ಚಿತ್ರದುರ್ಗ: ಲೈಂಗಿಕ ಕಿರುಕುಳದ ಆರೋಪದ ಮೇಲೆ ಕಾನೂನು ಹೋರಾಟ ನಡೆಸುತ್ತಿರುವ ಮುರುಘಾ ಶ್ರೀಗಳಿಗೆ (Murugha Shri) ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಮುರುಘಾ ಮಠದಿಂದ (Murugha Mutt) ಇಬ್ಬರು ಬಾಲಕರು ನಾಪತ್ತೆಯಾಗಿದ್ದಾರೆ.
ಜಯದೇವ ಹಾಸ್ಟೆಲ್‌ನಲ್ಲಿ ಇದ್ದರು. ಶಾಲೆಗೆ ತೆರಳಿದ್ದ ವಿದ್ಯಾರ್ಥಿಗಳು ಸಂಜೆ ಹಾಸ್ಟೆಲ್‌ಗೆ ಬಂದಿಲ್ಲ. ಈ ಬಗ್ಗೆ ಹಾಸ್ಟೆಲ್ ಸಿಬ್ಬಂದಿ ವಿಚಾರಿಸಿದ್ದಾರೆ. ವಿದ್ಯಾರ್ಥಿಗಳು ಶಾಲೆಗೂ ಹೋಗದೇ, ಹಾಸ್ಟೆಲ್‌ಗೂ ಬಾರದೇ ನಾಪತ್ತೆಯಾಗಿರುವುದು ಗೊತ್ತಾಗಿದೆ.
ಈ ಕುರಿತು ಹಾಸ್ಟೆಲ್ ಸಿಬ್ಬಂದಿ, ಪೋಷಕರ ಗಮನಕ್ಕೆ ತಂದಿದ್ದಾರೆ. ಮಕ್ಕಳು ಮನೆಗೂ ಬಂದಿಲ್ಲ ಎಂದು ಪೋಷಕರು ತಿಳಿಸಿದ್ದಾರೆ. ಪೋಷಕರ ಸೂಚನೆ ಮೇರೆಗೆ ಹಾಸ್ಟೆಲ್ ಸಿಬ್ಬಂದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ (Chitradurga) ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ವಿರುದ್ಧ ಲೋಕಾಯುಕ್ತಕ್ಕೆ ದೂರು
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮುರುಘಾ ಮಠದ ಶ್ರೀಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.
Live Tv
[brid partner=56869869 player=32851 video=960834 autoplay=true]
ಚಿತ್ರದುರ್ಗ: ಮುರುಘಾ ಶರಣರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾದ ಬೆನ್ನಲ್ಲೇ ಮಠದ ಹಾಸ್ಟೆಲ್ ವಿದ್ಯಾರ್ಥಿನಿಯರ ಭವಿಷ್ಯದ ಬಗ್ಗೆ ಚಿಂತೆ ಎದುರಾಗಿದೆ. ಮುರುಘಾ ಮಠದಲ್ಲಿರುವ ವಿದ್ಯಾರ್ಥಿನಿಯರನ್ನು ಬೇರೆಡೆಗೆ ಶಿಫ್ಟ್ ಮಾಡುವ ಕುರಿತು ಮಕ್ಕಳ ಹಕ್ಕು ಆಯೋಗ ಚಿಂತಿಸಿದೆ.
ಸ್ವಾಮೀಜಿ ಬಂಧನದ ಬೆನ್ನಲ್ಲೆ ಮಠದ ವಿದ್ಯಾರ್ಥಿನಿಯರ ಭವಿಷ್ಯದತ್ತ ಮಕ್ಕಳ ಆಯೋಗ ಚಿಂತನೆ ನಡೆಸಿದೆ. ಸದ್ಯಕ್ಕೆ ವಿದ್ಯಾರ್ಥಿನಿಯರನ್ನು ಮೊರಾರ್ಜಿ ದೇಸಾಯಿ ಹಾಸ್ಟೆಲ್‌ಗೆ ಶಿಫ್ಟ್ ಮಾಡುವ ನಿರ್ಧಾರ ಕೈಗೊಂಡಿದೆ. ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ತೊಡಕಾಗದಂತೆ ಕ್ರಮಕೈಗೊಳ್ಳಲಾಗುವುದು ಎಂದು ʼಪಬ್ಲಿಕ್ ಟಿವಿʼಗೆ ಆಯೋಗ ತಿಳಿಸಿದೆ. ಇದನ್ನೂ ಓದಿ: ಸಾಯಿಬಾಬಾನ 3ನೇ ಅವತಾರ ಅಂತ ಜನರಿಗೆ ವಂಚನೆ – ನಕಲಿ ಬಾಬಾ ವಿರುದ್ಧ FIR
125 ವಿದ್ಯಾರ್ಥಿನಿಯರು ಹಾಸ್ಟೆಲ್‌ನಲ್ಲಿ ಇದ್ದರು. ಅವರ ಪೈಕಿ ಸುಮಾರು ಅರ್ಧಕ್ಕರ್ಧ ವಿದ್ಯಾರ್ಥಿನಿಯರು ಹಬ್ಬಕ್ಕೆಂದು ಊರಿಗೆ ಹೋಗಿದ್ದು, ವಾಪಸ್ಸಾಗಿಲ್ಲ. ಹೀಗಾಗಿ ಅವರು ಬಂದ ಬಳಿಕ ಎಲ್ಲಾ ವಿದ್ಯಾರ್ಥಿನಿಯರನ್ನು ಆಯಾಯಾ ಜಿಲ್ಲೆಯ ಮೊರಾರ್ಜಿ ದೇಸಾಯಿ ಹಾಸ್ಟೆಲ್‌ಗೆ ಶಿಫ್ಟ್ ಮಾಡಲಾಗುವುದು ಎಂದು ಆಯೋಗ ಮಾಹಿತಿ ನೀಡಿದೆ.
ವಿವಿಧ ಜಿಲ್ಲೆಗಳಿಂದ ಮಕ್ಕಳು ಬಂದಿದ್ದಾರೆ. ಆದ್ದರಿಂದ ಆಯಾಯ ಜಿಲ್ಲೆಯ ಮಕ್ಕಳಿಗೆ ಅವರವರ ಜಿಲ್ಲೆಯಲ್ಲಿಯೇ ವ್ಯವಸ್ಥೆ ಮಾಡಲಾಗುವುದು. ಮಕ್ಕಳಿಗೆ ಆತಂಕದ ವಾತಾವರಣ ಇರಬಾರದು ಎನ್ನುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದೆ. ಇದನ್ನೂ ಓದಿ: ಮುರುಘಾ ಶ್ರೀಗಳ ಪ್ರಕರಣದಲ್ಲಿ ರಾಜಕೀಯ ಪಕ್ಷಗಳ ಎಚ್ಚರಿಕೆಯ ಹೆಜ್ಜೆ
Live Tv
[brid partner=56869869 player=32851 video=960834 autoplay=true]
ರಾಮನಗರ: ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಚನ್ನಪಟ್ಟಣದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಐದಾರು ತಿಂಗಳಿಂದ ಇಂತಹ ಆರೋಪಗಳ ಬಗ್ಗೆ ಚರ್ಚೆಯಾಗುತ್ತಿದೆ. ಈ ವಿಚಾರದ ಬಗ್ಗೆ ಆರಂಭಿಕ ಹಂತದಲ್ಲೇ ಮುಂಜಾಗ್ರತೆ ವಹಿಸಬೇಕು. ಇದರಿಂದ ಧಾರ್ಮಿಕ ಕ್ಷೇತ್ರಗಳ ಮೇಲೆ ಬೇರೆ ರೀತಿಯ ಪರಿಣಾಮ ಬೀರಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಸಂಘದ ಚುನಾವಣೆ – ಯುವತಿಯರ ಕಾಲಿಗೆ ಬಿದ್ದು ವೋಟು ಕೇಳಿದ ಯುವಕ
ಮೋದಿಗಿಂತ ಕಡಿಮೆಯಿಲ್ಲ ಅಂತ ತೋರಿಸೋಕೆ ಹೊರಟಿದ್ದಾರೆ:
ಇದೇ ವೇಳೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ವಿಚಾರದಲ್ಲಿ ಪ್ರತಾಪ್‌ಸಿಂಹ ಫೇಸ್ಬುಕ್ ಲೈವ್ ಕುರಿತು ಮಾತನಾಡಿದ ಅವರು, ಪ್ರತಾಪ್ ಸಿಂಹ ಪ್ರಧಾನಿ ಮೋದಿಗಿಂತ ಕಡಿಮೆ ಇಲ್ಲ ಎಂದು ತೋರಿಸೋಕೆ ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.
ಕಾಮಗಾರಿ ಬಗ್ಗೆ ಸರ್ಟಿಫಿಕೇಟ್ ಕೊಡುವ ಕೆಲಸ ಅವರದ್ದಲ್ಲ. ದೇವೇಗೌಡರು ಪ್ರಧಾನಿಯಾದ ಕಾಲದಲ್ಲಿ ಅಸ್ಸಾಂನಲ್ಲಿ ಒಂದು ಬ್ರಿಡ್ಜ್ ಕಟ್ಟಿಸಿದ್ರು. 1997ರಲ್ಲಿ ಬ್ರಿಡ್ಜ್ ಶಂಕುಸ್ಥಾಪನೆ ನೆರವೇರಿಸಿದ್ದರು. ಅದಾದ ಬಳಿಕ ಮೋದಿ ಅವರು ಇತ್ತೀಚೆಗೆ ಒಬ್ಬರೇ ನಡೆದುಕೊಂಡು ಹೋಗಿ ಉದ್ಘಾಟನೆ ಮಾಡಿದ್ರು. ಪ್ರತಾಪ್‌ಸಿಂಹ ಅವರೂ ಹಾಗೆಯೇ ಈ ರಸ್ತೆ ವಿಚಾರವಾಗಿ ಏಕಾಂಗಿಯಾಗಿ ಫೋಟೋ ತೆಗಿಸಿಕೊಳ್ಳುತ್ತಿದ್ದಾರೆ. ನಾನು ನಮ್ಮ ಪ್ರಧಾನ ಮಂತ್ರಿಗಳಿಗಿಂತ ಕಡಿಮೆ ಇಲ್ಲ, ಅವರಿಗಿಂತಲೂ ಕೆಲಸ ಮಾಡ್ತಿದ್ದೀನಿ ಅಂತಾ ತೋರಿಸಲು ಹೊರಟಿರಬಹುದು ಎಂದು ಕುಟುಕಿದ್ದಾರೆ.
ಚನ್ನಪಟ್ಟಣ ತಾಲ್ಲೂಕಿನಲ್ಲಿ ಮಳೆಹಾನಿ ಪ್ರದೇಶಕ್ಕೆ ಭೇಟಿ ಪರಿಶೀಲಿಸಿದ ಮಾಜಿ ಸಿಎಂ ಹೆಚ್‌ಡಿಕೆ, ತಡರಾತ್ರಿ ಸುರಿದ ಭಾರಿ ಮಳೆಗೆ ಮನೆಗಳು ಜಲಾವೃತವಾಗಿದ್ದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಸಂತ್ರಸ್ತರ ಅಹವಾಲು ಸ್ವೀಕರಿಸಿ ಕೂಡಲೇ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಮಾತನಾಡಿ, ನಿನ್ನೆ ಭಾರೀ ಮಳೆ ಬಂದಿದೆ. ಹಲವಾರು ಕೆರೆ, ಕಟ್ಟೆಗಳು ಒಡೆದು ಕೋಡಿಹರಿದಿವೆ. ನಗರ ಪ್ರದೇಶದಲ್ಲಿಯೂ ದೊಡ್ಡ ಮಟ್ಟದಲ್ಲಿ ಹಾನಿಯಾಗಿದೆ. ಕಳೆದ ಬಾರಿ ಎಪಿಎಂಸಿಗಳಲ್ಲಿ ಮಳೆಯಿಂದಾಗಿ ಅನಾಹುತವಾಗಿತ್ತು. ಅಲ್ಲಿ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಹಾಗಾಗಿ ಈ ಬಾರಿ ಎಪಿಎಂಸಿಗಳಲ್ಲಿ ಅಂತಹದ್ದೇನೂ ಡ್ಯಾಮೇಜ್ ಆಗಿಲ್ಲ. ಆದರೆ ಕೋಡಿ ಹರಿದು ರಸ್ತೆ ಬಿರುಕು ಬಿಟ್ಟಿದೆ. ಲೋಕೋಪಯೋಗಿ ಇಲಾಖೆ ಹಾಗೂ ನಗರ ಸಭೆ ಅಧಿಕಾರಿಗಳಿಗೆ ಶಾಶ್ವತ ಪರಿಹಾರ ಒದಗಿಸಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಮುರುಘಾ ಶ್ರೀಗಳು ಪ್ರತಿಕ್ರಿಯಿಸುವ ಸ್ಥಿತಿಯಲ್ಲಿ ಇಲ್ಲ. ಮಠದ ವಿರೋಧಿಗಳು ಶ್ರೀಗಳ ವಿರುದ್ಧ ಮಕ್ಕಳ ಬುದ್ಧಿ ಕೆಡಿಸಿ ದೂರು ಕೊಡಿಸಿದ್ದಾರೆ ಎಂದು ಮಠದ ಪರ ವಕೀಲ ವಿಶ್ವನಾಥಯ್ಯ ತಿಳಿಸಿದರು.
ಪಬ್ಲಿಕ್ ಟಿವಿಯ ಜೊತೆ ಮಾತನಾಡಿದ ಅವರು, ಮಧ್ಯ ಕರ್ನಾಟಕದ ಪ್ರತಿಷ್ಠಿತ ಮಠ ಎನಿಸಿರುವ ಚಿತ್ರದುರ್ಗದ ಮುರುಘಾ ಶರಣರಿಂದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಬಗ್ಗೆ ಮಕ್ಕಳು ಮೈಸೂರಿನಲ್ಲಿ ದೂರು ನೀಡಿರುವುದು ಮಾಧ್ಯಮ ಮೂಲಕ ತಿಳಿದಿದೆ. ಈ ವಿಚಾರದಲ್ಲಿ ಶರಣರಿಗೆ ನೋವಾಗಿದೆ. ಆದ್ದರಿಂದ ಸದ್ಯದ ಪರಿಸ್ಥಿತಿಯಲ್ಲಿ ಈ ಕುರಿತು ಮಾತನಾಡುವ ಸ್ಥಿತಿಯಲ್ಲಿಲ್ಲ ಎಂದರು.
ಮಠದ ವಿರೋಧಿ ಶಕ್ತಿಗಳು, ಅತಿಯಾದ ಆಸೆಯಿಂದ ಮಕ್ಕಳನ್ನು ಬಳಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಶ್ರೀಗಳ ವಿರುದ್ಧ ಮಕ್ಕಳ ಬುದ್ಧಿ ಕೆಡಿಸಿ ದೂರು ಕೊಡಿಸಿದ್ದಾರೆ. ಅವರು ಮಠದಿಂದ ಹೊರೆಗೆ ಹೋಗಿ, ದೂರು ಸಲ್ಲಿಸಿದ್ದಾರೆ. ಈ ದೂರಿನ ವಿಚಾರ ಪೂರ್ಣವಾಗಿ ಗೊತ್ತಿಲ್ಲ. ಆದರೆ ಅವರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ:ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ – ಮುರುಘಾ ಶರಣರ ವಿರುದ್ಧ ಕೇಸ್
ಏನಿದು ಪ್ರಕರಣ?:
ಮಠದ ಅಧೀನದಲ್ಲಿರೋ ಶಾಲಾ ಮಕ್ಕಳ ದುರ್ಬಳಕೆ ಮಾಡಿ ಶ್ರೀಗಳು ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಜ.1, 2019ರಿಂದ ಜೂ.6, 2022ವರೆಗೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬರನ್ನು ಶರಣರು ಮೂರೂವರೆ ವರ್ಷಗಳಿಂದ, ಮತ್ತೊಬ್ಬರನ್ನು ಒಂದೂವರೆ ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ನಡೆಸಿದ್ದಾರೆ. ಈ ಕೃತ್ಯ ಉಳಿದ ಆರೋಪಿಗಳು ಸಾಥ್ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತಸಮಾಲೋಚನೆ ಸಮಯದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೂರು ನೀಡಿದವರು ಯಾರು?:
ಉಚಿತ ಹಾಸ್ಟೆಲ್ನಲ್ಲಿದ್ದ ಇಬ್ಬರು ಪ್ರೌಢಶಾಲೆ ವಿದ್ಯಾರ್ಥಿನಿಯರು ಮೈಸೂರು ನಗರದಲ್ಲಿರುವ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದಾರೆ. ಈ ಸಂಬಂಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: ಜಿಲ್ಲಾಧಿಕಾರಿ ಜೊತೆ ವಿದ್ಯಾರ್ಥಿನಿ ರೌಂಡ್ಸ್- ಡಿಸಿ ಆಡಳಿತ ವೈಖರಿ ಪರಿವೀಕ್ಷಣೆ
Live Tv
[brid partner=56869869 player=32851 video=960834 autoplay=true]
ಮೈಸೂರು: ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಗಂಭೀರ ಆರೋಪ ಕೇಳಿಬಂದಿದೆ.
ಇಬ್ಬರು ಅಪ್ರಾಪ್ತೆಯರ ಮೇಲೆ ಕಳೆದ ಮೂರೂವರೆ ವರ್ಷಗಳಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಶ್ರೀಗಳು ಸೇರಿದಂತೆ, ಐದು ಮಂದಿ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸೋ) ಅಡಿ ಕೇಸ್ ದಾಖಲಾಗಿದೆ.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.
ಯಾರೆಲ್ಲ ಆರೋಪಿಗಳು?
ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶರಣರು ಮೊದಲ ಆರೋಪಿಯಾಗಿದ್ದಾರೆ. ಚಿತ್ರದುರ್ಗದಲ್ಲಿ ಮಠ ನಡೆಸುತ್ತಿರುವ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್ ರಶ್ಮಿ ಎರಡನೇ ಆರೋಪಿಯಾಗಿದ್ದಾರೆ. ಮಠದ ಬಸವಾದಿತ್ಯ (ಮರಿಸ್ವಾಮಿ) ಮೂರನೇ ಆರೋಪಿ. ಮಠದ ಭಕ್ತರೆನ್ನಲಾದ ಮೈಸೂರಿನ ಪರಮಶಿವಯ್ಯ ಮತ್ತು ವಕೀಲ ಗಂಗಾಧರಯ್ಯ ಕ್ರಮವಾಗಿ ನಾಲ್ಕು ಮತ್ತು ಐದನೇ ಆರೋಪಿಗಳು.
ದೂರು ನೀಡಿದವರು ಯಾರು?
ಉಚಿತ ಹಾಸ್ಟೆಲ್ನಲ್ಲಿದ್ದ ಇಬ್ಬರು ಪ್ರೌಢಶಾಲೆ ವಿದ್ಯಾರ್ಥಿನಿಯರು ಮೈಸೂರು ನಗರದಲ್ಲಿರುವ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದಾರೆ.
ಶುಕ್ರವಾರ ರಾತ್ರಿ 10ರ ವೇಳೆಗೆ ಸಮಿತಿಯು ದೂರು ನೀಡುವಂತೆ ಅಧಿಕಾರಿಗೆ ಸೂಚಿಸಿತ್ತು. ಅದರಂತೆ ರಾತ್ರಿ 10:30ರ ವೇಳೆಗೆ ದೂರು ದಾಖಲಾಗಿದೆ. ಸದ್ಯ ಇಬ್ಬರು ಬಾಲಕಿಯರು ಒಡನಾಡಿ ಸಂಸ್ಥೆಯಲ್ಲಿ ಆಶ್ರಯ ಪಡೆದಿದ್ದಾರೆ.
ಶ್ರೀಗಳ ಮೇಲಿರುವ ಆರೋಪ ಏನು?
ಮಠದ ಅಧೀನದಲ್ಲಿರೋ ಶಾಲಾ ಮಕ್ಕಳ ದುರ್ಬಳಕೆ ಮಾಡಿ ಶ್ರೀಗಳು ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಜ.1, 2019ರಿಂದ ಜೂ.6, 2022ವರೆಗೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಇಬ್ಬರು ವಿದ್ಯಾರ್ಥಿನಿಯರ ಪೈಕಿ ಒಬ್ಬರನ್ನು ಶರಣರು ಮೂರೂವರೆ ವರ್ಷಗಳಿಂದ, ಮತ್ತೊಬ್ಬರನ್ನು ಒಂದೂವರೆ ವರ್ಷದಿಂದ ಲೈಂಗಿಕವಾಗಿ ದೌರ್ಜನ್ಯ ನಡೆಸಿದ್ದಾರೆ. ಈ ಕೃತ್ಯ ಉಳಿದ ಆರೋಪಿಗಳು ಸಾಥ್ ನೀಡಿದ್ದಾರೆ ಎಂದು ವಿದ್ಯಾರ್ಥಿಗಳು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಆಪ್ತಸಮಾಲೋಚನೆ ಸಮಯದಲ್ಲಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Live Tv
[brid partner=56869869 player=32851 video=960834 autoplay=true]
ನಟ ಪುನೀತ್ ರಾಜ್ ಕುಮಾರ್ ಅವರಿಗೆ ಚಿತ್ರದುರ್ಗದ ಮುರುಘಾಮಠ ನೀಡುವ ಬಸವಶ್ರೀ ರಾಷ್ಟ್ರೀಯ ಪುರಸ್ಕಾರ ಪ್ರದಾನ ಮಾಡಲಾಯಿತು. ಮುರಾಘಮಠದ ಅನುಭವ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರಿಂದ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ಇದನ್ನೂ ಓದಿ : ಬೆಳ್ಳಿತೆರೆಯಲ್ಲಿ ಕಾಯಕಯೋಗಿ ಬಸವಣ್ಣ: ಯಾರೆಲ್ಲ ಪಾತ್ರ ಮಾಡಿದ್ದಾರೆ ಗೊತ್ತಾ?
ಐದು ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುವ ಈ ಪ್ರಶಸ್ತಿಯನ್ನು ಈಗಾಗಲೇ ಹಲವು ಗಣ್ಯರಿಗೆ ನೀಡಲಾಗಿದೆ. ಸಿನಿಮಾ ಕ್ಷೇತ್ರದ ಸಾಧನೆಗಾಗಿ ಇದೇ ಮೊದಲು ನಟರೊಬ್ಬರಿಗೆ ಈ ಪ್ರಶಸ್ತಿ ಸಂದಿರುವುದು ವಿಶೇಷ. ಅಪ್ಪು ಅಭಿನಯದ ಹಾಡಿಗೆ ವೇದಿಕೆಯಲ್ಲಿ ಮಕ್ಕಳ ನೃತ್ಯ ಮಾಡುತ್ತಿರುವಾಗ ವೇದಿಕೆಗೆ ಆಗಮಿಸಿದ ಅಶ್ವಿನಿ ಪುನೀತ್ ರಾಜಕುಮಾರ್, ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಂದ ಪ್ರಶಸ್ತಿ ಸ್ವೀಕರಿಸಿದ್ದು ವಿಶೇಷವಾಗಿತ್ತು. ಇದನ್ನೂ ಓದಿ : ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿ
ಈ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್, ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ, ಎಂಎಲ್ ಸಿ ಕೆ.ಎಸ್.ನವೀನ್, ಡಿಸಿ ಕವಿತಾ ಮನ್ನಿಕೇರಿ, ಜಿ.ಪಂ. ಸಿಇಓ ಡಾ.ನಂದಿನಿದೇವಿ, ಎಸ್ಪಿ ಕೆ.ಪರಶುರಾಮ್ ಉಪಸ್ಥಿತರಿದ್ದರು. ವಚನ ಗಾಯನದೊಂದಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆರಂಭವಾಯಿತು. ಇದನ್ನೂ ಓದಿ: ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ
ಬಸವ ಜಯಂತಿ ಪ್ರಯುಕ್ತ ಸರ್ವ ಶರಣರ ಭಾವಚಿತ್ರಕ್ಕೆ ಮುರುಘಾಶ್ರೀ ನೇತೃತ್ವದಲ್ಲಿ ಪುಷ್ಪನಮನ ಸಲ್ಲಿಸಲಾಯಿತು. ಅಶ್ವಿನಿ ಪುನೀತ್ ರಾಜಕುಮಾರ್, ಬಿ.ಸಿ.ಪಾಟೀಲ್ ಪುಷ್ಪನಮನ ಸಲ್ಲಿಸಿದರು. ನಂತರ ಪ್ರಶಸ್ತಿ ಪಡೆಯುವ ವೇಳೆ ಅಶ್ವಿನಿ ಪುನೀತ್ ರಾಜ್ ಕುಮಾರ್, ಭಾವುಕರಾದರು. ಬಳಿಕ ಮುರುಘಾಮಠಕ್ಕೆ ಧನ್ಯವಾದ ಅರ್ಪಸಿದರು.
ದಾವಣೆಗೆರೆ: ಚಂದ್ರಗ್ರಹಣದ ಹಿನ್ನೆಲೆ ದೇಶಾದ್ಯಂತ ಕೆಲ ದೇವಾಲಯಗಳಲ್ಲಿ ಪೂಜೆ ಹೋಮ ಹವನ ಮಾಡಿ ಗ್ರಹಣ ದೋಷವನ್ನು ನಿವಾರಣೆ ಮಾಡಿಕೊಳ್ಳಲು ಪೂಜೆ ಮಾಡಿರುತ್ತಾರೆ. ಆದರೆ ದಾವಣಗೆರೆಯ ಮುರುಘಾ ಶ್ರೀ ಡಾ. ಶಿವಮೂರ್ತಿ ಮುರುಘಾ ಶರಣರು ಗ್ರಹಣದ ವೇಳೆಯೇ ಭಕ್ತರೊಂದಿಗೆ ಪ್ರಸಾದ ಸ್ವೀಕರಿಸಿದರು.
ಜಯದೇವ ವೃತ್ತದ ಬಳಿ ಇರುವ ಶಿವಯೋಗಿ ಮಂದಿರದಲ್ಲಿ ಪ್ರಸಾದ ಸ್ವೀಕರಿಸಿದ ಡಾ.ಶಿವಮೂರ್ತಿ ಮುರಘಾ ಶರಣರು, ಗ್ರಹಣದ ಬಗ್ಗೆ ವೈಜ್ಞಾನಿಕ ತಿಳುವಳಿಕೆ ನೀಡಿದರು. ಗ್ರಹಣ ಆರಂಭ ಆಗುತ್ತಿದ್ದಂತೆ ಇಷ್ಟಲಿಂಗಪೂಜೆ ಮಾಡಿ ಪ್ರಸಾದ ಸ್ವೀಕರಿಸಿ ಭಕ್ತರಿಗೂ ಕೂಡ ಪ್ರಸಾದ ಸ್ವೀಕರಿಸಲು ಹೇಳಿ ಬೆಳದಿಂಗಳ ಬೆಳಕಿನಲ್ಲಿ ಪ್ರಸಾದ ಸ್ವೀಕರಿಸಿದರು.
ಸೂರ್ಯ ಹಾಗೂ ಚಂದ್ರಗ್ರಹಣಗಳು ಒಂದು ವಿಸ್ಮಯಗಳು ಅವುಗಳನ್ನು ನೋಡಿ ಖುಷಿ ಪಡಬೇಕು. ಅದನ್ನು ಬಿಟ್ಟು ಗ್ರಹಣದ ಸಮಯದಲ್ಲಿ ಮೂಡ ನಂಬಿಕೆಗಳನ್ನು ನಂಬಿ ಅವುಗಳನ್ನು ವೀಕ್ಷಿಸಲು ಜನರು ತಪ್ಪಿಸಿಕೊಳ್ಳುತ್ತಿದ್ದಾರೆ. ಸೂರ್ಯ ಗ್ರಹಣ ಇದ್ದಾಗ ಮನೆಯಲ್ಲಿನ ನೀರನ್ನು ಖಾಲಿ ಮಾಡುತ್ತಾರೆ. ಆದರೆ ಅದೇ ನೀರು ಸಾಗರೋಪಾದಿಯಲ್ಲಿ ಇರುತ್ತೆ ಅದನ್ನು ಚಲ್ಲುವುದಕ್ಕೆ ಆಗುತ್ತಾ. ಗ್ರಹಣ ಸಂದರ್ಭದಲ್ಲಿ ಯಾವ ದೇವರು ಕೂಡ ಮಲಿನವಾಗುವುದಿಲ್ಲ. ಆದರೆ ನಮ್ಮ ಜನ ಮೂಡ ನಂಬಿಕೆಯಿಂದ ದೇವಸ್ಥಾನವನ್ನು ನೀರಿನಿಂದ ಶುದ್ಧಿ ಮಾಡುತ್ತಾರೆ. ಜೀವನದಲ್ಲಿ ಇಂತಹುಗಳ ಬಗ್ಗೆ ನಂಬಿಕೆ ಇರಲಿ, ಆದರೆ ಅಂಧಾನುಕರಣೆ ಇರಬಾರದು ಎಂದು ಡಾ.ಶಿವಮೂರ್ತಿ ಮುರಘಾ ಶರಣರು ಭಕ್ತರಿಗೆ ತಿಳಿಸಿದರು.
ಈ ವೇಳೆ ಸ್ವಾಮೀಜಿ ಜೊತೆ ಭೋವಿ ಗುರುಪೀಠ ಇಮ್ಮಡಿ ಸಿದ್ದರಾಮ ಸ್ವಾಮೀಜಿ, ಸಿರಸಿ ಮಲ್ಲಿಕಾರ್ಜುನ ಸ್ವಾಮೀಜಿ, ದಾವಣಗೆರೆಯ ಬಸವಪ್ರಭು ಸ್ವಾಮೀಜಿ ಹಾಗೂ ಭಕ್ತರು ಸೇರಿ ಪ್ರಸಾದ ಸ್ವೀಕಾರಿಸಿದರು.