Tag: ಮುರುಗೇಶ ನಿರಾಣಿ

  • ಬಾದಾಮಿಯಲ್ಲಿ ITC ಪಂಚತಾರಾ ಹೋಟೆಲ್ ಸ್ಥಾಪನೆಗೆ ಸಚಿವ ನಿರಾಣಿ ಸಲಹೆ

    ಬಾದಾಮಿಯಲ್ಲಿ ITC ಪಂಚತಾರಾ ಹೋಟೆಲ್ ಸ್ಥಾಪನೆಗೆ ಸಚಿವ ನಿರಾಣಿ ಸಲಹೆ

    ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಬಾದಾಮಿಯಲ್ಲಿ (Badami) ಪಂಚತಾರಾ ಹೋಟೆಲ್ (Hotel Panchatara) ಸ್ಥಾಪಿಸುವಂತೆ ಐಟಿಸಿ ಮುಖ್ಯಸ್ಥರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್.ನಿರಾಣಿ (Murugesh Nirani) ಸಲಹೆ ನೀಡಿದರು.

    ಜಾಗತಿಕ ಹೂಡಿಕೆದಾರ (Industry Conference) ಸಮಾವೇಶದ ರೋಡ್‌ಶೋ ಭಾಗವಾಗಿ ದೆಹಲಿಯಲ್ಲಿಂದು ನಡೆದ ಸಭೆಯಲ್ಲಿ, ಐಟಿಸಿಯ (ITC) ಸಿಎಂಡಿ ಸಂಜೀವ್ ಪುರಿ, ಕಂಪನಿಯ ಉಪಾಧ್ಯಕ್ಷ ಅನಿಲ್ ರಜಪುತ್ ಅವರನ್ನು ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದರು. ಇದನ್ನೂ ಓದಿ: ಪುಟಿನ್ ಕನಸಿನ ಸೇತುವೆ ಧ್ವಂಸಗೊಳಿಸಿದ್ದಕ್ಕೆ ಕೆರಳಿದ ರಷ್ಯಾ – ಉಕ್ರೇನ್ ಮೇಲೆ ಮತ್ತಷ್ಟು ತೀವ್ರ ದಾಳಿ

    ಬಾದಾಮಿ, ಐಹೊಳೆ ಮತ್ತು ಪಟ್ಟದಕಲ್ಲು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಾಗಿದ್ದು, ಈ ಭಾಗದಲ್ಲಿ ಪಂಚತಾರಾ ಹೋಟೆಲ್ ಸ್ಥಾಪಿಸಿದರೆ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಆದರೆ ಹೋಟೆಲ್ (Hotel) ಸ್ಥಾಪನೆಯ ಸಾಧ್ಯತೆ ಬಗ್ಗೆ ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಐಟಿಸಿ ಮುಖ್ಯಸ್ಥ ಸಂಜೀವ್ ಪುರಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ಹಗರಣ- ಮತ್ತೋರ್ವ ಟಿಎಂಸಿ ಶಾಸಕ ಬಂಧನ

    ಕರ್ನಾಟಕದಲ್ಲಿ ಹೂಡಿಕೆ ಹಾಗೂ ಉದ್ಯಮ ವಿಸ್ತರಣೆಗೆ ಇರುವ ಅವಕಾಶಗಳ ಮಾಹಿತಿ ನೀಡಿದ ಸಚಿವರು, ನವೆಂಬರ್ 2 ರಿಂದ 4ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಔಪಚಾರಿಕವಾಗಿ ಆಹ್ವಾನಿಸಿದರು.

    ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ (Industry) ಇಲಾಖೆ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ, ಐಕೆಎಫ್ ಮಂಡಳಿ ಸದಸ್ಯರು, ಎಫ್‌ಕೆಸಿಸಿ ಅಧ್ಯಕ್ಷ ಉಲ್ಲಾಸ್ ಕಾಮತ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕಲಬುರಗಿ ವಿಮಾನ ನಿಲ್ದಾಣ ಬಳಿ 1,000 ಎಕರೆ ಜಮೀನು ಭೂಸ್ವಾಧೀನ: ಸಚಿವ ನಿರಾಣಿ

    ಕಲಬುರಗಿ ವಿಮಾನ ನಿಲ್ದಾಣ ಬಳಿ 1,000 ಎಕರೆ ಜಮೀನು ಭೂಸ್ವಾಧೀನ: ಸಚಿವ ನಿರಾಣಿ

    ಕಲಬುರಗಿ: ಜಿಲ್ಲೆಯಲ್ಲಿ ಕೈಗಾರಿಕೆಗಳು ಒಂದೇ ಕಡೆ ಇರುವಂತೆ ಕೈಗಾರಿಕೆ ಹಬ್ ಮಾಡಲು ಕಲಬುರಗಿ ವಿಮಾನ ನಿಲ್ದಾಣ ಬಳಿ 1,000 ಎಕರೆ ಭೂಮಿ ಭೂಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ ನಿರಾಣಿ ಹೇಳಿದರು.

    ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವದ ನಿಮಿತ್ತ ರಾಷ್ಟ್ರಧ್ವಜಾರೋಹಣ ಮಾಡಿ, ಪರೇಡ್ ಕಮಾಂಡರ್‌ ಡಿ.ಎ.ಆರ್ ಮೀಸಲು ಪಡೆಯ ಆರ್.ಪಿ.ಐ ಹಣಮಂತ ನಾಯಕ ಮತ್ತು ಸಹಾಯಕ ಪರೇಡ್ ಕಮಾಂಡರ್‌ ಆರ್.ಎಸ್.ಐ. ದುರ್ಗಾಸಿಂಹ ನೇತೃತ್ವದ ವಿವಿಧ 11 ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

    ರಾಜ್ಯದಲ್ಲಿ ಉದ್ಯೋಗ ಸೃಜನೆಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದ್ದು, ಇದಕ್ಕಾಗಿ ಉದ್ಯಮ ಸ್ನೇಹಿ ಕೈಗಾರಿಕಾ ನೀತಿ ಜಾರಿಗೊಳಿಸಲಾಗಿದೆ. ನೇರ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕಳೆದ ವರ್ಷದ ಮೊದಲನೇ ತ್ರೈಮಾಸಿಕದಲ್ಲಿ ದೇಶದಲ್ಲಿನ ಒಟ್ಟು ಪಾಲಿನಲ್ಲಿ ಶೇ.42 ರಷ್ಟು ಕರ್ನಾಟಕಕ್ಕೆ ಲಭಿಸಿದೆ ಎಂದರು.

    ದಾವೋಸ್ ಆರ್ಥಿಕ ಶೃಂಗ ಫಲಪ್ರದವಾಗಿದ್ದು, ಮುಂದಿನ 3-4 ತಿಂಗಳಿನಲ್ಲಿ 1 ಲಕ್ಷ ಕೋಟಿ ರೂ. ರಾಜ್ಯದಲ್ಲಿ ಹೂಡಿಕೆಯಾಗಲಿದೆ. ಇದಲ್ಲದೆ ಬರುವ ನವೆಂಬರ್ 2 ರಿಂದ 4ರ ವರೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿಶ್ವ ಬಂಡವಾಳದಾರರ ಸಮಾವೇಶ ಆಯೋಜಿಸಿದ್ದು, 5 ಲಕ್ಷ ಕೋಟಿ ಹೂಡಿಕೆ ನಿರೀಕ್ಷೆ ಹೊಂದಿದ್ದೇವೆ. ಇದಕ್ಕಾಗಿ ಜಪಾನ್, ದಕ್ಷಿಣ ಕೋರಿಯಾ ದೇಶದಲ್ಲಿ ಈಗಾಗಲೇ ರೋಡ್ ಶೋ ಮಾಡಿ ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿನ ಕೈಗಾರಿಕೆ ಸ್ನೇಹಿ ವಾತಾವರಣದ ಬಗ್ಗೆ ಪ್ರತಿಷ್ಠಿತ ಕಂಪನಿಗಳಿಗೆ ಮನವರಿಕೆ ಮಾಡಿ ಆಹ್ವಾನ ನೀಡಿದ್ದೇವೆ ಎಂದು ಸಚಿವ ಡಾ.ಮುರುಗೇಶ ನಿರಾಣಿ ತಿಳಿಸಿದರು.

    ಸ್ವಾತಂತ್ರ್ಯದ ಅಮೃತ ಮಹೋತ್ಸವ ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ, ಬಲಿದಾನ ನೀಡಿದ ಮಹಾನ್ ಪುರುಷರನ್ನು ತಮ್ಮ ಭಾಷಣದಲ್ಲಿ ಸ್ಮರಿಸಿದ ಸಚಿವರು ದೇಶಭಕ್ತಿ ಹೆಚ್ಚಿಸಲು ಕರೆ ನೀಡಿದ ಹರ್ ಘರ್ ತಿರಂಗಾ ಅಭಿಯಾನದಡಿ ಕಳೆದ ಮೂರು ದಿನಗಳಿಂದ ಜಿಲ್ಲೆಯ ಪ್ರತಿ ಮನೆ-ಮನೆಗಳ ಮೇಲೆ, ಸರ್ಕಾರಿ ಕಚೇರಿ, ಶಾಲಾ-ಕಾಲೇಜು, ಪಂಚಾಯತಿ, ಅಂಗನವಾಡಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಜಿಲ್ಲೆಯ ಜನತೆ ಅತೀ ಉತ್ಸಾಹದಿಂದ ಈ ಅಭಿಯಾನದಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಿದ್ದಾರೆ. ಇದಕ್ಕಾಗಿ ಅಭಿನಂದನೆ ಸಲ್ಲಿಸುವೆ ಎಂದರು. ಇದನ್ನೂ ಓದಿ: ರಾಷ್ಟ್ರದ ಉನ್ನತಿಯಲ್ಲಿ ಪ್ರಧಾನಿ ಮೋದಿಯವರ ಕೊಡುಗೆ ಅನನ್ಯ: ಬಾಲಚಂದ್ರ ಜಾರಕಿಹೊಳಿ

    ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಡಿ.ಬಿ.ಗೆ ದಾಖಲೆ ಪ್ರಮಾಣದಲ್ಲಿ 3,000 ಕೋಟಿ ರೂ. ಅನುದಾನ ನೀಡಲಾಗಿದೆ. ಇಡೀ ದೇಶ ಸ್ವಾತಂತ್ರ್ಯ ಪಡೆದರು. ಕಲ್ಯಾಣ ಕರ್ನಾಟಕ ಮಾತ್ರ ಒಂದು ವರ್ಷ ಒಂದು ತಿಂಗಳ ತಡವಾಗಿ ಸ್ವಾತಂತ್ರ್ಯದ ರುಚಿ ಕಂಡಿದೆ. ಹೀಗಾಗಿ ಇದೇ ಸೆಪ್ಟೆಂಬರ್ 17 ರಂದು ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವಿಜೃಂಭಣೆಯಿಂದ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ನಡೆಸಲು ಉದ್ದೇಶಿಸಿದೆ ಎಂದರು.

    ಜಿಲ್ಲೆಯಲ್ಲಿ ಇತ್ತೀಚಿನ ಅತಿವೃಷ್ಠಿಯಿಂದ 1860ಕ್ಕೂ ಹೆಚ್ಚಿನ ಮನೆಗಳಿಗೆ ನೀರು ನುಗ್ಗಿದ್ದು, ಈ ಪೈಕಿ 1400ಕ್ಕೂ ಹೆಚ್ಚಿನ ಫಲಾನುಭವಿಗಳಿಗೆ 10 ಸಾವಿರ ರೂ. ತಕ್ಷಣ ಪರಿಹಾರ ನೀಡಲಾಗಿದೆ. ಮಳೆಯಿಂದ ಜೀವ ಕಳೆದುಕೊಂಡ 6 ಮೃತರ ಅವಲಂಭಿತರಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿದೆ. ಜಿಲ್ಲೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶ ಬೆಳೆ ಹಾನಿ ಅಂದಾಜಿಸಿದ್ದು, ಜಂಟಿ ಸಮೀಕ್ಷೆ ಮಾಡಲಾಗುತ್ತಿದೆ. ನೆರೆ ಹಾವಳಿ ಪರಿಹಾರಕ್ಕೆ ಡಿ.ಸಿ. ಖಾತೆಯಲ್ಲಿ 41 ಕೋಟಿ ರೂ. ಹಣ ಇದೆ. ಹೀಗಾಗಿ ನೆರೆ ಹಾವಳಿ ಪರಿಹಾರಕ್ಕೆ ಅನುದಾನದ ಕೊರತೆಯಿಲ್ಲ ಎಂದು ಭರವಸೆ ನೀಡಿದರು.

    ಸ್ಪಂದನ ಕಲಬುರಗಿಗೆ ಮೆಚ್ಚುಗೆ: ಸಾರ್ವಜನಿಕರ ಕುಂದುಕೊರತೆಗಳನ್ನು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಮಕ್ಷಮ ಆಲಿಸುವ, ವಿವಿಧ ಸೌಲಭ್ಯಗಳನ್ನು ವಿತರಿಸುವ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಒದಗಿಸುವ ಸ್ಪಂದನ ಕಲಬುರಗಿ ಎಂಬ ವಿನೂತನ ಕಾರ್ಯಕ್ರಮ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಜಿಲ್ಲೆಯಲ್ಲಿ ಪ್ರಾರಂಭಿಸಿದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು ಇದನ್ನು ಜಿಲ್ಲಾ ಪಂಚಾಯತಿ ಕ್ಷೇತ್ರಕ್ಕೂ ವಿಸ್ತರಣೆಗೆ ಸಲಹೆ ನೀಡಿದರು. ಇದನ್ನೂ ಓದಿ: ಸ್ವಾತಂತ್ರ‍್ಯ ದಿನದಂದೇ ರೈತರ ಪ್ರತಿಭಟನೆ – ದರದರನೆ ಎಳೆದೊಯ್ದ ಪೊಲೀಸರು

    Live Tv

    [brid partner=56869869 player=32851 video=960834 autoplay=true]

  • ತಂದೆಯಂತೆಯೇ ಬೊಮ್ಮಾಯಿ ಕೂಡ ಕೇಂದ್ರದಲ್ಲಿ ಮಂತ್ರಿಯಾಗ್ತಾರೆ: ನಿರಾಣಿ

    ತಂದೆಯಂತೆಯೇ ಬೊಮ್ಮಾಯಿ ಕೂಡ ಕೇಂದ್ರದಲ್ಲಿ ಮಂತ್ರಿಯಾಗ್ತಾರೆ: ನಿರಾಣಿ

    ಹಾವೇರಿ: ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿ ಅಧಿಕಾರ ಪೂರ್ಣಗೊಳಿಸೋದು ಮಾತ್ರವಲ್ಲ ಅವರ ತಂದೆಯಂತೆಯೇ ಬೊಮ್ಮಾಯಿ ಅವರು ಸಹ ಕೇಂದ್ರದಲ್ಲಿ ಮಂತ್ರಿ ಆಗುತ್ತಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಂಗಾರತಿ ಮಾಡಿದಂತೆ ಹರಿಹರದಲ್ಲೂ ತುಂಗಾರತಿ ಆಗಬೇಕು ಅನ್ನುವ ನಿಟ್ಟಿನಲ್ಲಿ ಹಣಕಾಸಿನ ಸಹಾಯ ಮಾಡೋದಾಗಿ ಸಿಎಂ ಹೇಳಿದ್ದಾರೆ. ಆ ನಿಟ್ಟಿನಲ್ಲಿ ಕೆಲಸಗಳು ಹರಿಹರದಲ್ಲಿ ಪ್ರಾರಂಭವಾಗಿವೆ. ಸಮಾಜದ ಮೇಲಿನ ಅಭಿಮಾನದಿಂದ ಎರಡು ಎಕರೆ ಜಮೀನು ನೀಡಿ, ಸಮುದಾಯ ಭವನಕ್ಕೆ ಸಿಎಂ ಎರಡು ಕೋಟಿ ರೂಪಾಯಿ ಕೊಟ್ಟಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

    ಈ ಭಾಗಕ್ಕೆ ಕಿತ್ತೂರು ಕರ್ನಾಟಕ ಅಂತಾ ಸಿಎಂ ಘೋಷಣೆ ಮಾಡಿದರು. ಕಿತ್ತೂರಿನಲ್ಲಿ ಮೊದಲಿನ ಅರಮನೆ ಮಾದರಿಯಲ್ಲಿ ಅರಮನೆ ನಿರ್ಮಾಣಕ್ಕೆ ಸಿಎಂ ಹಣ ನೀಡಿ, ಈಗಾಗಲೇ ೫೦ ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ೨೦೧೮ರಲ್ಲಿ ಶಿಗ್ಗಾಂವಿಗೆ ಚುನಾವಣೆ ಪ್ರಚಾರಕ್ಕೆ ಬಂದಿದ್ದೆ. ಆಗಲೇ ನಾನು ನೀವು ವೋಟು ಹಾಕ್ತಿರೋದು ಬರಿ ಶಾಸಕ ಆಗೋರಿಗೆ ಅಲ್ಲ. ಅದು ಸಿಎಂ ಆಗೋರಿಗೆ ಅಂತಾ ಹೇಳಿದ್ದೆ ಅದು ನಿಜವಾಗಿದೆ ಎಂದರು. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ದಾಂಧಲೆ – ರಾತ್ರಿ ಏನೇನು ಮಾಡಿದ್ದಾರೆ?

    ಕೆಲವರು ಕರಿ ಬಾಯಿಯವರು ಏನೇನೋ ಹೇಳ್ತಾರೆ. ಬಸವರಾಜ ಅವರು ಪೂರ್ಣ ಅವಧಿಯವರೆಗೆ ಸಿಎಂ ಆಗಿರ್ತಾರೆ. ಸಿಎಂ ಆಗಿ ಅಧಿಕಾರ ಪೂರ್ಣಗೊಳಿಸೋದು ಮಾತ್ರವಲ್ಲ ಅವರ ತಂದೆಯಂತೆಯೇ ಬಸವರಾಜ ಬೊಮ್ಮಾಯಿ ಕೇಂದ್ರದಲ್ಲಿ ಮಂತ್ರಿ ಆಗ್ತಾರೆ. ನಿರಾಣಿ ಏಕಾಏಕಿ ಉದ್ಯಮಿದಾರ ಆಗಿಲ್ಲ. ನಿಮ್ಮ ರೀತಿ ಕೃಷಿ ಕೆಲಸ ಮಾಡಿಕೊಂಡು ಮೇಲೆ ಬಂದವನು ಎಂದು ತಿಳಿಸಿದರು.

  • ಭವಿಷ್ಯದಲ್ಲಿ ಮುರುಗೇಶ ನಿರಾಣಿ ಸಿಎಂ ಆಗಬಹುದು: ಹಾಲಪ್ಪ ಆಚಾರ್

    ಭವಿಷ್ಯದಲ್ಲಿ ಮುರುಗೇಶ ನಿರಾಣಿ ಸಿಎಂ ಆಗಬಹುದು: ಹಾಲಪ್ಪ ಆಚಾರ್

    ಕೊಪ್ಪಳ: ಭವಿಷ್ಯದಲ್ಲಿ ಮುರುಗೇಶ ನಿರಾಣಿ ಸಿಎಂ ಆಗಬಹುದು ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವ ಹಾಲಪ್ಪಆಚಾರ್ ಭವಿಷ್ಯ ನುಡಿದಿದ್ದಾರೆ.

    ಸಿಎಂ ಬದಲಾವಣೆ ಬಗ್ಗೆ ಗ್ರಾಮೀಣ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾವಣೆ ಬಗ್ಗೆ ಸಚಿವ ಈಶ್ವರಪ್ಪ ಅವರೊಂದಿಗೆ ನಾನು ಮಾತನಾಡಿದ್ದೇನೆ. ಭವಿಷ್ಯದಲ್ಲಿ ಮುರುಗೇಶ ನಿರಾಣಿ ಸಿಎಂ ಆಗಬಹುದು ಎಂದಿದ್ದಾರೆ. ಹಾಗೆಂದ ಮಾತ್ರಕ್ಕೆ ಈಗಲೇ ಸಿಎಂ ಬದಲಾವಣೆ ಅಂತಾ ಅಲ್ಲ. ನಿರಾಣಿ ಅವರಿಗೆ ಸಣ್ಣ ವಯಸ್ಸು. ಮುಂದೆ ಯಾವಾಗಲೋ ಆಗಬಹುದು ಅಂತಾ ಹೇಳಿರಬಹುದು. ಅದಕ್ಕೆ ನಾವು ಇವತ್ತೇ ಬದಲಾವಣೆ ಅಂತಾ ಅರ್ಥ ಮಾಡಿಕೊಳ್ಳಬೇಡಿ. ಬಿಜೆಪಿ ವ್ಯಕ್ತಿ ಆಧಾರಿತ ಪಕ್ಷ ಅಲ್ಲ ಎಂದು ಹೇಳಿದರು. ಇದನ್ನೂ ಓದಿ: ಎವರ್ ಗ್ರೀನ್ ಹೀರೋಯಿನ್ ಸುಧಾರಾಣಿ ಇನ್ಮುಂದೆ ಡಾ.ಸುಧಾರಾಣಿ

    ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆ ಪ್ರತಿಕ್ರಿಯೆ ನೀಡಿದ ಅವರು, ಕೊಪ್ಪಳ – ರಾಯಚೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ. ಎಲ್ಲ ಸ್ಥಳೀಯ ಸಂಸ್ಥೆ ಸದಸ್ಯರು ಬಿಜೆಪಿ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಒಟ್ಟು 6,249 ಮತಗಳಿವೆ ಈ ಪೈಕಿ.ಶೇ 70ರಷ್ಟು ಮತ ಪಡೆಯುತ್ತೇವೆ. ಕೇಂದ್ರ, ರಾಜ್ಯ ಸರ್ಕಾರ ಮಾಡಿದ ಕೆಲಸ ಮುಂದಿಟ್ಟುಕೊಂಡು ಮತ ಕೇಳುತ್ತೇವೆ.  ಇದನ್ನೂ ಓದಿ:   ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು

    ಓಮಿಕ್ರಾನ್ ಹರಡುವ ಆತಂಕದ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಹಾಲಪ್ಪ, ಈಗಿರುವ ಕೋವಿಡ್ ಮಾರ್ಗಸೂಚಿ ಕಟ್ಟು ನಿಟ್ಟಾಗಿ ಜಾರಿಗೆ ಮಾಡುತ್ತೇವೆ. ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕೊರೊನಾ ಬಗ್ಗೆ ಇಂದೇ ವಿಶೇಷ ಸಭೆ ಕರೆದು ಚರ್ಚೆ ಮಾಡುತ್ತೇವೆ. ಇಡೀ ರಾಜ್ಯದಲ್ಲಿ ಓಮಿಕ್ರಾನ್ ಪತ್ತೆ ಆಗಿರುವ ಮಾಹಿತಿ ಇಲ್ಲ ಎಂದರು.