Tag: ಮುದುಡಿದ ಎಲೆಗಳು

  • ಕನ್ನಡ ಚಿತ್ರಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್ ನಟಿ ಅಪ್ಸರ ರಾಣಿ

    ಕನ್ನಡ ಚಿತ್ರಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್ ನಟಿ ಅಪ್ಸರ ರಾಣಿ

    ರಾಮ್ ಗೋಪಾಲ್ ವರ್ಮ ನಿರ್ದೇಶನದ ‘ಡೇಂಜರಸ್’ ಚಿತ್ರದ ಮೂಲಕ ಜನಪ್ರಿಯರಾಗಿರುವ ನಟಿ ಅಪ್ಸರ ರಾಣಿ (Apsara Rani) ಇದೇ ಮೊದಲ ಬಾರಿಗೆ ಕನ್ನಡ ಚಿತ್ರದಲ್ಲಿ ನಟಿಸಿದ್ದಾರೆ. ಎಂ.ಶಂಕರ್ ನಿರ್ದೇಶನದ ‘ಮುದುಡಿದ ಎಲೆಗಳು’ ಚಿತ್ರದ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಪ್ಸರ ರಾಣಿ ಅಭಿನಯಿಸಿದ ಹಾಡಿನ ಚಿತ್ರೀಕರಣ ಇತ್ತೀಚಿಗೆ ಹೆಬ್ಬಾಳದ ಪಶು ವೈದ್ಯಕೀಯ ಕಾಲೇಜಿನಲ್ಲಿ ನಡೆಯಿತು. ಇದನ್ನೂ ಓದಿ:ಖ್ಯಾತ ಗಾಯಕಿ ಉಷಾ ಉತ್ತುಪ್ ಪತಿ ಹೃದಯಾಘಾತದಿಂದ ನಿಧನ

    ದುಬಾರಿ ಕಾರೊಂದರಲ್ಲಿ ಕಾಲೇಜ್‌ಗೆ ಕಾಲಿಟ್ಟ ಹುಡುಗಿಯ ಸೌಂದರ್ಯ ಹಾಗೂ ಸ್ಟೈಲ್‌ಗೆ ಕಾಲೇಜು ಹುಡುಗರು ಮಾರು ಹೋಗುತ್ತಾರೆ. ಹೊಸದಾಗಿ ಕಾಲೇಜು ಸೇರಿರುವ ಹುಡುಗಿ ಇರಬಹುದು ಎಂದು ಹುಡುಗರು ಆಲೋಚಿಸುತ್ತಿದ್ದಾಗ, ಅವರು ಕಾಲೇಜು ಸೇರಲು ಬಂದಿರುವ ಹುಡುಗಿಯಲ್ಲ. ಕೆಮಿಸ್ಟಿç ಟೀಚರ್ ಅಂತ ಗೊತ್ತಾಗುತ್ತದೆ. ಇದನ್ನು ನಿರ್ದೇಶಕರು ಹಾಡಿನ ಮೂಲಕ ತೋರಿಸಿದ್ದಾರೆ. ಭಜರಂಗಿ ಮೋಹನ್ ನೃತ್ಯ ಸಂಯೋಜಿಸಿದ ಈ ಹಾಡಿನಲ್ಲಿ ಅಪ್ಸರ ರಾಣಿ, ರಂಜಿತ್ ಕುಮಾರ್ ಹಾಗೂ ಪಂಕಜ್ ನಾರಾಯಣ್ ಅಭಿನಯಿಸಿದ್ದರು.

    ‘ಮುದುಡಿದ ಎಲೆಗಳು’ ಚಿತ್ರಕ್ಕೆ ಈಗಾಗಲೇ ಎಂಭತ್ತರಷ್ಟು ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಕೆಲವು ಭಾಗಗಳ ಚಿತ್ರೀಕರಣ ಮಾತ್ರ ಬಾಕಿಯದೆ. ಒಂದು ಹಾಡಿನ ಚಿತ್ರೀಕರಣ ಕಾಶ್ಮೀರದಲ್ಲಿ ನಡೆದಿದೆ. ಮತ್ತೊಂದು ಹಾಡು ತಜಿಕಿಸ್ತಾನದಲ್ಲಿ ಚಿತ್ರೀಕರಣಗೊಳ್ಳಲಿದೆ. ‘ಮುದುಡಿದ ಎಲೆಗಳು’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ನಿರ್ದೇಶಕ ಎಂ.ಶಂಕರ್ ಬರೆದಿದ್ದಾರೆ. ರಂಜನಿ ಈ ಚಿತ್ರದ ಸಹ ನಿರ್ಮಾಪಕಿ. ವಿಕಾಸ್ ವಸಿಷ್ಠ ಸಂಗೀತ ನಿರ್ದೇಶನ ನಿರ್ದೇಶನವಿರುವ ಈ ಚಿತ್ರಕ್ಕೆ ಶ್ಯಾಮ್ ಸಿಂಧನೂರು ಅವರ ಛಾಯಾಗ್ರಹಣವಿದೆ.

    ರಂಜಿತ್ ಕುಮಾರ್ ಈ ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಪಂಕಜ್ ನಾರಾಯಣ್, ಪಾವನ ಗೌಡ, ನಿಕಿತಾ ಸ್ವಾಮಿ, ಸೂರ್ಯದರ್ಶನ್, ಪ್ರೀತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಅಪ್ಸರ ರಾಣಿ, ಕೊಡಗಿನ ಬೆಡಗಿ ಹರ್ಷಿಕಾ, ರಮೇಶ್ ಭಟ್, ಭವ್ಯ, ಶೋಭ್ ರಾಜ್, ಶಂಕರ್ ಅಶ್ವತ್ಥ್, ಪೂನಂ ಪಾಂಡೆ, ಪದ್ಮಾ ವಾಸಂತಿ, ಜೋಸೈಮನ್ ಮುಂತಾದವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

  • ‘ಮುದುಡಿದ ಎಲೆಗಳು’ ಚಿತ್ರಕ್ಕೆ ಮುಹೂರ್ತ: ಪಂಕಜ್ ಸೇರಿ ಮೂವರು ನಾಯಕರು

    ‘ಮುದುಡಿದ ಎಲೆಗಳು’ ಚಿತ್ರಕ್ಕೆ ಮುಹೂರ್ತ: ಪಂಕಜ್ ಸೇರಿ ಮೂವರು ನಾಯಕರು

    ರಂಜನಿ ಅವರು ನಿರ್ಮಿಸುತ್ತಿರುವ ಹಾಗೂ ಎಂ.ಶಂಕರ್ (M. Shankar) ನಿರ್ದೇಶನದ ‘ಮುದುಡಿದ ಎಲೆಗಳು’ (Mududida Yelegalu) ಚಿತ್ರದ ಮುಹೂರ್ತ (Muhurta) ಸಮಾರಂಭ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ಆರಂಭವಾಗಿತು. ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಚಿತ್ರತಂಡದವರು ಹಾಗೂ ಅನೇಕ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು.

    ಚಿತ್ರದ ಕುರಿತು ಮೊದಲು ಮಾತನಾಡಿದ ನಿರ್ಮಾಪಕ ಹಾಗೂ ನಿರ್ದೇಶಕ ಎಂ.ಶಂಕರ್, ನಮ್ಮ ರಿಯೊ ಪ್ರೊಡಕ್ಷನ್ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು‌. ನನ್ನ ಪತ್ನಿ ರಂಜನಿ ಈ ಚಿತ್ರದ ಸಹ ನಿರ್ಮಾಪಕಿ.ಮನುಷ್ಯ ದಿನನಿತ್ಯ ಎದುರಿಸುವ ಸಮಸ್ಯೆಗಳನ್ನು ಕೇಂದ್ರವಾಗಿಟ್ಟುಕೊಂಡು ಕಥೆ ಬರೆದಿದ್ದೇನೆ. ಮುದುಡಿದ ಎಲೆಗಳು ಹೇಗೆ ಚದರಿ ಹೋಗುತ್ತದೆ. ಮತ್ತೆ ಹೇಗೆ  ಒಂದಾಗುತ್ತದೆ ಎಂಬ ಅಂಶವನ್ನೂ ಕಥೆ ಆಧರಿಸಿದೆ. ಮೂವತ್ತು ದಿನಗಳ ಒಂದೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯಲಿದೆ. ಹಾಡುಗಳು ಕರ್ನಾಟಕದ ಸುಂದರ ತಾಣಗಳಲ್ಲಿ ಚಿತ್ರೀಕರಣಗೊಳ್ಳಲಿದೆ‌.

    ಈ ಚಿತ್ರದಲ್ಲಿ ರಂಜಿತ್ ಕುಮಾರ್, ಪಂಕಜ್ ಎಸ್ ನಾರಾಯಣ್ (Pankaj) ಹಾಗೂ ದರ್ಶನ್ ಸೂರ್ಯ ಮೂವರು ನಾಯಕರು. ಊರ್ವಶಿ ರಾಯ್, ಸೀಮಾ ವಸಂತ್ ಹಾಗೂ ಸುಶ್ಮಿತ ನಾಯಕಿಯರು. ಹಿರಿಯ ನಟ ಭವ್ಯ, ಶೋಭ್ ರಾಜ್, ಶಂಕರ್ ಅಶ್ವಥ್, ಹರ್ಷಿಕಾ ಪೂಣ್ಣಚ್ಚ, ಸಂತೋಷ್ ರೆಡ್ಡಿ, ಅಮಿತ್ ರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ರಮೇಶ್ ಕೋಟೆ ಸಹ ನಿರ್ದೇಶನ, ಶ್ಯಾಮ್ ಸಿಂಧನೂರು ಛಾಯಾಗ್ರಹಣ ಹಾಗೂ ವಿಕಾಸ್ ವಸಿಷ್ಠ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ ಎಂದರು.

    ನನ್ನ ಪತಿ ಶಂಕರ್ ಅವರ ಸಾರಥ್ಯದಲ್ಲಿ ಮುದುಡಿದ ಎಲೆಗಳು ಚಿತ್ರ ಉತ್ತಮವಾಗಿ ಮೂಡಿ ಬರಲಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಸಹ ನಿರ್ಮಾಪಕಿ ರಂಜನಿ.  ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಸಹ ನಿರ್ದೇಶಕ ರಮೇಶ್ ಕೋಟೆ ನೀಡಿದರು.

    ಚಿತ್ರದಲ್ಲಿ ನಟಿಸುತ್ತಿರುವ ಭವ್ಯ, ಅಮಿತ್ ರಾಜ್, ರಂಜಿತ್ ಕುಮಾರ್, ಪಂಕಜ್ ಎಸ್ ನಾರಾಯಣ್, ದರ್ಶನ್ ಸೂರ್ಯ, ಊರ್ವಶಿ ರಾಯ್, ಸುಶ್ಮಿತ, ಸೀಮಾ ವಸಂತ್ ತಮ್ಮ ಪಾತ್ರ ಹಾಗೂ ಚಿತ್ರದ ಬಗ್ಗೆ ಮಾತನಾಡಿದರು.