Tag: ಮುಜಾಫರ್ ನಗರ

  • ಮುಸ್ಲಿಂ ವಿದ್ಯಾರ್ಥಿಗೆ ಸಹಪಾಠಿಗಳಿಂದ ಕಪಾಳಮೋಕ್ಷ – ಘಟನೆ ರಾಜ್ಯದ ಆತ್ಮಸಾಕ್ಷಿ ಅಲ್ಲಾಡಿಸುತ್ತದೆ: ಸುಪ್ರೀಂ

    ಮುಸ್ಲಿಂ ವಿದ್ಯಾರ್ಥಿಗೆ ಸಹಪಾಠಿಗಳಿಂದ ಕಪಾಳಮೋಕ್ಷ – ಘಟನೆ ರಾಜ್ಯದ ಆತ್ಮಸಾಕ್ಷಿ ಅಲ್ಲಾಡಿಸುತ್ತದೆ: ಸುಪ್ರೀಂ

    ನವದೆಹಲಿ: ಉತ್ತರ ಪ್ರದೇಶದ (Uttar Pradesh) ಮುಜಾಫರ್ ನಗರದ (Muzaffarnagar) ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ವಿದ್ಯಾರ್ಥಿಗೆ (Student) ತನ್ನ ಸಹಪಾಠಿಗೆ ಕಪಾಳಮೋಕ್ಷ ಮಾಡುವಂತೆ ಆದೇಶಿಸಿದ ಘಟನೆಯ ಹೊಣೆಗಾರಿಕೆಯನ್ನು ರಾಜ್ಯವೇ ಹೊರಬೇಕು ಎಂದು ಸುಪ್ರೀಂಕೋರ್ಟ್ (Supreme Court) ಸೋಮವಾರ ಹೇಳಿದೆ.

    ಘಟನೆಯ ವೀಡಿಯೋ ಕಳೆದ ತಿಂಗಳು ವೈರಲ್ ಆಗಿ, ವ್ಯಾಪಕ ಆಕ್ರೋಶಕ್ಕೆ ಕಾರಣವಾಯಿತು. ನಂತರ ಶಿಕ್ಷಕಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಬಗ್ಗೆ ಸುಪ್ರೀಂಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಪಂಕಜ್ ಮಿಥಾಲ್ ಅವರ ಪೀಠವು ಮೌಖಿಕ ಅವಲೋಕನವನ್ನು ಮಾಡಿತು.

    ಶಿಕ್ಷಕರ ಸೂಚನೆಯ ಮೇರೆಗೆ ಶಾಲಾ ಮಕ್ಕಳು ಅಳುತ್ತಿರುವ, ಮುಸ್ಲಿಂ ವಿದ್ಯಾರ್ಥಿಯನ್ನು ಸರದಿಯಲ್ಲಿ ಹೊಡೆಯುವ ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಎಫ್‌ಐಆರ್ ದಾಖಲಿಸಿದ ರೀತಿಗೆ ಗಂಭೀರ ಆಕ್ಷೇಪವಿದೆ ಎಂದು ಹೇಳಿದೆ. ಇಂತಹ ಘಟನೆಗಳಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ಹೇಳಿತು. ಇದನ್ನೂ ಓದಿ: ಬಂದ್ ಬಿಸಿ ನಡುವೆ ಮಂಗಳವಾರ CWRC ಸಭೆ – ಮತ್ತೆ ನೀರು ಹರಿಸಲು ಸೂಚಿಸುತ್ತಾ ನಿಯಂತ್ರಣ ಸಮಿತಿ?

    ಶಿಕ್ಷಕರು ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡಿದ್ದಾರೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಕಲಿಸುವ ವಿಧಾನ, ಇದು ಗುಣಮಟ್ಟದ ಶಿಕ್ಷಣವೇ? ಈ ಘಟನೆಗೆ ರಾಜ್ಯವು ಹೊಣೆಗಾರಿಕೆಯನ್ನು ತೆಗೆದುಕೊಳ್ಳಬೇಕು. ಶಾಲೆಯು ಮಗುವಿಗೆ ಕೆಲವು ಸಲಹೆಗಾರರನ್ನು ನೇಮಿಸಿದೆಯೇ? ಈ ಘಟನೆ ರಾಜ್ಯದ ಆತ್ಮಸಾಕ್ಷಿಯನ್ನು ಅಲ್ಲಾಡಿಸುತ್ತದೆ. ಇದು ಗಂಭೀರ ವಿಷಯ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಶಾಂತಿಯುತ ಬಂದ್‌ಗೆ ಸರ್ಕಾರ ಅಡಚಣೆ ಮಾಡಲ್ಲ: ಡಿಕೆಶಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅತ್ಯಂತ ಬಡ ಅಭ್ಯರ್ಥಿ

    ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅತ್ಯಂತ ಬಡ ಅಭ್ಯರ್ಥಿ

    ಲಕ್ನೋ: ಲೋಕಸಭಾ ಚುನಾವಣೆಗೆ ಪಕ್ಷಗಳಿಂದ ಮತ್ತು ಪಕ್ಷೇತರ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ. ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸುವ ವೇಳೆ ತಮ್ಮ ಆಸ್ತಿಯನ್ನು ಘೋಷಣೆ ಮಾಡಿಕೊಳ್ಳುತ್ತಾರೆ. ಕೋಟಿ ಒಡೆಯರಾಗಿರುವ ಹಲವು ಅಭ್ಯರ್ಥಿಗಳು ಚುನಾವಣೆ ಅಖಾಡದಲ್ಲಿದ್ದಾರೆ. ಮುಜಾಫರನಗರ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ಮಾಂಗೆರಾಮ್ ಕಶ್ಯಪ್ ಅತ್ಯಂತ ಬಡ ಅಭ್ಯರ್ಥಿ ಎಂದು ವರದಿಯಾಗಿದೆ.

    ಎಲ್‍ಎಲ್‍ಬಿ ಪದವಿಧರ ಆಗಿರುವ ಮಂಗೆರಾಮ್ ಕಶ್ಯಪ್ ಬ್ಯಾಂಕ್ ಖಾತೆ ಜೀರೋ ಬ್ಯಾಲೆನ್ಸ್ ಹೊಂದಿದೆ. ಒಂದು ಬೈಕ್ ಹೊಂದಿರುವ ಮಂಗೆರಾಮ್ ಕೆಲವೊಮ್ಮೆ ತಮ್ಮ ವಾಹನಕ್ಕೆ ಪೆಟ್ರೋಲ್ ಹಾಕಿಸಲು ಪರದಾಡುವ ಪರಿಸ್ಥಿತಿಯಲ್ಲಿದ್ದಾರೆ. ಆರ್ಥಿಕ ಸಂಕಷ್ಟದ ನಡುವೆಯೂ ತಮ್ಮದೇ ಬೈಕ್ ಮೇಲೆಯೇ ಗ್ರಾಮಗಳಿಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ.

    ಈಗಾಗಲೇ ಮೂರು ಚುನಾವಣೆಗಳಲ್ಲಿ ಸೋಲು ಕಂಡಿರುವ ಮಂಗೆರಾಮ್ ಛಲ ಬಿಡದೇ ಈ ಬಾರಿಯೂ ಸ್ಪರ್ಧೆ ಮಾಡಿದ್ದಾರೆ. ಪತ್ನಿ ಮತ್ತು ಮಕ್ಕಳ ವಿರೋಧದ ನಡುವೆಯೂ ಮಂಗೆರಾಮ್ ತಮ್ಮ ಪಕ್ಷದ ಬಾವುಟ ಮತ್ತು ಬ್ಯಾನರ್ ಹಿಡಿದುಕೊಂಡು ಏಕಾಂಗಿಯಾಗಿ ಪ್ರಚಾರ ನಡೆಸುತ್ತಿದ್ದಾರೆ.

    ಅಲೆಗಳಿಗೆ ಹೆದರಿ ನೌಕೆ ಎಂದು ತನ್ನ ಪ್ರಯಾಣ ಆರಂಭಿಸಲು ಹಿಂದೇಟು ಹಾಕಲ್ಲ. ಪ್ರಯತ್ನ ಮಾಡುವವರಿಗೆ ಸೋಲು ಇಲ್ಲ ಎಂದು ನಾನು ನಂಬಿದ್ದೇನೆ ಎಂದು ಮಂಗೆರಾಮ್ ಕಶ್ಯಪ್ ಹೇಳುತ್ತಾರೆ.

    ಮೂಲತಃ ಉತ್ತರಖಂಡದವರಾಗಿರುವ ಮಂಗೆರಾಮ್, ಬಡತನದ ಮನೆಯಲ್ಲಿ ಹುಟ್ಟಿದ ವ್ಯಕ್ತಿ. ಮನೆಯ ಆರ್ಥಿಕ ಸ್ಥಿತಿ ಸರಿ ಇರದಿದ್ದ ಕಾರಣ ಪೋಷಕರು ಮಂಗೆರಾಮ್ ಅವರಿಗೆ ಓದಿಸಲು ಹಿಂದೇಟು ಹಾಕಿದ್ದರು. ಓದಬೇಕೆಂಬ ಹಂಬಲದಿಂದ ಮನೆಯಿಂದ ಹೊರ ಬಂದ ಮಂಗೆರಾಮ್ ಮುಜಾಫರನಗರದಲ್ಲಿ ಬಿಎಸ್‍ಸಿ, ಬಿಎಡ್ ಜೊತೆಗೆ ಎಲ್‍ಎಲ್‍ಬಿ ಪದವಿ ಓದಿದ್ದಾರೆ. ವಕೀಲ ವೃತ್ತಿ ಆರಂಭಿಸುವುದರ ಜೊತೆಗೆ 2000ರಲ್ಲಿ ಮಜದೂರ್ ಯೂನಿಯನ್ ಎಂಬ ಪಕ್ಷ ಸ್ಥಾಪಿಸಿ ಚುನಾವಣೆಗೆ ಸ್ಪರ್ಧಿಸುತ್ತಾ ಬಂದಿದ್ದಾರೆ.

  • ಮೊದಲ ಪತ್ನಿಯಿಂದಲೇ ಪತಿಯ ಮರ್ಮಾಂಗ ಕಟ್!

    ಮೊದಲ ಪತ್ನಿಯಿಂದಲೇ ಪತಿಯ ಮರ್ಮಾಂಗ ಕಟ್!

    ಲಕ್ನೋ: ತನ್ನ ಬಗ್ಗೆ ನಿಷ್ಕಾಳಜಿ ತೋರಿ, ಹೆಚ್ಚು ಕಾಲ ಎರಡನೇ ಪತ್ನಿಯೊಂದಿಗೆಯೇ ಇರುತ್ತಿದ್ದ ಪತಿಯ ಮರ್ಮಾಂಗವನ್ನೇ ಮೊದಲನೇ ಪತ್ನಿ ಕತ್ತರಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

    ಮುಜಾಫರ್ ನಗರ ಜಿಲ್ಲೆಯ ಮಿಮ್ಲಾನ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಪತ್ನಿಯ ಕೃತ್ಯದಿಂದ ಪತಿ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಮೊದಲ ಪತ್ನಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ಆಕೆಯ ಒಪ್ಪಿಗೆ ಪಡೆದು ಪತಿ ಎರಡನೇ ಮದುವೆಯಾಗಿದ್ದ. ಇತ್ತೀಚೆಗೆ ಎರಡನೇ ಪತ್ನಿ ಮಗುವಿಗೆ ಜನ್ಮ ನೀಡಿದ್ದಳು. ಪತಿ ಮೊದಲ ಪತ್ನಿಯನ್ನು ನಿರ್ಲಕ್ಷಿಸಿ, ಹೆಚ್ಚು ಕಾಲ ಎರಡನೇ ಪತ್ನಿಯೊಂದಿಗೆ ಇರುತ್ತಿದ್ದ. ಇದರಿಂದ ಮನನೊಂದ ಆಕೆ ಪತಿಯ ಮರ್ಮಾಂಗವನ್ನೇ ಕತ್ತರಿಸಿದ್ದಾಳೆ ಎಂದು ವರದಿಯಾಗಿದೆ.

    ಈ ಕುರಿತು ಹಲ್ಲೆಗೆ ಒಳಗಾದ ಪತಿಯ ಮೊದಲ ಪತ್ನಿಯ ವಿರುದ್ಧ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಅಪರಾಧ ಮಾಡಲು ಜನರು ಹೆದರುತ್ತಿದ್ದಾರೆ, ಕ್ರಿಮಿನಲ್ ಗಳು ತರಕಾರಿ ಮಾರುತ್ತಿದ್ದಾರೆ : ಯೋಗಿ ಆದಿತ್ಯನಾಥ್

    ಅಪರಾಧ ಮಾಡಲು ಜನರು ಹೆದರುತ್ತಿದ್ದಾರೆ, ಕ್ರಿಮಿನಲ್ ಗಳು ತರಕಾರಿ ಮಾರುತ್ತಿದ್ದಾರೆ : ಯೋಗಿ ಆದಿತ್ಯನಾಥ್

    ಲಕ್ನೊ: ಬಿಜೆಪಿ ಸರ್ಕಾರ ಆಡಳಿತ ವಹಿಸಿಕೊಂಡ ಬಳಿಕ ಜನರು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವುದು ಕಡಿಮೆಯಾಗಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

    ಅಪರಾಧ ಕೃತ್ಯಗಳಲ್ಲಿ ತೊಡಗುವುದನ್ನು ಬಿಟ್ಟು ಕ್ರಿಮಿನಲ್ ಗಳು ತರಕಾರಿಯನ್ನು ಮಾರಾಟ ಮಾಡುತ್ತಿದ್ದಾರೆ. ಹಿಂದಿನ ಸಮಾಜವಾದಿ ಮತ್ತು ಬಹುಜನ ಸಮಾಜವಾದಿ ಪಕ್ಷಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡಿದ್ದವು ಎಂದು ದೂರಿದರು.

    ಇದೇ ವೇಳೆ ಯುವಕರಿಗೆ ಉದ್ಯೋಗವನ್ನು ಸೃಷ್ಟಿಸುವ ಭರವಸೆಯನ್ನು ನೀಡಿದರು. 1.62 ಲಕ್ಷ ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಮತ್ತು 1.37 ಲಕ್ಷ ಶಿಕ್ಷಕರನ್ನು ಸರ್ಕಾರ ನೇಮಕ ಮಾಡಿಕೊಳ್ಳುತ್ತದೆ. ಗುತ್ತಿಗೆ ಆಧಾರದ ಶಿಕ್ಷಕರಿಗೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನವನ್ನು ಹೆಚ್ಚಿಸಲಾಗುವುದು ಎಂದು ತಿಳಿಸಿದರು.

    2013ರಲ್ಲಿ ಮುಜಾಫರ್ ನಗರದಲ್ಲಿ ನಡೆದ ಹಿಂದು ಮುಸ್ಲಿಂ ಗಲಭೆಯಲ್ಲಿ ಹಲವಾರು ಮುಸಲ್ಮಾನ ಕುಟುಂಬಗಳು ಸ್ಥಳಾಂತರಗೊಂಡವು. 2016 ರಲ್ಲಿ ಶಾಮ್ಲಿ ಜಿಲ್ಲೆಯ ಕೈರಾನ ಬ್ಲಾಕ್ ನಲ್ಲಿ ಹಿಂದೂಗಳಿಗೆ ಅಪಾಯ ಇದೆ ಎಂದು ಹಲವಾರು ಹಿಂದು ಕುಟುಂಬಗಳು ಸ್ಥಳಾಂತರಗೊಂಡವು ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಹಿಂದಿನ ಎಸ್ ಪಿ ಸರ್ಕಾರದಲ್ಲಿ ಎಲ್ಲಾ ಸಮುದಾಯದ ಯುವಕರಿಗೆ ಉದ್ಯೋಗ ಸಿಗಲಿಲ್ಲ. ಕೇವಲ ನಿರ್ಧಿಷ್ಟ ಸಮುದಾಯದವರಿಗೆ ಉದ್ಯೋಗಗಳು ದೊರೆತಿದೆ. ನಮ್ಮ ಸರ್ಕಾರದಲ್ಲಿ ಎಲ್ಲಾ ವರ್ಗದವರಿಗೂ ಉದ್ಯೋಗ ಸಿಗುವಂತೆ ನಿಯಮಗಳನ್ನು ರೂಪಿಸಿದ್ದೇವೆ ಎಂದು ತಿಳಿಸಿದರು.

  • ಗಂಡನ ಎದುರೇ ಮಹಿಳೆಯ ಮೇಲೆ ಗ್ಯಾಂಗ್‍ರೇಪ್

    ಗಂಡನ ಎದುರೇ ಮಹಿಳೆಯ ಮೇಲೆ ಗ್ಯಾಂಗ್‍ರೇಪ್

    ಲಕ್ನೋ: ಗಂಡನ ಎದುರೆ ಮಹಿಳೆಗೆ ಗನ್ ತೋರಿಸಿ ಬೆದರಿಸಿ ನಾಲ್ವರು ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಈ ಘಟನೆ ನಡೆದಿದೆ.

    ಗನ್ ತೋರಿಸಿ ಬೆದರಿಸಿ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರವನ್ನು ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಅಲ್ಲದೇ ಆಕೆಯ ಮಗನನ್ನು ಕೊಲೆ ಮಾಡುವುದಾಗಿ ಬೆದರಿಸಿದ್ದು, ಗಂಡನ ಮೇಲೂ ಹಲ್ಲೆ ಮಾಡಿದ್ದಾಗಿ ಮಹಿಳೆ ಹೇಳಿದ್ದಾರೆ.

    ಈ ಕುರಿತು ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನಾಲ್ವರು ದುಷ್ಕರ್ಮಿಗಳು ತನ್ನನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

    ಘಟನೆಯ ಕುರಿತು ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದು, ಸಂತ್ರಸ್ತೆ ಮತ್ತು ಆಕೆಯ ಪತಿಯನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದರೆ. ಮುಂದಿನ ತನಿಖೆಯನ್ನು ನಡೆಸುವುದಾಗಿ ಪೊಲೀಸ್ ಅಧೀಕ್ಷಕರು ಮಾಹಿತಿ ನೀಡಿದ್ದಾರೆ.

  • ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ರೈಲು: ಸಾವಿನ ಸಂಖ್ಯೆ 23ಕ್ಕೆ ಏರಿಕೆ

    ಉತ್ತರಪ್ರದೇಶದಲ್ಲಿ ಹಳಿ ತಪ್ಪಿದ ರೈಲು: ಸಾವಿನ ಸಂಖ್ಯೆ 23ಕ್ಕೆ ಏರಿಕೆ

    ಲಕ್ನೋ: ಮಕ್ಕಳ ಮಾರಣಹೋಮದ ಬಳಿಕ ಉತ್ತರಪ್ರದೇಶ ಮತ್ತೊಂದು ದುರಂತಕ್ಕೆ ಸಾಕ್ಷಿಯಾಗಿದೆ. ಮುಜಾಫರ್‍ನಗರ ಖತೌಲಿ ಬಳಿ ಕಳಿಂಗ ಉತ್ಕಲ್ ಎಕ್ಸ್ ಪ್ರೆಸ್ ರೈಲು ಹಳಿತಪ್ಪಿದೆ. ಘಟನೆಯಲ್ಲಿ 23 ಮಂದಿ ಸಾವನ್ನಪ್ಪಿದ್ದು, 72ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

    ಒಡಿಶಾದ ಪುರಿಯಿಂದ ಹರಿದ್ವಾರಕ್ಕೆ ಹೊರಟಿದ್ದ ರೈಲಿನ 14 ಬೋಗಿಗಳು ಶನಿವಾರ ಸಂಜೆ 5.45ರ ಸುಮಾರಿಗೆ ಹಳಿತಪ್ಪಿದೆ. ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಗಾಯಾಳುಗಳನ್ನು ಮೀರತ್‍ನ ಆಸ್ಪತ್ರೆಗೆ ರವಾನಿಸಲಾಗಿದೆ.

    ಮೃತರ ಕುಟುಂಬಗಳಿಗೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಲಾ 2 ಲಕ್ಷ, ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಒಡಿಶಾ ಸರ್ಕಾರದಿಂದಲೂ ಮೃತರಿಗೆ ಪರಿಹಾರ ಘೋಷಿಸಲಾಗಿದೆ.

    ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಮಾನಾಥ್ ಕೋವಿಂದ್ ಹಾಗೂ ರಾಹುಲ್ ಗಾಂಧಿ ಮತ್ತಿತರ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ರೈಲ್ವೆ ಸಚಿವ ಸುರೇಶ್ ಪ್ರಭು ಕೂಡ ಸಂತಾಪ ವ್ಯಕ್ತಪಡಿಸಿದ್ದು, ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ಜೊತೆಗೆ ಮೃತರ ಕುಟುಂಬಗಳಿಗೆ 3.25 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ, ಸಣ್ಣಪುಟ್ಟ ಗಾಯಗಳಾದವರಿಗೆ 25 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

    ಈ ಮಧ್ಯೆ ಅಧಿಕಾರಿಗಳ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ದುರ್ಘಟನೆ ಸಂಭವಿಸಿದ ಸ್ಥಳದಲ್ಲಿ ಕಾಮಗಾರಿ ನಡೆಯುತ್ತಿತ್ತು. ಆದ್ರೆ ರೈಲು ಬರುವಾಗ ಕೆಂಪು ಬಾವುಟ, ಸಿಗ್ನಲ್ ಸೂಚಿಸದೆ ರೈಲ್ವೆ ಸಿಬ್ಬಂದಿ ನಿರ್ಲಕ್ಷ್ಯ ತೋರಿದ್ದರು ಅಂತಲೂ ಹೇಳಲಾಗುತ್ತಿದೆ.

    ಕಳೆದ ವರ್ಷ ನವೆಂಬರ್‍ನಲ್ಲಿ ಕಾನ್ಪುರದಲ್ಲಿ ಇಂದೋರ್-ಪಾಟ್ನಾ ರೈಲು ಹಳಿ ತಪ್ಪಿ 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ರು.

  • ಹಳಿ ತಪ್ಪಿ ಮನೆ-ಕಾಲೇಜ್ ಗೆ ನುಗ್ಗಿದ ಉತ್ಕಲ್ ಎಕ್ಸ್ ಪ್ರೆಸ್-10 ಸಾವು

    ಹಳಿ ತಪ್ಪಿ ಮನೆ-ಕಾಲೇಜ್ ಗೆ ನುಗ್ಗಿದ ಉತ್ಕಲ್ ಎಕ್ಸ್ ಪ್ರೆಸ್-10 ಸಾವು

    ಮುಜಾಫರ್ ನಗರ: ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಖೌತಲಿ ಎಂಬಲ್ಲಿ ಉತ್ಕಲ್ ಎಕ್ಸ್ ಪ್ರೆಸ್ ಅಪಘಾತಕ್ಕೀಡಾಗಿದೆ. ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ ಸದ್ಯ ಹತ್ತು ಜನರು ಸಾವನ್ನಪ್ಪಿದ್ದು, ಇನ್ನೂ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

    ರೈಲ್ವೆ ಓರಿಸ್ಸಾದ ಪುರಿಯಿಂದ ಹರಿದ್ವಾರಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ನವದೆಹಲಿಯ 100 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದೆ. ರೈಲ್ವೆ ಸಚಿವ ಸುರೇಶ್ ಪ್ರಭು ಈಗಾಗಲೇ ಸ್ಥಳೀಯ ರೈಲ್ವೆ ಇಲಾಖೆಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಅಪಘಾತಕ್ಕೆ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಸಲು ಸುರೇಶ್ ಪ್ರಭು ಆದೇಶಿಸಿದ್ದಾರೆ.

    ಅಪಘಾತ ಸಂಭವಿಸಿದ ಸ್ಥಳದಲ್ಲಿ ವಿದ್ಯುತ್ ಇಲ್ಲದಿರುವುದು ರಕ್ಷಣಾ ಕಾರ್ಯಚರಣೆಗೆ ತೊಂದರೆಯನ್ನುಂಟು ಮಾಡಿದೆ. ರೈಲ್ವೆಯ 6 ರಿಂದ 8 ಬೋಗಿಗಳು ಹಳಿ ತಪ್ಪಿದ್ದು, ಸುಮಾರು 50ಕ್ಕೂ ಹೆಚ್ಚು ಜನರು ರೈಲ್ವೆಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಹಲವು ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಎರಡೂ ಬೋಗಿಗಳು ಒಂದರ ಮೇಲೊಂದು ಬಿದ್ದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ.

    ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ 3.5 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಮತ್ತು ಸಣ್ಣ ಪುಟ್ಟ ಗಾಯಾಳುಗಳಿಗೆ 25 ಸಾವಿರ ರೂ. ಪರಿಹಾರ ಹಣವನ್ನು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಪ್ರಕಟಿಸಿದ್ದಾರೆ.