Tag: ಮೂತ್ರವಿಸರ್ಜನೆ

  • ಮಧ್ಯಪ್ರದೇಶದಲ್ಲೂ ಬುಲ್ಡೋಜರ್‌ ಸದ್ದು; ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜನೆ ಮಾಡಿದ್ದ ಆರೋಪಿ ಮನೆ ಧ್ವಂಸ

    ಮಧ್ಯಪ್ರದೇಶದಲ್ಲೂ ಬುಲ್ಡೋಜರ್‌ ಸದ್ದು; ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜನೆ ಮಾಡಿದ್ದ ಆರೋಪಿ ಮನೆ ಧ್ವಂಸ

    ಭೋಪಾಲ್‌: ಸಿಧಿ ಜಿಲ್ಲೆಯಲ್ಲಿ ಬುಡಕಟ್ಟು (Tribal) ಜನಾಂಗದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದ ಆರೋಪಿ ಪ್ರವೇಶ್ ಶುಕ್ಲಾ ಮನೆಯನ್ನ ಬುಲ್ಡೋಜರ್‌ನಿಂದ (Bulldozer) ಧ್ವಂಸಗೊಳಿಸಲಾಗಿದೆ.

    ರಾಜ್ಯ ಸರ್ಕಾರದ ಆದೇಶದ ಮೇರೆಗೆ ಅಧಿಕಾರಿಗಳು ಆರೋಪಿ ಮನೆಯನ್ನ ಧ್ವಂಸಗೊಳಿಸಿದ್ದಾರೆ. ಆದ್ರೆ ಆರೋಪಿ ಕುಟುಂಬಸ್ಥರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಹಳೆಯ ವೀಡಿಯೋ ಆಗಿದ್ದು, ಚುನಾವಣೆ ಹತ್ತಿರವಾಗಿರೋದ್ರಿಂದ ಇದನ್ನ ಮುನ್ನೆಲೆಗೆ ತರಲಾಗಿದೆ. ರಾಜಕೀಯ ಕಾರಣಗಳಿಗಾಗಿ ಹಳೆಯ ವೀಡಿಯೋ ಪ್ರಸಾರ ಮಾಡುತ್ತಿದ್ದಾರೆ ಎಂದು ಆರೋಪಿ ಸಹೋದರಿ ದೂರಿದ್ದಾರೆ. ಇದನ್ನೂ ಓದಿ: ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜಿಸಿ ವಿಕೃತಿ- ದುಷ್ಕರ್ಮಿ ಅರೆಸ್ಟ್

    ಆರೋಪಿ ಪ್ರವೇಶ್‌ ಶುಕ್ಲಾ ತಂದೆ, ನನ್ನ ಮಗ ಈ ಕೃತ್ಯ ಎಸಗಲು ಸಾಧ್ಯವೇ ಇಲ್ಲ. ಆತನನ್ನ ಸಿಕ್ಕಿಹಾಕಿಸುವ ಉದ್ದೇಶದಿಂದ ಹೀಗೆ ಮಾಡಿದ್ದಾರೆ. ನಮಗೆ ತುಂಬಾ ನೋವಾಗಿದೆ ಎಂದು ಅಳಲುತೋಡಿಕೊಂಡಿದ್ದಾರೆ. ಸದ್ಯ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಬಂಧಿತನಾಗಿರುವ ಪ್ರವೇಶ್‌ ಶುಕ್ಲಾನನ್ನ ರೇವಾ ಸೆಂಟ್ರಲ್‌ ಜೈಲಿನಲ್ಲಿ ಇರಿಸಲಾಗಿದೆ. ಇದನ್ನೂ ಓದಿ: ವಿಷಾನಿಲ ಸೋರಿಕೆ – 16 ಜನರ ದುರ್ಮರಣ

    ಏನಿದು ಘಟನೆ?
    ಬುಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ದುಷ್ಕರ್ಮಿಯೊಬ್ಬ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿತ್ತು. ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಮಧ್ಯಪ್ರದೇಶದ ರಾಜಕೀಯದಲ್ಲಿ ಗದ್ದಲ ಉಂಟಾಗಿತ್ತು. ಆತ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಎಂದು ಕಾಂಗ್ರೆಸ್ ಆರೋಪಿಸಿತ್ತು.

    ವೀಡಿಯೋ ವೈರಲ್ ಆಗುತ್ತಿದ್ದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆತನ ವಿರುದ್ಧ ಕಟ್ಟುನಿಟ್ಟಿನ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದರು. ಮಂಗಳವಾರ ತಡರಾತ್ರಿ ಆರೋಪಿ ಪ್ರವೇಶ್‌ ಶುಕ್ಲಾನನ್ನ ಬಂಧಿಸಲಾಗಿತ್ತು.

    ಆತನ ವಿರುದ್ಧ ಬಹಾರಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳು 294, 504, ಸೆಕ್ಷನ್ 3(1) (R)(s) SC/ST ಕಾಯ್ದೆ ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ತನಿಖೆಯ ಭಾಗವಾಗಿ ಆರೋಪಿಯ ಪತ್ನಿ ಹಾಗೂ ಪೋಷಕರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜಿಸಿ ವಿಕೃತಿ- ದುಷ್ಕರ್ಮಿ ಅರೆಸ್ಟ್

    ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜಿಸಿ ವಿಕೃತಿ- ದುಷ್ಕರ್ಮಿ ಅರೆಸ್ಟ್

    ಭೋಪಾಲ್: ಬುಡಕಟ್ಟು ಜನಾಂಗದ (Tribal) ವ್ಯಕ್ತಿಯ ಮೇಲೆ ದುಷ್ಕರ್ಮಿಯೊಬ್ಬ ಮೂತ್ರ ವಿಸರ್ಜಿಸಿ (Urination) ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಆತನನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದೆ.

    ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿರುವ ಘಟನೆಗೆ ಸಂಬಂಧಿಸಿದಂತೆ ವೀಡಿಯೋವೊಂದು ವೈರಲ್ ಆಗಿದೆ. ಅದರಲ್ಲಿ ನೆಲೆದ ಮೇಲೆ ಕುಳಿತಿರುವ ವ್ಯಕ್ತಿಯೊಬ್ಬರ ಮೇಲೆ ಆರೋಪಿ ಸಿಗರೇಟ್ ಸೇದುತ್ತಾ ಅಮಲೇರಿದ ಸ್ಥಿತಿಯಲ್ಲಿ ಮೂತ್ರವಿಸರ್ಜಿಸಿರುವುದು ಕಂಡುಬಂದಿದೆ. ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಮಧ್ಯಪ್ರದೇಶದ ರಾಜಕೀಯದಲ್ಲಿ ಗದ್ದಲ ಉಂಟಾಗಿದೆ.

    ಆರೋಪಿ ವ್ಯಕ್ತಿಯನ್ನು ಪ್ರವೇಶ್ ಶುಕ್ಲಾ ಎಂದು ಗುರುತಿಸಲಾಗಿದ್ದು, ಆತ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಎಂದು ಕಾಂಗ್ರೆಸ್ ಆರೋಪಿಸಿದೆ. ಮಾತ್ರವಲ್ಲದೇ ರೇವಾದ ಬಿಜೆಪಿ ಶಾಸಕ ರಾಜೇಂದ್ರ ಶುಕ್ಲಾ ಅವರೊಂದಿಗಿನ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿವೆ. ಹಲವು ಕಾಂಗ್ರೆಸ್ ನಾಯಕರು ವೈರಲ್ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

    ಆದರೂ ಬಿಜೆಪಿ ಆರೋಪಿ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಆತ ನಮ್ಮ ಕ್ಷೇತ್ರದವನು ಎಂಬುದು ನಮಗೆ ತಿಳಿದಿದೆ. ಆದರೆ ಆತ ನಮ್ಮ ಪ್ರತಿನಿಧಿ ಅಥವಾ ಬಿಜೆಪಿ ಕಾರ್ಯಕರ್ತನಲ್ಲ ಎಂದು ಕೇದಾರ್‌ನಾಥ್ ಶುಕ್ಲಾ ಹೇಳಿದ್ದಾರೆ. ಇದನ್ನೂ ಓದಿ: ಮೂಲಭೂತ ಸೌಕರ್ಯವಿಲ್ಲದೇ ಕುಗ್ಗಿದ ಜನ- ಪಯಸ್ವಿನಿ ನದಿಗೆ ಬಿದಿರಿನ ಸೇತುವೆ ಸಂಕಷ್ಟ

    ವೀಡಿಯೋ ವೈರಲ್ ಆಗುತ್ತಿದ್ದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆತನ ವಿರುದ್ಧ ಕಟ್ಟುನಿಟ್ಟಿನ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದಾರೆ.

    ಪೊಲೀಸರು ತಕ್ಷಣವೇ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆರೋಪಿ ಬಂಧನದಿಂದ ತಪ್ಪಿಸಿಕೊಳ್ಳಲು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಓಡಿಹೋಗುತ್ತಿದ್ದ. ನಂತರ ಆತನನ್ನು ಮಧ್ಯರಾತ್ರಿ 2 ಗಂಟೆಗೆ ಹಿಡಿದು ವಿಚಾರಣೆಗೆ ಒಳಪಡಿಸಲಾಗಿದೆ. ಆತನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ, ಎಸ್‌ಸಿ/ಎಸ್‌ಟಿ ಕಾಯ್ದೆ ಹಾಗೂ ಭಾರತೀಯ ದಂಡಸಂಹಿತೆಯ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಭಾಗವಾಗಿ ಆರೋಪಿಯ ಪತ್ನಿ ಹಾಗೂ ಪೋಷಕರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಕೆ.ಜಿ ಟೊಮೆಟೋಗೆ 129 ರೂ., ಯುಪಿಯಲ್ಲಿ 150 ರೂ.!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತೀಯ ರೈಲ್ವೆಯಲ್ಲೂ ‘ಪೀ ಗೇಟ್’ – ಕುಡಿದ ಮತ್ತಿನಲ್ಲಿ ಮಹಿಳೆ ತಲೆ ಮೇಲೆ ಮೂತ್ರವಿಸರ್ಜನೆ

    ಭಾರತೀಯ ರೈಲ್ವೆಯಲ್ಲೂ ‘ಪೀ ಗೇಟ್’ – ಕುಡಿದ ಮತ್ತಿನಲ್ಲಿ ಮಹಿಳೆ ತಲೆ ಮೇಲೆ ಮೂತ್ರವಿಸರ್ಜನೆ

    ಕೋಲ್ಕತ್ತಾ: ಕೆಲ ತಿಂಗಳ ಹಿಂದೆ ಏರ್ ಇಂಡಿಯಾ ವಿಮಾನದಲ್ಲಿ (Air India Flight) ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಮೂತ್ರವಿಸರ್ಜನೆ (Urination) ಮಾಡಿ ಭಾರೀ ವಿವಾದ ಉಂಟಾಗಿತ್ತು. ಇದೀಗ ಭಾರತೀಯ ರೈಲ್ವೆಯಲ್ಲೂ (Indian Railways) ಸಿಬ್ಬಂದಿ ಮಹಿಳೆಯೊಬ್ಬರ (Woman) ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ವರದಿಯಾಗಿದೆ.

    ಅಮೃತಸರದಿಂದ ಕೋಲ್ಕತ್ತಾ ತೆರಳುತ್ತಿದ್ದ ಅಕಲ್ ತಖ್ತ್ ಎಕ್ಸ್ಪ್ರೆಸ್ ರೈಲಿನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ರೈಲಿನ ಟಿಕೆಟ್ ಪರೀಕ್ಷಕ (TTE) ಕುಡಿದ ಮತ್ತಿನಲ್ಲಿ ಮಹಿಳೆಯೊಬ್ಬರ ತಲೆ ಮೇಲೆ ಮೂತ್ರವಿಸರ್ಜನೆ ಮಾಡಿದ್ದಾನೆ.

    train

    ವರದಿಗಳ ಪ್ರಕಾರ, ಮಹಿಳೆ ತನ್ನ ಪತಿಯೊಂದಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದು, ಮಲಗಿದ್ದ ವೇಳೆ ರೈಲಿನಲ್ಲಿ ನಿಯೋಜನೆಗೊಂಡಿದ್ದ ಟಿಕೆಟ್ ಪರೀಕ್ಷಕ ಮುನ್ನಾ ಕುಮಾರ್ ಮಹಿಳೆ ಮೇಲೆ ಮೂತ್ರವಿಸರ್ಜನೆ ಮಾಡಿದ್ದಾನೆ. ಈ ವೇಳೆ ಮಹಿಳೆ ಕಿರುಚಿಕೊಂಡಿದ್ದು, ಕುಮಾರ್ ಅಲ್ಲಿಂದ ಓಡಿಹೋಗಲು ಪ್ರಯತ್ನಿಸಿದ್ದಾನೆ. ಆದರೆ ಮಹಿಳೆಯ ಪತಿ ಟಿಟಿಇ ಯನ್ನು ಹಿಡಿದು, ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಭೋಪಾಲ್ ಅನಿಲ ದುರಂತ – ಸುಪ್ರೀಂ ಕೋರ್ಟ್‍ನಲ್ಲಿ ಕೇಂದ್ರಕ್ಕೆ ಭಾರೀ ಹಿನ್ನಡೆ

    ಮುನ್ನಾ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದು, ಈ ವೇಳೆ ಆತ ಮದ್ಯಪಾನ ಮಾಡಿ ನಶೆಯಲ್ಲಿ ಮೂತ್ರವಿಸರ್ಜನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

    ಕೆಲ ತಿಂಗಳ ಹಿಂದೆ ಏರ್ ಇಂಡಿಯಾ ವಿಮಾನದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಪಕ್ಕದ ಸೀಟ್‌ನಲ್ಲಿ ಕುಳಿತಿದ್ದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಆರೋಪಿ ಶಂಕರ್ ಮಿಶ್ರಾ ಭಾರತ ಮೂಲದವನಾಗಿದ್ದು, ಅಮೆರಿಕದಲ್ಲಿ ಉದ್ಯೋಗಿಯಾಗಿದ್ದ. ಘಟನೆ ಬಗ್ಗೆ ದೂರು ದಾಖಲಾದ ಬಳಿಕ ಮಿಶ್ರಾನನ್ನು ಬಂಧಿಸಿ, ಏರ್ ಇಂಡಿಯಾ ವಿಮಾನದಲ್ಲಿ ಹಾರಾಟ ಮಾಡದಂತೆ 4 ತಿಂಗಳ ನಿಷೇಧವನ್ನು ವಿಧಿಸಲಾಯಿತು. ಇದನ್ನೂ ಓದಿ: ಡಬಲ್ ಡೆಕ್ಕರ್ ಬಸ್ಸಿಗೆ ಟ್ರ್ಯಾಕ್ಟರ್ ಡಿಕ್ಕಿ- ಓರ್ವ ಸಾವು, ಹಲವರಿಗೆ ಗಾಯ

  • ಏರ್ ಇಂಡಿಯಾಗೆ 30 ಲಕ್ಷ ದಂಡ – ಪೈಲಟ್ ಪರವಾನಗಿ 3 ತಿಂಗಳು ಅಮಾನತು

    ಏರ್ ಇಂಡಿಯಾಗೆ 30 ಲಕ್ಷ ದಂಡ – ಪೈಲಟ್ ಪರವಾನಗಿ 3 ತಿಂಗಳು ಅಮಾನತು

    ನವದೆಹಲಿ: ಏರ್ ಇಂಡಿಯಾ ವಿಮಾನದಲ್ಲಿ (Air India Flight) ಮಹಿಳೆಯೊಬ್ಬರ ಮೇಲೆ ಸಹ ಪ್ರಯಾಣಿಕನೊಬ್ಬ ಮೂತ್ರವಿಸರ್ಜನೆ (Pee) ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಏರ್ ಇಂಡಿಯಾಗೆ 30 ಲಕ್ಷ ರೂ. ದಂಡವನ್ನು (Fine) ವಿಧಿಸಿದೆ.

    ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರವಿಸರ್ಜನೆ ಮಾಡಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿಸಿಎ ಏರ್ ಇಂಡಿಯಾ ವಿಮಾನಕ್ಕೆ 30 ಲಕ್ಷ ರೂ. ದಂಡ ವಿಧಿಸಿದ್ದಲ್ಲದೇ ಅಂದು ಘಟನೆ ನಡೆದ ನ್ಯೂಯಾರ್ಕ್-ದೆಹಲಿ ವಿಮಾನದ ಪೈಲಟ್-ಇನ್-ಕಮಾಂಡ್ ಪರವಾನಗಿಯನ್ನು ಕೂಡಾ 3 ತಿಂಗಳುಗಳ ಕಾಲ ಅಮಾನತುಗೊಳಿಸಿದೆ. ಇದನ್ನೂ ಓದಿ: ಬಾನೆಟ್ ಮೇಲೆ ಸವಾರನನ್ನು ಎಳೆದೊಯ್ದ ಕಾರು ಚಾಲಕಿ

    ಈ ಘಟನೆ 2022ರ ನವೆಂಬರ್ 26ರಂದು ನಡೆದಿದೆ. ಅಂದು ವಿಮಾನದ ವಾಚ್‌ಡಾಗ್ (ವಿಚಕ್ಷಣಾ ವಿಭಾಗ) ತನ್ನ ಕರ್ತವ್ಯವನ್ನು ನಿರ್ವಹಿಸಲು ವಿಫಲವಾದ ಕಾರಣಕ್ಕೆ ಏರ್ ಇಂಡಿಯಾದ ಇನ್-ಫ್ಲೈಟ್ ಸೇವೆಗಳ ನಿರ್ದೇಶಕರ ಮೇಲೆ 3 ಲಕ್ಷ ರೂ. ದಂಡವನ್ನೂ ವಿಧಿಸಿರುವುದಾಗಿ ತಿಳಿಸಿದೆ.

    ಘಟನೆ ನಡೆದ ತಿಂಗಳ ಬಳಿಕ ಸಂತ್ರಸ್ತ ಮಹಿಳೆ ಏರ್ ಇಂಡಿಯಾ ಗ್ರೂಪ್ ಅಧ್ಯಕ್ಷರಿಗೆ ಘಟನೆ ಬಗ್ಗೆ ಪತ್ರ ಬರೆದಿದ್ದರು. ಬಳಿಕ ಏರ್ ಇಂಡಿಯಾ ಜನವರಿ 4 ರಂದು ಪೊಲೀಸ್ ದೂರು ದಾಖಲಿಸಿದೆ. ಘಟನೆಯ ಆರೋಪಿ ಶಂಕರ್ ಮಿಶ್ರಾನನ್ನು 2 ದಿನಗಳ ಬಳಿಕ ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗೆ 4 ತಿಂಗಳ ಕಾಲ ವಿಮಾನ ಹಾರಾಟವನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಕಿರಿಯ ಪುತ್ರನ ನಿಶ್ಚಿತಾರ್ಥ ಸಡಗರ – ಸ್ಟೇಜ್ ಮೇಲೆ ಹೆಜ್ಜೆ ಹಾಕಿದ ಅಂಬಾನಿ ಕುಟುಂಬ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಾರ್ವಜನಿಕ ಸ್ಥಳದಲ್ಲಿ ಮೂತ್ರವಿಸರ್ಜನೆ ಮಾಡಬೇಡಿ ಎಂದಿದ್ದಕ್ಕೆ ವ್ಯಕ್ತಿಯ ಕೊಲೆ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರವಿಸರ್ಜನೆ ಮಾಡಬೇಡಿ ಎಂದಿದ್ದಕ್ಕೆ ವ್ಯಕ್ತಿಯ ಕೊಲೆ

    ನವದೆಹಲಿ: ಸಾರ್ವಜನಿಕ ಸ್ಥಳದಲ್ಲಿ ಮೂತ್ರವಿಸರ್ಜನೆ ಮಾಡದಂತೆ ತಡೆದಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

    ಇ-ರಿಕ್ಷಾ ಚಾಲಕರಾದ 34 ವರ್ಷದ ರವಿಂದರ್ ಕುಮಾರ್ ಕೊಲೆಯಾದ ದುರ್ದೈವಿ. ಶನಿವಾರದಂದು ಉತ್ತರ ದೆಹಲಿಯ ಮುಖರ್ಜಿನಗರದ ಮೆಟ್ರೋ ನಿಲ್ದಾಣದ ಪಕ್ಕದಲ್ಲಿರೋ ಇ- ರಿಕ್ಷಾ ಸ್ಟ್ಯಾಂಡ್ ಬಳಿಯ ರಸ್ತೆಯಲ್ಲಿ ಇಬ್ಬರು ಯುವಕರು ಮೂತ್ರವಿಸರ್ಜನೆ ಮಾಡುತ್ತಿದ್ದಾಗ ರವಿಂದರ್ ಅದನ್ನು ವಿರೋಧಿಸಿದ್ದಾರೆ. ಇದರಿಂದ ಕೋಪಗೊಂಡ ಯುವಕರು ರವಿಂದರ್ ಅವರಿಗೆ ಬೆದರಿಕೆ ಹಾಕಿದ್ದು, ಕೆಲವು ಗಂಟೆಗಳ ನಂತರ ದೊಡ್ಡ ತಂಡದೊಂದಿಗೆ ಬಂದು ಕಲ್ಲುಗಳನ್ನು ತುಂಬಿದ ಟವೆಲ್ ಹಾಗೂ ಹಿತ್ತಾಳೆ ಲೋಹದಿಂದ ಸುಮಾರು 20 ನಿಮಿಷಗಳವರೆಗೆ ಥಳಿಸಿದ್ರು ಎಂದು ರವಿಂದರ್ ಕುಟುಂಬಸ್ಥರು ಹಾಗೂ ಸ್ನೇಹಿತರು ಹೇಳಿದ್ದಾರೆ.

    ರಾತ್ರಿ ಸುಮಾರು 8.30ರ ವೇಳೆಯಲ್ಲಿ ಈ ಘಟನೆ ನಡೆದಿದ್ದು, ರವಿಂದರ್ ಅವರ ರಕ್ಷಣೆಗೆ ಯಾರೂ ಮುಂದೆ ಬಂದಿಲ್ಲ. ನಂತರ ಅದೇ ರಾತ್ರಿ ರವಿಂದರ್ ಮೃತಪಟ್ಟಿದ್ದಾರೆ.

    ಘಟನೆಯ ಬಗ್ಗೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲು ಸಿಸಿಟಿವಿ ದೃಶ್ಯಾವಳಿಯನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂಧು ಪೊಲೀಸ್ ಉಪ ಆಯುಕ್ತರಾದ ಮಿಲಿಂದ್ ಮಹಾದಿಯೋ ಸುದ್ಧಿ ಸಂಸ್ಥೆಗೆ ತಿಳಿಸಿದ್ದಾರೆ. 12 ರಿಂದ 13 ಯುವಕರು ಈ ಕೃತ್ಯದಲ್ಲಿ ಭಾಗಿಯಾಗಿರಬಹುದು ಎಂದು ನಮಗೆ ಅನ್ನಿಸುತ್ತಿದೆ. ಆದ್ರೆ ಅದಕ್ಕಿಂತಲೂ ಹೆಚ್ಚಿನವರು ಇರಬಹುದು ಎಂದು ಹೇಳಿದ್ದಾರೆ.

    ರವಿಂದರ್ ಅವರ ಸಹೋದರ ವಿಜೇಂದರ್ ಈ ಬಗ್ಗೆ ಹೇಳಿಕೆ ನೀಡಿದ್ದು, ಶನಿವಾರ ಆತ ಮನೆಗೆ ಬಂದಾಗ ಯಾವುದೇ ಕಾಣುವಂತಹ ಗಾಯಗಳು ಇರಲಿಲ್ಲವಾದ್ದರಿಂದ ವೈದ್ಯರ ಬಳಿ ಹೋಗ್ಲಿಲ್ಲ. ಆದ್ರೆ ಕೆಲ ಸಮಯದ ನಂತರ ಪ್ರಜ್ಞೆ ತಪ್ಪಿದ. ಆಸ್ಪತ್ರೆಗೆ ಕರೆದುಕೊಂಡು ಹೋದಾಗ ರವಿಂದರ್ ಸಾವನ್ನಪ್ಪಿರುವುದಾಗಿ ವೈದ್ಯರು ಹೇಳಿದ್ರು ಅಂತ ತಿಳಿಸಿದ್ದಾರೆ.

    ರವಿಂದರ್ ಸಾವಿಗೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ವಿಷಾದ ವ್ಯಕ್ತಪಡಿಸಿದ್ದಾರೆ. ರವಿಂದರ್ ಸ್ವಚ್ಛ ಭಾರತದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದವರಾಗಿದ್ರು. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿಯ ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ.