Tag: ಮುನ್ನೆಚ್ಚರಿಕೆ

  • ಮಂಕಿಪಾಕ್ಸ್ ಎಚ್ಚರಿಕೆ – ಅಂತರಾಷ್ಟ್ರೀಯ ಪ್ರವೇಶ ಕೇಂದ್ರಗಳಲ್ಲಿ ಕಣ್ಗಾವಲು

    ಮಂಕಿಪಾಕ್ಸ್ ಎಚ್ಚರಿಕೆ – ಅಂತರಾಷ್ಟ್ರೀಯ ಪ್ರವೇಶ ಕೇಂದ್ರಗಳಲ್ಲಿ ಕಣ್ಗಾವಲು

    ನವದೆಹಲಿ: ಪ್ರಪಂಚದ ಕೆಲವು ದೇಶಗಳಲ್ಲಿ ಹೆಚ್ಚುತ್ತಿರುವ ಮಂಕಿಪಾಕ್ಸ್ ವೈರಸ್ ಪ್ರಕರಣಗಳಿಂದ ಎಲ್ಲೆಡೆ ಆತಂಕ ಹೆಚ್ಚುತ್ತಿದೆ. ಇದೀಗ ಭಾರತದಲ್ಲಿ ಮಂಕಿಪಾಕ್ಸ್ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರ ಎಲ್ಲಾ ಅಂತರಾಷ್ಟ್ರೀಯ ಪ್ರವೇಶ ಕೇಂದ್ರಗಳಲ್ಲಿ ಕಣ್ಗಾವಲನ್ನು ಇಟ್ಟಿದೆ.

    ಅಂತರಾಷ್ಟ್ರೀಯ ಪ್ರವೇಶ ಕೇಂದ್ರಗಳಾದ ವಿಮಾನ ನಿಲ್ದಾಣ, ಬಂದರುಗಳು ಹಾಗೂ ಭೂ ಗಡಿ ಪ್ರದೇಶಗಳಲ್ಲಿ ಕೇಂದ್ರ ವಿದೇಶದಿಂದ ಬರುವವರ ಮಾದರಿಗಳನ್ನು ಪರಿಶೀಲಿಸಲು ಆದೇಶ ನೀಡಿದೆ. ಆಫ್ರಿಕಾದಿಂದ ಬಂದ ಪ್ರಯಾಣಿಕರಲ್ಲಿ ರೋಗದ ಲಕ್ಷಣ ಕಂಡುಬಂದಲ್ಲಿ, ಅವರ ಮಾದರಿಗಳನ್ನು ಹೆಚ್ಚಿನ ತನಿಖೆಗೆ ಪುಣೆಯ ಅಂತರಾಷ್ಟ್ರೀಯ ವೈರಾಲಜಿ ಸಂಸ್ಥೆ(ಎನ್‌ಐವಿ)ಗೆ ಕಳುಹಿಸಲಾಗುತ್ತಿದೆ. ಇದನ್ನೂ ಓದಿ: ಸೆಕ್ಸ್‌ನಿಂದಲೂ ಹರಡಬಹುದು ಮಂಕಿಪಾಕ್ಸ್- ತಜ್ಞರಿಂದ ಎಚ್ಚರಿಕೆ

    ಈ ನಡುವೆ ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯುಹೆಚ್‌ಒ) ಮಂಕಿಪಾಕ್ಸ್ ಕಾಯಿಲೆ ಬಗ್ಗೆ ಚರ್ಚಿಸಲು ತುರ್ತು ಸಭೆಯನ್ನು ಕರೆದಿದೆ. ವೈರಸ್ ಹರಡಲು ಕಾರಣ ಹಾಗೂ ಅದನ್ನು ತಡೆಗಟ್ಟುವ ವಿಧಾನದ ಬಗ್ಗೆ ಡಬ್ಲ್ಯುಹೆಚ್‌ಒ ಚರ್ಚಿಸಲಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ

    ವರದಿಗಳ ಪ್ರಕಾರ ಈ ವೈರಸ್ ಸಲಿಂಗಕಾಮಿಗಳಲ್ಲಿ ಹರಡುವ ಅಪಾಯ ಹೆಚ್ಚಾಗಿದೆ. ಮೇ ತಿಂಗಳ ಆರಂಭದಲ್ಲಿ ಬ್ರಿಟನ್, ಸ್ಪೇನ್, ಬೆಲ್ಜಿಯಂ, ಇಟಲಿ, ಆಸ್ಟ್ರೇಲಿಯಾ, ಕೆನಡಾ ಸೇರಿದಂತೆ ಹಲವು ದೇಶಗಳಲ್ಲಿ ಮಂಕಿಪಾಕ್ಸ್ ವೈರಸ್ ಪ್ರಕರಣಗಳು ಕಂಡುಬಂದಿವೆ.

    ಮೇ 7 ರಂದು ಇಂಗ್ಲೆಂಡ್‌ನಲ್ಲಿ ಮಂಕಿಪಾಕ್ಸ್ ವೈರಸ್‌ನ ಮೊದಲ ಪ್ರಕರಣ ಪತ್ತೆಹಚ್ಚಲಾಗಿತ್ತು.

  • ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ, ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಕೊಡಗು ಡಿಸಿ ಸೂಚನೆ

    ಜೂನ್ ಮೊದಲ ವಾರದಲ್ಲಿ ಮುಂಗಾರು ಆರಂಭ, ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಕೊಡಗು ಡಿಸಿ ಸೂಚನೆ

    ಮಡಿಕೇರಿ: ಜೂನ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಸಾಧ್ಯತೆ ಇದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಸೂಚಿಸಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಸಂಬಂಧ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಬಳಿಕ ಮಾತನಾಡಿದ ಅವರು, ಮುಂಗಾರು ಸಂದರ್ಭದಲ್ಲಿ ಸಂಭವಿಸಬಹುದಾದ ಹಾನಿ ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ತಾಲೂಕುವಾರು ಪ್ರತ್ಯೇಕವಾಗಿ ಸಭೆ ನಡೆಸಿರು.

    ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಮಳೆ ಹಾನಿ ತಡೆಯುವ ನಿಟ್ಟಿನಲ್ಲಿ ಮುಂಚಿತವಾಗಿ, ಲಿಖಿತವಾಗಿ ಕುಟುಂಬಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು. ಕಂದಾಯ, ಪೊಲೀಸ್, ಪಂಚಾಯತ್ ರಾಜ್, ಅರಣ್ಯ, ಸೆಸ್ಕ್, ಲೋಕೋಪಯೋಗಿ ಹೀಗೆ ಹಲವು ಇಲಾಖೆಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಬೇಕು. ಮಳೆ ಹಾನಿ ಬಗ್ಗೆ ಕಾಲಕಾಲಕ್ಕೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಸೂಚಿಸಿದರು.

    ಸೂಕ್ಷ್ಮ ಪ್ರದೇಶಗಳಲ್ಲಿನ ಕುಟುಂಬಗಳನ್ನು ಪರಿಹಾರ ಕೇಂದ್ರಕ್ಕೆ ಸ್ಥಳಾಂತರಿಸುವುದು. ಸ್ಥಳೀಯ ಮಟ್ಟದಲ್ಲಿ ಟಾಸ್ಕ್‍ಪೊರ್ಸ್ ಸಮಿತಿ ಸಭೆ ನಡೆಸಿ, ಸೂಕ್ಷ್ಮ ಪ್ರದೇಶಗಳಿಗೆ ಎನ್‍ಡಿಆರೆಫ್ ತಂಡ ಭೇಟಿ ನೀಡುವುದು, ಪರಿಹಾರ ಕೇಂದ್ರ ಅಗತ್ಯವಿದ್ದಲ್ಲಿ ತೆರೆಯುವುದು. ಹೀಗೆ ಹಲವು ಕ್ರಮಗಳನ್ನು ಕೈಗೊಳ್ಳಬೇಕಿದೆ. ರಸ್ತೆ, ಸೇತುವೆ, ಮನೆ ಹಾನಿ ಬಗ್ಗೆ ಫೋಟೋ ಸಹಿತ ತಕ್ಷಣವೇ ಮಾಹಿತಿ ನೀಡುವುದು. ಭೂ ಕುಸಿತ ಉಂಟಾದಲ್ಲಿ ಹಾಗೂ ರಸ್ತೆ ಅಥವಾ ವಿದ್ಯತ್ ತಂತಿ ಮೇಲೆ ಮರ ಬಿದ್ದಲ್ಲಿ ತಕ್ಷಣವೇ ತೆರವುಗೊಳಿಸುವ ಕಾರ್ಯ ಮಾಡಬೇಕು ಎಂದರು.

    ತಹಶೀಲ್ದಾರ್ ಗೋವಿಂದರಾಜು ಮಾಹಿತಿ ನೀಡಿ, ಮುಂಗಾರು ಸಂಬಂಧ ಸೋಮವಾರಪೇಟೆ ತಾಲೂಕಿನಲ್ಲಿ ಅಗತ್ಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸೂಕ್ಷ್ಮ ಪ್ರದೇಶಗಳ 775 ಕುಟುಂಬಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ. ಕುಶಾಲನಗರ ನೆಲ್ಯಹುದಿಕೇರಿ, ಮಾದಾಪುರ, ಗರ್ವಾಲೆ, ಸೂರ್ಲಬಿ ಮತ್ತಿತ್ತರ ಕಡೆಯಲ್ಲಿ ಪ್ರವಾಹ ಉಂಟಾಗಲಿದ್ದು, ಈ ಪ್ರದೇಶದಲ್ಲಿನ ಜನರಿಗೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ. ಪರಿಹಾರ ಕೇಂದ್ರ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಭಾರೀ ಮಳೆಯಿಂದಾಗಿ ವಿದ್ಯುತ್ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇರುವುದರಿಂದ ಸೀಮೆಎಣ್ಣೆ ಪೂರೈಸಬೇಕಿದೆ ಎಂದು ತಹಶೀಲ್ದಾರ್ ಗೋವಿಂದರಾಜು ತಿಳಿಸಿದರು.

  • ಪಂಜಾಬ್‍ನಲ್ಲಿ ಶಾಲಾ ಕಾಲೇಜುಗಳು ಬಂದ್- ನೈಟ್ ಕಫ್ರ್ಯೂ ಜಾರಿ

    ಪಂಜಾಬ್‍ನಲ್ಲಿ ಶಾಲಾ ಕಾಲೇಜುಗಳು ಬಂದ್- ನೈಟ್ ಕಫ್ರ್ಯೂ ಜಾರಿ

    – 11 ಜಿಲ್ಲೆಗಳಲ್ಲಿ ಕಫ್ರ್ಯೂ ಜಾರಿ
    – ಚಿತ್ರಮಂದಿರಗಳಲ್ಲಿ ಶೆ.50ರಷ್ಟು ಭರ್ತಿ

    ಚಂಡೀಗಢ: ಕೊರೊನಾ ಸೋಂಕು ಹೆಚ್ಚಾಗಿರುವ ಕಾರಣದಿಂದಾಗಿ ಪಂಜಾಬ್‍ನಲ್ಲಿ ನೈಟ್ ಕಫ್ರ್ಯೂ ಹಾಗೂ 31ರವರೆಗೆ ಶಾಲಾ ಕಾಲೇಜನ್ನು ಮುಚ್ಚಲು ಆದೇಶಿಸಲಾಗಿದೆ.

    ಕೊರೊನ ಸೋಂಕು ಹೆಚ್ಚು ಆಗಿರುವ ಹಿನ್ನಲೆಯಲ್ಲಿ 8 ಜಿಲ್ಲೆಗಳಲ್ಲಿ ರಾತ್ರಿ ಕಫ್ರ್ಯೂವನ್ನು ವಿಧಿಸಲಾಗಿತ್ತು. ಇದೀಗ 11 ಜಿಲ್ಲೆಗಳಿಗೆ ಇದೆ ಆದೇಶವನ್ನು ಜಾರಿಗೊಳಿಸಲಾಗಿದೆ. ಸಭೆ, ಸಮಾರಂಭಗಳ ಮೇಲೆ ಸಂಪೂರ್ಣವಾದ ನಿಷೇಧವನ್ನು ವಿಧಿಸಲಾಗಿದೆ.

    ವೈದ್ಯಕೀಯ ಕಾಲೇಜುಗಳನ್ನು ಹೊರತುಪಡಿಸಿ ಉಳಿದೆಲ್ಲ ಶಿಕ್ಷಣ ಸಂಸ್ಥೆಗಳನ್ನು ಮಾರ್ಚ್ 31ರ ವರೆಗೆ ಮುಚ್ಚಬೇಕೆಂದು ಆದೇಶಿಸಲಾಗಿದೆ. ಮಾಲ್‍ಗಳಲ್ಲಿ 100 ಜನರಿಗೆ ಮಾತ್ರ ಅವಕಾಶವನ್ನು ಕೊಡಬೇಕು. ಚಿತ್ರಮಂದಿರಗಳಲ್ಲಿ ಶೆ.50ರಷ್ಟು ಮಾತ್ರ ಜನರನ್ನು ಸೇರಿಸಬೇಕು ಎಂದು ಆದೇಶಿಸಲಾಗಿದೆ.

    ಪಂಜಾಬ್‍ನಲ್ಲಿ 24 ಗಂಟೆಗಳ ಅವಧಿಯಲ್ಲಿ 2,387 ಕೊರೊನಾ ಪ್ರಕರಣಗಳು ವರಧಿಯಾಗಿದೆ. ರಾಜ್ಯದಲ್ಲಿ 2.05 ಲಕ್ಷ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 6,204 ಮಂದಿ ಮೃತಪಟ್ಟಿದ್ದಾರೆ.

  • ಕೊರೊನಾ ಮುನ್ನೆಚ್ಚರಿಕೆ, ಎಚ್1ಎನ್1 ಪ್ರಕರಣಗಳಲ್ಲಿ ಗಣನೀಯ ಇಳಿಕೆ- ಕೊರೊನಾಗೆ ಹೇಳಿ ಥ್ಯಾಂಕ್ಸ್

    ಕೊರೊನಾ ಮುನ್ನೆಚ್ಚರಿಕೆ, ಎಚ್1ಎನ್1 ಪ್ರಕರಣಗಳಲ್ಲಿ ಗಣನೀಯ ಇಳಿಕೆ- ಕೊರೊನಾಗೆ ಹೇಳಿ ಥ್ಯಾಂಕ್ಸ್

    ಉಡುಪಿ: ಮಹಾಮಾರಿ ಕೊರೊನಾ ದೈಹಿಕ ಮಾತ್ರವಲ್ಲದೆ, ಸಾಕಷ್ಟು ಸಮಸ್ಯೆಗಳನ್ನು ತಂದಿಟ್ಟು ವಿಶ್ವದ ಜನರನ್ನು ಜರ್ಜರಿತರನ್ನಾಗಿ ಮಾಡಿದೆ. ಈ ನಡುವೆ ಕುತೂಹಲಕಾರಿ ಅಂಶವೊಂದನ್ನು ಉಡುಪಿ ವೈದ್ಯರು ಬಿಚ್ಚಿಟ್ಟಿದ್ದು, ಕೊರೊನಾದಿಂದಾಗಿ ಎಚ್1ಎನ್1 ಅಂಟು ರೋಗ ಪ್ರಕರಣಗಳಲ್ಲಿ ಭಾರೀ ಇಳಿಕೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಮಹಾಮಾರಿ ಕೊರೊನಾ ಆರ್ಥಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರವನ್ನು ಅಲ್ಲಾಡಿಸಿ ಬಿಟ್ಟಿದೆ. ಇದರ ಮಧ್ಯೆಯೇ ಕೊರೊನಾ ಹಲವು ಪಾಠಗಳನ್ನು ಸಹ ಕಲಿಸಿದೆ. ಕೊರೊನಾದಿಂದಾಗಿ ಜನ ಆರೋಗ್ಯದ ವಿಚಾರದಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಿದ್ದು, ಇದರಿಂದಾಗಿ ಇತರೆ ಅಂಟು ರೋಗಗಳ ಪ್ರಕರಣಗಳಲ್ಲಿ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದಕ್ಕೆ ಉದಾಹರಣೆಯೇ ಎಚ್1ಎನ್1.

    ಈ ಬಗ್ಗೆ ಉಡುಪಿ ಕೊರೊನಾ ನೋಡೆಲ್ ಆಫೀಸರ್ ಡಾ.ಪ್ರಶಾಂತ್ ಭಟ್ ಮಾಹಿತಿ ನೀಡಿದ್ದು, ಕೋವಿಡ್ ಬಂದ ನಂತರ ಜನಸಾಮಾನ್ಯರಲ್ಲಿ ಸಾಕಷ್ಟು ಪಾಸಿಟಿವ್ ಬದಲಾವಣೆಗಳು ಆಗಿದೆ. ಶ್ವಾಸಕೋಶ ಸಂಬಂಧಿ ಖಾಯಿಲೆಗಳಲ್ಲಿ ಗಣನೀಯ ಇಳಿಕೆಯಾಗಿದೆ. ಟಿಬಿ, ನಿಮೋನಿಯಾದಂತಹ ಪ್ರಕರಣಗಳಲ್ಲಿ ಭಾರೀ ಇಳಿಕೆ ಕಂಡಿದೆ. 2019ರಲ್ಲಿ ಉಡುಪಿ ಜಿಲ್ಲೆಯಲ್ಲಿ 476 ಎಚ್1ಎನ್1 ಪ್ರಕರಣಗಳು ದಾಖಲಾಗಿದ್ದವು. ಆದರೆ 2020ರಲ್ಲಿ ಈ ಸಂಖ್ಯೆ 124ಕ್ಕೆ ಇಳಿಕೆಯಾಗಿದೆ ಎಂದು ತಿಳಿಸಿದ್ದಾರೆ.

    ಈ ಬದಲಾವಣೆಗೆ ಕಾರಣ ಮಾಸ್ಕ್, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ನಿಯಮಿತವಾಗಿ ಸ್ಯಾನಿಟೈಸರ್ ಬಳಸುವುದು. ಜನ ಮಾಸ್ಕ್ ಹಾಕುವುದರಿಂದ ಅಸ್ತಮಾ, ಅಂಟುರೋಗ ಅಲರ್ಜಿ ಕಡಿಮೆಯಾಗಿದೆ. ಹೊಟ್ಟೆ ಸಂಬಂಧಿ ರೋಗಗಳು, ನೀರಿನಿಂದ ಬರುವ ರೋಗಗಳು ಕಾಣಿಸಿಕೊಳ್ಳುತ್ತಿಲ್ಲ. ಈ ನಡುವೆ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಕಡಿಮೆಯಾಗಿದೆ. ಖಾಸಗಿ ಆಸ್ಪತ್ರೆಗಳ ವರದಿಗಳು ಜಿಲ್ಲಾ ವೈದ್ಯಾಧಿಕಾರಿಗಳ ಕೈಸೇರಿದ್ದು, ಅಲ್ಲಿಯೂ ಸಾಂಕ್ರಾಮಿಕ ರೋಗಿಗಳ ಸಂಖ್ಯೆ ತುಂಬಾ ಕಡಿಮೆಯಾಗಿದೆ ಎಂದು ವಿವರಿಸಿದ್ದಾರೆ.

    ಮಾಸ್ಕ್, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಪಾಲಿಸಿದರೆ ಒಳ್ಳೆಯವದು ಎಂದು ಸಾಬೀತಾಗಿದೆ. ಸರ್ಕಾರದ ಕೊರೊನಾ ನಿಯಮದಿಂದ ಶಾಲಾ ಮಕ್ಕಳಲ್ಲಿ ಕಂಡುಬರುವ ಶೀತ, ಕೆಮ್ಮು, ಜ್ವರ, ಕಜ್ಜಿ ಮತ್ತಿತರ ಅಂಟುರೋಗ ಸಂಪೂರ್ಣ ತಡೆಯಾಗಿದೆ. ಮಾಸ್ಕ್ ಸುಲಭವಾಗಿ ಸಿಗುವ ಮದ್ದು, ಯಾರೂ ಮಾಸ್ಕ್ ಬಗ್ಗೆ ತಾತ್ಸಾರ ಮಾಡದೆ ಬಳಸಿ ಎಂದು ಕೋವಿಡ್ 19 ವಿಶೇಷಾಧಿಕಾರಿ ಡಾ.ಪ್ರೇಮಾನಂದ ಹೇಳಿದರು.

  • ಮುಂದಿನ 24 ಗಂಟೆಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ!

    ಮುಂದಿನ 24 ಗಂಟೆಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ!

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

    ಕರಾವಳಿ ಭಾಗ ಹಾಗೂ ಮಲೆನಾಡಿನ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಭಾಗದಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಹೇಳಿದ್ದಾರೆ.

    ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ ದಲ್ಲಿ ವ್ಯಾಪಕ ಮಳೆಯಾಗಲಿದೆ. ಪಬ್ಲಿಕ್ ಟಿವಿಗೆ ಜೊತೆಗೆ ಮಾತನಾಡಿರುವ ಶ್ರೀನಿವಾಸ್ ರೆಡ್ಡಿ, ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ಇದರಿಂದಾಗಿ ನಗರದಲ್ಲಿ 100 ಮಳೆ ಮಾಪನ ಕೇಂದ್ರಗಳು ಮಾಡಲಾಗಿದೆ. ಮಳೆಯ ಬಗ್ಗೆ ಬಿಬಿಎಂಪಿ, ಕೆಎಸ್‍ಆರ್ ಟಿಸಿ, ಪೊಲೀಸ್ ಇಲಾಖೆ ಹಾಗೂ ವಾರ್ಡ್ ಮಟ್ಟಕ್ಕೂ ಮಾಹಿತಿ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ವರ್ಷ ಸುರಿದ ಭಾರೀ ಮಳೆ ಸಾಕಷ್ಟು ಅನಾಹುತಗಳನ್ನು ಸೃಷ್ಟಿ ಮಾಡಿತ್ತು. ಈ ವೇಳೆ ಅನೇಕ ಸಾವು ನೋವುಗಳು ಕೂಡ ಸಂಭವಿಸಿದ್ದವು. ಇದರಿಂದಾಗಿ ಎಚ್ಚೆತ್ತ ಸರ್ಕಾರ ರಾಜಕಾಲವೆ ತೆರವು ಕಾರ್ಯಚರಣೆ ಪ್ರಾರಂಭಿಸಿತ್ತು.

    ದೊಡ್ಡಬೊಮ್ಮಸಂದ್ರದಲ್ಲಿ ಸುಮಾರು 2 ಕಿ.ಮೀ. ರಾಜಕಾಲುವೆ ಒತ್ತುವರಿ ತೆರವು ಮಾಡಲಾಗಿದ್ದು, ಕಾರ್ಯಾಚರಣೆಯಲ್ಲಿ ಬಡವರ ಮನೆಗಳನ್ನು ಮುಲಾಜಿಲ್ಲದೆ ಕಿತ್ತು ಹಾಕಲಾಗಿತ್ತು. ಆದರೆ ಕಾಲುವೆ ತೆರವುಗೊಳಿಸಿ ನಂತರ ಬಿಬಿಎಂಪಿ ಸಿಬ್ಬಂದಿ ಈ ಕಡೆ ತಲೆ ಕೂಡ ಹಾಕಿಲ್ಲ. ಹೀಗಾಗಿ ರಾಜಕಾಲುವೆ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಇಲ್ಲಿನ ಜನರಿಗೆ ಮತ್ತೇ ಪ್ರವಾಹದ ಭೀತಿ ಎದುರಾಗಿದೆ.

    https://youtu.be/ItIVNBZd6AU