Tag: ಮುಟ್ಟಿನ ರಜೆ

  • ITI ವಿದ್ಯಾರ್ಥಿನಿಯರಿಗೆ ತಿಂಗಳಲ್ಲಿ 2 ದಿನ ಮುಟ್ಟಿನ ರಜೆ ಘೋಷಿಸಿದ ಕೇರಳ ಸರ್ಕಾರ

    ITI ವಿದ್ಯಾರ್ಥಿನಿಯರಿಗೆ ತಿಂಗಳಲ್ಲಿ 2 ದಿನ ಮುಟ್ಟಿನ ರಜೆ ಘೋಷಿಸಿದ ಕೇರಳ ಸರ್ಕಾರ

    ತಿರುವನಂತಪುರ: ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ITI) ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು ಎರಡು ದಿನಗಳ ಮುಟ್ಟಿನ ರಜೆ (Menstrual Leave) ನೀಡುವ ಮಹತ್ವದ ನಿರ್ಧಾರವನ್ನು ಕೇರಳ (Kerala) ಸರ್ಕಾರ ಗುರುವಾರ ಪ್ರಕಟಿಸಿದೆ.

    ರಾಜ್ಯ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಈ ನಿರ್ಧಾರವನ್ನು ಪ್ರಕಟಿಸಿದರು. ದೈಹಿಕ ಶ್ರಮ ಬೇಡುವ ಅನೇಕ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿನಿಯರು ಉತ್ತಮ ಸಾಧನೆ ಮಾಡಿದ್ದಾರೆ. ಇಂದಿನ ಯುಗದಲ್ಲಿ, ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲೂ ಸಕ್ರಿಯರಾಗಿದ್ದಾರೆ. ಈ ಅಂಶಗಳನ್ನು ಪರಿಗಣಿಸಿ ಐಟಿಐ ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು ಎರಡು ದಿನಗಳ ಋತುಚಕ್ರದ ರಜೆಯನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಜನವರಿಯಲ್ಲಿ ಸಂಪುಟಕ್ಕೆ ಸರ್ಜರಿ – ಕೆಪಿಸಿಸಿ ಪಟ್ಟ ಬಿಡಲು ಡಿಕೆಶಿ ಷರತ್ತು?

    ಕೇರಳದ 100ಕ್ಕೂ ಹೆಚ್ಚು ಐಟಿಐ ಕಾಲೇಜುಗಳಲ್ಲಿ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯಲಿದ್ದಾರೆ. ಪ್ರಯೋಜನ ಪಡೆಯುವ ವಿದ್ಯಾರ್ಥಿಗಳ ನಿಖರ ಸಂಖ್ಯೆಯನ್ನು ಕಂಡುಹಿಡಿಯಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಚಿನ್ಮಯ್ ಕೃಷ್ಣ ದಾಸ್‌ರನ್ನು ಅನ್ಯಾಯವಾಗಿ ಬಂಧಿಸಲಾಗಿದೆ – ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಖಂಡನೆ

    ಇನ್ನು ಶನಿವಾರ ಎಲ್ಲಾ ಐಟಿಐ ಕಾಲೇಜುಗಳಿಗೆ ರಜೆ ನೀಡಲು ಕೇರಳ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆ ತರಬೇತಿ ಸಮಯವನ್ನು ಸರಿದೂಗಿಸಲು, ಐಟಿಐ ಶಿಫ್ಟ್ಗಳನ್ನು ಮರುಹೊಂದಿಸಲಾಗುತ್ತದೆ. ಮೊದಲ ಪಾಳಿಯು ಬೆಳಿಗ್ಗೆ 7:30ರಿಂದ ಮಧ್ಯಾಹ್ನ 3 ರವರೆಗೆ ಮತ್ತು ಎರಡನೇ ಶಿಫ್ಟ್ ಬೆಳಿಗ್ಗೆ 10 ರಿಂದ ಸಂಜೆ 5:30 ರವರೆಗೆ ಇರುತ್ತದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಹಿಂದಿ ಒಲವಿಗೆ ಕನ್ನಡ ಅಭಿಮಾನಿಗಳ ಆಕ್ರೋಶ

  • ಮಹಿಳೆಯರಿಗೆ ಮುಟ್ಟಿನ ರಜೆ; ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲು ನಿರಾಕರಿಸಿದ ಸುಪ್ರೀಂ – ಕೇಂದ್ರಕ್ಕೆ ಮನವಿ ಮಾಡಲು ಸೂಚನೆ

    ಮಹಿಳೆಯರಿಗೆ ಮುಟ್ಟಿನ ರಜೆ; ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲು ನಿರಾಕರಿಸಿದ ಸುಪ್ರೀಂ – ಕೇಂದ್ರಕ್ಕೆ ಮನವಿ ಮಾಡಲು ಸೂಚನೆ

    ನವದೆಹಲಿ: ಭಾರತದಾದ್ಯಂತ ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ನೋವಿನ ರಜೆಯನ್ನು (Menstrual Pain Leave) ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ವಿಲೇವಾರಿ ಮಾಡಿದೆ.‌ ಅರ್ಜಿದಾರರು ಕೇಂದ್ರ ಸರ್ಕಾರದ (Central Government) ಮುಂದೆ ಪ್ರಾತಿನಿಧ್ಯವನ್ನು ನೀಡಲು ಅವಕಾಶ ನೀಡಿದೆ.

    ಶೈಲೇಂದ್ರ ಮಣಿ ತ್ರಿಪಾಠಿ ಎನ್ನುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ (Dhananjaya Y. Chandrachud) ನೇತೃತ್ವದ ಪೀಠ, ಪ್ರಕರಣವೂ ಸರ್ಕಾರದ ನೀತಿಗೆ ಸಂಬಂಧಿಸಿದೆ. ಅರ್ಜಿದಾರರು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಮುಂದೆ ಪ್ರಾತಿನಿಧ್ಯವನ್ನು ಸಲ್ಲಿಸಬಹುದು ಎಂದು ಹೇಳಿದೆ. ಇದನ್ನೂ ಓದಿ: ಪವನ್ ಖೇರಾ ಕ್ಷಮೆಯಾಚಿಸಿದ್ದಾರೆ: ಅಸ್ಸಾಂ ಸಿಎಂ

    ಸಮಾಜ, ಸರ್ಕಾರವು ಮಹಿಳೆಯರ ಮುಟ್ಟಿನ ಅವಧಿಯನ್ನು ಹೆಚ್ಚಾಗಿ ಕಡೆಗಣಿಸಿದೆ. Ivipanan, Zomato, Byju’s, Swiggy, Mathrubhumi, Magzter, Industry, ARC, FlyMyBiz ಮತ್ತು Gozoop ನಂತಹ ಕಂಪನಿಗಳು ಮುಟ್ಟಿನ ರಜೆ ನೀಡುವ ಮೂಲಕ ಮಹಿಳೆಯರಿಗೆ ಕೆಲಸ ಮಾಡಲು ಬೆಂಬಲಿಸಿವೆ. ಇದೇ ಮಾದರಿಯಲ್ಲಿ ಮುಟ್ಟಿನ ಅವಧಿಯಲ್ಲಿ ರಜೆ ನೀಡಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿತ್ತು.

    1992ರ ವಿಶೇಷ ನೀತಿಯ ಭಾಗವಾಗಿ ಬಿಹಾರ ಮುಟ್ಟಿನ ರಜೆ ನೀಡುತ್ತಿದೆ. ಉಳಿದ ರಾಜ್ಯಗಳಲ್ಲಿ ಮಹಿಳೆಯರಿಗೆ ಋತುಚಕ್ರದ ನೋವಿನ ರಜೆ ಅಥವಾ ಅವಧಿ ರಜೆಯನ್ನು ನಿರಾಕರಿಸುವುದು ಸಂವಿಧಾನದ 14 ನೇ ವಿಧಿಯ ಅಡಿಯಲ್ಲಿ ಅವರ ಸಮಾನತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ವಿಚಾರಣೆ ವೇಳೆ ವಾದಿಸಲಾಯಿತು. ಇದನ್ನೂ ಓದಿ: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ – 11 ಜನ ಸ್ಥಳದಲ್ಲೇ ಸಾವು

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k