Tag: ಮೂತ್ರ

  • ಮನೆ ಬಳಿ ಮೂತ್ರ ವಿಸರ್ಜಿಸಿದಳೆಂದು ಮಹಿಳೆಯ ಗುಪ್ತಾಂಗಕ್ಕೆ ರಾಡ್‍ನಿಂದ ಹಲ್ಲೆ!

    ಮನೆ ಬಳಿ ಮೂತ್ರ ವಿಸರ್ಜಿಸಿದಳೆಂದು ಮಹಿಳೆಯ ಗುಪ್ತಾಂಗಕ್ಕೆ ರಾಡ್‍ನಿಂದ ಹಲ್ಲೆ!

    ಲಕ್ನೋ: ಮನೆ ಬಳಿ ಮೂತ್ರ ವಿಸರ್ಜನೆ (Urinate) ಮಾಡಿದಳೆಂದು ಆರೋಪಿಸಿ 35 ವರ್ಷದ ಮಹಿಳೆಯೊಬ್ಬರ ಮೇಲೆ ನೆರೆಹೊರೆಯವರು ಥಳಿಸಿದ ಪರಿಣಾಮ ಆಕೆ ಗಂಭೀರ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

    ರಾಮಚಂದ್ರ ಮಿಷನ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆ ತನ್ನ ಮನೆಯ ಸಮೀಪವಿರುವ ಚರಂಡಿಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾಳೆ. ಇದನ್ನು ಗಮನಿಸಿದ ನೆರೆಹೊರೆಯವರು ಮಹಿಳೆಯ ಜೊತೆ ಜಗಳವಾಡಿದ್ದಾರೆ. ಜಗಳ ತಾರಕಕ್ಕೇರಿ ನೆರೆಹೊರೆಯವರು ಮಹಿಳೆಯ ಖಾಸಗಿ ಭಾಗಗಳಿಗೆ ಕಬ್ಬಿಣದ ರಾಡ್‍ನಿಂದ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದಾಗಿ ಅವರು ಮೂರ್ಛೆ ಹೋದರು ಎಂದು ಸರ್ಕಲ್ ಆಫೀಸರ್ ಬಿಎಸ್ ವೀರ್ ಕುಮಾರ್ ತಿಳಿಸಿದ್ದಾರೆ.

    ನೆರೆಹೊರೆಯವರು ಕಬ್ಬಿಣದ ರಾಡ್‍ನಿಂದ (Iron Rod) ಸಂತ್ರಸ್ತೆಯ ಖಾಸಗಿ ಭಾಗಗಳಿಗೆ ಹೊಡೆದಿದ್ದಾರೆ. ಇದರಿಂದಾಗಿ ಆಕೆಗೆ ಗಂಭೀರ ಗಾಯಗಳಾಗಿದ್ದು, ಮೂರ್ಛೆ ಹೋಗಿದ್ದಾಳೆ. ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಕುಮಾರ್ ಸೇರಿಸಲಾಗಿದೆ. ಇದನ್ನೂ ಓದಿ: ಸಂಸತ್‍ನಲ್ಲಿ ಸ್ಮೋಕ್ ಬಾಂಬ್ ಪ್ರಕರಣ ತನಿಖೆ ಆದ್ರೆ ಟೀಕೆ ಮಾಡ್ತಿರೋರೆ ಸಿಕ್ಕಿ ಬೀಳ್ತಾರೆ: ಯತ್ನಾಳ್

    ಐಪಿಸಿಯ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ. ಈ ವಿಷಯದ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಹೆಚ್ಚಿನ ಹಣ ಕೊಡಲು ನಿರಾಕರಿಸಿದ ದಲಿತ ಮಹಿಳೆಗೆ ಮೂತ್ರ ಕುಡಿಸಿದ ದುಷ್ಕರ್ಮಿಗಳು

    ಹೆಚ್ಚಿನ ಹಣ ಕೊಡಲು ನಿರಾಕರಿಸಿದ ದಲಿತ ಮಹಿಳೆಗೆ ಮೂತ್ರ ಕುಡಿಸಿದ ದುಷ್ಕರ್ಮಿಗಳು

    ಪಾಟ್ನಾ: ತಂದೆ-ಮಗ ದಲಿತ ಮಹಿಳೆಯ (Dalit Woman) ಬಳಿ ಸಾಲ ವಾಪಸ್ ಪಡೆದು ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟಿದ್ದು, ಮಹಿಳೆ ಹಣ ಕೊಡಲು ನಿರಾಕರಿಸಿದ ಬಳಿಕ ಆಕೆಯನ್ನು ವಿವಸ್ತ್ರಗೊಳಿಸಿ, ಅಮಾನುಷವಾಗಿ ಹಲ್ಲೆ ನಡೆಸಿ, ಮೂತ್ರ (Urine) ಕುಡಿಸಿದ ಘಟನೆ ಬಿಹಾರದ (Bihar) ಪಾಟ್ನಾದಲ್ಲಿ (Patna) ನಡೆದಿದೆ.

    ಘಟನೆಯಿಂದ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಮಹಿಳೆಯ ತಲೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಪೊಲೀಸರ ಪ್ರಕಾರ, ಆರೋಪಿಗಳಾದ ಪ್ರಮೋದ್ ಸಿಂಗ್ ಮತ್ತು ಆತನ ಮಗ ಅಂಶು ಮತ್ತು ಇತರ ನಾಲ್ವರು ಶನಿವಾರ ರಾತ್ರಿ 10 ಗಂಟೆಯ ಸುಮಾರಿಗೆ ದಲಿತ ಮಹಿಳೆಯ ಮನೆಗೆ ನುಗ್ಗಿ ಬಲವಂತವಾಗಿ ಆಕೆಯನ್ನು ತಮ್ಮ ಮನೆಗೆ ಒಯ್ದಿದ್ದಾರೆ. ಇದನ್ನೂ ಓದಿ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬುರ್ಕಾ ಧರಿಸಿ ನೃತ್ಯ – ವ್ಯಕ್ತಿ ಬಂಧನ

    ಬಳಿಕ ಆಕೆಯ ಮೇಲೆ ಕ್ರೂರ ರೀತಿಯಲ್ಲಿ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿದ್ದು, ಕೋಲಿನಿಂದ ಹೊಡೆದಿದ್ದಾರೆ. ಬಳಿಕ ಪ್ರಮೋದ್ ಸಿಂಗ್ ತನ್ನ ಮಗನಿಗೆ ಮಹಿಳೆಯ ಬಾಯಿಗೆ ಮೂತ್ರ ವಿಸರ್ಜನೆ ಮಾಡುವಂತೆ ಸೂಚಿಸಿದ್ದಾನೆ. ನಂತರ ಸಂತ್ರಸ್ತೆ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ತನ್ನ ಮನೆಗೆ ಮರಳಿದ್ದಾಳೆ. ಇದನ್ನೂ ಓದಿ: ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ – ವಿಷ ಸೇವಿಸಿ ದಂಪತಿ ಆತ್ಮಹತ್ಯೆ

    ದಲಿತ ಮಹಿಳೆ ಕೆಲ ತಿಂಗಳ ಹಿಂದೆ ಪ್ರಮೋದ್ ಸಿಂಗ್‌ನಿಂದ ಬಡ್ಡಿಗೆ 1,500 ರೂ. ಸಾಲ (Loan) ಪಡೆದಿದ್ದು, ಬಡ್ಡಿ ಸಮೇತ ಹಣವನ್ನು ಮರುಪಾವತಿ ಮಾಡಿದ್ದಳು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದಾಗಿಯೂ ಆರೋಪಿ ಆಕೆಯಿಂದ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿದ್ದು, ಅದನ್ನು ನೀಡಲು ಮಹಿಳೆ ನಿರಾಕರಿಸಿದ್ದಾಳೆ. ಹೆಚ್ಚಿನ ಹಣ ನೀಡದಿದ್ದರೇ ಮಹಿಳೆಯನ್ನು ವಿವಸ್ತ್ರ ಮಾಡಿ ಊರೂರು ಅಲೆಯುವಂತೆ ಮಾಡುವುದಾಗಿ ಪ್ರಮೋದ್ ಮಹಿಳೆಗೆ ಬೆದರಿಕೆ ಹಾಕಿದ್ದ. ಇದನ್ನೂ ಓದಿ: ಐಫೋನ್‌ ನೀಡಲು ತಡ ಮಾಡಿದ್ದಕ್ಕೆ ಸಿಬ್ಬಂದಿ ಮೇಲೆ ಗ್ರಾಹಕರಿಂದ ಹಲ್ಲೆ

    ಬೆದರಿಕೆಯ ಕುರಿತು ಮಹಿಳೆ ಈ ಹಿಂದೆ ಪೊಲೀಸರಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ. ಘಟನೆಯಿಂದ ಸ್ಥಳದಲ್ಲಿ ಅಶಾಂತಿ ಉಂಟಾಗಿದ್ದು, ಸಂತ್ರಸ್ತ ಕುಟುಂಬ ಹಾಗೂ ದಲಿತ ಸಮುದಾಯದವರು ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಘಟನೆ ಬಳಿಕ ಇಬ್ಬರೂ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇದನ್ನೂ ಓದಿ: ಅಕ್ರಮವಾಗಿ ಗಡಿ ನುಸುಳಿದ ಪಾಕಿಸ್ತಾನಿ ಪ್ರಜೆಯನ್ನು ಬಂಧಿಸಿದ ಬಿಎಸ್‌ಎಫ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಬ್ಬರು ಬಾಲಕರಿಗೆ ಬಲವಂತವಾಗಿ ಮೂತ್ರ ಕುಡಿಸಿ, ಖಾಸಗಿ ಭಾಗಕ್ಕೆ ಮೆಣಸಿನಕಾಯಿ ಉಜ್ಜಿ ದೌರ್ಜನ್ಯ

    ಇಬ್ಬರು ಬಾಲಕರಿಗೆ ಬಲವಂತವಾಗಿ ಮೂತ್ರ ಕುಡಿಸಿ, ಖಾಸಗಿ ಭಾಗಕ್ಕೆ ಮೆಣಸಿನಕಾಯಿ ಉಜ್ಜಿ ದೌರ್ಜನ್ಯ

    – ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಕೃತ್ಯ; ವೀಡಿಯೋ ವೈರಲ್‌

    ಲಕ್ನೋ: ಇಬ್ಬರು ಅಪ್ರಾಪ್ತ ಬಾಲಕರಿಗೆ ಬಲವಂತವಾಗಿ ಮೂತ್ರ ಕುಡಿಸಿ (Urine Case), ಅವರ ಖಾಸಗಿ ಭಾಗಕ್ಕೆ ಹಸಿರು ಮೆಣಸಿನಕಾಯಿ ಉಜ್ಜಿ ದೌರ್ಜನ್ಯ ಎಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ (Uttar Pradesh) ನಡೆದಿದೆ.

    ಸಿದ್ಧಾರ್ಥನಗರ ಜಿಲ್ಲೆಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಕಳ್ಳತನದ ಶಂಕೆಯ ಮೇಲೆ 10 ಮತ್ತು 15 ವರ್ಷದ ಬಾಲಕರ ಮೇಲೆ ದೌರ್ಜನ್ಯ ಎಸಗಲಾಗಿದೆ. ಈ ಭಯಾನಕ ದೃಶ್ಯದ ವೀಡಿಯೋಗಳು ವೈರಲ್‌ ಆಗಿದೆ. ಹಣ ದೋಚಿದ್ದಾರೆ ಎಂದು ಆರೋಪಿಸಿ ಗೂಂಡಾಗಳು ಹುಡುಗರನ್ನು ಹಿಡಿದು ಕಟ್ಟಿ ಹಾಕಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಕಂಠಪೂರ್ತಿ ಕುಡಿದು ಬೈಕ್‌ಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

    ವೀಡಿಯೋದಲ್ಲಿ ಹುಡುಗರಿಗೆ ಹಸಿರು ಮೆಣಸಿನಕಾಯಿ ತಿನ್ನಿಸುತ್ತಿರುವ, ಬಾಟಲಿಯಲ್ಲಿ ತುಂಬಿದ ಮೂತ್ರದೊಂದಿಗೆ ಅದನ್ನು ಸೇವಿಸಲು ಬಲವಂತಪಡಿಸುತ್ತಿರುವ ದೃಶ್ಯ ಇದೆ. ಪುಂಡರ ಗುಂಪು ಬಾಲಕರನ್ನು ನಿಂದಿಸುವುದರ ಜೊತೆಗೆ ಮೂತ್ರವನ್ನು ಕುಡಿಯದಿದ್ದರೆ ಥಳಿಸುವುದಾಗಿ ಬೆದರಿಕೆ ಹಾಕುತ್ತಿರುವ ದೃಶ್ಯ ಸೆರೆಯಾಗಿದೆ.

    ಮತ್ತೊಂದು ವೀಡಿಯೋದಲ್ಲಿ, ಹುಡುಗರು ತಮ್ಮ ಕೈಗಳನ್ನು ಬೆನ್ನಿನ ಹಿಂದೆ ಕಟ್ಟಿಕೊಂಡು, ಪ್ಯಾಂಟನ್ನು ಕೆಳಕ್ಕೆ ಎಳೆದುಕೊಂಡು ನೆಲದ ಮೇಲೆ ಮಲಗಿರುವುದನ್ನು ತೋರಿಸಲಾಗಿದೆ. ಒಬ್ಬ ವ್ಯಕ್ತಿ ಅವರ ಖಾಸಗಿ ಭಾಗಕ್ಕೆ ಹಸಿರು ಮೆಣಸಿನಕಾಯಿ ಉಜ್ಜಿದ್ದಾನೆ. ನೋವಿನಿಂದ ಬಾಲಕರು ಚೀರಾಡುತ್ತಿರುವ ದೃಶ್ಯವಿದೆ. ಇದನ್ನೂ ಓದಿ: ಮಣಿಪುರದಲ್ಲಿ ನಿಲ್ಲದ ಸಂಘರ್ಷ – ಕಳೆದ 24 ಗಂಟೆಗಳಲ್ಲಿ ಆರು ಮಂದಿ ಸಾವು

    ಆಗಸ್ಟ್ 4 ರಂದು ಈ ವೀಡಿಯೋಗಳನ್ನು ಚಿತ್ರೀಕರಿಸಲಾಗಿದೆ. ಜಿಲ್ಲೆಯ ಪತ್ರಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಂಕಟಿ ಚೌರಾಹಾ ಬಳಿಯ ಅರ್ಶನ್ ಚಿಕನ್ ಶಾಪ್‌ನಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಇಬ್ಬರು ಮಕ್ಕಳ ಕುರಿತಾದ ಆಕ್ಷೇಪಾರ್ಹ ಕೃತ್ಯದ ವೀಡಿಯೋಗಳನ್ನು ಗಮನಿಸಿದ್ದೇವೆ. ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಹಲ್ಲೆ ನಡೆಸಿದವರನ್ನು ಗುರುತಿಸಿ, ಈಗಾಗಲೇ 6 ಮಂದಿಯನ್ನು ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಕೆಟ್‍ಗೆ ಮೂತ್ರ ಮಾಡಿ ಅದೇ ನೀರಿನಲ್ಲಿ ನೆಲ ಒರೆಸಿದ ಕೆಲಸದಾಕೆ!

    ಬಕೆಟ್‍ಗೆ ಮೂತ್ರ ಮಾಡಿ ಅದೇ ನೀರಿನಲ್ಲಿ ನೆಲ ಒರೆಸಿದ ಕೆಲಸದಾಕೆ!

    ಲಕ್ನೋ: ಮನೆಕೆಲಸದಾಕೆಯೊಬ್ಬಳು ತನ್ನ ಮೂತ್ರ (Urine) ದಿಂದ ಮನೆ ಶುಚಿಗೊಳಿಸಿದ ಪ್ರಸಂಗವೊಂದು ಉತ್ತರಪ್ರದೇಶದ ಗ್ರೇಟರ್ ನೊಯ್ಡಾದ ಅಜ್‍ನಾರ ಹೌಸಿಂಗ್ ಸೊಸೈಟಿಯಲ್ಲಿ ನಡೆದಿದೆ.

    ಮಹಿಳೆ ಮೂತ್ರದಿಂದ ನೆಲ ಒಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣ (Viral Video) ಗಳಲ್ಲಿ ವೈರಲ್ ಆಗಿದೆ. ಪ್ರಕರಣ ಸಂಬಂಧ ಮನೆಯ ಮಾಲೀಕರು ನೀಡಿದ ದೂರಿನ ಮೇರೆಗೆ ಪೊಲೀಸರು ಕೆಲಸದಾಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

    ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಸಬೀನಾ, ಮೊದಲು ಮಾಲೀಕರ ಆರೋಪಗಳನ್ನು ನಿರಾಕರಿಸಿದ್ದು ಬಳಿಕ ತಪ್ಪೊಪ್ಪಿಕೊಂಡಿದ್ದಾಳೆ. ಆದರೆ ಯಾಕೆ ಈ ರೀತಿ ಮಾಡಿರುವುದು ಎಂಬುದರ ಬಗ್ಗೆ ಬಾಯ್ಬಿಟ್ಟಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

    ವೀಡಿಯೋದಲ್ಲೇನಿದೆ..?: ಮನೆ ಕೆಲಸದಾಕೆ ಸಬೀನಾ ಕಟುನ್ ನೆಲ ಒರೆಸುವ ವೇಳೆ ಬಕೆಟ್‍ನಲ್ಲಿದ್ದ ನೀರಿಗೆ ಮೂತ್ರ ವಿಸರ್ಜನೆ ಮಾಡುತ್ತಿರುವುದನ್ನು ನಾವು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ಕಂಡ ಕಂಡಲ್ಲಿ ಉಗೀಬೇಡಿ – ಎಂಜಲು ರಸ ಮಾರಿಯೇ ತಿಂಗಳಿಗೆ 40 ಲಕ್ಷ ಸಂಪಾದಿಸ್ತಾಳೆ ಈ ಮಹಿಳೆ

  • ಬಲವಂತವಾಗಿ ವೃದ್ಧನಿಗೆ ಮೂತ್ರ ಕುಡಿಸಿ, ಮಲ ತಿನ್ನಿಸಿ ವಿಕೃತಿ ಮೆರೆದ ಗ್ರಾಮಸ್ಥರು!

    ಬಲವಂತವಾಗಿ ವೃದ್ಧನಿಗೆ ಮೂತ್ರ ಕುಡಿಸಿ, ಮಲ ತಿನ್ನಿಸಿ ವಿಕೃತಿ ಮೆರೆದ ಗ್ರಾಮಸ್ಥರು!

    ಕೋಲ್ಕತ್ತಾ: ವಾಮಾಚಾರದ ಶಂಕೆಯಿಂದ ಗ್ರಾಮಸ್ಥರೆಲ್ಲರೂ ಸೇರಿ ವೃದ್ಧರೊಬ್ಬರಿಗೆ ಬಲವಂತವಾಗಿ ಮೂತ್ರ ಕುಡಿಸಿ, ಮಲ ತಿನ್ನಿಸಿ ವಿಕೃತಿ ಮೆರೆದಿದ್ದಾರೆ. ಈ ಅವಮಾನ ತಾಳಲಾರದೆ ವೃದ್ಧ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‍ನ ಮಥುರಾಪುರ ಗ್ರಾಮದಲ್ಲಿ ನಡೆದಿದೆ.

    ಪಶ್ಚಿಮ ಬಂಗಾಳದ ರಘುನಾಥಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಾಣಿಕ್ ಸರ್ದಾರ್ (68) ಆತ್ಮಹತ್ಯೆ ಮಾಡಿಕೊಂಡ ವೃದ್ಧ.

    ತನ್ನ ಮೊಮ್ಮಗಳು ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಮಾಣಿಕ್ ಸರ್ದಾರ್ ಆಕೆಯನ್ನು ನಗರದ ಓಜಾ ಆಸ್ಪತ್ರೆಗೆ ಕರೆದೊಯ್ದಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ನಿನ್ನೆ ಮೃತಪಟ್ಟಿದ್ದಾಳೆ. ಆದರೆ ನೆರೆಯವರು ಮಾಣಿಕ್ ಸರ್ದಾರ್ ನಾಲ್ವರೊಂದಿಗೆ ಸೇರಿ ವಾಮಾಚಾರ ಮಾಡಿದ್ದಾರೆ ಅಂದುಕೊಂಡಿದ್ದಾರೆ. ವಾಮಾಚಾರ ಮಾಡಿದ್ದೇ ಬಾಲಕಿ ಸಾವಿಗೆ ಕಾರಣವೆಂದು ತಿಳಿದಿದ್ದಾರೆ. ಇದನ್ನೂ ಓದಿ: ವಿದ್ಯಾಭ್ಯಾಸ ಕೊಡಿಸಲು ಆತ್ಮಹತ್ಯೆಗೆ ಶರಣಾಗಿದ್ದ ರೈತನ ಮಗಳು ಯುಪಿಎಸ್‍ಸಿಯಲ್ಲಿ ಟಾಪರ್ 

    ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು, ಮಾಣಿಕ್ ಸರ್ದಾರ್ ನನ್ನು ಹಿಗ್ಗಾಮುಗ್ಗ ಥಳಿಸಿದ್ದಾರೆ. ಬಲವಂತವಾಗಿ ಮೂತ್ರ ಕುಡಿಸಿ, ಮಲ ತಿನ್ನಿಸಿದ್ದಾರೆ. ಇದರಿಂದ ಮನನೊಂದ ವೃದ್ಧ ಅವಮಾನ ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಹೋದರಿಯ ಸ್ನೇಹಿತೆಯನ್ನೇ ಗರ್ಭಿಣಿ ಮಾಡಿ, ಗರ್ಭಪಾತವನ್ನೂ ಮಾಡಿಸಿದ!

    ಸ್ಥಳಕ್ಕೆ ಭೇಟಿ ನೀಡಿದ ರಘುನಾಥಗಂಜ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

  • 9ನೇ ತರಗತಿ ವಿದ್ಯಾರ್ಥಿಗೆ ಬಲವಂತವಾಗಿ ಮೂತ್ರ ಕುಡಿಸಿದ ಸೀನಿಯರ್ಸ್!

    9ನೇ ತರಗತಿ ವಿದ್ಯಾರ್ಥಿಗೆ ಬಲವಂತವಾಗಿ ಮೂತ್ರ ಕುಡಿಸಿದ ಸೀನಿಯರ್ಸ್!

    ಗಾಂಧಿನಗರ: 9ನೇ ತರಗತಿ ವಿದ್ಯಾರ್ಥಿಯೋರ್ವನಿಗೆ ಸೀನಿಯರ್ ವಿದ್ಯಾರ್ಥಿಗಳು ರ‍್ಯಾಗಿಂಗ್‌ ಮಾಡಿ ಬಲವಂತವಾಗಿ ಮೂತ್ರ ಕುಡಿಸಿರುವ ಘಟನೆ ನಗರದ ಕೇಂದ್ರೀಯ ವಿದ್ಯಾಲಯ ಶಾಲೆಯೊಂದರಲ್ಲಿ ಮಂಗಳವಾರ ನಡೆದಿದೆ.

    ಘಟನೆ ಕುರಿತು ವಿದ್ಯಾರ್ಥಿಯ ತಾಯಿ ಮಾತನಾಡಿ, ತಮ್ಮ ಮಗ ಹಾಗೂ ಆತನ ಸ್ನೇಹಿತರಿಗೆ ಅದೇ ಶಾಲೆಯ ಸೀನಿಯರ್ ವಿದ್ಯಾರ್ಥಿಗಳು ರ‍್ಯಾಗಿಂಗ್‌ ಮಾಡಿ ಬಲವಂತವಾಗಿ ಮೂತ್ರ ಕುಡಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಟಾಯ್ಲೆಟ್‌ನಲ್ಲಿ ಸಮೋಸಾ ತಯಾರಿಕೆ – 30 ವರ್ಷಗಳ ಬಳಿಕ ರೆಸ್ಟೊರೆಂಟ್ ಬಂದ್

    ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ, 12ನೇ ತರಗತಿಯ ಕೆಲವು ವಿದ್ಯಾರ್ಥಿಗಳು ಏಪ್ರಿಲ್ 20 ರಂದು ಶಾಲಾ ಸಮಯದಲ್ಲಿ ತಮ್ಮ ಮಗ ಮತ್ತು ಇತರ ಕೆಲವರನ್ನು ಶೌಚಾಲಯಕ್ಕೆ ಕರೆದೊಯ್ದು ಮೂತ್ರ ಕುಡಿಸಲು ಪ್ರಯತ್ನಿಸಿದ್ದಾರೆ ಎಂದು ಏಪ್ರಿಲ್ 22 ರಂದು ವಸ್ತ್ರಾಪುರ ಠಾಣೆಗೆ ದೂರು ನೀಡಿದ್ದರು. ಇದನ್ನೂ ಓದಿ: ಬಾತ್‌ರೂಮ್‌ ಗೋಡೆಯಲ್ಲಿ ಸಿಕ್ತು 60 ವರ್ಷದ ಮೆಕ್‍ಡೊನಾಲ್ಡ್ಸ್ ಊಟ!

    ಶಾಲೆಯ ಪ್ರಾಂಶುಪಾಲರಾದ ಜೇಮಿ ಜೇಮ್ಸ್ ಅವರು ಈ ವಿಷಯವಾಗಿ ಎರಡು ವಿಚಾರಣೆಗಳನ್ನು ನಡೆಸಿದ್ದಾರೆ. ಆದರೆ ಗಂಭೀರವಾದ ಅಂಶ ಏನೂ ಕಂಡುಬಂದಿಲ್ಲ. ಘಟನೆ ಸಂಭವಿಸಿದ ಕೂಡಲೇ ನಾವು ಗುರುವಾರದಂದು ವಿಚಾರಣೆಯನ್ನು ಪ್ರಾರಂಭಿಸಿದ್ದೇವೆ. ವಿಚಾರಣೆ ಪೂರ್ಣಗೊಂಡಿದ್ದು, ಅದರಲ್ಲಿ ಏನೂ ಇಲ್ಲ ಎಂದು ತಿಳಿಸಿದ್ದಾರೆ.

    POLICE JEEP

    ಘಟನೆ ಕುರಿತು ಪೊಲೀಸರು ಈಗಾಗಲೇ ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ ಎಂದು ಇನ್ಸ್‌ಪೆಕ್ಟರ್ ಸಂದೀಪ್ ಖಂಬಳ್ ತಿಳಿಸಿದ್ದಾರೆ. ಇನ್ನೂ ಯಾವುದೇ ಪ್ರಥಮ ಮಾಹಿತಿ ವರದಿ (ಎಫ್‍ಐಆರ್) ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.

  • ಆರೋಗ್ಯಕ್ಕಾಗಿ ಹಸುವಿನ ಸಗಣಿ ತಿನ್ನುವ ವೈದ್ಯ – ವೀಡಿಯೋ ವೈರಲ್

    ಆರೋಗ್ಯಕ್ಕಾಗಿ ಹಸುವಿನ ಸಗಣಿ ತಿನ್ನುವ ವೈದ್ಯ – ವೀಡಿಯೋ ವೈರಲ್

    ತ್ತಮ ಆರೋಗ್ಯಕ್ಕಾಗಿ ಗೋ ಶಾಲೆಯಲ್ಲಿ ವೈದ್ಯರೊಬ್ಬರು ಸಗಣಿ ತಿನ್ನುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    ಸಾಮಾನ್ಯವಾಗಿ ಹಸುವಿನ ಸಗಣಿ ಮತ್ತು ಮೂತ್ರವು ಹಲವಾರು ರೋಗಗಳನ್ನು ಗುಣಪಡಿಸುವ ಶಕ್ತಿಹೊಂದಿದೆ ಎಂದು ಭಾರತೀಯರು ನಂಬಿದ್ದಾರೆ. ಆದರೆ ವಿಜ್ಞಾನ ಬೇರೆ ರೀತಿಯೇ ಹೇಳುತ್ತದೆ. ಈ ನಡುವೆ ಮನೋಜ್ ಮಿತ್ತಲ್ ಎಂಬ ವೈದ್ಯರೊಬ್ಬರು ಹಸುವಿನ ಸಗಣಿ ತಿನ್ನುತ್ತಿರುವ ವೀಡಿಯೋವನ್ನು ತಮ್ಮ  ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ನನಗೆ ಸಲ್ಮಾನ್ ಜೊತೆ ನಟಿಸಲು ಇಷ್ಟವಿರಲಿಲ್ಲ ಎಂದ ಆಯುಷ್ ಶರ್ಮಾ

    ವೀಡಿಯೋದಲ್ಲಿ ಡಾ. ಮನೋಜ್ ಮಿತ್ತಲ್ ಅವರು, ನೆಲದ ಮೇಲಿದ್ದ ಹಸುವಿನ ಸಗಣಿಯನ್ನು ತೆಗೆದುಕೊಂಡು ಅದನ್ನು ಬಾಯಿಗೆ ಹಾಕಿಕೊಂಡು ಸವಿಯುತ್ತಿರುವುದನ್ನು ಕಾಣಬಹುದಾಗಿದೆ. ಅಲ್ಲದೇ ಗೋ ಮೂತ್ರ ಹಾಗೂ ಹಸುವಿನ ಸಗಣಿ ತಿನ್ನುವುದರಿಂದ ಅನೇಕ ಕಾಯಿಲೆಗಳು ದೂರವಾಗುತ್ತದೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ನಟ ದುನಿಯಾ ವಿಜಯ್‍ಗೆ ಪಿತೃ ವಿಯೋಗ

    ಹೆಂಗಸರಿಗೆ ನಾರ್ಮಲ್ ಡೆಲಿವರಿ ಆಗಬೇಕೆಂದರೆ ಹಸುವಿನ ಸಗಣಿ ಸೇವಿಸಬೇಕು ಇದರಿಂದ ಸಿಸೇರಿಯನ್‍ಗೆ ಆಗುವುದನ್ನು ತಪ್ಪಿಸಬಹುದು ಎಂದಿದ್ದಾರೆ. ಜೊತೆಗೆ ಗೋವಿನಿಂದ ಸಿಗುವ ಪಂಚಗವ್ಯದ ಪ್ರತಿಯೊಂದು ಭಾಗವೂ ಮನುಕುಲಕ್ಕೆ ಅತ್ಯಮೂಲ್ಯವಾದದ್ದು, ಗೋವಿನ ಸಗಣಿ ತಿಂದರೆ ನಮ್ಮ ದೇಹ ಮತ್ತು ಮನಸ್ಸು ಶುದ್ಧವಾಗುತ್ತದೆ. ನಮ್ಮ ಆತ್ಮ ಶುದ್ಧವಾಗುತ್ತದೆ. ಒಮ್ಮೆ ಅದು ನಮ್ಮ ದೇಹವನ್ನು ಪ್ರವೇಶಿಸಿದರೆ, ಅದು ನಮ್ಮ ದೇಹವನ್ನು ಶುದ್ಧೀಕರಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮೂರ್ನಾಲ್ಕು ದಿನ ಮಳೆ ಸೂಚನೆ – ಆತಂಕದಲ್ಲಿ ಬಯಲುಸೀಮೆ ಮಂದಿ

    ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ವೈದ್ಯರನ್ನು ಪ್ರಶ್ನಿಸಲು ಆರಂಭಿಸಿದ್ದಾರೆ. ವೈದ್ಯರ ಹೇಳಿಕೆಗಳನ್ನು ಕೆಲವರು ಒಪ್ಪಿದರೆ, ಮತ್ತೆ ಕೆಲವರು ಅವರ ಪದವಿಯನ್ನು ಪ್ರಶ್ನಿಸಿ, ಅಪಹಾಸ್ಯ ಮಾಡಿದ್ದಾರೆ.

  • ಪಾನಿಪುರಿ ಪ್ರಿಯರಿಗೆ ಶಾಕಿಂಗ್ ನ್ಯೂಸ್- ನೀರಿಗೆ ಮೂತ್ರ ಬೆರೆಸಿದ ವೀಡಿಯೋ ವೈರಲ್

    ಪಾನಿಪುರಿ ಪ್ರಿಯರಿಗೆ ಶಾಕಿಂಗ್ ನ್ಯೂಸ್- ನೀರಿಗೆ ಮೂತ್ರ ಬೆರೆಸಿದ ವೀಡಿಯೋ ವೈರಲ್

    ದಿಸ್ಪುರ್: ಪಾನಿಪುರಿ, ಗೋಲ್‍ಗಪ್ಪಾ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ರಸ್ತೆ ಬದಿಯಲ್ಲಿ ಸಿಗುವ ಪಾನಿಪುರಿಯನ್ನಂತೂ ಯುವಕ- ಯುವತಿಯರು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಇದೀಗ ಇಂತಹ ಪಾನಿಪುರಿ, ಗೋಲ್‍ಗಪ್ಪಾ ಪ್ರಿಯರಿಗೆ ಶಾಕಿಂಗ್ ಸುದ್ದಿಯೊಂದು ವರದಿಯಾಗಿದೆ.

    ಹೌದು. ರಸ್ತೆ ಬದಿ ಪಾನಿಪುರಿ ಮಾರಾಟ ಮಾಡುತ್ತಿರುವ ವ್ಯಕ್ತಿಯೊಬ್ಬ ಪಾನಿಗೆ ತನ್ನ ಮೂತ್ರ ಬೆರೆಸುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಇದನ್ನೂ ಓದಿ: ಕಾಬೂಲ್‍ನಿಂದ ಭಾರತಕ್ಕೆ ಮರಳ್ತಿದ್ದಂತೆ ತಮ್ಮನಿಗೆ ಕಿಸ್ ಕೊಟ್ಟ ಅಕ್ಕ- ಭಾವನಾತ್ಮಕ ವೀಡಿಯೋ ವೈರಲ್

    ವೀಡಿಯೋದಲ್ಲಿ ವ್ಯಕ್ತಿಯೊಬ್ಬ ಕೈ ಗಾಡಿಯಲ್ಲಿ ಪಾನಿಪುರಿ ಮಾರಾಟ ಮಾಡುತ್ತಿದ್ದಾನೆ. ಈ ವ್ಯಕ್ತಿ ಮಗ್ ಗೆ ಮೂತ್ರ ಮಾಡಿ ಅದನ್ನು ಪಾನಿಗೆ ಮಿಕ್ಸ್ ಮಾಡುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಸದ್ಯ 20 ಸೆಕೆಂಡ್ ವೀಡಿಯೋ ನೋಡಿದ ನೆಟ್ಟಿಗರು ವ್ಯಾಪಾರಿ ವಿರುದ್ಧ ಕಿಡಿಕಾರುತ್ತಿದ್ದಾರೆ. ಅಲ್ಲದೆ ಕೂಡಲೇ ಆತನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.  ಇದನ್ನೂ ಓದಿ: ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಸರಿಯಿಲ್ಲ: ಹೆಚ್.ಡಿ. ಕುಮಾರಸ್ವಾಮಿ

    ಒಟ್ಟಿನಲ್ಲಿ ಗೋಲ್‍ಗಪ್ಪಾ ನೀರಿಗೆ ವ್ಯಕ್ತಿ ಮೂತ್ರ ಬೆರೆಸುವುದು ಕ್ಲೀಯರ್ ಆಗಿ ಕಾಣುತ್ತಿದೆ. ಹೀಗಾಗಿ ನೆಟ್ಟಿಗರು ವ್ಯಾಪಾರಿಯ ನಡತೆಯನ್ನು ಖಂಡಿಸಿದ್ದಾರೆ. ಸದ್ಯ ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ವ್ಯಾಪಾರಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಆತನನ್ನು ಬಂಧಿಸಿರುವುದಾಗಿ ವರದಿಯಾಗಿದೆ.  ಇದನ್ನೂ ಓದಿ: ತಾನು ಸೆಲೆಕ್ಟ್ ಮಾಡಿದ ಹಾಡು ಹಾಕೋವರೆಗೂ ಮದುವೆ ಹಾಲ್‍ಗೆ ತೆರಳಲು ನಿರಾಕರಿಸಿದ ವಧು!

  • ಮನೆ ಮುಂದೆ ಮೂತ್ರ ಮಾಡಿದನೆಂದು ಬಾಲಕನ ತಾಯಿಯನ್ನೇ ಕೊಂದ ಅಪ್ರಾಪ್ತ!

    ಮನೆ ಮುಂದೆ ಮೂತ್ರ ಮಾಡಿದನೆಂದು ಬಾಲಕನ ತಾಯಿಯನ್ನೇ ಕೊಂದ ಅಪ್ರಾಪ್ತ!

    ನವದೆಹಲಿ: ತಮ್ಮ ಮನೆ ಮುಂದೆ ಬಾಲಕ ಮೂತ್ರ ಮಾಡಿದನೆಂದು ಸಿಟ್ಟಿಗೆದ್ದ ನೆರೆಮನೆಯ ಅಪ್ರಾಪ್ತ, ಆತನ ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆಯೊಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

    ಕೊಲೆಯಾದ ಮಹಿಳೆಯನ್ನು ಸಾವಿತ್ರಿ ರಾಣ ಎಂದು ಗುರುತಿಸಲಾಗಿದೆ. ಈ ಘಟನೆ ಈಶಾನ್ಯ ದೆಹಲಿಯ ಅಮಾನ್ ವಿಹಾರದಲ್ಲಿ ನಡೆದಿದೆ. ಇದನ್ನೂ ಓದಿ: 45.75 ಕೋಟಿಗೆ ಐಷಾರಾಮಿ ಬಂಗಲೆ ಮಾರಿದ ನಟ ಅಭಿಷೇಕ್ ಬಚ್ಚನ್

    ಸಾವಿತ್ರಿ ರಾಣ ನಾಲ್ಕು ವರ್ಷದ ಮಗ ಎದುರು ಮನೆಯ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದ. ಈ ವಿಚಾರ ಗಮನಕ್ಕೆ ಬಂದ ಕೂಡಲೇ ನೆರೆಮನೆಯವರು ಸಾವಿತ್ರಿ ಜೊತೆ ಜಗಳವಾಡಿದ್ದರು. ನೆರೆಮನೆಯ ಬಾಲಕ ಕೂಡ ಸಾವಿತ್ರಿ ಜೊತೆ ತಗಾದೆ ತೆಗೆದಿದ್ದಾನೆ. ಹೀಗೆ ವಾಗ್ವಾದಗಳು ನಡೆಯುತ್ತಿದ್ದಾಗ ಸ್ಥಳೀಯ ನಿವಾಸಿಗಳು ಜಮಾಯಿಸಿ ಎರಡೂ ಮನೆಯವರನ್ನು ಸಂಧಾನ ಮಾಡುವಲ್ಲಿ ಯಶಸ್ವಿಯಾದರು.

    ಇಷ್ಟಾದ ಬಳಿಕ ಆಗಸ್ಟ್ 11ರ ರಾತ್ರಿ 11.30ರ ಸುಮಾರಿಗೆ ಎದುರು ಮನೆಯ ಬಾಲಕ ಏಕಾಏಕಿ ಮನೆಗೆ ಬಂದು ಸಾವಿತ್ರಿಗೆ ರೇಜರ್ ನಿಂದ ಅನೇಕ ಬಾರಿ ಬರ್ಬರವಾಗಿ ಇರಿದಿದ್ದಾನೆ. ಘಟನೆಯಿಂದ ಗಂಭೀರ ಗಾಯಗೊಂಡು ಸಾವಿತ್ರಿ ರಕ್ತದ ಮಡುವಿನಲ್ಲಿ ಒದ್ದಾಡಿ ಪ್ರಾಣ ಬಿಟ್ಟಿದ್ದಾರೆ.

    ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಅಪ್ರಾಪ್ತನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

  • ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ – ಪಿಎಸ್‍ಐ ವಿರುದ್ದ ಎಫ್‍ಐಆರ್ ದಾಖಲು

    ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ – ಪಿಎಸ್‍ಐ ವಿರುದ್ದ ಎಫ್‍ಐಆರ್ ದಾಖಲು

    ಚಿಕ್ಕಮಗಳೂರು: ವಿಚಾರಣೆಗೆ ಕರೆತಂದ ದಲಿತ ಯುವಕನಿಗೆ ಠಾಣೆಯಲ್ಲೇ ಬೇರೊಬ್ಬ ಆರೋಪಿಯ ಮೂತ್ರ ಕುಡಿಸಿದ್ದ ಆರೋಪದಡಿ ತಾಲೂಕಿನಲ್ಲಿ ಪಿಎಸ್‍ಐ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಗೋಣಿಬೀಡು ಪೊಲೀಸ್ ಠಾಣೆಯ ಪಿಎಸ್‍ಐ ಅರ್ಜುನ್ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಗೋಣಿಬೀಡು ಠಾಣಾ ವ್ಯಾಪ್ತಿಯ ಕಿರಗುಂದ ಗ್ರಾಮದ ಯುವಕ ಪುನೀತ್ ವಿವಾಹಿತ ಹಿಳೆ ಜೊತೆ ಮಾತನಾಡುತ್ತಿದ್ದು, ಇದರಿಂದ ಸಂಸಾರದಲ್ಲಿ ಗಲಾಟೆ ನಡೆಯುತ್ತಿದೆ ಎಂದು ವಿವಾಹಿತ ಮಹಿಳೆಯ ಪತಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪುನೀತ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ವಿಚಾರಣೆಯ ಸಂದರ್ಭದಲ್ಲಿ ಪಿಎಸ್‍ಐ ಅರ್ಜುನ್ ಜಾತಿ ನಿಂದನೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಪುನೀತ್ ಆರೋಪಿಸಿದ್ದಾರೆ.

    ಆರೋಪ ಏನು?
    ಠಾಣೆಯಲ್ಲಿ ಪಿಎಸ್‍ಐ ನನ್ನ ಮೇಲೆ ಮನಸ್ಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ನನಗೆ ತುಂಬಾ ದಣಿವಾಗಿತ್ತು. ಆಗ ನಾನು ನೀರು ಕೇಳಿದ್ದಕ್ಕೆ ಅರ್ಜುನ್ ಅವರು ಕಳ್ಳತನ ಆರೋಪದಡಿ ಠಾಣೆಗೆ ಕರೆತಂದಿದ್ದ ಬೇರೊಬ್ಬ ಆರೋಪಿ ಚೇತನ್‍ನಿಂದ ನನ್ನ ಬಾಯಿಗೆ ಮೂತ್ರ ಮಾಡಿಸಿ ಯಾರಿಗಾದರೂ ಹೇಳಿದರೆ ಚೆನ್ನಾಗಿ ಇರುವುದಿಲ್ಲ ಎಂದು ಮನಸ್ಸೋ ಇಚ್ಚೆ ಹಲ್ಲೆ ಮಾಡಿದ್ದಾರೆ.

    ಠಾಣೆಯಲ್ಲಿ ಪೊಲೀಸರು ನನ್ನನ್ನ ತುಂಬಾ ವಿಚಿತ್ರವಾಗಿ ನಡೆಸಿಕೊಂಡಿದ್ದಾರೆ. ಲಾಕ್‍ಡೌನ್ ಇದ್ದ ಕಾರಣ ನಮ್ಮ ಮನೆಯವರು ಯಾರೂ ಬರಲು ಆಗಲಿಲ್ಲ. ಹೀಗೆ ಮಾಡಿದರೆ ನಿನ್ನನ್ನ ಬಿಡುತ್ತೇನೆ ಎಂದರು. ನೆಲದ ಮೇಲೆ ಬಿದ್ದಿದ್ದ ಮೂತ್ರವನ್ನು ನಾಲಿಗೆಯಲ್ಲಿ ನೆಕ್ಕಿಸಿದರು. ಅವರು ಹೇಳಿದ ಎಲ್ಲಾ ಕೆಲಸ ಮಾಡಿದರೂ ನನ್ನನ್ನ ಮನೆಗೆ ಬಿಡಲಿಲ್ಲ. ರಾತ್ರಿ 10 ಗಂಟೆಯವರೆಗೆ ಠಾಣೆಯಲ್ಲಿ ಇರಿಸಿಕೊಂಡಿದ್ದರು. ಮನೆಯವರು ಕೂಲಿಗೆ ಹೋಗಿದ್ದರು. ರಾತ್ರಿ 10 ಗಂಟೆಗೆ ನನ್ನ ಮಾವ ಬಂದು ಕರೆದುಕೊಂಡು ಹೋದರು. ನನ್ನ ಮೇಲೆ ಈವರೆಗೆ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಆ ಮಹಿಳೆ ಕೂಡ ನನ್ನ ವಿರುದ್ಧ ದೂರು ನೀಡಿಲ್ಲ. ಸಬ್ ಇನ್ಸ್‍ಪೆಕ್ಟರ್ ಯಾರೋ ಒಂದು ಗುಂಪಿನ ಮಾತು ಕೇಳಿ ಈ ರೀತಿ ವರ್ತಿಸಿದ್ದಾರೆ. ಕೈಕಾಲು ಕಟ್ಟಿ ಅಂಗೈ ಹಾಗೂ ಮುಂಗಾಲಿಗೆ ಹೊಡೆದಿದ್ದಾರೆ ಎಂದು ಪುನೀತ್ ಆರೋಪ ಮಾಡಿದ್ದಾರೆ.

    ಪೊಲೀಸರ ವರ್ತನೆಯಿಂದ ಮನನೊಂದು ಪುನೀತ್ ದಲಿತ ಪರ ಸಂಘಟನೆಗಳ ನೇತೃತ್ವದಲ್ಲಿ ಪಿಎಸ್‍ಐ ವಿರುದ್ಧ ಕ್ರಮಕ್ಕೆ ಚಿಕ್ಕಮಗಳೂರು ಎಸ್ಪಿಗೆ ದೂರು ನೀಡಿದ್ದರು. ಈ ಹಿನ್ನೆಲೆ ಅರ್ಜುನ್ ಅವರನ್ನು ವರ್ಗಾವಣೆ ಮಾಡಿರುವ ಎಸ್‍ಪಿ ಅಕ್ಷಯ್ ಡಿವೈಎಸ್ಪಿ ಪ್ರಭು ನೇತೃತ್ವದಲ್ಲಿ ಪ್ರಕರಣದ ವಿಚಾರಣೆ ನಡೆಸಲು ಸೂಚಿಸಿದ್ದಾರೆ. ಗೋಣಿಬೀಡು ಠಾಣೆಯಲ್ಲಿ ಪಿಸ್‍ಐ ಅರ್ಜುನ್ ವಿರುದ್ಧ ಐಪಿಸಿ ಸೆಕ್ಷನ್ 342, 323, 504, 506, 330, 348 ರ ಅಡಿ ಪ್ರಕರಣ ದಾಖಲಾಗಿದೆ.