Tag: ಮುದ್ದೇಬಿಹಾಳ

  • ಕೃಷ್ಣಾ ನದಿಯಲ್ಲಿ ಎತ್ತಿನ ಮೈ ತೊಳೆಯುತ್ತಿದ್ದ ರೈತನನ್ನು ಎಳೆದೊಯ್ದ ಮೊಸಳೆ

    ಕೃಷ್ಣಾ ನದಿಯಲ್ಲಿ ಎತ್ತಿನ ಮೈ ತೊಳೆಯುತ್ತಿದ್ದ ರೈತನನ್ನು ಎಳೆದೊಯ್ದ ಮೊಸಳೆ

    ವಿಜಯಪುರ: ಅಮವಾಸ್ಯೆ ಹಿನ್ನೆಲೆ ಎತ್ತಿನ ಮೈ ತೊಳೆಯಲು ಕೃಷ್ಣಾ ನದಿ (Krishna River) ತೀರಕ್ಕೆ ಹೋಗಿದ್ದ ರೈತನನ್ನು ಮೊಸಳೆ ಎಳೆದೊಯ್ದಿರುವ ಘಟನೆ ಮುದ್ದೇಬಿಹಾಳದ (Muddebihal) ತಂಗಡಗಿ ಗ್ರಾ.ಪಂ ವ್ಯಾಪ್ತಿಯ ಕುಂಚಗನೂರ ಗ್ರಾಮದಲ್ಲಿ ನಡೆದಿದೆ

    ಕುಂಚಗನೂರ ಗ್ರಾಮದ ಕಾಶೀನಾಥ ಹಣಮಂತ ಕಂಬಳಿ (38) ಮೊಸಳೆ ದಾಳಿಗೆ ಒಳಗಾದ ರೈತ. ಕಾಶಿನಾಥನನ್ನು ಮೊಸಳೆ ಹೊತ್ತೊಯ್ದಿದ್ದನ್ನು ನೋಡಿರುವುದಾಗಿ ಕುಂಚಗನೂರ ಗ್ರಾಮದ ಧರೆಪ್ಪ ಬಟಕುರ್ಕಿ ಅವರು ಮಾಹಿತಿ ನೀಡಿದ್ದಾರೆ.ಇದನ್ನೂ ಓದಿ: ಧರ್ಮ ವಿಜಯ – ಧರ್ಮಸ್ಥಳ ದೇಗುಲದಿಂದ ಶಿವ ರುದ್ರತಾಂಡವದ ಫೋಟೋ ಅಪ್ಲೋಡ್‌ 

    ಶನಿವಾರ (ಆ.23) ಅಮವಾಸ್ಯೆಯ ಹಿನ್ನೆಲೆ ಕಾಶೀನಾಥ ಅವರು ಎತ್ತುಗಳ ಮೈ ತೊಳೆಯಲು ಕೃಷ್ಣಾ ನದಿ ತೀರಕ್ಕೆ ತೆರಳಿದ್ದರು. ಈ ವೇಳೆ ರೈತನನ್ನು ಮೊಸಳೆ ಎಳದುಕೊಂಡು ಹೋಗಿದೆ. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ನಾಪತ್ತೆಯಾದ ರೈತನನ್ನು ಹುಡುಕುತ್ತಿದ್ದಾರೆ. ಕೂಡಲಸಂಗಮದಿಂದ ಬೋಟ್ ತರಿಸಿ ಶೋಧ ನಡೆಸಲಾಗುತ್ತಿದೆ.ಇದನ್ನೂ ಓದಿ: ಅಂಕೋಲದಲ್ಲಿ ಕೇಣಿ ವಾಣಿಜ್ಯ ಬಂದರು ಯೋಜನೆ; ಹೇಗಿದೆ ನೀಲ ನಕ್ಷೆ – ಸಾಧಕ ಬಾಧಕಗಳೇನು?

  • Vijayapura | ತೆರೆದ ಬಾವಿಗೆ ಬಿದ್ದು ಮಗು ಸಾವು

    Vijayapura | ತೆರೆದ ಬಾವಿಗೆ ಬಿದ್ದು ಮಗು ಸಾವು

    ವಿಜಯಪುರ: ಆಟವಾಡುತ್ತಿದ್ದ ಮಗು ತೆರೆದ ಬಾವಿಗೆ (Open Well) ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ (Vijayapura) ಜಿಲ್ಲೆಯ ಮುದ್ದೇಬಿಹಾಳ (Muddebihala) ಪಟ್ಟಣದಲ್ಲಿ ನಡೆದಿದೆ.

    ಮೂರು ವರ್ಷದ ಹರ್ಷಿತ್ ಪಾಟೀಲ್ ಬಾವಿಗೆ ಬಿದ್ದು ಸಾವನ್ನಪ್ಪಿರುವ ಮಗು. ಶುಕ್ರವಾರ ಮಗು ಮನೆಯಿಂದ ನಾಪತ್ತೆಯಾಗಿತ್ತು. ಮಗು ಎಲ್ಲಿದೆ ಎನ್ನುವ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಕಂಗಾಲಾದ ಕುಟುಂಬಸ್ಥರು ಹರ್ಷಿತ್ ಹುಡುಕಾಟದಲ್ಲಿ ತೊಡಗಿದ್ದರು. ಇಂದು ಸ್ಥಳೀಯರು ಬಾವಿಯಲ್ಲಿ ಇಳಿದು ನೋಡಿದಾಗ ಮಗುವಿನ ಮೃತದೇಹ ಪತ್ತೆಯಾಗಿದೆ. ಇದನ್ನೂ ಓದಿ: ಬೆಂಗಳೂರು ಪೋರ್ಟ್‌ ಧ್ವಂಸ ಮಾಡಿದ್ದೇವೆ – ಮತ್ತೆ ಪಾಕ್‌ ಫುಲ್‌ ಟ್ರೋಲ್‌

    ಕುಟುಂಬಸ್ಥರು ಮಗುವನ್ನು ತೆರೆದ ಬಾವಿಯ ಆಸುಪಾಸಲ್ಲಿ ಆಡಲು ಬಿಟ್ಟಾಗ ಅನಾಹುತ ನಡೆದಿದೆ ಎನ್ನಲಾಗಿದೆ. ಘಟನೆ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಆಪರೇಷನ್ ಸಿಂಧೂರದಲ್ಲಿ ಭಾರತಕ್ಕೆ ಬೇಕಿದ್ದ 5 ಉಗ್ರರು ಮಟಾಶ್

  • ವಿಜಯಪುರ | ಬೈಕ್ ಸವಾರನ ಮೇಲೆ ಕ್ರೇನ್ ಹರಿದು ಸ್ಥಳದಲ್ಲೇ ಸಾವು

    ವಿಜಯಪುರ | ಬೈಕ್ ಸವಾರನ ಮೇಲೆ ಕ್ರೇನ್ ಹರಿದು ಸ್ಥಳದಲ್ಲೇ ಸಾವು

    ವಿಜಯಪುರ: ಬೈಕ್ ಸವಾರನ ಮೇಲೆ ಕ್ರೇನ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ (Muddebihal) ತಾಲೂಕಿನ ನಾಲತವಾಡ ಪಟ್ಟಣದಲ್ಲಿ ನಡೆದಿದೆ.

    ಮೃತ ವ್ಯಕ್ತಿಯನ್ನು ರಾಯಚೂರು (Raichuru) ಜಿಲ್ಲೆಯ ಲಿಂಗಸಗೂರು (Lingasaguru) ತಾಲೂಕಿನ ನಾಗರಹಾಳ ಗ್ರಾಮದ ನಿವಾಸಿ ಶಿವಪುತ್ರಪ್ಪ ಭಜಂತ್ರಿ (40) ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಫ್ಯಾನ್ಸ್‌ಗೆ ಸಿಹಿಸುದ್ದಿ- ಹೊಸ ರಿಲೀಸ್ ಡೇಟ್ ಅನೌನ್ಸ್ ಮಾಡಿದ ‘ಪುಷ್ಪ 2’ ಟೀಮ್

    ಪಟ್ಟಣದ ಹೋಂಡಾ ಶೋರೂಂ ಬಳಿ ಮುದ್ದೇಬಿಹಾಳ-ನಾರಾಯಣಪುರ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಅಪಘಾತದ ಬಳಿಕ ಸ್ಥಳದಲ್ಲೇ ಕ್ರೇನ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

    ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸದ್ಯ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ (Muddebihal Police Station) ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಚನ್ನಪಟ್ಟಣದಲ್ಲಿ ನಂಬಿಕೆ ದ್ರೋಹಿಗಳಿಗೆ ಜನ ಪಾಠ ಕಲಿಸ್ತಾರೆ: ಬಿಎಸ್‌ವೈ

  • ಕ್ಯಾಂಟರ್‌ಗೆ ಕಾರು ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು

    ಕ್ಯಾಂಟರ್‌ಗೆ ಕಾರು ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು

    ಬಾಗಲಕೋಟೆ: ಕ್ಯಾಂಟರ್  ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ (Bagalkote) ಜಿಲ್ಲೆ ಹುನಗುಂದ ತಾಲ್ಲೂಕಿನ ಧನ್ನೂರು ಎಂಬಲ್ಲಿ ನಡೆದಿದೆ.

    ಲಕ್ಷ್ಮಣ ವಡ್ಡರ್ (55),ಬೈಲಪ್ಪ ಬಿರಾದಾರ್(45), ರಾಮಣ್ಣ ನಾಯಕಮಕ್ಕಳು (50) ಹಾಗೂ ಕಾರು ಚಾಲಕ ರಫಿಕ್ ಮುಲ್ಲಾ(25) ಸಾವಿಗೀಡಾದವರು. ಮೃತರು ವಿಜಯಪುರ (Vijayapura) ಜಿಲ್ಲೆ ಬಿದರಕುಂದಿ ಗ್ರಾಮದವರು. ತಡರಾತ್ರಿ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಇದನ್ನೂ ಓದಿ: ಮುಡಾ ಹಗರಣ ಸಂಕಷ್ಟ; ಹೈಕಮಾಂಡ್‌ಗೆ ವರದಿ ನೀಡಿದ ಸಿಎಂ ಸಿದ್ದರಾಮಯ್ಯ

    ಕಾರು ಮುದ್ದೇಬಿಹಾಳ (Muddebihal) ಕಡೆ ಹೊರಟಿತ್ತು. ಕ್ಯಾಂಟರ್ ಮುದ್ದೇಬಿಹಾಳದಿಂದ ಹುನಗುಂದ ಕಡೆ ಬರುತ್ತಿತ್ತು. ಈ ವೇಳೆ ಕಾರು ಚಾಲಕ ನಿದ್ರೆಗೆ ಜಾರಿದ್ದು, ಕ್ಯಾಂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ. ಕಾರು ನಜ್ಜುಗುಜ್ಜಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Karawar | ಹಣಕೋಣ ಉದ್ಯಮಿ ಹತ್ಯೆ -ಪ್ರಮುಖ ಆರೋಪಿ ಆತ್ಮಹತ್ಯೆ, ಮೂವರ ಬಂಧನ

    ಘಟನೆ ನಡೆದ ಸ್ಥಳಕ್ಕೆ ಹುನಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದದ ಬಳಿಕ ಹೆಚ್ಚಿದ ಬೇಡಿಕೆ – ಹಾಸನಾಂಬ ಲಡ್ಡು ಪ್ರಸಾದಕ್ಕೂ ನಂದಿನಿ ತುಪ್ಪ

  • ಡಿವೋರ್ಸ್ ಕೇಳಿದವನಿಗೆ ಕೋರ್ಟ್ ಆವರಣದಲ್ಲೇ ಹಲ್ಲೆ – ನಾಲ್ವರು ಜೈಲಿಗೆ

    ಡಿವೋರ್ಸ್ ಕೇಳಿದವನಿಗೆ ಕೋರ್ಟ್ ಆವರಣದಲ್ಲೇ ಹಲ್ಲೆ – ನಾಲ್ವರು ಜೈಲಿಗೆ

    ವಿಜಯಪುರ: ವಿವಾಹ ವಿಚ್ಛೇದನ (Divorce) ಪ್ರಕರಣಕ್ಕೆ ಅರ್ಜಿ ಸಲ್ಲಿಸಿದ್ದ ವ್ಯಕ್ತಿಯೊಬ್ಬ ಕೋರ್ಟ್‍ಗೆ (Court) ಬಂದಿದ್ದ ವೇಳೆ ಆತನ ಪತ್ನಿಯ ಕುಟುಂಬಸ್ಥರು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಮುದ್ದೇಬಿಹಾಳದಲ್ಲಿ (Muddebihal) ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ಮುದ್ದೇಬಿಹಾಳದ ರೂಢಗಿ ಗ್ರಾಮದ ಮಹೇಶ್ ಬಸಪ್ಪ ನಂದಿಹಾಳ ಎಂಬಾತ ತನ್ನ ಪತ್ನಿಗೆ ವಿಚ್ಛೇದನ ನೀಡಲು ನಿರ್ಧರಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ಇದರ ಸಲುವಾಗಿ ವಿಚಾರಣೆಗಾಗಿ ಡಿ.20 ರಂದು ಆತ ಕೋರ್ಟಿಗೆ ಬಂದಿದ್ದ. ಈ ವೇಳೆ ಆತನನ್ನು ನ್ಯಾಯಾಲಯದ ಎದುರಿನ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಇಂಡಿಯಾ- ಪಾಕ್ ಗಡಿ ಸೀಮಾ ಹೈದರ್, ಉದ್ದ 5 ಅಡಿ 6 ಇಂಚು- ಉತ್ತರ ಪತ್ರಿಕೆ ಫುಲ್ ವೈರಲ್

    ಕೋರ್ಟಿನ ಮೊದಲನೇ ಗೇಟ್‍ನ ಮುಂಭಾಗದಲ್ಲಿ ಮುತ್ತಪ್ಪ ಬಸಪ್ಪ ಬಿರಾದಾರ, ಬಸಪ್ಪ ಭೀಮಪ್ಪ ಬಿರಾದಾರ, ಚನ್ನಮ್ಮ ಬಸಪ್ಪ ಬಿರಾದಾರ, ಈರಮ್ಮ ಉರ್ಫ ಸುಮಿತ್ರಾ ಸೇರಿಕೊಂಡು ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಳಿಕ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಅಲ್ಲೇ ಇದ್ದ ಕೆಲವರು ತನ್ನನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ ಎಂದು ಮಹೇಶ್ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಕಳೆದ ಎರಡು ವರ್ಷಗಳ ಹಿಂದೆ ಹಲ್ಲೆಗೊಳಗಾದ ಮಹೇಶ್, ಈರಮ್ಮ ಉರ್ಫ ಸುಮಿತ್ರಾ ಎಂಬಾಕೆಯನ್ನು ಮದುವೆ ಆಗಿದ್ದ. ಮದುವೆಯ ಬಳಿಕ ಕೆಲವು ದಿನಗಳಲ್ಲೇ ಮಹಿಳೆ ಏಳು ತಿಂಗಳ ಗರ್ಭಿಣಿ ಎಂಬುದು ಗೊತ್ತಾಗಿ, ಮಹಿಳೆಯ ತವರು ಮನೆಯವರನ್ನು ಕರೆಸಿ ಆಕೆಯನ್ನು ಅವರೊಂದಿಗೆ ಕಳಿಸಿದ್ದ. ಬಳಿಕ ವಿವಾಹ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದ.

    ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಮುದ್ದೇಬಿಹಾಳ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಮೋದಿ ಓಡಾಡೋದು ಐಷಾರಾಮಿ ಫ್ಲೈಟ್ ಅಲ್ವಾ: ಸಿದ್ದರಾಮಯ್ಯ ಪ್ರಶ್ನೆ

  • ಮನೆಯ ಮೇಲ್ಛಾವಣಿ ಕುಸಿತ- ಅವಶೇಷಗಳಡಿಯಿಂದ ವೃದ್ಧೆಯ ರಕ್ಷಣೆ

    ಮನೆಯ ಮೇಲ್ಛಾವಣಿ ಕುಸಿತ- ಅವಶೇಷಗಳಡಿಯಿಂದ ವೃದ್ಧೆಯ ರಕ್ಷಣೆ

    ವಿಜಯಪುರ: ಮಳೆಯಿಂದ ನೆನೆದು ಮನೆಯ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ದೇವರ ಹುಲಗಬಾಳ ಗ್ರಾಮದಲ್ಲಿ ಘಟನೆ ನಡೆದಿದೆ.

    ನಿನ್ನೆ ತಡರಾತ್ರಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದಿದೆ. ಮಣ್ಣಿನ ಅವಶೇಷಗಳಡಿ ಸಿಲುಕಿದ್ದ ಮಹಾಂತಮ್ಮ ಹೂಗಾರ ಎಂಬ ಅಜ್ಜಿಯನ್ನು ರಕ್ಷಣೆ ಮಾಡಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ಸಿಗೆ ಹೆಚ್‍ಡಿಕೆ ಟಕ್ಕರ್ – ಸಿ.ಎಂ ಇಬ್ರಾಹಿಂ ಜೆಡಿಎಸ್ ಸೇರೋದು ಪಕ್ಕಾ!

    ಅಜ್ಜಿ ಮನೆಯಲ್ಲಿ ಒಬ್ಬರೇ ವಾಸ ಮಾಡುತ್ತಿದ್ದರು. ಕೆಲ ದಿನಗಳ ಹಿಂದೆ ಭಾರೀ ಮಳೆಯಾಗಿತ್ತು. ಮಳೆಯಿಂದ ಮನೆಯ ಮೇಲ್ಛಾವಣಿ ನೆನೆದಿತ್ತು. ಹೀಗೆ ನೆನೆದಿದ್ದ ಮನೆ ನಿನ್ನೆ ರಾತ್ರಿ ಕುಸಿದ ಪರಿಣಾಮ ಮಹಾಂತಮ್ಮ ಮಣ್ಣಲ್ಲಿ ಸಿಲುಕಿದ್ದಾರೆ. ಇದನ್ನು ಕಂಡ ಸ್ಥಳೀಯರು ಕೂಡಲೇ ವೃದ್ಧೆಯನ್ನು ರಕ್ಷಣೆ ಮಾಡಿದ್ದಾರೆ.  ಇದನ್ನೂ ಓದಿ: ಭೋಜನ ಕೂಟದಲ್ಲೂ ಆಪರೇಷನ್ ಹಸ್ತದ ಬಗ್ಗೆ ಎಚ್ಚರಿಕೆ ನೀಡಿದ ಬಿಎಸ್‍ವೈ

    ಸದ್ಯ ಮಹಾಂತಮ್ಮಳನ್ನ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಾಣಾಪಾಯದಿಂದ ಮಹಾಂತಮ್ಮ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಸ್ಥಳಾಂತರಕ್ಕೆ ಯತ್ನ – ನಡಹಳ್ಳಿ ವಿರುದ್ಧ ದೇವಾನಂದ ಚವ್ಹಾಣ್ ಗರಂ

    ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಸ್ಥಳಾಂತರಕ್ಕೆ ಯತ್ನ – ನಡಹಳ್ಳಿ ವಿರುದ್ಧ ದೇವಾನಂದ ಚವ್ಹಾಣ್ ಗರಂ

    ವಿಜಯಪುರ: ನಾಗಠಾಣ ಮತಕ್ಷೇತ್ರದಲ್ಲಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ. ಆದರೆ ಇದರ ಸ್ಥಳಾಂತರಕ್ಕೀಗ ಹುನ್ನಾರ ನಡೆದಿದೆ ಎಂದು ನಾಗಠಾಣ ಶಾಸಕ ದೇವಾನಂದ್ ಚವ್ಹಾಣ್ ಆರೋಪಿಸಿದ್ದಾರೆ.

    ವಿಜಯಪುರದಲ್ಲಿ ಮಾತನಾಡಿದ ದೇವಾನಂದ್ ಚವ್ಹಾಣ್ , ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ ಕಳೆದ 32 ವರ್ಷಗಳಿಂದ ವಿಜಯಪುರದ ಹಿಟ್ನಳ್ಳಿ ಫಾರ್ಮ್ ನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಇದನ್ನೀಗ ಮುದ್ದೇಬಿಹಾಳ ತಾಲೂಕಿಗೆ ಸ್ಥಳಾಂತರಿಸಲು ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಕೃಷಿ ಸಚಿವ ಬಿ ಸಿ ಪಾಟೀಲರಿಗೆ ಮನವಿ ಮಾಡಿದ್ದಾರೆ.

    ಸದ್ಯ ಕೇಂದ್ರ ಸ್ಥಾನದಲ್ಲಿರುವುದರಿಂದ ಜಿಲ್ಲೆಯ ಎಲ್ಲ ಭಾಗದ ಜನರಿಗೆ ಅನುಕೂಲ ಆಗಿದೆ. ಮುದ್ದೇಬಿಹಾಳದಲ್ಲಿ ಸ್ಥಳಾಂತರ ಆಗುವುದರಿಂದ ಜಿಲ್ಲೆಯ ಉಳಿದ ಭಾಗದ ರೈತರಿಗೆ ತೊಂದರೆ ಆಗಲಿದೆ ಎಂದರು. ಅಲ್ಲದೆ ಒಂದು ವೇಳೆ ಕೃಷಿ ಸಚಿವರು ಸ್ಥಳಾಂತರಕ್ಕೆ ಆದೇಶಿಸಿದ್ರೆ ರೈತರೊಂದಿಗೆ ಬೀದಿಗಿಳಿದು ಉಗ್ರ ಹೋರಾಟ ಮಾಡೋದಾಗಿ ಶಾಸಕ ದೇವಾನಂದ್ ಎಚ್ಚರಿಕೆ ನೀಡಿದ್ದಾರೆ.

  • ಹಾಲು ಮಾರುವವಳ ಜೊತೆ ಅನೈತಿಕ ಸಂಬಂಧ- ವ್ಯಕ್ತಿಯ ಬರ್ಬರ ಹತ್ಯೆ

    ಹಾಲು ಮಾರುವವಳ ಜೊತೆ ಅನೈತಿಕ ಸಂಬಂಧ- ವ್ಯಕ್ತಿಯ ಬರ್ಬರ ಹತ್ಯೆ

    ವಿಜಯಪುರ: ಹಾಲು ಮಾರುವವಳ ಜೊತೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಮುದ್ದೇಬಿಹಾಳ ತಾಲೂಕಿನ ಹಡಲಗೇರಿ ಗ್ರಾಮದಲ್ಲಿ ನಡೆದಿದೆ.

    ಹಡಲಗೇರಿ ಗ್ರಾಮದ ಸಂಗಪ್ಪ ಮೊರ್ಕೆ (45) ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ಗಂಗನಗೌಡ ಬಿರಾದಾರ್ ಸೇರಿದಂತೆ ಇಬ್ಬರು ಕೊಲೆಗೈದು, ಸ್ಥಳದಿಂದ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸಂಗಪ್ಪ ಮೊರ್ಕೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

    ಸಂಗಪ್ಪ ಮೊರ್ಕೆ ಜಮೀನಿನಿಂದ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಬೈಕ್‍ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಮಾರಕಾಸ್ತ್ರಗಳಿಂದ ಏಕಾಏಕಿ ಸಂಗಪ್ಪ ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಎದೆಗೆ ಚೂರಿ ಇರಿದ ಪರಿಣಾಮ ಸಂಗಪ್ಪ ಗಂಭೀರವಾಗಿ ಗಾಯಗೊಂಡು ಕೆಳಗೆ ಬಿದ್ದು ಒದ್ದಾಡುತ್ತಿದ್ದರು. ಈ ವೇಳೆ ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದರು. ಆದರೆ ಸಂಗಪ್ಪ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

    ಮುದ್ದೇಬಿಹಾಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಗಪ್ಪ ಮೃತದೇಹವನ್ನು ಮುದ್ದೇಬಿಹಾಳ ತಾಲೂಕು ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಪರಾರಿಯಾಗಿರುವ ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.

  • ಆಲಮಟ್ಟಿ ಎಡದಂಡೆ ಕಾಲುವೆ ಒಡೆದು ಜಮೀನಿಗೆ ನುಗ್ಗಿದ ನೀರು: ಕಂಗಾಲಾದ ರೈತರು

    ಆಲಮಟ್ಟಿ ಎಡದಂಡೆ ಕಾಲುವೆ ಒಡೆದು ಜಮೀನಿಗೆ ನುಗ್ಗಿದ ನೀರು: ಕಂಗಾಲಾದ ರೈತರು

    ವಿಜಯಪುರ: ಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಜಮೀನಿಗೆ ನುಗ್ಗಿದ ಘಟನೆ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಲೂಟಗೆರಿ ಗ್ರಾಮದ ಬಳಿ ನಡೆದಿದೆ.

    ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ ನೀರು ಬಿಡಲಾಗಿದೆ. ಹೀಗಾಗಿ ಕಾಲುವೆ ಮೈದುಂಬಿ ಹರಿಯುತ್ತಿದ್ದು, ಮಂಗಳವಾರ ಮಧ್ಯಾಹ್ನ ಲೂಟಗೆರಿ ಸಮೀಪದಲ್ಲಿ ಕಾಲುವೆಯ ಒಂದು ಬದಿಯ ದಂಡೆ ಒಡೆದಿದೆ. ಹೀಗಾಗಿ ನೂರಾರು ರೈತರಿಗೆ ಸೇರಿದ್ದ ಸುಮಾರು 300 ಎಕರೆ ಜಮೀನಿಗೆ ನೀರು ನುಗ್ಗಿದ್ದು ತೊಗರಿ, ಹೆಸರು ಕಾಳು, ಈರುಳ್ಳಿ ಬೆಳೆಗಳು ಸಂಪೂರ್ಣ ನಾಶವಾಗಿವೆ.

    ನೀರು ಬಿಡುವ ಮೊದಲೇ ಕಾಲುವೆ ಬಿರುಕು ಬಿಟ್ಟಿತ್ತು. ನೀರಿನ ರಭಸಕ್ಕೆ ಕೊರೆತ ಉಂಟಾಗಿ, ಕಾಲುವೆ ಒಡೆದಿದೆ. ಅಪಾರ ಪ್ರಮಾಣದ ನೀರು ಜಮೀನಿಗೆ ನುಗ್ಗಿ ಬೆಳೆ ನಾಶವಾಗಿದ್ದರಿಂದ ರೈತರು ಕಂಗಾಲಾಗಿದ್ದಾರೆ. ನೀರಾವರಿ ಅಧಿಕಾರಿಗಳಿಗೆ ಕಾಲುವೆ ಒಡೆದಿರುವ ಮಾಹಿತಿ ತಿಳಿಯುತ್ತಿದ್ದಂತೆ ನೀರಿನ ಹರಿವಿನ ಮಟ್ಟವನ್ನು ಕಡಿಮೆ ಮಾಡಿದ್ದಾರೆ.

    ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಸ್ಥಳಕ್ಕೆ ಭೇಟಿ ನೀಡಿದ್ದು, ಘಟನೆಗೆ ಸೂಕ್ತ ಕಾರಣ ನೀಡುವಂತೆ ನೀರಾವರಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಗೆ ಹಾನಿಗೆ ಒಳಗಾದ ರೈತರಿಗೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ಭರವಸೆ ನೀಡಿದರು.

  • ಮಳೆಗಾಗಿ ಗೊಂಬೆಗಳ ಮದುವೆ ಮಾಡಿಸಿದ್ರು ವಿಜಯಪುರ ಗ್ರಾಮದ ಜನತೆ

    ಮಳೆಗಾಗಿ ಗೊಂಬೆಗಳ ಮದುವೆ ಮಾಡಿಸಿದ್ರು ವಿಜಯಪುರ ಗ್ರಾಮದ ಜನತೆ

    ವಿಜಯಪುರ: ಅಲ್ಲಿ ಸುಂದರವಾಗಿ ಮದುವೆ ಸಮಾರಂಭ ಏರ್ಪಟ್ಟಿತ್ತು. ವಧುವರರ ಬಂಧುಗಳು, ವಾಲಗದವರು ರಾಗ ತಾಳದಲ್ಲಿ ತಲ್ಲಿನರಾಗಿ ಗಟ್ಟಿಮೇಳ ಬಾರಿಸುತ್ತಿದ್ದರೆ, ಬಾಣಸಿಗರು ನಾನಾ ಭಕ್ಷ್ಯಗಳ ತಯಾರಿಕೆಯಲ್ಲಿ ತೊಡಗಿದ್ದರು. ಹಿರಿಯರು ಇತರರ ಆಗಮನಕ್ಕಾಗಿ ಕೈಮುಗಿದು ಕರೆಯುತ್ತಿದ್ದರು. ಇಷ್ಟೆಲ್ಲಾ ನಡೆದಿದ್ದು ಗೊಂಬೆಗಳ ಮದುವೆ ಸಮಾರಂಭದಲ್ಲಿ.

    ಹೌದು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲ್ಲೂರ ಗ್ರಾಮದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಗ್ರಾಮಸ್ಥರು ಮಳೆಗಾಗಿ ಪ್ರಾರ್ಥಿಸಿ ಸಡಗರ ಸಂಭ್ರಮದಿಂದ ಗೊಂಬೆಗಳ ಮದುವೆ ಮಾಡಿ ವರುಣ ದೇವನಲ್ಲಿ ಸಮೃದ್ಧವಾಗಿ ಮಳೆ ಸುರಿಯಲಿ ಎಂದು ಬೇಡಿಕೊಂಡರು.

    ನಿಜವಾದ ಮದುವೆ ಸಮಾರಂಭ ಹೇಗೆ ನಡೆಯುತ್ತೋ ಹಾಗೆ ಇಲ್ಲಿಯೂ ನಡೆಯಿತು. ಆ ಗ್ರಾಮದ ಮಾರುತೇಶ್ವರ ದೇವಸ್ಥಾನದಲ್ಲಿ ಎದಿರುಗೊಳ್ಳುವ ಶಾಸ್ತ್ರ ಮುಗಿದು ಮೆರವಣಿಗೆ ಮೂಲಕ ವಧುವನ್ನು ರಾಮಲಿಂಗೇಶ್ವರ ದೇವಸ್ಥಾನಕ್ಕೆ ತಂದು ವಧುವರರ ಅರಿಷಿನ ಹಚ್ಚುವ, ಸುರಿಗೆ ಸುತ್ತುವ ಕಾರ್ಯ ನಡೆಯಿತು. ನಂತರ ಗರ್ಭ ಗುಡಿಯಲ್ಲಿ ದೇವರ ಅಕ್ಷತಾ ಕಾರ್ಯ ನಂತರ ದೇವಸ್ಥಾನದ ಹೊರ ಪ್ರದೇಶದಲ್ಲಿ ದೈವದ ಅಕ್ಷತಾ ಕಾರ್ಯ ನೆರವೇರಿತು.

    ನಂತರ ಮದುವೆಗೆಂದು ಬಂದವೆರೆಲ್ಲ ಹುಗ್ಗಿ ಅನ್ನ ಸಾರು ಭೋಜನ ಸವಿದರು. ಮದುವೆಗೆ ಮಂಗಳ ಹಾಡಿದರು. ಅಶೋಕ ಬಾಲಪ್ಪಗೋಳ ವಧುವಿನ ತಂಡದ ಮುಖ್ಯಸ್ಥನಾಗಿದ್ದರೆ, ನೀಲಪ್ಪ ವರನ ತಂಡದ ಮುಖ್ಯಸ್ಥರಾಗಿದ್ದರು.

    ಗ್ರಾಮೀಣ ಪ್ರದೇಶದಲ್ಲಿ ಗೊಂಬೆ ಮದುವೆ ಸೇರಿದಂತೆ ಕತ್ತೆ, ಕಪ್ಪೆ, ಪನ್ನೊಳಿಗೆ, ಚಿಕ್ಕ ಮಕ್ಕಳ ಮದುವೆ ಹೀಗೆ ನಾನಾ ತರದಲ್ಲಿ ಮದುವೆಗಳನ್ನು ಮಾಡುತ್ತಾರಂತೆ.

    ಹೀಗೆ ಕೆಲ ಗ್ರಾಮಗಳಲ್ಲಿ ಸುಮಾರು ವರ್ಷಗಳವರೆಗೆ ಮಳೆ ಬೀಳದಿದ್ದರೆ ಎಷ್ಟು ವರ್ಷಗಳಿಂದ ಮಳೆ ಬಿದ್ದಿರುವುದಿಲ್ಲವೋ ಅಷ್ಟು ವರ್ಷಗಳವರೆಗೆ ಮರಣ ಹೊಂದಿದವರ ಶವಗಳಿಗೆ ನೀರುಣಿಸುವ ಪದ್ದತಿ ಇದೆ ಎಂದು ಗ್ರಾಮದ ಕೆಲ ಹಿರಿಯರು ಹೇಳಿದ್ದಾರೆ.

    ಗ್ರಾಮೀಣರ ನಾನಾ ಆಚರಣೆಗಳು ಇಂದಿಗೂ ಜೀವಂತಿಕೆ ಉಳಿಸಿಕೊಂಡಿವೆ ಎಂಬುದು ಹುಲ್ಲೂರು ಗ್ರಾಮದಲ್ಲಿ ಜರುಗಿದ ಗೊಂಬೆಗಳ ಮದುವೆ ಸಾಕ್ಷಿಯಾಗಿದೆ.