Tag: ಮೆಗಾ ಸ್ಟಾರ್ ಚಿರಂಜೀವಿ

  • ಟಾಲಿವುಡ್‍ಗೂ ಎಂಟ್ರಿ ಕೊಟ್ಟ ಕೆವಿಎನ್ – ಮೆಗಾಸ್ಟಾರ್‌ಗೆ ಸಿನಿಮಾ ನಿರ್ಮಾಣ

    ಟಾಲಿವುಡ್‍ಗೂ ಎಂಟ್ರಿ ಕೊಟ್ಟ ಕೆವಿಎನ್ – ಮೆಗಾಸ್ಟಾರ್‌ಗೆ ಸಿನಿಮಾ ನಿರ್ಮಾಣ

    ಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಕೆವಿಎನ್ (KVN Productions) ಇದೀಗ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದೆ. ನಿರ್ಮಾಣ ಹಾಗೂ ವಿತರಣೆಯಲ್ಲಿ ದೊಡ್ಡ ಹೆಸರು ಮಾಡಿರುವ ಈ ಸಂಸ್ಥೆ ಈಗ ಟಾಲಿವುಡ್ (Tollywood) ಮೆಗಾ ಸ್ಟಾರ್ ಚಿರಂಜೀವಿ (Chiranjeevi) ಅವರಿಗೆ ಸಿನಿಮಾ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದೆ. ಅಂದಹಾಗೆ ಬಹುನಿರೀಕ್ಷಿತ ಟಾಕ್ಸಿಕ್, ಕೆಡಿ ಸಿನಿಮಾ ನಿರ್ಮಿಸುತ್ತಿರುವ ಕೆವಿಎನ್ ಸಂಸ್ಥೆಯಿಂದ ಮತ್ತೊಂದು ಹೊಸ ಅಧ್ಯಾಯ ಶುರುವಾಗಲಿದೆ.

    ಕೆವಿಎನ್ ಸಂಸ್ಥೆ ತಮಿಳಿನಲ್ಲಿ ದಳಪತಿ ವಿಜಯ್ ನಟನೆಯ `ಜನ ನಾಯಗನ್’ ಚಿತ್ರ ನಿರ್ಮಾಣ ಮಾಡುವ ಮೂಲಕ ತಮಿಳು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದೆ. ಇದೀಗ ತೆಲುಗು ಚಿತ್ರರಂಗದತ್ತ ಮುಖ ಮಾಡಿರುವ ಕೆವಿಎನ್ ಸಂಸ್ಥೆ, ಚಿರಂಜೀವಿ ಅವರ 158ನೇ ಸಿನಿಮಾಗೆ ಬಂಡವಾಳ ಹೂಡಲು ಮುಂದಾಗಿದೆ. ಮೆಗಾಸ್ಟಾರ್ ಚಿರಂಜೀವಿ ಅವರ 70ನೇ ವರ್ಷದ ಹುಟ್ಟುಹಬ್ಬದ ವಿಶೇಷವಾಗಿ ಈ ಪ್ರಾಜೆಕ್ಟ್ ಅನೌನ್ಸ್ ಮಾಡಲಾಗಿದೆ. ಈ ಹಿಂದೆ `ವಾಲ್ತೇರು ವೀರಯ್ಯ’ ಸಿನಿಮಾ ಮಾಡಿದ್ದ ಬಾಬಿ ಕೊಲ್ಲಿ ಮತ್ತೊಮ್ಮೆ ಚಿರುಗೆ ಆ್ಯಕ್ಷನ್‍ಕಟ್ ಹೇಳುತ್ತಿದ್ದಾರೆ. ಇದನ್ನೂ ಓದಿ: ಡೆವಿಲ್ ಸಿನಿಮಾ ರಿಲೀಸ್‌ಗೆ ಮುಹೂರ್ತ ಫಿಕ್ಸ್

    ಚಿರಂಜೀವಿ-ಬಾಬಿ-ಕೆವಿಎನ್ ಕಾಂಬಿನೇಷನ್ ಸಿನಿಮಾ ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ ಮೂಡಿ ಬರಲಿದೆ. ಈ ಚಿತ್ರವನ್ನು ದಸರಾಗೆ ಲಾಂಚ್ ಮಾಡಲು ಚಿತ್ರತಂಡ ಭರ್ಜರಿ ಪ್ಯಾನ್ ಹಾಕಿಕೊಂಡಿದ್ದು, ವರ್ಷದ ಕೊನೆಗೆ ಶೂಟಿಂಗ್ ಆರಂಭ ಮಾಡಲು ಸಿದ್ಧತೆ ಮಾಡಿಕೊಂಡಿದೆಯಂತೆ. ಮೆಗಾಸ್ಟಾರ್ ಜೊತೆ ಸಿನಿಮಾ ಮಾಡಲು ಕೈಜೋಡಿಸುವ ಮೂಲಕ ಟಾಲಿವುಡ್‍ಗೂ ಕೆವಿಎನ್ ನಿರ್ಮಾಣ ಸಂಸ್ಥೆ ಎಂಟ್ರಿಕೊಟ್ಟಿದೆ. ಇದನ್ನೂ ಓದಿ: ದರ್ಶನ್ ಜೈಲಲ್ಲಿ – `ಇದ್ರೆ ನೆಮ್ದಿಯಾಗ್ ಇರ್ಬೇಕ್’ ಸಾಂಗ್ ರಿಲೀಸ್

  • ಮೆಗಾ ಪ್ರಿನ್ಸ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ ಗ್ರ್ಯಾಂಡ್‌ ಎಂಗೇಜ್‌ಮೆಂಟ್

    ಮೆಗಾ ಪ್ರಿನ್ಸ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ ಗ್ರ್ಯಾಂಡ್‌ ಎಂಗೇಜ್‌ಮೆಂಟ್

    ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಹಲವು ವರ್ಷಗಳ ಪ್ರೀತಿಗೆ ಟಾಲಿವುಡ್‌ನ ಯಂಗ್ ಕಪಲ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ (Lavanya Tripathi) ಉಂಗುರದ ಮುದ್ರೆ ಒತ್ತಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೂ ಈ ಜೋಡಿ ಬ್ರೇಕ್ ಹಾಕಿದ್ದಾರೆ. ಸದ್ಯ ಯಂಗ್ ಜೋಡಿಯ ಎಂಗೇಜ್‌ಮೆಂಟ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

    ಮೆಗಾ ಪ್ರಿನ್ಸ್ ವರುಣ್-ಲಾವಣ್ಯ ಮೊದಲು ಭೇಟಿಯಾಗಿದ್ದು, 2016ರಲ್ಲಿ ಬಳಿಕ 2017ರಲ್ಲಿ ಇಬ್ಬರು ‘ಮಿಸ್ಟರ್’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್ ವೇಳೆ ವರುಣ್ ತೇಜ್, ಲಾವಣ್ಯ ತ್ರಿಪಾಠಿ ಇಬ್ಬರೂ ಕ್ಲೋಸ್ ಆಗಿದ್ದರು. ಆರಂಭದಲ್ಲಿ ಸ್ನೇಹಿತರಾಗಿದ್ದವರು ಬರಬರುತ್ತಾ ಪ್ರೀತಿಯಲ್ಲಿ ಬಿದ್ದಿದ್ದರು.

    ಇಬ್ಬರೂ ಡೇಟಿಂಗ್ ಮಾಡುತ್ತಿದ್ದರೂ, ಅದು ಪಬ್ಲಿಕ್ ಆಗದಂತೆ ನೋಡಿಕೊಂಡಿದ್ದಾರೆ. ಹಲವು ವರ್ಷಗಳವರೆಗೂ ಇಬ್ಬರೂ ಡೇಟಿಂಗ್ ಮಾಡುತ್ತಿರುವ ವಿಷಯ ಗೊತ್ತೇ ಇರಲಿಲ್ಲ. ಆದರೆ, ‘ಅಂತರಿಕ್ಷಂʼ ಸಿನಿಮಾದ ವೇಳೆ ಇಬ್ಬರ ಬಗ್ಗೆ ಮೊದಲ ಬಾರಿಗೆ ಗಾಳಿಸುದ್ದಿ ಹಬ್ಬಿತ್ತು.ಅಲ್ಲಿಂದ ಎಂಗೇಜ್‌ಮೆಂಟ್ ಆಗುವವರೆಗೂ ರೂಮರ್ ಕಪಲ್ ಆಗಿದ್ದರು. ಇದನ್ನೂ ಓದಿ:4 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಸುಶ್ಮಿತಾ ಸೇನ್ ಸಹೋದರ ರಾಜೀವ್

    ಆಗಾಗ ವರುಣ್, ಲಾವಣ್ಯ ಇಬ್ಬರೂ ಕಾರ್ಯಕ್ರಮಗಳು ಹಾಗೂ ಪಾರ್ಟಿಗಳಲ್ಲಿ ಭೇಟಿಯಾಗುತ್ತಿದ್ದರು. ಇದು ಗಾಳಿಸುದ್ದಿಗೆ ಮತ್ತಷ್ಟು ತುಪ್ಪ ಸುರಿದಂತಾಗಿತ್ತು. ವರುಣ್, ತಮ್ಮ ಪ್ರೀತಿಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಬಯಸಿದ್ದರು. ಹೀಗಾಗಿ ಡಿಸೆಂಬರ್ 15 ಲಾವಣ್ಯ ಹುಟ್ಟುಹಬ್ಬದಂದು ಮದುವೆಗೆ ಪ್ರಪೋಸ್ ಮಾಡಿದ್ದರು. ಎರಡೂ ಮನೆಯವರು ಒಪ್ಪಿದರೂ, ಈ ಜೋಡಿ ಮದುವೆ ಬಗ್ಗೆ ಬಾಯ್ಬಿಟ್ಟಿರಲಿಲ್ಲ.

    ಯಂಗ್ ಜೋಡಿ ವರುಣ್- ಲಾವಣ್ಯ ಅವರು ಹೈದರಾಬಾದ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿ ಎಂಗೇಜ್ ಆಗಿದ್ದಾರೆ. ಜೂನ್ ೯ರ ರಾತ್ರಿ ಎರಡು ಕುಟುಂಬದವರು ಆಪ್ತರಷ್ಟೇ ಭಾಗಿಯಾಗಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ, ರಾಮ್ ಚರಣ್ ಅವರ ಇಡೀ ಕುಟುಂಬ, ಅಲ್ಲು ಅರ್ಜುನ್ ಫ್ಯಾಮಿಲಿ, ವೆಂಕಟೇಶ್ವರ ರಾವ್ ಕುಟುಂಬದವರಷ್ಟೇ ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಸದ್ಯ ಎಂಗೇಜ್ ಆಗಿರುವ ಈ ಜೋಡಿ ಈ ವರ್ಷದ ಅಂತ್ಯದಲ್ಲಿ ಮದುವೆ ಆಗಲಿದ್ದಾರೆ.

     

    View this post on Instagram

     

    A post shared by Lavanya tripathi (@itsmelavanya)

    ಎಂಗೇಜ್‌ಮೆಂಟ್‌ನಲ್ಲಿ (Engagement) ನಟಿ ಲಾವಣ್ಯ ಗಿಳಿ ಹಸಿರು ಸೀರೆಯಲ್ಲಿ ಮಿಂಚಿದ್ರೆ, ವರುಣ್ ಗೋಲ್ಡನ್ ಬಣ್ಣದ ಶೆರ್ವಾನಿಯಲ್ಲಿ ಹೈಲೆಟ್ ಆಗಿದ್ದಾರೆ. ನನ್ನ ಪ್ರೀತಿಯನ್ನ 2016ರಲ್ಲಿಯೇ ಕಂಡುಕೊಂಡಿದ್ದೆ ಎಂದು ನಟಿ ನಿಶ್ಚಿತಾರ್ಥದ ಫೋಟೋ ಸಮೇತ ಪೋಸ್ಟ್ ಮಾಡಿದ್ದಾರೆ. ಹೊಸ ಜೋಡಿಗೆ ಫ್ಯಾನ್ಸ್‌ ಶುಭಕೋರಿದ್ದಾರೆ.

  • ಸದ್ಯಕ್ಕೆ ನಮಗೆ ಮಕ್ಕಳು ಬೇಡ ಎಂದ ರಾಮ್‌ ಚರಣ್‌ ದಂಪತಿ

    ಸದ್ಯಕ್ಕೆ ನಮಗೆ ಮಕ್ಕಳು ಬೇಡ ಎಂದ ರಾಮ್‌ ಚರಣ್‌ ದಂಪತಿ

    ಟಾಲಿವುಡ್‌ನ ಬೆಸ್ಟ್ ಜೋಡಿಗಳಲ್ಲಿ ರಾಮ್ ಚರಣ್ ಮತ್ತು ಉಪಾಸನಾ ಜೋಡಿ ಕೂಡ ಒಂದು. ಈ ಮದುವೆ ಆಗಿ ಹತ್ತು ವರ್ಷಗಳು ಕಳೆದಿದ್ದರು ಮಗು ಹೊಂದಿರದ ಬಗ್ಗೆ ಆಗಾಗ ಸುದ್ದಿಯಾಗುತ್ತಲೇ ಬಂದಿದ್ದಾರೆ. ಇದೀಗ ರಾಮ್ ಚರಣ್ ದಂಪತಿ ಮಕ್ಕಳನ್ನು ಹೊಂದುವ ಕುರಿತು ಸ್ಪಷ್ಟನೆ ನೀಡಿದ್ದಾರೆ.

    ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್‌ಚರಣ್ ಕೂಡ ತಮ್ಮ ಸ್ವಂತ ಪ್ರತಿಭೆಯಿಂದ ಟಾಲಿವುಡ್‌ನಲ್ಲಿ ಗಟ್ಟಿ ನೆಲೆ ಗಿಟ್ಟಿಸಿಕೊಂಡವರು. ಆರ್‌ಆರ್‌ಆರ್ ಸೂಪರ್ ಸಕ್ಸಸ್‌ನಲ್ಲಿರುವ ನಟ ರಾಮ್ ಚರಣ್ ಸದ್ಯ ಎದುರಾಗುತ್ತಿರುವ ಏಕೈಕ ಪ್ರಶ್ನೆ ಮಕ್ಕಳನ್ನ ಹೊಂದುವ ಕುರಿತು ಸಾಕಷ್ಟು ಕಡೆ ಕೇಳಲಾಗುತ್ತಿದೆ. ಇನ್ನು ಉಪಾಸನಾ ಅವರನ್ನ ಕೂಡ ಇದೇ ರೀತಿ ಪ್ರಶ್ನೀಸಲಾಗುತ್ತಿದೆ. ಇದನ್ನೂ ಓದಿ:ಕರಣ್‌ ಜೋಹರ್‌ ನಿರ್ಮಾಣದಲ್ಲಿ ಈ ಸ್ಟಾರ್‌ ನಟನಿಗೆ ನಾಯಕಿಯಾದ ರಶ್ಮಿಕಾ ಮಂದಣ್ಣ

    ರಾಮ್‌ಚರಣ್ ಈಗ ಸಾಕಷ್ಟು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಪತ್ನಿ ಉಪಾಸನಾ ಕೂಡ ಸಾಮಾಜಿಕ ಕಾರ್ಯಗಳ ಮೂಲಕ ಜನಸೇವೆ ಮಾಡ್ತಿದ್ದಾರೆ. ಮೆಗಾಸ್ಟಾರ್ ಪುತ್ರನಾಗಿ ನನ್ನ ಮೇಲು ಸಾಕಷ್ಟು ಜವಾಬ್ದಾರಿಯಿದೆ. ತನ್ನ ಅಭಿಮಾನಿಗಳಿಗೆ ನನ್ನ ಸಿನಿಮಾಗಳಿಂದ ರಂಜಿಸೋದೇ ನನ್ನ ಸದ್ಯದ ಗುರಿ ಅಂತಾ ತಿಳಿಸಿದ್ದಾರೆ. ಪತ್ನಿ ಉಪಾಸನಾ ಇತ್ತೀಚೆಗಷ್ಟೇ ಸದ್ಗುರು ಅವರನ್ನ ಭೇಟಿ ಮಾಡಿದ್ದ ವೇಳೆ ಜನಸಂಖ್ಯೆ ನಿಯಂತ್ರಣಕ್ಕೆ ಮಕ್ಕಳು ಬೇಡ ಅಂದಿದ್ದರು. ಈ ಮೂಲಕ ದಂಪತಿಗಳಿಬ್ಬರು ಸದ್ಯಕ್ಕೆ ಮಕ್ಕಳನ್ನ ಹೊಂದುವ ಕುರಿತು ನಮಗೆ ಯೋಚನೆ ಇಲ್ಲ ಎಂಬುದನ್ನ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಾರ್ಚ್ ನಲ್ಲಿ ರಿಲೀಸ್ ಆಗಲಿರುವ ಬಿಗ್ ಬಜೆಟ್ ಸಿನಿಮಾಗಳಿಗೆ ಮತ್ತೆ ಸಂಕಷ್ಟ

    ಮಾರ್ಚ್ ನಲ್ಲಿ ರಿಲೀಸ್ ಆಗಲಿರುವ ಬಿಗ್ ಬಜೆಟ್ ಸಿನಿಮಾಗಳಿಗೆ ಮತ್ತೆ ಸಂಕಷ್ಟ

    ರಡೂವರೆ ವರ್ಷಗಳಿಂದ ಕೊರೋನಾ ಹಾವಳಿಗೆ ತತ್ತರಿಸಿರುವ ಭಾರತೀಯ ಸಿನಿಮಾ ರಂಗ, ಚೇತರಿಸಿಕೊಳ್ಳಲು ಇನ್ನೂ ಹರಸಾಹಸ ಪಡುತ್ತಿದೆ. ಅಷ್ಟರಲ್ಲಿ ಚಿತ್ರರಂಗಕ್ಕೆ ಕ್ರಿಕೆಟ್ ಎಂಬ ಗುಮ್ಮ ಎದುರಾಗಿದೆ. ಇದನ್ನೂ ಓದಿ : ವಿಕ್ರಾಂತ್ ರೋಣ 2 ಮುನ್ಸೂಚನೆ ಕೊಟ್ಟರಾ ಸುದೀಪ್?

    ಕೋವಿಡ್  ಕಾರಣದಿಂದಾಗಿ ಬಿಗ್ ಬಜೆಟ್ ನ ಸಾಕಷ್ಟು ಚಿತ್ರಗಳು ಮಾರ್ಚ್ ನಲ್ಲಿ ರಿಲೀಸ್ ಆಗಲು ಪ್ಲ್ಯಾನ್ ಆಗಿದ್ದವು. ಅದರಲ್ಲೂ ಮಾರ್ಚ್ ಎರಡನೇ ವಾರದ ನಂತರ ಕನ್ನಡದ ಪುನೀತ್ ರಾಜ್ ಕುಮಾರ್ ನಟನೆಯ ‘ಜೇಮ್ಸ್’ ನಿಂದ ಶುರುವಾಗುತ್ತಿದ್ದ ಈ ಬಿಡುಗಡೆಯ ಜೈತ್ರ ಯಾತ್ರೆ ಕೆಜಿಎಫ್ 2, ತೆಲುಗಿನ ಆರ್.ಆರ್.ಆರ್, ರಾಧೆ ಶ್ಯಾಮ್, ದಳಪತಿ ವಿಜಯ್ ಅವರ ‘ಬೀಸ್ಟ್’, ಮೆಗಾ ಸ್ಟಾರ್ ಚಿರಂಜೀವಿ ಅವರ ‘ಆಚಾರ್ಯ’ ಸೇರಿದಂತೆ ಸಾಕಷ್ಟು ಚಿತ್ರಗಳು ಬಿಡುಗಡೆಗೆ ಸಜ್ಜಾಗಿದ್ದು. ಈಗ ಸರಿಯಾಗಿ ಥಿಯೇಟರ್ ಗೆ ಪೆಟ್ಟುಕೊಡುವಂತೆ ಮಾರ್ಚ್ 27 ರಿಂದ ಮೇ 28 ರವರೆಗೆ. ಬರೋಬ್ಬರು ಒಂದು ತಿಂಗಳ ಕಾಲ ಭಾರತದ ಹೆಸರಾಂತ ಐಪಿಎಲ್ ಪಂದ್ಯಾವಳಿ ಆರಂಭವಾಗಲಿವೆ. ಇದನ್ನೂ ಓದಿ : ಏನಾಯ್ತು ಅಮಿತಾಭ್ ಬಚ್ಚನ್ ಗೆ? ಆತಂಕದಲ್ಲಿ ಅಭಿಮಾನಿಗಳು

    ಒಂದು ತಿಂಗಳ ಕಾಲ ನಿರಂತರವಾಗಿ, ಅದರಲ್ಲೂ ವೀಕೆಂಡ್ ನಲ್ಲೂ ಈ ಕ್ರಿಕೆಟ್ ಹಾವಳಿ ಇರುವುದರಿಂದ, ಜನರು ಚಿತ್ರಮಂದಿರಗಳತ್ತ ಬರುವುದು ಅನುಮಾನ. ಈ ಹಿಂದೆಯೂ ಐಪಿಎಲ್ ಮತ್ತು ಸಾಕಷ್ಟು ಕ್ರಿಕೆಟ್ ಪಂದ್ಯಾವಳಿಗಳು ಸಿನಿಮಾಗಳ ಬಾಕ್ಸ್ ಆಫೀಸಿಗೆ ಭಾರೀ ಹೊಡೆತ ಕೊಟ್ಟಿವೆ. ಹಾಗಾಗಿ ಭಾರೀ ಬಜೆಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ನಿರ್ಮಾಪಕರು, ಐಪಿಎಲ್ ಗೆ ಹಿಡಿಶಾಪ ಹಾಕುವಂತಹ ವಾತಾವರಣ ನಿರ್ಮಾಣವಾಗಿದೆ. ಇದನ್ನೂ ಓದಿ : ಕಂಠೀರವ ಸ್ಟುಡಿಯೋ ಆವರಣದಲ್ಲಿ 14 ಅಡಿ ಎತ್ತರದ ಅಂಬರೀಶ್ ಪ್ರತಿಮೆ

    ಕೇವಲ ಸಿನಿಮಾಗಳಿಗೆ ಮಾತ್ರವಲ್ಲ, ಮನರಂಜನಾ ಮಾಧ್ಯಮಕ್ಕೂ ಐಪಿಎಲ್ ಸಾಕಷ್ಟು ತೊಂದರೆ ಮಾಡಿದೆ. ಹಾಗಾಗಿ ಈ ವೇಳೆಯಲ್ಲಿ ಹೊಸ ಧಾರಾವಾಹಿಗಳಾಗಲಿ, ಹೊಸ ಹೊಸ ಶೋಗಳಾಗಲಿ ಪ್ರಾರಂಭವಾಗುತ್ತಿಲ್ಲ. ಐಪಿಎಲ್ ನಂತರವೇ ಹೊಸ ಹೊಸ ಕಾರ್ಯಕ್ರಮಗಳಿಗೆ ಪ್ಲ್ಯಾನ್ ಮಾಡಲಿವೆಯಂತೆ ಮನರಂಜನಾ ವಾಹಿನಿಗಳು.

    ಅದ್ಧೂರಿ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಚಿತ್ರಗಳ ನಿರ್ಮಾಪಕರು ಐಪಿಎಲ್ ಎದುರು ಹಾಕಿಕೊಂಡು ಸಿನಿಮಾ ಬಿಡುಗಡೆ ಮಾಡಬಹುದಾ? ಅಥವಾ ಐಪಿಎಲ್ ನಂತರ ರಿಲೀಸ್ ಮಾಡಬೇಕಾ ಎನ್ನುವ ಗೊಂದಲದಲ್ಲಿದ್ದಾರೆ. ಒಂದು ವೇಳೆ ಸಿನಿಮಾಗಳನ್ನು ಮುಂದು ಹಾಕಿದರೆ, ಅದರಿಂದ ಬೇರೆ ಬೇರೆ ರೀತಿಯಲ್ಲಿ ನಿರ್ಮಾಪಕರಿಗೆ ತೊಂದರೆ ಆಗಲಿದೆ. ಹಾಗಾಗಿ ಬಹುತೇಕ ಭಾರತೀಯ ಸಿನಿಮಾ ರಂಗಕ್ಕೆ ಆಘಾತಕ್ಕೆ ಒಳಗಾಗಿದೆ.

  • ಮೆಗಾ ಸ್ಟಾರ್ ಸೈರಾ ಚಿತ್ರದಲ್ಲಿ ಸುದೀಪ್ ರಾಜ!

    ಮೆಗಾ ಸ್ಟಾರ್ ಸೈರಾ ಚಿತ್ರದಲ್ಲಿ ಸುದೀಪ್ ರಾಜ!

    ಕಿಚ್ಚ ಸುದೀಪ್ ಅವರು ತೆಲುಗಿನ ಸೈರಾ ಚಿತ್ರದಲ್ಲಿ ನಟಿಸುತ್ತಿದ್ದಾರೆಂಬ ಸುದ್ದಿಯೊಂದು ತಿಂಗಳ ಹಿಂದೆಯೇ ಸಂಚಲನ ಸೃಷ್ಟಿಸಿತ್ತು. ಈ ವಿಚಾರ ತಿಳಿದು ಸಂತಸಗೊಂಡಿದ್ದ ಅಭಿಮಾನಿಗಳಲ್ಲಿ ಸುದೀಪ್ ನಟಿಸಲಿರೋ ಪಾತ್ರ ಯಾವುದೆಂಬ ಕುತೂಹಲ ಮಾತ್ರ ಹಾಗೆಯೇ ಉಳಿದು ಹೋಗಿತ್ತು. ಆದರೀಗ ಸೈರಾ ಚಿತ್ರದಲ್ಲಿ ಬ್ರಿಟಿಷರ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ್ದ ತೆಲುಗಿನ ರಾಜನಾಗಿ ಕಿಚ್ಚ ನಟಿಸಲಿದ್ದಾರೆಂಬ ಸುದ್ದಿ ಸ್ಪಷ್ಟವಾಗುವ ಮೂಲಕ ಎಲ್ಲವೂ ಜಾಹೀರಾಗಿದೆ!

    ಸದ್ಯ ತೆಲುಗು ಮಾತ್ರವಲ್ಲದೇ ಇಡೀ ದಕ್ಷಿಣ ಭಾರತೀಯ ಚಿತ್ರರಂಗವೇ ಬೆರಗಾಗಿ ನೋಡುವಂತೆ ಮಾಡಿರುವ ಚಿತ್ರ ಸೈರಾ. ಸ್ವಾತಂತ್ರ್ಯ ಹೋರಾಟದ ವೀರೋದ್ಧಾತ ಕಥೆ ಹೊಂದಿರೋ ಈ ಚಿತ್ರದಲ್ಲಿ ಬೇರೆ ಬೇರೆ ಭಾಷೆಗಳ ಸ್ಟಾರ್ ನಟರು ಪಾತ್ರ ನಿರ್ವಹಿಸುತ್ತಿದ್ದಾರೆ. ಇದರಲ್ಲಿ ಕಿಚ್ಚ ಸುದೀಪ್ ಅವುಕು ಎಂಬೊಂದು ಪ್ರಾಂತ್ಯದ ರಾಜನಾಗಿ ನಟಿಸಲಿದ್ದಾರಂತೆ.

    ಮೆಗಾ ಸ್ಟಾರ್ ಚಿರಂಜೀವಿ ನಾಯಕನಾಗಿರೋ ಈ ಚಿತ್ರ ಸ್ವಾತಂತ್ರ್ಯ ಹೋರಾಟಗಾರ ಉಯ್ಯಾಲುವಾಡ ನರಸಿಂಹ ರೆಡ್ಡಿಯ ಕಥೆಯಾಧಾರಿತ ಚಿತ್ರ. ಮೆಗಾ ಸ್ಟಾರ್ ರೆಡ್ಡಿಯ ಪಾತ್ರದಲ್ಲಿ ಕಾಣಿಸಿಕೊಂಡರೆ, ಸುದೀಪ್ ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ವಿರುದ್ಧ ಸೆಣಸಾಡುವ ಅವುಕು ಪ್ರಾಂತ್ಯದ ರಾಜನಾಗಿ ಕಾಣಿಸಿಕೊಳ್ಳಲಿದ್ದಾರೆ.

    ಇತಿಹಾಸದಲ್ಲಿಯೂ ಕೂಡಾ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಈ ಅವುಕು ರಾಜನ ಕ್ರಾಂತಿಯ ಬಗ್ಗೆ ಉಲ್ಲೇಖಗಳಿವೆ. ಈ ಮೂಲಕ ಸುದೀಪ್ ಐತಿಹಾಸಿಕ ಚಿತ್ರದಲ್ಲಿನ ಖದರು ತುಂಬಿರೋ ಪಾತ್ರಕ್ಕೆ ಜೀವ ತುಂಬಲಿದ್ದಾರೆ. ಬಹು ಕಾಲದಿಂದಲೂ ಕೂಡಾ ತೆಲುಗಿನ ಕಿಚ್ಚನ ಅಭಿಮಾನಿಗಳು ಅವರ ನಟನೆಗಾಗಿ ಕಾದು ಕೂತಿದ್ದರು. ಅವರೆಲ್ಲ ಸುದೀಪ್ ಸೈರಾ ಚಿತ್ರದಲ್ಲಿ ನಟಿಸುವ ಸುದ್ದಿ ಕೇಳಿ ಸಂತಸಗೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv