Tag: ಮುತ್ತಿಗೆ

  • ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಿದ ಸಾವಿರಾರು ಜನ – ಪೂಲ್‌ನಲ್ಲಿ ಪ್ರತಿಭಟನಾಕಾರರು, ರಾಜಪಕ್ಸೆ ಪರಾರಿ

    ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಿದ ಸಾವಿರಾರು ಜನ – ಪೂಲ್‌ನಲ್ಲಿ ಪ್ರತಿಭಟನಾಕಾರರು, ರಾಜಪಕ್ಸೆ ಪರಾರಿ

    ಕೊಲಂಬೋ: ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟಿನ ನಡುವೆ ಅಲ್ಲಿನ ಜನರು ತಮ್ಮ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಶನಿವಾರ ಸಾವಿರಾರು ಪ್ರತಿಭಟನಾಕಾರರು ರಾಜಪಕ್ಸೆಯವರ ನಿವಾಸಕ್ಕೆ ಮುತ್ತಿಗೆ ಹಾಕಿ ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಿದ್ದಾರೆ.

    ಶ್ರೀಲಂಕಾದ ರಾಜಧಾನಿ ಕೊಲಂಬೋದಲ್ಲಿ ಇಂದು ಸಾವಿರಾರು ಪ್ರತಿಭಟನಾಕಾರರು ಪೊಲೀಸ್ ಬ್ಯಾರಿಕೇಡ್‌ಗಳನ್ನು ಭೇದಿಸಿ, ಅಧ್ಯಕ್ಷರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ. ಪ್ರತಿಭಟನಾಕಾರರು ಶ್ರೀಲಂಕಾದ ಧ್ವಜ, ಹೆಲ್ಮೆಟ್‌ಗಳನ್ನು ಹಿಡಿದುಕೊಂಡು ಅಧ್ಯಕ್ಷರ ನಿವಾಸಕ್ಕೆ ನುಗ್ಗಿದ್ದಾರೆ. ಇದನ್ನೂ ಓದಿ: ಆಪರೇಷನ್ ಅಮರನಾಥ ಚಾಲೆಂಜ್ ಆಗಿದೆ: ಕರ್ನಲ್ ವಿ.ಎಂ. ನಾಯಕ್

    ರಾಜಪಕ್ಸೆ ವಿರುದ್ಧ ಘೋಷಣೆ ಕೂಗಿರುವ ಜನರು ಅವರ ನಿವಾಸದಲ್ಲಿ ದಾಂಧಲೆ ನಡೆಸಿದ್ದಾರೆ. ಸ್ವಿಮ್ಮಿಂಗ್ ಪೂಲ್‌ಗೆ ಇಳಿದು ಈಜಾಡಿದ್ದಾರೆ. ಸೋಫಾ, ಬೆಡ್‌ಗಳ ಮೇಲೆ ಕುಣಿದಾಡಿದ್ದಾರೆ. ಅಡುಗೆ ಮನೆಗೂ ನುಗ್ಗಿ, ಹಸಿವನ್ನು ನೀಗಿಸಿಕೊಂಡಿದ್ದಾರೆ. ಇಷ್ಟು ಮಾತ್ರವಲ್ಲದೇ ಸಾಮಾಜಿಕ ಮಾಧ್ಯಮಗಳಲ್ಲಿ ಲೈವ್ ಸ್ಟ್ರೀಮ್‌ಗಳನ್ನು ಮಾಡಿ ಆನಂದಿಸಿದ್ದಾರೆ.

    ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರನ್ನು ಶುಕ್ರವಾರ ತಮ್ಮ ಸುರಕ್ಷತೆಗಾಗಿ ನಿವಾಸದಿಂದ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಇಂದಿನ ಪ್ರತಿಭಟನೆಯಲ್ಲಿ ಇಬ್ಬರು ಪೊಲೀಸರು ಸೇರಿದಂತೆ ಕನಿಷ್ಠ 21 ಜನರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಬೈಕ್ ಜಪ್ತಿ ಮಾಡಿ ವಿಮೆ ಮಾಡಿಸಿದ ಪೊಲೀಸರು – ಕಣ್ಣೀರಿಟ್ಟ ಸವಾರ

    ತೀವ್ರವಾದ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಸಿಂಹಳದಲ್ಲಿ 2.2 ಕೋಟಿ ಜನರು ಹೋರಾಡುತ್ತಿದ್ದಾರೆ. ಇಂಧನ, ಆಹಾರ, ಔಷಧಿಗಳಂತಹ ಅಗತ್ಯ ವಸ್ತುಗಳ ಕೊರತೆ ಉಂಟಾಗಿದ್ದು, ಜನರು ಸಾವು ಬದುಕಿನ ನಡುವೆ ಹೆಣಗಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಾಧ್ಯಮದವರನ್ನು ಇಟ್ಕೊಂಡು ಹೀಗೆಲ್ಲಾ ಮಾತಾಡಿದ್ರೆ ನನಗೆ ಕೋಪ ಬರುತ್ತೆ: ಜಯಮಾಲಾ

    ಮಾಧ್ಯಮದವರನ್ನು ಇಟ್ಕೊಂಡು ಹೀಗೆಲ್ಲಾ ಮಾತಾಡಿದ್ರೆ ನನಗೆ ಕೋಪ ಬರುತ್ತೆ: ಜಯಮಾಲಾ

    ಉಡುಪಿ: ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಿದ್ದ ವೇಳೆ ಮಾಧ್ಯಮದವರನ್ನು ಇಟ್ಕೊಂಡು ಹೀಗೆಲ್ಲಾ ಮಾತನಾಡಿದರೆ ನನಗೆ ಕೋಪ ಬರುತ್ತದೆ ಎಂದು ಉಡುಪಿಯ ಉಸ್ತುವಾರಿ ಸಚಿವೆ ಜಯಮಾಲಾ ಹೇಳಿದ್ದಾರೆ.

    ಜಿಲ್ಲೆಯ ಕಾಂಗ್ರೆಸ್ ಕಚೇರಿಯಲ್ಲಿ `ಗಾಂಧಿ 150′ ಹೆಸರಿನ ಕಾರ್ಯಕ್ರಮ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಭಾರತ್ ಬಂದ್ ವೇಳೆ ಪೊಲೀಸರಿಂದ ಲಾಠಿಚಾರ್ಚ್ ಗೆ ಒಳಗಾಗಿದ್ದ ಪಕ್ಷದ ಕಾರ್ಯಕರ್ತರ ನೋವನ್ನು ಕೇಳಿಲ್ಲ ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಸಚಿವೆ ಜಯಮಾಲಾಗೆ ಮುತ್ತಿಗೆ ಹಾಕಿದರು.

    ಉಡುಪಿಯ ಎಸ್ಪಿಯನ್ನು ಎತ್ತಂಗಡಿ ಮಾಡಿಸಲು ಹಲವು ಬಾರಿ ಹೇಳಿದರೂ ಎತ್ತಂಗಡಿ ಮಾಡಿಸಿಲ್ಲ. ಆಸ್ಪತ್ರೆಗೆ ದಾಖಲಾದವರ ಆರೋಗ್ಯವನ್ನು ವಿಚಾರಿಸಿಲ್ಲ. ಆದರೆ ಗಣಪತಿ ಕೂರಿಸಿದ್ದ ಎಸ್ಪಿ ಮನೆಗೆ ನೀವು ಊಟಕ್ಕೆ ಹೋಗಿದ್ದು ಎಷ್ಟು ಸರಿ ಎಂದು ಎಂದು ಕಾಂಗ್ರೆಸ್ ಕಾರ್ಯಕತ್ರರು ಆಕ್ರೋಶಗೊಂಡು ಜಯಮಾಲಾ ಅವರನ್ನು ಪ್ರಶ್ನಿಸಿದ್ದಾರೆ.

    ಮಾಧ್ಯಮಗಳ ಮುಂದೆ ನಿಂತು ಈ ರೀತಿಯ ಡ್ರಾಮಾ ಮಾಡಬೇಡಿ. ಈ ರೀತಿ ಹೇಳಿದ್ರೆ ನನಗೆ ಕೋಪ ಬರುತ್ತದೆ ಎಂದು ಜಯಾಮಾಲ ಕಾಂಗ್ರೆಸ್ ಕಾರ್ಯಕರ್ತರಿಗೆ ಸೂಚಿಸಿ ಕಾಂಗ್ರೆಸ್ ಭವನದಿಂದ ಹೊರಬಂದು ಕಾರು ಹತ್ತಿ ಕಾಲ್ಕಿತ್ತರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಗಸ್ಟ್ 2ರಂದು ವಿಧಾನಸೌಧಕ್ಕೆ ಮುತ್ತಿಗೆ: ವಾಟಾಳ್

    ಆಗಸ್ಟ್ 2ರಂದು ವಿಧಾನಸೌಧಕ್ಕೆ ಮುತ್ತಿಗೆ: ವಾಟಾಳ್

    ಬೆಂಗಳೂರು: ಉತ್ತರ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಸಭೆ ನಡೆಸುವಂತೆ ಆಗ್ರಹಿಸಿ ಆಗಸ್ಟ್ 2ರಂದು ವಿಧಾನಸಭೆಗೆ ಮುತ್ತಿಗೆ ಹಾಕುವುದಾಗಿ ಕನ್ನಡ ಒಕ್ಕೂಟ ಪಕ್ಷದ ಅಧ್ಯಕ್ಷ ಹಾಗೂ ಮಾಜಿ ಶಾಸಕ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.

    ಪ್ರತ್ಯೇಕ ರಾಜ್ಯ ಕುರಿತು ಪ್ರತಿಕ್ರಿಯಿಸಿದ ಅವರು, ಇದೇ ಆಗಸ್ಟ್ 2ರಂದು ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ವಿಶೇಷ ಸಭೆ ನಡೆಸುವಂತೆ ಆಗ್ರಹಿಸಿ ಕನ್ನಡ ಒಕ್ಕೂಟದಿಂದ ವಿಧಾನಸಭೆಗೆ ಮುತ್ತಿಗೆ ಹಾಕಲಾಗುವುದು. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡುತ್ತಿರುವವನ್ನು ಖುದ್ದು ಭೇಟಿ ಮಾಡಿ ಹೋರಾಟ ಕೈಬಿಡುವಂತೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

    ಸರ್ಕಾರ ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಕುಮಾರಸ್ವಾಮಿಯವರು ಹುಬ್ಬಳ್ಳಿ ಭಾಗಕ್ಕೆ ಹೋಗಿ ಹಾದಿ ಬೀದಿಯಲ್ಲಿ ಚರ್ಚೆ ಮಾಡೋದಲ್ಲ. ಉತ್ತರ ಕರ್ನಾಟಕಕ್ಕೆ ವಿಶೇಷ ಅಧಿವೇಶನ ನಡೆಸಿ, ಸಮಸ್ಯೆಯ ಬಗ್ಗೆ ವಿಸ್ತೃತ ಚರ್ಚೆ ಮಾಡಿ ನಿರ್ಣಯ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

  • ಮಹದಾಯಿಗಾಗಿ ಕರ್ನಾಟಕ ಬಂದ್: ಕರವೇ ಕಾರ್ಯಕರ್ತಯರಿಂದ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ

    ಮಹದಾಯಿಗಾಗಿ ಕರ್ನಾಟಕ ಬಂದ್: ಕರವೇ ಕಾರ್ಯಕರ್ತಯರಿಂದ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ

    ಬೆಂಗಳೂರು: ಮಹದಾಯಿ ನೀರಿಗಾಗಿ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರೈಲು ಪ್ರಯಾಣಿಕರಿಗೂ ಬಂದ್ ಬಿಸಿ ತಟ್ಟಿದೆ.

    ದಿನ ನಿತ್ಯಕ್ಕಿಂತ ಪ್ರಯಾಣಿಕರ ಸಂಖ್ಯೆ ಕುಸಿತ ಕಂಡಿದ್ದು, ರೈಲ್ವೇ ನಿಲ್ದಾಣಕ್ಕೆ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಮಹದಾಯಿ ಹೋರಾಟವನ್ನು ಬೆಂಬಲಿಸಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಕ್ಕೆ ಒತ್ತಾಯಿಸಿ ಕರವೇ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ. ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡರ ಬಣದಿಂದ ಮುತ್ತಿಗೆ ಹಾಕಿದ್ದಾರೆ.

    ರೈಲ್ವೇ ಸ್ಟೇಷನ್ ಗೆ ಕರವೇ ಮುತ್ತಿಗೆ ಹಿನ್ನೆಲೆಯಲ್ಲಿ ಸ್ಟೇಷನ್ ಫ್ರಂಟ್ ಮತ್ತು ಬ್ಯಾಕ್ ಗೇಟಲ್ಲಿ ಪೊಲೀಸ್ ಫುಲ್ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ರೈಲ್ವೇ ಸ್ಟೇಷನ್ ಮುಂಭಾಗ ಬ್ಯಾರಿಕೇಡ್ ಗಳನ್ನ ಹಾಕಿ ಬಂದೋಬಸ್ತ್ ಮಾಡಿದ್ದಾರೆ. 150ಕ್ಕೂ ಹೆಚ್ಚು ಪೊಲೀಸರನ್ನು ಆಯೋಜಿಸಲಾಗಿದೆ.

    ರೈಲ್ವೇ ಸ್ಟೇಷನ್‍ಗೆ ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಮುತ್ತಿಗೆ ನಡೆದಿದ್ದು, ಪೊಲೀಸರು ಕರವೇ ಕಾರ್ಯಕರ್ತರನ್ನ ತಡೆಯುತ್ತಿದ್ದಾರೆ. ಮಹದಾಯಿ ನಮ್ಮದು, ಮಹದಾಯಿ ನಮ್ಮದು ಎಂದು ಕೇಂದ್ರ ಸರ್ಕಾರದ ವಿರುದ್ಧ ಕರವೇ ಕಾರ್ಯಕರ್ತರ ಘೋಷಣೆ ಕೂಗುತ್ತಿದ್ದಾರೆ.

    ಕೇಂದ್ರ ಸರ್ಕಾರದ ಗಮನ ಸೆಳೆಯಲು ರೈಲ್ವೆ ನಿಲ್ದಾಣಕ್ಕೆ ಹೋಗಿ ರಾಜ್ಯದ ಎಲ್ಲಾ ರೈಲ್ವೇ ನಿಲ್ದಾಣಗಳಿಗೂ ಮುತ್ತಿಗೆ ಹಾಕಲಾಗಿದೆ. ಕುಡಿಯೋ ನೀರಿಗಾಗಿ ಇಂದು ಹೋರಾಟ ಮಾಡಲಾಗ್ತಿದೆ, ಪ್ರಧಾನಿಗಳು ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆ ಹರಿಸಬೇಕು ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ.

    ರೈಲ್ವೇ ಸ್ಟೇಷನ್‍ಗೆ ಕರವೇ ಮುತ್ತಿಗೆ ಹಾಕಿದ್ದು, ಕರವೇ ಅಧ್ಯಕ್ಷ ನಾರಾಯಣಗೌಡನನ್ನು ಬಂಧಿಸಿದ್ದಾರೆ. ಮುತ್ತಿಗೆ ಹಾಕಲು ಯತ್ನಿಸಿದ ಕರವೇ ಅಧ್ಯಕ್ಷ ನಾರಾಯಣಗೌಡನನ್ನು ಸೇರಿ ನೂರಾರು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಯಕರ್ತರು ರಸ್ತೆಗಳಲ್ಲೇ ಮಲಗಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.