Tag: ಮೆಜೆಸ್ಟಿಕ್ ರೈಲ್ವೆ ನಿಲ್ದಾಣ

  • ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ನುಗ್ಗಿ ಮಸಿ ಬಳಿದ ಕನ್ನಡ ಹೋರಾಟಗಾರ

    ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ನುಗ್ಗಿ ಮಸಿ ಬಳಿದ ಕನ್ನಡ ಹೋರಾಟಗಾರ

    ಬೆಂಗಳೂರು: ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಕನ್ನಡವನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕನ್ನಡ ಸಂಘಟನೆಯ ರೂಪೇಶ್ ರಾಜಣ್ಣ, ರೈಲ್ವೆ ನಿಲ್ದಾಣದಲ್ಲಿರುವ ಇಂಗ್ಲೀಷ್ ಹಾಗೂ ಹಿಂದಿ ಅಕ್ಷರಗಳಿಗೆ ಮಸಿ ಬಳಿದಿದ್ದಾರೆ.

    ಮೆಜೆಸ್ಟಿಕ್ ರೈಲ್ವೆ ನಿಲ್ದಾಣದೊಳಗೆ ಬೆಂಗಳೂರು ಸಿಟಿ ಎಂದು ಇಂಗ್ಲೀಷ್ ಹಾಗೂ ಹಿಂದಿಯಲ್ಲಿ ಬರೆಯಲಾಗಿದೆ. ಕನ್ನಡವನ್ನು ಕಡೆಗಣಿಸಿ ಹಿಂದಿ ಹೇರಿಕೆ ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಕನ್ನಡವನ್ನು ಅವಮಾನ ಮಾಡಲಾಗುತ್ತಿದೆ ಎಂದು ರೈಲ್ವೆ ನಿಲ್ದಾಣಕ್ಕೆ ನುಗ್ಗಿ ಮಸಿ ಬಳಿದಿದ್ದಾರೆ.

    ತಕ್ಷಣಕ್ಕೆ ಹಿಂದಿ, ಇಂಗ್ಲೀಷ್ ಇರುವ ಜಾಗದಲ್ಲಿ ಕನ್ನಡ ಪದಗಳನ್ನು ಸೇರ್ಪಡೆ ಮಾಡದಿದ್ದರೆ, ರೈಲು ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.