Tag: ಮುಳುಗಡೆ

  • ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ – 14 ಮೀನುಗಾರರ ರಕ್ಷಣೆ

    ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ – 14 ಮೀನುಗಾರರ ರಕ್ಷಣೆ

    ಕಾರವಾರ: ಮೀನುಗಾರಿಕೆಗೆ (Fishing) ತೆರಳಿದ್ದ ಬೋಟ್ (Boat) ಮುಳುಗಡೆಯಾಗಿ (Drown) 14 ಜನ ಮೀನುಗಾರರ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಹೊನ್ನಾವರ (Honnavara) ಭಾಗದ ಆಳ ಸಮುದ್ರದಲ್ಲಿ ನಡೆದಿದೆ.

    ಎರಡು ದಿನದ ಹಿಂದೆ ಹೊನ್ನಾವರದ ಕಾಸರಕೋಡಿನಿಂದ (Kasarkod) ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಹೆಚ್.ಎಮ್ ಅಂಗಳೂರು ಎಂಬ ಹೆಸರಿನ ಮೀನುಗಾರಿಕಾ ಬೋಟ್ ತಳಭಾಗದಲ್ಲಿ ಒಡೆದುಹೋಗಿ ಬೋಟ್‌ಗೆ ನೀರು ತುಂಬಿತ್ತು. ಇದನ್ನೂ ಓದಿ: ಚಿನ್ನದ ಗಣಿಯಲ್ಲಿ ಬೆಂಕಿ ದುರಂತ – 27 ಕಾರ್ಮಿಕರು ಸಾವು

    ಈ ವೇಳೆ ಅಲ್ಲಿಯೇ ಮೀನುಗಾರಿಕೆ ಮಾಡುತ್ತಿದ್ದ ಅನಸೂಯ ಎಂಬ ಹೆಸರಿನ ಬೋಟ್ ಮೂಲಕ 14 ಜನ ಮೀನುಗಾರರ ರಕ್ಷಣೆ ಮಾಡಿ ಹೊನ್ನಾವರದ ಕಾಸರಕೋಡ ಬಂದರಿಗೆ ಸುರಕ್ಷಿತವಾಗಿ ಕರೆತರಲಾಗಿದೆ. ಇದನ್ನೂ ಓದಿ: ಪ್ರವಾಸಿ ದೋಣಿ ಮುಳುಗಡೆ – ಮಕ್ಕಳು ಸೇರಿದಂತೆ 22 ಮಂದಿ ನೀರುಪಾಲು

  • ಯಮುನೆಯಲ್ಲಿ ದೋಣಿ ಮುಳುಗಿ 17 ಜನ ನಾಪತ್ತೆ – ಮೂವರ ಶವ ಪತ್ತೆ

    ಯಮುನೆಯಲ್ಲಿ ದೋಣಿ ಮುಳುಗಿ 17 ಜನ ನಾಪತ್ತೆ – ಮೂವರ ಶವ ಪತ್ತೆ

    ಲಕ್ನೋ: 30ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ ದೋಣಿ ನದಿಯಲ್ಲಿ ಮುಳುಗಿ, ಅದರಲ್ಲಿದ್ದ 17 ಜನರು ನಾಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ಯಮುನಾ ನದಿಯಲ್ಲಿ ನಡೆದಿದೆ. ಗುರುವಾರ ನಡೆದ ಘಟನೆಯಲ್ಲಿ ಇಲ್ಲಿಯವರೆಗೆ ಕೇವಲ ಮೂವರ ಮೃತದೇಹ ಹೊರ ತೆಗೆಯಲಾಗಿದೆ, 13 ಜನರನ್ನು ರಕ್ಷಿಸಲಾಗಿದೆ ಎಂದು ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.

    ಗುರುವಾರ ಫತೇಪುರ್ ಜಿಲ್ಲೆಯ ಮರ್ಕಾದಿಂದ ಜರೌಲಿ ಘಾಟ್‌ಗೆ ತೆರಳುತ್ತಿದ್ದ ದೋಣಿ ನದಿಯಲ್ಲಿ ಮಗುಚಿ ಬಿದ್ದಿದೆ. ಅದರಲ್ಲಿ 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇಬ್ಬರು ಮಹಿಳೆಯರು ಹಾಗೂ ಮಗುವಿನ ಶವ ನದಿಯಿಂದ ಹೊರತೆಗೆಯಲಾಗಿದೆ. ಇದನ್ನೂ ಓದಿ: ಪಂಚಾಯತ್‌ ದಲಿತ ಅಧ್ಯಕ್ಷರು ಕುರ್ಚಿಯಲ್ಲಿ ಕೂರುವಂತಿಲ್ಲ, ಸ್ವಾತಂತ್ರ್ಯ ದಿನ ಧ್ವಜ ಹಾರಿಸುವಂತಿಲ್ಲ: ಸರ್ವೇಯಿಂದ ತಾರತಮ್ಯ ಬೆಳಕಿಗೆ

    ಜಿಲ್ಲೆಯ ಮಾರ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಸಂಗರ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಡಿಐಜಿ ಮಿಶ್ರಾ ತಿಳಿಸಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದು, ಸಹಾಯಕ್ಕಾಗಿ ಪ್ರಯಾಗ್‌ರಾಜ್‌ನಿಂದ ಡೈವರ್‌ಗಳನ್ನೂ ಕರೆಸಲಾಗಿದೆ. ಇದನ್ನೂ ಓದಿ: ಶೀಘ್ರವೇ ಉದ್ಘಾಟನೆಗೊಳ್ಳಲಿದೆ ದೆಹಲಿ-ಕಾಶ್ಮೀರಕ್ಕೆ ಸಂಪರ್ಕ ಕಲ್ಪಿಸುವ ವಿಶ್ವದ ಅತಿ ಎತ್ತರದ ರೈಲ್ವೇ ಸೇತುವೆ

    ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಚಿವರಾದ ರಾಕೇಶ್ ಸಚನ್ ಮತ್ತು ರಾಮಕೇಶ್ ನಿಶಾದ್ ಅವರನ್ನು ಸ್ಥಳಕ್ಕೆ ತಲುಪುವಂತೆ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ವಿಪತ್ತು ಪರಿಹಾರ ನಿಧಿಯಿಂದ ತಲಾ 4 ಲಕ್ಷ ರೂ. ಆರ್ಥಿಕ ನೆರವು ನೀಡಲು ಸೂಚನೆ ನೀಡಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ಮಹಾ ಮಳೆಗೆ ಬೆಳಗಾವಿಯಲ್ಲಿ ಪ್ರವಾಹ ಭೀತಿ- 7 ಸೇತುವೆಗಳು ಜಲಾವೃತ

    ಮಹಾ ಮಳೆಗೆ ಬೆಳಗಾವಿಯಲ್ಲಿ ಪ್ರವಾಹ ಭೀತಿ- 7 ಸೇತುವೆಗಳು ಜಲಾವೃತ

    – ಕೃಷ್ಣಾ ನದಿಯಲ್ಲಿ ನೀರಿ ಪ್ರಮಾಣ ಗಣನೀಯ ಏರಿಕೆ

    ಚಿಕ್ಕೋಡಿ/ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣಾ ಸೇರಿದಂತೆ ವಿವಿಧ ನದಿಗಳಲ್ಲಿ ನೀಡಿನ ಒಳ ಹರಿವಿನ ಮಟ್ಟ ಗಣನೀಯವಾಗಿ ಹೆಚ್ಚಾಗುತ್ತಿದ್ದು, ಇದರಿಂದಾಗಿ ನದಿ ಪಾತ್ರದ ಗ್ರಾಮಸ್ಥರ ಎದೆ ಬಡಿತ ಹೆಚ್ಚುತ್ತಿದೆ.

    ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೃಷ್ಣಾ ಸೇರಿದಂತೆ ವಿವಿಧ ನದಿಗಳಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಬೆಳಗಾವಿ ಜಿಲ್ಲೆಯಲ್ಲಿ ಹರಿಯುವ, ಕೃಷ್ಣಾ, ಘಟಪ್ರಭಾ, ಮಲಪ್ರಭಾ, ವೇದಂಗಾ, ದೂದ್‍ಗಂಗಾ, ಪಂಚಗಂಗಾ ನದಿಗಳು ತುಂಬಿ ಹರಿಯುತ್ತಿವೆ. ಸದ್ಯ ಕೃಷ್ಣಾ ನದಿಗೆ 98 ಸಾವಿರ ಕ್ಯೂಸೆಕ್ಸ್ ನಷ್ಟು ನೀರು ಹರಿದು ಬರುತ್ತಿದ್ದು, ಪ್ರವಾಹದ ಮೂನ್ಸೂಚನೆ ನೀಡುತ್ತಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ನರಸಿಂಹವಾಗಡಿಯ ದತ್ತ ಮಂದಿರವೂ ಕೃಷ್ಣಾ ನದಿಯ ನೀರಿಗೆ ಸಂಪೂರ್ಣ ಜಲಾವೃತವಾಗಿದ್ದು, ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ಇರುವ ದತ್ತ ಮಂದಿರ ಸಹ ಅರ್ಧದಷ್ಟು ಮುಳುಗಿದೆ.

    ಚಿಕ್ಕೋಡಿ ವ್ಯಾಪ್ತಿಯಲ್ಲಿನ 7 ಸೇತುವೆಗಳು ಜಲಾವೃತವಾಗಿವೆ. ಸದ್ಯ ಕೃಷ್ಣಾ ನದಿಯ ತೀರದಲ್ಲಿ ಬರುವ ಅಥಣಿ, ಚಿಕ್ಕೋಡಿ, ನಿಪ್ಪಾಣಿ ಹಾಗೂ ರಾಯಭಾಗ ತಾಲೂಕಿನ ಗ್ರಾಮಸ್ಥರಲ್ಲಿ ಪ್ರವಾಹದ ಕರಿನೆರಳು ಮೂಡಿದ್ದು, ಹೀಗೆ ಮಳೆ ಮುಂದುವರೆದರೆ ಅನಾಹುತದ ಲಕ್ಷಣ ಗೋಚರಿಸುತ್ತಿದೆ. ಕೊರೊನಾ ಲಾಕ್‍ಡೌನ್ ಇನ್ನೇನು ಮುಗಿದು ನೆಮ್ಮದಿಯ ನಿಟ್ಟುಸಿರು ಬಿಟ್ಟೆವು ಎನ್ನುತ್ತಿರುವಾಗಲೇ ಮಹಾಮಳೆ ಮತ್ತು ಪ್ರವಾಹ ರಾಜ್ಯದ ನದಿ ತೀರದ ಜನರ ನೆಮ್ಮದಿ ಕೆಡಿಸಿದ್ದು, ಸರ್ಕಾರ ಹಾಗೂ ಅಧಿಕಾರಿಗಳು ಮುಂಜಾಗೃತಾ ಕ್ರಮ ವಹಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

  • ಪ್ರಾಣ ಉಳಿದಿದೆ, ಜೀವಮಾನದ ಸಂಪಾದನೆ ಮಣ್ಣು ಪಾಲಾಗಿದೆ- ಉಡುಪಿ ನೆರೆಯಲ್ಲಿ ಮಾಣೈ ತತ್ತರ

    ಪ್ರಾಣ ಉಳಿದಿದೆ, ಜೀವಮಾನದ ಸಂಪಾದನೆ ಮಣ್ಣು ಪಾಲಾಗಿದೆ- ಉಡುಪಿ ನೆರೆಯಲ್ಲಿ ಮಾಣೈ ತತ್ತರ

    ಉಡುಪಿ: ಜಿಲ್ಲೆಯಲ್ಲಿ ಸುರಿದ ಮಹಾಮಳೆ ಅವಾಂತರವನ್ನೇ ಸೃಷ್ಟಿಸಿದೆ. ಸುವರ್ಣ ನದಿ ತೀರದಲ್ಲಿ ಹತ್ತಾರು ಮನೆಗಳು ನೆಲಸಮವಾಗಿದೆ. ಹಿರಿಯಡ್ಕದ ಮಾಣೈ ಪರಿಸರ ನೆರೆಗೆ ಮೊದಲು ತುತ್ತಾದ ಗ್ರಾಮ. ಈ ಭಾಗದಲ್ಲಿ ಮೂರು ಮನೆಗಳು ಕುಸಿದು ಬಿದ್ದಿದ್ದು, ಮನೆಯಲ್ಲಿ ಮಲಗಿದ್ದವರು ಉಟ್ಟ ಬಟ್ಟೆಯಲ್ಲಿ ಹೊರಬಂದು ಎಲ್ಲವನ್ನೂ ಕಳೆದುಕೊಂಡಿದ್ದಾರೆ.

    ಮಾಣೈನ ಪಮ್ಮು ಕುಲಾಲ್ತಿ ಎಂಬವರ ಮನೆ ಸಂಪೂರ್ಣ ಕುಸಿದಿದೆ. ಕಳೆದ ವರ್ಷ ಬೆಳೆದ ಅಕ್ಕಿ, ಕೊಟ್ಟಿಗೆಯಲ್ಲಿ ಇಡೀ ವರ್ಷಕ್ಕೆ ಬೇಕಾಗುವಷ್ಟು ಒಣಹುಲ್ಲು, ಜಮೀನಿನ ದಾಖಲೆಗಳು, ಚಿನ್ನ-ಹಣ ಎಲ್ಲವೂ ಮಣ್ಣಿನಡಿ ಸೇರಿದೆ. ಈ ಹಿಂದೆ ಅಂಗಳದ ತನಕ ನೀರು ಬರುತ್ತಿತ್ತು. ಆದರೆ ಈ ಬಾರಿ ಸಂಪೂರ್ಣವಾಗಿ ಮನೆ ಮುಳುಗಡೆಯಾಗಿದೆ ಎಂದು ಮನೆಯವರು ಕಣ್ಣೀರಿಟ್ಟಿದ್ದಾರೆ. ಲಕ್ಷ್ಮಣ ಕುಲಾಲ ಅವರ ಮನೆಯ ಒಂದು ಭಾಗ ಬಿದ್ದಿದ್ದು ಮನೆಗೆ ಹಾನಿಯಾಗಿದೆ ಆಗಿದೆ.

    ಜಗ್ಗು ಕುಲಾಲ್, ಸುಂದರ, ಉದಯ ಎಂಬವರ ಮನೆಯೂ ಹಾನಿಗೀಡಾಗಿದೆ. ನೋಡನೋಡುತ್ತಿದ್ದಂತೆ ಕಣ್ಣೆದುರೇ ಮನೆ ಕುಸಿದು ಬಿದ್ದಿರುವುದನ್ನು ನೆನೆದು ಮನೆಮಂದಿ ದಿಗ್ಬ್ರಾಂತಿಗೊಳಗಾಗಿದ್ದಾರೆ. ಉಟ್ಟ ಬಟ್ಟೆಯಲ್ಲೇ 8 ಕುಟುಂಬಗಳು ಸುರಕ್ಷಿತ ಕೇಂದ್ರಕ್ಕೆ ಶಿಫ್ಟ್ ಆಗಿವೆ. ದನಕರುಗಳನ್ನು ರಾತ್ರೋರಾತ್ರಿ ಎತ್ತರಪ್ರದೇಶಕ್ಕೆ ರವಾನೆ ಮಾಡಿದ್ದರಿಂದ ಅವುಗಳ ಪ್ರಾಣ ಉಳಿದಿದೆ. ಉಳಿದ ಮೂರು ಮನೆಗಳು ಭಾರಿ ನೆರೆ ನೀರಿಗೆ ತೋಯ್ದು ಹೋಗಿದ್ದು ಗೋಡೆಗಳು ಬಿರುಕು ಬಿಟ್ಟಿದೆ. ಸ್ಥಳೀಯ ಪಂಚಾಯತ್ ಅಧಿಕಾರಿಗಳು ಜನಪ್ರತಿನಿಧಿಗಳು ಭೇಟಿ ಕೊಟ್ಟು ಸೂಕ್ತ ಪರಿಹಾರ ತಿಳಿಸಿ ಕೊಡುವ ಭರವಸೆ ನೀಡಿದ್ದಾರೆ.

    ಈ ಬಾರಿಯ ಭತ್ತದ ಬೇಸಾಯ ಕೂಡ ಸಂಪೂರ್ಣವಾಗಿ ಮಳೆನೀರಿಗೆ ಕೊಚ್ಚಿಹೋಗಿದೆ. ಕೂಡಿಟ್ಟ ತರಗೆಲೆ, ಒಣಹುಲ್ಲಿನ ಮೂಟೆ ತನಕ ಸ್ವರ್ಣ ನದಿ ಹರಿದಿದ್ದು ಅಪಾರ ಪ್ರಮಾಣದ ನಷ್ಟವಾಗಿದೆ ಎಂದು ಕುಟುಂಬಗಳು ಅಸಹಾಯಕತೆಯನ್ನು ತೋಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪಮ್ಮು ಕುಲಾಲ್ತಿ, ಕಣ್ಣಮುಂದೆ ಕಟ್ಟಿದ ಮನೆ ಕುಸಿದು ಬಿದ್ದಾಗ ಪ್ರಾಣವೇ ಹೋದಂತಾಯಿತು. ಮುಂದೆ ಏನು ಮಾಡುವುದು ಗೊತ್ತಿಲ್ಲ. ಮನೆಯ ಒಳಗೆ ಇದ್ದ ಬಟ್ಟೆ, ಟಿವಿ, ಕಪಾಟು-ಅಕ್ಕಿ ಚಿನ್ನ ಎಲ್ಲವೂ ಮಣ್ಣು ಪಾಲಾಗಿದೆ. ಮತ್ತೆ ಅದನ್ನೆಲ್ಲ ಸಂಪಾದನೆ ಮಾಡುವ ಶಕ್ತಿ ನಮಗೆ ಇಲ್ಲ. ನಮ್ಮ ಪ್ರಾಣ ಉಳಿದಿದೆ ಅನ್ನೋದು ಬಿಟ್ಟು ಎಲ್ಲವನ್ನೂ ಕಳೆದುಕೊಂಡಿದ್ದೇವೆ ಎಂದರು.

  • ಮೊದಲ ಬಾರಿಗೆ ಉಡುಪಿ ಕೃಷ್ಣಮಠದ ರಾಜಾಂಗಣ ಮುಳುಗಡೆ

    ಮೊದಲ ಬಾರಿಗೆ ಉಡುಪಿ ಕೃಷ್ಣಮಠದ ರಾಜಾಂಗಣ ಮುಳುಗಡೆ

    ಉಡುಪಿ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಉಡುಪಿಯ ಕೃಷ್ಣಮಠದ ರಾಜಾಂಗಣ ಮೊದಲ ಬಾರಿಗೆ ಮುಳುಗಡೆಯಾಗಿದೆ.

    ಉಡುಪಿಯಲ್ಲಿ ಕಳೆದ 24 ತಾಸುಗಳಲ್ಲಿ 316 ಮಿಲಿ ಮೀಟರ್ ಮಳೆ ಬಿದ್ದಿದೆ. ಉಡುಪಿ ತಾಲೂಕು ಒಂದರಲ್ಲಿಯೇ ಇಷ್ಟು ಪ್ರಮಾಣದ ಮಳೆ ಸುರಿದಿದೆ. ಶನಿವಾರ ಮಧ್ಯಾಹ್ನದಿಂದ ಉಡುಪಿಯಲ್ಲಿ ಹನಿ ನಿಲ್ಲದೆ ಮಳೆಯಾಗಿದೆ. ಸ್ವರ್ಣಾ, ಸೀತಾ, ಮಡಿಸಾಲು, ಉದ್ಯಾವರ, ಶಾಂಭವಿ, ಪಾಪನಾಶಿನಿ, ನದಿಗಳು ಮಟ್ಟ ಮೀರಿ ಹರಿಯುತ್ತಿವೆ. ಇತ್ತ ಕೃಷ್ಣಮಠ ಕೂಡ ಜಾಲವೃತವಾಗಿದೆ.

    ಭಾರೀ ಮಳೆಯಿಂದ ಕೃಷ್ಣಮಠದ ರಾಜಾಂಗಣಕ್ಕೆ ನೀರು ನುಗ್ಗಿದೆ. ಇಂದ್ರಾಣಿ ನದಿಯ ರೌದ್ರ ನರ್ತನದಿಂದ ಮಠದ ಪಾರ್ಕಿಂಗ್ ಏರಿಯಾ ಸಂಪೂರ್ಣ ಜಲಾವೃತವಾಗಿದೆ. ಮಠದ ಗೀತಾ ಮಂದಿರ, ಭೋಜನಶಾಲೆ ಸುತ್ತಲೂ ನೀರು ತುಂಬಿದೆ. ಈ ವಿಚಾರವಾಗಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಕೃಷ್ಣಮಠದ ಮ್ಯಾನೇಜರ್ ಗೋವಿಂದರಾಜ್, ನಾನು ಗೋಶಾಲೆಗೆ ಹೋಗಿ ಬಂದಿದ್ದು, ಅಲ್ಲಿ ಗೋವುಗಳೆಲ್ಲ ಸುರಕ್ಷಿತವಾಗಿವೆ ಎಂದು ಮಾಹಿತಿ ನೀಡಿದ್ದಾರೆ.

    ಜೊತೆಗೆ ಸದ್ಯ ಮಠದಲ್ಲಿರುವ ಜನರಿಗೆ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಮಠಕ್ಕೆ ಯಾವುದೇ ಸಮಸ್ಯೆಯಾಗಿಲ್ಲ. ಆದರೆ ಮಠದ ಸುತ್ತಮುತ್ತಾ ಮಳೆ ನೀರು ತುಂಬಿ ಕೊಂಡಿದೆ. ತುಂಬಿಕೊಂಡ ನೀರನ್ನು ಮೋಟರ್ ಮೂಲಕ ಹೊರ ಹಾಕುವ ಕೆಲಸ ನಡೆಯುತ್ತಿದೆ. ಮಠದ ಸುತ್ತ ಇರುವ ಮನೆಗಳಿಗೆ ನೀರು ನುಗ್ಗಿದೆ ಅವರೆಲ್ಲರನ್ನು ರಕ್ಷಣೆ ಮಾಡಲಾಗಿದೆ ಎಂದು ಮ್ಯಾನೇಜರ್ ಗೋವಿಂದರಾಜ್ ತಿಳಿಸಿದ್ದಾರೆ.

    ಉಡುಪಿ ತಾಲೂಕಿನಲ್ಲಿ ಅತ್ಯಧಿಕ 315.3 ಮಿ.ಮೀ. ಮಳೆ ದಾಖಲಾಗಿದೆ. ಮಲೆನಾಡಿನ ತಪ್ಪಲಿನಲ್ಲಿರುವ ಕಾರ್ಕಳ ತಾಲೂಕಿನಲ್ಲಿ 256.5 ಮಿ.ಮೀ. ಮಳೆ ಬಿದ್ದಿದೆ. ಕಳೆದ ಮೂರು ನಾಲ್ಕು ದಿನಗಳಿಂದ ಹೆಚ್ಚು ಮಳೆಯಾಗುತ್ತಿದ್ದ ಕುಂದಾಪುರ ತಾಲೂಕಿನಲ್ಲಿ ಕನಿಷ್ಠ 54.5 ಮಿ.ಮೀ. ಮಳೆ ಸುರಿದಿದೆ. ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಬಿದ್ದ ಮಳೆ ಪ್ರಮಾಣದ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿವೆ.

  • ರಾಯಚೂರಿನಲ್ಲಿ ಭಾರೀ ಮಳೆ – 6 ಗ್ರಾಮಗಳ ಸಂಪರ್ಕ ಕಡಿತ

    ರಾಯಚೂರಿನಲ್ಲಿ ಭಾರೀ ಮಳೆ – 6 ಗ್ರಾಮಗಳ ಸಂಪರ್ಕ ಕಡಿತ

    ರಾಯಚೂರು: ಜಿಲ್ಲೆಯಾದ್ಯಂತ ಸುರಿದ ಭಾರೀ ಮಳೆಗೆ ಮಾನ್ವಿ ತಾಲೂಕಿನ ಮುಷ್ಟೂರು ಸೇತುವೆ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಿಂದ ಸುಮಾರು 6 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ.

    ಮುಷ್ಠೂರು, ಜಾಗೀರ್ ಪನ್ನೂರು, ಯಡಿಯಾಳ್, ದೇವಿಪುರ, ಚೀಕಲಪರ್ವಿ ಸೇರಿದಂತೆ 6 ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ. ಸಂಪರ್ಕ ಕಡಿತದಿಂದ ವಿದ್ಯಾರ್ಥಿಗಳು, ಗ್ರಾಮಸ್ಥರು ಪರದಾಡುತ್ತಿದ್ದಾರೆ. ಮಾನ್ವಿ ಪಟ್ಟಣಕ್ಕೆ ಬರಲು 40 ಕಿ.ಮೀ ಹೆಚ್ಚುವರಿ ಸಂಚರಿಸುವ ಅನಿವಾರ್ಯತೆ ಎದುರಾಗಿದೆ.

    ಮುಳುಗಡೆಯಾದ ಸೇತುವೆ ಮಾರ್ಗ ಕೇವಲ 4 ಕಿ.ಮೀ ನಲ್ಲಿ ಮಾನ್ವಿಗೆ ಸಂಪರ್ಕ ಕಲ್ಪಿಸುತ್ತಿತ್ತು. ನಾಲ್ಕು ಅಡಿಯಷ್ಟು ಎತ್ತರದಲ್ಲಿ ಸೇತುವೆ ಮೇಲಿಂದ ನೀರು ಹರಿಯುತ್ತಿರುವುದರಿಂದ ಕೆಲವು ಕಡೆ ರಸ್ತೆ ಕಿತ್ತು ಹೋಗಿದೆ. ನೂತನ ಸೇತುವೆ ಕಾರ್ಯ ಅರ್ಧಕ್ಕೆ ನಿಂತಿರುವುದರಿಂದ ಹಳ್ಳ ಬಂದಾಗಲೆಲ್ಲಾ ರಸ್ತೆ ಕಡಿತಗೊಳ್ಳುತ್ತಿದೆ. 2009ರಲ್ಲಿ ಉಂಟಾದ ಪ್ರವಾಹದಲ್ಲಿ ಸೇತುವೆ ಕೊಚ್ಚಿ ಹೋಗಿತ್ತು. 2011 ರಲ್ಲಿ ಆರಂಭಗೊಂಡಿದ್ದ ಸೇತುವೆ ಕಾರ್ಯ ಅನುದಾನ ಕೊರತೆಯಿಂದ ಸ್ಥಗಿತಗೊಂಡಿರುವ ಹಿನ್ನೆಲೆ ಹಳ್ಳ ತುಂಬಿದ್ದರಿಂದ ಕೆಳಮಟ್ಟದ ಸೇತುವೆ ಮುಳುಗಡೆಯಾಗಿದೆ.

  • ಕೆ.ಆರ್.ಎಸ್ ನಿಂದ ನೀರು ಬಿಡುಗಡೆ-ಮುಳುಗೋ ಭೀತಿಯಲ್ಲಿ ಇತಿಹಾಸ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ

    ಕೆ.ಆರ್.ಎಸ್ ನಿಂದ ನೀರು ಬಿಡುಗಡೆ-ಮುಳುಗೋ ಭೀತಿಯಲ್ಲಿ ಇತಿಹಾಸ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ

    ಮಂಡ್ಯ: ಕೆ.ಆರ್.ಎಸ್ ಅಣೆಕಟ್ಟಿನಿಂದ ಒಂದು ಲಕ್ಷ ಕ್ಯೂಸೆಕ್‍ಗೂ ಅಧಿಕ ಪ್ರಮಾಣದ ನೀರನ್ನು ಹೊರ ಬಿಟ್ಟಿರುವುದರಿಂದ ಇತಿಹಾಸ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಮುಳುಗುವ ಭೀತಿಯಲ್ಲಿದೆ.

    ವೆಲ್ಲೆಸ್ಲಿ ಸೇತುವೆ ಸ್ಪರ್ಶಿಸಿ ಕಾವೇರಿ ನದಿ ಭೋರ್ಗರೆದು ಹರಿಯುತ್ತಿದೆ. ಇದೇ ರೀತಿ ಹೊರ ಹರಿವು ಹೆಚ್ಚಾದರೆ ಇತಿಹಾಸ ಪ್ರಸಿದ್ಧವಾದ ಈ ಸೇತುವೆ ಮುಳುಗಡೆಯಾಗುತ್ತದೆ. ಸೇತುವೆಯ ಅಕ್ಕ ಪಕ್ಕ ಇರುವ ತೋಟಗಳು ಸಂಪೂರ್ಣ ಜಲಾವೃತವಾಗಿದೆ.

    ತೆಂಗಿನ ಮರದ ಅರ್ಧದವರೆಗೂ ನೀರು ಆವರಿಸಿದೆ. ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವುದರಿಂದ ವೆಲ್ಲೆಸ್ಲಿ ಸೇತುವೆ ಬಳಿ ಪ್ರವಾಸಿಗರು, ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸೇತುವೆಯ ಎರಡೂ ಬದಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದೆ. ಕೆ.ಆರ್.ಎಸ್ ನಿಂದ ಹೊರಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ವೆಲ್ಲಿಸ್ಲಿ ಸೇತುವೆ ಬಳಿಯಿರುವ ರಾಮಕೃಷ್ಣ ಮಠ ಕೂಡ ಜಲಾವೃತವಾಗಿದೆ.

    ಕೆ.ಆರ್.ಸಾಗರ ಇಂದಿನ ನೀರಿನ ಮಟ್ಟ 118.75 ಅಡಿ ಇದೆ. 1,87,721 ಕ್ಯೂಸೆಕ್ ಒಳಹರಿವು ಇದ್ದರೆ 1,19,997 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. 124.80 ಅಡಿ ಗರಿಷ್ಠ ಎತ್ತರದ ಡ್ಯಾಂನಲ್ಲಿ ಪ್ರಸ್ತುತ 41.484 ಟಿಎಂಸಿ ನೀರು ಸಂಗ್ರಹಗೊಂಡಿದೆ.

  • ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ- ಗುಡ್ಡ ಕುಸಿತ, ಧರೆಗುರುಳಿದ ಮರಗಳು

    ಭಾರೀ ಮಳೆಗೆ ಹೆಬ್ಬಾಳೆ ಸೇತುವೆ ಮುಳುಗಡೆ- ಗುಡ್ಡ ಕುಸಿತ, ಧರೆಗುರುಳಿದ ಮರಗಳು

    ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಳೆದ ಬಾರಿ 17 ಬಾರಿ ಮುಳುಗಿದ್ದ ಹೆಬ್ಬಾಳೆ ಸೇತುವೆ ಈ ವರ್ಷ ಮೊದಲ ಬಾರಿ ಮುಳುಗಡೆಯಾಗಿದ್ದು, ಮಹಾಮಳೆಗೆ ಜನ ಮನೆಯಿಂದ ಹೊರಬರದಂತ ಸ್ಥಿತಿ ನಿರ್ಮಾಣವಾಗಿದೆ.

    ಮೂರು ದಿನಗಳಿಂದ ಮೂಡಿಗೆರೆ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿತ್ತು. ಆದರೆ, ಸೋಮವಾರ ರಾತ್ರಿಯಿಂದ ಜಿಲ್ಲೆಯ ಮಲೆನಾಡು ಭಾಗಗಳಾದ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರದಲ್ಲಿ ಎಡೆಬಿಡದೆ ಧಾರಾಕಾರ ಮಳೆಯಾಗುತ್ತಿದ್ದು, ಜನ ಆತಂಕಕ್ಕೀಡಾಗಿದ್ದಾರೆ. ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಎನ್.ಆರ್.ಪುರ, ಮೂಡಿಗೆರೆ, ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

    ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದ ಜೀವ ನದಿಗಳಿಗೆ ಕಳೆ ಬಂದಿದ್ದು, ತುಂಗಾ-ಭದ್ರಾ ಹಾಗೂ ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಕೊಟ್ಟಿಗೆಹಾರ, ಚಾರ್ಮಾಡಿಯಲ್ಲಿ ಮಳೆಯ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ಚಾರ್ಮಾಡಿಯಲ್ಲಿ ರಸ್ತೆ ಬದಿಯ ಗುಡ್ಡ ಕುಸಿತ ಉಂಟಾಗುತ್ತಿದ್ದು, ಮಳೆ-ಗಾಳಿಗೆ ಮರಗಳು ಧರೆಗುರುಳುತ್ತಿವೆ.

    ಶಾಲಾ-ಕಾಲೇಜುಗಳಿಗೆ ರಜೆ:
    ಮಹಾ ಮಳೆ, ಪ್ರವಾಹ ಹಿನ್ನೆಲೆ ಹಲವೆಡೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ರಾಮದುರ್ಗ ತಾಲೂಕು ಹೊರತುಪಡಿಸಿ ಬೆಳಗಾವಿಯಾದ್ಯಂತ ಶಾಲಾ-ಕಾಲೇಜಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ಕರಾವಳಿ, ಮಲೆನಾಡು, ಉತ್ತರ ಕನ್ನಡದಲ್ಲೂ ಧಾರಾಕಾರ ಮಳೆಯಾಗುತ್ತಿದ್ದು, ಉತ್ತರ ಕನ್ನಡದ ಹಳಿಯಾಳ, ದಾಂಡೇಲಿ ತಾಲೂಕು ಹೊರತುಪಡಿಸಿ ಉಳಿದ 9 ತಾಲೂಕುಗಳ ಶಾಲೆಗಳಿಗೆ ರಜೆ ನೀಡಲಾಗಿದೆ.

    ಇತ್ತ ದಕ್ಷಿಣ ಕನ್ನಡದ ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಫೋಷಿಸಲಾಗಿದೆ. ಮಲೆನಾಡಿನ ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ, ಶೃಂಗೇರಿಯಲ್ಲೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಶಿವಮೊಗ್ಗದ ತೀರ್ಥಹಳ್ಳಿ, ಸಾಗರ, ಹೊಸನಗರ ತಾಲೂಕುಗಳಲ್ಲೂ ಶಾಲೆಗಳಿಗೆ ರಜೆ ನೀಡಲಾಗಿದೆ. ಶಿರಸಿ, ಸಿದ್ದಾಪುರ ಭಾಗದಲ್ಲಿಯೂ ರಜೆ ನೀಡಲಾಗಿದೆ. ಹಾಸನದ ಬೇಲೂರು ತಾಲೂಕಿನ ಅರೆಹಳ್ಳಿ, ಚೀಕನಹಳ್ಳಿ ನಾರ್ವೆ ಹೋಬಳಿ, ಆಲೂರು ತಾಲ್ಲೂಕಿನ ಹೊಸಕೋಟೆ, ಕುಂದೂರು, ಪಾಳ್ಯ ಹೋಬಳಿಗಳ ಶಾಲೆ ಕಾಲೇಜುಗಳಿಗೆ ರಜೆ ಫೋಷಿಸಲಾಗಿದೆ.

  • ಹಾವೇರಿಯಲ್ಲಿ ಸೇತುವೆ ಮುಳುಗಡೆ- ಜನರ ಸಮಸ್ಯೆಗೆ ಕ್ಯಾರೆ ಅಂತಿಲ್ಲ ಜನಪ್ರತಿನಿಧಿಗಳು

    ಹಾವೇರಿಯಲ್ಲಿ ಸೇತುವೆ ಮುಳುಗಡೆ- ಜನರ ಸಮಸ್ಯೆಗೆ ಕ್ಯಾರೆ ಅಂತಿಲ್ಲ ಜನಪ್ರತಿನಿಧಿಗಳು

    ಹಾವೇರಿ: ಅತ್ತ ಹೊಸ ಸರ್ಕಾರ ರಚಿಸೋಕೆ ಬಿಜೆಪಿ ಕಸರತ್ತು ನಡೆಸುತ್ತಿದೆ, ಇತ್ತ ಇರೋ ಸರ್ಕಾರ ಉಳಿಸಿಕೊಳ್ಳೋಕೆ ದೋಸ್ತಿಗಳು ಒದ್ದಾಡುತ್ತಿದ್ದಾರೆ. ಹೀಗೆ ಎಲ್ಲರೂ ಅಧಿಕಾರದ ಯುದ್ಧದಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಜನರ ಸಮಸ್ಯೆಯನ್ನು ಕೇಳುವವರೇ ಇಲ್ಲವಾಗಿದ್ದಾರೆ.

    ಹೌದು, ರಾಜಕೀಯ ಹೈಡ್ರಾಮದಲ್ಲಿ ಮುಳುಗಿರುವ ರಾಜಕಾರಣಿಗಳಿಗೆ ಜನರ ಸಮಸ್ಯೆಗೆ ಪರಿಹಾರ ನೀಡಲು ಆಗುತ್ತಿಲ್ಲ. ಬಿಜೆಪಿ ಶಾಸಕ ಬಸವರಾಜ್ ಬೊಮ್ಮಾಯಿಯವರ ಕ್ಷೇತ್ರ ಅದಕ್ಕೆ ಸಾಕ್ಷಿಯಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭೆ ವ್ಯಾಪ್ತಿಯಲ್ಲಿ ಬರೋ ಸವಣೂರು ತಾಲೂಕಿನ ಕಳಸೂರು ಗ್ರಾಮದ ಸೇತುವೆ ಮಳೆಗೆ ಮುಳುಗಡೆಯಾಗಿದೆ. ವರದಾ ನದಿಯಲ್ಲಿ ಮಳೆಗಾಲದಲ್ಲಿ ನೀರು ಹೆಚ್ಚಾಗಿ ಐದಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಈ ಸೇತುವೆ ಮುಳುಗಿ ಹೋಗುತ್ತೆ.

    ಸೇತುವೆ ಎತ್ತರಿಸುವಂತೆ ಹಲವಾರು ವರ್ಷಗಳಿಂದ ಸ್ಥಳೀಯರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದು ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಜನರಿಂದ ಆರಿಸಿ ಜನರಿಗಾಗಿ ಕೆಲಸ ಮಾಡಬೇಕಾದವರು ಕ್ಯಾರೆ ಅನ್ನುತ್ತಿಲ್ಲ. ಇದರಿಂದಾಗಿ ಕೃಷಿಕರು ಸಂಕಷ್ಟ ಅನುಭವಿಸುತ್ತಿದ್ದು, 40 ಕಿಲೋಮೀಟರ್ ಸುತ್ತಿ ಬಳಸಿ ಜಮೀನಿಗೆ ಹೋಗಬೇಕಾದ ಪರಿಸ್ಥಿತಿ ಇದೆ. ಅಷ್ಟೇ ಅಲ್ಲದೆ ಈ ನೀರಿನ ನಡುವೆಯೇ ಸೇತುಗೆ ದಾಟಲು ಹೋಗಿ ಈ ಹಿಂದೆ ಅದೆಷ್ಟೋ ಜನ ಜೀವ ಕೂಡ ಬಿಟ್ಟಿದ್ದಾರೆ.

  • ಹೆಬ್ಬಾಳೆ ಸೇತುವೆ ಮುಳುಗಡೆಗೆ ಒಂದೇ ಅಡಿ ಬಾಕಿ – ಕರಾವಳಿಯಲ್ಲಿ ಮತ್ತೆ ಮುಂಗಾರು ಬಿರುಸು

    ಹೆಬ್ಬಾಳೆ ಸೇತುವೆ ಮುಳುಗಡೆಗೆ ಒಂದೇ ಅಡಿ ಬಾಕಿ – ಕರಾವಳಿಯಲ್ಲಿ ಮತ್ತೆ ಮುಂಗಾರು ಬಿರುಸು

    ಚಿಕ್ಕಮಗಳೂರು/ಮಂಗಳೂರು: ಮಲೆನಾಡಲ್ಲಿ ಮಳೆ ಅಬ್ಬರ ಮುಂದುವರಿದಿದ್ದು, ಚಿಕ್ಕಮಗಳೂರು ಜಿಲ್ಲೆಯ ಹೆಬ್ಬಾಳೆ ಸೇತುವೆ ಮುಳುಗಡೆಗೆ ಕೇವಲ ಒಂದೇ ಅಡಿ ಬಾಕಿ ಉಳಿದಿದೆ.

    ಹೆಬ್ಬಾಳೆ ಸೇತುವೆ ಮುಳುಗಡೆಯಾದಲ್ಲಿ ಕಳಸ-ಹೊರನಾಡು ಸಂಪರ್ಕ ಕಡಿತ ಕಡಿತವಾಗಲಿದೆ. ಜೀವ ನದಿಗಳು ಮೈದುಂಬಿ ಹರಿಯುತ್ತಿದ್ದು, ತುಂಗಾ, ಭದ್ರಾ, ಹೇಮಾವತಿ ಒಳ ಹರಿವಿನಲ್ಲಿ ಭಾರೀ ಪ್ರಮಾಣದ ಏರಿಕೆಯಾಗಿದೆ.

    ಕುದುರೆಮುಖ, ಕಳಸ, ಸಂಸೆ, ಬಾಳೆಹೊಳೆ, ಬಸ್ರೀಕಟ್ಟೆ, ತನಿಕೋಡು ವ್ಯಾಪ್ತಿಯಲ್ಲಿ ಹಾಗೂ ಶೃಂಗೇರಿ, ಎನ್.ಆರ್.ಪುರ, ಮೂಡಿಗೆರೆ, ಕೊಪ್ಪದಲ್ಲೂ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

    ಇತ್ತ ಕರಾವಳಿ ಭಾಗದಲ್ಲೂ ಮಳೆರಾಯನ ಅಬ್ಬ ಜೋರಾಗಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಗಾಳಿ ಬೀಸುವ ಕುರಿತು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತೀರ ಪ್ರದೇಶದಲ್ಲಿ ಸಮುದ್ರ 4 ಮೀಟರ್ ಎತ್ತರಕ್ಕೆ ಅಬ್ಬರಿಸುವ ಸಾಧ್ಯತೆ ಇದ್ದು, ಸುಮಾರು 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಸಿದೆ.