಿದ ಅನುದಾನಕ್ಕೆ ಬ್ರೇಕ್‌ ಹಾಕಿದ್ದ ರಾಜ್ಯ ಸರ್ಕಾರ (Karnataka Government) ಈಗ ಸುತ್ತೋಲೆಯನ್ನು ಹಿಂದಕ್ಕೆ ಪಡೆದಿದೆ.

    ಈ ಸಂಬಂಧ ಪಬ್ಲಿಕ್ ಟಿವಿಗೆ ಹೇಳಿಕೆ ನೀಡಿದ ಮುಜರಾಯಿ ಇಲಾಖೆ ಆಯುಕ್ತ ಬಸವರಾಜೇಂದ್ರ, ಸಚಿವರ ಗಮನಕ್ಕೆ ಬಾರದೇ ಈ ಆದೇಶ ಪ್ರಕಟಿಸಲಾಗಿತ್ತು. ಈಗ ಆದೇಶವನ್ನು ಹಿಂದಕ್ಕೆ ಪಡೆಯುತ್ತಿದ್ದೇವೆ ಎಂದು ತಿಳಿಸಿದರು.

    ಜಿಲ್ಲೆಯಾದ್ಯಾಂತ ಮುಜರಾಯಿ ವ್ಯಾಪ್ತಿಯ ಕಾಮಗಾರಿಗಳು ನಡೆಯುತ್ತಿತ್ತು. ಈ ಕಾಮಗಾರಿ ಮಾಡಲು 50% ಅನುದಾನವನ್ನು ಬಿಡುಗಡೆ ಮಾಡಿ ತಡೆ ಹಿಡಿಯಲಾಗಿತ್ತು. ನಮ್ಮ ವ್ಯಾಪ್ತಿಯಲ್ಲಿ ನಾವು ಆದೇಶ ಹೊರಡಿಸಿದ್ದೆವು. ಈಗ ಮತ್ತೊಂದು ಆದೇಶವನ್ನು ಪ್ರಕಟಿಸಿದ್ದೇವೆ ಎಂದು ತಿಳಿಸಿದರು.  ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿ ದೇಗುಲಗಳಿಗೆ ರಿಲೀಸ್ ಮಾಡಿದ್ದ ಅನುದಾನಕ್ಕೆ ಬ್ರೇಕ್

     

    ಆಗಸ್ಟ್ 14 ರಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದ ಮುಜರಾಯಿ ಇಲಾಖೆ (Muzrai Department) ದೇವಾಲಯದ ಅಭಿವೃದ್ಧಿ ಮತ್ತು ಜೀರ್ಣೋದ್ಧಾರಕ್ಕೆ ಮಂಜೂರಾದ ಹಣದಲ್ಲಿ ಕೈಗೊಂಡಿರುವ ಕಾಮಗಾರಿಗಳನ್ನು ನಡೆಸದಂತೆ ಉಲ್ಲೇಖಿಸಿತ್ತು.

    ಈ ಹಿಂದಿನ ಸುತ್ತೋಲೆಯಲ್ಲಿ  ಏನಿತ್ತು?
    1. ಸರ್ಕಾರದಿಂದ ದೇವಾಲಯಗಳ ಅಭಿವೃದ್ಧಿ ಜೀರ್ಣೋದ್ಧಾರಕ್ಕಾಗಿ ಸಾಮಾನ್ಯ ಯೋಜನೆಯಡಿ ಅನುದಾನ ಮಂಜೂರಾಗಿದ್ದು ಕಾಮಗಾರಿಗಳನ್ನ ಪ್ರಾರಂಭಿಸಿದೆ ಇರುವ ಸಂಸ್ಥೆಗಳಿಗೆ ಮುಂದಿನ ನಿರ್ದೇಶನದ ವರೆಗೂ ಹಣ ಬಿಡುಗಡೆ ಮಾಡಬಾರದು.

    2.2022-23ನೇ ಸಾಲಿನಲ್ಲಿ ಸಾಮಾನ್ಯ ಯೋಜನೆ ಅಡಿ ಮಂಜೂರಾಗಿರುವ ಅನುದಾನದ ಪೈಕಿ ಈಗಾಗಲೇ 50% ರಷ್ಟು ಹಣ ಬಿಡುಗಡೆಯಾಗಿ ಆಡಳಿತಾತ್ಮಕ ಮಂಜೂರಾತಿ ನೀಡಿದ್ದು ಹಣ ಬಿಡುಗಡೆ ಮಾಡದಿದ್ದಲ್ಲಿ ಸದರಿ ಕಾಮಗಾರಿಗೆ ಹಣವನ್ನ ಬಿಡುಗಡೆ ಮಾಡಬಾರದು ಹಾಗೂ ಪ್ರಾರಂಭಿಸಿದೇ ಇದ್ದಲ್ಲಿ ಕಾಮಗಾರಿಯನ್ನು ಪ್ರಾರಂಭಿಸತಕ್ಕದ್ದಲ್ಲ.

    3. ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸ್ವೀಕೃತವಾಗಿದ್ದಲ್ಲಿ ಆಡಳಿತಾತ್ಮಕ ಮಂಜೂರಾತಿಯನ್ನು ಮುಂದಿನ ನಿರ್ದೇಶನವರೆಗೂ ತಡೆಹಿಡಿಯುವುದು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಧಿವೇಶನದ ನಂತರ ದೇವಸ್ಥಾನಗಳಿಗೆ ಭೇಟಿ ನೀಡಿ ಅಲ್ಲಿಯೇ ಸಮಸ್ಯೆ ಪರಿಹಾರ: ಶಶಿಕಲಾ ಜೊಲ್ಲೆ

    ಅಧಿವೇಶನದ ನಂತರ ದೇವಸ್ಥಾನಗಳಿಗೆ ಭೇಟಿ ನೀಡಿ ಅಲ್ಲಿಯೇ ಸಮಸ್ಯೆ ಪರಿಹಾರ: ಶಶಿಕಲಾ ಜೊಲ್ಲೆ

    -ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ

    ಬೆಂಗಳೂರು: ರಾಜ್ಯ ಹಾಗೂ ಹೊರ ರಾಜ್ಯದ ದೇವಸ್ಥಾನಗಳಲ್ಲಿ ರಾಜ್ಯದ ಭಕ್ತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ಅಲ್ಲಿಯೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವರಾದ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

    ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಸಚಿವರು ಹಾಗೂ ರಾಜ್ಯ ದಾರ್ಮಿಕ ಪರಿಷತ್ತಿನ ಅಧ್ಯಕ್ಷರಾಗಿರುವ ಶಶಿಕಲಾ ಜೊಲ್ಲೆಯವರು ಸೋಮವಾರ ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಧಾರ್ಮಿಕ ಪರಿಷತ್ತಿನ ಸಭೆ ನಡೆಸಿದರು. ಈ ಸಭೆಯಲ್ಲಿ ಮುಜರಾಯಿ ಇಲಾಖೆಯಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ತೆರಳುವ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ ಇರುವ ಪ್ರಮುಖ ದೇವಸ್ಥಾನಗಳ ಸಮಸ್ಯೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದ್ದು, ಇಲಾಖೆಯಲ್ಲಿ ನಾವು ಮಾಡಬೇಕಾದಂತಹ ಕೆಲಸ ಬಹಳ ಇದೆ. ಇಡೀ ಜಗತ್ತಿನಲ್ಲಿಯೇ ನಮ್ಮ ಸಂಸ್ಕೃತಿ, ಆದ್ಯಾತ್ಮಿಕತೆಗೆ ಹೆಸರುವಾಸಿಯಾಗಿದ್ದೇವೆ. ಅದನ್ನು ಉಳಿಸಿಕೊಂಡು ಹೋಗುವ ಕೆಲಸ ನಮ್ಮದು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಸಾಹಿತ್ಯ ಲೋಕದಲ್ಲಿ ಕ್ರಾಂತಿ – ಪುಸ್ತಕಗಳನ್ನು ಗ್ರಂಥಾಲಯಕ್ಕೆ ನೀಡಲಿದ್ದಾರೆ ಸುನಿಲ್ ಕುಮಾರ್

    ಮುಜರಾಯಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಇಲಾಖೆಯ ಕಾರ್ಯದರ್ಶಿಯ ಜೊತೆಗೆ ಚರ್ಚೆ ನಡೆಸಿದ್ದು, ಶೀಘ್ರವೇ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಭರ್ತಿ ಮಾಡುವ ಕುರಿತು ಚಿಂತನೆ ನಡೆಸಲಾಗುವುದು. ಇಲಾಖೆಯಲ್ಲಿ ಐದು ವರ್ಷಕ್ಕಿಂತ ಹೆಚ್ಚಿನ ಸಮಯ ಒಂದೆ ಕಡೆ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದರೆ, ಅಥವಾ ಇಲಾಖಾ ಹಂತದಲ್ಲಿ ಅವ್ಯವಹಾರ ನಡೆಯುತ್ತಿದ್ದರೆ, ಹಿರಿಯ ಅಧಿಕಾರಿಗಳು ಅದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕು. ಬೆಂಗಳೂರಿನ ಬನಶಂಕರಿ ದೇವಸ್ಥಾನದ ಅವ್ಯವಹಾರದ ಬಗ್ಗೆ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಮುಜರಾಯಿ ಇಲಾಖೆಯ ಆಯುಕ್ತರು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.

    ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಕಮಿಟಿಗಳು ಇಲಾಖೆಯ ಮಾಹಿತಿಯನ್ನು ಧಾರ್ಮಿಕ ಪರಿಷತ್ ಸದಸ್ಯರಿಗೆ ನೀಡುವುದಿಲ್ಲ ಎಂಬ ಆರೋಪ ಇದೆ. ಆಯುಕ್ತರು ಸಂಬಂಧ ಪಟ್ಟವರನ್ನು ಸಂಪರ್ಕಿಸಿ ಸದಸ್ಯರಿಗೆ ಮಾಹಿತಿ ನೀಡುವಂತೆ ಸೂಚಿಸಬೇಕು. ಮುಜರಾಯಿ ಇಲಾಖೆಯಿಂದ ಸಾಮೂಹಿಕ ವಿವಾಹದ ಯೋಜನೆ ಜಾರಿಯಲ್ಲಿದ್ದು, ಅದನ್ನು ಯಶಸ್ವಿಗೊಳಿಸಲು ಎಲ್ಲರೂ ಶ್ರಮಿಸಬೇಕು ಎಂದು ಸೂಚಿಸಿದರು. ಇದನ್ನೂ ಓದಿ: ಅಕ್ರಮವಾಗಿ ನೆಲೆಸಿರುವ ವಿದೇಶಿ ನಾಗರಿಕರ ಮೇಲೆ ಹೆಚ್ಚಿನ ನಿಗಾ: ಆರಗ ಜ್ಞಾನೇಂದ್ರ

    ಗೋಪೂಜೆಗೆ ಆದ್ಯತೆ:
    ಗೋವು ನಮ್ಮ ಸಂಸ್ಕೃತಿಯ ಭಾಗವಾಗಿದ್ದು, ಅದನ್ನು ತಾಯಿ ಸ್ಥಾನದಲ್ಲಿ ನೋಡುತ್ತೇವೆ. ಹೀಗಾಗಿ ಕೇವಲ ಪಶು ಸಂಗೋಪನೆ ಇಲಾಖೆ ಮಾತ್ರವಲ್ಲ. ಮುಜರಾಯಿ ಇಲಾಖೆಯ ಮೂಲಕವೂ ಗೋವಿನಿಂದ ಆಗುವ ಪ್ರಯೋಜನಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಅಲ್ಲದೇ ದೀಪಾವಳಿ ಸಂದರ್ಭದಲ್ಲಿ ಗೋ ಪೂಜೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಅರ್ಚಕರಿಗೆ ಜೀವ ವಿಮೆ ಮಾಡಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು. ಆರನೇ ವೇತನ ಆಯೋಗದ ಶಿಫಾರಸ್ಸಿನಂತೆ ಅರ್ಚಕರಿಗೆ ವೇತನ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ನಮ್ಮ ರಾಜ್ಯದ ಜನರು ಬೇರೆ ರಾಜ್ಯದ ದೇವಸ್ಥಾನಗಳಿಗೆ ಪ್ರವಾಸ ಕೈಗೊಳ್ಳುವ, ಮಹಾರಾಷ್ಟ್ರದ ತುಳಜಾಭವಾನಿ, ಫಂಡರಾಪುರ, ಗುಡ್ಡಾಪುರ ದಾನಮ್ಮ, ಆಂಧ್ರಪ್ರದೇಶದ ತಿರುಪತಿ, ಶ್ರೀಶೈಲದಲ್ಲಿ ರಾಜ್ಯ ಸರ್ಕಾರದ ಜಾಗ ಇರುವ ಬಗ್ಗೆ ಪರಿಶೀಲಿಸಿ ಅಲ್ಲಿ ಯಾತ್ರಿ ನಿವಾಸಗಳ ನಿರ್ಮಾಣ ಮಾಡಲು ಶೀಘ್ರವೇ ಸ್ಥಳಗಳಿಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಸಭೆಯಲ್ಲಿ ತಿಳಿಸಿದರು.

     

  • ಬೆಂಗ್ಳೂರಲ್ಲಿ 800 ಕೋಟಿ ರೂ.ನಷ್ಟು ಮುಜರಾಯಿ ಇಲಾಖೆ ಜಾಗ ಕಂಡವರ ಪಾಲು

    ಬೆಂಗ್ಳೂರಲ್ಲಿ 800 ಕೋಟಿ ರೂ.ನಷ್ಟು ಮುಜರಾಯಿ ಇಲಾಖೆ ಜಾಗ ಕಂಡವರ ಪಾಲು

    ಬೆಂಗಳೂರು: ನಗರದಲ್ಲಿ ಮುಜರಾಯಿ ಇಲಾಖೆಯ ಜಾಗ ಎಷ್ಟು ಪ್ರಮಾಣದಲ್ಲಿ ಖಾಸಗಿ ಬಿಲ್ಡರ್ ಗಳ ಪಾಲಗಿದೆ ಅನ್ನೋ ಲೆಕ್ಕ ನೋಡಿದ್ರೇ ನೀವು ಓ ಮೈ ಗಾಡ್ ಅನ್ನದೇ ಇರಲ್ಲ.

    ಹೌದು. ಬೆಂಗಳೂರು ನಗರವೊಂದರಲ್ಲಿ ಬರೋಬ್ಬರಿ ಸುಮಾರು ಎಂಟುನೂರು ಕೋಟಿಯಷ್ಟು ಆಸ್ತಿ ಕಂಡವರ ಪಾಲಾಗಿದೆ ಅಂತಾ ಅಂದಾಜಿಸಲಾಗಿದೆ. 12 ವರ್ಷದ ಹಿಂದೆ ಮುಜರಾಯಿ ಜಮೀನಿನ ರಕ್ಷಣೆಗೆ ಕಾಯ್ದೆ ರೂಪಿಸಬೇಕು ಅಂತಾ ಗೆಜೆಟ್ ನೊಟಿಫಿಕೇಶನ್ ಹೊರಡಿಸಿದ್ರೂ ಇಷ್ಟು ವರ್ಷವಾದ್ರೂ ಈ ಕಾಯ್ದೆ ಜಾರಿಗೆ ತಂದಿಲ್ಲ. ಜೊತೆಗೆ ಮುಜರಾಯಿ ಇಲಾಖೆ ಜಮೀನು ಎಷ್ಟಿದೆ ಅನ್ನೋದು ಖುದ್ದು ರಾಜ್ಯ ಸರ್ಕಾರದ ಗಮನಕ್ಕೆ ಬಂದಿಲ್ಲ ಅನ್ನೋ ಮಾಹಿತಿ ಆರ್‍ಟಿಐನಲ್ಲಿ ಬಹಿರಂಗವಾಗಿದೆ.

    ಬೆಂಗಳೂರಿನ ಐತಿಹಾಸಿಕ ಗವಿಗಂಗಾಧರ, ಕಾಡು ಮಲ್ಲೇಶ್ವರ ದೇಗುಲದ ಜಾಗವೂ ಸಾಕಷ್ಟು ಪರರ ಪಾಲಾಗಿದೆ. ಮುಜರಾಯಿ ದೇಗುಲದ ದುಡ್ಡುನ್ನು ಸರ್ಕಾರ ಎಲ್ಲಿ ಬಳಕೆ ಮಾಡುತ್ತೆ ಅನ್ನೋದು ಗೊತ್ತಾಗಲ್ಲ, ಆದ್ರೇ ದೇಗುಲ ರಕ್ಷಣೆ ಮಾಡಲ್ಲ ಅಂತಾ ಹಿಂದೂ ಜನಜಾಗೃತಿ ಸಮಿತಿ ಕಿಡಿ ಕಾರಿದೆ.