Tag: ಮುಸ್ಲಿಂ ಯುವಕ

  • ಪ್ರೀತಿಸುವಂತೆ ಯುವಕನಿಂದ ಕಿರುಕುಳ – ಅಪ್ರಾಪ್ತೆ ಆತ್ಮಹತ್ಯೆ, ಆರೋಪಿ ಬಂಧನ

    ಪ್ರೀತಿಸುವಂತೆ ಯುವಕನಿಂದ ಕಿರುಕುಳ – ಅಪ್ರಾಪ್ತೆ ಆತ್ಮಹತ್ಯೆ, ಆರೋಪಿ ಬಂಧನ

    ಕಲಬುರಗಿ: ಮುಸ್ಲಿಂ ಯುವಕನ (Muslim Youth) ಕಿರುಕುಳ ತಾಳಲಾರದೇ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಜೇವರ್ಗಿ ತಾಲೂಕಿನಲ್ಲಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 14 ವರ್ಷದ ಬಾಲಕಿಗೆ ಕಳೆದ ಹಲವು ದಿನಗಳಿಂದ ಆಟೋ ಚಾಲಕ ಮೆಹಬೂಬ್ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ, ಆತನ ಕಿರುಕುಳ ತಾಳಲಾರದೇ ನೇಣುಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನೂ ಬಾಲಕಿ ಸಾವಿಗೆ ನ್ಯಾಯ ಸಿಗಬೇಕು ಎಂದು ಘಟನೆಯನ್ನು ಖಂಡಿಸಿ ಜೇವರ್ಗಿ ಪಟ್ಟಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದಿಂದ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದ್ದು, ಆರೋಪಿಯನ್ನು ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹ ಮಾಡಿದ್ದು, ಈ ಕುರಿತು ಜೇವರ್ಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆರೋಪಿ ಮೆಹಬೂಬ್ ಬಂಧನ:
    ಹಲವು ದಿನಗಳಿಂದ ಪ್ರೀತಿ ಮಾಡುವಂತೆ ಯುವತಿಗೆ ಕಿರುಕುಳ ನೀಡಿದ ಆರೋಪಿ ಮೆಹಬೂಬ್, ನನ್ನು ಪೋಲಿಸರು ಇದೀಗ ಬಂಧಿಸಿದ್ದಾರೆ. ಯುವಕನ ಕಿರುಕುಳದ ಕಾರಣಕ್ಕೆ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಆತನಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂಬುದು ಪ್ರತಿಭಟನಾಕಾರರ ಆಗ್ರಹವಾಗಿದೆ.

  • 4 ಮಕ್ಕಳ ತಾಯಿಯನ್ನ ಮದ್ವೆಯಾಗಿ ಇಸ್ಲಾಂಗೆ ಮತಾಂತರವಾಗುವಂತೆ ಚಿತ್ರಹಿಂಸೆ; ಪತಿ ಅರೆಸ್ಟ್‌

    4 ಮಕ್ಕಳ ತಾಯಿಯನ್ನ ಮದ್ವೆಯಾಗಿ ಇಸ್ಲಾಂಗೆ ಮತಾಂತರವಾಗುವಂತೆ ಚಿತ್ರಹಿಂಸೆ; ಪತಿ ಅರೆಸ್ಟ್‌

    ಹುಬ್ಬಳ್ಳಿ: ನಾಲ್ಕು ಮಕ್ಕಳ ತಾಯಿಯನ್ನೇ ಮದ್ವೆಯಾಗಿದ್ದ ಭೂಪನೊಬ್ಬ, ಮದುವೆ ಬಳಿಕ ಇಸ್ಲಾಂಗೆ ಮತಾಂತರಗೊಳ್ಳುವಂತೆ ಕಿರುಕುಳ ನೀಡುತ್ತಿದ್ದ ಕಾರಣಕ್ಕೆ ಧಾರವಾಡ ಜಿಲ್ಲೆಯ ಕಲಘಟಗಿ ಪೊಲೀಸರು (Dharwad Kalaghatagi Police) ಪತಿಯನ್ನು ಬಂಧಿಸಿರುವ ಘಟನೆ ನಡೆದಿದೆ.

    ಬೆಂಗಳೂರು (Bengaluru) ಮೂಲದ ಮುಜಾಹಿದ್‌ ಖಾನ್‌ ಬಂಧಿತ ಆರೋಪಿ. ಇದನ್ನೂ ಓದಿ: Wayanad Landslides: ತಮಿಳುನಾಡಿನಿಂದ 5 ಕೋಟಿ ನೆರವು – ಅಗತ್ಯ ಸಹಕಾರ ನೀಡೋದಾಗಿ ಕರ್ನಾಟಕ ಸಿಎಂ ಭರವಸೆ

    ಆರೋಪಿ ಮುಜಾಹಿದ್‌ ನಾಲ್ಕು ಮಕ್ಕಳ ತಾಯಿಯಾಗಿದ್ದ ಅಶ್ವಿನಿ ಎಂಬಾಕೆಯನ್ನು 2017ರಲ್ಲಿ 2ನೇ ಮದುವೆಯಾಗಿದ್ದ. ಸಂಸಾರದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಸ್ವಲ್ಪ ದಿನ ಕಳೆದಂತೆ ಮುಜಾಹಿದ್‌, ಪತ್ನಿಯನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ನಿತ್ಯ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದ. ಜೊತೆಗೆ ಜೀವ ಬೆದರಿಕೆ ಒಡ್ಡುತ್ತಿದ್ದ. ಈ ಬಗ್ಗೆ ಕಳೆದ ಶುಕ್ರವಾರ ಅಶ್ವಿನಿ‌, ತನ್ನ ಪತಿ ವಿರುದ್ಧ ಕಲಘಟಗಿ ಪೊಲೀಸರಿಗೆ ದೂರು ನೀಡಿದ್ದರು.

    ಅಶ್ವಿನಿಗೆ ಶ್ರೀರಾಮಸೇನೆ ಬೆಂಬಲ ಸಹ ವ್ಯಕ್ತವಾಗಿತ್ತು. ದೂರು ಆಧರಿಸಿ ಬೆಂಗಳೂರಿನಲ್ಲಿ ಮುಜಾಹೀದ್ ಖಾನ್ ಬಂಧಿಸಿ ಕಲಘಟಗಿ ಠಾಣೆಗೆ ಕರೆತರಲಾಗಿದೆ. ಇದನ್ನೂ ಓದಿ: Landslide In Karnataka: ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ತಪ್ಪಿದ ಭಾರೀ ಅನಾಹುತ 

  • ಬೆಂಕಿ ಹಚ್ಚುತ್ತೇನೆಂದು ಅನ್ಯಕೋಮಿನ ಯುವಕನಿಂದ ಬೆದರಿಕೆ; ಅಯೋಧ್ಯೆ-ಮೈಸೂರು ರೈಲು 2 ಗಂಟೆ ಸ್ಥಗಿತ!

    ಬೆಂಕಿ ಹಚ್ಚುತ್ತೇನೆಂದು ಅನ್ಯಕೋಮಿನ ಯುವಕನಿಂದ ಬೆದರಿಕೆ; ಅಯೋಧ್ಯೆ-ಮೈಸೂರು ರೈಲು 2 ಗಂಟೆ ಸ್ಥಗಿತ!

    – ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ
    – ಹೊಸಪೇಟೆ ರೈಲು ನಿಲ್ದಾಣದಲ್ಲಿ ಪರಿಸ್ಥಿತಿ ಉದ್ವಿಗ್ನ
    – ರೈಲು ಹೊರಡುತ್ತಿದ್ದಂತೆ ಜೈಶ್ರೀರಾಮ್ ಘೋಷಣೆ ಕೂಗಿದ ರಾಮಭಕ್ತರು

    ಬಳ್ಳಾರಿ: ಅಯೋಧ್ಯೆಯಿಂದ  ಮೈಸೂರಿಗೆ ಬರುತ್ತಿದ್ದ ರೈಲಿಗೆ ಬೆಂಕಿ ಹಚ್ಚುತ್ತೇನೆ ಎಂದು ಯುವಕನೊಬ್ಬ ಬೆದರಿಕೆ ಹಾಕಿದ ಘಟನೆ ಬಳ್ಳಾರಿಯ ಹೊಸಪೇಟೆ ರೈಲು ನಿಲ್ದಾಣದಲ್ಲಿ ನಡೆದಿದೆ.

    ಅನ್ಯಕೋಮಿನ ಯುವಕ ರೈಲಿಗೆ ಬೆಂಕಿ ಹಚ್ಚುತ್ತೇನೆ ಎಂದಿದ್ದಲ್ಲದೇ ಪದೇ ಪದೇ ಚೈನ್ ಎಳೆದ ಕಾರಣ ರೈಲು ಸುಮಾರು ಎರಡು ಘಂಟೆಗಳ ಕಾಲ ತಡವಾಗಿ ಚಲಿಸಿದೆ.

    ಮೈಸೂರಿನಿಂದ ಅಯೋಧ್ಯೆಗೆ ತೆರಳಿದ್ದ ರಾಮ ಭಕ್ತರು ಮರಳಿ ರೈಲಿನಲ್ಲಿ  ಮೈಸೂರಿಗೆ ಬರುತ್ತಿದ್ದರು.  ಈ ವೇಳೆ ಕ್ಷುಲ್ಲಕ ಕಾರಣಕ್ಕೆ ರಾಮ ಭಕ್ತರು  ಹಾಗೂ ಅನ್ಯಕೋಮಿನ ಯುವಕನ ಜೊತೆಯಲ್ಲಿ ವಾಗ್ವಾದ ನಡೆದಿದೆ. ಜಗಳ ಶುರುವಾದ ವೇಳೆ ಪದೇ ಪದೇ ಚೈನ್ ಎಳೆದ ಕಾರಣ ಟ್ರೈನ್ ಮುಂದೆ ಸಾಗಲು ತೊಂದರೆಯಾಗಿದೆ.

    ಪರಿಸ್ಥಿತಿ ವಿಕೋಪಕ್ಕೆ ತೆರಳುವ ಮುನ್ನವೇ ಸ್ಥಳಕ್ಕೆ ಆಗಮಿಸಿದ ಎಸ್ಪಿ ಶ್ರೀಹರಿಬಾಬು ಹಾಗೂ ಸಿಬ್ಬಂದಿ, ಎಲ್ಲರ ಮನವೊಲಿಸಿ, ರೈಲು ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ರೈಲು ಹೊರಡುತ್ತಿದ್ದಂತೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಶ್ರೀರಾಮನ ಭಕ್ತರು ನಿಲ್ದಾಣದಲ್ಲೇ ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ.

    ಪರಿಸ್ಥಿತಿ ತಿಳಿಗೊಳಿಸಿದ ಪೊಲೀಸರು ಅನ್ಯಕೋಮೀನ ಯುವಕರನ್ನು ವಿಚಾರಣೆ ನಡೆಸಿ ಬೇರೆ ಬೋಗಿಯಲ್ಲಿ ಕಳುಹಿಸಿದ್ದಾರೆ.

  • Shivamogga: ಈದ್ ಮಿಲಾದ್ ಹಬ್ಬದ ಸಭೆಯಲ್ಲಿ ಗಲಾಟೆ – ಓರ್ವನ ಕೊಲೆಯಲ್ಲಿ ಅಂತ್ಯ

    Shivamogga: ಈದ್ ಮಿಲಾದ್ ಹಬ್ಬದ ಸಭೆಯಲ್ಲಿ ಗಲಾಟೆ – ಓರ್ವನ ಕೊಲೆಯಲ್ಲಿ ಅಂತ್ಯ

    ಶಿವಮೊಗ್ಗ: ಈದ್ ಮಿಲಾದ್ ಹಬ್ಬದ (Eid Milad Festival) ಸಂಬಂಧ ಸಮಿತಿ ರಚನೆ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ನಡೆದು, ಓರ್ವ ಯುವಕನನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಿಕಾರಿಪುರದ (Shikaripura) ಕೆಹೆಚ್‌ಬಿ ಬಡಾವಣೆಯಲ್ಲಿ ನಡೆದಿದೆ.

    ಕೊಲೆಯಾದ ಯುವಕನನ್ನು ಜಾಫರ್ (32) ಎಂದು ಗುರುತಿಸಲಾಗಿದೆ. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಭಾನುವಾರ ಮುಸ್ಲಿಂ ಮುಖಂಡರು ಸಭೆ ಕರೆದಿದ್ದರು. ಸಭೆಯಲ್ಲಿ ‌ಹಲವರು‌ ಭಾಗವಹಿಸಿದ್ದರು. ಹಬ್ಬದ ವಿಷಯ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಗಲಾಟೆ ನಡೆದಿದೆ. ಗಲಾಟೆಯಾದ ಕಾರಣ ಸಭೆಯನ್ನ ಅರ್ಧಕ್ಕೆ ಮೊಟುಕುಗೊಂಡಿದೆ. ಇದನ್ನೂ ಓದಿ: ಹೊಳೆಹೊನ್ನೂರು ಗಾಂಧಿ ಸರ್ಕಲ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ- ಸ್ಥಳೀಯರ ಪ್ರತಿಭಟನೆ

    ಸೋಮವಾರ ಮಧ್ಯಾಹ್ನ ಗಲಾಟೆ ನಡೆದ ಯುವಕರ ನಡುವೆ ರಾಜಿ ಸಂಧಾನ ನಡೆಸಲು ಎರಡು ಗುಂಪಿನ ಯುವಕರನ್ನ ಕರೆಸಿದ್ದರು. ಆದರೆ ಮತ್ತೆ ಪುನಃ ಗಲಾಟೆ ನಡೆದು, ಜಾಫರ್ ಎಂಬಾತನ ಎದೆಗೆ ಚಾಕು ಇರಿದು‌ ಕೊಲೆ ಮಾಡಿದ್ದಾರೆ. ಇನ್ನೂ ಘಟನೆ ನಂತರ ಶಿಕಾರಿಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಸ್ನೇಹಿತನ ಮಗನನ್ನು ಅಪಹರಿಸಿ ಕೊಲೆ- ಅಪರಾಧಿಗೆ ಜೀವಾವಧಿ ಶಿಕ್ಷೆ, 3.25 ಲಕ್ಷ ರೂ. ದಂಡ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರೀತಿ ಹೆಸರಲ್ಲಿ ದೋಖಾ – ಲವ್ ಜಿಹಾದ್‌ಗೆ ಯತ್ನಿಸಿದ ಮುಸ್ಲಿಂ ಯುವಕನಿಂದ ಯುವತಿ ಬಚಾವ್

    ಪ್ರೀತಿ ಹೆಸರಲ್ಲಿ ದೋಖಾ – ಲವ್ ಜಿಹಾದ್‌ಗೆ ಯತ್ನಿಸಿದ ಮುಸ್ಲಿಂ ಯುವಕನಿಂದ ಯುವತಿ ಬಚಾವ್

    – ಕೊಲೆ ಬೆದರಿಕೆ ಹಾಕಿದ ವಂಚಕನ ವಿರುದ್ಧ ಕೇಸ್
    – ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಆನೇಕಲ್: ಇತ್ತೀಚೆಗೆ ದೆಹಲಿ (NewDelhi), ಕೇರಳ (Kerala) ಸೇರಿದಂತೆ ಕೆಲ ರಾಜ್ಯಗಳಲ್ಲಿ ನಡೆದ ಲವ್ ಜಿಹಾದ್ (Love Jihad) ಪ್ರಕರಣಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆಗಳು ಮಾಸುವ ಮುನ್ನವೇ ರಾಜ್ಯ ರಾಜಧಾನಿಗೂ ಲವ್ ಜಿಹಾದ್ ಗಾಳಿ ಬೀಸಿದೆ. ಅನ್ಯ ಕೋಮಿನ ಯುವಕ ತನ್ನ ಧರ್ಮವನ್ನೇ ಮುಚ್ಚಿಟ್ಟು ಸುಳ್ಳು ಹೇಳಿ ಯುವತಿಯನ್ನ ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ. ಕೊನೆಗೆ ವಂಚಕನ ಬಣ್ಣ ಬಯಲಾಗಿದ್ದು, ಅಪಾಯಕ್ಕೆ ಸಿಲುಕುವ ಮುನ್ನವೆ ಯುವತಿ ಲವ್ ಜಿಹಾದ್ ಕೂಪದಿಂದ ಪಾರಾಗಿದ್ದಾಳೆ.

    ಹೌದು. ತಾನು ಕ್ರಿಶ್ಚಿಯನ್ ಎಂದು ಹೇಳಿಕೊಂಡು ಹಿಂದೂ ಯುವತಿಯನ್ನ ಬಲೆಗೆ ಬಿಳಿಸಿದ್ದ ಯುವಕ ಮುಸ್ಲಿಂ ಎಂಬ ವಿಚಾರ ತಿಳಿಯುತ್ತಿದ್ದಂತೆ ಲವ್ ಜಿಹಾದ್ ಎಂದು ಶಂಕಿಸಿ ಯುವತಿ ಎಚ್ಚೆತ್ತುಕೊಂಡು ಬಚಾವ್ ಆಗಿದ್ದಾಳೆ. ಆದರೆ ಆತನ ಕಿರುಕುಳ ತಾಳಲಾರದೇ ರಕ್ಷಣೆ ಮತ್ತು ನ್ಯಾಯಕ್ಕಾಗಿ ಆನೇಕಲ್ ಉಪವಿಭಾಗದ ಹೆಬ್ಬಗೋಡಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಇದನ್ನೂ ಓದಿ: ಬೆಂ-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಮತ್ತೊಂದು ಭೀಕರ ಅಪಘಾತ – ಓರ್ವ ಸಾವು

    ಮಹಾರಾಷ್ಟ್ರ ಮೂಲದ ಹಿಂದೂ ಯುವತಿ ವಂಚನೆಗೊಳಗಾಗಿದ್ದು, ಅಸ್ಸಾಂ ಮೂಲದ ಅಲ್ ಮೆಹಪ್ಯೂಸ್ ಬರಪೂಯಾ ಎಂಬಾತ ಯುವತಿಯನ್ನ ವಂಚಿಸಿದ್ದಾನೆ. ಗಾರ್ಮೆಂಟ್ ರಿಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕ-ಯುವತಿ ನಗರದಲ್ಲಿ ವಾಸವಾಗಿದ್ದರು. ಒಂದೇ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರಿಂದ ಪ್ರಾರಂಭದಲ್ಲಿ ತಾನು ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದವನು ನನ್ನ ಹೆಸರು ಮೆಲ್ಬಿನ್ ಹೇಳಿ ಪರಿಚಯ ಮಾಡಿಕೊಂಡು, ಯುವತಿಯನ್ನ ಬಲೆಗೆ ಬೀಳಿಸಿದ್ದಾನೆ. ಅವನ ಮಾತು ನಂಬಿದ ಯುವತಿ ಎರಡು ವರ್ಷದಿಂದ ಪರಸ್ಪರ ಪ್ರೀತಿ, ಒಡನಾಟದಲ್ಲಿದ್ದಾಳೆ. ಹೀಗಿರುವಾಗ ಒಂದು ದಿನ ಆಕಸ್ಮಿಕವಾಗಿ ಯುವಕನ ಪರ್ಸ್ ನೋಡಿದಾಗ ಆಧಾರ್‌ಕಾರ್ಡ್ ಸಿಕ್ಕಿದ್ದು, ಅನ್ಯ ಕೋಮಿನವನು ಎಂಬು ಗೊತ್ತಾಗಿದೆ. ನಂತರ ಯುವಕ ಮುಸ್ಲಿಂ ಎಂದು ತಿಳಿದರೆ ಯುವತಿಯರು ಸ್ನೇಹ ಬೆಳೆಸುವುದಿಲ್ಲ ಅದಕ್ಕಾಗಿ ಕ್ರಿಶ್ಚಿಯನ್ ಎಂದು ಸುಳ್ಳು ಹೇಳಿರೋದಾಗಿ ಬಾಯ್ಬಿಟ್ಟಿದ್ದಾನೆ.

    ಅನ್ಯ ಕೋಮಿನವನು ಎಂದು ತಿಳಿದ ಬಳಿಕ ಮದುವೆ ಸಾಧ್ಯವಿಲ್ಲ ಎಂದು ಯುವತಿ ಆತನ ಪ್ರೀತಿಯನ್ನ ತಿರಸ್ಕಾರ ಮಾಡಿದ್ದಾಳೆ. ಇದರಿಂದ ಆಕ್ರೋಶಗೊಂಡ ಯುವಕ ಆಕೆಗೆ ಕಿರುಕುಳ ನೀಡಲು ಶುರು ಮಾಡಿದ್ದಾನೆ. ರಾತ್ರಿ ವೇಳೆ ಮನೆ ಬಳಿ ಬಂದು ಗಲಾಟೆ ಮಾಡಿ ಯುವತಿ ಮತ್ತು ಕುಟುಂಬದವರನ್ನ ಮುಗಿಸುವ ಬೆದರಿಕೆ ಹಾಕಿದ್ದಾನೆ. ಪ್ರೀತಿಯ ಹೆಸರಿನಲ್ಲಿ ಯುವತಿ ವಂಚನೆ ಮತ್ತು ಅನ್ಯಾಯಕ್ಕೊಳಗಾಗಿದ್ದು, ಪ್ರಾಣ ರಕ್ಷಣೆ ಮತ್ತು ನ್ಯಾಯಕ್ಕಾಗಿ ಹೆಬ್ಬಗೋಡಿ ಠಾಣೆಯಲ್ಲಿ ನಯವಂಚಕ ಅಲ್ ಮೆಹಪ್ಯೂಸ್ ಬರಪೂಯಾನ ವಿರುದ್ಧ ದೂರು ದಾಖಲಿಸಿದ್ದಾಳೆ. ಇದನ್ನೂ ಓದಿ: ಮುಂಬೈ, ದೆಹಲಿಯಷ್ಟೇ ಅಲ್ಲ ಬೆಂಗ್ಳೂರಲ್ಲೂ ಹೆಚ್ಚಾಗ್ತಿದೆ ಲಿವಿಂಗ್ ರಿಲೇಷನ್ ಕೊಲೆ ಕೇಸ್

    ಇನ್ನೂ ತನ್ನ ಧರ್ಮ ಮುಚ್ಚಿಟ್ಟು ಸುಳ್ಳು ಹೇಳಿ ಯುವತಿಗೆ ಪ್ರೀತಿಯ ಹೆಸರಿನಲ್ಲಿ ವಂಚಿಸಿದ್ದಲ್ಲದೇ, ಯುವತಿಯ ಬಳಿ ಲಕ್ಷಾಂತರ ರೂಪಾಯಿ ಹಣವನ್ನೂ ಸುಲಿಗೆ ಮಾಡಿದ್ದಾನೆ. ಇದೇ ರೀತಿ ಈ ಹಿಂದೆಯೂ ಸಹ ಸಾಕಷ್ಟು ಯುವತಿಯರಿಗೆ ಸುಳ್ಳು ಹೇಳಿ ವಂಚನೆ ಮಾಡಿದ್ದಾನೆ. ಅಷ್ಟೇ ಅಲ್ಲದೆ ಆಕೆ ಕೆಲಸ ಮಾಡುತ್ತಿದ್ದ ಕಂಪನಿ ಮಾಲೀಕರ ಬಳಿ ಇಲ್ಲಸಲ್ಲದ ಆರೋಪ ಮಾಡಿ ಕೆಲಸ ಮಾಡುತ್ತಿದ್ದ ಯುವತಿಗೆ ಗೇಟ್ ಪಾಸ್ ಕೊಡಿಸಿದ್ದಾನೆ ಎನ್ನುವ ಆರೋಪಗಳೂ ಹೇಳಿಬಂದಿವೆ. ಈ ಸಂಬಂಧ ದೂರು ದಾಖಲಿಸಿರುವ ಯುವತಿ ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ.

  • ಪ್ರಜ್ಞಾ ಠಾಕೂರ್‌ನೊಂದಿಗೆ ಕೇರಳ ಸ್ಟೋರಿ ಸಿನಿಮಾ ವೀಕ್ಷಿಸಿದ ಯುವತಿ ನಾಪತ್ತೆ- ಮುಸ್ಲಿಂ ಯುವಕನೊಂದಿಗೆ ಪರಾರಿ?

    ಪ್ರಜ್ಞಾ ಠಾಕೂರ್‌ನೊಂದಿಗೆ ಕೇರಳ ಸ್ಟೋರಿ ಸಿನಿಮಾ ವೀಕ್ಷಿಸಿದ ಯುವತಿ ನಾಪತ್ತೆ- ಮುಸ್ಲಿಂ ಯುವಕನೊಂದಿಗೆ ಪರಾರಿ?

    ಭೋಪಾಲ್: ಬಿಜೆಪಿಯ ಪ್ರಜ್ಞಾ ಸಿಂಗ್ ಠಾಕೂರ್ (Pragya Thakur) ಅವರೊಂದಿಗೆ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾ ವೀಕ್ಷಿಸಿದ ಯುವತಿ (Woman) ಕೆಲವೇ ದಿನಗಳ ಬಳಿಕ ನಾಪತ್ತೆಯಾಗಿರುವ ಘಟನೆ ಮಧ್ಯ ಪ್ರದೇಶದಲ್ಲಿ (Madhya Pradesh) ನಡೆದಿದೆ.

    20 ವರ್ಷದ ಯುವತಿ ಮುಸ್ಲಿಂ ಯುವಕನೊಂದಿಗೆ ಓಡಿಹೋಗಿದ್ದಾಳೆಂದು ಆಕೆಯ ಕುಟುಂಬದವರು ಶಂಕಿಸಿದ್ದಾರೆ. ಆಕೆ ಮನೆಯಿಂದ 70,000 ರೂ. ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ್ದಾಳೆ ಎಂದು ಆರೋಪಿಸಿದ್ದಾರೆ.

    ಈ ನಡುವೆ ಯುವತಿ ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದಾಳೆ. ನಾನು ವಯಸ್ಕಳಾಗಿದ್ದೇನೆ ಹಾಗೂ ತನಗೆ ಏನು ಮಾಡಬೇಕೆಂಬ ತಿಳುವಳಿಕೆ ಇದೆ ಎಂದು ಆಕೆ ವೀಡಿಯೋದಲ್ಲಿ ಹೇಳಿರುವುದು ಕಂಡುಬಂದಿದೆ. ಇದನ್ನೂ ಓದಿ: ಲಿವ್ ಇನ್ ಪಾರ್ಟ್ನರ್‌ಳನ್ನು ಕೊಂದು ದೇಹವನ್ನು ಪೀಸ್ ಪೀಸ್ ಮಾಡಿದ!

    ಈ ಹಿಂದೆಯೂ ಯುವತಿ ಒಂದು ಬಾರಿ ನಾಪತ್ತೆಯಾಗಿದ್ದಳು. ಆ ಸಂದರ್ಭ ಆಕೆಯ ಕುಟುಂಬ ಸಂಸದೆ ಪ್ರಜ್ಞಾ ಠಾಕೂರ್ ಅವರ ಸಹಾಯ ಕೋರಿತ್ತು. ಈ ಹಿನ್ನೆಲೆ ಪ್ರಜ್ಞಾ ಸಿಂಗ್ ಠಾಕೂರ್ ಮೇ 11 ರಂದು ಹಿಂದೂ ಯುವತಿಯರನ್ನು ಇಸ್ಲಾಂಗೆ ಪರಿವರ್ತಿಸುವ ವಿವಾದಿತ ಚಿತ್ರವಾಗಿರುವ ದಿ ಕೇರಳ ಸ್ಟೋರಿಯನ್ನು ವೀಕ್ಷಿಸಲು ಮಹಿಳೆಯರ ಗುಂಪೊಂದನ್ನು ಕರೆದುಕೊಂಡು ಹೋಗಿದ್ದರು. ಆ ಗುಂಪಿನಲ್ಲಿ ನಾಪತ್ತೆಯಾಗಿರುವ ಯುವತಿಯೂ ಸೇರಿದ್ದಳು. ಇದಾದ ಬಳಿಕ ಯುವತಿ ಮೇ 15 ರಂದು ಮತ್ತೆ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ಎಚ್ಚರಗೊಂಡ ಪೋಷಕರು ದೂರು ನೀಡಲು ಪೊಲೀಸ್ ಠಾಣೆಗೆ ಹೋದಾಗ ಅಲ್ಲಿ ಅವರು ಈ ಕೇಸ್‌ನಲ್ಲಿ ಸಹಕರಿಸಲು ಸಿದ್ಧರಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

    ವರದಿಗಳ ಪ್ರಕಾರ ಯುವತಿಗೆ ನರ್ಸಿಂಗ್ ಶಾಲೆಯಲ್ಲಿ ಸ್ನೇಹಿತೆಯಾಗಿದ್ದಾಕೆಯ ಸಹೋದರ ಯೂಸುಫ್ ಖಾನ್ ಅವನೊಂದಿಗೆ ಓಡಿಹೋಗಿರುವುದಾಗಿ ಶಂಕಿಸಲಾಗಿದೆ. ಆತನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಮೊದಲೇ ಹಲ್ಲೆ, ಕಳ್ಳತನ, ಬೆಂಕಿ ಹಚ್ಚಿರುವಂತಹ ಕ್ರಿಮಿನಲ್ ಕೇಸ್‌ಗಳು ದಾಖಲಾಗಿವೆ.

    ಇದೀಗ ಪೊಲೀಸರು ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ನಾವು ಪ್ರಕರಣವನ್ನು ದಾಖಲಿಸಿದ್ದೇವೆ. ಸಾಧ್ಯವಿರುವ ಎಲ್ಲಾ ವಿಧಾನಗಳಿಂದಲೂ ಆಕೆಯನ್ನು ಹುಡುಕುವ ಪ್ರಯತ್ನ ಮಾಡುತ್ತೇವೆ. ಆಕೆಯ ಹೇಳಿಕೆ ಆಧಾರದ ಮೇಲೆ ನಾವು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸ್ಥಳೀಯ ಹಿರಿಯ ಪೊಲೀಸ್ ಅಧಿಕಾರಿ ಅನಿಲ್ ಬಾಜ್‌ಪೇಯ್ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂ-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಭಯಾನಕ ಅಪಘಾತ- 5 ತಿಂಗಳಲ್ಲೇ 55 ಮಂದಿ ಸಾವು!

  • ಬಸ್ಸಿನಲ್ಲಿ ಯುವತಿಯ ಜೊತೆ ಮಾತನಾಡಿದ್ದಕ್ಕೆ ಕಾದು ಕುಳಿತು ಯುವಕನ ಹಲ್ಲೆಗೈದ್ರು!

    ಬಸ್ಸಿನಲ್ಲಿ ಯುವತಿಯ ಜೊತೆ ಮಾತನಾಡಿದ್ದಕ್ಕೆ ಕಾದು ಕುಳಿತು ಯುವಕನ ಹಲ್ಲೆಗೈದ್ರು!

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ (Moral Policing) ಪ್ರಕರಣವೊಂದು ನಡೆದಿರುವುದು ಬೆಳಕಿಗೆ ಬಂದಿದೆ.

    ಬಸ್ಸಿನಲ್ಲಿ ಯುವತಿಯ ಜೊತೆ ಮಾತನಾಡಿದ್ದಕ್ಕೆ ಅನ್ಯಕೋಮಿನ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಜಿರೆ(Ujire) ಯಲ್ಲಿ ಈ ಘಟನೆ ನಡೆದಿದ್ದು, ಕಕ್ಕಿಂಜೆ ನಿವಾಸಿ ಝಾಹಿರ್ (22) ಹಲ್ಲೆಗೊಳಗಾದ ಯುವಕನಾಗಿದ್ದಾನೆ.

    ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಝಾಹಿರ್, ಮಂಗಳವಾರ ಊರಿಗೆ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ಪರಿಚಯದ ಯುವತಿಯೊಂದಿಗೆ ಮಾತನಾಡಿದ್ದನು. ಯುವತಿ ಬೆಳ್ತಂಗಡಿಯಲ್ಲಿ ಬಸ್‍ನಿಂದು ಇಳಿದು ಹೋಗಿದ್ದಾಳೆ.

    ಇತ್ತ ಯುವಕರ ತಂಡ ಝಾಹಿರ್‍ಗಾಗಿ ಉಜಿರೆಯಲ್ಲಿ ಕಾದು ಕುಳಿತು ಹಲ್ಲೆ ನಡೆಸಿದೆ. ಉಜಿರೆಯಲ್ಲಿ ಬಸ್ ನಿಂದ ಕಳಗಿಳಿಸಿ ಝಾಹಿರ್ ಮೇಲೆ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಇದನ್ನೂ ಓದಿ: ಖಾನಾಪುರದಲ್ಲಿ ಪೊಲೀಸರ ದಾಳಿ- ದಾಖಲೆ ಇಲ್ಲದ 53 ಲಕ್ಷ ಮೌಲ್ಯದ ವಸ್ತುಗಳು ಜಪ್ತಿ

    ಘಟನೆ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

  • ಹಿಂದೂ ಯುವತಿಯೊಂದಿಗೆ ಪರಾರಿಯಾದ ಮುಸ್ಲಿಂ ಯುವಕನ ಮನೆಗೆ ಬೆಂಕಿ

    ಹಿಂದೂ ಯುವತಿಯೊಂದಿಗೆ ಪರಾರಿಯಾದ ಮುಸ್ಲಿಂ ಯುವಕನ ಮನೆಗೆ ಬೆಂಕಿ

    ಲಕ್ನೋ: ಹಿಂದೂ ಯುವತಿಯೊಂದಿಗೆ ಪರಾರಿಯಾದ ಮುಸ್ಲಿಂ ಯುವಕನ ಕುಟುಂಬಕ್ಕೆ ಸೇರಿದ ಎರಡು ಮನೆಗಳಿಗೆ ಗುಂಪೊಂದು ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ನಡೆದಿದೆ.

    ಆಗ್ರಾದ ರುನಕ್ತಾ ಪ್ರದೇಶದಲ್ಲಿ ಜಿಮ್ ಮಾಲೀಕ ಸಾಜಿದ್ ಅವರ ಮನೆಗೆ ಧರಮ್ ಜಾಗರಣ ಸಮನ್ವಯ್ ಸಂಘದ  ಸದಸ್ಯರು ಬೆಂಕಿ ಹಚ್ಚಿದ್ದಾರೆ ಮತ್ತು ಕುಟುಂಬಕ್ಕೆ ಸೇರಿದ ಪಕ್ಕದ ಮನೆಗೂ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಯುವತಿಯನ್ನು ಯುವಕ ಅಪಹರಿಸಿದ್ದು, ಆರೋಪಿಯನ್ನು ಬಂಧಿಸುವಂತೆ ಗುಂಪಿನ ಸದಸ್ಯರು ಒತ್ತಾಯಿಸಿದ್ದು, ಅವರ ಬೇಡಿಕೆಯ ಮೇರೆಗೆ ಸ್ಥಳೀಯ ಮಾರುಕಟ್ಟೆಯಲ್ಲಿನ ಅಂಗಡಿಗಳನ್ನು ಶುಕ್ರವಾರ ಮುಚ್ಚಲಾಯಿತು. ಅದೃಷ್ಟವಶಾತ್ ಘಟನೆ ವೇಳೆ ಯಾರಿಗೂ ಯಾವುದೇ ಸಮಸ್ಯೆಗಳಾಗಿಲ್ಲ.

    ಘಟನೆ ನಂತರ ನಿರ್ಲಕ್ಷ್ಯ ವಹಿಸಿದ್ದ ಪೊಲೀಸ್ ಪೋಸ್ಟ್ ಇನ್ ಚಾರ್ಜ್ ಅನ್ನು ಅಮಾನತುಗೊಳಿಸಲಾಗಿದ್ದು, ಸಿಕಂದರಾ ಠಾಣಾಧಿಕಾರಿ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ. ಒಂದು ವೇಳೆ ತಪ್ಪಿತಸ್ಥರೆಂದು ಕಂಡುಬಂದರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಆಗ್ರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರಿಯರಿಗೆ ವಿಶೇಷ ಸಂದೇಶ ಕೊಟ್ಟ ಭಾರತೀಯ ಸೇನೆ

    ಸೋಮವಾರ ಯುವತಿ ನಾಪತ್ತೆಯಾಗಿದ್ದು, ಎರಡು ದಿನಗಳ ನಂತರ ಆಕೆಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಆದರೆ ಸಾಜಿದ್ ಎಲ್ಲಿದ್ದಾನೆ ಎಂಬುದು ಇನ್ನೂ ತಿಳಿದಿಲ್ಲ. ಆಕೆಯ ಕುಟುಂಬ ಸದಸ್ಯರು ನಾಪತ್ತೆಯಾಗಿರುವ ಬಗ್ಗೆ ದೂರು ನೀಡಿದ್ದು, ಪೊಲೀಸರು ದಂಪತಿಗಾಗಿ ಹುಡುಕಾಟ ನಡೆಸಿದ್ದಾರೆ. ಈ ವಿಚಾರವಾಗಿ ಯುವತಿ ಮಾತನಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ತಾನು ವಯಸ್ಕಳಾಗಿದ್ದು, ಯುವಕನೊಂದಿಗೆ ಸ್ವಇಚ್ಛೆಯಿಂದ ಹೋಗಿದ್ದೇನೆ ಎಂದು ತಿಳಿಸಿದ್ದಾರೆ.

    ಇದೀಗ ಮನೆಗಳಿಗೆ ಬೆಂಕಿ ಹಚ್ಚಿದ ಗುಂಪಿನ ಸದಸ್ಯರ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದು, ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಯುವತಿ ಮನೆಯವರು ಮತ್ತು ಜಿಮ್ ಮಾಲೀಕರ ವಿರುದ್ಧ ಕೂಡ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

  • ಗೋರಕ್ಷಕರಿಂದ ಕಿರುಕುಳ, ಮಾರಣಾಂತಿಕ ಹಲ್ಲೆ- ಮುಸ್ಲಿಂ ಯುವಕ ಸಾವು

    ಗೋರಕ್ಷಕರಿಂದ ಕಿರುಕುಳ, ಮಾರಣಾಂತಿಕ ಹಲ್ಲೆ- ಮುಸ್ಲಿಂ ಯುವಕ ಸಾವು

    ಪಾಟ್ನಾ: ಬಿಹಾರದಲ್ಲಿ ಮುಸ್ಲಿಂ ಸಮುದಾಯದ ಯುವಕನೊಬ್ಬನಿಗೆ ಸ್ವಯಂಘೋಷಿತ ಗೋರಕ್ಷಕರು ಕಿರುಕುಳ ನೀಡಿ ಕೊಂದಿರುವ ಘಟನೆ ನಡೆದಿದೆ. ಆತನನ್ನು ಹೊಡೆದು ಕೊಂದು ಶವವನ್ನು ನಾಲೆಯಲ್ಲಿ ಹೂತಿರುವುದು ಬೆಳಕಿಗೆ ಬಂದಿದೆ. ಯುವಕನಿಗೆ ಕಿರುಕುಳ ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿದೆ.

    ದಾಳಿಕೋರರು ದೇಹಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸುಡಲು ಯತ್ನಿಸಿದ್ದಾರೆ. ನಂತರ ದೇಹ ಬೇಗ ಕೊಳೆಯಲೆಂದು ದೇಹಕ್ಕೆ ಉಪ್ಪನ್ನು ಎರಚಿ ಸಮಾಧಿ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೋರ್ಟ್ ತೀರ್ಪು ಬರೋವರೆಗೂ ಪರೀಕ್ಷೆ ಮುಂದೂಡಿ – ಹಿಜಬ್ ಹೋರಾಟಗಾರ್ತಿಯರು

    ಬಿಹಾರ್‌ನ ವಿಪಕ್ಷ ನಾಯಕ ತೇಜಸ್ವಿ ಯಾದವ್‌ ಘಟನೆಗೆ ಸಂಬಂಧಿಸಿದ ಸುದ್ದಿಯನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ವಿರುದ್ಧ ಹರಿಹಾಯ್ದಿದ್ದಾರೆ.

    ಎನ್‌ಡಿಎ ನೇತೃತ್ವದ ಸರ್ಕಾರದ ಆಡಳಿತದಿಂದಾಗಿ ಬಿಹಾರ್‌ನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಜೆಡಿ(ಯು) ನಾಯಕನಾಗಿರುವ ಮುಸ್ಲಿಂ ಸಮುದಾಯದ ಯುವಕನಿಗೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ. ಜೀವಂತವಾಗಿ ಸುಟ್ಟು ಸಮಾಧಿ ಮಾಡಲಾಗಿದೆ. ಇಂತಹ ದುರ್ಘಟನೆಗಳು ಬಿಹಾರ್‌ನಲ್ಲಿ ಯಾಕೆ ನಡೆಯುತ್ತಿವೆ ಎಂಬ ಬಗ್ಗೆ ನಿತೀಶ್‌ ಕುಮಾರ್‌ ಅವರು ಸ್ಪಷ್ಟನೆ ನೀಡಬೇಕು. ಜನರೇಕೆ ಕಾನೂನನ್ನು ಕೈಗೆ ತೆಗೆದುಕೊಂಡು ಹೀಗೆ ವರ್ತಿಸುತ್ತಿದ್ದಾರೆ ಎಂದು ಯಾದವ್‌ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಹರ್ಷ ಮನೆಗೆ ಬಿಜೆಪಿ ನಾಯಕರ ಭೇಟಿ, ಸಾಂತ್ವನ

    https://twitter.com/yadavtejashwi/status/1496177664159371267?ref_src=twsrc%5Etfw%7Ctwcamp%5Etweetembed%7Ctwterm%5E1496177664159371267%7Ctwgr%5E%7Ctwcon%5Es1_&ref_url=https%3A%2F%2Fwww.ndtv.com%2Findia-news%2Fmuslim-man-beaten-to-death-in-bihar-video-points-to-cow-vigilantes-2784257

    ಖಲೀಲ್‌ನ ದೇಹವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, ಮೃತನ ಕುಟುಂಬಸ್ಥರು ಖಲೀಲ್‌ ಕಾಣೆಯಾಗಿರುವ ಬಗ್ಗೆ ಫೆ.16ರಂದು ದೂರು ದಾಖಲಿಸಿದ್ದರು. ಅದಾದ ಕೆಲವೇ ದಿನಗಳಲ್ಲಿ ಖಲೀಲ್‌ನ ಮೊಬೈಲ್‌ನಿಂದ ಕುಟುಂಬಸ್ಥರಿಗೆ ಕರೆ ಬಂದಿದೆ. ಫೋನ್‌ನಲ್ಲಿ ಮಾತನಾಡಿದಾತ 5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾನೆ. ಹಣ ಕೊಡಲು ತಡ ಮಾಡಿದರೆ, ಖಲೀಲ್‌ನ ಕಿಡ್ನಿಯನ್ನು ಮಾರುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.

  • ಪ್ರಚಾರದ ಹುಚ್ಚಿಗೆ ಬಿದ್ದು ಯಡವಟ್ಟು ಮಾಡಿಕೊಂಡ್ವಿ -ಪೊಲೀಸರ ಮುಂದೆ ಕಣ್ಣೀರಿಟ್ಟ ಯುವಕರು

    ಪ್ರಚಾರದ ಹುಚ್ಚಿಗೆ ಬಿದ್ದು ಯಡವಟ್ಟು ಮಾಡಿಕೊಂಡ್ವಿ -ಪೊಲೀಸರ ಮುಂದೆ ಕಣ್ಣೀರಿಟ್ಟ ಯುವಕರು

    ಬೆಂಗಳೂರು: ಮುಸ್ಲಿಂ ಯುವತಿ ಅವಾಚ್ಯ ಪದಗಳಿಂದ ಬೈದಿದ್ದ ಯುವಕರು ನಾವು ಪ್ರಚಾರದ ಹುಚ್ಚಿಗೆ ವಿಡಿಯೋ ಮಾಡಿದ್ದೆವು ಎಂದು ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.

    ಹಿಂದೂ ಯುವಕನ ಬೈಕ್ ನಲ್ಲಿ ಹೋಗುತ್ತಿದ್ದಳು ಎಂಬ ಕಾರಣಕ್ಕೆ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಸೊಹೇಲ್ ಮತ್ತು ನಯಾಜ್ ಅವರನ್ನು ಸುದ್ದಗುಂಟೆ ಪಾಳ್ಯ ಪೊಲೀಸರು ಬಂಧಿಸಿದ್ದರು.

    ಕಳೆದ ಶುಕ್ರವಾರ ನಗರದ ಡೈರಿ ಸರ್ಕಲ್ ನಲ್ಲಿ ಕೆಲಸ ಮುಗಿಸಿ ಹಿಂದೂ ಯುವಕನ ಜೊತೆಗೆ ಬೈಕ್ ನಲ್ಲಿ ಬರುತ್ತಿದ್ದಳು ಎಂಬ ಕಾರಣಕ್ಕೆ, ಬೈಕ್ ತಡೆದ ಇಬ್ಬರು ಇದು ಮುಸ್ಲಿಂ ಸಂಪ್ರದಾಯಕ್ಕೆ ಮಾಡುವ ಅವಮಾನ ಎಂದು ಗಲಾಟೆ ಮಾಡಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದರು. ಇದನ್ನೂ ಓದಿ:  ಮೇಲಾಧಿಕಾರಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯ ನಿರೀಕ್ಷಕ

    ಹಲ್ಲೆಯ ವೀಡಿಯೋವನ್ನು ಸೊಹೇಲ್ ತನ್ನ ಫೇಸ್‍ಬುಕ್ ಅಕೌಂಟ್ ನಲ್ಲಿ ಶೇರ್ ಮಾಡ್ಕೊಂಡಿದ್ದರು. ಈಗ ಆ ವೀಡಿಯೋ ಎಲ್ಲಾ ಕಡೆ ವೈರಲ್ ಆಗಿದ್ದು, ಭಯಗೊಂಡ ಸೊಹೇಲ್ ತಕ್ಷಣ ಅದನ್ನು ಡಿಲೀಟ್ ಕೂಡ ಮಾಡಿದ್ದರು. ಅಷ್ಟರೊಳಗೆ ವಿಡಿಯೋ ವೈರಲ್ ಆಗಿದನ್ನು ಗಮನಿಸಿದ ಸುದ್ದಗುಂಟೆ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ನಂತರ ತನಿಖೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ.

    ವಿಚಾರಣೆ ವೇಳೆ ಇಬ್ಬರು ಕೂಡ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದು, ಪ್ರಚಾರದ ಹುಚ್ಚಿಗೆ ಬಿದ್ದು ಈ ರೀತಿ ಯಡವಟ್ಟು ಮಾಡಿಕೊಂಡ್ವಿ ಎಂದು ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾರೆ. ಧರ್ಮದ ವಿಚಾರವನ್ನು ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ರೆ ಹೆಚ್ಚು ಪ್ರಚಾರ ಸಿಗುತ್ತೆ, ಅದರಿಂದ ಬೇಗ ಫೇಮಸ್ ಆಗಬಹುದು ಎಂದು ಪ್ಲಾನ್ ಮಾಡಿ ಕೃತ್ಯವೆಸಗಿದ್ದಾಗಿ ಪೊಲೀಸರ ಮುಂದೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ:  ಸಣ್ಣ ಮಳೆಗೆ ನದಿಯಂತಾದ ಬೆಂಗಳೂರು ರಸ್ತೆ

    ಮುಸ್ಲಿಂ ಯುವಕರಿಂದ ಹಲ್ಲೆಗೊಳಾಗದ ಮಹಿಳೆ ಖಾಸಗಿ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದು, ಅದೇ ದಿನ ಬೆಸ್ಟ್ ಎಂಪ್ಲಾಯ್ ಅವಾರ್ಡ್ ಆಗಿ ಲ್ಯಾಪ್ ಟಾಪ್ ಬಹುಮಾನ ತೆಗೆದುಕೊಂಡಿದ್ದರು. ಇದೇ ವಿಚಾರಕ್ಕೆ ಅಂದು ಕೆಲಸ ಮುಗಿಸಿ ಮನೆಗೆ ಹೊರಡೋದು ತಡವಾಗಿದ್ದರಿಂದ ಸಹೋದ್ಯೋಗಿ ಮಹೇಶ್ ಅವರ ಜೊತೆಗೆ ಬಂದಿದ್ದರು. ತಾನು ಸಹೋದ್ಯೋಗಿ ಜೊತೆ ಬರುತ್ತಿರುವ ವಿಚಾರವನ್ನು ಪತಿಗೆ ತಿಳಿಸಿದ್ದರು.