ಅಗರ ಗ್ರಾಮದ ವೆಂಕಟರಾಮ್ ಕೃತ್ಯವೆಸಗಿರಬಹುದು ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆ ಆತನನ್ನು ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಹೆಚ್ಚುವರಿ ಹೆಸರುಕಾಳು ಖರೀದಿಗೆ ಕೇಂದ್ರ ಸರ್ಕಾರದ ಅನುಮತಿ: ಜೋಶಿ
ಕೋಲಾರ: ಯುವತಿಯೊಂದಿಗೆ ಸಲುಗೆಯಿಂದ ಇದ್ದಿದ್ದಕ್ಕೆ ಯುವತಿಯ ತಂದೆ ಕಳ್ಳತನ ಆರೋಪ ಮಾಡಿದ್ದಾರೆ. ಅಲ್ಲದೇ ಪೊಲೀಸರಿಗೆ ಹಣ ಕೊಟ್ಟು ಬಂಧಿಸಿ ಠಾಣೆಯಲ್ಲಿ ಹಲ್ಲೆ ನಡೆಸಿದ್ದಾರೆ ಎಂದು ಯುವಕರಿಬ್ಬರು ನಂಗಲಿ ಪೊಲೀಸರ (Police) ವಿರುದ್ಧ ಆರೋಪ ಮಾಡಿದ್ದಾರೆ.
ಮುಳಬಾಗಿಲಿನ (Mulabagilu) ತಿಪ್ಪದೊಡ್ಡಿ ಗ್ರಾಮದ ಗುರುಮೂರ್ತಿ ಮತ್ತು ಶಿವು ಎಂಬವರನ್ನು ಫೆ.22 ರಂದು ಪೊಲೀಸರು ಬಂಧಿಸಿದ್ದರು. ಬಳಿಕ ಠಾಣೆಗೆ ಕರೆತಂದು ಪೊಲೀಸರು ಹಲ್ಲೆ ಮಾಡಿದ್ದಾರೆ. ಬಳಿಕ ಯುವತಿಯ ತಂದೆಗೆ ಪಿಎಸ್‍ಐ ಅರ್ಜುನ್ ಗೌಡ ವಿಡಿಯೋ ಕಾಲ್ ಮಾಡಿ ತೋರಿಸಿದ್ದಾರೆ ಎಂದು ಯುವಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಜು.1 ರಿಂದ ದೇಶಾದ್ಯಂತ ಹೊಸ ಕ್ರಿಮಿನಲ್ ಕಾನೂನುಗಳು ಜಾರಿ
ಗೋಣಿಕೊಪ್ಪ ಗ್ರಾಮದ ರಮೇಶ್ ಎನ್ನುವವರ ಮನೆಯಲ್ಲಿ 1 ಲಕ್ಷ ರೂ. ಹಣ ಕಳುವಾಗಿರುವ ಆರೋಪ ಹೊರಿಸಿ ಥರ್ಡ್ ಡಿಗ್ರಿ ಟ್ರೀಟ್‍ಮೆಂಟ್ ಕೊಟ್ಟು ಹಿಂಸೆ ನೀಡಿದ್ದಾರೆ. ದೂರುದಾರ ರಮೇಶ್ ಪುತ್ರಿಯೊಂದಿಗೆ ಗುರುಮೂರ್ತಿ ಸಲುಗೆಯಿಂದ ಇದ್ದ ಹಿನ್ನೆಲೆಯಲ್ಲಿ ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಸಬ್ ಇನ್ಸ್ಪೆಕ್ಟರ್ ಅರ್ಜುನ್ ಗೌಡ ವಿರುದ್ಧ ಯುವಕ ಗುರುಮೂರ್ತಿ ತಾಯಿ ಮಂಜುಳಮ್ಮ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಕೋಲಾರ: ಮಾತುಬಾರದ ಮಾನಸಿಕ ಅಸ್ವಸ್ಥ ವೃದ್ಧೆ ಒಬ್ಬರು ಮುಳಬಾಗಿಲಿನ (Mulabagilu) ಮುತ್ಯಾಲಪೇಟೆಯಿಂದ ನಾಪತ್ತೆಯಾಗಿದ್ದು, ಮಹಿಳೆಯ (Woman) ಸುಳಿವು ಕೊಟ್ಟವರಿಗೆ 50 ಸಾವಿರ ರೂ. ನಗದು ಬಹುಮಾನವನ್ನು ಆಕೆಯ ಮಗಳು ಘೋಷಿಸಿದ್ದಾರೆ.
ಕೋಲಾರ: ಜಿಲ್ಲೆಯ (Kolar) ಬೇವಳ್ಳಿ ಎಂಬಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರ ಆರೋಪಿಯನ್ನು 24 ಗಂಟೆಯಲ್ಲಿ ಪತ್ತೆ ಹಚ್ಚುವ ಮೂಲಕ ಪೊಲೀಸ್ (Police) ಇಲಾಖೆಯ ಶ್ವಾನವೊಂದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.
ಜಿಲ್ಲಾ ಅಫರಾಧ ವಿಭಾಗದ ರಕ್ಷಾ ಎಂಬ ಹೆಸರಿನ ಶ್ವಾನ ಕೊಲೆ ಆರೋಪಿಯನ್ನು ಪತ್ತೆ ಹಚ್ಚಿದೆ. ಸುಮಾರು 15 ಕಿ.ಮೀ ದೂರದಲ್ಲಿ ಅಡಗಿ ಕುಳಿತಿದ್ದ ಕೊಲೆ ಆರೋಪಿಯನ್ನ ಶ್ವಾನ ಪತ್ತೆ ಮಾಡಿದೆ. ಶ್ವಾನವೂ ಕಳೆದ ಹಲವು ವರ್ಷಗಳಿಂದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆ ಸಕ್ರಿಯ – ಈವರೆಗೂ ಹತರಾದ ಉಗ್ರರ ಸಂಖ್ಯೆ ಎಷ್ಟು?
ಮುಳಬಾಗಿಲಿನ (Mulabagilu) ಬೇವಳ್ಳಿ ಗ್ರಾಮದಲ್ಲಿ ಸುರೇಶ್ (35) ಎಂಬಾತನನ್ನ ಮಾರಾಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿತ್ತು. ಸ್ಥಳದಲ್ಲಿ ಯಾವುದೇ ಸುಳಿವು ಸಿಗದ ಕಾರಣ ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ಶ್ವಾನವನ್ನು ಕರೆತಂದಿದ್ದರು. ಬಳಿಕ ಶ್ವಾನವು ಸುಮಾರು 15 ಕಿ.ಮೀ ದೂರಕ್ಕೆ ತೆರಳಿ ರವಿ ಎಂಬಾತನನ್ನು ಗುರುತಿಸಿತ್ತು. ಬಳಿಕ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ: ಕನ್ನಡದ ಭಗವದ್ಗೀತೆ ಎಂದೇ ಕರೆಯಲಾಗುವ ಮಂಕುತಿಮ್ಮನ ಕಗ್ಗ ಬರೆದ ಡಿವಿಜಿ (DVG) ಅವರ ನಿವಾಸಕ್ಕೆ ಹೈಟೆಕ್ ಸ್ಪರ್ಶ ನೀಡಲಾಗಿದ್ದು ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡಕ್ಕೆ ಹೊಸ ಮೆರುಗು ಬಂದಿದೆ.
ಡಿವಿಜಿಯವರು (DV Gundappa) ವಾಸವಿದ್ದ ಮುಳಬಾಗಿಲಿನ (Mulabagilu) ನಿವಾಸವನ್ನು ಸರ್ಕಾರ ಶಾಲೆಯನ್ನಾಗಿ (School) ಮಾಡಿತ್ತು. ಆದರೆ ಸರಿಯಾದ ನಿರ್ವಹಣೆ ಇಲ್ಲದೇ ಶಾಲೆ ಸಂಪೂರ್ಣವಾಗಿ ಶಿಥಿಲವಾಗಿತ್ತು. ಈಗ ಓಸ್ಯಾಟ್ ಸಂಸ್ಥೆ ಕಳೆದ ಒಂದುವರೆ ವರ್ಷದ ಹಿಂದೆ ಈ ಶಾಲೆಯನ್ನು ಹೊಸದಾಗಿ ನಿರ್ಮಾಣ ಮಾಡಲು ಮುಂದಾಗಿತ್ತು. 2.75 ಕೋಟಿ ರೂ. ವೆಚ್ಚದಲ್ಲಿ ಹಲವು ದಾನಿಗಳ ನೆರವಿನಿಂದ ನಿರ್ಮಾಣ ಮಾಡಿ ಇಡೀ ರಾಜ್ಯದಲ್ಲೇ ಮಾದರಿಯಾದ ಶಾಲೆಯನ್ನಾಗಿ ನಿರ್ಮಾಣ ಮಾಡಿ ಕೊಟ್ಟಿದೆ. ಹೊರಗಿನಿಂದ ಶಾಲೆ ಯಾವುದೇ ಸುಂದರ ಬಂಗಲೆಗೂ ಕಡಿಮೆ ಇಲ್ಲದಂತೆ ನಿರ್ಮಾಣ ಮಾಡಲಾಗಿದ್ದು, ಬುಧವಾರ ಶಾಲೆಯ ಉದ್ಘಾಟನೆಯಾಗಿದೆ. ಇದನ್ನೂ ಓದಿ: Mysuru Bengaluru Expressway ಪ್ರಯಾಣಕ್ಕೆ ಸ್ಪೀಡ್ ಲಿಮಿಟ್ – 100 ಕಿಮೀ ವೇಗ ದಾಟಿದ್ರೆ ಫೈನ್!
ಇದೇ ವೇಳೆ ಮಾತನಾಡಿದ ಶಾಸಕ ಸಮೃದ್ಧಿ ಮಂಜುನಾಥ್ ಸರ್ಕಾರಗಳು ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು. ಜೊತೆಗೆ ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಹೆಚ್ಚಿಸಬೇಕು. ಈ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದಿದ್ದಾರೆ.
ಇವತ್ತಿನ ಕಾಲಕ್ಕೆ ಸರಿದೂಗುವಂತೆ ಅತ್ಯಾಧುನಿಕ ಪೀಠೋಪಕರಣಗಳು, ಸಿಸಿಟಿವಿ, ಹತ್ತು ಕೊಠಡಿಗಳು, ವ್ಯವಸ್ಥಿತ ಶೌಚಾಲಯ, ಗ್ರಂಥಾಲಯ, ಕಂಪ್ಯೂಟರ್ ಲ್ಯಾಬ್, ಶಿಕ್ಷಕರ ಪ್ರತ್ಯೇಕ ಕೊಠಡಿ ಸೇರಿದಂತೆ ಎಲ್ಲವೂ ಈ ನೂತನ ಶಾಲೆಯಲ್ಲಿ ವ್ಯವಸ್ಥೆ ಮಾಡಲಾಗಿದೆ. ನಾನಾ ಕಾರಣಗಳಿಂದ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಇವತ್ತಿನ ದಿನಗಳಲ್ಲಿ ರಾಜ್ಯದಲ್ಲೇ ಮಾದರಿ ಆಗಬಲ್ಲ ಸರ್ಕಾರಿ ಶಾಲಾ ಕಟ್ಟಡ ರಾಜ್ಯದಲ್ಲಿ ನಿರ್ಮಾಣವಾಗಿದೆ.
ಕೋಲಾರ: ಸಾಲ ವಸೂಲಿಗೆ ತೆರಳಿದ್ದ ವೇಳೆ ಮಹಿಳೆಯರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿ ಬೈಕ್‍ಗೆ ಬೆಂಕಿ ಹಚ್ಚಿದ ಘಟನೆ ಕೋಲಾರದಲ್ಲಿ (Kolar) ಗುರುವಾರ ನಡೆದಿದೆ.
ಸ್ತ್ರೀಶಕ್ತಿ ಸಂಘದ ಸಾಲ ವಸೂಲಾತಿಗೆ ಡಿಸಿಸಿ ಬ್ಯಾಂಕ್ (DCC Bank) ಸಿಬ್ಬಂದಿ ಕೋಲಾರದ ಮುಳಬಾಗಿಲಿನ (Mulabagilu) ಬಿಸ್ನಹಳ್ಳಿ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಸಿಬ್ಬಂದಿಯೊಂದಿಗೆ ಗಲಾಟೆ ಮಾಡಿದ್ದಾರೆ. ಅಲ್ಲದೇ ಅಲ್ಲಿದ್ದ ಬೈಕ್‍ಗೆ ಬೆಂಕಿ ಹಚ್ಚಿ ಸಿಬ್ಬಂದಿ ಮತ್ತೆ ಬಂದರೆ ಅವರ ಬೈಕ್‍ಗೂ ಇದೇ ಗತಿ ಆಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ವಿದ್ಯುತ್ ದರ ಇಳಿಸದಿದ್ರೆ ಪ್ರತಿ ಕೆಜಿ ಅಕ್ಕಿ ಬೆಲೆ 5-10 ರೂ ಏರಿಸುತ್ತೇವೆ: ರೈಸ್ ಮಿಲ್ ಮಾಲೀಕರ ಎಚ್ಚರಿಕೆ
ಮಹಿಳೆಯರು ಗೋಕುಂಟೆ ಸೊಸೈಟಿಯಲ್ಲಿ ಸಾಲ ಪಡೆದಿದ್ದರು. ಸಾಲ ವಸೂಲಿಗೆ ಸೊಸೈಟಿ ಸಿಬ್ಬಂದಿ ಜೋಸೆಫ್ ತೆರಳಿದ್ದರು. ಈ ವೇಳೆ ಸಾಲ ಕಟ್ಟೋದಿಲ್ಲ ಮನ್ನಾ ಮಾಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ ಎಂದು ಮಹಿಳೆಯರು ಹೇಳಿದ್ದಾರೆ. ಅಲ್ಲದೇ ಮಹಿಳೆಯರಿಂದ ಸಿಬ್ಬಂದಿಯ ಮೇಲೆ ಹಲ್ಲೆಯ ಯತ್ನ ಕೂಡ ನಡೆದಿದೆ.
ನಿಜವಾಗಿ ಏನಾಯ್ತು ಎಂಬುದರ ತಿಳಿದುಕೊಳ್ಳಲು ಪಬ್ಲಿಕ್ ಟಿವಿ ಜೋಸೆಫ್ ಅವರನ್ನು ಸಂಪರ್ಕಿಸಿದೆ. ಈ ವೇಳೆ ಪ್ರತಿಕ್ರಿಯಿಸಿದ ಅವರು, ಸಾಲ ವಸೂಲಿಗೆ ಹೋದಾಗ ಬಹಳ ತೊಂದರೆ ಆಗುತ್ತಿದೆ. ಕಾಂಗ್ರೆಸ್ ನಾಯಕರು ಗ್ಯಾರಂಟಿ ಕಾರ್ಡ್ ಜೊತೆಗೆ ಸ್ತ್ರೀ ಶಕ್ತಿಗಳ ಸಾಲವನ್ನು ಮನ್ನಾ ಮಾಡುತ್ತೇವೆ ಎಂಬ ಸಾಲನ್ನು ಸೇರಿಸಿದ್ದರು. ವಸೂಲಿಗೆ ತೆರಳಿದಾಗ ಮಹಿಳೆಯರು ಸಾಲ ಮನ್ನಾ ಎಂಬ ಘೋಷಣೆಯನ್ನು ತೋರಿಸುತ್ತಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರದ ವೇಳೆ ನಮ್ಮ ಸರ್ಕಾರ ರಚನೆಯಾದ ನಂತರ ಸ್ತ್ರೀಶಕ್ತಿ ಸಂಘದ ಸಾಲವನ್ನು ಮನ್ನಾ ಮಾಡುವುದಾಗಿ ಹೇಳಿದ್ದ ವೀಡಿಯೋವನ್ನು ತೋರಿಸುತ್ತಿದ್ದಾರೆ. ನಮಗೆ ಬಹಳ ಕಷ್ಟವಾಗುತ್ತಿದ್ದು, ಈ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಕೋಲಾರದಲ್ಲಿ ದಿನದಿಂದ ದಿನಕ್ಕೆ ಈ ರೀತಿಯ ಘಟನೆಗಳು ಹೆಚ್ಚಾಗುತ್ತಿದ್ದು, ಬ್ಯಾಂಕ್ ಸಿಬ್ಬಂದಿ ರೋಸಿ ಹೋಗಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಇದನ್ನೂ ಓದಿ: ಕೌಟುಂಬಿಕ ಕಲಹ – ಮಕ್ಕಳ ಕತ್ತು ಸೀಳಿ ಕೊಲೆಗೈದ ಪಾಪಿ ತಂದೆ
ಕೋಲಾರ: ಮಹಿಳೆಯನ್ನು ನಿಂದಿಸಿ ಹಲ್ಲೆ ಮಾಡಿದ ಆರೋಪದಡಿ ಕೋಲಾರ (Kolar) ಜಿಲ್ಲೆಯ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ (Congress) ಟಿಕೆಟ್ ಆಕಾಂಕ್ಷಿ ವಿರುದ್ಧ ಪೊಲೀಸರು ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದಾರೆ.
ಅಂಜು ಬಾಸ್ ಚಂಗಮ್ಮ ಎಂಬ ಮಹಿಳೆಯ ಬಳಿ ಒಂದು ಎಕರೆ ಕ್ರಯ ಮಾಡಿಸಿಕೊಂಡು 2 ಎಕರೆ ಜಮೀನಿಗೆ ತಂತಿ ಬೇಲಿ ಹಾಕಿಕೊಂಡಿದ್ದರು. ಇದನ್ನು ಪ್ರಶ್ನೆ ಮಾಡಿದ ಮಹಿಳೆಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆಂಬಲಿಗರಿಂದ ಧಮ್ಕಿ ಹಾಕಿಸಿದ್ದರು. ಜಮೀನು ವ್ಯಾಜ್ಯ (Land Litigation) ಹಿನ್ನೆಲೆಯಲ್ಲಿ ಮಹಿಳೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಇಂದು ರಿಲೀಸ್?
ಕೋಲಾರ: ಕಾರ್ಯಕರ್ತನೊಬ್ಬ ಜೆಡಿಎಸ್ (JDS) ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (C.M Ibrahim) ಅವರ ದೃಷ್ಠಿ ತೆಗೆದು ನೋಟಿನ ಸುರಿಮಳೆಗೈದ ಘಟನೆ ಕೋಲಾರದಲ್ಲಿ (Kolar) ನಡೆದಿದೆ.
ಮುಳಬಾಗಿಲಿನಲ್ಲಿ (Mulabagilu) ಸೋಮವಾರ ಜೆಡಿಎಸ್ ಅಲ್ಪಸಂಖ್ಯಾತರ ಸಮಾವೇಶವನ್ನು ಆಯೋಜಿಸಿತ್ತು. ಸಮಾವೇಶಕ್ಕೂ ಮುನ್ನ ರೋಡ್ ಶೋ (Roadshow) ವೇಳೆ ಕಾರ್ಯಕರ್ತ ವಾಹನದ ಮೇಲೇರಿ ಇಬ್ರಾಹಿಂ ಹಾಗೂ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಅವರ ದೃಷ್ಠಿ ತೆಗೆದು ನೋಟನ್ನು ಗಾಳಿಗೆ ತೂರಿದ್ದಾನೆ. ಇದನ್ನೂ ಓದಿ: ಸಿದ್ದರಾಮಯ್ಯರನ್ನ ಹರಕೆ ಕುರಿ ಮಾಡ್ಬೇಡಿ: ನಿಖಿಲ್ ಸಲಹೆ
ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಆಗಿ 24 ಗಂಟೆ ಒಳಗೆ ಪೈರಸಿ ಆಗಿದೆ. ಪೈರಸಿಗೆ ಕಠಿಣ ಶಿಕ್ಷೆಯಿದ್ದರೂ, ಅದನ್ನು ತಡೆಗಟ್ಟಲು ಏನೆಲ್ಲ ಕ್ರಮಗಳನ್ನು ತೆಗೆದುಕೊಂಡರೂ, ಪೈರಸಿ ಮಾತ್ರ ನಿಲ್ಲುತ್ತಿಲ್ಲ. ವಿಕ್ರಾಂತ್ ರೋಣ ಸಿನಿಮಾ ಕೂಡ ಪೈರಸಿ ಆಗಿದ್ದು, ಮುಳಬಾಗಿಲು ಸರ್ಕಾರಿ ವಸತಿ ಶಾಲೆಯಲ್ಲಿ ಈ ಸಿನಿಮಾದ ಪೈರಸಿಯನ್ನು ತೋರಿಸುವ ವಿಡಿಯೋ ವಿವಾದಕ್ಕೆ ಕಾರಣವಾಗಿದೆ. ವಸತಿ ಶಾಲೆಯಲ್ಲಿದ್ದ ಮಕ್ಕಳು ಪೈರಸಿ ಸಿನಿಮಾ ವೀಕ್ಷಿಸಿದ್ದಾರೆ.
ವಸತಿ ಶಾಲೆಯಲ್ಲಿ ವಿಕ್ರಾಂತ್ ರೋಣ ಸಿನಿಮಾದ ಪೈರಸಿಯನ್ನು ನೋಡುವ ವಿಡಿಯೋವನ್ನು ಚಿತ್ರೀಕರಣ ಮಾಡಿರುವ ವಿದ್ಯಾರ್ಥಿಯೊಬ್ಬ ಅದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಸುದೀಪ್ ಅಭಿಮಾನಿಗಳು ವಸತಿ ಶಾಲೆಯ ಮೇಲ್ವಿಚಾರಕರಿಗೆ ಕರೆ ಮಾಡಿ, ತರಾಟೆಗೆ ತಗೆದುಕೊಂಡಿದ್ದಾರೆ. ಕೂಡಲೇ ವಿಡಿಯೋ ಮೂಲಕ ಕ್ಷಮೆ ಕೇಳಬೇಕು ಇಲ್ಲವೆ ಕಾನೂನು ಕ್ರಮ ಎದುರಿಸಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ:ಕಿಚ್ಚ ಸುದೀಪ್- ರಕ್ಷಿತ್ ಶೆಟ್ಟಿ ನಡುವೆ ಏನಿದು ಕೋಲ್ಡ್ ವಾರ್!
ವಿಕ್ರಾಂತ್ ರೋಣ ಸಿನಿಮಾ ಪೈರಸಿ ಆಗುವ ವಿಚಾರವನ್ನು ಈ ಮೊದಲೇ ಸುದೀಪ್ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಇದು ಪೈರಸಿಯಲ್ಲಿ ನೋಡುವಂತಹ ಸಿನಿಮಾವಲ್ಲ, ಥಿಯೇಟರ್ ಗೆ ಬನ್ನಿ ಎಂದು ಮನವಿ ಮಾಡಿದ್ದರು. ಅಲ್ಲದೇ, ಪೈರಸಿ ಆಗಿದ್ದು ಕಂಡು ಬಂದಲ್ಲಿ ಸಿನಿಮಾ ಟೀಮ್ ಗೆ ತಿಳಿಸಿ ಎಂದು ಹೇಳಿದ್ದರು. ವಸತಿ ಶಾಲೆಯಲ್ಲಿ ಸಿನಿಮಾ ವೀಕ್ಷಣೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಕ್ರಮಕ್ಕಾಗಿ ಅಭಿಮಾನಿಗಳು ಆಗ್ರಹಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಕೋಲಾರ: ಕುಡಿದ ಮತ್ತಿನಲ್ಲಿ ಭೂಪನೊಬ್ಬ ಹಾವನ್ನು ಬಾಯಿಂದ ಕಚ್ಚಿ ಸಾಯಿಸಿದ್ದಾನೆ. ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮುಷ್ಟೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಮಷ್ಟೂರು ಗ್ರಾಮದ ಕುಮಾರ್ ಹಾವನ್ನು ಸಾಯಿಸಿದ ಭೂಪ. ನಶೆಯಲ್ಲಿದ್ದ ಕುಡುಕ ದಾರಿಯಲ್ಲಿ ಹೋಗುತ್ತಿದ್ದ ಹಾವನ್ನು ಹಿಡಿದು ಕತ್ತಿಗೆ ಸುತ್ತಿಕೊಂಡು ಗ್ರಾಮ ಪ್ರವೇಶಿಸಿದ್ದಾನೆ. ಗ್ರಾಮದ ಮಧ್ಯೆ ಬರುತ್ತಿದ್ದಂತೆ ಕುತ್ತಿಗೆ ಹಾವನ್ನು ಬಾಯಿಂದ ಕಚ್ಚಿ ಸಾಯಿಸಿದ್ದಾನೆ. ಕುಮಾರ್ ಹಾವನ್ನು ಕಚ್ಚಿ ಸಾಯಿಸುತ್ತಿರುವ ದೃಶ್ಯಗಳನ್ನು ಸ್ಥಳೀಯರು ಮೊಬೈಲಿನಲ್ಲಿ ಸೆರೆಹಿಡಿದುಕೊಂಡಿದ್ದಾರೆ. ಆದ್ರೆ ಭಯದಿಂದ ಯಾರು ಕುಮಾರ್ ನನ್ನು ತಡೆಯಲು ಮುಂದಾಗಿಲ್ಲ.
ಹಾವು ಸಾಯಿಸಿದ ಬಳಿಕ ಕುಮಾರ್ ಆರೋಗ್ಯವಾಗಿದ್ದು, ಗ್ರಾಮದಲ್ಲಿ ಓಡಾಡಿಕೊಂಡಿದ್ದಾನೆ. ಹಾವನ್ನ ಸಾಯಿಸಿದ್ದಕ್ಕೆ ಗ್ರಾಮಸ್ಥರು ಸಹ ಕ್ಲಾಸ್ ತೆಗೆದುಕೊಂಡಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.