Tag: ಮುದ್ದೆ ತಿನ್ನುವ ಸ್ಪರ್ಧೆ

  • ಮುದ್ದೆ ತಿನ್ನುವ ಸ್ಪರ್ಧೆಯಲ್ಲಿ ಮಿಂಚಿದ ನಾರಿಯರು

    ಮುದ್ದೆ ತಿನ್ನುವ ಸ್ಪರ್ಧೆಯಲ್ಲಿ ಮಿಂಚಿದ ನಾರಿಯರು

    ಶಿವಮೊಗ್ಗ: ನಾಡಹಬ್ಬ ದಸರಾ ಅಂಗವಾಗಿ ಶಿವಮೊಗ್ಗದಲ್ಲಿ ಇಂದು ದಸರಾ ಆಹಾರ ಮೇಳ ಸಮಿತಿ ವತಿಯಿಂದ ಸಾರ್ವಜನಿಕರಿಗೆ ಮುದ್ದೆ ತಿನ್ನುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಪಾಲ್ಗೊಂಡ ಮಹಿಳೆಯರು ಎಲ್ಲರ ಗಮನ ಸೆಳೆದಿದ್ದಾರೆ.

    ನಗರದ ಶಿವಪ್ಪನಾಯಕ ವೃತ್ತದ ಬಳಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ನೂರಾರು ಸಂಖ್ಯೆಯಲ್ಲಿ ಪುರುಷರು ಹಾಗೂ ಮಹಿಳೆಯರು ಭಾಗವಹಿಸಿ ನಾವ್ಯಾರಿಗೂ ಕಡಿಮೆ ಇಲ್ಲ ಎಂಬಂತೆ ಮುದ್ದೆ ಬಸ್ಸಾರು ಸವಿದರು. ಅದರಲ್ಲೂ ಮಹಿಳೆಯರು ಉತ್ಸಾಹದಿಂದ ಸ್ಪರ್ಧಿಸಿದ್ದು ಎಲ್ಲರ ಗಮನ ಸೆಳೆದಿದೆ. ಪುರುಷರಿಗೆ ಹಾಗೂ ಮಹಿಳೆಯರಿಗೆ ಪ್ರತ್ಯೇಕ ಸ್ಪರ್ಧೆ ಏರ್ಪಡಿಸಿ, ಎಲ್ಲರಿಗೂ ಒಂದು ನಿಮಿಷ ಕಾಲಾವಕಾಶ ನೀಡಲಾಗಿತ್ತು. ಈ ಒಂದು ನಿಮಿಷದ ಅವಧಿಯಲ್ಲಿ ಯಾರು ಅತಿ ಹೆಚ್ಚು ಮುದ್ದೆ ತಿನ್ನುತ್ತಾರೋ ಅವರಿಗೆ ಬಹುಮಾನ ಸಹ ನೀಡಲಾಯಿತು.

    ಪುರುಷರ ವಿಭಾಗದಲ್ಲಿ ಭಾಗವಹಿಸಿದ್ದ ಅಣ್ಣಪ್ಪ ಅವರು ಒಂದು ನಿಮಿಷದಲ್ಲಿ ಆರೂವರೆ ಮುದ್ದೆ ಸೇವಿಸಿದರೆ, ಮಹಿಳೆಯರ ವಿಭಾಗದಲ್ಲಿ ಸುಮಾ ಅವರು ಒಂದು ನಿಮಿಷದ ಅವಧಿಯಲ್ಲಿ 4 ಮುದ್ದೆ ತಿನ್ನುವ ಮೂಲಕ ಪ್ರಥಮ ಬಹುಮಾನವನ್ನು ತಮ್ಮದಾಗಿಸಿಕೊಂಡರು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಸ್ಪರ್ಧಾಳುಗಳಿಗೆ ಅವರ ಸ್ನೇಹಿತರು ಹಾಗೂ ಸಾರ್ವಜನಿಕರು ಸಾಥ್ ನೀಡುತ್ತಿದ್ದರು.