Tag: ಮುಸ್ಲಿಮ್

  • ಹಿಂದೂ – ಮುಸ್ಲಿಂ ಭಾವೈಕ್ಯತೆ | ಉರ್ದು ಶಾಲೆಯಲ್ಲಿ ಕೃಷ್ಣ – ರಾಧೆಯರ ವೇಷದಲ್ಲಿ ಮಿಂಚಿದ ಮಕ್ಕಳು

    ಹಿಂದೂ – ಮುಸ್ಲಿಂ ಭಾವೈಕ್ಯತೆ | ಉರ್ದು ಶಾಲೆಯಲ್ಲಿ ಕೃಷ್ಣ – ರಾಧೆಯರ ವೇಷದಲ್ಲಿ ಮಿಂಚಿದ ಮಕ್ಕಳು

    ಬಳ್ಳಾರಿ: ಹಿಂದೂ, ಮುಸ್ಲಿಂ (Hindu Muslim) ಪರಸ್ಪರ ಭಾವೈಕ್ಯತೆಯಿಂದ ರಾಷ್ಟ್ರೀಯ ಏಕತೆಯನ್ನು ಸಾರಲು ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಗ್ರಾಮದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಅದ್ದೂರಿ ಶ್ರೀಕೃಷ್ಣ ಜನ್ಮಾಷ್ಟಮಿ (Shri Krishna Janmashtami) ಆಚರಣೆ ಮಾಡಿದ್ದಾರೆ.

    ಕೋಮು ಸೌಹಾರ್ದತೆಯಿಂದ ಇಂತಹ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಹಮ್ಮಿಕೊಂಡು ರಾಷ್ಟ್ರೀಯ ಏಕತೆ ಮೂಡಿಸುವ ಜೊತೆಗೆ ಪರಸ್ಪರ ಭಾವೈಕ್ಯತೆಯಿಂದ ದೇಶದ ಪ್ರಗತಿಯ ಸಾಧಿಸುವ ದೃಷ್ಟಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗಿದೆ. ಮುಸ್ಲಿಮ್‌ (Muslim) ಕುಟುಂಬದ ಮಕ್ಕಳು ಕೃಷ್ಣ ರಾಧೆಯರ (Krishna and Radha) ವೇಷ ತೊಟ್ಟು ಸಂಭ್ರಮಿಸುವ ಮೂಲಕ ಭಾವೈಕ್ಯತೆ ಸಾರಿದರು.

    ಶಿಕ್ಷಕ ರವಿಕುಮಾರ ಸಕ್ರಹಳ್ಳಿ ಮಾತನಾಡಿ ರಾಷ್ಟ್ರೀಯ ಏಕತೆ, ಕೋಮು ಸೌಹಾರ್ದತೆ, ಭಾವೈಕ್ಯತೆಯನ್ನು ಮೂಡಿಸಲು ಪಾಲಕರ ಸಹಕಾರದಿಂದ ಉರ್ದು ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮ ಸಡಗರದಿಂದ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. 160 ಮಕ್ಕಳು ಓದುವ ಈ ಶಾಲೆಯಲ್ಲಿ ಗಣೇಶ ಹಬ್ಬ ರಕ್ಷಾ ಬಂಧನ ಶ್ರೀ ಕೃಷ್ಣ ಜನ್ಮಾಷ್ಟಮಿ, ಹಲವಾರು ಸಾಧಕರ ಜಯಂತಿಗಳು ಮುಂತಾದ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಸಡಗರದಿಂದ ಆಚರಿಸುತ್ತೇವೆ ಎಂದರು.  ಇದನ್ನೂ ಓದಿ: ಎಸ್‌ಐಟಿ ಮಧ್ಯಂತರ ವರದಿ ಬಿಡುಗಡೆ ಮಾಡ್ಬೇಕು, ಇಲ್ಲದಿದ್ರೆ ಸದನದಲ್ಲಿ ಹೋರಾಟ: ಆರ್.ಅಶೋಕ್

    ಮುಸ್ಲಿಂ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿರುವ ಉರ್ದು ಶಾಲೆಯಲ್ಲಿ ನೂರಕ್ಕೂ ಅಧಿಕ ಮಕ್ಕಳು ಕೃಷ್ಣ ಮತ್ತು ರಾಧೆಯರ ವೇಷಭೂಷಣ ಧರಿಸಿ ಭಾವೈಕ್ಯತೆ ಸಾಧಿಸಲು ಮುಂದಾಗಿದ್ದು ವಿಶೇಷವಾಗಿತ್ತು.

  • ಕಲಬುರಗಿ ಕೇಂದ್ರಿಯ ವಿವಿ ಆವರಣದಲ್ಲಿ ಗೋರಿ – ರಾತ್ರೋರಾತ್ರಿ ಕಾಂಪೌಂಡ್‌ ನಿರ್ಮಾಣ

    ಕಲಬುರಗಿ ಕೇಂದ್ರಿಯ ವಿವಿ ಆವರಣದಲ್ಲಿ ಗೋರಿ – ರಾತ್ರೋರಾತ್ರಿ ಕಾಂಪೌಂಡ್‌ ನಿರ್ಮಾಣ

    – ವಿವಿ ವಿದ್ಯಾರ್ಥಿಗಳು, ಹಿಂದುಪರ ಸಂಘಟನೆಗಳ ಆಕ್ರೋಶ
    – ಗೋರಿ ತೆರವುಗೊಳಿಸದಿದ್ದರೆ, ಆಗಸ್ಟ್ 10 ರಂದು ನೆಲಸಮ ಮಾಡುತ್ತೇವೆ

    ಕಲಬುರಗಿ: ಕಡಗಂಚಿ ಬಳಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (Kalaburagi Central University) ಕ್ಯಾಂಪಸ್ಸಿನಲ್ಲಿ ಅನಧಿಕೃತವಾಗಿ ಮುಸ್ಲಿಂ ಸಮುದಾಯದ (Muslim Community) ಗೋರಿ (ಮಜರ್) ನಿರ್ಮಾಣ ಮಾಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.

    ಕಡಗಂಚಿಯ ಬಳಿ 600 ಎಕರೆ ಪ್ರದೇಶದಲ್ಲಿ ಹರಡಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮುಸ್ಲಿಂ ಸಮುದಾಯದ ಎರಡು ಗೋರಿ (ಮಜರ್) ನಿರ್ಮಾಣ ಮಾಡಲಾಗಿದ್ದು, ಅನಧಿಕೃತವಾಗಿ ಮೂರನೇ ಮಜರ್‌ಗೆ (Mazar) ಸಿದ್ದತೆಗಳು ನಡೆದಿವೆ ಎಂಬ ಆರೋಪ ಕೇಳಿಬಂದಿದೆ. ರಾತ್ರೋ ರಾತ್ರಿ ವಿವಿಯ ಕ್ಯಾಂಪಸ್ಸಿನಲ್ಲಿ ಬಂದು ಗೋರಿಯ ಸುತ್ತಮುತ್ತಲೂ ಕಲ್ಲಿನ ಕಾಂಪೌಂಡ್ ನಿರ್ಮಾಣ ಮಾಡಲಾಗಿದೆ.

    ಈಗಾಗಲೇ ಕೇಂದ್ರಿಯ ವಿವಿಯ ಕ್ಯಾಂಪಸ್ಸಿನಲ್ಲಿ ಎರಡು ಗೋರಿಗಳು ಪತ್ತೆಯಾಗಿದ್ದು, ಗೋರಿಗಳಿಗೆ ಮುಸ್ಲಿಂ ಸಮುದಾಯ ವಿದ್ಯುತ್ ವ್ಯವಸ್ಥೆ ಕೂಡ ಕಲ್ಪಿಸಿಕೊಂಡಿದೆ. ಅನಧಿಕೃತ ವಿದ್ಯುತ್ ಬಳಸಿಕೊಂಡು, ಗೋರಿಯ ಸುತ್ತಮುತ್ತ ಕಾಂಪೌಂಡ್ ನಿರ್ಮಾಣ ಮಾಡಿದ್ದನ್ನು ಕಂಡಿರುವ ವಿವಿಯ ವಿದ್ಯಾರ್ಥಿಗಳು, ಹಿಂದುಪರ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿದ್ದು, ಅನಧಿಕೃತ ಗೋರಿ ನಿರ್ಮಾಣದ ಸ್ಥಳದಲ್ಲಿನ ವಿದ್ಯುತ್ ವ್ಯವಸ್ಥೆಯನ್ನು ಇದೀಗ ವಿವಿಯ ಆಡಳಿತ ಮಂಡಳಿ ಕಡಿತಗೊಳಿಸಿದೆ. ಇದನ್ನೂ ಓದಿ: ಪತಿಯನ್ನು ಪತ್ನಿಯೇ ನದಿಗೆ ತಳ್ಳಿದ ಕೇಸ್‌ಗೆ ಟ್ವಿಸ್ಟ್‌; ಬಾಲ್ಯವಿವಾಹ ಕೇಸಲ್ಲಿ ನಾಪತ್ತೆಯಾಗಿದ್ದ ಗಂಡ ಅರೆಸ್ಟ್‌

    ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ಈ ರೀತಿ ಅನಧಿಕೃತ ಗೋರಿಗಳ ನಿರ್ಮಾಣ ಮಾಡಿರುವ ಕುರಿತು ನಮಗೆ ಯಾವುದೇ ರೀತಿಯ ಮಾಹಿತಿ ಇಲ್ಲ ಎಂದು ವಿಶ್ವವಿದ್ಯಾಲಯದ ಉಪಕಲಪತಿಗಳು ತಿಳಿಸಿದ್ದಾರೆ.

    ಈ ಕುರಿತು ಮಾತನಾಡಿದ ಶ್ರೀರಾಮ ಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಹಲವು ಬೆಳವಣಿಗೆ ಕಂಡುಬರುತ್ತಿವೆ. 600 ಎಕ್ರೆ ವಿವಿಯಲ್ಲಿ ಆಗಿಂದಾಗ ಕೆಲವು ದುರ್ಘಟನೆ ನಡೆದಿದ್ದು. ಇದರ ಮುಂದುವರೆದ ಭಾಗವಾಗಿ ಇಂದು ಕ್ಯಾಂಪಸ್ಸಿನಲ್ಲಿ ಅನಧಿಕೃತವಾಗಿ ಮುಸ್ಲಿಮರು ಗೋರಿಗಳ ನಿರ್ಮಾಣ ಮಾಡುತ್ತಿರುವುದು ನಮಗೆ ತಿಳಿದುಬಂದಿದೆ. ಈಗಾಗಲೇ ಯಾರ ಅನುಮತಿಯೂ ಇಲ್ಲದೆ 10-15 ಅಡಿ ಎತ್ತರದಲ್ಲಿ ಅನಧಿಕೃತ ಮಜರ್ ನಿರ್ಮಾಣ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಅಸ್ಥಿ ಉತ್ಖನನ; ಗುಂಡಿ 6ರಲ್ಲಿ ಸಿಕ್ಕ ಮೂಳೆ 40 ವರ್ಷ ಹಳೆಯದ್ದು

    ಶೈಕ್ಷಣಿಕ ಕೇಂದ್ರವಾದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ಅನಧಿಕೃತವಾಗಿ ಗೋರಿ ನಿರ್ಮಾಣ ಮಾಡುವ ಮೂಲಕ ಅಲ್ಲಿ ನಮಾಜ್ ಕೂಡ ಮಾಡಲಾಗುತ್ತಿದೆ ಎಂಬ ಮಾಹಿತಿಯೂ ಬಂದಿದೆ. ಅಲ್ಲಿಯ ಮುಸ್ಲಿಮರು, ವಿವಿಯ ಅಸಿಸ್ಟೆಂಟ್ ಪ್ರೊಫೆಸರ್ ಅಬ್ದುಲ್ ಮಜರ್ ಇವರ ಕುಮ್ಮಕ್ಕಿನಿಂದ ಹಾಗೂ ಕೆಲ ಮುಸ್ಲಿಂ ವಿದ್ಯಾರ್ಥಿಗಳು, ಹೊರಗಿನ ಹಳ್ಳಿಯ ಮುಸ್ಲಿಮರ ನೇತೃತ್ವದಲ್ಲಿ ಅನಧಿಕೃತ ದರ್ಗಾ ನಿರ್ಮಾಣ ಮಾಡುತ್ತಿದ್ದಾರೆ ಎಂದು ಹೇಳಿದರು.

     

    ಆ.10ರ ಒಳಗೆ ನೆಲಸಮ ಮಾಡಿ:
    ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಾಲೆಯೊಂದರಲ್ಲಿ ಅನಧಿಕೃತ ಗೋರಿಯೊಂದನ್ನು ಇಟ್ಟಿದ್ದರು. ನಾರಾಯಣಪುರ ಬಸವಸಾಗರ ಅಣೆಕಟ್ಟಿನಲ್ಲಿ ಅನಧಿಕೃತ ಗೋರಿ ನಿರ್ಮಾಣ ಮಾಡಿದ್ದು ಇಲ್ಲಿಯವರೆಗೆ ತೆಗೆದಿಲ್ಲ. ಅದೇ ಮಾದರಿಯಲ್ಲಿ ವಿವಿಯ ಕ್ಯಾಂಪಸ್ಸಿನಲ್ಲಿ ಗೋರಿ ನಿರ್ಮಾಣ ಮಾಡಿದ್ದಾರೆ. ಕೂಡಲೇ, ಜಿಲ್ಲಾಡಳಿತ ಎಚ್ಚೆತ್ತು ವಿವಿಯಲ್ಲಿ ನಿರ್ಮಾಣ ಮಾಡಲಾದ ಗೋರಿಯನ್ನು ನೆಲಸಮ ಮಾಡಬೇಕು. ಇಲ್ಲದಿದ್ದರೆ ಆ.10 ರಂದು ವಿವಿಯಲ್ಲಿನ ಅನಧಿಕೃತ ಗೋರಿಯನ್ನು ನೆಲಸಮ ಗೊಳಿಸಲಾಗುವುದು ಎಂದು ಹಿಂದೂ ಸಂಘಟನೆಗಳು ತಿಳಿಸಿವೆ.

  • ಕಿಲ್ಲರ್‌ ಲೇಡಿಯಿಂದ ಇರಾನ್‌ ನಾಶ – ಇಸ್ರೇಲ್‌ ನಿಖರ ದಾಳಿ ಹಿಂದಿದ್ದಾಳೆ ಸುಂದರಿ!

    ಕಿಲ್ಲರ್‌ ಲೇಡಿಯಿಂದ ಇರಾನ್‌ ನಾಶ – ಇಸ್ರೇಲ್‌ ನಿಖರ ದಾಳಿ ಹಿಂದಿದ್ದಾಳೆ ಸುಂದರಿ!

    – ದೇಶಾದ್ಯಂತ ಗೂಢಚಾರಿಣಿ ಫೋಟೋ ಪ್ರಕಟಿಸಿದ ಇರಾನ್‌
    – ಇಸ್ರೇಲ್‌ ದಾಳಿ ಬೆನ್ನಲ್ಲೇ ಇರಾನ್‌ನಿಂದ ಕಣ್ಮರೆ

    ಟೆಲ್‌ ಅವಿವ್‌: ಪುಟ್ಟ ದೇಶ ಇಸ್ರೇಲ್‌ (Israel) ಇರಾನ್‌ (Iran) ಮೇಲೆ ಇಷ್ಟೊಂದು ನಿಖರವಾಗಿ ದಾಳಿ ಮಾಡಿದರ ಹಿಂದೆ ಮೊಸಾದ್‌ (Mossad) ಮಹಿಳಾ ಗೂಢಚಾರಿಣಿ ಕೆಲಸ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

    ಹೌದು. ಫ್ರಾನ್ಸ್‌ ಮೂಲದ ಕ್ಯಾಥರೀನ್ ಪೆರೆಜ್ ಶಕ್ಡಮ್ (Catherine Perez Shakdam) ಎಂಬಾಕೆ ಎರಡು ವರ್ಷದ ಹಿಂದೆ ಮೊಸಾದ್‌ನಿಂದ ತರಬೇತಿ ಪಡೆದು ರಹಸ್ಯವಾಗಿ ಇರಾನ್‌ ಪ್ರವೇಶಿಸಿದ್ದಳು. ನೋಡಲು ಸುಂದರವಾಗಿದ್ದ ಈಕೆ ಮೂಲತ: ಯಹೂದಿ. ಕ್ಯಾಥರೀನ್ ಶಿಯಾ ಇಸ್ಲಾಂಗೆ ಮತಾಂತರಗೊಂಡು ನಿಧಾನವಾಗಿ ಇರಾನಿನ ಉನ್ನತ ಅಧಿಕಾರಿಗಳು ಮತ್ತು ಅವರ ಕುಟುಂಬಗಳಿಗೆ ಹತ್ತಿರವಾಗಿದ್ದಳು.

    ನಾನು ಇಸ್ಲಾಂ ಧರ್ಮದ ಬಗ್ಗೆ ಮತ್ತು ಇರಾನ್‌ ದೇಶದ ಆಡಳಿತದ ಬಗ್ಗೆ ಒಲವು ಹೊಂದಿದ್ದೇನೆ ಎಂದು ಹೇಳಿ ಇಸ್ಲಾ ಧರ್ಮ ನಿಯಮಗಳನ್ನು ಚಾಚು ತಪ್ಪದೇ ಪಾಲಿಸುತ್ತಿದ್ದಳು. ಮತಾಂತರಗೊಂಡ ಬಳಿಕ ಇರಾನ್‌ ರಾಜಧಾನಿ ಟೆಹ್ರಾನ್‌ನಲ್ಲಿದ್ದ ಈಕೆ ಸರ್ಕಾರಿ ಅಧಿಕಾರಿಗಳ ಪತ್ನಿಯರನ್ನು ಭೇಟಿಯಾಗಿ ಮಾತನಾಡಲು ಆರಂಭಿಸಿದ್ದಳು. ನಂತರದ ದಿನಗಳಲ್ಲಿ ಈಕೆ ಎಷ್ಟು ವಿಶ್ವಾಸ ಗಳಿಸಿದ್ದಳು ಎಂದರೆ ಸೇನಾ ನಾಯಕರ ಮನೆಗೆ ನಿಯಮಿತ ಹೋಗುವ ಮಟ್ಟಕ್ಕೆ ಆಪ್ತತೆ ಬೆಳೆದಿತ್ತು. ಇದನ್ನೂ ಓದಿ: ಇರಾನ್‌ಗೆ ಅಣ್ವಸ್ತ್ರ ನೀಡಲು ಮುಂದೆ ಬಂದ ಹಲವು ದೇಶಗಳು!

    ಈಕೆಯ ಬರಹಗಳು ನಿಯಮಿತವಾಗಿ ಪ್ರೆಸ್ ಟಿವಿ, ಟೆಹ್ರಾನ್ ಟೈಮ್ಸ್ ಮತ್ತು ಖಮೇನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಸಹ ಕಾಣಿಸಿಕೊಳ್ಳುತ್ತಿದ್ದವು. ಬರಹಗಾರ್ತಿ, ಪತ್ರಕರ್ತೆ ಮತ್ತು ಚಿಂತಕಿಯಾಗಿ ಪ್ರವೇಶಿಸಿದ್ದ ಕ್ಯಾಥರೀನ್ ಲೇಖನದ ಮೂಲಕ ಇರಾನಿನ ಸರ್ವೋಚ್ಚ ನಾಯಕ ಅಲಿ ಖಮೇನಿ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಿದ್ದಳು.

    ಸೇನೆಯಲ್ಲಿರುವ ಉನ್ನತ ನಾಯಕರ ಮನೆಗೆ ಅಷ್ಟು ಸುಲಭವಾಗಿ ಯಾರನ್ನು ಬಿಡುವುದಿಲ್ಲ. ಆದರೆ ಬಿಗಿ ಭದ್ರತೆ ಕಲ್ಪಿಸಿದ್ದ ಈ ಮನೆಗೆ ಕ್ಯಾಥರೀನ್ ಬಹಳ ಸಲೀಸಾಗಿ ಹೋಗುತ್ತಿದ್ದಳು. ಮನೆಗೆ ಭೇಟಿ ನೀಡುವುದರ ಜೊತೆಗೆ ಆಕೆ ಉನ್ನತ ಕಮಾಂಡರ್‌ಗಳ ಬಗ್ಗೆ ಗುಪ್ತಚರ ಮಾಹಿತಿಯನ್ನು ಸದ್ದಿಲ್ಲದೆ ಸಂಗ್ರಹಿಸುತ್ತಿದ್ದಳು. ಸೇನಾ ನಾಯಕರ ಮನೆ ಮಾತ್ರವಲ್ಲ ಸಾಮಾನ್ಯವಾಗಿ ಯಾರಿಗೂ ಪ್ರವೇಶ ಇಲ್ಲದ ಅಥವಾ ಕಠಿಣ ಪರಿಶೀಲನೆಯ ನಂತರ ಪ್ರವೇಶಿಸಬಹುದಾಗಿದ್ದ ಖಾಸಗಿ ಸ್ಥಳಗಳಿಗೆ ಈಕೆ ಬಹಳ ಸಲೀಸಲಾಗಿ ತೆರಳುತ್ತಿದ್ದಳು. ಇದನ್ನೂ ಓದಿ: ವಿಶ್ವದ ಪವರ್‌ಫುಲ್‌ ವೆಪೆನ್‌ ʻಬಂಕರ್‌ ಬಸ್ಟರ್‌ʼ – 14,000 ಕೆಜಿ ತೂಕದ ಬಾಂಬ್‌ ಬಳಸಿ ಇರಾನ್‌ ಪರಮಾಣು ಕೇಂದ್ರದ ಮೇಲೆ ಅಮೆರಿಕ ದಾಳಿ

    ಇರಾನ್‌ ಏಜೆನ್ಸಿಗಳು ಸಂದರ್ಶಕರ ಫೋನ್‌ ಇತ್ಯಾದಿಗಳನ್ನು ಪರಿಶೀಲಿಸುತ್ತಿದ್ದರೂ ಕ್ಯಾಥರೀನ್ ಸೂಕ್ಷ್ಮ ಪ್ರದೇಶಗಳಿಗೆ ತೆರಳಿ ರಹಸ್ಯ ಮಾಹಿತಿಯನ್ನು ಸಂಗ್ರಹಿಸಿ ನೇರವಾಗಿ ಮೊಸಾದ್‌ಗೆ ಕಳುಹಿಸುತ್ತಿದ್ದಳು. ಕಳೆದ ಮೂರು ವಾರಗಳಲ್ಲಿ ಸೇನಾ ಮುಖ್ಯಸ್ಥರಿಂದ ಹಿಡಿದು ಐಆರ್‌ಜಿಸಿ ನಾಯಕರವರೆಗೆ 9 ಉನ್ನತ ಇರಾನಿನ ಮಿಲಿಟರಿ ಕಮಾಂಡರ್‌ಗಳನ್ನು ಇಸ್ರೇಲ್ ಕೊಂದು ಹಾಕಿದೆ. ಪ್ರತಿ ಬಾರಿಯೂ, ಇಸ್ರೇಲಿ ಜೆಟ್‌ಗಳು ಈ ಅಧಿಕಾರಿಗಳು ನೆಲೆಸಿದ್ದ  ನಿಖರವಾಗಿ ಕಟ್ಟಡವನ್ನು ಗುರಿಯಾಗಿಸಿಕೊಂಡು ಮಾರಕ ದಾಳಿಗಳನ್ನು ನಡೆಸಿವೆ.

    ಈಕೆ ಕಳುಹಿಸಿದ ಮಾಹಿತಿ ಆಧಾರದಲ್ಲೇ ಇಸ್ರೇಲ್‌ ಕೆಲ ದಿನಗಳಿಂದ ಸೇನಾ ನಾಯಕರ ಮತ್ತು ವಿಜ್ಞಾನಿಗಳ ಮನೆ ಮೇಲೆ ನಿಖರ ದಾಳಿ ಮಾಡಿರಬಹುದು ಎಂದು ಎಂಬ ವಿಶ್ಲೇಷಣೆ ಕೇಳಿ ಬಂದಿದೆ.

     
    ಈಗ ಎಲ್ಲಿದ್ದಾಳೆ?
    ಇಸ್ರೇಲ್‌ ದಾಳಿ ಆರಂಭಿಸುತ್ತಿದ್ದಂತೆ ಸೇನಾ ನಾಯಕರು ಸುರಕ್ಷಿತ ಸ್ಥಳಕ್ಕೆ ತೆರಳಿದ್ದರು. ಸುರಕ್ಷಿತ ಸ್ಥಳಕ್ಕೆ ತೆರಳಿದ್ದರೂ ಇಸ್ರೇಲ್‌ ಆ ಜಾಗಕ್ಕೆ ನಿಖರವಾಗಿ ದಾಳಿ ಮಾಡಿ ಹತ್ಯೆ ಮಾಡುತ್ತಿತ್ತು.

    ಇಸ್ರೇಲ್‌ ದಾಳಿಗೆ ಬೆಚ್ಚಿಬಿದ್ದ ಇರಾನ್‌ ಗುಪ್ತಚರ ಸಂಸ್ಥೆ ತನಿಖೆ ಆರಂಭಿಸಿತು. ತನಿಖೆ ಆರಂಭಿಸಿದಾಗ ಅಧಿಕಾರಿಗಳು ಕ್ಯಾಥರೀನ್ ಜೊತೆ ತೆಗೆಸಿದ್ದ ಫೋಟೋಗಳು ನಂತರ ಆಕೆ ನಿಯಮಿತವಾಗಿ ಮನೆಗೆ ಭೇಟಿ ನೀಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಈ ವಿಚಾರ ಬಯಲಾಗುತ್ತಿದ್ದಂತೆ ಇರಾನ್‌ ಆಕೆಯ ಪತ್ತೆಗೆ ಬಲೆ ಬೀಸಿದೆ. ಆದರೆ ಅಷ್ಟು ಹೊತ್ತಿಗಾಗಲೇ ಆಕೆ ಇರಾನ್‌ನಿಂದ ಕಣ್ಮರೆಯಾಗಿದ್ದಳು.

    ಇರಾನ್‌ನ ಗುಪ್ತಚರ ಸಂಸ್ಥೆ ಈಕೆಯ ಪೋಸ್ಟರ್‌ಗಳು ಮತ್ತು ಫೋಟೋಗಳನ್ನು ದೇಶಾದ್ಯಂತ ಪ್ರಕಟಿಸಿ ಈಕೆಯ ಸುಳಿವು ನೀಡಬೇಕೆಂದು ಕೇಳಿಕೊಂಡಿದೆ. ಒಂದೋ ಆಕೆ ತನ್ನ ಗುರುತನ್ನು ಬದಲಾಯಿಸಿರಬೇಕು ಅಥವಾ ಬೇರೆ ದೇಶಕ್ಕೆ ತೆರಳಿರಬಹುದು ಎಂದು ವರದಿಯಾಗಿದೆ. ಇರಾನಿನ ಸಾಮಾಜಿಕ ಜಾಲತಾಣಗಳಲ್ಲಿ ಈಕೆಯ ಫೋಟೋಗಳು ಈಗ ವೈರಲ್‌ ಆಗಿದೆ.

  • ಗುತ್ತಿಗೆ ಆಯ್ತು ಈಗ ವಸತಿ ಯೋಜನೆಯಲ್ಲೂ ಮುಸ್ಲಿಮ್‌ ಮೀಸಲಾತಿ ಶೇ.15ಕ್ಕೆ ಹೆಚ್ಚಳ

    ಗುತ್ತಿಗೆ ಆಯ್ತು ಈಗ ವಸತಿ ಯೋಜನೆಯಲ್ಲೂ ಮುಸ್ಲಿಮ್‌ ಮೀಸಲಾತಿ ಶೇ.15ಕ್ಕೆ ಹೆಚ್ಚಳ

    – ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

    ಬೆಂಗಳೂರು: ಗುತ್ತಿಗೆ ಮೀಸಲಾತಿ ಬಳಿಕ ಈಗ ವಸತಿ ಯೋಜನೆಯಲ್ಲಿ (Housing Project) ಮುಸ್ಲಿಮ್‌ ಮೀಸಲಾತಿ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ (Karnataka Government) ಮುದ್ರೆ ಒತ್ತಿದೆ.

    ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಗಳ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಈಗಾಗಲೇ ಅಲ್ಪಸಂಖ್ಯಾತರಿಗೆ 10% ಮೀಸಲಾತಿ ನೀಡಲಾಗಿದ್ದು ಈಗ 15%ಕ್ಕೆ ಮೀಸಲಾತಿ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ.

    ಮೊದಲೇ ನಿಗದಿಯಾಗಿದ್ದ ಕ್ಯಾಬಿನೆಟ್‌ನಲ್ಲಿ ಈ ವಿಷಯದ ಪ್ರಸ್ತಾಪ ಇರಲಿಲ್ಲ. ಆದರೆ ಕ್ಯಾಬಿನೆಟ್ ಹೆಚ್ಚುವರಿ ಅಜೆಂಡಾದಲ್ಲಿ ವಿಷಯ ಸೇರ್ಪಡೆ ಮಾಡಿ ಕ್ಯಾಬಿನೆಟ್ ಒಪ್ಪಿಗೆ ಪಡೆಯುವಲ್ಲಿ ವಸತಿ‌ ಸಚಿವ ಜಮೀರ್ ಅಹಮದ್ (Zameer Ahmed) ಯಶಸ್ವಿಯಾಗಿದ್ದಾರೆ.

    ಮೀಸಲಾತಿ ಹೆಚ್ಚಳಕ್ಕೆ ನಿಯಮಾವಳಿಗಳನ್ನು ತಿದ್ದುಪಡಿ ಮಾಡುವ ಅಗತ್ಯ ಇಲ್ಲ, ಸಂಪುಟದ ತೀರ್ಮಾನದ ಮೂಲಕ ಸರ್ಕಾರದ ಆದೇಶ ಹೊರಡಿಸಿ ಮೀಸಲಾತಿಯನ್ನು ಹೆಚ್ಚಳ ಮಾಡಬಹುದು.

    ಇನ್ನು ಮುಸ್ಲಿಮ್‌ ವಸತಿ ಮೀಸಲಾತಿ ಹೆಚ್ಚಳವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಸಮರ್ಥನೆ ಮಾಡಿಕೊಂಡಿದ್ದಾರೆ. ಸಾಚಾರ್ ಕಮಿಟಿ ವರದಿಯನ್ನೂ ಕೂಡ ಈಗ ಕೇಂದ್ರ ಪರಿಗಣಿಸುತ್ತಿದೆ. ಕೇಂದ್ರದ ಸೂಚನೆಗಳನ್ನು ಗಮನಿಸಿ ಸಾಮಾಜಿಕ ನ್ಯಾಯದ ಪಾಲನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ಇದು ಎಲ್ಲಾ ಅಲ್ಪಸಂಖ್ಯಾತರಿಗೂ ಅನ್ವಯವಾಗಲಿದೆ. ಮುಸ್ಲಿಮ್‌, ಜೈನರು, ಕ್ರಿಶ್ಚಿಯನ್ ಎಲ್ಲರೂ ಕೂಡ ಇದರಲ್ಲಿ ಒಳಗೊಳ್ಳುತ್ತಾರೆ. ಇದಕ್ಕೆ ಬೇಕಾದ ಹಲವು ಅಧ್ಯಯನ ವರದಿಗಳೂ ಕೂಡ ಇವೆ ಅಂತಾ ಸ್ಪಷ್ಟಪಡಿಸಿದರು. ‌ ಬಡವರಿಗೆ ಮನೆ ಮಾಡಿಕೊಡುವುದರಲ್ಲಿ ರಾಜಕೀಯ ವಾಸನೆ ಹುಡುಕುವವರಿಗೆ ನಾವು ಉತ್ತರ ಕೊಡಲ್ಲ. ವಸತಿ ಹೀನರಿಗೆ ಹೆಚ್ಚಿನ ಸೌಲಭ್ಯಗಳನ್ನು ಕೊಡಬೇಕು ಎಂಬುದು ಸರ್ಕಾರದ ಉದ್ದೇಶ ಅಂತಾ ತಿರುಗೇಟು ನೀಡಿದರು.

     

    ರಾಜ್ಯದಲ್ಲಿ ಇರುವ ವಸತಿ ಯೋಜನೆಗಳು
    ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ (ಎಸ್ ಸಿ, ಎಸ್ ಟಿ‌ ಸಮುದಾಯಗಳಿಗೆ ಮಾತ್ರ)
    ಪ್ರಧಾನ ಮಂತ್ರಿ ಆವಾಸ್ ಯೋಜನೆ
    ವಾಜಪೇಯಿ ನಗರ ವಸತಿ ಯೋಜನೆ
    ದೇವರಾಜ ಅರಸು‌ ವಸತಿ ಯೋಜನೆ
    ಬಸವ ವಸತಿ ಯೋಜನೆ

    ವಸತಿ ಇಲಾಖೆಯಲ್ಲಿರುವ ಮೂರು ನಿಗಮಗಳು
    ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ
    ಕರ್ನಾಟಕ ಗೃಹ ಮಂಡಳಿ
    ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ

  • ಗುತ್ತಿಗೆ ಆಯ್ತು, ಈಗ ವಸತಿ ಯೋಜನೆಯಲ್ಲೂ ಮುಸ್ಲಿಮ್‌ ಮೀಸಲಾತಿ ಹೆಚ್ಚಳ!

    ಗುತ್ತಿಗೆ ಆಯ್ತು, ಈಗ ವಸತಿ ಯೋಜನೆಯಲ್ಲೂ ಮುಸ್ಲಿಮ್‌ ಮೀಸಲಾತಿ ಹೆಚ್ಚಳ!

    – ಇಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಅಂತಿಮ ನಿರ್ಧಾರ

    ಬೆಂಗಳೂರು: ಗುತ್ತಿಗೆಯಲ್ಲಿ ಮೀಸಲಾತಿ (Reservation) ನೀಡಿದ ಬಳಿಕ ಈಗ ವಸತಿ ಯೋಜನೆಯಲ್ಲೂ (Housing project) ಮುಸ್ಲಿಮರ (Muslims) ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ.

    ಹೌದು. ತಮ್ಮ ಸಮುದಾಯಕ್ಕೆ ವಸತಿ ಯೋಜನೆಯಲ್ಲೂ ಮೀಸಲಾತಿಯನ್ನು ಹೆಚ್ಚಿಸುವಂತೆ ವಸತಿ ಇಲಾಖೆ ಸಚಿವ ಜಮೀರ್ ಅಹಮದ್ (Zameer Ahmed) ಸರ್ಕಾರದ ಮುಂದೆ ಪ್ರಸ್ತಾಪ ಇಟ್ಟಿದ್ದಾರೆ.

    ಇಂದು ನಡೆಯಲಿರುವ ಕ್ಯಾಬಿನೆಟ್‌ ಸಭೆಯಲ್ಲಿ (Cabinet) ಈ ವಿಷಯನ್ನು ಜಮೀರ್‌ ಅಹಮದ್‌ ತೆಗೆದುಕೊಂಡು ಬಂದಿದ್ದು ಇಂದು ಚರ್ಚೆಯಾಗಲಿದೆ.

    ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಡಿ ನಿಗದಿಪಡಿಸುವ ಗುರಿಯಲ್ಲಿ ಅಲ್ಪಸಂಖ್ಯಾತರಿಗೆ 10% ಮೀಸಲಾತಿ ನಿಗದಿಯಾಗಿದೆ. ಈ ಮೀಸಲಾತಿಯನ್ನು 15% ಏರಿಕೆ ಮಾಡುವ ಸಂಬಂಧ ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆಸಿ  ಇಂದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.  ಇದನ್ನೂ ಓದಿ: ಕರ್ನಾಟಕಕ್ಕೆ ಹೆಚ್‌ಡಿಕೆ, ಜೋಶಿ ಕೊಡುಗೆ ಏನು? ಚರ್ಚೆಗೆ ಬರಲಿ: ಪ್ರದೀಪ್ ಈಶ್ವರ್ ಪಂಥಾಹ್ವಾನ

    ಗುತ್ತಿಗೆಯಲ್ಲೂ ಮೀಸಲಾತಿ
    ಗುತ್ತಿಗೆ ಮೀಸಲಾತಿಯು ಈವರೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ 1ರವರೆಗೆ ಅನ್ವಯವಾಗುತ್ತಿತ್ತು. ಈ ಸೌಲಭ್ಯವನ್ನು ಮುಸ್ಲಿಮರಿಗೆ (ಪ್ರವರ್ಗ 2–ಬಿ) ವಿಸ್ತರಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿತ್ತು. ಇದನ್ನೂ ಓದಿ: ಗೃಹ ಲಕ್ಷ್ಮಿ ಹಣ ಮೇ ತಿಂಗಳದ್ದು ಮಾತ್ರ ಬಾಕಿಯಿದೆ: ಹೆಬ್ಬಾಳ್ಕರ್

    ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಾರ್ಚ್‌ 7ರಂದು ಮಂಡಿಸಿದ ಬಜೆಟ್‌ನಲ್ಲಿ ಮೀಸಲಾತಿ ನೀಡುವ ಬಗ್ಗೆ ಘೋಷಣೆ ಮಾಡಿದ್ದರು. ವಿಪಕ್ಷಗಳ ವಿರೋಧದ ಮಧ್ಯೆ ಸರ್ಕಾರ ಬಜೆಟ್‌ ಅಧಿವೇಶನದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಗೆ ಒಪ್ಪಿಗೆ ನೀಡಿತ್ತು.

    ಮಸೂದೆ ಕಾಯ್ದೆಯಾಗಿ ಜಾರಿಯಾದರೆ 2 ಕೋಟಿ ರೂ. ವೆಚ್ಚದ ಕಾಮಗಾರಿಗಳು, 1 ಕೋಟಿ ರೂ.ವರೆಗಿನ ಸರಕು ಮತ್ತು ಸೇವೆಗಳ ಪೂರೈಕೆಯ ಟೆಂಡರ್‌ನಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಸಿಗಲಿದೆ. ರಾಜ್ಯ ಸರ್ಕಾರ ಕಳುಹಿಸಿದ್ದ ಈ ಮಸೂದೆಯನ್ನು ರಾಜ್ಯಪಾಲ ಥಾವರ್‌ ಸಿಂಗ್‌ ಗೆಹ್ಲೋಟ್‌ (Thawar Chand Gehlot) ಅವರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ.

  • ಕಾಂಗ್ರೆಸ್‌ ಹುದ್ದೆಗಳಿಗೆ ರಾಜೀನಾಮೆ – ಸಿಡಿದ ದಕ್ಷಿಣ ಕನ್ನಡ ಮುಸ್ಲಿಮರು

    ಕಾಂಗ್ರೆಸ್‌ ಹುದ್ದೆಗಳಿಗೆ ರಾಜೀನಾಮೆ – ಸಿಡಿದ ದಕ್ಷಿಣ ಕನ್ನಡ ಮುಸ್ಲಿಮರು

    – ಪರ್ಯಾಯ  ಪಕ್ಷ ಕಟ್ಟುವ ಎಚ್ಚರಿಕೆ ನೀಡಿದ ನಾಯಕರು

    ಮಂಗಳೂರು: ದಕ್ಷಿಣ ಕನ್ನಡದಲ್ಲಿ (Dakshina Kannada) ಕಾಂಗ್ರೆಸ್‌ ಸರ್ಕಾರ ಕೋಮು ಹಿಂಸಾಚಾರ ತಡೆಯುವಲ್ಲಿ ವಿಫಲವಾಗಿದೆ ಎಂದು ಹೇಳಿ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಪೋಸ್ಟ್‌ಗಳಿಗೆ (Congress Minority Morcha) ಮುಸ್ಲಿಮ್ ಮುಖಂಡರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

    ಸಮುದಾಯದಲ್ಲಿ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಅಶ್ರಫ್(K Ashraf) ರಾಜೀನಾಮೆ ನೀಡಿದ್ದಾರೆ.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಇಂದು ಮಧ್ಯಾಹ್ನ ಮಂಗಳೂರಿನಲ್ಲಿ ನಮ್ಮ ಸಭೆ ನಡೆಯಲಿದ್ದು ಅಲ್ಲಿ ನಾವು ನಿರ್ಧಾರ ತೆಗೆದುಕೊಳ್ಳುತ್ತೇವೆ. ಗೃಹ ಇಲಾಖೆ ಸಂಪೂರ್ಣ ವಿಫಲವಾಗಿದೆ. ನಮಗೆ ನ್ಯಾಯ ಸಿಗುವವರೆಗೂ ನಾವು ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಇಬ್ಬರು ಕನ್ನಡಿಗರು ಸೇರಿ 26 ಮೃತ ಪ್ರವಾಸಿಗರ ನೆನಪಿಗೆ ಪಹಲ್ಗಾಮ್‌ನಲ್ಲಿ ಸ್ಮಾರಕ – ಒಮರ್ ಅಬ್ದುಲ್ಲಾ

    ವೈಯುಕ್ತಿಕ ಕಾರಣಕ್ಕೆ ಅಬ್ದುಲ್ ರಹೀಂ ಕೊಲೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ (Dinesh Gundu Rao) ಹೇಳಿಕೆ ಕೊಟ್ಟಿದ್ದಾರೆ. ಆ ಹೇಳಿಕೆಯನ್ನು ಸಚಿವರು ವಾಪಾಸ್ ಪಡೆಯಬೇಕು ಎಂದು ಒತ್ತಾಯ ಮಾಡಿದ್ದಾರೆ.

    ಬಂಟ್ವಾಳದಲ್ಲಿ ಅಬ್ದುಲ್ ರಹೀಂ (Abdul Rahim Murder) ಹತ್ಯೆಯಾದ ಬೆನ್ನಲ್ಲೇ ಮುಸ್ಲಿಂ ಮುಖಂಡರು (Muslim Leaders) ಕಾಂಗ್ರೆಸ್‌ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಹೀಗಾಗಿ ಕಾಂಗ್ರೆಸ್‌ (Congress) ಪಕ್ಷದಲ್ಲಿರುವ ಸಮುದಾಯದ ನಾಯಕರು ಸಾಮೂಹಿಕ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದರು.  ಇದನ್ನೂ ಓದಿ: ಬಿಷ್ಣೋಯ್ ಗ್ಯಾಂಗ್‌ನ ಶಾರ್ಪ್‌ಶೂಟರ್‌ ನವೀನ್ ಕುಮಾರ್ ಎನ್‌ಕೌಂಟರ್

    ಅಲ್ಪಸಂಖ್ಯಾತ ಘಟಕದ ಹುದ್ದೆಗಳಿಗೆ ಸಾಮೂಹಿಕ ರಾಜೀನಾಮೆ ನೀಡಿದ ಬಳಿಕ ಪರ್ಯಾಯ ಪಕ್ಷ ಕಟ್ಟುವ ಎಚ್ಚರಿಕೆಯನ್ನು ನೀಡಿದ್ದಾರೆ.

  • ರಹೀಂ ಹತ್ಯೆ| ಮಂಗಳೂರು-ಬಂಟ್ವಾಳ ರಸ್ತೆಯಲ್ಲಿರುವ ನೂರಾರು ಅಂಗಡಿಗಳು ಬಂದ್

    ರಹೀಂ ಹತ್ಯೆ| ಮಂಗಳೂರು-ಬಂಟ್ವಾಳ ರಸ್ತೆಯಲ್ಲಿರುವ ನೂರಾರು ಅಂಗಡಿಗಳು ಬಂದ್

    ಮಂಗಳೂರು: ಬಂಟ್ವಾಳದ (Bantwal) ರಹೀಂ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರಿನಿಂಂದ (Mangaluru) ಬಂಟ್ವಾಳದವರೆಗಿನ ನೂರಾರು ಅಂಗಡಿಗಳನ್ನು ಮಾಲೀಕರು ಸ್ವಯಂಪ್ರೇರಿತವಾಗಿ ಬಂದ್‌ ಮಾಡಿದ್ದಾರೆ.

    ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರಹೀಂ ಅವರ ಮೃತದೇಹವನ್ನು ಕೊಳತ್ತಮಜಲಿಗೆ ಇಂದು (ಬುಧವಾರ) ಬೆಳಗ್ಗೆ ಸಾಗಿಸಲಾಯಿತು. ಕುತ್ತಾರ್ ಮದನಿ ನಗರ ಮಸೀದಿಯಲ್ಲಿ ರಹೀಂ ಅವರ ಮಯ್ಯತ್ ಸ್ನಾನ ಮಾಡಲಾಯಿತು. ನಂತರ ಮಯ್ಯತ್ ನಮಾಝ್ ಬಳಿಕ ಪೊಲೀಸ್ ಬಂದೋಬಸ್ತ್‌ನಲ್ಲಿ ಮೃತದೇಹವನ್ನು ಮೆರವಣಿಗೆಯ ಮೂಲಕ ಸಾಗಿಸಲಾಯಿತು. ಈ ವೇಳೆ ನೂರಾರು ಜನ ಸೇರಿದ್ದರು. ಅಲ್ಲದೇ ಹತ್ಯೆ ಖಂಡಿಸಿ ಮಂಗಳೂರಿನಿಂದ ಬಂಟ್ವಾಳದವರೆಗೆ ಅಂಗಡಿಗಳ ಮುಂಗಟ್ಟುಗಳು ಬಂದ್‌ ಮಾಡಿ ಮುಸ್ಲಿಮ್‌ ವ್ಯಾಪಾರಿಗಳು ಸಹ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

    ವಿಪರೀತ ಮಳೆಯ ನಡುವೆ ರಹೀಂ ಮೃತ ದೇಹ ರವಾನೆ ಮಾಡಲಾಗಿದ್ದು, ಪ್ರಮುಖ ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಭದ್ರತೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುತ್ತಮುತ್ತಲಿನ ಆರು ಜಿಲ್ಲೆಗಳ ಹೆಚ್ಚುವರಿ ಪೊಲೀಸರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಅಬ್ದುಲ್‌ ರಹೀಂ ಹತ್ಯೆ| ರಾತ್ರಿ ಆಸ್ಪತ್ರೆ ಮುಂದೆ ಮುಸ್ಲಿಮರ ಪ್ರತಿಭಟನೆ – ಮಂಗಳೂರಿಗೆ ಹೆಚ್ಚುವರಿ ಪೊಲೀಸರ ನಿಯೋಜನೆ

    ಕೊಲೆಯಾಗಿದ್ದು ಹೇಗೆ?
    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ತಿಂಗಳು ಕಳೆಯುವ ಮೊದಲೇ ಮುಸ್ಲಿಂ (Muslim) ಯುವಕನ ಬರ್ಬರ ಹತ್ಯೆ ನಡೆದಿದೆ. ಮಂಗಳವಾರ ಮಧ್ಯಾಹ್ನ 3:30ರ ಸುಮಾರಿಗೆ ಬಂಟ್ವಾಳದ ಕೂರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಕೊಳತ್ತಮಜಲ್ ನಿವಾಸಿ ಅಬ್ದುಲ್ ರಹಿಮಾನ್‌ ಯಾನೆ ರಹೀಂ(34) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು.

    ಪಿಕಪ್ ವಾಹನ ಹೊಂದಿರುವ ಅಬ್ದುಲ್ ರಹೀಂ (Abdul Rahim) ಬಳಿ ಒಂದು ಲೋಡ್‌ ಮರಳು ಬೇಕು ಎಂದು ದುಷ್ಕರ್ಮಿಗಳು ಕುರಿಯಾಳದ ಇರಾಕೋಡಿಗೆ ಕರೆಸಿಕೊಂಡಿದ್ದರು. ಮರಳು ಇಳಿಸಿದ ಕೆಲವೇ ಕ್ಷಣದಲ್ಲಿ ಅಲ್ಲೇ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

    ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಬ್ದುಲ್ ರಹೀಂ ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಷ್ಟರಲ್ಲೇ ಅವರು ಮೃತಪಟ್ಟಿದ್ದರು. ರಹೀಂ ಜೊತೆಗಿದ್ದ ಕಲಂಧರ್ ಶಾಫಿ ಎಂಬವರಿಗೂ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು ಗಂಭೀರ ಗಾಯಗಳಾಗಿದ್ದು. ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಬಂಟ್ವಾಳ ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ.

    ರಹೀಂ ಹತ್ಯೆ ಸುದ್ದಿ ಹಬ್ಬುತ್ತಿದ್ದಂತೆ ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಗೆ ನೂರಾರು ಸಂಖ್ಯೆಯಲ್ಲಿ ಜನ ಜಮಾಯಿಸಿದರು. ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಹಿಂದೂ ಮುಖಂಡರ ಪ್ರಚೋದನಕಾರಿ ಹೇಳಿಕೆಯಿಂದಲೇ ಇದೀಗ ಅಮಾಯಕ ಮುಸ್ಲಿಂ ಯುವಕನ ಹತ್ಯೆಯಾಗಿದೆ ಎಂದು ಸೇರಿದ ಜನ ಆಕ್ರೋಶ ಹೊರಹಾಕಿದ್ದರು. ಇದನ್ನೂ ಓದಿ: ಅಬ್ದುಲ್ ರಹೀಂ ಹತ್ಯೆ| ಇಬ್ಬರು ಪರಿಚಯಸ್ಥರು ಸೇರಿ 15 ಮಂದಿ ವಿರುದ್ಧ ಎಫ್‌ಐಆರ್‌

  • ಅಬ್ದುಲ್‌ ರಹೀಂ ಹತ್ಯೆ| ರಾತ್ರಿ ಆಸ್ಪತ್ರೆ ಮುಂದೆ ಮುಸ್ಲಿಮರ ಪ್ರತಿಭಟನೆ – ಮಂಗಳೂರಿಗೆ ಹೆಚ್ಚುವರಿ ಪೊಲೀಸರ ನಿಯೋಜನೆ

    ಅಬ್ದುಲ್‌ ರಹೀಂ ಹತ್ಯೆ| ರಾತ್ರಿ ಆಸ್ಪತ್ರೆ ಮುಂದೆ ಮುಸ್ಲಿಮರ ಪ್ರತಿಭಟನೆ – ಮಂಗಳೂರಿಗೆ ಹೆಚ್ಚುವರಿ ಪೊಲೀಸರ ನಿಯೋಜನೆ

    – ಸುಹಾಸ್‌ ಶೆಟ್ಟಿ ಹತ್ಯೆಯ ಬಳಿಕ ಮತ್ತೊಂದು ಕೊಲೆ
    – ಮೇ 30ರವರೆಗೆ ನಿಷೇಧಾಜ್ಞೆ ಜಾರಿ

    ಮಂಗಳೂರು: ಕರಾವಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಬಂಟ್ವಾಳ ಸಮೀಪ ಮುಸ್ಲಿಂ (Muslim) ಯುವಕನನ್ನು  ಬರ್ಬರವಾಗಿ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ (Murder) ಮಾಡಲಾಗಿದೆ. ಆರೋಪಿಗಳನ್ನು ಬಂಧಿಸುವಂತೆ ಮುಸ್ಲಿಮರು ಒತ್ತಾಯಿಸಿ ರಾತ್ರಿಯೇ ಪ್ರತಿಭಟನೆ ನಡೆಸಿದ್ದಾರೆ.  ಇಂದಿನಿಂದ ಮೇ 30ರ ಸಂಜೆ 6ಗಂಟೆವರೆಗೂ ಮಂಗಳೂರು ಕಮೀಷನರೇಟ್ ಹಾಗು ಮಂಗಳೂರು (Mangaluru) ಪೊಲೀಸ್‌ ವ್ಯಾಪ್ತಿಯಡಿ ನಿಷೇಧಾಜ್ಞೆಯನ್ನು ಜಾರಿ ಮಾಡಲಾಗಿದ್ದು ಹೆಚ್ಚುವರಿ ಪೊಲೀಸರನ್ನು ಕರೆಸಲಾಗಿದೆ.

    ಕೊಲೆಯಾಗಿದ್ದು ಹೇಗೆ?
    ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ತಿಂಗಳು ಕಳೆಯುವ ಮೊದಲೇ ಮುಸ್ಲಿಂ ಯುವಕನ ಬರ್ಬರ ಹತ್ಯೆ ನಡೆದಿದೆ. ಮಂಗಳವಾರ ಮಧ್ಯಾಹ್ನ 3.30ರ ಸುಮಾರಿಗೆ ಬಂಟ್ವಾಳದ ಕೂರಿಯಾಳ ಸಮೀಪದ ಇರಾಕೋಡಿ ಎಂಬಲ್ಲಿ ಕೊಳತ್ತಮಜಲ್ ನಿವಾಸಿ ಅಬ್ದುಲ್ ರಹಿಮಾನ್‌ ಯಾನೆ ರಹೀಂ(34) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

    ಪಿಕಪ್ ವಾಹನ ಹೊಂದಿರೋ ಅಬ್ದುಲ್ ರಹೀಂ (Abdul Rahim) ಬಳಿ ಒಂದು ಲೋಡ್‌ ಮರಳು ಬೇಕೆಂದು ದುಷ್ಕರ್ಮಿಗಳು ಕುರಿಯಾಳದ ಇರಾಕೋಡಿಗೆ ಕರೆಸಿಕೊಂಡಿದ್ದಾರೆ. ಮರಳು ಇಳಿಸಿದ ಕೆಲವೇ ಕ್ಷಣದಲ್ಲಿ ಅಲ್ಲೇ ಹೊಂಚು ಹಾಕಿ ಕುಳಿತಿದ್ದ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಬಂಧನ – ಜಾಮೀನು

    ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಬ್ದುಲ್ ರಹೀಂ ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರೂ ಆ ವೇಳೆ ಮೃತಪಟ್ಟಿದ್ದಾರೆ. ರಹೀಂ ಜೊತೆಗಿದ್ದ ಕಲಂಧರ್ ಶಾಫಿ ಎಂಬವರಿಗೂ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದು ಗಂಭೀರ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಬಂಟ್ವಾಳ ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ.

    ರಾತ್ರಿ ಪ್ರತಿಭಟನೆ:
    ರಹೀಂ ಹತ್ಯೆ ಸುದ್ದಿ ಹಬ್ಬುತ್ತಿದ್ದಂತೆ ದೇರಳಕಟ್ಟೆಯ ಯೆನಪೋಯ ಆಸ್ಪತ್ರೆಗೆ ನೂರಾರು ಸಂಖ್ಯೆಯಲ್ಲಿ ಜನ ಜಮಾಯಿಸಿದರು. ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಹಿಂದೂ ಮುಖಂಡರ ಪ್ರಚೋದನಕಾರಿ ಹೇಳಿಕೆಯಿಂದಲೇ ಇದೀಗ ಅಮಾಯಕ ಮುಸ್ಲಿಂ ಯುವಕನ ಹತ್ಯೆಯಾಗಿದೆ ಎಂದು ಸೇರಿದ ಜನ ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಯ ಮುಂದೆ ಪ್ರತಿಭಟನೆ ಮಾಡಿ ಪೊಲೀಸರ ವಿರುದ್ಧ ಸಿಟ್ಟು ಹೊರಹಾಕಿದರು.

    ಹತ್ಯೆಗೀಡಾದ ಅಬ್ದುಲ್ ರಹಿಮಾನ್ ಪಿಕಪ್ ವಾಹನದಲ್ಲಿ ಬಾಡಿಗೆ ಮಾಡಿ ಜೀವನ ಸಾಗಿಸುತ್ತಿದ್ದು ಸ್ಥಳೀಯ ಮಸೀದಿಯ ಕಾರ್ಯದರ್ಶಿಯಾಗಿದ್ದರು. ಮದುವೆಯಾಗಿ ಎರಡು ಮಕ್ಕಳು ಇರೋ ರಹೀಂ ಯಾವುದೇ ಕೃತ್ಯಗಳಲ್ಲೂ ಭಾಗಿಯಾಗಿಲ್ಲ, ಯಾವುದೇ ಸಂಘಟನೆಗಳಲ್ಲೂ ಗುರುತಿಸಿಕೊಂಡಿಲ್ಲ.ಅಮಾಯಕನಾಗಿರೋ ವ್ಯಕ್ತಿಯನ್ನ ಹತ್ಯೆ ಮಾಡಲಾಗಿದೆ, ಈ ಹತ್ಯೆ ಹಿಂದೆ ಇರೋ ಎಲ್ಲರನ್ನೂ ತಕ್ಷಣ ಬಂಧಿಸಬೇಕೆಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಆಗ್ರಹಿಸಿದ್ದಾರೆ.

    ಅಬ್ದುಲ್ ರಹಿಮಾನ್ ಹತ್ಯೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು ಜಿಲ್ಲಾದ್ಯಂತ ಮೇ 30 ರವರೆಗೆ ನಿಷೇಧಾಜ್ಞೆ ಹಾಕಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೊರ ಜಿಲ್ಲೆಯಿಂದ ಹೆಚ್ಚುವರಿ ಪೊಲೀಸರನ್ನು ತರಿಸಿಕೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್.ಹಿತೇಂದ್ರ ಇಂದು ಮಂಗಳೂರಿಗೆ ಭೇಟಿ ನೀಡಲಿದ್ದು ಭದ್ರತೆ ಪರಿಶೀಲಿಸಲಿದ್ದಾರೆ. ಮೃತ ಅಬ್ದುಲ್ ರಹಿಮಾನ್ ಅಂತ್ಯ ಸಂಸ್ಕಾರ ಇಂದು ಅವರ ಸ್ವಗ್ರಾಮ ಕೊಳ್ತಮಜಲ್ ನಲ್ಲಿ ನಡೆಯಲಿದೆ.

  • ಸುಹಾಸ್ ಶೆಟ್ಟಿ ಹತ್ಯೆಗೆ 50 ಲಕ್ಷ ಫಂಡಿಂಗ್‌ – ಪ್ರಭಾವಿ ಮುಸ್ಲಿಮರ ಬ್ಯಾಂಕ್ ಖಾತೆ ಮೇಲೆ ಕಣ್ಣು!

    ಸುಹಾಸ್ ಶೆಟ್ಟಿ ಹತ್ಯೆಗೆ 50 ಲಕ್ಷ ಫಂಡಿಂಗ್‌ – ಪ್ರಭಾವಿ ಮುಸ್ಲಿಮರ ಬ್ಯಾಂಕ್ ಖಾತೆ ಮೇಲೆ ಕಣ್ಣು!

    – ವಿದೇಶದಿಂದಲೂ ಭಾರೀ ಪ್ರಮಾಣದಲ್ಲಿ ಖಾತೆಗೆ ಹಣ
    – ಬ್ಯಾಂಕ್‌ ಖಾತೆ ಪರಿಶೀಲನೆಗೆ ಮುಂದಾದ ಪೊಲೀಸರು

    ಮಂಗಳೂರು: ಹಿಂದೂ (Hindu) ಕಾರ್ಯಕರ್ತ ಸುಹಾಸ್ ಶೆಟ್ಟಿಯ (Suhas Shetty) ಹತ್ಯೆ ಪ್ರತೀಕಾರಕ್ಕೆ ನಡೆದರೂ ಈ ಹತ್ಯೆಯ ಹಿಂದೆ ಲಕ್ಷಾಂತರ ರೂ. ಹಣ ಹರಿದಾಡಿದೆ. ಕೇವಲ ಐದು ಲಕ್ಷಕ್ಕಾಗಿ ಮಾತ್ರ ಈ ಹತ್ಯೆ ನಡೆದಿಲ್ಲ ಎನ್ನುವ ಸ್ಪೋಟಕ ಮಾಹಿತಿ ತನಿಖೆ ವೇಳೆ ಪ್ರಕಟವಾಗಿದೆ.

    ಹೌದು. ಫಾಝಿಲ್ ಹತ್ಯೆಯನ್ನು (Fazil Murder) ಅರಗಿಸಿಕೊಳ್ಳಲಾಗದ ಪ್ರಭಾವಿ ಮುಸ್ಲಿಮರು (Muslims) ಫಾಝಿಲ್ ಸಹೋದರನ ಕೈ ಬಲಪಡಿಸಿದ್ದಾರೆ. ಲಕ್ಷಾಂತರ ರೂಪಾಯಿ ಫಂಡಿಂಗ್ ಆಗಿರುವ ಬಗ್ಗೆ ಮಾಹಿತಿ ಸಿಕ್ಕ ಪೊಲೀಸರು ಇದೀಗ ಹಲವು‌ ಬ್ಯಾಂಕ್ ಖಾತೆಗಳ ಪರಿಶೀಲನೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಫಾಝಿಲ್ ತಮ್ಮ ಆದಿಲ್ ಮೆಹರೂಫ್ ನೀಡಿದ ಸುಪಾರಿಯಂತೆ ಈ ಹತ್ಯೆಯನ್ನು ಹಂತಕರು ನಡೆಸಿದ್ದಾರೆ. ಆದಿಲ್ 5 ಲಕ್ಷ ರೂ. ನೀಡುವುದಾಗಿ ಸುಪಾರಿ ನೀಡಿ ಅದರಲ್ಲಿ 3 ಲಕ್ಷ ರೂ. ಮುಂಗಡ ಪಾವತಿಸಿದ್ದ. ಇನ್ನುಳಿದ 2 ಲಕ್ಷ ರೂ. ಕೆಲಸ ಮುಗಿಸಿದ ಮೇಲೆ ನೀಡುವುದಾಗಿ ಹೇಳಿದ್ದ ಎಂದು ಬಂಧನದ ಬಳಿಕ ಆರೋಪಿಗಳು ಬಾಯ್ಬಿಟ್ಟಿದ್ದರು. ಇದನ್ನೂ ಓದಿ: ಕೋಮುದ್ವೇಷ ಭಾಷಣ ಆರೋಪ – ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

     

    ಪ್ರತೀಕಾರಕ್ಕೆ ಪಣ
    ಫಾಝಿಲ್ ಹತ್ಯೆಯನ್ನು ಅರಗಿಸಿಕೊಳ್ಳಲಾಗದ ಪ್ರಭಾವಿ ಮುಸ್ಲಿಮರು ಪ್ರತೀಕಾರಕ್ಕಾಗಿ ಪಣ ತೊಟ್ಟಿದ್ದರು. ಪ್ರತೀಕಾರ ತೀರಿಸುವ ಯಾರಿಗಾದರೂ ಎಷ್ಟೇ ಹಣ ನೀಡಬೇಕಾದರೂ ನೀಡಲು ಸಿದ್ದರಿದ್ದರು. ಹತ್ಯೆ ನಡೆಸುವವರಿಗೆ ಫಂಡಿಂಗ್ ಮಾಡಲು ಸಾಕಷ್ಟು ಜನ ಮುಂದೆ ಬಂದಿದ್ದರು. ಸುಹಾಸ್ ಹತ್ಯೆಯ ಪ್ಲಾನ್ ನಡೆಸುವ ವೇಳೆಯೇ 50 ಲಕ್ಷ ರೂ. ಹೆಚ್ಚು ಹಣ ಸಂಗ್ರಹವಾಗಿದೆ ಎಂಬ ಸ್ಫೋಟಕ ಮಾಹಿತಿ ತನಿಖೆ ವೇಳೆ ಬಹಿರಂಗಗೊಂಡಿದೆ. ಇದನ್ನೂ ಓದಿ: ಸುಹಾಸ್ ಶೆಟ್ಟಿ ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸ್ಕೆಚ್

    ಎಲ್ಲಾ ಆರೋಪಿಗಳನ್ನು 14 ದಿನ ಪೊಲೀಸ್ ಕಸ್ಟಡಿಗೆ ಪಡೆದಿರುವ ತನಿಖಾಧಿಕಾರಿಗೆ ಲಕ್ಷ ಲಕ್ಷ ಫಂಡಿಂಗ್ ಆಗಿರುವ ಬಗ್ಗೆ ಸಾಕಷ್ಟು ಮಾಹಿತಿ ಸಿಕ್ಕಿದೆ. ಹೀಗಾಗಿ ವಿವಿಧ ಬ್ಯಾಂಕ್ ಖಾತೆಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು ವಿದೇಶದಿಂದಲೂ ಭಾರೀ ಪ್ರಮಾಣದಲ್ಲಿ ಫಂಡಿಂಗ್ ಆಗಿರುವ ವಿಚಾರ ಬೆಳಕಿಗೆ ಬಂದಿದೆ.

    ಸುಹಾಸ್ ಶೆಟ್ಟಿ ಹತ್ಯೆಯ ಆರೋಪಿಗಳ ಬಂಧನದ ಬಳಿಕ ಕೇವಲ ಲಕ್ಷ ಸುಪಾರಿ‌ ನೀಡಲಾಗಿತ್ತು ಎನ್ನುವುದು ಗೊತ್ತಾದಾಗಲೇ ಹಲವರು ಅನುಮಾನ ವ್ಯಕ್ತಪಡಿಸಿದ್ದರು. ಬೊಲೆರೋ ಪಿಕಪ್ ಮತ್ತು ಸ್ವಿಫ್ಟ್ ಕಾರಿನ ಮೌಲ್ಯ ಎರಡು ಸೇರಿದರೆ 10 ಲಕ್ಷರೂ. ಅಧಿಕ ಆಗುತ್ತದೆ. ಕೇವಲ 5 ಲಕ್ಷ ರೂ.ಗೆ ಈ ಹತ್ಯೆ‌ ನಡೆದಿರುವ‌ ಸಾಧ್ಯತೆ ಇಲ್ಲ ಎಂದು ಜನ ಅನುಮಾನ ವ್ಯಕ್ತಪಡಿಸಿದ್ದರು. ಈ ಅನುಮಾನ ನಿಜವಾಗಿದ್ದು ತನಿಖೆಯ ವೇಳೆ ಲಕ್ಷ ಲಕ್ಷ ಫಂಡಿಂಗ್ ಆಗಿರುವುದು ಬೆಳಕಿಗೆ ಬಂದಿದೆ.

  • ಪ್ರೇಮ ವಿವಾಹವಾದ ಹಿಂದೂ, ಮುಸ್ಲಿಮ್‌ ಜೋಡಿ – ಈಗ ರಕ್ಷಣೆಗೆ ಪೊಲೀಸರ ಮೊರೆ

    ಪ್ರೇಮ ವಿವಾಹವಾದ ಹಿಂದೂ, ಮುಸ್ಲಿಮ್‌ ಜೋಡಿ – ಈಗ ರಕ್ಷಣೆಗೆ ಪೊಲೀಸರ ಮೊರೆ

    ಕೊಪ್ಪಳ: ಪ್ರೇಮ ವಿವಾಹದ ಹಿಂದೂ-ಮುಸ್ಲಿಮ್‌ (Hindu-Muslim0 ಜೋಡಿಯೊಂದು ಕೊಪ್ಪಳ (Koppala) ನಗರ ಠಾಣೆಗೆ ಆಗಮಿಸಿ ರಕ್ಷಣೆಗಾಗಿ ಮೊರೆ ಇಟ್ಟಿದೆ.

    ಕೊಪ್ಪಳದ ಭಾಗ್ಯನಗರದ ನಿವಾಸಿಗಳಾದ ಪ್ರಜ್ವಲ್ ಹಾಗೂ ಥೈಶಿನ್ ಕಳೆದ 6 ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಈಗ ಕೊಪ್ಪಳದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ರಕ್ಷಣೆಗೆ ಅಮೆರಿಕ, ಚೀನಾಗೆ ಪಾಕ್ ಮೊರೆ – ಪ್ರತೀಕಾರ ಕಟ್ಟಿಟ್ಟಬುತ್ತಿ: ಭಾರತ ಗುಡುಗು

     

    ಏಪ್ರಿಲ್ 23 ರಂದು ಪ್ರೇಮಿಗಳು ರಿಜಿಸ್ಟರ್ ಮದುವೆಯಾಗಿದ್ದರು. ಮದುವೆಯಾದ ಬೆನ್ನಲ್ಲೇ ಯುವತಿಯ ಮನೆಯವರು ಪ್ರೇಮಿಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ. ಬೆದರಿಕೆ ಬೆಂದ ಬೆನ್ನಲ್ಲೇ ಜೋಡಿಗಳು ರಕ್ಷಣೆಗೆ ಠಾಣೆಯ ಮೊರೆ ಹೋಗಿದ್ದಾರೆ.  ಇದನ್ನೂ ಓದಿ: ನೀವು ಬರೋದು ಬೇಡ – ತನ್ನ ಪ್ರಜೆಗಳನ್ನೇ ದೇಶಕ್ಕೆ ಸೇರಿಸದ ಪಾಕ್‌