Tag: ಮುಳಬಾಗಿಲು

  • ಕೋಲಾರ | ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ

    ಕೋಲಾರ | ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ

    – ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯರು

    ಕೋಲಾರ: ಮನೆ ಮುಂದೆ ಆಟವಾಡುತ್ತಿದ್ದಾಗ ಏಕಾಏಕಿ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೋಲಾರ (Kolar) ಜಿಲ್ಲೆಯ ಮುಳಬಾಗಿಲು (Mulbagal) ಯಳಚೇಪಲ್ಲಿ ಗ್ರಾಮದಲ್ಲಿ ನಡೆದಿದೆ.

    ಪತ್ತೆಯಾದ ಮೃತದೇಹಗಳನ್ನು ಧನ್ಯಬಾಯಿ (13), ಚೈತ್ರಾಬಾಯಿ (13) ಎಂದು ಗುರುತಿಸಲಾಗಿದೆ. ಗುರುವಾರ (ಅ.2) ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಏಕಾಏಕಿ ನಾಪತ್ತೆಯಾಗಿದ್ದರು. ಈ ಕುರಿತು ಬಾಲಕಿಯರ ಕುಟುಂಬಸ್ಥರು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇದನ್ನೂ ಓದಿ: ಪ್ರಿಯಕರ ಸ್ನೇಹಿತೆಯೊಟ್ಟಿಗೆ ಓಯೋ ರೂಂನಲ್ಲಿ ಇದ್ದಿದ್ದನ್ನ ಕಂಡು ಮನನೊಂದು ಮಹಿಳೆ ಆತ್ಮಹತ್ಯೆ

    ಸದ್ಯ ನಾಪತ್ತೆಯಾಗಿದ್ದ ಬಾಲಕಿಯರು ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿಯಿರುವ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಕೊಲೆ ಮಾಡಿ ಬಿಸಾಡಿರಬಹುದು ಅಥವಾ ಬಾಲಕಿಯರು ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

  • ಗಣೇಶ ಚತುರ್ಥಿ – ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ, ಅಲಂಕಾರ

    ಗಣೇಶ ಚತುರ್ಥಿ – ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ, ಅಲಂಕಾರ

    ಕೋಲಾರ: ದೇಶದಲ್ಲೆಡೆ ಇಂದು ಗಣೇಶ ಹಬ್ಬವನ್ನ ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ ಅದರಂತೆ ಕೋಲಾರ (Kolar) ಜಿಲ್ಲೆಯ ಪುರಾಣ ಪ್ರಸಿದ್ಧ ಕುರುಡುಮಲೆ ವಿನಾಯಕನ ಸನ್ನಿಧಿಯಲ್ಲೂ (Kurudumale Vinayaka Temple) ಹಬ್ಬದ ಸಂಭ್ರಮ ಕಳೆಕಟ್ಟಿದೆ.

    ಪೌರಾಣಿಕ ಹಿನ್ನೆಲೆ ಇರುವ ಕುರುಡುಮಲೆ ವಿನಾಯಕನ ದೇವಸ್ಥಾನ ರಾಜಕೀಯವಾಗಿಯೂ ಸಾಕಷ್ಟು ಪ್ರಾಮುಖ್ಯತೆ ಪಡೆದಿದೆ. ಏಕಶಿಲಾ ಸಾಲಿಗ್ರಾಮ ಮೂರ್ತಿ ಗಣೇಶನನ್ನು ವಿಶೇಷವಾಗಿ ಅಲಂಕರಿಸಲಾಗಿದ್ದು, ಕುರುಡುಮಲೆ ವಿನಾಯಕನ ದರ್ಶನಕ್ಕೆ ಜನರ ದಂಡು ಆಗಮಿಸಿತ್ತು. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಕುರುಡುಮಲೆ ವಿನಾಯಕನ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆದು ಪುನೀತರಾದರು. ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಉಗ್ರನಿಗೆ ಜೈಲಲ್ಲಿ ಇಡಿ ಡ್ರಿಲ್

    ಗಣೇಶ ಚತುರ್ಥಿ (Ganesha Chaturthi) ಹಿನ್ನೆಲೆಯಲ್ಲಿ ವಿನಾಯಕನ ದರ್ಶನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಬಂದಿದ್ದು, ಕೋಲಾರ ಜಿಲ್ಲೆ ಸೇರಿದಂತೆ ಹೊರ ಜಿಲ್ಲೆ ಹೊರ ರಾಜ್ಯದಿಂದಲೂ ಭಕ್ತರ ಸಮೂಹ ಬಂದಿದೆ. ಇನ್ನೂ ವಿಶ್ವದ ಏಕೈಕ ಏಕಶಿಲಾ ಸಾಲಿಗ್ರಾಮ ಶಿಲಾಗಣಪತಿ ಅನ್ನೋ ನಂಬಿಕೆ ಇಲ್ಲಿದ್ದು, ಸಾವಿರಾರು ಭಕ್ತರು ಇಂದು ವಿನಾಯಕನ ದರ್ಶನ ಪಡೆದಿದ್ದಾರೆ. ಇನ್ನೂ ಗಣಪನ ದರ್ಶನ ಪಡೆಯಲು ಇಂದು ಬೆಳಗಿನಿಂದಲೇ ಭಕ್ತರ ದಂಡು ದೇವಸ್ಥಾನದ ಬಳಿ ನೆರೆದಿದ್ದು, ಇಲ್ಲಿನ ಇತಿಹಾಸದ ಪ್ರಕಾರ ಈ ಗಣಪತಿ ಮೂರ್ತಿಯನ್ನು ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು, ಮಹೇಶ್ವರನು ಪ್ರತಿಷ್ಠಾಪಿಸಿದರು ಎಂಬ ನಂಬಿಕೆ ಅನಾದಿಕಾಲದಿಂದಲೂ ಇದೆ. ಇದನ್ನೂ ಓದಿ: ಬಸ್ ಟೈಯರ್ ಸ್ಫೋಟಗೊಂಡು ಬೈಕ್‌ಗೆ ಡಿಕ್ಕಿ – ಗಣೇಶ ಹಬ್ಬದಂದೇ ಅತ್ತೆ, ಅಳಿಯ ಸಾವು

    ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಲಾಗಿರುವ ವಿನಾಯಕನ ವಿಗ್ರಹವು 13 ಅಡಿ ಎತ್ತರವಿದೆ. ಇಲ್ಲಿರುವ ದೇಗುಲವು ಶ್ರೀಕೃಷ್ಣ ದೇವರಾಯನ ಆಡಳಿತ ಕಾಲದಲ್ಲಿ ನಿರ್ಮಾಣಗೊಂಡಿದೆ ಎಂಬುದು ಚರಿತ್ರೆಯಿಂದ ತಿಳಿದು ಬರುತ್ತದೆ. ಕುರುಡುಮಲೆ ಐತಿಹ್ಯ ಹೊಯ್ಸಳರ ಕಾಲದಲ್ಲಿ ಇದೊಂದು ಉಪನಗರವಾಗಿಯೇ ಪ್ರಸಿದ್ಧವಾಗಿತ್ತು. ತದನಂತರ ವಿಜಯನಗರವನ್ನು ಆಳಿದ ಆರಂಭಿಕ ಅರಸರ ಕಾಲದಲ್ಲಿ ಮುಳುವಾಯಿ ನಗರದ ಜೊತೆಜೊತೆಯಲ್ಲೇ ಇಲ್ಲಿಯೂ ದೇವಾಲಯಗಳ ಅಭಿವೃದ್ಧಿಗೊಂಡವು ಅನ್ನೋದು ಇತಿಹಾಸ ಎನ್ನಲಾಗಿದೆ. ಇದನ್ನೂ ಓದಿ: ದೇವರಿಗೆ ಧರ್ಮವಿಲ್ಲ, ಪ್ರಾರ್ಥನೆ ಯಾರೊಬ್ಬರ ಸ್ವತ್ತಲ್ಲ – ಡಿಕೆಶಿ

  • Kolar | ಕಲಬೆರೆಕೆ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ – ಹಾಲಿನಲ್ಲಿ ಕೆಮಿಕಲ್ ಅಂಶ ಪತ್ತೆ

    Kolar | ಕಲಬೆರೆಕೆ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ – ಹಾಲಿನಲ್ಲಿ ಕೆಮಿಕಲ್ ಅಂಶ ಪತ್ತೆ

    – ಕೋಲಾರ ಎಸ್ಪಿ ನಿಖಿಲ್ ಸ್ಪಷ್ಟನೆ

    ಕೋಲಾರ: ಕೋಲಾರದ ಗಡಿಯಲ್ಲಿ ಕಲಬೆರೆಕೆ ಹಾಲು (Adulterated Milk) ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಹಾಲಿನಲ್ಲಿ ಕೆಮಿಕಲ್ (Chemical) ಅಂಶ ಇರುವುದು ಪತ್ತೆಯಾಗಿದೆ.

    ಕೋಲಾರದಲ್ಲಿ (Kolar) ಆಹಾರ ಇಲಾಖೆ ಹಾಗು ಪೊಲೀಸರು ಹಾಲಿಗೆ ಪೌಡರ್ ಮಿಶ್ರಣ ಮಾಡುತ್ತಿದ್ದ ಘಟಕದ ಮೇಲೆ ದಾಳಿ ಮಾಡಿದ್ದ ಪ್ರಕರಣದಲ್ಲಿ ಕೆಮಿಕಲ್ ಇರುವುದು ಲ್ಯಾಬ್ ವರದಿಯಲ್ಲಿ ಪತ್ತೆಯಾಗಿದೆ. ಕೆಮಿಕಲ್ ಮಿಶ್ರಿತ ಹಾಲಿನಲ್ಲಿ ಅಸುರಕ್ಷಿತ ಹಾಗೂ ಆರೋಗ್ಯಕ್ಕೆ ಹಾನಿಕಾರಕ ಇರುವ ಅಂಶ ಪತ್ತೆಯಾಗಿದೆ. ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ಮಾಡಿದ್ದ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳ (Food Department Officers) ತಂಡ ಕೆಮಿಕಲ್ ಮಿಶ್ರಿತ ಹಾಲು ಸಂಗ್ರಹ ಮಾಡಿ ಲ್ಯಾಬ್‌ಗೆ ಕಳುಹಿಸಿತ್ತು. ಇದನ್ನೂ ಓದಿ: ಮನೆಯಲ್ಲಿ ಕೂತಿರೋರಿಗೆಲ್ಲ ವೆಲ್‌ಕಮ್‌ ಮಾಡೋಕಾಗಲ್ಲ – ಡಿಕೆಶಿ ಹೆಸರನ್ನೇ ಹೇಳದ ಸಿಎಂ

    ಸದ್ಯ ವರದಿ ಪೊಲೀಸರ ಕೈ ಸೇರಿದ್ದು, ವರದಿಯಲ್ಲಿ ಕೆಮಿಕಲ್ ಅಂದ್ರೆ ಜನರು ಉಪಯೋಗಿಸಲು ಅಸುರಕ್ಷಿತ ಹಾಗೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದೆ ಎಂದು ಕೋಲಾರ ಎಸ್ಪಿ ನಿಖಿಲ್ ತಿಳಿಸಿದ್ದಾರೆ. ಇದನ್ನೂ ಓದಿ: ಕೇರಳ ಮಾದರಿಯಂತೆ ಕೊಪ್ಪಳದ ಶಾಲೆಯೊಂದರಲ್ಲಿ ಲಾಸ್ಟ್ ಬೆಂಚ್‌ಗೆ ಕೊಕ್

    ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ಸವಟೂರು ಗ್ರಾಮದಲ್ಲಿ ನರೇಶ್ ರೆಡ್ಡಿ ಎಂಬವರಿಗೆ ಸೇರಿದ ಹಾಲಿನ ಘಟಕದ ಮೇಲೆ ಕಳೆದ ಜೂನ್ 1ರಂದು ಆಹಾರ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಚರಣೆ ನಡೆಸಿದ್ದರು. ಈ ವೇಳೆ ಕೆಮಿಕಲ್ ಹಾಲು ತಯಾರಿಕೆಗೆ ಬಳಸುತ್ತಿದ್ದ ಕೆಮಿಕಲ್ ಸೇರಿದಂತೆ ಉಪಕರಣಗಳನ್ನ ವಶಕ್ಕೆ ಪಡೆದಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು. ಗಡಿ ಭಾಗದಲ್ಲಿ ತಿರುಮಲ ಹಾಲಿನ ಡೈರಿಗೆ ಹಾಲು ಸರಬರಾಜು ಮಾಡುತ್ತಿದ್ದ ನರೇಶ್ ರೆಡ್ಡಿ ಎಂಬವರಿಗೆ ಸೇರಿದ ಘಟಕದಲ್ಲಿ ಕೆಮಿಕಲ್ ಹಾಲು ತಯಾರಿ ಮಾಡಲಾಗುತ್ತಿದೆ ಎಂಬ ದೂರುಗಳು ಕೇಳಿ ಬಂದಿತ್ತು. ಅದರಂತೆ ಮುಳಬಾಗಿಲು ಡಿವೈಎಸ್ಪಿ ನಂದಕುಮಾರ್ ನೇತೃತ್ವದಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿತ್ತು. ಇದನ್ನೂ ಓದಿ: ಕಾಲ್ತುಳಿತಕ್ಕೆ ಪೊಲೀಸ್‌ ಇಲಾಖೆ ಒಳಗಿನ ರಾಜಕೀಯ ಕಾರಣ.. ಕೊಹ್ಲಿ ಬಲಿಪಶು ಆಗಿದ್ದಾರೆ: ಮಾಜಿ DySP ಅನುಪಮಾ ಶೆಣೈ

    ಅಲ್ಲದೇ ಕೆಮಿಕಲ್ ಹಾಲಿನ ಮಾದರಿಯನ್ನ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಲ್ಯಾಬ್ ವರದಿಯಲ್ಲಿ ಕೆಮಿಕಲ್ ಹಾಲಿನ ಮಾದರಿಯಲ್ಲಿ ಅಸುರಕ್ಷಿತ ಹಾಗೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಇರುವುದು ಪತ್ತೆಯಾಗಿದೆ. ಇನ್ನೂ ನಂಗಲಿ ಪೊಲೀಸ್ ಠಾಣೆಯಲ್ಲಿ ಆಹಾರ ಸುರಕ್ಷಿತ ಕಾಯ್ದೆ ಹಾಗೂ ಬಿಎನ್‌ಎಸ್ ಕಾಯ್ದೆಯಡಿ ನರೇಶ್ ರೆಡ್ಡಿ ವಿರುದ್ಧ ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಇದನ್ನೂ ಓದಿ: ಹೈದರಾಬಾದ್‌ನಲ್ಲಿ ಮಳೆ ಅವಾಂತರ – ಫ್ಲೈಓವರ್, ರಸ್ತೆಗಳು ಮುಳುಗಡೆ

  • Kolar | ವಿದ್ಯುತ್ ತಂತಿ ಸ್ಪರ್ಶಿಸಿ ಸಾರಿಗೆ ನೌಕರ ಸಾವು

    Kolar | ವಿದ್ಯುತ್ ತಂತಿ ಸ್ಪರ್ಶಿಸಿ ಸಾರಿಗೆ ನೌಕರ ಸಾವು

    ಕೋಲಾರ: ಗಾಳಿ ಮಳೆಯಿಂದ ವಿದ್ಯುತ್ ಕಂಬ ನೆಲಕ್ಕುರಳಿದ್ದನ್ನು ಗಮನಿಸದೇ ಬೈಕ್ ಚಾಲನೆ ಮಾಡಿದ ಸಾರಿಗೆ ನೌಕರ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಮುಳಬಾಗಿಲು (Mulabagilu) ತಾಲೂಕಿನ ರಾಜೇಂದ್ರ ಹಳ್ಳಿಯಲ್ಲಿಂದು ಮುಂಜಾನೆ ಈ ಘಟನೆ ನಡೆದಿದ್ದು, ಗ್ರಾಮದ ರೆಡ್ಡಪ್ಪ (58) ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ. ಕಳೆದ ರಾತ್ರಿ ಬಿರುಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿ ಬಿದ್ದಿದ್ದವು. ತಂತಿಗಳು ರಸ್ತೆಗೆ ಅಡ್ಡಲಾಗಿ ಬಿದ್ದಿತ್ತು. ಇಂದು ಮುಂಜಾನೆ ಎದ್ದು ಎಂದಿನಂತೆ ತೋಟಕ್ಕೆ ತೆರಳುವ ವೇಳೆ ಬೈಕ್‌ಗೆ ತಂತಿ ಸ್ಪರ್ಶವಾಗಿ ರೆಡ್ಡಪ್ಪ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಡಿಕೆಶಿಗೆ ಮಾನ, ಮರ್ಯಾದೆ ಇದ್ರೆ ಕೂಡ್ಲೇ ಮಂಜುನಾಥ್ ಉಚ್ಚಾಟಿಸಿ: ಶರಣು ಸಲಗರ್

    ರೆಡ್ಡಪ್ಪ ಮುಳಬಾಗಿಲು ಕೆಎಸ್‌ಆರ್‌ಟಿಸಿ ಘಟಕದಲ್ಲಿ ಸಂಚಾರಿ ನಿಯಂತ್ರಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಬೆಸ್ಕಾಂ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ವಿದ್ಯುತ್ ತಂತಿಗಳ ತೆರವು ಕಾರ್ಯ ಮಾಡಲಾಗಿದೆ. ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೊತ್ತೂರು ಮಂಜುನಾಥ್ ಅಬ್‌ನಾರ್ಮಲ್ ಪರ್ಸನ್, ಕಾಂಗ್ರೆಸ್ ಸಸ್ಪೆಂಡ್ ಮಾಡ್ಬೇಕು: ಎನ್.ಮಹೇಶ್ ಆಗ್ರಹ

  • Kolar | ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ವ್ಯಕ್ತಿ ನೇಣಿಗೆ ಶರಣು

    Kolar | ಮನೆಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ವ್ಯಕ್ತಿ ನೇಣಿಗೆ ಶರಣು

    ಕೋಲಾರ: ಮನೆಯಲ್ಲಿ ತಂದೆ ತಾಯಿ ಬುದ್ಧಿವಾದ ಹೇಳಿದ ಹಿನ್ನೆಲೆ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆಯ ಮುಳಬಾಗಿಲು (Mulabagilu) ಪಟ್ಟಣದ ಕುಂಬಾರಪಾಳ್ಯದಲ್ಲಿ (Kumbarapalya) ಕಳೆದ ರಾತ್ರಿ ಈ ಘಟನೆ ನಡೆದಿದೆ. ಬೆಳದು ನಿಂತಿದ್ದ ಮಗ ಜವಾಬ್ದಾರಿ ಇಲ್ಲದೇ ಸ್ನೇಹಿತರೊಂದಿಗೆ ಸೇರಿಕೊಂಡು ಬೇಕಾಬಿಟ್ಟಿ ಜೀವನ ನಡೆಸುತ್ತಿದ್ದ. ಇದನ್ನು ಪ್ರಶ್ನೆ ಮಾಡಿದ ತಂದೆ ತಾಯಿ ಮಾತಿನಿಂದ ಬೇಸತ್ತು ನೇಣಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ಏ.20ರಂದೇ ನಡೆಯಬೇಕಿದ್ದ ಪಹಲ್ಗಾಮ್ ದಾಳಿ 2 ದಿನ ತಡವಾಗಿದ್ದೇಕೆ? – NIA ತನಿಖೆಯಲ್ಲಿ ರೋಚಕ ಅಂಶ

    ಮುಳಬಾಗಿಲು ಪಟ್ಟಣದ ಕುಂಬಾರಪಾಳ್ಯ ನಿವಾಸಿ ಗಣೇಶ್ (29) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಗಣೇಶ್ ಮದುವೆಯಾಗಿ ಒಂದು ವರ್ಷ ಕಳೆದಿತ್ತು. ಹೆಂಡತಿ ಮಕ್ಕಳನ್ನ ಚನ್ನಾಗಿ ನೋಡಿಕೋ, ಜವಾಬ್ದಾರಿಯಿಂದಿರು ಎಂದಿದ್ದ ತಂದೆ ತಾಯಿ ಮಾತಿನಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಪಹಲ್ಗಾಮ್‌ಗೆ ಹೋಗಿದ್ರೆ ಜಮೀರ್, ಖಾದರ್ ಬಿಟ್ಟು ಸಿದ್ದರಾಮಯ್ಯಗೆ ಗುಂಡು ಹೊಡೆಯುತ್ತಿದ್ರು: ಮುತಾಲಿಕ್

    ಘಟನೆ ಸಂಬಂಧ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ಸಾವಿನ ಕುರಿತು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಮೋದಿ ಜೊತೆಗೆ ನಾವಿದ್ದೇವೆ, ಪಾಕ್‌ ವಿರುದ್ಧ ಇಂದಿರಾ ಗಾಂಧಿಯಂತೆ ಕ್ರಮ ಕೈಗೊಳ್ಳಬೇಕು: ಎಂ.ಬಿ ಪಾಟೀಲ್‌

  • Kolar | ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ – ಓರ್ವ ಆರೋಪಿ ಬಂಧನ

    Kolar | ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ – ಓರ್ವ ಆರೋಪಿ ಬಂಧನ

    ಕೋಲಾರ: ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ (Online Cricket Betting) ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೋಲಾರ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ (ಸೆನ್) ಪೊಲೀಸರು ಬಂಧಿಸಿರುವ ಘಟನೆ ಕೋಲಾರ (Kolar) ಜಿಲ್ಲೆಯ ಮುಳಬಾಗಿಲು (Mulabagilu) ನಗರದಲ್ಲಿ ನಡೆದಿದೆ.

    ಮುಳಬಾಗಿಲು ನಗರದ ನೂಕಲಬಂಡೆಯ ನಿವಾಸಿ ಸೈಯದ್ ಸಾದಿಕ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಆರೋಪಿ ಸಾರ್ವಜನಿಕರಿಂದ ನಗದು ರೂಪದಲ್ಲಿ ಹಾಗೂ ಆನ್‌ಲೈನ್‌ನಲ್ಲಿ ವರ್ಗಾವಣೆ ಮಾಡಿಸಿಕೊಂಡು ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳ ಮೂಲಕ ಐಪಿಎಲ್ ಬೆಟ್ಟಿಂಗ್ ದಂಧೆಯನ್ನು ನಡೆಸುತ್ತಿದ್ದ. ಆರೋಪಿ ಬಳಿ ಇದ್ದ ಎರಡು ಮೊಬೈಲ್‌ಗಳು, ನಗದು ಹಾಗೂ ಬ್ಯಾಂಕ್ ಖಾತೆಯಲ್ಲಿದ್ದ 32,046 ರೂ. ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇದನ್ನೂ ಓದಿ: ನಾವು ನೆಮ್ಮದಿಯಿಂದ ಬದುಕಬೇಕು.. ನೀನು ಬಂದು ಶರಣಾಗು: ಉಗ್ರ ಪುತ್ರನಿಗೆ ತಾಯಿ ಮನವಿ

    ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ದಂಧೆಯಲ್ಲಿ ಹಲವಾರು ಮಂದಿ ಭಾಗಿಯಾಗಿರುವ ಶಂಕೆಯಿದ್ದು, ತನಿಖೆ ಕೈಗೊಂಡಿದ್ದಾರೆ. ಇನ್ನೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಮಾರ್ಗದರ್ಶನದಲ್ಲಿ ಸೆನ್ ಠಾಣೆಯ ಡಿವೈಎಸ್‌ಪಿ, ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಇನ್ನೂ ಜಿಲ್ಲೆಯಲ್ಲಿ ಬೆಟ್ಟಿಂಗ್ ದಂಧೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಕೋಲಾರ ಸೆನ್ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಿದ್ದಾರೆ. ಇದನ್ನೂ ಓದಿ: ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಮಲೆ ಮಹದೇಶ್ವರ ವನ್ಯಧಾಮದ ಸುಂಕದ ಕಟ್ಟೆಯಲ್ಲಿ ಹುಲಿ ದರ್ಶನ

  • Kolar | ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ

    Kolar | ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಗಲಾಟೆ – ಕೊಲೆಯಲ್ಲಿ ಅಂತ್ಯ

    ಕೋಲಾರ: ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ, ಕೊಲೆಯಲ್ಲಿ ಅಂತ್ಯವಾದ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ಜಿಲ್ಲೆ ಮುಳಬಾಗಿಲು (Mulabagilu) ನಗರದ ಹೊರವಲಯದಲ್ಲಿರುವ ಬಾರ್ ಎದುರು ಘಟನೆ ನಡೆದಿದೆ. ಮುಳಬಾಗಿಲು ಹೈದರ್ ನಗರ ನಿವಾಸಿ ಮತೀನ್ (25) ಕೊಲೆಯಾದ ವ್ಯಕ್ತಿ. ಸ್ನೇಹಿತ ಮೊಯಿನ್‌ನಿಂದಲೇ ಮತೀನ್ ಹತ್ಯೆಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ಇಬ್ಬರ ಮಧ್ಯೆ ಜಗಳ ಪ್ರಾರಂಭವಾಗಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾಗಿದೆ. ಇದನ್ನೂ ಓದಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಮೋದಿ ನಿವೃತ್ತಿ ಘೋಷಣೆ ಬಗ್ಗೆ ಮಾತನಾಡಿದ್ದಾರೆ: ಸಂಜಯ್ ರಾವತ್

    ಬಾರ್‌ನಲ್ಲಿ ಕುಡಿದ ಬಳಿಕ ಎದುರಿಗೆ ಇದ್ದ ಮರದ ಕೆಳಗೆ ಮತೀನ್ ಹಾಗೂ ಮೊಯಿನ್ ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಮತೀನ್ ಸ್ನೇಹಿತ (Friends) ಮೊಯಿನ್‌ನನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿದ್ದಾನೆ. ಈ ವೇಳೆ ಕೋಪಗೊಂಡ ಮೊಯಿನ್ ಕಬ್ಬಿಣದ ರಾಡ್‌ನಿಂದ ಮತೀನ್‌ಗೆ ಇರಿದು ಪರಾರಿಯಾಗಿದ್ದಾನೆ. ಇದನ್ನೂ ಓದಿ: ದಕ್ಷಿಣ ಭಾರತದ ಅತಿ ದೊಡ್ಡ ಅಂಗಾಂಗ ಮರು ಪಡೆಯುವ ಕೇಂದ್ರ ಬೆಂಗಳೂರಿನಲ್ಲಿ ಸ್ಥಾಪನೆ

    ಕೊಲೆಯ ದೃಶ್ಯಗಳು ಬಾರ್‌ಗೆ ಅಳವಡಿಸಿದ್ದ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಸ್ಥಳಕ್ಕೆ ಎಸ್ಪಿ ನಿಖಿಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಏ.2ಕ್ಕೆ ವಕ್ಫ್ ತಿದ್ದುಪಡಿ ಬಿಲ್‌ಗೆ ಕೇಂದ್ರ ಸಿದ್ಧತೆ – ಈಗ ಏನಿದೆ? ಏನು ಬದಲಾಗಲಿದೆ?

  • Kolar | ಅರಣ್ಯ ಇಲಾಖೆ ಗೋಡೌನ್ ಬೀಗ ಒಡೆದು ಕಳ್ಳತನಕ್ಕೆ ಯತ್ನ – ಇಬ್ಬರು ಅರೆಸ್ಟ್

    Kolar | ಅರಣ್ಯ ಇಲಾಖೆ ಗೋಡೌನ್ ಬೀಗ ಒಡೆದು ಕಳ್ಳತನಕ್ಕೆ ಯತ್ನ – ಇಬ್ಬರು ಅರೆಸ್ಟ್

    ಕೋಲಾರ: ಜಿಲ್ಲೆಯಲ್ಲಿ ಅರಣ್ಯ ಇಲಾಖೆ (Forest Department) ಗೋಡೌನ್ (Godown) ಬೀಗ ಒಡೆದು ಕಳ್ಳತನಕ್ಕೆ (Theft) ಯತ್ನಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಕೋಲಾರ (Kolar) ಜಿಲ್ಲೆ ಮುಳಬಾಗಿಲು (Mulabagilu) ತಾಲೂಕು ಕುಮದೇನಹಳ್ಳಿ ಗ್ರಾಮದ ಬಳಿ ಇರುವ ಅರಣ್ಯ ಇಲಾಖೆ ಗೋಡೌನ್ ಬೀಗ ಒಡೆದು ಅದರಲ್ಲಿದ್ದ ಬೆಲೆ ಬಾಳುವ ವಸ್ತುಗಳನ್ನ ದೋಚಲು ಯತ್ನಿಸಿದ ಹಿನ್ನೆಲೆ, ಆಂದ್ರದ ಮದನಪಲ್ಲಿಯ ಪವನ್ ಹಾಗೂ ಕುರುಡುಮಲೆ ಗೇಟ್‌ನ ಚೇತನ್ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಈ ಹಿಂದಿನ ಆರ್‌ಎಫ್‌ಓ ಜ್ಯೋತಿ ಅವರ ಹೆಸರು ಹೇಳಿಕೊಂಡು ಬಂದು ಬೀಗ ಒಡೆಯಲು ಯತ್ನಿಸಿದ ಇಬ್ಬರನ್ನ ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಮಹಾಕುಂಭ ಮೇಳದಲ್ಲಿ ಅದಾನಿ ಗ್ರೂಪ್‌, ಇಸ್ಕಾನ್‌ ಸಹಯೋಗದಿಂದ ಮಹಾಪ್ರಸಾದ ಸೇವೆ

    ಇನ್ನೂ ಅರಣ್ಯ ಇಲಾಖೆಯಿಂದ ವಶಪಡಿಸಿಕೊಂಡಿರುವ ಶ್ರೀಗಂಧ, ರಕ್ತ ಚಂದನ ಸೇರಿದಂತೆ ಬೆಲೆ ಬಾಳುವ ವಸ್ತುಗಳನ್ನು ಸಂಗ್ರಹಿಸಿರುವ ಗೋಡೌನ್ ಇದಾಗಿದ್ದು, ಸ್ಥಳಕ್ಕೆ ಮುಳಬಾಗಿಲು ಆರ್‌ಎಫ್‌ಓ ಶಾಲಿನಿ ಭೇಟಿ ನೀಡಿದ್ದಾರೆ. ಸದ್ಯ ಆರೋಪಿಗಳನ್ನು ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಡಾ. ಶಿವಕುಮಾರ್ ಮಹಾಶಿವಯೋಗಿಗಳ ಜೀವನ ಪಯಣ, ಸೇವೆ ಪ್ರತಿಯೊಬ್ಬರಿಗೂ ಸ್ಫೂರ್ತಿ: ಗೆಹ್ಲೋಟ್

  • Kolar | ಪರಿಚಯಸ್ಥರ ಸೋಗಿನಲ್ಲಿ ಬಂದು ಒಂಟಿ ಮನೆ ದೋಚಿದ ನಾಲ್ವರು ದುಷ್ಕರ್ಮಿಗಳು

    Kolar | ಪರಿಚಯಸ್ಥರ ಸೋಗಿನಲ್ಲಿ ಬಂದು ಒಂಟಿ ಮನೆ ದೋಚಿದ ನಾಲ್ವರು ದುಷ್ಕರ್ಮಿಗಳು

    – 4.70 ಲಕ್ಷ ಹಣ, 300 ಗ್ರಾಂ ಚಿನ್ನ ದೋಚಿ ಪರಾರಿ

    ಕೋಲಾರ: ಪರಿಚಯಸ್ಥರ ಸೋಗಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಒಂಟಿ ಮನೆಯಲ್ಲಿ ಕಳ್ಳತನ (Theft) ಮಾಡಿರುವ ಘಟನೆ ಕೋಲಾರ (Kolar) ಜಿಲ್ಲೆ ಮುಳಬಾಗಿಲು (Mulabagilu) ತಾಲೂಕು ರಾಜೇಂದ್ರಹಳ್ಳಿ ಗ್ರಾಮದಲ್ಲಿ ನಡೆದಿದೆ.

    ರಾಜೇಂದ್ರಹಳ್ಳಿ ಗ್ರಾಮದ ಹರೀಶ್ ಎಂಬವರ ಮನೆಯಲ್ಲಿ ಶುಕ್ರವಾರ ರಾತ್ರಿ 11 ಗಂಟೆ ಸುಮಾರಿಗೆ ಪರಿಚಯಸ್ಥರಂತೆ ಹರೀಶಣ್ಣ ಎಂದು ಕರೆದಿದ್ದಾರೆ. ಬಂದು ಬಾಗಿಲು ತೆರೆಯುತ್ತಿದ್ದಂತೆ ಲಾಂಗು, ಮಚ್ಚು, ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ ನಂತರ ಸೀರೆಯಿಂದ ಹರೀಶ್ ಅವರ ಕೈಕಾಲು ಕಟ್ಟಿಹಾಕಿ ಮನೆಯಲ್ಲಿರುವ ಹಣ ಒಡವೆಗಳನ್ನು ಕೊಡುವಂತೆ ಒತ್ತಾಯ ಮಾಡಿದ್ದಾರೆ. ಈ ವೇಳೆ ಕೊಡದೇ ಹೋದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: Assam | 10 ತಿಂಗಳ ಮಗುವಿನಲ್ಲಿ HMPV ಪತ್ತೆ

    ಈ ವೇಳೆ ಮನೆಯಲ್ಲಿದ್ದ ಹರೀಶ್ ಅವರ ತಾತ ನಾರಾಯಣಪ್ಪ ಹಣ ಒಡವೆ ಎಲ್ಲಾ ಕೊಡುವುದಾಗಿ ಹೇಳಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಮಹಿಳೆಯರು ಮಕ್ಕಳು, ವೃದ್ದರು ಎಲ್ಲರನ್ನು ಕಟ್ಟಿಹಾಕಿ, ಮನೆಯ ಬೀರು ಬೀಗ ಒಡೆದುಹಾಕಿ ಅದರಲ್ಲಿದ್ದ ಚಿನ್ನದ ಓಲೆ, ಉಂಗುರ, ಚಿನ್ನದ ಸರ ಸೇರಿ ಸುಮಾರು 300 ಗ್ರಾಂನಷ್ಟು ಒಡವೆಗಳು ಹಾಗೂ ಮನೆಯಲ್ಲಿದ್ದ ಸುಮಾರು 4.70 ಲಕ್ಷ ರೂ. ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಮನೆಯ ಹೊರಗಿನಿಂದ ಬೀಗ ಹಾಕಿಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಪಂಚಮಸಾಲಿ ಪೀಠಕ್ಕೆ ಬರಲು ಬಿಡೋದಿಲ್ಲ – ಸಮಾಜದ ಮುಖಂಡರ ಆಕ್ರೋಶ

    ನಂತರ ಕಟ್ಟಿಹಾಕಿದ್ದ ಕಟ್ಟು ಬಿಡಿಸಿಕೊಂಡ ನಂತರ ಮನೆಯವರು ನಂಗಲಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ನಂಗಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈಗಾಗಲೇ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚನೆ ಮಾಡಿರುವ ಕೋಲಾರ ಎಸ್ಪಿ ನಿಖಿಲ್.ಬಿ. ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಅಪಹರಣಗಾರರ ಜೊತೆ ಮುಖಾಮುಖಿ; ಮೂವರು ಪೊಲೀಸರ ಮೇಲೆ ಹಲ್ಲೆ – ಆರೋಪಿಗಳಿಗೆ ಗುಂಡೇಟು

  • Kolar| ಅಪಘಾತದಲ್ಲಿ ಐವರು ಸಾವು –  ಮುಳಬಾಗಿಲು ಶಾಸಕನಿಂದ ತಲಾ 20,000 ರೂ. ಆರ್ಥಿಕ ನೆರವು

    Kolar| ಅಪಘಾತದಲ್ಲಿ ಐವರು ಸಾವು – ಮುಳಬಾಗಿಲು ಶಾಸಕನಿಂದ ತಲಾ 20,000 ರೂ. ಆರ್ಥಿಕ ನೆರವು

    – ಅಧಿವೇಶನದ ಬಳಿಕ ಮತ್ತಷ್ಟು ನೆರವಿನ ಭರವಸೆ

    ಕೋಲಾರ: ಬೈಕ್‌ಗಳಿಗೆ ಬೊಲೆರೋ ಡಿಕ್ಕಿಯಾಗಿ ಐವರು ಮೃತಪಟ್ಟಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಈ ಹಿನ್ನೆಲೆ ಮೃತರ ಕುಟುಂಬಗಳಿಗೆ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ (Samruddi Manjunath) ಆರ್ಥಿಕ ನೆರವು ನೀಡಿದ್ದಾರೆ.

    ಮೃತರ ಕುಟುಂಬಸ್ಥರು ತೀವ್ರ ಬಡವರಾಗಿದ್ದರಿಂದ ಅಂತ್ಯ ಸಂಸ್ಕಾರಕ್ಕಾಗಿ ತಲಾ 20,000 ರೂ. ನೆರವು ನೀಡಿದ್ದಾರೆ. ಬುಧವಾರ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ಗುಡಿಪಲ್ಲಿ ರಸ್ತೆಯಲ್ಲಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಕೂಲಿ ಕೆಲಸ ಮಾಡಿಕೊಂಡಿದ್ದರು. ಕಡು ಬಡತನದ ಕುಟುಂಬಕ್ಕೆ ಸಾವಿನಿಂದ ಆಘಾತವಾದ ಹಿನ್ನೆಲೆ ಅಂತ್ಯಸಂಸ್ಕಾರಕ್ಕಾಗಿ ಸಮೃದ್ಧಿ ಮಂಜುನಾಥ್ ಆರ್ಥಿಕ ನೆರವು ನೀಡಿದ್ದಾರೆ. ಇದನ್ನೂ ಓದಿ: 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ‘ಲೋಕಾ’ ಬಲೆಗೆ ಬಿದ್ದ ಅಧಿಕಾರಿ – ಅರೆಸ್ಟ್‌

    ಕೂಲಿ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದವರು ಸಾವಿನ ಮನೆಗೆ ಹೋಗಿದ್ದು, ಅವರ ಕುಟುಂಬಗಳು ಬೀದಿಪಾಲಾಗಿವೆ. ಇದನ್ನರಿತ ಸಮೃದ್ಧಿ ಮಂಜುನಾಥ್ ಮೃತರ ಕುಟುಂಬಗಳಿಗೆ ಆರ್ಥಿಕ ನೆರವಿನ ಹಸ್ತ ಚಾಚಿದ್ದಾರೆ. ಸದ್ಯ ಬೆಳಗಾವಿ ಅಧಿವೇಶನದಲ್ಲಿರುವ ಶಾಸಕ ಸಮೃದ್ಧಿ ಮಂಜುನಾಥ್ ತಮ್ಮ ಆಪ್ತ ಸಹಾಯಕ ಹಾಗೂ ಸ್ಥಳೀಯ ಮುಖಂಡರ ಸಮ್ಮುಖದಲ್ಲಿ ಅಂತ್ಯಸಂಸ್ಕಾರಕ್ಕಾಗಿ ಹಣ ತಲುಪಿಸಿದ್ದು, ಅಧಿವೇಶನ ಮುಗಿದ ನಂತರ ಸ್ವತಃ ಮೃತರ ಕುಟುಂಬಗಳನ್ನು ಭೇಟಿ ಮಾಡಿ ಮತ್ತಷ್ಟು ಪರಿಹಾರ ನೀಡುವುದಾಗಿ ತಮ್ಮ ಆಪ್ತರ ಮೂಲಕ ಸಂದೇಶವನ್ನು ರವಾನೆ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದ ಭತ್ತಕ್ಕೆ ಏಕಾಏಕಿ ನಿರ್ಬಂಧ ಹೇರಿದ ತೆಲಂಗಾಣ

    ಇನ್ನು ಕಳೆದ ವಾರ ಮುರುಡೇಶ್ವರದಲ್ಲಿ ನೀರು ಪಾಲಾದ ವಿದ್ಯಾರ್ಥಿನಿಯರ ಕುಟುಂಬಗಳಿಗೂ ಸಹ ಸಮೃದ್ಧಿ ಮಂಜುನಾಥ್ ತಲಾ ಒಂದೊಂದು ಲಕ್ಷ ಪರಿಹಾರ ನೀಡಿದ್ದರು. ಇದನ್ನೂ ಓದಿ: ಬಿಎಸ್‌ವೈ ಹೆಸರಲ್ಲಿ ನಡೆಯುವುದು ಶಕ್ತಿ ಪ್ರದರ್ಶನವಲ್ಲ, ಗುಂಪುಗಾರಿಕೆ ಪ್ರದರ್ಶನ: ಈಶ್ವರಪ್ಪ