Tag: ಮುಸ್ಲಿಂ ಮೀಸಲಾತಿ

  • ವಕ್ಫ್ ಹೆಸ್ರಲ್ಲಿ ಬಡವರ ಭೂಮಿ ಕಿತ್ತುಕೊಳ್ಳಲು ಸಾಧ್ಯವಿಲ್ಲ, ಲೂಟಿ ನಿಲ್ಲಲಿದೆ – ನರೇಂದ್ರ ಮೋದಿ

    ವಕ್ಫ್ ಹೆಸ್ರಲ್ಲಿ ಬಡವರ ಭೂಮಿ ಕಿತ್ತುಕೊಳ್ಳಲು ಸಾಧ್ಯವಿಲ್ಲ, ಲೂಟಿ ನಿಲ್ಲಲಿದೆ – ನರೇಂದ್ರ ಮೋದಿ

    – ಕರ್ನಾಟಕದ ಗುತ್ತಿಗೆ ಮೀಸಲಾಗಿ ಉಲ್ಲೇಖಿಸಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ
    – ಕಾಂಗ್ರೆಸ್‌ ಮೂಲಭೂತವಾದಿಗಳನ್ನ ಓಲೈಸುತ್ತಿದೆ ಎಂದು ಕಿಡಿ

    ಚಂಡೀಗಢ (ಹಿಸಾರ್‌): ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿ ಕಾಂಗ್ರೆಸ್‌ (Congress) ತನ್ನ ನಿಲುವುಗಳ ಮೂಲಕ ಮೂಲಭೂತವಾದಿಗಳನ್ನು ಓಲೈಸುತ್ತಿದೆ ಮತ್ತು ಅದು ಮತಬ್ಯಾಂಕ್ (Vote Bank) ರಾಜಕೀಯಕ್ಕಾಗಿ ಸಂವಿಧಾನವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆರೋಪಿಸಿದರು.

    ಹರಿಯಾಣದ (Haryana) ಹಿಸಾರ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಮೂಲಭೂತವಾದಿಗಳನ್ನು ಮಾತ್ರ ಓಲೈಸಿದೆ. ಇದಕ್ಕೆ ದೊಡ್ಡ ಪುರಾವೆ ವಕ್ಫ್ ಕಾನೂನು. ವಕ್ಫ್ ಹೆಸರಿನಲ್ಲಿ ಲಕ್ಷಾಂತರ ಹೆಕ್ಟೇರ್ ಭೂಮಿಯನ್ನು ಮೀಸಲಿಡಲಾಗಿತ್ತು. ಆದರೆ ಬಡ ಮುಸ್ಲಿಮರು ಎಂದಿಗೂ ಪ್ರಯೋಜನ ಪಡೆಯಲಿಲ್ಲ ಕೇವಲ ಭೂ ಮಾಫಿಯಾ ಇದರ ಲಾಭ ಗಳಿಸಿತು. ಇದನ್ನೂ ಓದಿ: ಗುಜರಾತ್‌ ಕರಾವಳಿಯಲ್ಲಿ ಭರ್ಜರಿ ಬೇಟೆ – 1,800 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

    ಬಡವರ ಭೂಮಿಯನ್ನು ವಕ್ಛ್ (Waqf) ಹೆಸರಿನಲ್ಲಿ ಕಿತ್ತುಕೊಳ್ಳಲಾಗುತ್ತಿತ್ತು, ಈ ಲೂಟಿ ಈಗ ಹೊಸ ಕಾನೂನಿನೊಂದಿಗೆ ನಿಲ್ಲುತ್ತದೆ, ತಿದ್ದುಪಡಿ ಮಾಡಿದ ವಕ್ಫ್ ಕಾನೂನಿನಡಿಯಲ್ಲಿ ವಕ್ಫ್ ಮಂಡಳಿಯು ಯಾವುದೇ ಆದಿವಾಸಿ ಭೂಮಿಯನ್ನು ಪಡೆಯಲು ಸಾಧ್ಯವಿಲ್ಲ. ಬಡ ಮುಸ್ಲಿಮರ ಹಕ್ಕುಗಳನ್ನು ಖಾತರಿಪಡಿಸುವುದು ನಿಜವಾದ ಸಾಮಾಜಿಕ ನ್ಯಾಯ ಎಂದು ಮೋದಿ ಹೇಳಿದರು. ಇದನ್ನೂ ಓದಿ: ಮನೆಗೆ ನುಗ್ಗಿ, ಕಾರು ಸ್ಫೋಟಿಸಿ ಕೊಲೆ ಮಾಡುವುದಾಗಿ ನಟ ಸಲ್ಮಾನ್‌ ಖಾನ್‌ಗೆ ಬೆದರಿಕೆ

    ಕಾಂಗ್ರೆಸ್ ಪಕ್ಷವು ಅಂಬೇಡ್ಕರ್ ಅವರ ದೃಷ್ಟಿಕೋನಕ್ಕೆ ದ್ರೋಹ ಬಗೆದಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳನ್ನು 2ನೇ ದರ್ಜೆಯ ನಾಗರಿಕರು ಎಂದು ಪರಿಗಣಿಸಿದೆ. ಡಾ. ಅಂಬೇಡ್ಕರ್ ಬಡವರು ಮತ್ತು ಹಿಂದುಳಿದವರಿಗೆ ಘನತೆಯ ಕನಸು ಕಂಡಿದ್ದರು. ಆದರೆ ಕಾಂಗ್ರೆಸ್ ಮತ ಬ್ಯಾಂಕ್ ರಾಜಕೀಯದ ವೈರಸ್ ಅನ್ನು ಹರಡಿತು ಮತ್ತು ಅವರ ದೃಷ್ಟಿಕೋನವನ್ನು ನಿರ್ಬಂಧಿಸಿತು ಎಂದು ಅವರು ಹೇಳಿದರು. ಅಂಬೇಡ್ಕರ್ ಜೀವಂತವಾಗಿದ್ದಾಗ ಅವರನ್ನು ಅವಮಾನಿಸಿದರು, ಚುನಾವಣೆಯಲ್ಲಿ ಸೋಲುವಂತೆ ಮಾಡಿದರು ಮತ್ತು ಅವರ ಪರಂಪರೆಯನ್ನು ಅಳಿಸಲು ಪ್ರಯತ್ನಿಸಿದರು.

    ನಮ್ಮ ಸಂವಿಧಾನದಲ್ಲಿ ಧರ್ಮದ ಆಧಾರದ ಮೇಲೆ ಮೀಸಲಾತಿ ನಿಷೇಧಿಸಲಾಗಿದೆ. ಎಸ್‌ಸಿ, ಎಸ್‌ಟಿ, ಒಬಿಸಿಗಳಿಗೆ ಮಾತ್ರ ಮೀಸಲಾತಿ ಕಲ್ಪಿಸಲಾಗಿದೆ ಆದರೆ ಕಾಂಗ್ರೆಸ್ ಈ ಬಗ್ಗೆ ಎಂದು ಎಂದಿಗೂ ಚಿಂತಿಸಲಿಲ್ಲ ಬಾಬಾ ಸಾಹೇಬ್ ಅಂಬೇಡ್ಕರ್ ಕಂಡ ಕನಸನ್ನು ಕಾಂಗ್ರೆಸ್ ನನಸಾಗಿಸಲಿಲ್ಲ, ಸಂವಿಧಾನದ ನಿಬಂಧನೆಗಳನ್ನು ಸಮಾಧಾನಪಡಿಸುವ ಸಾಧನವನ್ನಾಗಿ ಮಾಡಿಕೊಂಡು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಗುತ್ತಿಗೆಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಹಕ್ಕುಗಳನ್ನು ಕಿತ್ತುಕೊಂಡು ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಿದೆ. ಆದರೆ ಅಂಬೇಡ್ಕರ್‌ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲಾಗುವುದಿಲ್ಲ ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಬರೆದಿದ್ದಾರೆ ಈ ನಿಯಮವನ್ನು ಕಾಂಗ್ರೆಸ್‌ ಉಲ್ಲಂಘಿಸಿದೆ ಎಂದರು.

    ಏಕರೂಪ ನಾಗರಿಕ ಸಂಹಿತೆಯ ಕುರಿತು ಮಾತನಾಡಿದ ಪ್ರಧಾನಿ, ಕಾಂಗ್ರೆಸ್ ಸಂವಿಧಾನವನ್ನು ಅಧಿಕಾರಕ್ಕಾಗಿ ಒಂದು ಸಾಧನವನ್ನಾಗಿ ಪರಿವರ್ತಿಸಿದೆ ಮತ್ತು ಅದರ ಸಾಂವಿಧಾನಿಕ ಮನೋಭಾವದ ಹೊರತಾಗಿಯೂ ಸಾಮಾನ್ಯ ನಾಗರಿಕ ಕಾನೂನನ್ನು ಜಾರಿಗೆ ತರುವುದನ್ನು ವಿರೋಧಿಸಿದೆ ಎಂದು ಹೇಳಿದರು. ಉತ್ತರಾಖಂಡದಲ್ಲಿ ಈಗ ಜಾತ್ಯತೀತ ನಾಗರಿಕ ಸಂಹಿತೆ ಜಾರಿಯಲ್ಲಿದೆ. ಕಾಂಗ್ರೆಸ್ ಇನ್ನೂ ಅದನ್ನು ವಿರೋಧಿಸುತ್ತದೆ ಎಂದು ಅವರು ಹೇಳಿದರು. ಇದನ್ನೂ ಓದಿ: PNB Fraud Case | ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ಅರೆಸ್ಟ್‌

    ಪ್ರಧಾನಿ ಮೋದಿ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಂಬೇಡ್ಕರ್ ಅವರ ಆದರ್ಶಗಳ ಬಗ್ಗೆ ತಮ್ಮ ಪಕ್ಷದ ದಾಖಲೆಯನ್ನು ಸಮರ್ಥಿಸಿಕೊಂಡು ಬಿಜೆಪಿ ಐತಿಹಾಸಿಕ ಬೂಟಾಟಿಕೆ ಎಂದು ಆರೋಪಿಸಿದರು. ಈ ಜನರು ಅಂದು ಬಾಬಾ ಸಾಹೇಬರ ಶತ್ರುಗಳಾಗಿದ್ದರು, ಇಂದಿಗೂ ಹಾಗೆಯೇ ಇದ್ದಾರೆ ಎಂದು ಖರ್ಗೆ ಹೇಳಿದರು. ಬಾಬಾಸಾಹೇಬರು ಬೌದ್ಧಧರ್ಮವನ್ನು ಸ್ವೀಕರಿಸಿದಾಗ, ಅವರು ಅಸ್ಪೃಶ್ಯರು, ಬುದ್ಧನನ್ನು ಅಸ್ಪೃಶ್ಯರನ್ನಾಗಿ ಮಾಡಲಾಗಿದೆ ಎಂದು ಸಹ ಅವರು ಹೇಳಿದರು. ಅವರನ್ನು ಅಂದು ವಿರೋಧಿಸಿದ್ದು ಹಿಂದೂ ಮಹಾಸಭಾ ಎಂದರು‌.

    ಮಹಿಳಾ ಶಾಸನದಲ್ಲಿ ಮೀಸಲಾತಿಯ ಮೂಲಕ ಸಾಮಾಜಿಕ ನ್ಯಾಯಕ್ಕಾಗಿ ಕಾಂಗ್ರೆಸ್‌ನ ಒತ್ತಾಯವನ್ನು ಖರ್ಗೆ ಸ್ಮರಿಸಿದರು. ಎರಡು ವರ್ಷಗಳ ಹಿಂದೆ ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸಲ್ಪಟ್ಟಾಗ, ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಕೋಟಾಗಳನ್ನು ತಕ್ಷಣದ ಅನುಷ್ಠಾನ ಮತ್ತು ಸೇರ್ಪಡೆಗೆ ಒತ್ತಾಯಿಸಿದ್ದು ಕಾಂಗ್ರೆಸ್. ಇದಕ್ಕಾಗಿಯೇ ನಾವು ನಿರಂತರವಾಗಿ ಹೋರಾಡುತ್ತಿದ್ದೇವೆ ಎಂದು ಅವರು ಹೇಳಿದರು. ಇದನ್ನೂ ಓದಿ: ಇದೇ ಮೊದಲು – ಭಾರತದ ಸೇನಾ ಬತ್ತಳಿಕೆಗೆ ಲೇಸರ್‌ ಅಸ್ತ್ರ, ಪ್ರಯೋಗ ಯಶಸ್ವಿ

  • ಮುಸ್ಲಿಮರಿಗೆ ಮೀಸಲಾತಿ ಮೋದಿ ಕೊಟ್ರೆ ಸರಿ, ನಾವು ಕೊಟ್ರೆ ತಪ್ಪಾ? – ಯತೀಂದ್ರ

    ಮುಸ್ಲಿಮರಿಗೆ ಮೀಸಲಾತಿ ಮೋದಿ ಕೊಟ್ರೆ ಸರಿ, ನಾವು ಕೊಟ್ರೆ ತಪ್ಪಾ? – ಯತೀಂದ್ರ

    – ನಮ್ಮ ತಂದೆ ಸಿಎಂ ಆಗಿರೋವರೆಗೂ ಸಚಿವ ಸ್ಥಾನ ಕೇಳಲ್ಲ ಎಂದ ಎಂಎಲ್‌ಸಿ

    ಮೈಸೂರು: ಮುಸ್ಲಿಂ ಸಮುದಾಯದ 70 ಜಾತಿಗೆ ಮೀಸಲಾತಿ ಕೊಟ್ಟಿದ್ದೇವೆ ಎಂದು ಪ್ರಧಾನಿ ಮೋದಿಯವರು ಹೆಮ್ಮೆಯಿಂದ ಹೇಳಿದ್ದಾರೆ. ಮೋದಿಯವರು (Narendra Modi) ಮಾಡಿದರೆ ಸರಿ ನಾವು ಮಾಡಿದ್ರೆ ತಪ್ಪಾಗುತ್ತಾ? ಅಂತ ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಪ್ರಶ್ನೆ ಮಾಡಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ (Muslim reservation) ನೀಡಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.

    ನಾವು ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಟ್ಟಿಲ್ಲ. ಹಿಂದುಳಿದ ವರ್ಗ ಅನ್ನೋ ಕಾರಣಕ್ಕೆ ಕೊಟ್ಟಿದ್ದೇವೆ. ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗಕ್ಕೆ ಮೀಸಲಾತಿ ಕೊಟ್ಟಾಗ ಮುಸ್ಲಿಂ ಧರ್ಮದವರಿಗೂ ಕೊಡಬೇಕಾಗುತ್ತೆ. ಮುಸ್ಲಿಂ ಮೀಸಲಾತಿ ಕರ್ನಾಟಕ ಮಾತ್ರವಲ್ಲದೇ ಬೇರೆ ರಾಜ್ಯದಲ್ಲೂ ಇದೆ. ಆದ್ರೆ ನಾವು ಕೇವಲ ಮುಸ್ಲಿಂರಿಗೆ ಮಾತ್ರ ಮೀಸಲಾತಿ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

    1977 ರಲ್ಲೇ ಹಾವನೂರು ಆಯೋಗ ಮುಸ್ಲಿಮರನ್ನ ಹಿಂದುಳಿದ ವರ್ಗಕ್ಕೆ ಸೇರಿಸಿದೆ. ಹಿಂದುಳಿದ ವರ್ಗಕ್ಕೆ ಕೊಟ್ಟಾಗ ಮುಸ್ಲಿಮರಿಗೂ ಕೊಡಬೇಕಾಗುತ್ತೆ. ಮುಸ್ಲಿಂ ಸಮುದಾಯದ 70 ಜಾತಿಗೆ ಮೀಸಲಾತಿ ಕೊಟ್ಟಿದ್ದೇವೆ ಎಂದು ಪ್ರಧಾನಿ ಮೋದಿಯವರು ಹೆಮ್ಮೆಯಿಂದ ಹೇಳಿದ್ದಾರೆ. ಮೋದಿಯವರು ಮಾಡಿದರೆ ಸರಿ ನಾವು ಮಾಡಿದ್ರೆ ತಪ್ಪಾಗುತ್ತಾ? ಅಂತ ಬಿಜೆಪಿ ನಾಯಕರ ಹೇಳಿಕೆಗೆ ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

    ಸಚಿವ ಸ್ಥಾನ ಕೇಳಲ್ಲ:
    ಇದೇ ವೇಳೆ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ನಮ್ಮ ತಂದೆಯವರು ಎಲ್ಲಿ ತನಕ ಸಿಎಂ ಆಗಿರುತ್ತಾರೆ ಅಲ್ಲಿವರೆಗೆ ಸಚಿವ ಸ್ಥಾನ ಕೇಳಲ್ಲ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಅಂತ ಯತೀಂದ್ರ ಅವರು ಸ್ಪಷ್ಟಪಡಿಸಿದ್ದಾರೆ.

  • ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಸಂವಿಧಾನ ಬಾಹಿರ – ದತ್ತಾತ್ರೇಯ ಹೊಸಬಾಳೆ

    ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಸಂವಿಧಾನ ಬಾಹಿರ – ದತ್ತಾತ್ರೇಯ ಹೊಸಬಾಳೆ

    -ಬಿಜೆಪಿ ರಾಷ್ಟ್ರಾಧ್ಯಕ್ಷರ ನೇಮಕದಲ್ಲಿ ಸಂಘ ತಲೆ ಹಾಕಲ್ಲ ಎಂದ ಸರಕಾರ್ಯವಾಹ

    ಬೆಂಗಳೂರು: ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ಸಂವಿಧಾನ ಬಾಹಿರ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷರ ನೇಮಕದಲ್ಲಿ ಸಂಘ ತಲೆ ಹಾಕಲ್ಲ ಎಂದು ಆರ್‌ಎಸ್‌ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ (Dattatreya Hosabale) ಹೇಳಿದರು.

    ಬೆಂಗಳೂರಿನ (Bengaluru) ಚನ್ನೇನಹಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ (BJP) ರಾಷ್ಟ್ರಾಧ್ಯಕ್ಷರ ಆಯ್ಕೆ ವಿಚಾರ ಕೇಂದ್ರದ ಬಿಜೆಪಿಯೇ ನೋಡಿಕೊಳ್ಳಲಿದೆ. ರಾಷ್ಟ್ರಾಧ್ಯಕ್ಷರ ನೇಮಕಕ್ಕೂ ಸಂಘಕ್ಕೂ ಸಂಬಂಧ ಇಲ್ಲ. ಬಿಜೆಪಿ ಸಂಘವನ್ನು ಕೇಳಿ ನೇಮಕಾತಿ ಮಾಡಲ್ಲ. ಇನ್ನೂ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವುದನ್ನು ಸಂಘ ಖಂಡಿಸಿದೆ. ಸಂವಿಧಾನವು ಧರ್ಮ ಆಧಾರಿತ ಮೀಸಲಾತಿ ನೀಡುವುದಕ್ಕೆ ಅವಕಾಶ ನೀಡುವುದಿಲ್ಲ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲ. ಯಾರಾದರೂ ಹಾಗೆ ಮಾಡಿದರೆ ಅದು ನಮ್ಮ ಸಂವಿಧಾನ ಶಿಲ್ಪಿಗೆ ವಿರುದ್ಧವಾಗಿದೆ ಎಂದು ಕಿಡಿಕಾರಿದರು.ಇದನ್ನೂ ಓದಿ:ನಟಿ ರಮೋಲ ಒಂದು ದಿನದ ಖರ್ಚು ಕೇಳಿದ್ರೆ ಶಾಕ್ ಆಗ್ತೀರಾ!

    ಇನ್ನೂ ಮುಸ್ಲಿಮರಿಗೆ ಧರ್ಮಾಧಾರಿತ ಮೀಸಲಾತಿ ಕೊಡಲು ಮುಂದಾಗಿದ್ದ ಆಂಧ್ರಪ್ರದೇಶ (Andhra Pradesh) ಮತ್ತು ಮಹಾರಾಷ್ಟ್ರ (Maharashtra) ರಾಜ್ಯಗಳ ಪ್ರಯತ್ನಗಳನ್ನು ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್ ತಳ್ಳಿಹಾಕಿವೆ. ಅಂತಹ ಮೀಸಲಾತಿ ಒದಗಿಸಲು ಇರುವ ನಿಬಂಧನೆಗಳನ್ನು ನ್ಯಾಯಾಲಯಗಳು ತಿರಸ್ಕರಿಸಿವೆ ಎಂದು ತಿಳಿಸಿದರು.

    ಮಹಾರಾಷ್ಟ್ರ ಹಾಗೂ ಹಿಂದಿನ ಬಿಜೆಪಿ (BJP)  ಸರ್ಕಾರದಲ್ಲಿ ಸಚಿವರ ಪಿಎಗಳಾಗಿ ಸಂಘದ ವ್ಯಕ್ತಿಗಳ ನೇಮಕಕ್ಕೆ ಸಿದ್ದರಾಮಯ್ಯ ಟೀಕಿಸಿದ್ದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಂಘ ಯಾರಿಗೂ ಪಿಎಗಳಾಗಿ ನೇಮಿಸಿಕೊಳ್ಳಿ ಎಂದು ಸೂಚನೆ ಕೊಡಲ್ಲ. ಸಂಘದ ಹಿನ್ನೆಲೆಯವರು ಸಚಿವರ ಪಿಎಗಳಾಗುತ್ತಾರೆ. ಅಂದರೆ ಅದು ಅವರ ಪ್ರತಿಭೆ ಮತ್ತು ಸಾಮರ್ಥ್ಯದಿಂದ ಮಾತ್ರ. ಅದರಲ್ಲಿ ತಪ್ಪೇನಿಲ್ಲ ಎಂದರು.

    ಇನ್ನೂ ಸಂಸತ್ ಕ್ಷೇತ್ರಗಳ ಪುನರ್ ವಿಂಗಡಣೆಗೆ ದಕ್ಷಿಣದ ರಾಜ್ಯಗಳು ಆತಂಕ ವ್ಯಕ್ತಪಡಿಸುತ್ತಿರುವ ಬಗ್ಗೆ ಮಾತನಾಡಿ, ಪುನರ್ವಿಂಗಡಣೆ ವಿಚಾರದಲ್ಲಿ ಕೇಂದ್ರ ಇನ್ನೂ ಅಧಿಕೃತವಾಗಿ ಯಾವುದೇ ಕರಡು ಪ್ರಕಟಿಸಿಲ್ಲ. ಈ ಹಂತದಲ್ಲಿ ನಾವು ಏನನ್ನೂ ಹೇಳುವುದಿಲ್ಲ. ಈ ವಿಚಾರದಲ್ಲಿ ಕೇಂದ್ರಕ್ಕೆ ಸಂಘ ಯಾವುದೇ ಸಲಹೆ ಕೊಡುವುದಿಲ್ಲ ಎಂದು ಹೇಳಿದರು.ಇದನ್ನೂ ಓದಿ:ಗಾಜಾದಲ್ಲಿ ಇಸ್ರೇಲ್ ವಾಯುದಾಳಿಗೆ ಹಮಾಸ್ ರಾಜಕೀಯ ನಾಯಕ ಬಲಿ

  • ಧರ್ಮದ ಆಧಾರದಲ್ಲಿ ಶೇ.4ರಷ್ಟು ಹೊಸ ಮೀಸಲಾತಿ ನೀಡುವುದು ಕಾನೂನುಬಾಹಿರ – ಬಿಜೆಪಿ ವಿರೋಧ

    ಧರ್ಮದ ಆಧಾರದಲ್ಲಿ ಶೇ.4ರಷ್ಟು ಹೊಸ ಮೀಸಲಾತಿ ನೀಡುವುದು ಕಾನೂನುಬಾಹಿರ – ಬಿಜೆಪಿ ವಿರೋಧ

    ನವದೆಹಲಿ: ರಾಜ್ಯ ಕಾಂಗ್ರೆಸ್ (Congress) ಸರ್ಕಾರವು ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಶೇ.4ರಷ್ಟು ಮೀಸಲಾತಿ ಘೋಷಿಸಿದ ವಿಷಯವು ಲೋಕಸಭೆಯಲ್ಲಿ ಬುಧವಾರ ಚರ್ಚೆಗೆ ಆಸ್ಪದ ನೀಡಿ, ಕೆಲಕಾಲ ಗೊಂದಲಕ್ಕೆ ಕಾರಣವಾಯಿತು.

    ಗಮನ ಸೆಳೆಯುವ ಸೂಚನೆಯ ಸಂದರ್ಭದಲ್ಲಿ, ಜಾರ್ಖಂಡ್‌ನ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಈ ವಿಷಯವನ್ನು ಪ್ರಸ್ತಾಪಿಸಿದರು. ಕಾಂಗ್ರೆಸ್ ಸರ್ಕಾರವು ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಶೇ.4ರಷ್ಟು ಮೀಸಲಾತಿ ನೀಡಲು ಮುಂದಾಗಿದೆ. ಈಗಾಗಲೇ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಇರುವಾಗ, ಧರ್ಮದ ಆಧಾರದಲ್ಲಿ ಹೊಸ ಮೀಸಲಾತಿ ನೀಡುವುದು ಕಾನೂನುಬಾಹಿರವಾಗಿದೆ ಎಂದರು.ಇದನ್ನೂ ಓದಿ: ಹಿಂದೂ ಯುವತಿ ಹತ್ಯೆ ಕೇಸ್‌ – ಸ್ವಾತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

    ಇತರ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಡಿಮೆ ಮಾಡಿ, ಮುಸ್ಲಿಮರಿಗೆ ಹಂಚುವ ಉದ್ದೇಶ ಇದರ ಹಿಂದಿದೆ. ವಿರೋಧ ಪಕ್ಷಗಳು ಮತ ಬ್ಯಾಂಕ್ ರಾಜಕಾರಣಕ್ಕಾಗಿ ಮುಸ್ಲಿಮರನ್ನು ಓಲೈಸುತ್ತಿವೆ. ತೆಲಂಗಾಣದಲ್ಲಿ ಒಬಿಸಿ ಪಟ್ಟಿಗೆ ಮುಸ್ಲಿಮರನ್ನು ಸೇರಿಸುವ ಯತ್ನವೂ ನಡೆದಿದೆ. ಈ ವೇಳೆ ಬಿಜೆಪಿ ಸದಸ್ಯರು “ನಾಚಿಕೆಗೇಡು” ಎಂದು ಕೂಗಲು ಪ್ರಾರಂಭಿಸಿದರೆ, ಕಾಂಗ್ರೆಸ್ ಸದಸ್ಯರು ಇದಕ್ಕೆ ಪ್ರತಿರೋಧ ತೋರಿದರು. ಇದರಿಂದ ಸಭೆಯಲ್ಲಿ ಗದ್ದಲ ಉಂಟಾಯಿತು.

    ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಪ್ರತಿಕ್ರಿಯಿಸಿ, ಇದು ಗಂಭೀರ ವಿಷಯವಾಗಿದ್ದು, ಸಂಸದರು ತಮ್ಮ ಆತಂಕವನ್ನು ಸದನ ಮತ್ತು ಸಚಿವಾಲಯಕ್ಕೆ ಮಂಡಿಸುತ್ತಿದ್ದಾರೆ ಎಂದು ತಿಳಿಸಿದರು.

    ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ಈ ನಿರ್ಧಾರವನ್ನು ಖಂಡಿಸಿ, “ಸರ್ಕಾರಿ ಟೆಂಡರ್‌ಗಳಲ್ಲಿ ಶೇ.4ರಷ್ಟು ಮೀಸಲಾತಿ ನೀಡುವುದು ಮುಸ್ಲಿಮರ ತುಷ್ಟೀಕರಣಕ್ಕೆ ಸಾಕ್ಷಿಯಾಗಿದೆ. ಜಾತ್ಯತೀತ ಸರ್ಕಾರಕ್ಕೆ ಧರ್ಮ ಆಧಾರಿತ ಓಲೈಕೆಗೆ ಯಾವುದೇ ಅಧಿಕಾರವಿಲ್ಲ. ಇದು ನಿಷೇಧಿತ ಪಿಎಫ್‌ಐ ಮತ್ತು ಕೆಎಫ್‌ಡಿಯಂತಹ ಸಂಘಟನೆಗಳನ್ನು ಬಲಗೊಳಿಸುವ ಒಂದು ತಂತ್ರವಾಗಿದೆ. ಈ ಮೀಸಲಾತಿ ಮಸೂದೆ ಸಂವಿಧಾನ ವಿರೋಧಿಯಾಗಿದೆ. ಇದನ್ನು ಹಿಂತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.ಇದನ್ನೂ ಓದಿ: IPL ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ ಬಾಲಿವುಡ್‌ ತಾರೆಯರು

  • ಕಾಂಗ್ರೆಸ್ ಸಂವಿಧಾನ ವಿರುದ್ಧವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟು, ಮತಬ್ಯಾಂಕ್‌ ಗಟ್ಟಿಮಾಡಿಕೊಳ್ತಿದೆ: ಬೊಮ್ಮಾಯಿ

    ಕಾಂಗ್ರೆಸ್ ಸಂವಿಧಾನ ವಿರುದ್ಧವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟು, ಮತಬ್ಯಾಂಕ್‌ ಗಟ್ಟಿಮಾಡಿಕೊಳ್ತಿದೆ: ಬೊಮ್ಮಾಯಿ

    – ಇಂದಿರಾಗಾಂಧಿ ಅವ್ರೇ ಆರ್‌ಎಸ್‌ಎಸ್‌ ಹೊಗಳಿದ್ದರು ಎಂದ ಸಂಸದ

    ನವದೆಹಲಿ: ಕಾಂಗ್ರೆಸ್ ನಾಯಕರು ಡಾ.ಬಿ.ಆರ್‌ ಅಂಬೇಡ್ಕರ್ ಹಾಗೂ ಸಂವಿಧಾನದ ಮೂಲ ತತ್ವಕ್ಕೆ ವಿರುದ್ಧವಾಗಿ ಅಲ್ಪಸಂಖ್ಯಾತರಿಗೆ ಮೀಸಲಾತಿ (Muslim reservation) ನೀಡಿ, ಸಮಾಜದಲ್ಲಿ ಕ್ಷೋಭೆ ಉಂಟು ಮಾಡಿ, ತಮ್ಮ ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ (Basavaraj Bommai) ಆರೋಪಿಸಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ‌ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ಜನರಿಗೆ ಮೋಸ ಮಾಡುತ್ತಿದೆ. ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡಿರುವುದು ಅಸಂವಿಧಾನಿಕ ನಾವು ಅದನ್ನೇ ಬದಲಾಯಿಸಿದ್ದೇವು. ಈಗ ಅದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿದೆ. ಇದು ಸುಪ್ರೀಂ ಕೋರ್ಟ್‌ನಲ್ಲಿ ಇದೆ ಎನ್ನುವುದು ಗೊತ್ತಿದ್ದರೂ, ನಾವು ಹಿಂದುಳಿದ ವರ್ಗದವರಿಗೆ ಕೊಡಿತ್ತಿದ್ದೇವೆ ಎಂದು ಹೇಳಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವುದು ಸಂವಿಧಾನ ಬಾಹಿರ, ಕಾನೂನು ಬಾಹಿರ ಎಂದು ಹೇಳಿದರು.

    ನಮ್ಮ ಸಮಾಜದಲ್ಲಿ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡುವುದು ಬೇಡ ಎಂದು ಅಂಬೇಡ್ಕರ್ ಅವರು ಸಂವಿಧಾನ ರಚನೆಯ ಸಂದರ್ಭದ ಚರ್ಚೆಯಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಅಂಬೇಡ್ಕರ್ ಅವರ ಮೂಲತತ್ವ, ಸಂವಿಧಾನದ ಮೂಲತತ್ವಕ್ಕೆ ವಿರುದ್ಧವಾಗಿ ಇರುವ ಮೀಸಲಾತಿ ನೀಡುತ್ತಿದ್ದಾರೆ. ಅಷ್ಟೇ ಅಲ್ಲದೇ ಸಮಾಜದಲ್ಲಿ ಕ್ಷೋಭೆ ಉಂಟು ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಸಮಾಜ ಒಡೆದರೇನು, ಬಿಟ್ಟರೇನು ತಮ್ಮ ಮತಬ್ಯಾಂಕ್ ಗಟ್ಟಿಮಾಡಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಕಾಂಗ್ರೆಸ್ ಬರುವ ದಿನಗಳಲ್ಲಿ ದೊಡ್ಡ ಬೆಲೆ ಕಟ್ಟಬೇಕಾಗುತ್ತದೆ ಎಂದು ಹೇಳಿದರು.

    ಅಂಬೇಡ್ಕರ್ ವಿರುದ್ಧ ನೆಹರು ಪ್ರಚಾರ:
    ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಕಾಂಗ್ರೆಸ್ ಎರಡು ಬಾರಿ ಅತ್ಯಂತ ಶ್ರೀಮಂತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದರು. ಅಲ್ಲದೇ ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಅವರೂ ಅಂಬೇಡ್ಕರ್ ಅವರ ವಿರುದ್ಧ ಪ್ರಚಾರ ನಡೆಸಿದ್ದರು. ಸಾವರ್ಕರ್ ಅಂಬೇಡ್ಕರ್ ವಿರುದ್ಧ ಪ್ರಚಾರ ಮಾಡಿದ್ದರಾ? ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿದ್ದು ಜಗಜ್ಜಾಹೀರಾಗಿದೆ. ಸುಮ್ಮನೇ ಈಗ ಇತಿಹಾಸ ತಿರುಚುವ ಕೆಲಸ ಮಾಡಿ ತಮ್ಮ ಪಕ್ಷವನ್ನು ಉಳಿಸಿಕೊಳ್ಳುವ ಕೆಲಸ ಸಾಧುವೂ ಅಲ್ಲ, ಸಾರ್ಥಕತೆಯೂ ಅಲ್ಲ ಎಂದು ಹೇಳಿದರು.

    ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ತೋಟದ ಮನೆ ತೆರವು ವಿವಾದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಈಗಾಗಲೇ ತಾವೇನು ತಪ್ಪು ಮಾಡಿಲ್ಲ‌ ಎಂದು ಹೇಳಿದ್ದಾರೆ. ಅಲ್ಲದೇ ಈಗಿರುವ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದಾರೆ ಎಂದರು.

    ಕುರ್ಚಿ ಗಟ್ಟಿಗೊಳಿಸಲು ಆರ್‌ಎಸ್‌ಎಸ್‌ ಅಸ್ತ್ರ
    ಆರ್‌ಎಸ್‌ಎಸ್‌ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಆರ್‌ಎಸ್‌ಎಸ್‌ ಕಟ್ಟಿರುವುದೇ ಸೇವೆ ಮಾಡಲು, ಬ್ರಿಟಿಷರ ಕಾಲದಲ್ಲಿ ಕೆಳ ಮಟ್ಟದ ಜನರಿಗೆ ನ್ಯಾಯ ಸಿಗುತ್ತಿಲ್ಲ ಎಂದು ಹೇಳಿ ಅಂತ್ಯೋದಯ ವಿಚಾರ ಇಟ್ಟುಕೊಂಡು ಆರ್‌ಎಸ್‌ಎಸ್‌ ಹುಟ್ಟಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಅವರು ಆರ್‌ಎಸ್‌ಎಸ್‌ ಬೈದರೆ ತಮ್ಮ ಮತ ಬ್ಯಾಂಕ್ ಗಟ್ಟಿಯಾಗುತ್ತದೆ ಎಂದು ತಿಳಿದು ಆರೋಪ ಮಾಡುತ್ತಾರೆ. ಆರ್‌ಎಸ್‌ಎಸ್‌ ಏನು ಎಂದು ಇಡೀ ದೇಶಕ್ಕೆ ಗೊತ್ತಿದೆ. ಕಾಂಗ್ರೆಸ್ ನಾಯಕಿ ಇಂದಿರಾ ಗಾಂಧಿಯೇ ಆರ್‌ಎಸ್‌ಎಸ್‌ನ್ನು ಹೊಗಳಿದ್ದರು, ಕಾಂಗ್ರೆಸ್ ‌ಮುಖಂಡರಗಿದ್ದ ಪ್ರಣವ್‌ ಮುಖರ್ಜಿ ಅವರೇ ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರು ಮೂಲ ಕಾಂಗ್ರೆಸ್ಸಿಗರಲ್ಲ, ಅವರು ಹೊರಗಡೆಯಿಂದ ಬಂದವರು, ಯಾರು ಹೊರಗಡೆಯಿಂದ ಬಂದಿರುತ್ತಾರೊ ಅವರು ತಮ್ಮ ನಿಷ್ಠೆ ತೋರಿಸಲು ಪದೇ ಪದೇ ಮಾತನಾಡುತ್ತಾರೆ. ಹೀಗಾಗಿ ಸಿದ್ದರಾಮಯ್ಯ ಅವರು ತಮ್ಮ ನಾಯಕತ್ವ ಗಟ್ಟಿಗೊಳಿಸಿಕೊಳ್ಳಲು ಆರ್‌ಎಸ್‌ಎಸ್‌ನ್ನು ಅಸ್ತ್ರವಾಗಿ ಬಳಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

  • ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಗೆ ಬಿಜೆಪಿ ಅವಕಾಶ ನೀಡಲ್ಲ: ಅಮಿತ್‌ ಶಾ

    ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಗೆ ಬಿಜೆಪಿ ಅವಕಾಶ ನೀಡಲ್ಲ: ಅಮಿತ್‌ ಶಾ

    ಚಂಡೀಗಢ: ಹರಿಯಾಣದಲ್ಲಿ ಮುಸ್ಲಿಂ ಮೀಸಲಾತಿಗೆ ಬಿಜೆಪಿ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.

    ರಾಜ್ಯದಲ್ಲಿ ‘ಹಿಂದುಳಿದ ವರ್ಗಗಳ ಸಮ್ಮಾನ್ ಸಮ್ಮೇಳನ’ವನ್ನು ಉದ್ದೇಶಿಸಿ ಮಾತನಾಡಿದ ಅವರು, ಒಬಿಸಿ ಮೀಸಲಾತಿಗೆ ಸಂಬಂಧಿಸಿದಂತೆ ಕಾಕಾ ಕಾಲೇಕರ್ ಆಯೋಗವು ಮಾಡಿದ ಶಿಫಾರಸುಗಳನ್ನು ಕಾಂಗ್ರೆಸ್ ವರ್ಷಗಳಿಂದ ಜಾರಿಗೆ ತಂದಿಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: Jammu Terrorist Attack: ಜಮ್ಮುವಿನಲ್ಲಿ ದಿಢೀರ್‌ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿರುವುದು ಏಕೆ?

    ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗಗಳಿಗೆ ನೀಡಿರುವ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲಿದೆ. 1980 ರಲ್ಲಿ, (ಅಂದಿನ ಪ್ರಧಾನಿ) ಇಂದಿರಾಗಾಂಧಿ ಮಂಡಲ್ ಆಯೋಗವನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಇರಿಸಿದರು. 1990 ರಲ್ಲಿ ಅದನ್ನು ಅಂಗೀಕರಿಸಿದಾಗ, ರಾಜೀವ್ ಗಾಂಧಿ ಅವರು ಎರಡೂವರೆ ಗಂಟೆಗಳ ಭಾಷಣವನ್ನು ನೀಡಿದರು ಮತ್ತು ಒಬಿಸಿ ಮೀಸಲಾತಿಯನ್ನು ವಿರೋಧಿಸಿದ್ದರು ಎಂದು ತಿಳಿಸಿದ್ದಾರೆ.

    ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಒಬಿಸಿಗಳಿಂದ ಕಿತ್ತುಕೊಂಡು ಮುಸ್ಲಿಮರಿಗೆ ಮೀಸಲಾತಿ ನೀಡಿದೆ. ಅವರು ಅಧಿಕಾರಕ್ಕೆ ಬಂದರೆ, ಇಲ್ಲಿಯೂ ಹಾಗೇ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಜಮ್ಮು ಕಾಶ್ಮೀರದ ದೋಡಾದಲ್ಲಿ ಎನ್‌ಕೌಂಟರ್‌ – ಅಧಿಕಾರಿ ಸೇರಿದಂತೆ ನಾಲ್ವರು ಯೋಧರು ಹುತಾತ್ಮ

  • ಮುಸ್ಲಿಂ ಸಮುದಾಯದ 4% ಮೀಸಲಾತಿಯನ್ನೂ ತೆಗೆದುಹಾಕ್ತೀವಿ – ಅಮಿತ್‌ ಶಾ

    ಮುಸ್ಲಿಂ ಸಮುದಾಯದ 4% ಮೀಸಲಾತಿಯನ್ನೂ ತೆಗೆದುಹಾಕ್ತೀವಿ – ಅಮಿತ್‌ ಶಾ

    ಹೈದರಾಬಾದ್‌: ಭಾರತೀಯ ಜನತಾ ಪಕ್ಷವೂ (BJP) ಮುಸ್ಲಿಂ ಸಮುದಾಯಕ್ಕಿರುವ 4% ಮೀಸಲಾತಿಯನ್ನೂ (Muslim Reservation) ತೆಗೆದುಹಾಕುತ್ತೇವೆ. ಅದನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (SC-ST) ಹಾಗೂ ಇತರೇ ಹಿಂದುಳಿದ ವರ್ಗದ ಜನರಿಗೆ ಹಂಚುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಹೇಳಿದ್ದಾರೆ.

    ನವೆಂಬರ್‌ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆ (Telangana Assembly Elections) ಹಿನ್ನೆಲೆಯಲ್ಲಿ ಜಗ್ತಿಯಾಲ್‌ನಲ್ಲಿ ಚುನಾವಣಾ ಪ್ರಚಾರಸಭೆ ನಡೆಯಿತು. ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಶಾ, ಮುಸ್ಲಿಂ ಸಮುದಾಯಕ್ಕೆ ನೀಡಿರುವ 4% ಮೀಸಲಾತಿಯನ್ನೂ ತೆಗೆದುಹಾಕ್ತೇವೆ, ಎಂದರಲ್ಲದೇ ತೆಲಂಗಾಣದಲ್ಲಿರುವ ಮಾದಿಗ ಸಮುದಾಯಕ್ಕೆ ಎಸ್ಸಿ ವರ್ಗದ ಅಡಿಯಲ್ಲಿ ಮೀಸಲಾತಿ ನೀಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಕಣ್ಣೀರಿಟ್ಟ ಕಿಂಗ್‌ ಕೊಹ್ಲಿ – ಪ್ರೀತಿಯ ಅಪ್ಪುಗೆ ನೀಡಿ ಸಾಂತ್ವನ ಹೇಳಿದ ಅನುಷ್ಕಾ

    ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್‌ ಅವರು ಆಲ್‌ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಅಸಾದುದ್ದೀನ್‌ ಓವೈಸಿಗೆ ಹೆದರಿ ಹೈದರಾಬಾದ್‌ ವಿಮೋಚನಾ ದಿನವನ್ನು ಆಚರಿಸುತ್ತಿಲ್ಲ. ಆದ್ರೆ ನಾವು ಓವೈಸಿಗೆ ಹೆದರಲ್ಲ. ಮುಂದೆ ತೆಲಂಗಾಣದಲ್ಲಿ ಹೈದರಾಬಾದ್‌ ವಿಮೋಚನಾ ದಿನವನ್ನು ರಾಜ್ಯ ದಿನವನ್ನಾಗಿ ಆಚರಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇದೇ ಕೊನೆಯಲ್ಲ, ನಾವು ಕಪ್‌ ಗೆಲ್ಲೋವರೆಗೂ ಇದು ಮುಗಿಯಲ್ಲ – ಗಿಲ್‌ ಭಾವುಕ

    ಅಲ್ಲದೇ ಭಾರತ್ ರಾಷ್ಟ್ರ ಸಮಿತಿ (BRS), ಎಐಎಂಐಎಂ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್‌ ಶಾ, ಈ ಎಲ್ಲಾ ಪಕ್ಷಗಳು 2G, 3G ಮತ್ತು 4G ಪಕ್ಷಗಳು. 2G ಎಂದರೆ ಕೆಸಿಆರ್ ಮತ್ತು ಕೆಟಿಆರ್, 3G ಅಂದ್ರೆ ಓವೈಸಿಯ ಅಜ್ಜ, ಅವರ ತಂದೆ ಮತ್ತು ಓವೈಸಿ, 4G ಅಂದ್ರೆ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ರಾಹುಲ್ ಗಾಂಧಿ. ಅದರಲ್ಲಿ ನಿಮ್ಮಸ್ಥಾನ ಎಲ್ಲಿದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಪೊಲೀಸರ ಮೇಲಿನ ಐನೂರು ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಿದ್ದೇನೆ: ಪರಮೇಶ್ವರ್‌

    ಇದೇ ವೇಳೆ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಶ್ಲಾಘಿಸಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ತಿರಂಗವನ್ನು ಚಂದ್ರನ ಮೇಲೆ ಕೊಂಡೊಯ್ಯುವಂತೆ ಮಾಡಿದ್ದಾರೆ, ಹೊಸ ಸಂಸತ್‌ ಭವನ ಸ್ಥಾಪನೆಗೆ ಕಾರಣರಾಗಿದ್ದಾರೆ. ಜಿ20 ಶೃಂಗಸಭೆ ನೇತೃತ್ವ ವಹಿಸಿದ್ದಾರೆ. ಜೊತೆಗೆ ಭಾರತವನ್ನು ಆರ್ಥಿಕತೆಯಲ್ಲಿ 11ನೇ ಸ್ಥಾನದಿಂದ 5ನೇ ಸ್ಥಾನಕ್ಕೆ ಕೊಂಡೊಯ್ದು  ಸೃದೃಢ ರಾಷ್ಟ್ರವಾಗಿ ಮಾಡಿದ್ದಾರೆ ಎಂದು ಶ್ಲಾಘಿಸಿದರು.

  • ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ತಡೆ – ಮೇ 9 ರವರೆಗೆ ಜಾರಿ ಬೇಡವೆಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

    ಮುಸ್ಲಿಂ ಮೀಸಲಾತಿ ರದ್ದು ಆದೇಶಕ್ಕೆ ತಡೆ – ಮೇ 9 ರವರೆಗೆ ಜಾರಿ ಬೇಡವೆಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ನಿರ್ದೇಶನ

    ನವದೆಹಲಿ: ಕರ್ನಾಟಕದಲ್ಲಿ ಮುಸ್ಲಿಮರ ಮೀಸಲಾತಿ (Karnataka Muslim Reservation) ರದ್ದುಗೊಳಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ (Supreme Court) ತಡೆಯಾಜ್ಞೆ ನೀಡಿದೆ. ಮೇ 9 ರವರೆಗೆ ಈ ಆದೇಶವನ್ನು ಜಾರಿಗೊಳಿಸದಂತೆ ಕರ್ನಾಟಕ ಸರ್ಕಾರಕ್ಕೆ (Karnataka Government) ಸುಪ್ರೀಂ ಕೋರ್ಟ್‌ ಹೇಳಿದೆ.

    2ಬಿ ಅಡಿ ಮುಸ್ಲಿಮರಿಗಿದ್ದ ಶೇ.4 ರಷ್ಟು ಮೀಸಲಾತಿಯನ್ನು ರಾಜ್ಯ ಸರ್ಕಾರ ರದ್ದು ಮಾಡಿತ್ತು. ಮುಸ್ಲಿಮರ ಮೀಸಲಾತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸುತ್ತಿದೆ. ನ್ಯಾ. ಕೆ.ಎಂ. ಜೋಸೆಫ್‌ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದ್ದು, ಮೇ 9 ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಅಲ್ಲಿಯವರೆಗೂ ಮೀಸಲಾತಿ ಜಾರಿಗೆ ನ್ಯಾಯಾಲಯ ತಡೆ ನೀಡಿದೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ – ಪ್ರಕರಣ ದಾಖಲು

    ಅಫಿಡವಿಟ್‌ ಸಿದ್ಧವಾಗಿದೆ. ಆದರೆ ಸಾಂವಿಧಾನಿಕ ಪೀಠದ ವಿಚಾರಣೆಯಲ್ಲಿದ್ದೇನೆ. ಹೀಗಾಗಿ ವಿಚಾರಣೆ ಮುಂದೂಡಬೇಕು ಎಂದು ರಾಜ್ಯ ಸರ್ಕಾರದ ಪರ ವಕೀಲರು ಮನವಿ ಮಾಡಿದ್ದರು. ಆದರೆ ಇದಕ್ಕೆ ಅರ್ಜಿದಾರ ಪರ ವಕೀಲರು ವಿರೋಧ ವ್ಯಕ್ತಪಡಿಸಿದ್ದರು. ಅರ್ಜಿದಾರ ಪರ ವಕೀಲರಾದ ದುಷ್ಯಂತ್‌ ದವೆ, ಇದು ಅತ್ಯಂತ ಮಹತ್ವದ ಪ್ರಕರಣ. ವಿಚಾರಣೆ ಮುಂದೂಡಬಾರದು ಎಂದು ಕೋರ್ಟ್‌ಗೆ ಮನವಿ ಮಾಡಿದ್ದರು.

    ಪೀಠವು, ವಾದ ಪ್ರತಿವಾದ ಆಲಿಸಿದ ಬಳಿಕ ಮೇ 9 ಕ್ಕೆ ವಿಚಾರಣೆ ಮುಂದೂಡಿದೆ. ಅರ್ಜಿ ವಿಚಾರಣೆಗೆ ಮುಂದೂಡಿಕೆ ಆಕ್ಷೇಪ ಹಿನ್ನಲೆ ಹಳೆ ಆದೇಶ ಮುಂದುವರಿಸುವುದಾಗಿ ಕೋರ್ಟ್‌ ಹೇಳಿದೆ. ಇದನ್ನೂ ಓದಿ: ಬಿಎಸ್‌ವೈ ಭೇಟಿ ಮಾಡಿದ ಬಿಎಲ್ ಸಂತೋಷ್ – ಕುತೂಹಲ ಮೂಡಿಸಿದ ನಾಯಕರ ಭೇಟಿ

  • ಮುಸ್ಲಿಮರು 3 ಕಡೆ ಲಾಭ ಪಡೆಯುತ್ತಿದ್ದಾರೆ; ಮೀಸಲಾತಿ ಇವರಪ್ಪನ ಮನೆಯದ್ದಾ – ಯತ್ನಾಳ್‌ ಪ್ರಶ್ನೆ

    ಮುಸ್ಲಿಮರು 3 ಕಡೆ ಲಾಭ ಪಡೆಯುತ್ತಿದ್ದಾರೆ; ಮೀಸಲಾತಿ ಇವರಪ್ಪನ ಮನೆಯದ್ದಾ – ಯತ್ನಾಳ್‌ ಪ್ರಶ್ನೆ

    ವಿಜಯಪುರ: ಮುಸ್ಲಿಮರು ಮೂರು ಕಡೆಗಳಲ್ಲಿ ಲಾಭ ಪಡೆಯುತ್ತಿದ್ದಾರೆ. ಒಂದೇ ಕಡೆ ಲಾಭ ಸಿಗಬೇಕು. ಮೀಸಲಾತಿ (Muslim Reservation) ಇವರಪ್ಪನ ಮನೆಯದಾ ಎಂದು ಮೀಸಲಾತಿ ಕಡಿತ ವಿಚಾರಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basanagouda Patil Yatnal) ಪ್ರತಿಕ್ರಿಯಿಸಿದರು.

    ವಿಜಯಪುರದಲ್ಲಿ (Vijayapura) ಮಾತನಾಡಿದ ಅವರು, ದಲಿತರಿಗೆ ಇನ್ನು 2 ಪರ್ಸೆಂಟ್ ಮೀಸಲಾತಿ ಹೆಚ್ಚು ಮಾಡ್ತೀವಿ. ದಲಿತರಿಗೆ ಈಗ 17 ಮಾಡಿದ್ದೇವೆ, ಮುಂದೆ ನರೇಂದ್ರ ಮೋದಿ ಅವರು 21 ಪರ್ಸೆಂಟ್ ಮಾಡ್ತಾರೆ ಎಂದರು. ಇದನ್ನೂ ಓದಿ: ಮುಸ್ಲಿಮರಿಗೆ 2ಬಿ ಮೀಸಲಾತಿ ರದ್ದು: ರಾಜ್ಯಪಾಲರಿಗೆ ದೂರು ನೀಡಲು ಎಎಪಿ ನಿರ್ಧಾರ

    ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಮೀಸಲಾತಿ ರದ್ದು ಮಾಡ್ತೀವಿ ಎಂದ ಡಿಕೆಶಿ ಹೇಳಿಕೆಗೆ ಟಾಂಗ್ ನೀಡಿದ ಅವರು, ಐತಿಹಾಸಿಕ ನಿರ್ಣಯದಿಂದ ಕಾಂಗ್ರೆಸ್ ಕಂಗಾಲಾಗಿದೆ. ಕಾಂಗ್ರೆಸ್ ಥರಥರ ಎಂದು ಅಲುಗಾಡಿ ಹೋಗಿದೆ. ಡಿಕೆಶಿಗೆ ತಾಕತ್ತಿದ್ದರೆ ಮೀಸಲಾತಿ ರದ್ದು ಮಾಡ್ತೀವಿ ಎಂದು ಚುನಾವಣೆಯಲ್ಲಿ ಹೇಳಲಿ. ಮೀಸಲಾತಿ ರದ್ದು ಮಾಡ್ತೀವಿ ಎಂದ್ರೆ ಕಾಂಗ್ರೆಸ್ ಡೆಪಾಜಿಟ್ ರದ್ದಾಗುತ್ತೆ ಎಂದು ಕುಟುಕಿದರು.

    ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟ ವಿಚಾರಕ್ಕೆ ಪ್ರತಿಕ್ರಿಯಿಸಿ, 5 ವರ್ಷ ಸಿಎಂ ಆಗಿದ್ದವರಿಗೆ ಈ ಪರಿಸ್ಥಿತಿ ಬರಬಾರದಿತ್ತು. ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರನ್ನ ಸಿಎಂ ಮಾಡಲ್ಲ. ಸಿದ್ದರಾಮಯ್ಯರನ್ನ ಬಲಿಪಶು ಮಾಡಲಿದ್ದಾರೆ. ಸಿದ್ದರಾಮಯ್ಯ ಸಮುದಾಯದವರು ಕಾಂಗ್ರೆಸ್ ಬೆಂಬಲಿಸಬಾರದು. ನಾಳೆ ಗೂಂಡಾನನ್ನ (ಡಿಕೆಶಿಯನ್ನ) ಸಿಎಂ ಮಾಡಿದ್ರೆ ನಾವು, ನೀವು ಸೇರಿಯೇ ಸಾಯ್ತೇವೆ ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ಚಾಟಿ ಬೀಸಿದರು. ಇದನ್ನೂ ಓದಿ: ಮೈಸೂರಿನ ಸಮಾರಂಭದಲ್ಲಿ ಪಾಲ್ಗೊಳ್ಳಲು ಹೊರಟಾಗ ದೊಡ್ಡಗೌಡ್ರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಪತ್ನಿ

    ಅತಿಯಾದ ಮುಸ್ಲಿಂ ತುಷ್ಟೀಕರಣವೇ ಸಿದ್ದರಾಮಯ್ಯ ಈ ಸ್ಥಿತಿಗೆ ಕಾರಣ. ಸಿದ್ದರಾಮಯ್ಯ ಒನ್ ಸೈಡ್ ಹೋಗಿದ್ದಾರೆ. ಎಲ್ಲ ಜನಾಂಗಗಳನ್ನ ಪ್ರೀತಿ ಮಾಡಬೇಕು. ಒಂದೇ ಜನಾಂಗವನ್ನ ತಲೆ ಮೇಲೆ ಕೂರಿಸಿಕೊಂಡ್ರೆ, ಉಳಿದವರು ಬುದ್ಧಿ ಕಲಿಸುತ್ತಾರೆ ಎಂದು ಟಾಂಗ್‌ ಕೊಟ್ಟರು.

    ವರುಣಾ ಕೂಡ ಸಿದ್ದರಾಮಯ್ಯಗೆ ಅಷ್ಟು ಸುಲಭ ಇಲ್ಲ. ವರುಣಾದಲ್ಲೂ ಸಿದ್ದರಾಮಯ್ಯ ಗೆಲ್ಲೋದು ಕಷ್ಟ. ಸೋಶಿಯಲ್ ಇಂಜಿನಿಯರಿಂಗ್ ಅಷ್ಟು ಸರಿ ಇಲ್ಲ. ಮೊದಲು ಜನ ಮುಗ್ದರಿದ್ದರು. ವೋಟು ಹಾಕ್ತಿದ್ರು, ಈಗ ಯಾರು ಏನು ಮಾಡಿದ್ದಾರೆ ಅನ್ನೋ ಲಿಸ್ಟ್ ಜನರ ಬಳಿ ಇದೆ ಎಂದರು.

  • ಮುಸ್ಲಿಮರಿಗೆ 2ಬಿ ಮೀಸಲಾತಿ ರದ್ದು: ರಾಜ್ಯಪಾಲರಿಗೆ ದೂರು ನೀಡಲು ಎಎಪಿ ನಿರ್ಧಾರ

    ಮುಸ್ಲಿಮರಿಗೆ 2ಬಿ ಮೀಸಲಾತಿ ರದ್ದು: ರಾಜ್ಯಪಾಲರಿಗೆ ದೂರು ನೀಡಲು ಎಎಪಿ ನಿರ್ಧಾರ

    ಬೆಂಗಳೂರು: ಮುಸ್ಲಿಮರಿಗೆ (Muslims) 2ಬಿ ಕೆಟಗರಿಯಲ್ಲಿ ನೀಡಲಾಗುತ್ತಿದ್ದ 4% ಮೀಸಲಾತಿಯನ್ನು(Reservation) ರದ್ದುಪಡಿಸಿದ ರಾಜ್ಯ ಬಿಜೆಪಿ (BJP) ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯಪಾಲರಿಗೆ (Governor) ದೂರು ನೀಡಲು ಎಎಪಿ (AAP) ನಿರ್ಧರಿಸಿದೆ.

    ಸುದ್ದಿಗಾರರೊಂದಿಗೆ ಪಕ್ಷದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಫರೀದುದ್ದೀನ್ ಷರೀಫ್ ಮಾತನಾಡಿ, ಮುಸ್ಲಿಮರಿಗಿದ್ದ 2ಬಿ ಮೀಸಲಾತಿಯನ್ನು ಯಾರೂ ಕೂಡ ಪ್ರಶ್ನಿಸಿರಲಿಲ್ಲ. ಇದನ್ನು ರದ್ದು ಪಡಿಸಬೇಕೆಂದು ನ್ಯಾಯಾಲಯದ ಆದೇಶ ಕೂಡ ಇಲ್ಲ. ಆದರೂ ರಾಜ್ಯ ಸರ್ಕಾರ ಯಾವುದೇ ಮುನ್ಸೂಚನೇ ನೀಡದೇ, ಮುಸ್ಲಿಮರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಏಕಾಏಕಿ ಮೀಸಲಾತಿ ರದ್ದು ಮಾಡಿದೆ ಎಂದಿದ್ದಾರೆ. ಇದನ್ನೂ ಓದಿ: ಕೆಲಸ ಮಾಡುವವರನ್ನು ಗಮನದಲ್ಲಿಟ್ಟುಕೊಂಡು ಮೊದಲ ಹಂತದ ಟಿಕೆಟ್ ಘೋಷಣೆ – ಡಿ.ಕೆ.ಸುರೇಶ್

    ಮುಂದುವರೆದು ಮಾತನಾಡಿ, ಸೂಕ್ಷ್ಮವಾಗಿ ಗಮನಿಸಿದರೆ ಬಿಜೆಪಿ, ಮುಸ್ಲಿಮರನ್ನು ಕೆರಳಿಸಿ ಕೋಮುಗಲಭೆ ಸೃಷ್ಟಿಸಲು ಹುನ್ನಾರ ನಡೆಸಿದೆ. ಚುನಾವಣೆ (Election) ಸಂದರ್ಭದಲ್ಲಿ ರಾಜಕೀಯ ಲಾಭಕ್ಕಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಸರ್ಕಾರ ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

    ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಮುಸ್ಲಿಂ ಸಮುದಾಯ ಹಿಂದುಳಿದಿದೆ. ಅಲ್ಪಸಂಖ್ಯಾತ ಸಮುದಾಯವೆಂಬ ಕಾರಣಕ್ಕೆ ಮುಸ್ಲಿಮರ ಮೇಲೆ ಶೋಷಣೆ ನಡೆಯುತ್ತಿರುವುದನ್ನು ಕಾಣುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಮೀಸಲಾತಿ ರದ್ದು ಪಡಿಸಿರುವುದು ಸಮುದಾಯದಲ್ಲಿ ಆತಂಕ ಸೃಷ್ಟಿಸಿದೆ. ಮೀಸಲಾತಿ ಪಡೆಯುವುದು ಮುಸ್ಲಿಮರ ಸಾಂವಿಧಾನಿಕ ಹಕ್ಕಾಗಿದೆ. ಇಡಬ್ಲ್ಯುಎಸ್ ಬದಲು 2ಬಿ ಕೆಟಗರಿಯನ್ನು ಮುಂದುವರಿಸಬೇಕು. ಈ ಕುರಿತು ರಾಜ್ಯಪಾಲರಿಗೂ ದೂರು ನೀಡಿ, ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಆಗ್ರಹಿಸಲು ನಿರ್ಧರಿಸಿದ್ದೇವೆ ಎಂದು ಫರೀದುದ್ದೀನ್ ಷರೀಫ್ ಹೇಳಿದ್ದಾರೆ. ಇದನ್ನೂ ಓದಿ: ಸಾರಸ್ ಕೊಕ್ಕರೆಯನ್ನು ಸಾಕಿದ್ದ ವ್ಯಕ್ತಿಗೆ ಅರಣ್ಯ ಇಲಾಖೆ ನೋಟಿಸ್