Tag: ಮೂವರು

  • ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ – ತಾಯಿ ಸಾವು

    ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ – ತಾಯಿ ಸಾವು

    ಹುಬ್ಬಳ್ಳಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಲಘಟಗಿ ತಾಲೂಕಿನ ಸಂಗದೇವರ ಕೊಪ್ಪದಲ್ಲಿ ನಡೆದಿದೆ.

    ಘಟನೆಯಲ್ಲಿ ತಾಯಿ ಸಾವನ್ನಪ್ಪಿದ್ದು, ಅದೃಷ್ಟವಶಾತ್ ಇಬ್ಬರು ಮಕ್ಕಳು ಬದುಕುಳಿದಿದ್ದಾರೆ. ಸಂಗವ್ವ ಮುದೆಣ್ಣವರ ಮೃತ ಮಹಿಳೆ. ಶಂಕ್ರಪ್ಪ ಮುದೆಣ್ಣವರ, ಸುರೇಶ್ ಮುದೆಣ್ಣವರ ಬದುಕುಳಿದವರು. ಇದರಲ್ಲಿ ಶಂಕ್ರಪ್ಪನ ಸ್ಥಿತಿ ಗಂಭೀರವಾಗಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕುಡಿಯುವ ನೀರಿನ ನಲ್ಲಿಯ ಬಳಿ ಇದ್ದ ಕಲ್ಲು ತೆಗೆದಿದ್ದ ಕಾರಣಕ್ಕೆ ಸಂಬಂಧಿ ಬಸಲಿಂಗಪ್ಪ ಮುದಣ್ಣವರ ಮತ್ತಿತರರು ಇತ್ತಿಚೆಗೆ ಸಂಗವ್ವ ಹಾಗೂ ಆಕೆಯ ಮಕ್ಕಳೊಂದಿಗೆ ಜಗಳವಾಡಿದ್ದರು. ತಾಯಿ-ಮಗನಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದರು. ಈ ಕುರಿತು ಸಂಗವ್ವ ಕಲಘಟಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

    ಇದರಿಂದ ಆಕ್ರೋಶಗೊಂಡು ಬಸಲಿಂಗಪ್ಪ ಇತರರು ಸಂಗವ್ವನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮನನೊಂದು ಸಂಗವ್ವ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ಸಂಗವ್ವನನ್ನು ರಕ್ಷಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.

    ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ನಾಯಿ ಬೊಗಳಿದ್ದರಿಂದ ಸಿಟ್ಟುಗೊಂಡು ಮಾಲೀಕನಿಗೇ ಚಾಕು ಇರಿದು ಕೊಂದ್ರು!

    ನಾಯಿ ಬೊಗಳಿದ್ದರಿಂದ ಸಿಟ್ಟುಗೊಂಡು ಮಾಲೀಕನಿಗೇ ಚಾಕು ಇರಿದು ಕೊಂದ್ರು!

    – ಮೂವರು ಆರೋಪಿಗಳಲ್ಲಿ ಇಬ್ಬರು ಅರೆಸ್ಟ್

    ಲಕ್ನೋ: ಮೂವರು ಯುವಕರು ಶ್ವಾನದ ಮಾಲೀಕನಿಗೆ ಚಾಕು ಇರಿದು ಕೊಲೆಗೈದ ವಿಲಕ್ಷಣ ಘಟನೆಯೊಂದು ಉತ್ತರಪ್ರದೇಶದ ಸಿತಾಪುರ ಜಿಲ್ಲೆಯಲ್ಲಿ ನಡೆದಿದೆ.

    ಮೃತ ದುರ್ದೈವಿಯನ್ನು ಸಚಿನ್ ಕುಮಾರ್(25) ಎಂದು ಗುರುತಿಸಲಾಗಿದೆ. ಈತ ಸಿಧೌಲಿಯ ಕಾಸ್ಬಾ ಬಜಾರ್ ಪ್ರದೇಶದ ನಿವಾಸಿ. ಆರೋಪಿಗಳನ್ನು ಉಮಾ, ರೋಹಿತ್ ಮತ್ತು ಗೋವಿಂದ್ ಎಂದು ಗುರುತಿಸಲಾಗಿದೆ. ಮೂವರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಓರ್ವ ಪರಾರಿಯಾಗಿದ್ದಾನೆ.

    ಭಾನುವಾರ ರಾತ್ರಿ ಸಚಿನ್ ತನ್ನ ಸಾಕು ನಾಯಿಯೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಮೂವರು ತಡೆದಿದ್ದಾರೆ. ಈ ವೇಳೆ ಮೂವರಿಗೆ ಶ್ವಾನ ಗದರಿಸಿದೆ. ಇದು ಅವರನ್ನು ಸಿಟ್ಟಿಗೇಳುವಂತೆ ಮಾಡಿದೆ. ಅಲ್ಲದೆ ಮೂವರು ಕೋಪದಿಂದ ಸಚಿನ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಇದರಿಂದ ಗಾಬರಿಗೊಂಡ ಸಚಿನ್ ಜೋರಾಗಿ ಕಿರುಚಿಕೊಂಡಿದ್ದಾರೆ. ಕೂಡಲೇ ಸಚಿನ್ ಸಹೋದರರಾದ ಸೋನು ಹಾಗೂ ಸುನಿಲ್ ಸಹಾಯಕ್ಕಾಗಿ ಧಾವಿಸಿದ್ದಾರೆ. ಈ ವೇಳೆ ಅವರು ಕೂಡ ಆರೋಪಿಗಳಿಂದ ಥಳಿಸಲ್ಪಟ್ಟರು. ಅದಾಗಲೇ ಸ್ಥಳೀಯರು ಜಮಾಯಿಸಿದ್ದು, ಆರೋಪಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ.

    ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಸಚಿನ್ ಮಾತ್ರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

  • ಅಮಿತ್ ಶಾ ತಿಳುವಳಿಕೆಯನ್ನು ಪ್ರಶ್ನಿಸುವ ಹಾಗಿಲ್ಲ- ಮಾಧುಸ್ವಾಮಿ

    ಅಮಿತ್ ಶಾ ತಿಳುವಳಿಕೆಯನ್ನು ಪ್ರಶ್ನಿಸುವ ಹಾಗಿಲ್ಲ- ಮಾಧುಸ್ವಾಮಿ

    ಮಂಡ್ಯ: ರಾಜ್ಯದಲ್ಲಿ ಮೂವರು ಉಪಮುಖ್ಯಮಂತ್ರಿಗಳಿರುವುದಕ್ಕೆ ಒಬ್ಬೊಬ್ಬರು ಒಂದೊಂದು ಅಭಿಪ್ರಾಯವನ್ನು ಹೇಳುತ್ತಿದ್ದಾರೆ. ಮೇಲಿನವರು ಏನೋ ಒಂದು ತೀರ್ಮಾನ ತೆಗೆದುಕೊಂಡಿದ್ದಾರೆ ಎಂದರೆ, ಅವರಿಗೆ ನಮಗಿಂತ ಜಾಸ್ತಿ ತಿಳುವಳಿಕೆ ಇದೆ ಎಂದು ಭಾವಿಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ತಿಳಿಸಿದ್ದಾರೆ.

    ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀನಿವಾಸ್ ಪ್ರಸಾದ್ ಅವರು ನೀಡುರುವುದು ವೈಯಕ್ತಿಕ ಅಭಿಪ್ರಾಯವಾಗಿದೆ. ಒಬ್ಬೊಬ್ಬರ ಅಭಿಪ್ರಾಯಗಳು ಒಂದು ರೀತಿ ಇರುತ್ತವೆ. ಮೇಲೆ ಇರುವವರು ತೀರ್ಮಾನ ತೆಗೆದುಕೊಂಡಾಗ ನಮಗಿಂತ ಜಾಸ್ತಿ ತಿಳುವಳಿಕೆ ಇದೆ ಎಂದು ಭಾವಿಸುತ್ತೇನೆ ಎಂದರು.

    ನಾವು ಅಮಿತ್ ಶಾ ಅವರ ತಿಳುವಳಿಕೆಯನ್ನು ಪ್ರಶ್ನಿಸುವ ಹಾಗೆ ಇಲ್ಲ. ಮೇಲಿನವರು ಯಾವ ಯಾವ ಕಾರಣಕ್ಕೆ ಮಾಡುತ್ತಾರೆ ಎಂದು ಗೊತ್ತಿಲ್ಲ. ಅವರು ತೀರ್ಮಾನ ತೆಗೆದುಕೊಂಡಿರುವುದು ಪಕ್ಷಕ್ಕೆ ಒಳ್ಳೆಯಾದಾಗುತ್ತದೆ ಎಂದು ನಾನು ತಿಳಿದುಕೊಂಡಿದ್ದೇನೆ. ಇದೇ ವೇಳೆ ಮೂವರು ಡಿಸಿಎಂ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಭಿನ್ನಮತ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಚಿವರು, ಪಂಚಾಯ್ತಿ ಸದಸ್ಯ ಆದಾಗ ಅಧ್ಯಕ್ಷ ಆಗಬೇಕು ಎಂದು ಇರುತ್ತದೆ. ಹಾಗೆಯೇ ಶಾಸಕನಾದಾಗ ಮಂತ್ರಿ ಆಗಬೇಕು ಅನ್ನೋದು ಸಹಜ ಎಂದು ಹೇಳಿದರು.

    ಕೇಂದ್ರದಿಂದ ಪ್ರವಾಹದ ಪರಿಹಾರ ಕುರಿತು ಇದೇ ವೇಳೆ ಮಾತನಾಡಿದ ಅವರು, ಪ್ರವಾಹ ಪೀಡಿತರಿಗೆ ನೆರವು ನೀಡಲು ಕಮಿಟಿ ಮಾಡಿ ತೀರ್ಮಾನ ಮಾಡಲಾಗಿದೆ. ತುರ್ತಾಗಿ ಮಾಡಬೇಕಾದದ್ದನ್ನು ರಾಜ್ಯ ಸರ್ಕಾರ ಮಾಡಿದೆ. 32 ಸಾವಿರ ಕೋಟಿ ನಷ್ಟ ಆಗಿದೆ ಎಂದು ಸಮೀಕ್ಷೆ ಮಾಡಿದ್ದೇವೆ. 7 ರಂದು ಮೋದಿ ಅವರು ಬೆಂಗಳೂರಿಗೆ ಬರಲಿದ್ದಾರೆ. ಅಂದು ನಾವು ಈ ಬಗ್ಗೆ ಪ್ರಸ್ತಾಪ ಮಾಡುತ್ತೇವೆ ಎಂದು ತಿಳಿಸಿದರು.

  • ವಿಷಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

    ವಿಷಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

    ಹಾಸನ: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾಸನದ ಅರಕಲಗೂಡಿನ ದೊಡ್ಡನಾಯಕನಹಳ್ಳಿಯಲ್ಲಿ ನಡೆದಿದೆ.

    ಗ್ರಾಮದ ಕೃಷ್ಣ(50), ಪತ್ನಿ ಮಂಜುಳಾ(40) ಮತ್ತು ಪುತ್ರಿ ಭೂಮಿಕಾ(21) ಮೃತ ದುರ್ದೈವಿಗಳು. ಆತ್ಮಹತ್ಯೆಗೂ ಮುನ್ನ ಕುಟುಂಬ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಮೂವರು ಸದಸ್ಯರು ಮನನೊಂದು ಆತ್ಮಹತ್ಯೆಗೆ ಶರಣಾಗಿರುವುದಾಗಿ ಹೇಳಿಕೊಂಡಿದ್ದಾರೆ.

    ವೃತ್ತಿಯಲ್ಲಿ ಕೃಷಿಕರಾಗಿದ್ದ ಕೃಷ್ಣ, ತಮ್ಮ ಪುತ್ರಿಯ ಬಗ್ಗೆ ಅಪಪ್ರಚಾರ ಕುರಿತು ಬೇಸರದಿಂದ ಇದ್ದರು ಎನ್ನಲಾಗುತ್ತಿದೆ. ಕೆಲವು ದಿನಗಳ ಹಿಂದೆ ಕೃಷ್ಣರ ಮಗನನ್ನು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದರಿಂದ ಅಮಾನಿತರಾದ ಕುಟುಂಬಸ್ಥರು ವಿಷ ಸೇವಿಸಿದ್ದಾರೆ ಎಂದು ಮಾತುಗಳು ಕೂಡ ಕೇಳಿ ಬರುತ್ತಿವೆ.

    ಆತ್ಮಹತ್ಯೆಯ ಕಾರಣ ಕುರಿತು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಅರಕಲಗೂಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv