Tag: ಮೃತ

  • ಸೂರ್ಯನೊಬ್ಬನಿದ್ದರೆ ಆಹಾರ ಬೇಡ- ಅಚ್ಚರಿಯ ಸಾಧಕ ನಿಧನ

    ಸೂರ್ಯನೊಬ್ಬನಿದ್ದರೆ ಆಹಾರ ಬೇಡ- ಅಚ್ಚರಿಯ ಸಾಧಕ ನಿಧನ

    ತಿರುವನಂತಪುರಂ: ಸೂರ್ಯನೊಬ್ಬನಿದ್ದರೆ ಆಹಾರವೇ ಬೇಡಾ ಎನ್ನುತ್ತಾ 27 ವರ್ಷದಿಂದ ಉಪಾಸವಿದ್ದು, ಬದುಕಿದ ಹಡಗು ಉದ್ಯಮಿ ಹೀರಾ ರತನ್ ಮಾಣೆಕ್ ಮೃತಪಟ್ಟಿದ್ದಾರೆ.

    ಹೀರಾ ರತನ್ ಮಾಣೆಕ್(84) ಮೃತರಾಗಿದ್ದಾರೆ. 1995ರಿಂದ ಸರಿಸುಮಾರು 25 ವರ್ಷಗಳ ಕಾಲ ಆಹಾರ ಸೇವನೆ ಮಾಡದೇ ಜೀವಿಸುತ್ತಿದ್ದರು.

    ಮಾಣೆಕ್ ಹುಟ್ಟಿ ಬೆಳದದ್ದು ಕೇರಳ ಕೋಯಿಕ್ಕೋಡ್‍ನಲ್ಲಿ. ಮೂಲತಃ ಗುಜರಾತ್ ಕಚ್‍ನಿಂದ ಕೇರಳಕ್ಕೆ ವಲಸೆ ಬಂದಿದ್ದರು. 1962ರಲ್ಲಿ ಪಾಂಡಿಚೇರಿಯ ಅರಬಿಂದೋ ಆಶ್ರಮಕ್ಕೆ ಭೇಟಿ ನೀಡಿದ್ದರು. ಆಗ ಸೌರ ಶಕ್ತಿ ಚಿಕಿತ್ಸೆ ಬಗ್ಗೆ ತಿಳಿದುಕೊಂಡಿದ್ದರು. ನಂತರ ಅವರೆ ಸೂರ್ಯನ ಧ್ಯಾನ ಮಾಡಲು ಪ್ರಾರಂಭಿಸಿದರು. ಸೂರ್ಯೋದಯ, ಸೂರ್ಯಾಸ್ತದ ವೇಳೆ ಸೂರ್ಯನನ್ನು ಬರಿಗಣ್ಣಿನಿಂದ ನೋಡುವುದು ಇವರ ಆರಾಧನ ಕ್ರಮವಾಗಿತ್ತು. ಇದನ್ನೂ ಓದಿ: ಪಂಡಿತರಿಗಿಂತ ಹೆಚ್ಚಾಗಿ ಮುಸ್ಲಿಮರು ಕಾಶ್ಮೀರದಲ್ಲಿ ಹತ್ಯೆಯಾಗಿದ್ದಾರೆ: ಕೇರಳ ಕಾಂಗ್ರೆಸ್‌

    ಹೀಗೆ ಸೂರ್ಯನ ಆರಾಧನೆ ಮಾಡುತ್ತಾ, ಆರಂಭದಲ್ಲಿ ಸೂರ್ಯನನ್ನು ನೋಡುವುದು ಕೆಲವು ಸೆಕೆಂಡುಗಳು ತೆಗೆದುಕೊಳ್ಳುತ್ತದೆ. ಆದರೆ ಏಳು ತಿಂಗಳೊಳಗೆ ಅರ್ಧ ಘಂಟೆಯವರೆಗೆ ಹೆಚ್ಚಿಸಬಹುದು. ಒಂಬತ್ತು ತಿಂಗಳೋಳಗೆ ದೇಹದ ಶಕ್ತಿ ಹೆಚ್ಚಾಗುತ್ತದೆ. ಆಗ ಆಹಾರ ತ್ಯಜಿಸಬಹುದು ಎಂದು ಅವರು ಹೇಳಿದ್ದರು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್

    1995ರಲ್ಲಿ 213 ದಿನಗಳ ಕಾಲ ಉಪವಾಸ, ನಂತರ 200, 411 ದಿನಗಳ ಕಾಲ ಉಪವಾಸ ಮಾಡಿದ್ದರು. ಜಾಗತಿಕವಾಗಿ ಗಮನ ಸೆಳೆದಿದ್ದಾರೆ. ಇದಾದ ನಂತರ ಅವರ ಮೇಲೆ ಐಎಂಎ ಮುಖ್ಯಸ್ಥರ ನೇತೃತ್ವದಲ್ಲಿ 21 ವೈದ್ಯರು ಮೇಲ್ವಿಚಾರಣೆ ಮಾಡಿದ್ದರು.

    ಪೆನ್ಸಿಲ್ವೇನಿಯಾ ಮತ್ತು ಥಾಮಸ್ ಜೆಫರ್ಸನ್ ವಿಶ್ವವಿದ್ಯಾನಿಲಯಗಳ ಆಹ್ವಾನದ ಮೇರೆಗೆ ಮಾಣೆಕ್ ಅವರು ಉಪನ್ಯಾಸಗಳನ್ನು ನೀಡಲು ಯೂಎಸ್‍ಗೂ ಹೋಗಿ ಬಂದಿದ್ದರು. ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರಕ್ಕೆ ಭೇಟಿ ನೀಡಿದ್ದರು. ಯುರೋಪ್ ಮತ್ತು ಅಮೆರಿಕದಲ್ಲಿ ನಡೆದ ಹಲವಾರು ಕಾರ್ಯಾಗಾರಗಳಲ್ಲಿ ಇವರು ಭಾಗವಹಿಸಿದ್ದರು. ಈ ವಿಷಯದ ಸಂಬಂಧ ಅವರು ಐವತ್ತಕ್ಕೂ ಹೆಚ್ಚು ದೇಶಗಳಿಗೆ ಭೇಟಿ ನೀಡಿದ್ದರು. ಇದನ್ನೂ ಓದಿ : ಉಪೇಂದ್ರ ಅವರ ಹೊಸ ಸಿನಿಮಾದ ಪೋಸ್ಟರ್ : ಅಸಲಿನಾ? ನಕಲಾ?

    ಸೂರ್ಯನ ಆರಾಧಾಧನೆಯನ್ನು ಅಭ್ಯಾಸ ಮಾಡುವ ಗಗನಯಾತ್ರಿಗಳು ಆಹಾರವಿಲ್ಲದೆ ಬಾಹ್ಯಾಕಾಶದಲ್ಲಿ ಹೆಚ್ಚು ಕಾಲ ಉಳಿಯಲು ಸಹಾಯಮಾಡುತ್ತದೆ ಎಂದು ಅವರು ತಮ್ಮ ಅನುಭವನನ್ನು ಹಂಚಿಕೊಂಡಿದ್ದರು. ಈ ಪ್ರಯೋಗಕ್ಕೆ ಭಾರತದಲ್ಲಿ ಸೂಕ್ತ ಪರಿಗಣನೆ ಸಿಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

  • ಎರಡು ಬೈಕ್‍ಗಳ ಮುಖಾಮುಖಿ ಡಿಕ್ಕಿ – ಮೂವರು ಸಾವು, ಇಬ್ಬರಿಗೆ ಗಾಯ

    ಎರಡು ಬೈಕ್‍ಗಳ ಮುಖಾಮುಖಿ ಡಿಕ್ಕಿ – ಮೂವರು ಸಾವು, ಇಬ್ಬರಿಗೆ ಗಾಯ

    ಬೆಳಗಾವಿ/ಚಿಕ್ಕೋಡಿ: ಎರಡು ಬೈಕ್‍ಗಳು ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟು, ಇಬ್ಬರಿಗೆ ಗಾಯವಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಗ್ರಾಮದ ಬಳಿ ನಡೆದಿದೆ.

    ಶಂಕರ್ ಘಾಟಗೆ, ಬೀರಪ್ಪಾ ಖೋತ ಹಾಗೂ ಪ್ರವೀಣ್ ಪಾಟೀಲ್ ಮೃತ ದುರ್ದೈವಿಗಳು. ಮೃತಪಟ್ಟ ಮೂವರು ಚಿಕ್ಕೋಡಿ ತಾಲೂಕಿನ ವಡರಾಳ ಹಾಗೂ ಚಿಂಚಣಿ ಗ್ರಾಮದ ನಿವಾಸಿಗಳು. ಈ ಅಪಘಾತದಲ್ಲಿ ಜಾನವ್ವಾ ಬಬಲೇಶ್ವರ(9) ಹಾಗೂ ಲಕ್ಷ್ಮೀ ಬಬಲೇಶ್ವರ(32) ಗಂಭೀರವಾಗಿ ಗಾಯಗೊಂಡಿದ್ದಾರೆ.

    ತಾಯಿ ಲಕ್ಷ್ಮಿ ಮತ್ತು ಮಗಳು ಜಾನವ್ವಾಗೆ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳು ಚಿಕ್ಕೋಡಿ ತಾಲೂಕಿನ ವಡರಾಳ ಗ್ರಾಮದ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಓಮ್ನಿ

    ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಓಮ್ನಿ

    ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು 50 ಅಡಿ ಆಳದ ಕಂದಕಕ್ಕೆ ಉರುಳಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ.

    ಇಂದು ಬೆಳಗಿನ ಜಾವ 5 ಗಂಟೆಗೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಸಮೀಪದ ಮಳಿಗೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಮೈಸೂರು ಮೂಲದ ಲೀಲಾವತಿ(54) ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಗಾಯಗೊಂಡಿದ್ದಾರೆ.

    ಲೀಲಾವತಿ ಅವರ ಕುಟುಂಬ ಮೈಸೂರಿನಿಂದ ಶೃಂಗೇರಿಗೆ ಬಂದಿದ್ದರು. ಶೃಂಗೇರಿಗೆ ಹೋಗುವಾಗ ದಾರಿ ತಿಳಿಯದೇ ಜಯಪುರುದ ಮಾರ್ಗದ ಬಳಿ ಹೋಗಿದ್ದಾರೆ. ಅಲ್ಲಿಂದ ಕೊಪ್ಪಗೆ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಂದಕಕ್ಕೆ ಉರುಳಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರು ಗಾಯಾಳುಗಳನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಬಗ್ಗೆ ಜಯಪುರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕರ್ತವ್ಯದ ವೇಳೆ ಹೃದಯಾಘಾತದಿಂದ ಗದಗ ಯೋಧ ವಿಧಿವಶ

    ಕರ್ತವ್ಯದ ವೇಳೆ ಹೃದಯಾಘಾತದಿಂದ ಗದಗ ಯೋಧ ವಿಧಿವಶ

    ಗದಗ: ಕರ್ತವ್ಯ ನಿರತ ವೇಳೆಯೇ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದ ಯೋಧರೊಬ್ಬರು ಅಸ್ಸಾಂನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ಬಸನಗೌಡ ಪಾಟೀಲ್ (39) ಮೃತ ಯೋಧ. ಮೂಲತಃ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮದವರಾಗಿದ್ದು, ಕಳೆದ 19 ವರ್ಷದಿಂದ ಸಿಆರ್‍ಪಿಎಫ್ ನಲ್ಲಿ ಯೋಧರಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೇ ಅವರ ನಿವೃತ್ತಿಗೆ ಕೇವಲ ಒಂದೇ ವರ್ಷ ಬಾಕಿ ಇರುವಾಗಲೇ ನಿಧನರಾಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳುತ್ತಲೇ, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಇಂದು ಅಸ್ಸಾಂನಲ್ಲಿ ಕರ್ತವ್ಯದಲ್ಲಿರುವಾಗಲೇ ಬಸನಗೌಡ ಪಾಟೀಲ್‍ಗೆ ಹೃದಯಾಘಾತವಾಗಿದ್ದು, ಕೂಡಲೇ ಸಿಬ್ಬಂದಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಸುನೀಗಿದ್ದಾರೆ. ಯೋಧ ಮೃತಪಟ್ಟ ಸುದ್ದಿಯನ್ನು ಸಿಆರ್‍ಪಿಎಫ್ ಅಧಿಕಾರಿಗಳು ಜಿಲ್ಲಾಡಳಿತ ಕಚೇರಿಗೆ ಮಾಹಿತಿ ನೀಡಿದ್ದು, ಸೋಮವಾರ ಸಾಯಂಕಾಲ ಸ್ವಗ್ರಾಮಕ್ಕೆ ಬಸನಗೌಡ ಪಾಟೀಲ್‍ರ ಪಾರ್ಥಿವ ಶರೀರ ಬರಲಿದೆ. ಜಿಲ್ಲಾಡಳಿತ ಯೋಧನ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜನತೆಗೆ ಸಾವಿನ ಭಾಗ್ಯ – ವೈದ್ಯರ ಪ್ರತಿಭಟನೆಗೆ ಮೂವರು ಮಕ್ಕಳು ಸೇರಿ 7 ಬಲಿ

    ಜನತೆಗೆ ಸಾವಿನ ಭಾಗ್ಯ – ವೈದ್ಯರ ಪ್ರತಿಭಟನೆಗೆ ಮೂವರು ಮಕ್ಕಳು ಸೇರಿ 7 ಬಲಿ

    ಬೆಂಗಳೂರು: ಮಂಗಳವಾರ ಮಕ್ಕಳ ದಿನಾಚರಣೆ ಒಂದು ಕಡೆಯಾದರೆ ಮತ್ತೊಂದು ಕಡೆ, ವೈದ್ಯರು ಮತ್ತು ಸರ್ಕಾರ ನಡುವಿನ ಹೋರಾಟ ಮಕ್ಕಳ ಜೀವವನ್ನೇ ಪರೋಕ್ಷವಾಗಿ ಬಲಿ ಪಡೆದಿದೆ.

    ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ ವಿಚಾರದಲ್ಲಿ ಸರ್ಕಾರ ಹಾಗೂ ವೈದ್ಯರ ಜಟಾಪಟಿಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ ಮೂವರು ಮಕ್ಕಳು ಎನ್ನುವುದು ದುರದೃಷ್ಟಕರ ಸಂಗತಿ. ಮಸೂದೆ ಮಂಡಿಸಿಯೇ ಸಿದ್ಧ ಎಂದು ಸರ್ಕಾರ ಬಿಗಿಪಟ್ಟು ಹಿಡಿದಿದ್ದರೆ, ಮಸೂದೆ ವಿರೋಧಿಸಿ ವೈದ್ಯರು ಬೀದಿಗೆ ಇಳಿದ ಪರಿಣಾಮ ಅಮಾಯಕರು ಪರಿತಪಿಸುವಂತಾಗಿದೆ.

    ರಾಜ್ಯದ ವಿವಿಧೆಡೆ ವೈದ್ಯರು ಲಭ್ಯವಿಲ್ಲದಿರುವುದರಿಂದ, ಸೂಕ್ತ ಸೌಲಭ್ಯಗಳಿಲ್ಲದೇ ಜನಸಾಮಾನ್ಯರು ಜೀವ ತೆತ್ತಿದ್ದಾರೆ. ವಿಧೇಯಕ ವಿಚಾರದಲ್ಲಿ ವೈದ್ಯರೊಂದಿಗೆ ಜಿದ್ದಿಗೆ ಬಿದ್ದಿರುವ ಸರ್ಕಾರ, ರಾಜ್ಯದ ಜನತೆಗೆ ಸಾವಿನ ಭಾಗ್ಯ ಕರುಣಿಸಿದೆ.

    ಎಲ್ಲಿ ಯಾರು ಮೃತಪಟ್ಟಿದ್ದಾರೆ?
    ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ 3 ತಿಂಗಳ ಇಬ್ರಾಹಿಂ ಹಾಸನದಲ್ಲಿ ಸಾವನ್ನಪ್ಪಿದ್ದರೆ, ಧಾರವಾಡದಲ್ಲಿ ಡೆಂಗ್ಯೂ ಜ್ವರಕ್ಕೆ ಸರಿಯಾಗಿ ಚಿಕಿತ್ಸೆ ಸಿಗದೇ 12 ವರ್ಷದ ವೈಷ್ಣವಿ ಮೃತಪಟ್ಟಿದ್ದಾಳೆ.

    ಬೆಳಗಾವಿಯ ಅಥಣಿಯಲ್ಲಿ 12 ವರ್ಷದ ಕಲ್ಲವ್ವಾ ಅಂಬಿ ಮೃತಪಟ್ಟರೆ, ತುಮಕೂರಿನಲ್ಲಿ 26 ವರ್ಷದ ಜ್ಯೋತಿ ಹೃದಯಾಘಾತಗೊಂಡು ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಸಾವನ್ನಪ್ಪಿದ್ದಾರೆ.

    ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಅಪಘಾತದಿಂದಾಗಿ ಗಂಭೀರವಾಗಿ ಗಾಯಗೊಂಡಿದ್ದ 25 ವರ್ಷದ ಮಹೇಶ್ ವಾಘ್ಮೋರ್ ಸಾವನ್ನಪ್ಪಿದ್ದರೆ, ಬಾಗಲಕೋಟೆ ಜಿಲ್ಲೆಯ ಇಳಕಲ್ ನಲ್ಲಿ 52 ವರ್ಷದ ಶೇಖಪ್ಪ ಎಂಬುವರು ಹೃದಯಾಘಾತದಿಂದ ಚಿಕಿತ್ಸೆ ಸಿಗದೆ ಮೃತ ಪಟ್ಟಿದ್ದಾರೆ. ಕೊಪ್ಪಳದಲ್ಲಿ ಹೃದಯಾಘಾತದಿಂದ ಚಿಕಿತ್ಸೆ ಸಿಗದೆ 55 ವರ್ಷದ ಗ್ಯಾನಪ್ಪ ಸಾವನ್ನಪ್ಪಿದ್ದಾರೆ.

    ಇದನ್ನೂ ಓದಿ: ಪರಿಷತ್‍ನಲ್ಲಿ ಕಣ್ಣೀರಿಟ್ಟ ರಮೇಶ್ ಕುಮಾರ್: ಪರಿಶೀಲನಾ ಸಮಿತಿಯ ವರದಿಯಲ್ಲಿ ಏನಿದೆ?

  • ಆರ್ಮರ್ ಟ್ಯಾಂಕ್ ಅಪಘಾತದಲ್ಲಿ ಚಿಕ್ಕೋಡಿ ಯೋಧ ಮೃತ- ಸ್ವಗ್ರಾಮದಲ್ಲಿ ಅಂತಿಮ ದರ್ಶನ

    ಆರ್ಮರ್ ಟ್ಯಾಂಕ್ ಅಪಘಾತದಲ್ಲಿ ಚಿಕ್ಕೋಡಿ ಯೋಧ ಮೃತ- ಸ್ವಗ್ರಾಮದಲ್ಲಿ ಅಂತಿಮ ದರ್ಶನ

    ಚಿಕ್ಕೋಡಿ: ರಾಜಸ್ಥಾನದ ಮಿಲಿಟರಿ ನೆಲೆಯ 422ನೇ ಎಂಜಿನಿಯರ್ ಇಂಡಿಪೆಂಡೆಂಟ್ ಸ್ಕಾಡ್ ನ ಆರ್ಮರ್ ಟ್ಯಾಂಕ್ ಅಪಘಾತದಲ್ಲಿ ಯೋಧರೊಬ್ಬರು ಆಗಸ್ಟ್ 7ರಂದು ಮೃತಪಟ್ಟಿದ್ದರು.

    ಚಿಕ್ಕೋಡಿ ತಾಲೂಕು ಕರೋಶಿ ಗ್ರಾಮದ ಯೋಧ ಬಸವರಾಜ ಗುರುಸಿದ್ದ ಉಪಾಸೆ ಅವರ ಪಾರ್ಥಿವ ಶರೀರ ಇಂದು ಬೆಳಗಿನ ಜಾವ 6 ಘಂಟೆಗೆ ಸ್ವಗ್ರಾಮ ಕರೋಶಿ ತಲುಪಿದೆ. ಗ್ರಾಮದ ಸಿಎಸ್‍ಎಸ್ ಪ್ರೌಢ ಶಾಲೆಯಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಿದ್ದು, ಸಾವಿರಾರು ಜನ ಭಾಗವಹಿಸಿದ್ರು. ಗ್ರಾಮದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಶಾಲಾ ಮಕ್ಕಳು ಸೇರಿದಂತೆ ಇಡೀ ಗ್ರಾಮಸ್ಥರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.

    ಇಡೀ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ರಾಯಬಾಗ ಶಾಸಕ ದುರ್ಯೊಧನ ಐಹೊಳೆ, ವಿವಿಧ ಮಠಾಧೀಶರು ಸೇರಿದಂತೆ ಹಲವು ಗಣ್ಯರು ಅಂತಿಮ ದರ್ಶನ ಪಡೆದಿದ್ದು, ಗ್ರಾಮದ ಪ್ರಮುಖ ರಸ್ತೆಯ ಮೂಲಕ ಅಂತಿಮ ಯಾತ್ರೆ ಮುಖಾಂತರ 11 ಘಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ.

     

  • ಡೆಂಘೀಗೆ ಬಾಗಲಕೋಟೆಯ ಯೋಧ ಬಲಿ

    ಡೆಂಘೀಗೆ ಬಾಗಲಕೋಟೆಯ ಯೋಧ ಬಲಿ

    ಬಾಗಲಕೋಟೆ: ಜಮ್ಮು ಕಾಶ್ಮೀರದಲ್ಲಿ ಸೇವೆಯಲ್ಲಿದ್ದ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಮ್ಮಡ ಗ್ರಾಮದ ಸಿಆರ್‍ಪಿಎಫ್ ಯೋಧರೊಬ್ಬರು ಡೆಂಘೀ ಜ್ವರದಿಂದ ಮೃತಪಟ್ಟಿದ್ದಾರೆ.

    ಮಂಜುನಾಥ್ ಮೇತ್ರಿ(30) ಮೃತಪಟ್ಟ ಯೋಧ. ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಯ ಶಾಂತಿ ಮುಕಂದ್ ಆಸ್ಪತ್ರೆಗೆ ದಾಖಲಾಗಿದ್ದ ಮಂಜುನಾಥ್ ಅವರಿಗೆ ಡೆಂಘೀ ಕಾಣಿಸಿಕೊಂಡು ಮೃತಪಟ್ಟಿದ್ದಾರೆ.

    8 ವರ್ಷ 9 ತಿಂಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಂಜುನಾಥ್ ಅವರು ಜಮ್ಮುಕಾಶ್ಮೀರದ ಸಿಆರ್‍ಪಿಎಫ್‍ನ 28ನೇ ಬೆಟಾಲಿಯನ್‍ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು.

    ಮಂಜುನಾಥ್ ಅವರ ಪಾರ್ಥಿವ ಶರೀರ ದೆಹಲಿಯಿಂದ ವಿಮಾನದ ಮೂಲಕ ಬೆಳಗಾವಿಗೆ ಸಂಜೆ ಬರಲಿದ್ದು, ಬೆಳಗಾವಿಯಿಂದ ರಸ್ತೆ ಮಾರ್ಗವಾಗಿ ತಮ್ಮ ಸ್ವಗ್ರಾಮವಾದ ಚಿಮ್ಮಡ ಗ್ರಾಮಕ್ಕೆ ಪಾರ್ಥಿವ ಶರೀರ ತರಲು ಸಿದ್ಧತೆ ನಡೆಯುತ್ತಿದೆ.