Tag: ಮುಡಾ ಪ್ರಕರಣ

  • ಸದ್ಯಕ್ಕೆ ಮುಡಾ ಸೈಟ್ ವಾಪಸ್ ಕೇಳಲ್ಲ: ಸಿಎಂ ಪುತ್ರ ಯತೀಂದ್ರ ಸ್ಪಷ್ಟನೆ

    ಸದ್ಯಕ್ಕೆ ಮುಡಾ ಸೈಟ್ ವಾಪಸ್ ಕೇಳಲ್ಲ: ಸಿಎಂ ಪುತ್ರ ಯತೀಂದ್ರ ಸ್ಪಷ್ಟನೆ

    ಮೈಸೂರು: ಸದ್ಯಕ್ಕೆ ಮುಡಾ ಸೈಟ್‌ (MUDA Case) ವಾಪಸ್‌ ಕೇಳಲ್ಲ ಎಂದು ಸಿಎಂ ಪುತ್ರ ಹಾಗೂ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಸ್ಪಷ್ಟಪಡಿಸಿದರು.

    ಮುಡಾ ಹಗರಣದಲ್ಲಿ ಇ.ಡಿ ವಿಚಾರಣೆ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಿಂದ ಸಿಎಂ ಪತ್ನಿಗೆ ರಿಲೀಫ್ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಯತೀಂದ್ರ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಮುಡಾ ಕೇಸ್ | ಇಡಿ-ಬಿಜೆಪಿ ಪಾಲುದಾರಿಕೆಯ ಪ್ರಚಾರವನ್ನು ಸುಪ್ರೀಂ ರದ್ದುಗೊಳಿಸಿದೆ: ಸುರ್ಜೇವಾಲಾ

    ಸುಪ್ರೀಂ ಕೋರ್ಟ್‌ನಿಂದ ರಿಲೀಫ್‌ ಸಿಕ್ಕರೂ ನಾವು ಈ ಸಂದರ್ಭದಲ್ಲಿ ಮುಡಾದಿಂದ 14 ಸೈಟ್ ವಾಪಸ್ ಕೇಳುವುದಿಲ್ಲ. ಇನ್ನೂ ಕೂಡ ಈ ವಿಚಾರದ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ವಿಚಾರಣೆ ಮುಗಿದು ಆ ತೀರ್ಪು ಹೊರಬರಲಿ. ಆ ನಂತರ ಇದರ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ. ಸದ್ಯಕ್ಕೆ ಮುಡಾದಿಂದ ಸೈಟ್‌ಗಳನ್ನ ವಾಪಸ್ ಕೇಳುವುದಿಲ್ಲ ಎಂದು ತಿಳಿಸಿದರು.

    ಆ ಸೈಟ್‌ಗಳಿಂದಲೇ ತಂದೆಯ ರಾಜಕೀಯಕ್ಕೆ ಕಪ್ಪುಚುಕ್ಕೆ ಬಂತು ಎಂಬ ನೋವು ನಮ್ಮ ತಾಯಿಗೆ ಇದೆ. ಹೀಗಾಗಿ, ಅವುಗಳನ್ನು ಆ ಸಂದರ್ಭದಲ್ಲಿ ವಾಪಸ್ ಕೊಟ್ಟರು. ಸುಪ್ರೀಂ ಕೋರ್ಟ್ ಈಗ ಈ ವಿಚಾರದಲ್ಲಿ ರಿಲೀಫ್ ಕೊಟ್ಟರು ಕೂಡ ನಾವು ಅದನ್ನ ವಾಸಸ್ ಕೇಳುವುದಿಲ್ಲ. ಈ ಸೈಟ್‌ಗಳಲ್ಲಿ ಮನಿ ಲಾಂಡರಿಂಗ್ ಪ್ರಶ್ನೆಯೇ ಇಲ್ಲ. ಆದರೂ ಮನಿ ಲಾಂಡರಿಂಗ್ ಕೇಸ್ ಹಾಕಿದ್ರು. ಇದರಿಂದ ತಾಯಿ ಮನನೊಂದು ಸೈಟ್‌ಗಳನ್ನ ವಾಪಸ್ ಕೊಟ್ಟರು. ಕಾನೂನು ಪ್ರಕ್ರಿಯೆ ಮುಗಿಯಲಿ. ಆಮೇಲೆ ನೋಡೋಣ ಎಂದರು. ಇದನ್ನೂ ಓದಿ: ಮುಡಾ ಕೇಸ್ | ಸಿಎಂ ಪತ್ನಿ ವಿಚಾರಣೆ ರದ್ದು – ನಿಮ್ಮನ್ಯಾಕೆ ರಾಜಕೀಯಕ್ಕೆ ಬಳಕೆ ಮಾಡ್ತಾರೆ?: ಇ.ಡಿಗೆ ಸುಪ್ರೀಂ ಛೀಮಾರಿ

    ಸುಪ್ರೀಂ ತೀರ್ಪು ಏನು?
    ಮುಡಾ ನಿವೇಶನಗಳ ಅಕ್ರಮ ಹಂಚಿಕೆ ಆರೋಪದ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನೀಡಲಾದ ಸಮನ್ಸ್‌ ರದ್ದುಗೊಳಿಸಿದ ಹೈಕೋರ್ಟ್‌ ತೀರ್ಪಿನ ವಿರುದ್ಧ ಇ.ಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸೋಮವಾರ ಸುಪ್ರೀಂ ಕೋರ್ಟ್‌ ವಜಾಗೊಳಿಸಿತು. ಕೇಂದ್ರ ತನಿಖಾ ಸಂಸ್ಥೆ ಇ.ಡಿ ಕಾರ್ಯವೈಖರಿ ಬಗ್ಗೆ ಸುಪ್ರೀಂ ಕೋರ್ಟ್‌ ತೀವ್ರ ಅಸಮಾಧಾನ ಹೊರಹಾಕಿತು.

  • ಮಡಾ ಕೇಸ್‌| ಸಿಎಂ ಪತ್ನಿ, ಬೈರತಿಗೆ ಸುರೇಶ್‌ಗೆ ಬಿಗ್‌ ರಿಲೀಫ್‌ – ಇಡಿ ತನಿಖೆಯೇ ರದ್ದು

    ಮಡಾ ಕೇಸ್‌| ಸಿಎಂ ಪತ್ನಿ, ಬೈರತಿಗೆ ಸುರೇಶ್‌ಗೆ ಬಿಗ್‌ ರಿಲೀಫ್‌ – ಇಡಿ ತನಿಖೆಯೇ ರದ್ದು

    ಬೆಂಗಳೂರು: ಮುಡಾ ಪ್ರಕರಣಕ್ಕೆ (MUDA Case) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಪತ್ನಿ ಪಾರ್ವತಿ (Parvathi) ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ (Byrathi Suresh) ಅವರಿಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ.

    ಇಡಿ ದಾಖಲಿಸಿದ ಇಸಿಐಆರ್‌ ಅನ್ನು ರದ್ದುಗೊಳಿಸಿ ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೆ ನೀಡಿದ್ದ ಸಮನ್ಸ್‌ ಅನ್ನು ಹೈಕೋರ್ಟ್‌ ವಜಾಗೊಳಿಸಿದೆ. ವಿಚಾರಣೆ ನಡೆಸಿದ್ದ ನ್ಯಾ. ನಾಗಪ್ರಸನ್ನ ಪೀಠದಿಂದ ಈ ಮಹತ್ವದ ಆದೇಶ ಪ್ರಕಟವಾಗಿದೆ.

    ಇಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದನ್ನು ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಹೈಕೋರ್ಟ್‌ನಲ್ಲಿ ಪ್ರಶ್ನೆ ಮಾಡಿದ್ದರು. ಪಾರ್ವತಿ ಪರ ಹಿರಿಯ ವಕೀಲ ಸಂದೇಶ ಚೌಟ ವಾದಿಸಿದ್ದರೆ ಬೈರತಿ ಸುರೇಶ್ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ದರು.

  • ಮುಡಾ ಕೇಸ್| ಸಿಎಂ ವಿರುದ್ಧ ನನಗೆ ಅತಿ ಹೆಚ್ಚಿನ ದಾಖಲೆ ಕೊಟ್ಟಿದ್ದೇ ಕಾಂಗ್ರೆಸ್ ನಾಯಕರು: ಸ್ನೇಹಮಯಿ ಕೃಷ್ಣ

    ಮುಡಾ ಕೇಸ್| ಸಿಎಂ ವಿರುದ್ಧ ನನಗೆ ಅತಿ ಹೆಚ್ಚಿನ ದಾಖಲೆ ಕೊಟ್ಟಿದ್ದೇ ಕಾಂಗ್ರೆಸ್ ನಾಯಕರು: ಸ್ನೇಹಮಯಿ ಕೃಷ್ಣ

    – ಸಿದ್ದರಾಮಯ್ಯ ಭ್ರಷ್ಟಾಚಾರದ ಬಗ್ಗೆ ಅಸಮಾಧಾನ ಇರುವ ಜನ ಕಾಂಗ್ರೆಸ್‌ನಲ್ಲಿ ಹೆಚ್ಚಿದ್ದಾರೆ ಎಂದ ದೂರುದಾರ

    ಮೈಸೂರು: ಮುಡಾ ಹಗರಣದಲ್ಲಿ ನನಗೆ ಸಿಎಂ ವಿರುದ್ಧ ಅತಿ ಹೆಚ್ಚಿನ ದಾಖಲೆ ಕೊಟ್ಟಿದ್ದೆ ಕಾಂಗ್ರೆಸ್ ನಾಯಕರು ಎಂದು ದೂರುದಾರ ಸ್ನೇಹಮಯಿ ಕೃಷ್ಣ ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ‘ಪಬ್ಲಿಕ್ ಟಿವಿ’ ಜೊತೆ ಮಾತಾಡಿದ ಅವರು, ಮುಡಾ ಹಗರಣದ ವಿಚಾರದಲ್ಲಿ ಕಳೆದ ಜನವರಿ ತಿಂಗಳಿಂದ ನನಗೆ ಅತಿ ಹೆಚ್ಚಿನ ದಾಖಲೆಗಳು ಕಾಂಗ್ರೆಸ್ ನಾಯಕರಿಂದ ಬಂದಿವೆ. ಕಾಂಗ್ರೆಸ್ ನಾಯಕರು ಕೊಟ್ಟಿರುವ ದಾಖಲೆಗಳು ನನ್ನ ಹೋರಾಟದ ವೇಗ ಹೆಚ್ಚಿಸಿವೆ ಎಂದು ತಿಳಿಸಿದ್ದಾರೆ.

    ಕಾಂಗ್ರೆಸ್‌ನಲ್ಲೂ ಸಿಎಂ ಭ್ರಷ್ಟಾಚಾರದ ಬಗ್ಗೆ ಅಸಮಾಧಾನ ಇರುವ ಜನ ಹೆಚ್ಚಿದ್ದಾರೆ. ಪಕ್ಷದ ಒಳಗೆ ಅದನ್ನು ತೋರಿಸಲು ಅವರಿಗೆ ಆಗಲ್ಲ. ಹೀಗಾಗಿ, ನನಗೆ ದಾಖಲೆ ಕೊಟ್ಟಿದ್ದಾರೆ. ಕಾಂಗ್ರೆಸ್‌ನ ಯಾವ ಹಂತದ ನಾಯಕರು, ಅವರು ಯಾರು ಅನ್ನೋದನ್ನು ನಾನು ಹೇಳುವುದಿಲ್ಲ ಎಂದಿದ್ದಾರೆ.

  • ಸಿದ್ದರಾಮಯ್ಯಗೆ 120 ಕೋಟಿ ರೂ. ಪರಿಹಾರ ಕೊಡಬೇಕಿತ್ತು: ಸಿಎಂ ಪರ ಮಾಜಿ ಶಾಸಕ ಬ್ಯಾಟಿಂಗ್‌

    ಸಿದ್ದರಾಮಯ್ಯಗೆ 120 ಕೋಟಿ ರೂ. ಪರಿಹಾರ ಕೊಡಬೇಕಿತ್ತು: ಸಿಎಂ ಪರ ಮಾಜಿ ಶಾಸಕ ಬ್ಯಾಟಿಂಗ್‌

    – ಬೈರತಿ ಸುರೇಶ್‌ ಬಂಧನಕ್ಕೆ ಸ್ನೇಹಮಯಿ ಕೃಷ್ಣ ಆಗ್ರಹ

    ಮೈಸೂರು: ಮುಡಾ ಸೈಟು (MUDA Site) ವಿಚಾರದಲ್ಲಿ ಕಾನೂನು ಪ್ರಕಾರವಾಗಿಯೇ ಸಿದ್ದರಾಮಯ್ಯನವರಿಗೆ 120 ಕೋಟಿ ರೂ. ಪರಿಹಾರ ಕೊಡಬೇಕಿತ್ತು ಎಂದು ಸಿಎಂ ಪರ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ (MK Somashekar) ಬ್ಯಾಟ್‌ ಬೀಸಿದ್ದಾರೆ.

    ಮೈಸೂರಿನ ಕನಕಭವನದಲ್ಲಿ ನಡೆದ ಕನಕದಾಸ ಜಯಂತ್ಯುತ್ಸವ‌ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

    ಸಿದ್ದರಾಮಯ್ಯ (Siddaramaiah) ಅವರ ಪ್ರಕರಣ ಏನೇನೂ ಅಲ್ಲ. ಆದ್ರೂ ಎಲ್ಲರೂ ಇದನ್ನ ದೊಡ್ಡದು ಮಾಡಿ ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಮುಡಾ ಮಾಜಿ ಆಯುಕ್ತ ನಟೇಶ್ ಅವರು, ಕಾನೂನು ಪ್ರಕಾರವಾಗಿ ಸೈಟು ನೀಡಿರುವುದಾಗಿ ಹೇಳಿದ್ದಾರೆ. ಸಿದ್ದರಾಮಯ್ಯನವರಗೆ ಕಾನೂನು ಪ್ರಕಾರ ಪರಿಹಾರ ಕೊಟ್ಟಿದ್ದರೂ 120 ಕೋಟಿ ರೂ. ಕೊಡಬೇಕಿತ್ತು. ಅದಕ್ಕೆ ಅರ್ಧ ಅಂದ್ರೆ 60 ಕೋಟಿ ರೂ. ಆದರೂ ಕೊಡಬೇಕಿತ್ತು. ಅಂತಹದ್ದರಲ್ಲಿ, ಇಷ್ಟೆಲ್ಲ ರಾದ್ಧಾಂತ ಮಾಡಿದ್ದಾರೆ ಎಂದು ಎಂ.ಕೆ ಸೋಮಶೇಖರ್‌ ಸಿಎಂ ಪರ ಬ್ಯಾಟ್‌ ಬೀಸಿದರು.

    ಮತ್ತೊಂದು ಮಹತ್ವದ ದಾಖಲೆ ರಿಲೀಸ್‌:
    ಮುಡಾ ಅವ್ಯವಹಾರ ಆರೋಪ ಸಂಬಂಧ ಮತ್ತೊಂದು ಮಹತ್ವದ ದಾಖಲೆಯನ್ನು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಬಿಡುಗಡೆ ಮಾಡಿದ್ದಾರೆ. ಈ ಹಿಂದೆಯೇ 50:50 ಅಕ್ರಮದ ಬಗ್ಗೆ ತನಿಖೆಗೆ ಮೈಸೂರು ಲೋಕಾಯುಕ್ತ ಮುಂದಾಗಿತ್ತು. ತನಿಖೆ ನಡೆಸಲು ಸರ್ಚ್ ವಾರೆಂಟ್ ಕೂಡ ಮೈಸೂರು ಲೋಕಾಯುಕ್ತ ಪಡೆದಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಮುಡಾ ಸರ್ಚ್ ವಾರೆಂಟ್ ವಾಪಸ್ಸು ಪಡೆಯಲಾಗಿತ್ತು. ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ರಿಲೀಸ್ ಮಾಡಿದ್ದಾರೆ. ಅಲ್ಲದೇ ಲೋಕಾಯುಕ್ತ ಉದ್ದೇಶಪೂರ್ವಕವಾಗಿ ಸರ್ಚ್ ವಾರೆಂಟ್ ಹಿಂಪಡೆದಿದೆ ಎಂದು ಆರೋಪಿಸಿದ್ದಾರೆ.

    ಅಷ್ಟೇ ಅಲ್ಲ, ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಕಡತ ವಶಕ್ಕೆ ಪಡೆದಿದ್ದಾರೆ. ಇದ್ರಲ್ಲಿ ಲೋಕಾಯುಕ್ತ ಅಧಿಕಾರಿಗಳು ಸಚಿವ ಭೈರತಿ ಸುರೇಶ್ ಜೊತೆ ಶಾಮೀಲಾಗಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ಸಚಿವ ಬೈರತಿ ಸುರೇಶ್ ಬಂಧನಕ್ಕೆ ಆಗ್ರಹಿಸಿದ್ದಾರೆ. ಇನ್ನೂ ಪ್ರಾಸಿಕ್ಯೂಷನ್‌ಗೆ ಅನುಮತಿ ಪ್ರಶ್ನಿಸಿ ಸಿಎಂ ಮತ್ತು ಎ4 ದೇವರಾಜು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಶನಿವಾರ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ.

  • ಕೆಲ ಕೋರ್ಟ್‌ಗಳು ಬಿಜೆಪಿ ಹೇಳಿದಂತೆ ಕೇಳುತ್ತಿವೆ: ಯತೀಂದ್ರ ಸಿದ್ದರಾಮಯ್ಯ

    ಕೆಲ ಕೋರ್ಟ್‌ಗಳು ಬಿಜೆಪಿ ಹೇಳಿದಂತೆ ಕೇಳುತ್ತಿವೆ: ಯತೀಂದ್ರ ಸಿದ್ದರಾಮಯ್ಯ

    ಮೈಸೂರು: ಮುಡಾ ಪ್ರಕರಣದಲ್ಲಿ (MUDA Case) ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧದ ಆದೇಶವನ್ನು ರಾಜಕೀಯ ತೀರ್ಪು ಎಂದು ಬಣ್ಣಿಸಿ ವಸತಿ ಸಚಿವ ಜಮೀರ್ ಅಹ್ಮದ್‌(Zamir Ahmad) ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹೊತ್ತಲ್ಲೇ ಕೆಲ ನ್ಯಾಯಾಲಯಗಳು ಕೇಂದ್ರ ಬಿಜೆಪಿ ಸರ್ಕಾರ ಹೇಳಿದಂತೆ ಕೇಳುತ್ತಿವೆ ಎಂಬ ಗಂಭೀರ ಆರೋಪವನ್ನು ಸಿಎಂ ಪುತ್ರ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ.

     

    ಎಚ್.ಡಿ. ಕೋಟೆಯಲ್ಲಿ ಆಯೋಜನೆಗೊಂಡಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮಗೆ ತನಿಖೆ ಬಗ್ಗೆ ಭಯ ಇಲ್ಲ. ನಾವು ಯಾವುದೇ ತಪ್ಪು ಮಾಡಿಲ್ಲ. ತನಿಖಾ ಸಂಸ್ಥೆಗಳನ್ನ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಕೆಲ ಕೋರ್ಟ್‌ಗಳು ಕೂಡ ಕೇಂದ್ರ ಬಿಜೆಪಿ (BJP) ಹೇಳುವಂತೆ ಕೇಳುತ್ತಿವೆ ಎಂದು ದೂರಿದರು. ಇದನ್ನೂ ಓದಿ: ಅಂಬೇಡ್ಕರ್ ಇಸ್ಲಾಂ ಧರ್ಮ ಸ್ವೀಕರಿಸಲು ಸಿದ್ಧರಾಗಿದ್ದರು: ಅಜ್ಜಂಪೀರ್ ಖಾದ್ರಿ ವಿವಾದಾತ್ಮಕ ಹೇಳಿಕೆ

    ಸಿದ್ದರಾಮಯ್ಯ ಮೇಲೆ ಸುಳ್ಳು ಆರೋಪದ ಮಾಡಿ ಅವರನ್ನು ಪ್ರಕರಣಗಳಲ್ಲಿ ಸಿಲುಕಿಸಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದಾರೆ. ಪ್ರಶ್ನೆ ಮಾಡದೇ ಇದ್ದರೆ ಅವರು ಆಡಿದ್ದೇ ಆಟ ಆಗುತ್ತದೆ. ಕೇಂದ್ರ ಸರ್ಕಾರದ ಧೋರಣೆಗೆ ಜನ ಮನ್ನಣೆ ನೀಡಬಾರದು. ಬಡವರ ಪರ ಇರುವ ನಮ್ಮ ನಾಯಕರ ಪರ ನಿಮ್ಮ ಬೆಂಬಲ ಇರಬೇಕು ಎಂದು ವಿನಂತಿ ಮಾಡಿದರು.

     

  • ಮುಡಾದಲ್ಲಿ ಫೈಲ್ ಸುಟ್ಟು ಹಾಕಿದ್ದಾರೆ! – 50:50 ಅನುಪಾತದಲ್ಲಿ ಮನೆ ಕಟ್ಟುವುದಕ್ಕೆ ಅನುಮತಿ ಕೊಡಬೇಡಿ: ಶ್ರೀವತ್ಸ

    ಮುಡಾದಲ್ಲಿ ಫೈಲ್ ಸುಟ್ಟು ಹಾಕಿದ್ದಾರೆ! – 50:50 ಅನುಪಾತದಲ್ಲಿ ಮನೆ ಕಟ್ಟುವುದಕ್ಕೆ ಅನುಮತಿ ಕೊಡಬೇಡಿ: ಶ್ರೀವತ್ಸ

    ಮೈಸೂರು: ಮುಡಾದಲ್ಲಿ (MUDA) ಕೆಲವು ಸೈಟ್‌ಗಳ ದಾಖಲಾತಿಗಳನ್ನು ಸುಟ್ಟು ಹಾಕಿದ್ದಾರೆ. 50:50 ಅನುಪಾತದಲ್ಲಿ ಮನೆ ಕಟ್ಟುವುದಕ್ಕೆ ಅನುಮತಿ ಕೊಡಬೇಡಿ ಎಂದು ಶಾಸಕ ಶ್ರೀವತ್ಸ ಒತ್ತಾಯಿಸಿದ್ದಾರೆ.

    ‘ಪಬ್ಲಿಕ್‌ ಟಿವಿ’ ಜೊತೆ ಮಾತನಾಡಿದ ಶ್ರೀವತ್ಸ ಅವರು, ಕೆಲವು ಸೈಟ್‌ಗಳ ದಾಖಲೆಗಳ ತೆಗೆದುಕೊಂಡು ಹೋಗಿದ್ದಾರೆ ಎಂದು ಅಧಿಕಾರಿಗಳೇ ಒಪ್ಪಿಕೊಂಡಿದ್ದಾರೆ. ಮುಡಾ ಸಭೆಯಲ್ಲೇ ಅಧಿಕಾರಿಗಳು ಇದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಡಾ ಬ್ರಹ್ಮಾಂಡ ಭ್ರಷ್ಟಾಚಾರ ಮತ್ತಷ್ಟು ಬಯಲು – 50:50 ಅನುಪಾತದ ದಾಖಲೆಗಳೇ ಮಾಯ?

    ಈ ನಡುವೆ 50:50 ಅನುಪಾತದಲ್ಲಿ ಮನೆ ನಿರ್ಮಿಸಲು ನಕ್ಷೆಗೆ ಅನುಮತಿ ಕೊಡುವುದನ್ನು ನಿಲ್ಲಿಸಬೇಕು. ಈಗಾಗಲೇ ನಕ್ಷೆಗೆ ಅನುಮತಿ ಪಡೆದು ಕಾಮಗಾರಿ ಮಾಡುತ್ತಿರುವವರಿಗೆ ತಡೆಯಾಜ್ಞೆ ನೀಡಿ ಎಂದು ಮನವಿ ಮಾಡಿ ಪತ್ರ ಕೊಟ್ಟಿದ್ದಾರೆ.

    ನನಗಿರುವ ಮಾಹಿತಿ ಪ್ರಕಾರ 250 ರಿಂದ 300 ಮಂದಿ ಮನೆ ಕಟ್ಟುವುದಕ್ಕೆ ಪ್ಲ್ಯಾನ್‌ ಮಾಡಿದ್ದಾರೆ. ಖಾಲಿ ಸೈಟ್‌ ಇದ್ದರೆ ಮುಡಾ ಜಪ್ತಿ ಮಾಡಿಕೊಳ್ಳುವುದು ಸುಲಭ ಆಗುತ್ತದೆ. ಒಂದು ವೇಳೆ ನಿರ್ಮಾಣ ಕಾಮಗಾರಿ ಆಗುತ್ತಿದ್ದರೆ ಅದನ್ನು ಕಟ್ಟದಂತೆ ತಡೆಯಬೇಕಾಗುತ್ತದೆ. ಈ ಎರಡೂ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಾನು ಮನವಿ ಪತ್ರ ಕೊಟ್ಟಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಇ-ಖಾತಾ ಪರೀಕ್ಷೆಗೆ ಹೆಲ್ಪ್‌ಡೆಸ್ಕ್‌ ತೆರೆದ ಬಿಬಿಎಂಪಿ

  • ಸಿಎಂ ಸ್ವಾಭಿಮಾನಿ ಸಮಾವೇಶ ಬಳಿಕ ಖರ್ಗೆ ಭೇಟಿ ಮಾಡಿದ ಬೋಸರಾಜು

    ಸಿಎಂ ಸ್ವಾಭಿಮಾನಿ ಸಮಾವೇಶ ಬಳಿಕ ಖರ್ಗೆ ಭೇಟಿ ಮಾಡಿದ ಬೋಸರಾಜು

    ರಾಯಚೂರು: ರಾಯಚೂರು (Raichuru) ಜಿಲ್ಲೆಯ ಮಾನ್ವಿಯಲ್ಲಿ ನಡೆದ ಸಿಎಂ ಸ್ವಾಭಿಮಾನಿ ಸಮಾವೇಶ ಬಳಿಕ ಖರ್ಗೆಯವರನ್ನು ಸಚಿವ ಎನ್.ಎಸ್.ಬೋಸರಾಜು (NS Bosaraju) ಭೇಟಿ ಮಾಡಿದರು.

    ಮುಡಾ ಪ್ರಕರಣದಲ್ಲಿ (MUDA Scam) ಬಿಜೆಪಿ (BJP), ಜೆಡಿಎಸ್ (JDS) ಆರೋಪಗಳಿಗೆ ಉತ್ತರ ನೀಡಬೇಕೆಂದೇ ಮಾನ್ವಿಯಲ್ಲಿ (Manvi) ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ಬೆಂಬಲಿಗರು ಆಯೋಜಿಸಿದ್ದ ಸಮಾವೇಶದಲ್ಲಿ ಎನ್.ಎಸ್.ಬೋಸರಾಜು ಮಾತನಾಡಿದರು. ಬಳಿಕ ಬೆಂಗಳೂರಿನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು (Mallikarjun Kharge) ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ.ಇದನ್ನೂ ಓದಿ:

    ಸಿಎಂ ಸಿದ್ದರಾಮಯ್ಯಗೆ ಬೆಂಬಲ ಸೂಚಿಸಲು ಬೃಹತ್ ಸಮಾವೇಶ ಆಯೋಜಿಸಲಾಗಿತ್ತು. ಸಮಾವೇಶದ ಮೂಲಕ ವಿರೋಧ ಪಕ್ಷದ ನಾಯಕರಿಗೆ ಸಿಎಂ ಬೆಂಬಲಿಗರು ಠಕ್ಕರ್ ಕೊಟ್ಟರು. ಸಿದ್ದರಾಮಯ್ಯ ಜೊತೆ ನಾವೆಲ್ಲ ಇದ್ದೀವಿ ಎಂದು ಹೇಳಿ ಸಂದೇಶ ರವಾನಿಸಿದರು. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು ಸಿಎಂ ಭಾವನಾತ್ಮಕವಾಗಿ ಹೇಳಿದರು.

    ಬೃಹತ್ ಸಮಾವೇಶ ಬಳಿಕ ಮಲ್ಲಿಕಾರ್ಜುನ ಖರ್ಗೆಯನ್ನು ಬೆಂಗಳೂರಿನ ಖರ್ಗೆ ನಿವಾಸದಲ್ಲಿ ಭೇಟಿಯಾದರು. ಭೇಟಿ ಮಾಡಿ ಉಭಯ ಕುಶಲೋಪರಿಯನ್ನು ವಿಚಾರಿಸಿದರು. ಪಕ್ಷದ ಕಾರ್ಯ ಚಟುವಟಿಕೆಗಳು ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಲಾಯಿತು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.ಇದನ್ನೂ ಓದಿ:

  • ಮಲ್ಲಿಕಾರ್ಜುನ್ ಖರ್ಗೆಯನ್ನು ಭೇಟಿಯಾದ ಸತೀಶ್ ಜಾರಕಿಹೊಳಿ

    ಮಲ್ಲಿಕಾರ್ಜುನ್ ಖರ್ಗೆಯನ್ನು ಭೇಟಿಯಾದ ಸತೀಶ್ ಜಾರಕಿಹೊಳಿ

    – ದಲಿತ ಸಿಎಂ ಚರ್ಚೆ ಮತ್ತೆ ಮುನ್ನೆಲೆಗೆ

    ನವದೆಹಲಿ: ಮೂಡಾ ಪ್ರಕರಣದಲ್ಲಿ (MUDA Scam) ಸಿಎಂ ರಾಜೀನಾಮೆಗೆ (CM Siddaramaiah) ಒತ್ತಾಯ ವ್ಯಕ್ತವಾಗುತ್ತಿರುವ ಹೊತ್ತಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಅವರನ್ನು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ (Satish Jarakholi) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದಲಿತ ಸಚಿವರೊಂದಿಗೆ ಸಭೆ ನಡೆಸಿದ ಬೆನ್ನಲ್ಲೇ ಜಾರಕಿಹೊಳಿ ಹಾಗೂ ಖರ್ಗೆಯವರ ಭೇಟಿ ಮಹತ್ವ ಪಡೆದುಕೊಂಡಿದೆ.

    ದೆಹಲಿಯಲ್ಲಿ (Delhi) ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಭೇಟಿಯಾಗಿರುವ ಸತೀಶ್ ಜಾರಕಿಹೊಳಿ, ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಮೂಡಾ ಪ್ರಕರಣದಲ್ಲಿ ನಾವು ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದೇವೆ. ಪ್ರತಿ ಹಂತದಲ್ಲೂ ನಾವು ಸಮರ್ಥಿಸಿಕೊಳ್ಳುತ್ತಿದ್ದೇವೆ ಎಂದಿದ್ದಾರೆ.ಇದನ್ನೂ ಓದಿ: ಪುಣೆಯಲ್ಲಿ 21ರ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

    ಒಂದು ವೇಳೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸಂದರ್ಭ ಎದುರಾದರೆ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ನಾಯಕರಿಗೆ ಸಿಎಂ ಸ್ಥಾನ ಸಿಗಬೇಕು. ಇದಕ್ಕೆ ನಾವೆಲ್ಲ ಒಗ್ಗಟ್ಟಾಗಿ ನಿಂತು ಸಿಎಂ ಸ್ಥಾನವನ್ನು ಸಮುದಾಯಕ್ಕೆ ಪಡೆಯಬೇಕು ಎನ್ನುವ ನಿಟ್ಟಿನಲ್ಲಿ ಖರ್ಗೆ ಅವರ ಜೊತೆಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

    ಇದಕ್ಕೂ ಮುನ್ನ ಎರಡು ದಿನಗಳ ಹಿಂದೆ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ, ಗೃಹ ಸಚಿವ ಪರಮೇಶ್ವರ್ ಜೊತೆಗೆ ಸತೀಶ್ ಜಾರಕಿಹೊಳಿ ರಹಸ್ಯ ಮಾತುಕತೆ ನಡೆಸಿದ್ದರು. ಈ ಸಭೆಯಲ್ಲೂ ಮುಂದಿನ ರಾಜಕೀಯ ಬೆಳವಣಿಗೆ ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸನ್ನಿವೇಶ ಒದಗಿ ಬಂದರೆ ಮುಂದಿನ ನಿಲುವುಗಳ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಶೀಘ್ರದಲ್ಲೇ ದರ ಏರಿಕೆ ಶಾಕ್!

  • ಮಾತನಾಡಲು ವಿಷಯವಿಲ್ಲದೆ ಕುಮಾರಸ್ವಾಮಿಗೆ ಪೂರ್ತಿ ಹುಚ್ಚು ಹಿಡಿದಿದೆ: ಬೋಸರಾಜು

    ಮಾತನಾಡಲು ವಿಷಯವಿಲ್ಲದೆ ಕುಮಾರಸ್ವಾಮಿಗೆ ಪೂರ್ತಿ ಹುಚ್ಚು ಹಿಡಿದಿದೆ: ಬೋಸರಾಜು

    ರಾಯಚೂರು: ಹೆಚ್‌ಡಿ.ಕುಮಾರಸ್ವಾಮಿಗೆ (HD Kumaraswamy) ಮಾತನಾಡಲು ವಿಷಯವಿಲ್ಲದೆ ಪೂರ್ತಿ ಹುಚ್ಚು ಹಿಡಿದಿದೆ. ಸುಮ್ಮನೆ ಒದರುತ್ತಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು (NS Bosaraju) ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಕೈ ನೀಡಿದ್ದ ಗ್ಯಾರಂಟಿ ಅನ್ನಭಾಗ್ಯದ ಹಣ ಸರಿಯಾಗಿ ತಲುಪುತ್ತಿಲ್ಲ : ಕೋಲಾರದಲ್ಲಿ ಸಾರ್ವಜನಿಕರ ಆಕ್ರೋಶ

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ವಿಚಾರದಲ್ಲಿ ಮನನೊಂದು ಆತ್ಮಸಾಕ್ಷಿಯಾಗಿ ನಡೆದುಕೊಳ್ಳುತ್ತೇನೆ ಎಂದು ಪಾರ್ವತಿ ಸಿದ್ದರಾಮಯ್ಯ (Parvathi Siddaramaiah) 14 ಸೈಟ್‌ಗಳನ್ನ ಮರಳಿಸಿದ್ದಾರೆ. ಸೈಟ್ ವಾಪಸ್ ನೀಡಿದ ಮೇಲೆ ಕುಮಾರಸ್ವಾಮಿಗೆ ಮಾತನಾಡಲು ವಿಷಯವಿಲ್ಲ. ಅದಕ್ಕೆ ಹುಚ್ಚು ಹಿಡಿದವರ ಹಾಗೇ ಒದರಾಡುತ್ತಿದ್ದಾರೆ ಎಂದರು.

    ಮುಡಾ ಪ್ರಕರಣದಲ್ಲಿ (MUDA Scam) ನನ್ನ ಪತಿ ಹೆಸರಿಗೆ ಮಸಿ ಬಳಿಯುವಂತಹ ಕೆಲಸ ಮಾಡುತ್ತಿದ್ದಾರೆ. ನನ್ನ ಹೆಸರಿನಲ್ಲಿರುವ 14 ಸೈಟ್‌ಗಳನ್ನ ವಾಪಸ್ ಕೊಡುತ್ತೇನೆ ಎಂದು ಪಾರ್ವತಿ ಸಿದ್ದರಾಮಯ್ಯ ಹೇಳಿದ್ದಾರೆ. ಮನನೊಂದು ಆತ್ಮಸಾಕ್ಷಿಯಾಗಿ ನಡೆದುಕೊಳ್ಳುತ್ತೇನೆ ಎಂದು ಸೈಟ್ ಸರೆಂಡರ್ ಮಾಡಿದ್ದಾರೆ. ಇದಕ್ಕೆ ಹೇಗೆ ಸರೆಂಡರ್ ಮಾಡಿದರೂ ಎಂದು ಕುಮಾರಸ್ವಾಮಿ ಕೇಳ್ತಾರೆ. ಅಶೋಕನನ್ನು ಕೇಳಿದರೆ ನಾನು ಆವಾಗಲೇ ಜಾಗವನ್ನು ಮರಳಿಸಿದ್ದೇನೆ ಎನ್ನುತ್ತಾರೆ. ಅವರು ವಿರೋಧ ಪಕ್ಷದ ನಾಯಕರು ಇವರು ಕೇಂದ್ರ ಸಚಿವರು. ಇವರಿಗೆ ಯಾವ ರೀತಿಯ ಬದ್ಧತೆಯಿದೆ. ಜವಾಬ್ದಾರಿಯಿದೆ. ಇವರ ಮಾತುಗಳಿಗೆ ಅರ್ಥವಿದೆಯಾ? ಹುಚ್ಚರು ಮಾಡಿದ ಹಾಗೇ ಮಾಡಿ ಏನೇನೋ ಒದರಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.ಇದನ್ನೂ ಓದಿ: ಹರ್ಷಿಕಾ ಪೂಣಚ್ಚಗೆ ಹೆಣ್ಣು ಮಗು ಜನನ

    ಕುಮಾರಸ್ವಾಮಿ ಮೇಲೆ 50 ಕೋಟಿ ರೂ. ಲಂಚ ಆರೋಪದಲ್ಲಿ ಎಫ್‌ಐಆರ್ ಆಗಿದೆ. ವಿಥ್ ರೆಕಾರ್ಡ್ ಕೇಸ್ ಆಗಿದೆ. ಅಶೋಕ್ ಅವರ ಮೇಲೆ ಎಫ್‌ಐಆರ್ ಆಗಿದೆ. ಯಡಿಯೂರಪ್ಪ ಮೇಲೆ ನೂರಾರು ಕೇಸ್ ಇವೆ. ಇದಕ್ಕೆಲ್ಲಾ ಏನು ಉತ್ತರ ಕೊಡುತ್ತಾರೆ? ಅವರದೇ ಪಕ್ಷದಲ್ಲಿರುವವರು ಭ್ರಷ್ಟಾಚಾರ ಮಾಡಿ ಸಾವಿರ ಕೋಟಿ ಇಟ್ಟುಕೊಂಡಿದ್ದಾರೆ ಎಂದು ಅವರ ಪಕ್ಷದ ಯತ್ನಾಳ್ ಹೇಳಿದ್ದಾರೆ. ಈ ಸರ್ಕಾರ ತೆಗೆದು ಸಿಎಂ ಆಗಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆಲ್ಲಾ ಕುಮಾರಸ್ವಾಮಿ, ಯಡಿಯೂರಪ್ಪ, ಅಶೋಕ್, ವಿಜಯೇಂದ್ರ ಉತ್ತರ ಕೊಡಬೇಕಲ್ಲ. ಅಮಿತ್ ಶಾ, ಮೋದಿ ಸಹ ಏನೂ ಮಾತನಾಡುತ್ತಿಲ್ಲ. ಕೇಶವ ಕೃಪಾಕ್ಕೆ ಕರೆದು ಆರ್‌ಎಸ್‌ಎಸ್‌ನವರಿಗೆ ಸರಿ ಮಾಡಲು ಕಳುಹಿಸಿದ್ದಾರೆ ಇದು ಬಹಿರಂಗವಾದ ವಿಷಯ ಎಂದು ತಿಳಿಸಿದರು.

  • ಸೈಟ್ ವಾಪಸ್ ನೀಡಿದ ಸಿಎಂ ಪತ್ನಿ ನಿರ್ಧಾರವನ್ನು ನಾವು ಅಭಿನಂದಿಸುತ್ತೇವೆ: ಬೋಸರಾಜು

    ಸೈಟ್ ವಾಪಸ್ ನೀಡಿದ ಸಿಎಂ ಪತ್ನಿ ನಿರ್ಧಾರವನ್ನು ನಾವು ಅಭಿನಂದಿಸುತ್ತೇವೆ: ಬೋಸರಾಜು

    ರಾಯಚೂರು: ಮುಡಾ ಪ್ರಕರಣಕ್ಕೆ (MUDA Scam) ಸಂಬಂಧಿಸಿದಂತೆ ಸಿಎಂ ಪತ್ನಿ ಸೈಟ್ ವಾಪಸ್ ನೀಡಿದ ಸಿಎಂ ಪತ್ನಿ ನಿರ್ಧಾರವನ್ನು ನಾವು ಅಭಿನಂದಿಸುತ್ತೇವೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು (NS Bosaraju) ಪ್ರತಿಕ್ರಿಯಿಸಿದ್ದಾರೆ.

    ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ (CM Siddaramaiah) ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಪ್ರಯತ್ನ ನಡೆದಿದೆ. ಇದಕ್ಕೆ ಬೇಸರಗೊಂಡು ನ್ಯಾಯಬದ್ಧವಾಗಿ ಪಡೆದಿರುವ ಸೈಟ್‌ಗಳನ್ನು ಸಿಎಂ ಪತ್ನಿ ವಾಪಸ್ ಕೊಟ್ಟಿದ್ದಾರೆ. ಪಾರ್ವತಿಯವರ ನಿರ್ಧಾರ ಉತ್ತಮವಾಗಿದೆ. ನಾವು ಅಭಿನಂದಿಸುತ್ತೇವೆ ಎಂದರು.ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ – ತುಮಕೂರು ಜೈಲಿನಿಂದ ಮೂವರು ರಿಲೀಸ್!

    ಬಿಜೆಪಿಯವರಿಗೆ (BJP) ನ್ಯಾಯ, ಅಭಿವೃದ್ಧಿ ಬೇಕಿಲ್ಲ. ಕೇವಲ ಕುತಂತ್ರ ರಾಜಕೀಯ ಮಾತ್ರ ಬೇಕು. ನ್ಯಾಯ ಅನ್ಯಾಯದ ಪ್ರಶ್ನೆಯಿಲ್ಲ. ಸಿದ್ದರಾಮಯ್ಯ ರಾಜೀನಾಮೆ ಮಾಡಬೇಕು ಎಂದು ಕೇಳುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದರು.

    ಸಿದ್ದರಾಮಯ್ಯ ವಾಚ್ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿರುವ ವಿಚಾರದ ಕುರಿತು ಮಾತನಾಡಿ ವಿದೇಶದಲ್ಲಿದ್ದ ಸ್ನೇಹಿತರು ಬಂದು ವಾಚ್ ಕೊಟ್ಟಿದ್ದರು. ಅದರ ಬಗ್ಗೆ ಟೀಕೆ ಟಿಪ್ಪಣಿಗಳು ಬಂದ ಕೂಡಲೇ ತಕ್ಷಣ ಸರೆಂಡರ್ ಮಾಡಿದ್ದಾರೆ. ಜವಾಬ್ದಾರಿಯುತ ಜನಪ್ರತಿನಿಧಿ ಮಾಡಬೇಕಾದ ಕೆಲಸ ಮಾಡಿದ್ದಾರೆ. ಅದು ತಪ್ಪಾ? ಕುಮಾರಸ್ವಾಮಿ (HD Kumaraswamy) ಅವರ ಕುಟುಂಬ ಮಾಡಿದ ಹಾಗೆ ಕಳ್ಳತನ ಮಾಡಬೇಕಿತ್ತಾ? ಅವರು ಯಾವ ರೀತಿ ಲೂಟಿ ಮಾಡಿ ಸಾವಿರಾರು ಕೋಟಿ ಮಾಡಿದ್ದಾರೆ ಅನ್ನೋದು ಎಲ್ಲರಿಗೂ ಗೊತ್ತಿಲ್ವಾ? ಇದನ್ನೆಲ್ಲಾ ಮಾಡಿರುವವರ ಮಾತುಗಳಿಗೆ ದೇಶ ಹಾಗೂ ರಾಜ್ಯದ ಜನರು ಹೆಚ್ಚು ಗಮನ ಕೊಡುವ ಅವಶ್ಯಕತೆಯಿಲ್ಲ ಎಂದ ಹೇಳಿದರು.

    ಯಡಿಯೂರಪ್ಪನವರು (BS Yadiyurappa) ಯಾಕೆ ಜೈಲಿಗೆ ಹೋಗಬೇಕಿತ್ತು? ಅವರ ಅಕೌಂಟ್‌ಗೆ ಎಂಟು ಕೋಟಿ ಲಂಚ ನೇರವಾಗಿ ಬಂದಿತ್ತು. ಹಾಗಾಗಿ ಅವರ ಕೇಂದ್ರದ ನಾಯಕರು ಅವರಿಗೆ ರಾಜಿನಾಮೆ ಮಾಡಲು ಹೇಳಿದ್ದರು. ನಾವು ಹೇಳಿಲ್ಲ. ಆ ತರಹದ ಪ್ರಶ್ನೆ ಸಿದ್ದರಾಮಯ್ಯನವರ ವಿಷಯದಲ್ಲಿ ಉದ್ಭವಿಸುವುದಿಲ್ಲ ಎಂದು ತಿಳಿಸಿದರು.ಇದನ್ನೂ ಓದಿ: Israel | ಜಾಫಾದಲ್ಲಿ ಉಗ್ರರಿಂದ ಮನ ಬಂದಂತೆ ಗುಂಡಿನ ದಾಳಿಗೆ 8 ಬಲಿ