Tag: ಮೆಜೆಸ್ಟಿಕ್

  • ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ವಾಪಸ್ – ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ

    ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ವಾಪಸ್ – ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ

    – ಮೆಟ್ರೋಗಾಗಿ ಪ್ರಯಾಣಿಕರಿಂದ ದೊಡ್ಡ ಕ್ಯೂ

    ಬೆಂಗಳೂರು: ಸಾಲುಸಾಲು ರಜೆ ಹಿನ್ನೆಲೆ ಊರಿನತ್ತ ಮುಖ ಮಾಡಿದ್ದ ಜನ ಹಬ್ಬ ಮುಗಿಸಿಕೊಂಡು ಬೆಂಗಳೂರಿಗೆ (Bengaluru) ವಾಪಸ್ ಆಗಿದ್ದಾರೆ. ಈ ಹಿನ್ನೆಲೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ (Mejestic Metro Station) ಪ್ರಯಾಣಿಕರ ದಟ್ಟಣೆ (Congestion) ಉಂಟಾಗಿದೆ.

    ದೀಪಾವಳಿಗೆ ಸಾಲುಸಾಲು ರಜೆ ಹಿನ್ನೆಲೆ ಕಳೆದ ಶುಕ್ರವಾರ ಜನರು ತಮ್ಮತಮ್ಮ ಊರಿನತ್ತ ಹೊರಟಿದ್ದರು. ಇದೀಗ ಹಬ್ಬ ಮುಗಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಈ ಹಿನ್ನೆಲೆ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ರಷ್ ಉಂಟಾಗಿದೆ. ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಚುರುಕು – ನದಿ ಪಾತ್ರದ ಜನರಿಗೆ ಅಲರ್ಟ್

    ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಉಂಟಾಗಿದ್ದು, ಮೆಟ್ರೋಗಾಗಿ ಜನ ಕ್ಯೂ ನಿಂತಿದ್ದಾರೆ. ಮೆಟ್ರೋ ನಿಲ್ದಾಣ ಒಳ ಭಾಗದಲ್ಲೂ ಜನದಟ್ಟಣೆ ಉಂಟಾಗಿದೆ. ಇನ್ನು ಮೆಜೆಸ್ಟಿಕ್ ಮೆಟ್ರೋ ಪ್ರಯಾಣಿಕರಿಂದ ತುಂಬಿಕೊಂಡಿದೆ. ಮೆಟ್ರೋ ಒಳಭಾಗದಲ್ಲೂ ಪ್ರಯಾಣಿಕರ ದಟ್ಟಣೆ ಉಂಟಾಗಿದೆ. ಇದನ್ನೂ ಓದಿ: ನಮ್ದೇನಿದ್ದರೂ 2028ಕ್ಕೆ ಸಿಎಂ ಕ್ಲೈಮ್‌, ಯತೀಂದ್ರ ಹೇಳಿಕೆ ಅದು ವೈಯಕ್ತಿಕ: ಸತೀಶ್‌ ಜಾರಕಿಹೊಳಿ

  • ಊರಿಗೆ ತೆರಳಿದ ಜನ – ಮೆಜೆಸ್ಟಿಕ್‌ ಬಸ್‌ನಿಲ್ದಾಣ ಖಾಲಿ ಖಾಲಿ

    ಊರಿಗೆ ತೆರಳಿದ ಜನ – ಮೆಜೆಸ್ಟಿಕ್‌ ಬಸ್‌ನಿಲ್ದಾಣ ಖಾಲಿ ಖಾಲಿ

    ಬೆಂಗಳೂರು: ದೀಪಾವಳಿ (Deepavali) ಹಬ್ಬದ ಹಿನ್ನೆಲೆ, ಮೆಜೆಸ್ಟಿಕ್ ಕೆಂಪೇಗೌಡ ಬಸ್ ನಿಲ್ದಾಣ (Mesjestic Bus Stand) ಖಾಲಿ ಖಾಲಿಯಾಗಿದೆ.

    ಶುಕ್ರವಾರ, ಶನಿವಾರ, ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬೇರೆ ಜಿಲ್ಲೆ, ರಾಜ್ಯಗಳಲ್ಲಿರುವ ಊರಿಗೆ ತೆರಳಿದ್ದರು. ಕಳೆದ 4 ದಿನಗಳಿಂದ ಬೆಂಗಳೂರಿನಿಂದ ತೆರಳುವ ಬಹುತೇಕ ಬಸ್ಸುಗಳು ಭರ್ತಿಯಾಗಿದ್ದವು. ಇಂದು ಬಸ್ಸುಗಳಲ್ಲಿ ಸಂಚರಿಸುತ್ತಿರುವ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ. ಇದನ್ನೂ ಓದಿ:  ಬಿ ಖಾತಾದಿಂದ ಎ ಖಾತಾ ಪರಿವರ್ತನೆಗೆ ಅರ್ಜಿ ಆಹ್ವಾನ – ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ಮಂದಿಯಿಂದ ಅರ್ಜಿ

    ಬೆಂಗಳೂರಿನಿಂದ ಹಾಸನಾಂಬ ದರ್ಶನಕ್ಕೆ ತೆರಳುವವರ ಸಂಖ್ಯೆ ಕೂಡ ಇಳಿಕೆಯಾಗಿದೆ. ಈ ಬಾರಿ ಬುಧವಾರ ದೀಪಾವಳಿ ಬಂದಿರುವ ಕಾರಣ ಶನಿವಾರವೇ ಉದ್ಯೋಗಿಗಳು ಊರಿಗೆ ತೆರಳಿದ್ದರು.

    ಈ ಶನಿವಾರ ಸಂಜೆ ಮತ್ತು ಭಾನುವಾರ ಊರಿಗೆ ತೆರಳಿರುವ ಪ್ರಯಾಣಿಕರು ಮರಳಿ ಬರಲಿರುವುದರಿಂದ ಬೆಂಗಳೂರು ಪ್ರವೇಶಿಸುವ ಮಾರ್ಗಗಳಾದ ಗೊರಗುಂಟೆಪಾಳ್ಯ ಸಿಗ್ನಲ್‌, ಎಲೆಕ್ಟ್ರಾನಿಕ್‌ ಸಿಟಿ ಸೇರಿದಂತೆ ಹಲವು ಕಡೆ ಭಾರೀ ಟ್ರಾಫಿಕ್‌ ಜಾಮ್‌ ಆಗುವ ಸಾಧ್ಯತೆಗಳಿವೆ.

     

  • ಟೀ ಚೆನ್ನಾಗಿಲ್ಲ ಎಂದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಫ್ಲಾಸ್ಕ್‌ನಿಂದ ಹಲ್ಲೆ

    ಟೀ ಚೆನ್ನಾಗಿಲ್ಲ ಎಂದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಫ್ಲಾಸ್ಕ್‌ನಿಂದ ಹಲ್ಲೆ

    ಬೆಂಗಳೂರು: ಟೀ (Tea) ಚೆನ್ನಾಗಿಲ್ಲ ಎಂದಿದ್ದಕ್ಕೆ ಬಿಎಂಟಿಸಿ ಬಸ್ ಚಾಲಕನ ಮೇಲೆ ಟೀ ಶಾಪ್ ಸಿಬ್ಬಂದಿ ಹಲ್ಲೆ ಮಾಡಿದ ಘಟನೆ ಮೆಜೆಸ್ಟಿಕ್ (Majestic) ಬಸ್ ನಿಲ್ದಾಣದಲ್ಲಿ ನಡೆದಿದೆ.

    46ನೇ ಚಾಲಕ ಮೂಗಪ್ಪ ಅವರ ಮೇಲೆ ಟೀ ಸ್ಟಾಲ್ ಸಿಬ್ಬಂದಿ ಗುರುರಾಜ್ ಫ್ಲಾಸ್ಕ್‌ನಿಂದ ಹೊಡೆದು ಹಲ್ಲೆ ಮಾಡಿದ್ದಾನೆ. ಚಾಲಕ ಟೀ ಚೆನ್ನಾಗಿಲ್ಲ ಎಂದಿದ್ದಕ್ಕೆ ರೊಚ್ಚಿಗೆದ್ದ ಗುರುರಾಜ್ ರಕ್ತ ಬರುವಂತೆ ಫ್ಲಾಸ್ಕ್‌ನಿಂದ ತಲೆಗೆ ಹೊಡೆದಿದ್ದಾನೆ. ಇದನ್ನೂ ಓದಿ: ಆರೋಪಿ ನಟ ದರ್ಶನ್‌ ಮನೆಯಲ್ಲಿ 3 ಲಕ್ಷ ನಗದು ಕಳ್ಳತನ

    ಹಲ್ಲೆಗೊಳಗಾದ ಚಾಲಕ ಉಪ್ಪಾರಪೇಟೆ ಪೊಲೀಸ್ (Upparpet Police) ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಹಲ್ಲೆ ಮಾಡಿದ ಗುರುರಾಜ್‌ನನ್ನು ಬಂಧಿಸಿ, ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

  • ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ – ನಮ್ಮ ಮೆಟ್ರೋಗೆ ಜನವೋ ಜನ

    ಸಾರಿಗೆ ನೌಕರರ ಮುಷ್ಕರದ ಎಫೆಕ್ಟ್ – ನಮ್ಮ ಮೆಟ್ರೋಗೆ ಜನವೋ ಜನ

    ಬೆಂಗಳೂರು: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದಿನಿಂದ ಸಾರಿಗೆ ನೌಕರರ ಮುಷ್ಕರಕ್ಕೆ (Transport Employees Strike) ಇಳಿದಿದ್ದಾರೆ. ಈ ಎಫೆಕ್ಟ್‌ನಿಂದಾಗಿ ನಮ್ಮ ಮೆಟ್ರೋ (Namma Metro) ನಿಲ್ದಾಣಗಳಲ್ಲಿ ಪ್ರಯಾಣಿಕರು ಸಾಲುಗಟ್ಟಿ ನಿಂತಿದ್ದಾರೆ.

    ಬಸ್ ಸರಿಯಾಗಿ ಸಿಗದೆ ಪರದಾಡುತ್ತಿರುವ ಜನರು ಮೆಟ್ರೋದ ಮೊರೆ ಹೋಗಿದ್ದಾರೆ. ಇದೀಗ ಮೆಟ್ರೋ ನಿಲ್ದಾಣಗಳಲ್ಲಿ ಎಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಓಡಾಡ್ತಿದ್ದಾರೆ. ದಿನನಿತ್ಯಕ್ಕಿಂತ ಮೆಟ್ರೋ ಪ್ರಯಾಣಿಕರು ಹೆಚ್ಚಾಗಿರುವುದರಿಂದ ತೊಂದರೆಯಾಗದಂತೆ ಮೆಟ್ರೋ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಸರ್ಕಾರಿ ಬಸ್‌ಗಳಿಲ್ಲದೇ ಪ್ರಯಾಣಿಕರ ಪರದಾಟ – ನಿಮ್ಮ ಜಿಲ್ಲೆಯ ಪರಿಸ್ಥಿತಿ ಹೇಗಿದೆ?

    ಮೆಟ್ರೋ ನಿಲ್ದಾಣದ ಹೊರಗಿನಿಂದಲೂ ಪ್ರಯಾಣಿಕರು ಕ್ಯೂ ನಿಂತಿದ್ದಾರೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಮುಂಭಾಗದಲ್ಲಿ ಕ್ಯೂ ಗಟ್ಟಲೆ ಪ್ರಯಾಣಿಕರು ಜಮಾಯಿಸಿದ್ದರಿಂದ ಮೆಟ್ರೋ ನಿಲ್ದಾಣದ ಬಳಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಸಿಡಿದ ಸಾರಿಗೆ ನೌಕರರು – ಇಂದಿನಿಂದ ಬಸ್‌ ಬಂದ್‌

    ಬಸ್‌ಗಳ ಸಂಚಾರ ಕಡಿಮೆ ಆಗಿದ್ದರಿಂದ ಹಲವರು ಸ್ವಂತ ವಾಹನಗಳಲ್ಲೇ ಸಂಚಾರ ಮಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಸಾರಿಗೆ ನೌಕರರು ಸಿಡಿದಿದ್ದರಿಂದ ಸಾರ್ವಜನಿಕರ ಬಸ್ ಸಂಚಾರವಿಲ್ಲದೇ ಪರದಾಡುವಂತಾಗಿದೆ.

  • ಕರ್ನಾಟಕ ಬಂದ್ ಎಫೆಕ್ಟ್ – ಸ್ಯಾಟಲೈಟ್, ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆ

    ಕರ್ನಾಟಕ ಬಂದ್ ಎಫೆಕ್ಟ್ – ಸ್ಯಾಟಲೈಟ್, ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಇಳಿಕೆ

    – ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಚಾರ ಯಥಾಸ್ಥಿತಿ

    ಬೆಂಗಳೂರು: ಮರಾಠಿಗರ ಕನ್ನಡ ವಿರೋಧಿ ನೀತಿ, ಕನ್ನಡಿಗರ ಮೇಲೆ ಎಂಇಎಸ್ (MES) ಪುಂಡರ ದಬ್ಬಾಳಿಕೆ ಖಂಡಿಸಿ ಶನಿವಾರ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. ಆದರೆ ಬಂದ್ ಇದ್ದರೂ ಎಂದಿನಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ಸಂಚರಿಸುತ್ತಿವೆ. ನಗರದ ಮೆಜೆಸ್ಟಿಕ್‌ನ  (Mejestic)ಬಿಎಂಟಿಸಿ ಬಸ್ ನಿಲ್ದಾಣ ಯಥಾಸ್ಥಿತಿಯಲ್ಲಿದೆ. ಆದರೆ ಪ್ರಯಾಣಿಕರ ಸಂಖ್ಯೆ ಸ್ಪಲ್ಪ ಕಡಿಮೆಯಾಗಿದೆ.

    ಇನ್ನು ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ (Satellite Bus Station) ಬೆಳ್ಳಂಬೆಳಗ್ಗೆ ಬಂದ್ ಬಿಸಿ ತಟ್ಟಿದೆ. ತಮ್ಮ ತಮ್ಮ ಊರುಗಳಿಗೆ ವೀಕೆಂಡ್‌ಗಳಲ್ಲೇ ಹೆಚ್ಚಾಗಿ ಹೋಗುವ ಜನ ಇಂದು ಬಂದ್ ಕಾರಣಕ್ಕೆ ಸ್ಯಾಟಲೈಟ್ ಬಸ್ ನಿಲ್ದಾಣದ ಕಡೆ ಮುಖ ಮಾಡಿಲ್ಲ. ಸ್ಯಾಟಲೈಟ್ ಕೆಎಸ್‌ಆರ್‌ಟಿಸಿ (KSRTC) ನಿಲ್ದಾಣ ಇಂದು ಪ್ರಯಾಣಿಕರ ಕೊರತೆ ಎದುರಿಸುತ್ತಿದೆ. ಇದನ್ನೂ ಓದಿ: ಬಲವಂತವಾಗಿ ಬಂದ್‌ ಮಾಡಿದ್ರೆ ಶಿಸ್ತು ಕ್ರಮ – ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಪೊಲೀಸರ ಕಟ್ಟೆಚ್ಚರ

    ರಾಮನಗರ, ಮೈಸೂರು, ಮದ್ದೂರು, ಮಂಡ್ಯ, ಚಾಮರಾಜನಗರ, ಕೊಳ್ಳೇಗಾಲ, ಟಿ.ನರಸೀಪುರ, ನಂಜನಗೂಡು, ಮಳವಳ್ಳಿ, ಕೊಡಗು, ಹಾಸನ ಭಾಗಕ್ಕೆ ಹೋಗುವವರು ಬಹಳಷ್ಟು ಜನ ಬಂದ್ ಅಂತ ಇಂದು ಮನೆಗಳಲ್ಲೇ ಉಳಿದುಕೊಂಡಿದ್ದಾರೆ. ಇದರ ಪರಿಣಾಮ ಬಸ್‌ಗಳು ಖಾಲಿ ಖಾಲಿ ಸಂಚಾರ ಮಾಡುತ್ತಿವೆ. ಕೆಎಸ್‌ಆರ್‌ಟಿಸಿ ಬಸ್‌ಗಳ ಸಂಖ್ಯೆ, ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ. ಬಸ್‌ಗಳಿದ್ದರೂ ಪ್ರಯಾಣಿಕರ ಸಂಖ್ಯೆ ಇಳಿಕೆಯಾಗಿದೆ. ಇದನ್ನೂ ಓದಿ: ಬೇಸಿಗೆ ರಜೆ ಹಿನ್ನಲೆ ಕಲಬುರಗಿ – ದೌಂಡ್ ನಡುವೆ 180 ವಿಶೇಷ ರೈಲು ಸಂಚಾರ

  • ಮೆಜೆಸ್ಟಿಕ್‌ನ BMTC, KSRTC ನಿಲ್ದಾಣಕ್ಕೆ ಹೊಸ ರೂಪ – ನವೀಕರಣಕ್ಕೆ ಅಧಿಕಾರಿಗಳ ಜೊತೆ ಸಚಿವರ ಚರ್ಚೆ

    ಮೆಜೆಸ್ಟಿಕ್‌ನ BMTC, KSRTC ನಿಲ್ದಾಣಕ್ಕೆ ಹೊಸ ರೂಪ – ನವೀಕರಣಕ್ಕೆ ಅಧಿಕಾರಿಗಳ ಜೊತೆ ಸಚಿವರ ಚರ್ಚೆ

    ಬೆಂಗಳೂರು: 40 ವರ್ಷಗಳ ಇತಿಹಾಸ ಇರುವ ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ (Mejestic Bus Station) ಹೊಸ ರೂಪ ಸಿಗಲಿದೆ. ಮೂರ್ನಾಲ್ಕು ಅಂತಸ್ತಿನ ಬಿಲ್ಡಿಂಗ್ ಇಲ್ಲಿ ತಲೆ ಎತ್ತಲಿದ್ದು, ಇಲ್ಲಿಂದಲೇ ಬಸ್‌ಗಳ ಕಾರ್ಯಾಚರಣೆ ಆಗಲಿವೆ.

    ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಶೀಘ್ರದಲ್ಲಿಯೇ ಹೊಸ ಸ್ಪರ್ಶ ಸಿಗಲಿದೆ. ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನಿಲ್ದಾಣಕ್ಕೆ ಮೂರ್ನಾಲ್ಕು ಅಂತಸ್ತಿನ ಬಿಲ್ಡಿಂಗ್ ನಿರ್ಮಾಣ ಮಾಡಲು ಪ್ಲ್ಯಾನ್ ನಡೆಯುತ್ತಿದೆ. ಈಗಾಗಲೇ ಅಧಿಕಾರಿಗಳ ಜೊತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಚರ್ಚಿಸಿದ್ದಾರೆ. ಕಟ್ಟಡ ನಿರ್ಮಾಣಕ್ಕೆ ನಕ್ಷೆ ತಯಾರಿಸುವ ಸಿದ್ಧತೆಗಳನ್ನ ಮಾಡಿಕೊಳ್ಳಲಾಗುತ್ತಿದೆ. ಇದನ್ನೂ ಓದಿ: ಚಾಂಪಿಯನ್ಸ್ ಪಟ್ಟಕ್ಕಾಗಿ ದುಬೈನಲ್ಲಿ ಗುದ್ದಾಟ – ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಲು ಟೀಂ ಇಂಡಿಯಾ ಸನ್ನದ್ಧ

    ಮುಂದಿನ ಐದಾರು ತಿಂಗಳಲ್ಲಿ ಬಸ್ ನಿಲ್ದಾಣದ ಬಿಲ್ಡಿಂಗ್ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಟೆಂಡರ್, ಇತರೆ ಪ್ರಕ್ರಿಯೆಗಳು ಪ್ರಾರಂಭವಾಗಲಿವೆ ಎನ್ನಲಾಗುತ್ತಿದೆ. ಮೆಜೆಸ್ಟಿಕ್‌ನ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ನಿತ್ಯ 10 ಸಾವಿರಕ್ಕೂ ಹೆಚ್ಚು ಬಸ್‌ಗಳು ಸಂಚಾರ ಮಾಡುತ್ತಿವೆ. ಮೂರು ಅಂತಸ್ತಿನ ಬಿಲ್ಡಿಂಗ್ ನಿರ್ಮಿಸಿ ಬಸ್‌ಗಳನ್ನ ಆಪರೇಟ್ ಮಾಡೋದು, ಬಿಲ್ಡಿಂಗ್‌ನ ಕೆಲವು ಮಳಿಗೆಗಳನ್ನ ಬಾಡಿಗೆಗೆ ನೀಡಿ, ನಿಗಮದ ಬೊಕ್ಕಸ ತುಂಬಿಸುವ ಬಗ್ಗೆಯೂ ಚಿಂತಿಸಲಾಗುತ್ತಿದೆ. ಇದನ್ನೂ ಓದಿ: ರಾಷ್ಟ್ರಪತಿ ಆಡಳಿತ ಜಾರಿ ಬಳಿಕ ಮಣಿಪುರದಲ್ಲಿ ಘರ್ಷಣೆ – ಓರ್ವ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ

    ಮೆಟ್ರೋ, ರೈಲು ನಿಲ್ದಾಣಗಳಿಗೆ ಹೋಗುವ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಬಸ್ ನಿಲ್ದಾಣವನ್ನು ವಿನ್ಯಾಸ ಮಾಡುವ ಚಿಂತನೆ ಮಾಡಲಾಗುತ್ತಿದೆ. ಹೈಟೆಕ್ ಸ್ಪರ್ಶ ನೀಡುವುದರ ಜೊತೆಗೆ ಎಐ ಕ್ಯಾಮೆರಾಗಳು, ಪ್ಲಾಟ್‌ಫಾರಂಗಳಲ್ಲಿ ಎಲ್‌ಇಡಿ ಅಳವಡಿಸಿ ಹೊಸ ರೂಪ ನೀಡಲಿದ್ದಾರೆ. ಇದನ್ನೂ ಓದಿ: IND vs NZ | ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಬಳಿಕ ರೋಹಿತ್‌ ಶರ್ಮಾ ನಿವೃತ್ತಿ…?

  • ಪ್ರಾಜೆಕ್ಟ್‌ ಮೆಜೆಸ್ಟಿಕ್‌ – ಹೈಟೆಕ್‌ ಆಗಲಿದೆ ಬಸ್‌ ನಿಲ್ದಾಣ

    ಪ್ರಾಜೆಕ್ಟ್‌ ಮೆಜೆಸ್ಟಿಕ್‌ – ಹೈಟೆಕ್‌ ಆಗಲಿದೆ ಬಸ್‌ ನಿಲ್ದಾಣ

    ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣವನ್ನು (Majestic Bus Stand) ಹೈಟೆಕ್‌ ಮಾಡಲು ಸರ್ಕಾರ ಮುಂದಾಗಿದೆ.

    ತಮ್ಮ ಬಜೆಟ್‌ ಭಾಷಣದಲ್ಲಿ ಬೆಂಗಳೂರಿನ (Bengaluru) ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ಜಾಗವನ್ನು ʼಪ್ರಾಜೆಕ್ಟ್‌ ಮೆಜೆಸ್ಟಿಕ್‌ʼ ಯೋಜನೆಯ ಅಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಪುನರ್‌ ಅಭಿವೃದ್ಧಿಪಡಿಸಿ, ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್‌ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: Karnataka Budget 2025 LIVE: ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್‌ಗೆ 200 ರೂ. ನಿಗದಿ

    ಈ ಯೋಜನೆಗೆ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಆದರೆ ಅನುದಾನದ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ.

     

  • ಬಸ್ ಟಿಕೆಟ್ ದರ ಏರಿಕೆ – ಪ್ರಯಾಣಿಕರಿಗೆ ಗುಲಾಬಿ ಕೊಟ್ಟು ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ

    ಬಸ್ ಟಿಕೆಟ್ ದರ ಏರಿಕೆ – ಪ್ರಯಾಣಿಕರಿಗೆ ಗುಲಾಬಿ ಕೊಟ್ಟು ಸರ್ಕಾರದ ವಿರುದ್ಧ ಅಶೋಕ್ ಆಕ್ರೋಶ

    – ತಡೆಯಲು ಹೋದ ಪೊಲೀಸರೊಂದಿಗೆ ವಾಗ್ವಾದ

    ಬೆಂಗಳೂರು: ನಾಲ್ಕು ನಿಗಮಗಳ ಪ್ರಯಾಣ ದರ ಏರಿಕೆ (Bus Ticket Price Hike) ಖಂಡಿಸಿ, ಬೆಂಗಳೂರಿನ (Bengaluru) ಮೆಜೆಸ್ಟಿಕ್ (Mejestic) ಬಸ್ ನಿಲ್ದಾಣದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ (R Ashok) ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

    ಈ ವೇಳೆ ಮಾತನಾಡಿದ ಅವರು, ಬಡವರಿಗೆ ಬಿಜೆಪಿ ಫ್ರೀ ಕೊಟ್ಟಿರಲಿಲ್ಲ. ಕಾಂಗ್ರೆಸ್ ಫ್ರೀ ಕೊಟ್ಟು ದರ ಏರಿಕೆ ಮಾಡಿದೆ. ಹಾಲಿನಲ್ಲಿ ಕಲ್ಲು ಹಾಕಿದ ದುರುಳರು ಇವರು. ಮದ್ಯದ ದರವೂ ಏರಿಕೆ ಮಾಡಿದ್ದೀರಿ. ವಿದ್ಯುತ್, ನೋಂದಣಿ ದರವೂ ಏರಿಕೆ ಮಾಡಿದ್ದೀರಿ. ಈ ಸರ್ಕಾರ ಎಲ್ಲದಕ್ಕೂ ಟ್ಯಾಕ್ಸ್ ಹಾಕಿದೆ. ಬಸ್ ದರ ಏರಿಕೆ ಮೂಲಕ ಬಡ ಜನರಿಗೆ ಸಿಎಂ ಒಳ್ಳೆದು ಮಾಡಿದ್ದಾರೆ. ನಾವು ಪ್ರಯಾಣಿಕರಿಗೆ ಗುಲಾಬಿ ಕೊಡುತ್ತೇವೆ. ನಮ್ಮನ್ನು ಕ್ಷಮಿಸಿ ಬಿಡಿ ಎಂದು ಗುಲಾಬಿ ಕೊಡುತ್ತೇವೆ. ಕಂದಾಯ, ಮನೆ ಬಾಡಿಗೆ ಎಲ್ಲವೂ ದರ ಏರಿಕೆಯಾಗಿದೆ. ನಾನು ಸಾರಿಗೆ ಸಚಿವ ಇದ್ದಾಗ 1 ಸಾವಿರ ಕೋಟಿ ಲಾಭ ಇತ್ತು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರೆಸ್ಟೋರೆಂಟ್ ಮಾಲೀಕನ ಪುತ್ರ, ಸಿಬ್ಬಂದಿಯಿಂದ ಹಲ್ಲೆ – ನ್ಯೂ ಇಯರ್‌ಗೆ ಗೋವಾಗೆ ತೆರಳಿದ್ದ ಆಂಧ್ರದ ಯುವಕ ಸಾವು

    ಇನ್ನು ಇದೇ ವೇಳೆ ಪ್ರಯಾಣಿಕರಿಗೆ ಹೂ ಕೊಡಲು ಹೋದಾಗ ಅಶೋಕ್ ಅವರನ್ನು ಪೊಲೀಸರು ತಡೆದಿದ್ದಾರೆ. ಈ ಸಂದರ್ಭ ಅಶೋಕ್ ಹಾಗೂ ಪೊಲೀಸರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಪೊಲೀಸ್ ದೌರ್ಜನ್ಯ ಬೇಡ. ರೈಟಿಂಗ್‌ನಲ್ಲಿ ಪ್ರತಿಭಟನೆ ಮಾಡಬಾರದು ಎಂದು ಕೊಡಿ. ಸರ್ಕಾರ ಇದೇ ಇರೋದಿಲ್ಲ. ನಾಟಕ ಆಡುತ್ತಿದ್ದೀರಾ ನೀವು ಎಂದು ಪೊಲೀಸರಿಗೆ ಎಚ್ಚರಿಕೆ ನೀಡಿದರು. ಈ ವೇಳೆ ಅಶೋಕ್ ಜೊತೆ ಬಿಜೆಪಿ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ಕಾಂಗ್ರೆಸ್‌ನ ಪಾಪದ ಕೊಡ ತುಂಬಿದೆ, ದೇವರೇ ಶಿಕ್ಷೆ ಕೊಡ್ತಾನೆ: ಕುಮಾರಸ್ವಾಮಿ

  • ಮೆಜೆಸ್ಟಿಕ್ ಮುಖ್ಯರಸ್ತೆಗೆ ವೈಟ್ ಟಾಪಿಂಗ್ ಭಾಗ್ಯ – ಮುಂದಿನ ತಿಂಗಳಿಂದ ಟ್ರಾಫಿಕ್ ಜಾಮ್ ಸಾಧ್ಯತೆ

    ಮೆಜೆಸ್ಟಿಕ್ ಮುಖ್ಯರಸ್ತೆಗೆ ವೈಟ್ ಟಾಪಿಂಗ್ ಭಾಗ್ಯ – ಮುಂದಿನ ತಿಂಗಳಿಂದ ಟ್ರಾಫಿಕ್ ಜಾಮ್ ಸಾಧ್ಯತೆ

    ಬೆಂಗಳೂರು: ಸಿಲಿಕಾನ್ ಸಿಟಿಯ (Silicon City) ಹೃದಯ ಭಾಗದಲ್ಲಿರುವ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ (BMTC Bus Stand) ಮುಖ್ಯರಸ್ತೆಗೆ ವೈಟ್ ಟಾಪಿಂಗ್ (White Topping) ಭಾಗ್ಯ ಒದಗಿ ಬಂದಿದೆ.

    ಇತ್ತೀಚಿಗೆ ಬೆಂಗಳೂರಿನಲ್ಲಿ ಗುಂಡಿಗಳ ಸಮಸ್ಯೆ ಕೇಳಿ ಬರುತ್ತಿರುವುದು ಸಾಮಾನ್ಯವಾಗಿದೆ. ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ ಮುಖ್ಯರಸ್ತೆ ಗುಂಡಿಮಯ ಆಗಿದೆ. ಇದರಿಂದ ಜನರಿಗೆ ಓಡಾಡಲು ಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ. ಬೃಹತ್ ಗಾತ್ರದ ಗುಂಡಿಗಳಿಂದ ವಾಹನಗಳು ಓಡಾಡುವುದಕ್ಕೆ ಆಗುತ್ತಿಲ್ಲ. ಹೀಗಾಗಿ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲು ವೈಟ್ ಟಾಪಿಂಗ್ ಕಾಮಗಾರಿ ಮಾಡಲು ಬಿಬಿಎಂಪಿ (BBMP) ಪ್ಲ್ಯಾನ್ ಮಾಡಿದೆ.ಇದನ್ನೂ ಓದಿ: ಜಾತಿ ವ್ಯವಸ್ಥೆ ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಾ ಇದ್ದಾರೆ: ಪೇಜಾವರ ಶ್ರೀ

    ಸದ್ಯ ವೈಟ್ ಟಾಪಿಂಗ್ ಮಾಡಲು ಸಿದ್ಧವಾಗಿದ್ದು, ವೈಟ್ ಟಾಪಿಂಗ್ ಕಾಮಗಾರಿ ಮುಂದಿನ ತಿಂಗಳ ಮೊದಲ ವಾರದಲ್ಲಿ ಆರಂಭ ಆಗಲಿದೆ. ರಸ್ತೆಯ ಒಂದು ಭಾಗವನ್ನು ಬಂದ್ ಮಾಡಿ ಕಾಮಗಾರಿ ಆರಂಭ ಮಾಡಲಿದ್ದು, ಮತ್ತೊಂದು ಭಾಗದಲ್ಲಿ ರಸ್ತೆ ಸಂಚಾರ ಇರಲಿದೆ. ವೈಟ್ ಟ್ಯಾಪಿಂಗ್ ಕೆಲಸದಿಂದ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಯಿದೆ.

    ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಓಡಾಟಕ್ಕೆ ಸಮಸ್ಯೆ ಆಗಲಿದೆ. ರೈಲ್ವೆ ಸ್ಟೇಷನ್, ಆನಂದ್ ರಾವ್ ಸರ್ಕಲ್, ಚಿಕ್ಕಪೇಟೆ, ಉಪ್ಪಾರಪೇಟೆ ಸೇರಿದಂತೆ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಲಿದೆ. ಕಾಮಗಾರಿ ಆರಂಭವಾದ ನಾಲ್ಕು ತಿಂಗಳುಗಳ ಕಾಲ ಈ ಸಮಸ್ಯೆ ಇರಲಿದೆ.

    ಮೆಜೆಸ್ಟಿಕ್‌ನಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಮಾಡುವುದು ಒಳ್ಳೆಯ ವಿಚಾರವಾದರೆ ಕಾಮಗಾರಿ ಆರಂಭ ಮಾಡಿ ಬೇಗ ಕೆಲಸ ಮುಗಿಸುತ್ತಾರಾ ಎನ್ನುವುದೇ ಸದ್ಯದ ಕುತೂಹಲ.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ: 28-10-2024

  • 3 ದಿನ ದಸರಾ ರಜೆ ಹಿನ್ನೆಲೆ ಮೆಜೆಸ್ಟಿಕ್‌ನಿಂದ 2000ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ

    3 ದಿನ ದಸರಾ ರಜೆ ಹಿನ್ನೆಲೆ ಮೆಜೆಸ್ಟಿಕ್‌ನಿಂದ 2000ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ

    -ಬೆಂಗಳೂರಿನಿಂದ ಮೈಸೂರಿಗೆ ಪ್ರತ್ಯೇಕವಾಗಿ 660 ವಿಶೇಷ ಬಸ್‌ಗಳು

    ಬೆಂಗಳೂರು: ಮೂರು ದಿನಗಳ ಕಾಲ ದಸರಾ (Dasara) ರಜೆ ಹಿನ್ನೆಲೆ ಮೆಜೆಸ್ಟಿಕ್‌ನಿಂದ (Majestic) 2000ಕ್ಕೂ ಹೆಚ್ಚು ಕೆಎಸ್‌ಆರ್‌ಟಿಸಿ (KSRTC) ಬಸ್ಸುಗಳು ಕಾರ್ಯನಿರ್ವಹಿಸಲಿವೆ.

    ಅ.11 ರಂದು ಆಯುಧ ಪೂಜೆ, ಅ.12 ರಂದು ವಿಜಯದಶಮಿ ಹಾಗೂ ಎರಡನೇ ಶನಿವಾರ, ಅ.13 ರಂದು ಭಾನುವಾರ. ಹೀಗಾಗಿ ಮೂರು ದಿನಗಳ ಕಾಲ ರಜೆಯಿರುವ ಹಿನ್ನೆಲೆ ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಮೆಜೆಸ್ಟಿಕ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಜನಜಂಗುಳಿಯಿಂದ ಕೂಡಿದೆ.ಇದನ್ನೂ ಓದಿ: ಧಾರವಾಡ| 24 ಗಂಟೆಯಾದ್ರೂ ಬೈಪಾಸ್ ರಸ್ತೆಯಲ್ಲಿ ಕಡಿಮೆಯಾಗದ ನೀರಿನ ಹರಿವು- ಪ್ರಯಾಣಿಕರ ಪರದಾಟ

    ಮೂರು ದಿನಗಳ ಕಾಲ ರಜೆಯಿರುವ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವತಿಯಿಂದ 2000ಕ್ಕೂ ಹೆಚ್ಚು ಬಸ್‌ಗಳು ಕಾರ್ಯನಿರ್ವಹಿಸಲಿದ್ದು, ಅ.9 ರಿಂದ 12ರವರಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಅಂತರರಾಜ್ಯದ ವಿವಿಧ ಸ್ಥಳಗಳಿಗೆ 2000ಕ್ಕೂ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಹಾಗೂ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಅ.13 ಹಾಗೂ 14 ರಂದು ಬಸ್‌ಗಳು ಕಾರ್ಯನಿರ್ವಹಿಸಲಿವೆ.

    ಮೈಸೂರು ದಸರಾ ಜಂಬೂಸವಾರಿ ಹಿನ್ನೆಲೆ ಬೆಂಗಳೂರಿನಿಂದ ಮೈಸೂರಿಗೆ ಪ್ರತ್ಯೇಕವಾಗಿ 660 ದಸರಾ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ ಫ್ಲೈ ಬಸ್ ಕಾರ್ಯಾನಿರ್ವಹಿಸಲಿವೆ.ಇದನ್ನೂ ಓದಿ: ದಲಿತ ನಾಯಕನನ್ನ ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಮಾಡಲಿ- ಕಾಂಗ್ರೆಸ್‌ಗೆ ಜೆಡಿಎಸ್ ಸವಾಲ್