Tag: ಮೆಟ್ರೋ ಪಿಲ್ಲರ್

  • ಮೆಟ್ರೋ ಪಿಲ್ಲರ್ ಕುಸಿತ – ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ : BMRCL

    ಮೆಟ್ರೋ ಪಿಲ್ಲರ್ ಕುಸಿತ – ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ : BMRCL

    ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ (Metro Pillar) ಕುಸಿದು ಮೃತಪಟ್ಟ ತೇಜಸ್ವಿನಿ ಕುಟುಂಬಕ್ಕೆ 20 ಲಕ್ಷ ಪರಿಹಾರ ನೀಡುವುದಾಗಿ ಬಿಎಂಆರ್‌ಸಿಎಲ್‌ (BMRCL) ಎಂಡಿ ಅಜ್ಜುಂ ಪರ್ವೇಜ್ ಘೋಷಿಸಿದರು.

    ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, 18 ಮೀ. ಎತ್ತರದ ಪಿಲ್ಲರ್ ಬಿದ್ದಿದೆ. ಘಟನೆಯಲ್ಲಿ ತಾಯಿ, ಮಗು ಮೃತಪಟ್ಟಿದೆ. ಈ ಬಗ್ಗೆ ಎಲ್ಲಾ ಎಂಜಿನಿಯರ್ ಜೊತೆಗೆ ಮಾತಾಡುತ್ತೇನೆ. ಇಂಡಿಯನ್ ಇನ್ಸ್ಟಿಟ್ಯೂಟ್ ಸೈನ್ಸ್‌ಗೆ ಮನವಿ ಮಾಡುತ್ತೇವೆ. ಅವರು ಬಂದು ಪರಿಶೀಲನೆ ನಡೆಸುತ್ತಾರೆ. ಜೊತೆಗೆ ಚೀಫ್‌ ಎಂಜಿನಿಯರ್, ಕಂಟ್ರ್ಯಾಕ್ಟರ್ ನೋಟಿಸ್ ಕೊಡುತ್ತೇವೆ ಎಂದು ತಿಳಿಸಿದರು.

    ಇದು ಕಳಪೆ ಕಾಮಗಾರಿಯಿಂದ ಆದ ದುರಂತವಲ್ಲ. ಸದ್ಯಕ್ಕೆ ಎರಡು ದಿನ ಕೆಲಸ ಸಂಪೂರ್ಣ ನಿಲ್ಲಿಸುತ್ತೇವೆ. ವರದಿ ಬಂದ ನಂತರ ಸಂಬಂಧಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಮ್ಯಾನ್ಯುಯಲ್ ಆಗಿ ಮಿಸ್ಟೆಕ್ ಆಗಿರುವುದಾ ಅಥವಾ ಟೆಕ್ನಿಕಲ್ ತೊಂದರೆಯೇ ಎನ್ನುವುದನ್ನು ನೋಡಬೇಕು ಎಂದು ಹೇಳಿದರು.

    ಘಟನೆಯೇನು?: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರಿನ (Bengaluru) ನಾಗವಾರ ರಿಂಗ್ ರಸ್ತೆಯ ಹೆಚ್‍ಬಿಆರ್ ಲೇಔಟ್‍ನಲ್ಲಿ ನಡೆದಿದೆ. ಬೆಳಗ್ಗೆ 10:30ರ ಸುಮಾರಿನಲ್ಲಿ ಗದಗ ಮೂಲದ ಸಿವಿಲ್ ಎಂಜಿನಿಯರ್ ಲೋಹಿತ್, ಪತ್ನಿ ಮತ್ತು ಇಬ್ಬರು ಅವಳಿ ಮಕ್ಕಳ ಸಮೇತ ಮನೆಯಿಂದ ಹೊರಟಿದ್ದರು. ಪತ್ನಿಯನ್ನು ಕೆಲಸಕ್ಕೆ, ಇಬ್ಬರು ಮಕ್ಕಳನ್ನು ಡೇ ಕೇರ್‌ನಲ್ಲಿ ಬಿಡಲು ಮಾನ್ಯತಾ ಟೆಕ್‍ಪಾರ್ಕ್ ಕಡೆ ಲೋಹಿತ್ ತೆರಳುತ್ತಿದ್ದಾಗ ಹೆಣ್ಣೂರು ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಎಂದು ಕುಸಿದಿದೆ.

    ಘಟನೆಯಲ್ಲಿ ತೇಜಸ್ವಿನಿ (35), ಎರಡೂವರೆ ವರ್ಷದ ಗಂಡು ಮಗು ವಿಹಾನ್ ಸಾವನ್ನಪ್ಪಿದ್ದಾರೆ. ಇನ್ನು ಸಣ್ಣಪುಟ್ಟ ಗಾಯಗಳೊಂದಿಗೆ ಲೋಹಿತ್ ಮತ್ತು ಅವರ ಎರಡೂವರೆ ವರ್ಷದ ಮಗಳು ವಿಸ್ಮಿತಾ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದುರಂತಕ್ಕೆ ಕಳಪೆ ಕಾಮಗಾರಿಯೇ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದನ್ನೂ ಓದಿ: ಒತ್ತುವರಿ ತೆರವಿಗೆ ಆಗ್ರಹಿಸಿ 36 ಕಿಮೀ ಪಾದಯಾತ್ರೆ ಮಾಡಿದ ಗ್ರಾಪಂ ಸದಸ್ಯ

    ಇನ್ನೂ ಘಟನೆಗೆ ಸಂಬಂಧಿಸಿದಂತೆ ಯಾವ ರೀತಿ ಮೆಟ್ರೋ ಪೀಲ್ಲರ್ ಕುಸಿದಿ ಬಿದ್ದಿದೆ ಎನ್ನುವುದು ಅಲ್ಲೇ ಇದ್ದ ಖಾಸಗಿ ಕಂಪನಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್ ಪಿಲ್ಲರ್ ಬೀಳುವ 2 ಸೆಕೆಂಡ್ ಮುಂಚೆ ಬಿಎಂಟಿಸಿಯ ವೋಲ್ವೋ ಬಸ್ ಕೂಡ ಪಾಸ್ ಆಗಿದೆ. ಅಷ್ಟೇ ಅಲ್ಲದೇ ಸಮಯದಲ್ಲಿ ಸಾಕಷ್ಟು ವಾಹನಗಳು ಪಾಸ್ ಆಗಿದೆ. ಇದನ್ನೂ ಓದಿ: ಒಳ ಮೀಸಲಾತಿ ಚರ್ಚೆ ಬಳಿಕ ಸರ್ಕಾರದ ನಿರ್ಧಾರ ಪ್ರಕಟ: ಮಾಧುಸ್ವಾಮಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ದಿಢೀರ್‌ ಉರುಳಿದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ – ತಾಯಿ, ಮಗು ದುರ್ಮರಣ

    ದಿಢೀರ್‌ ಉರುಳಿದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ – ತಾಯಿ, ಮಗು ದುರ್ಮರಣ

    ಬೆಂಗಳೂರು: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ಗಳು (Metro Pillar) ಬೆಂಗಳೂರಿನ (Bengaluru) ನಾಗವಾರ ಬಳಿ ದಿಢೀರ್‌ ಉರುಳಿದ್ದು, ಪರಿಣಾಮ ಬೈಕ್‌ನಲ್ಲಿ ಹೋಗುತ್ತಿದ್ದ ತಾಯಿ, ಮಗು ಇಬ್ಬರು ಮೃತಪಟ್ಟಿದ್ದಾರೆ.

    ಮೃತರನ್ನು ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ. ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಈ ಘಟನೆ ನಡೆದಿದೆ. ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್‌ ಏಕಾಏಕಿ ರಸ್ತೆಗೆ ಬಿದ್ದಿತ್ತು. ಈ ವೇಳೆ ಅದೇ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಪತಿ, ಪತ್ನಿ ತೇಜಸ್ವಿನಿ ಹಾಗೂ ಮಗ ವಿಹಾನ್‌ ಮೇಲೆ ಬಿದ್ದಿದೆ. ಇದನ್ನೂ ಓದಿ: ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಭಾರೀ ಭೂಕಂಪನ

    ಇದರ ಪರಿಣಾಮ ವಿಹಾನ್‌ ಹಾಗೂ ತೇಜಸ್ವಿನಿಯ ಸ್ಥಿತಿ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಾಯಿ, ಮಗ ಇಬ್ಬರೂ ಸಾವನ್ನಪ್ಪಿದ್ದಾರೆ. ಬೈಕ್‌ನಲ್ಲಿದ್ದ ತೇಜಸ್ವಿನಿ ಪತಿಯ ಸ್ಥಿತಿಯು ಚಿಂತಾಜನಕವಾಗಿದೆ.

    ಇನ್ನೂ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಪೊಲೀಸರು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಬ್ಬ, ಹರಿದಿನದಂದು ಕೆಲಸ ಮಾಡುವ ಸಿಬ್ಬಂದಿಗೆ KSRTCಯಿಂದ ಬಂಪರ್ ಗಿಫ್ಟ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೆಟ್ರೋ ಪಿಲ್ಲರ್‌ಗೆ KSRTC ಬಸ್ ಡಿಕ್ಕಿ- ನಾಲ್ವರು ಗಂಭೀರ

    ರಸ್ತೆ ಗುಂಡಿ ತಪ್ಪಿಸಲು ಹೋಗಿ ಮೆಟ್ರೋ ಪಿಲ್ಲರ್‌ಗೆ KSRTC ಬಸ್ ಡಿಕ್ಕಿ- ನಾಲ್ವರು ಗಂಭೀರ

    ಬೆಂಗಳೂರು: ರಸ್ತೆ ಗುಂಡಿಯಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿದೆ.

    ಬೆಂಗಳೂರಿನ ಮೈಸೂರು ರೋಡ್ ನಲ್ಲಿ ಮೆಟ್ರೋ ಪಿಲ್ಲರ್‍ಗೆ ಕೆಎಸ್‍ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಬಸ್ ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಮೈಸೂರು ರೋಡ್‍ನ ಪೂರ್ಣಿಮಾ ಪ್ಯಾಲೇಸ್ ಬಳಿ ದುರ್ಘಟನೆ ನಡೆದಿದೆ. ಕೆಆರ್ ನಗರ ಡಿಪೋಗೆ ಸೇರಿದ ಬಸ್ಸಿನಲ್ಲಿ ಸುಮಾರು 45 ಮಂದಿ ಪ್ರಯಾಣಿಕರಿದ್ದರು.

    ಅಪಘಾತಕ್ಕೆ ರಸ್ತೆ ಗುಂಡಿ ಕಾರಣ..?
    ಗುಂಡಿಗೆ ಇಳಿದ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೆಟ್ರೋ ಪಿಲ್ಲರ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮೆಟ್ರೋ ಪಿಲ್ಲರ್ ಇಲ್ಲದೇ ಇದಿದ್ರೇ ಬಸ್ ಮತ್ತೊಂದು ಭಾಗದ ರಸ್ತೆಗೆ ಹೋಗಿ ದೊಡ್ಡ ಅನಾಹುತವೇ ಆಗಿ ಹೋಗ್ತಿತ್ತು. ನಾಲ್ಕು ಅಡಿಯ ತಡೆಗೋಡೆಗೆ ಗುದ್ದಿ ಕೊನೆಗೆ ಪಿಲ್ಲರ್ ನಂಬರ್ 545 ಗೆ ಬಸ್ ಗುದ್ದಿದೆ. ಪಿಲ್ಲರ್ ನಂಬರ್ 546 ಬಳಿ ದೊಡ್ಡ ಗುಂಡಿ ಬಿದ್ದಿದೆ. ಗುಂಡಿ ತಪ್ಪಿಸಲು ಹೋಗಿ ಅಪಘಾತವಾಗಿರುವ ಶಂಕೆ ವ್ಯಕ್ತವಾಗಿದೆ. ಇಲ್ಲವೇ ಗುಂಡಿಗೆ ಇಳಿದ ಬಸ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಘಟನೆಯಿಂದ ಡ್ರೈವರ್ ಬಿಜೆ ಮಂಜುನಾಥ್ ಹಾಗೂ ಕಂಡೆಕ್ಟರ್ ವೆಂಕಟರಮಣ ಅವರಿಗೆ ಗಾಯಗಳಾಗಿದ್ದು, ಇಬ್ಬರನ್ನೂ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಎಕ್ಸ್ ಕ್ಲ್ಯೂಸಿವ್ ಆಗಿ ಮಾತನಾಡಿದ ಬಸ್ ಚಾಲಕ, ದೊಡ್ಡ ಗುಂಡಿ ಇತ್ತು. ಹೀಗಾಗಿ ಆ ಗುಂಡಿ ತಪ್ಪಿಸೋಕೆ ಹೋದೆ. ಗೊತ್ತಾಗದೇ ನಾನು ಗಾಡಿಯನ್ನು ಪಿಲ್ಲರ್‍ಗೆ ಗುದ್ದಿದೆ. ಬಸ್ಸಿನಲ್ಲಿ 45 ಜನ ಪ್ಯಾಸೆಂಜರ್ ಇದ್ದರು. ಪ್ಯಾಸೆಂಜರ್ ಎಲ್ಲಾ ಅಲ್ಲಲ್ಲಿ ಟ್ರೀಟ್ ಮೆಂಟ್ ತಗೊಂಡ್ರು ಅನ್ಸುತ್ತೆ. ನಂಗೆ ಹೊಟ್ಟೆಗೆ ಏಟಾಗಿತ್ತು ಎಂದರು. ಇದನ್ನೂ ಓದಿ: 500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌

    ಅಪಘಾತದಿಂದಾಗಿ ಬಹುತೇಕರಿಗೆ ಬಾಯಿ, ಹಲ್ಲು, ಮುಖದ ಭಾಗಕ್ಕೆ ಗಾಯಗಳಾಗಿದ್ದು, ಗಾಯಾಳುಗಳೆಲ್ಲ ವಿಕ್ಟೊರಿಯಾ, ಬಿಜಿಎಸ್, ಕೆಂಗೇರಿ ಉಪನಗರದ ಸುಪ್ರ ಆಸ್ಪತ್ರೆ ಗೆ ದಾಖಲಾಗಿದ್ದಾರೆ. ಹಿಂಬದಿ ಮತ್ತು ಮುಂದೆ ಕೂತಿದ್ದವರಿಗೆ ಹೆಚ್ಚಿನ ಗಾಯಗಳಾಗಿವೆ. ಫಿನಾಕಲ್ ಆಸ್ಪತ್ರೆಯಲ್ಲಿ ಮೂವರು, ಸುಪ್ರದಲ್ಲಿ 12 ಹಾಗೂ ವಿಕ್ಟೋರಿಯಾದಲ್ಲಿ ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಹುತೇಕರು ಚಿಕಿತ್ಸೆ ಪಡೆದು ವಾಪಸ್ ಆಗಿದ್ದಾರೆ.

  • ನಮ್ಮ ಮೆಟ್ರೋ ಕಂಬದಲ್ಲಿ ಬಿರುಕು ಮೂಡಿದ್ಯಾಕೆ : ಇಲ್ಲಿದೆ ಪ್ರಮುಖ ಕಾರಣಗಳು

    ನಮ್ಮ ಮೆಟ್ರೋ ಕಂಬದಲ್ಲಿ ಬಿರುಕು ಮೂಡಿದ್ಯಾಕೆ : ಇಲ್ಲಿದೆ ಪ್ರಮುಖ ಕಾರಣಗಳು

    ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಕಳಪೆ ಕಾಮಗಾರಿ ನಡೆದಿದ್ಯಾ ಎನ್ನುವ ಅನುಮಾನ ಈಗ ಎದ್ದಿದೆ.

    ಮೆಟ್ರೋ ಮಾರ್ಗದ ಒಂದು ಕಂಬದಲ್ಲಿ ಬಿರುಕು ಮೂಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಜ್ಞರು ವಿವಿಧ ವಿಶ್ಲೇಷಣೆ ನೀಡಿದ್ದು ಕಳಪೆ ಕಾಮಗಾರಿಯೇ ಇದಕ್ಕೆ ಪ್ರಮುಖ ಕಾರಣ ಎಂದು ತಿಳಿಸಿದ್ದಾರೆ.

    ಬಿರುಕು ಮೂಡಲು ಕಾರಣವಾದ ಅಂಶಗಳು ಏನಿರಬಹುದು?
    – ಮೆಟ್ರೋ ಕಾಮಗಾರಿ ಅತ್ಯಂತ ಗುಣಮಟ್ಟದಿಂದ ಕೂಡಿರಲೇಬೇಕು. ಇದರ ಪಿಲ್ಲರ್, ಜಾಯಿಂಟ್ ಭಾಗ, ಟ್ರ್ಯಾಕ್ ಆಯಸ್ಸು ಬರೋಬ್ಬರಿ 60 ವರ್ಷ ಇರಬೇಕು. ಹೀಗಾಗಿ ಉದ್ಘಾಟನೆಯಾದ 7 ವರ್ಷಕ್ಕೆ ಬಿರುಕು ಬಿಡಲು ಸಾಧ್ಯವೇ ಇಲ್ಲ. ಆದರೆ ಇದು ಕಳಪೆ ಕಾಮಗಾರಿಯ ಸಂಕೇತ ಎನ್ನುವುದು ಸ್ಪಷ್ಟವಾಗುತ್ತದೆ.

    – ಮೆಟ್ರೋ ಪಿಲ್ಲರ್ ಮೇಲಿನ ಲೋಡ್ ನಿಗದಿತ ಸಾಮರ್ಥ್ಯ ಕ್ಕಿಂತ ಹೆಚ್ಚಾಗಿದೆ. ಮೆಟ್ರೋ ರೈಲಿಗೆ ಹೆಚ್ಚುವರಿ ಕೋಚ್ ಈಗ ಹಾಕಲಾಗಿದೆ. ಲಾಭದ ದೃಷ್ಟಿಯಿಂದ ಭಾರೀ ಪ್ರಮಾಣದಲ್ಲಿ ಮೆಟ್ರೋ ಓಡಾಟದಿಂದ ಪಿಲ್ಲರ್ ಗಳ ಮೇಲಿನ ಒತ್ತಡ ಹೆಚ್ಚಾಗಿರಬಹುದು. ಇದರಿಂದಾಗಿ ಬಿರುಕು ಬಿಟ್ಟಿರಬಹುದು.

    – ಪ್ರತಿ ವರ್ಷಕ್ಕೆ ಪಿಲ್ಲರ್ ಬೀಮ್, ಟ್ರ್ಯಾಕ್, ಪಿಲ್ಲರ್ ಗಳ ಗುಣಮಟ್ಟದ ಪರಿಶೀಲನೆ ಮಾಡಬೇಕು. ಆದರೆ ಬಿರುಕು ಬಿಟ್ಟ ಮೇಲೆ ನಮ್ಮ ಮೆಟ್ರೋ ಎಚ್ಚೆತ್ತುಕೊಂಡಿದೆ. ಇವರೆಗೂ ಯಾವುದೇ ಗುಣಮಟ್ಟವನ್ನು ಪರಿಶೀಲನೆ ಮಾಡಿಲ್ಲ. ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಮೆಟ್ರೋ ಕಾಮಗಾರಿಯಲ್ಲಿ ಗೋಲ್‍ಮಾಲ್ ನಡೆದಿದೆ.

    – ಕೇವಲ ಟ್ರಿನಿಟಿ ಸರ್ಕಲ್‍ನ 155 ಪಿಲ್ಲರ್ ಬಳಿ ಮಾತ್ರವಲ್ಲ. ಟ್ರಿನಿಟಿ ಪಕ್ಕದ ಪಿಲ್ಲರ್ ಕೂಡ ಶಿಥಿಲವಾಸ್ಥೆಯಲ್ಲಿದ್ದು, ಸಿಮೆಂಟ್ ಕಿತ್ತು ಹೋಗಿದೆ. ಕೆಲವಡೆ ತೇಪೆ ಹಚ್ಚಿರುವ ಕಾಮಗಾರಿಯೂ ಕಾಣುತ್ತದೆ. ಅಷ್ಟೇ ಅಲ್ಲದೆ ಮಳೆ ನೀರು ಸರಾಗವಾಗಿ ಹರಿದು ಹೋಗದೇ ಇರುವ ಕಾರಣ ಪಿಲ್ಲರ್ ಕಬ್ಬಿಣದ ಸರಳುಗಳು ತುಕ್ಕು ಹಿಡಿದಿರುವ ಸಾಧ್ಯತೆಯಿದೆ.

    ರಾತ್ರಿ ಕಾರ್ಯಾಚರಣೆ:
    ಮೆಟ್ರೋ ದುರಸ್ತಿ ಆರಂಭವಾಗಲಿದ್ದು, ಸಂಚಾರಕ್ಕೆ ಅಸ್ತವ್ಯಸ್ತವಾಗದಂತೆ ಮಧ್ಯರಾತ್ರಿಯೇ ಕಾಮಗಾರಿ ನಡೆಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಈಗ ಕಾಮಗಾರಿ ನಡೆಸಿದರೆ ಮೆಟ್ರೋ ಸಂಚಾರಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ರಾತ್ರಿ ಹನ್ನೊಂದು ಗಂಟೆಗೆ ಮೆಟ್ರೋ ಸಂಪೂರ್ಣ ಸಂಚಾರ ನಿಲ್ಲಲ್ಲಿದೆ. ಈ ವೇಳೆ ದುರಸ್ತಿ ಕಾರ್ಯ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿ ಮೂಲಗಳು ತಿಳಿಸಿವೆ.

    https://youtu.be/KoPKGJPuua8

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೂರು ದಿನದ ಹಿಂದೆಯೇ ನನ್ನ ಗಮನಕ್ಕೆ ಬಂದಿದೆ: ಸಿಎಂ ಎಚ್‍ಡಿಕೆ

    ಮೂರು ದಿನದ ಹಿಂದೆಯೇ ನನ್ನ ಗಮನಕ್ಕೆ ಬಂದಿದೆ: ಸಿಎಂ ಎಚ್‍ಡಿಕೆ

    ಬೆಂಗಳೂರು: ಮೆಟ್ರೋ ಮಾರ್ಗದ ಒಂದು ಕಂಬದಲ್ಲಿ ಬಿರುಕು ಮೂಡಿದ ಬಗ್ಗೆ ನನಗೆ ಮೂರು ದಿನಗಳ ಹಿಂದೆಯೇ ಮಾಹಿತಿ ಬಂದಿದೆ. ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

    ಬೈಯಪ್ಪನಹಳ್ಳಿ-ನಾಯಂಡಹಳ್ಳಿ ಮಾರ್ಗದ ಟ್ರಿನಿಟಿ ನಿಲ್ದಾಣದ ಬಳಿ ಪಿಲ್ಲರ್ ನಲ್ಲಿ ಬಿರುಕು ಬಿಟ್ಟ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಜ್ಞರ ಜೊತೆಗೆ ಮಾತುಕತೆ ನಡೆಸಿ ತನಿಖೆಗೆ ಆದೇಶ ನೀಡಿರುವೆ. ಬೈಯಪ್ಪನಹಳ್ಳಿ ಮೈಸೂರು ರಸ್ತೆ ಸಂಚಾರ ಸ್ಥಗಿತಕ್ಕೂ ಸೂಚನೆ ನೀಡಿರುವೆ. ಯಾವುದೇ ಕಾರಣಕ್ಕೂ ಅನಾಹುತ ಸಂಭವಿಸದಂತೆ ಎಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ ಎಂದು ತಿಳಿಸಿದರು.

    ಈಗಾಗಲೇ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಮೆಟ್ರೋ ವೇಗವನ್ನು ಕಡಿಮೆ ಮಾಡಿ ಸಂಚಾರ ನಡೆಸಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎಚ್ಚರಿಕೆ ಉದ್ದೇಶದಿಂದ ಮತ್ತೊಮ್ಮೆ ಪರಿಶೀಲನೆ ನಡೆಸುವಂತೆ ತಿಳಿಸಿದ್ದೇನೆ. ಅಲ್ಲದೆ ತಕ್ಷಣವೇ ಸಮಸ್ಯೆಯನ್ನು ಬಗೆಹರಿಸುವಂತೆ ಸೂಚನೆ ನೀಡಿರುವೆ ಎಂದು ಕುಮಾರಸ್ವಾಮಿ ಹೇಳಿದರು.

    ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರಾಭಿವೃದ್ಧಿ ಖಾತೆ ವಹಿಸಿಕೊಂಡಿರುವ ಜಿ.ಪರಮೇಶ್ವರ್ ಅವರನ್ನು ಪ್ರಶ್ನಿಸಿದಾಗ, ನನಗೆ ಮಾಹಿತಿಯಿಲ್ಲ. ಈ ಬಗ್ಗೆ ತಿಳಿದುಕೊಂಡು ಪ್ರತಿಕ್ರಿಯೆ ನೀಡುತ್ತೇನೆ ಎಂದು ಹಾರಿಕೆಯ ಉತ್ತರ ಕೊಟ್ಟಿದ್ದರು.

    https://www.youtube.com/watch?v=KoPKGJPuua8

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv