Tag: ಮೆಡಿಕಲ್ ಕಾಲೇಜು

  • ಪ್ರತಿ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ

    ಪ್ರತಿ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು, ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ

    ಬೆಂಗಳೂರು: ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತಿ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು (Medical College), ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ (Multi Speciality Hospital) ನಿರ್ಮಿಸುವುದು ನನ್ನ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

    ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಹಾಗೂ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಉದ್ಘಾಟನೆ, ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಲ್ಲಿ ನಿರ್ಮಾಣಗೊಂಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಬಸ್ ನಿಲ್ದಾಣದ ಉದ್ಘಾಟನೆ, ರಾಣಿ ಚನ್ನಮ್ಮ ವಿವಿಯ ಹಿರೇಬಾಗೇವಾಡಿ ಹೊಸ ಆವರಣದಲ್ಲಿ ಪಿ.ಎಂ ಉಷಾ ವಿವಿಧ ಕಟ್ಟಡಗಳ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ವಿವಿಯ ನೂತನ ಆವರಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಇದನ್ನೂ ಓದಿ: ಸಿಎಂ ಜೊತೆ ತೆರೆದ ಜೀಪ್‌ನಲ್ಲಿ ಮೊಮ್ಮೊಗ ಪ್ರಯಾಣ; ಪ್ರೋಟೋಕಾಲ್ ವ್ಯಾಪ್ತಿಗೆ ಬರಲ್ಲ ಎಂದ ಹೆಚ್‌ಸಿಎಂ

    ಬರೀ ಆಸ್ಪತ್ರೆ ಕಟ್ಟಡ ಕಟ್ಟಿದರೆ ಸಾಲದು. ಅದಕ್ಕೆ ತಕ್ಕಂತೆ ತಜ್ಞ ವೈದ್ಯರನ್ನೂ ನೇಮಿಸುತ್ತೇವೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಿದ್ದೇವೆ ಎಂದರು. ಇದನ್ನೂ ಓದಿ: ಅಂಕಲಗಿ ದುರ್ಗಾದೇವಿ ಜಾತ್ರೆಯಲ್ಲಿ ಗಲಾಟೆ ವೇಳೆ ಏರ್‌ಫೈರ್ – ಎರಡು ಗುಂಪುಗಳ 14 ಮಂದಿ ಅರೆಸ್ಟ್

    ಸದ್ಯ ಪ್ರಭಾಕರ್ ಕೋರೆ ಅವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ಸರ್ಕಾರಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕಾಗಿ ಕೋರೆ ಅವರಿಗೆ ಅಭಿನಂದಿಸುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗ್ಳೂರಿನ ನಿರ್ಮಾಣ ಹಂತದ ಕಟ್ಟಡದಲ್ಲಿ ಅಸ್ಥಿಪಂಜರ ಪತ್ತೆ – 6 ತಿಂಗಳ ಹಿಂದೆ ಮೃತಪಟ್ಟ ಶಂಕೆ

    ನಮ್ಮ ಸರ್ಕಾರ ಅಸಮಾನತೆಯನ್ನು ಅಳಿಸುವ ದಿಕ್ಕಿನಲ್ಲಿ ತಳ ಸಮುದಾಯಗಳಿಗೆ ಅವಕಾಶ ಮತ್ತು ಅನುಕೂಲಗಳನ್ನು ಕಲ್ಪಿಸುತ್ತಿದೆ. ಅಸಮಾನತೆ ಇರುವವರೆಗೆ ತಳ ಸಮುದಾಯಗಳ ಜನ ಮುಖ್ಯವಾಹಿನಿಗೆ ಬರಲು ಸಾಧ್ಯವಿಲ್ಲ ಎನ್ನುವ ಮಾತುಗಳನ್ನು ನೆನಪಿನಲ್ಲಿ ಇಟ್ಟುಕೊಂಡು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ನುಡಿದರು. ಇದನ್ನೂ ಓದಿ: ನೆಲಮಂಗಲ | ಬೆಳ್ಳಂಬೆಳಗ್ಗೆ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗಾಹುತಿ

  • ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ

    ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ

    – ಹೆಂಡತಿ ಮಡಿಲಲ್ಲೇ ಪ್ರಾಣ ಬಿಟ್ಟ ಗಂಡ

    ಪಾಟ್ನಾ: ಅಂತರ್ಜಾತಿ ವಿವಾಹ (Intercaste Marriage) ಆಗಿದ್ದಕ್ಕೆ ವ್ಯಕ್ತಿಯೊಬ್ಬ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದಿರುವ ಘಟನೆ ಬಿಹಾರದ ದರ್ಭಾಂಗಾದಲ್ಲಿರುವ (Darbhanga) ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.

    ರಾಹುಲ್ ಕುಮಾ‌ರ್ (25) ಹತ್ಯೆಯಾದ ವ್ಯಕ್ತಿ. ದರ್ಭಾಂಗಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (Medical College Hospital) 2ನೇ ವರ್ಷದ ಬಿಎಸ್ಸಿ ನರ್ಗಿಂಗ್‌ ವ್ಯಾಸಂಗ ಮಾಡುತ್ತಿದ್ದ. 4 ತಿಂಗಳ ಹಿಂದಷ್ಟೇ ಅದೇ ಕಾಲೇಜಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ತನ್ನು ಎಂಬಾಕೆಯನ್ನ ಪ್ರೀತಿಸಿ ಮದುವೆಯಾಗಿದ್ದ. ರಾಹುಲ್‌ ಅಂತರ್ಜಾತಿ ಅನ್ನೋ ಕಾರಣಕ್ಕೆ ಕುಟುಂಬದವರಿಂದ ಭಾರೀ ವಿರೋಧ ಇತ್ತು ಅಂತ ತಿಳಿದುಬಂದಿದೆ.

    ಇನ್ನೂ ಗುಂಡಿಕ್ಕಿ ಹತ್ಯೆಗೈದ ಬೆನ್ನಲ್ಲೇ ರಾಹುಲ್‌ನ ಸ್ನೇಹಿತರು ತನ್ನುವಿನ ತಂದೆ ಆರೋಪಿ ಪ್ರೇಮ್‌ಶಂಕ‌ರ್‌ ಝಾಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗೆ ಸಂಬಂಧವನ್ನ ಹದಗೆಡಿಸಬೇಡಿ – ಟ್ರಂಪ್‌ಗೆ ತಿವಿದ ನಿಕ್ಕಿ ಹ್ಯಾಲಿ

    ಹೆಂಡತಿ ಮಡಿಲಲ್ಲೇ ಪ್ರಾಣಬಿಟ್ಟ ಗಂಡ
    ಮಂಗಳವಾರ (ಆ.5) ಸಂಜೆ ಹೂಡಿ (ಪುಲೋವರ್‌ ಮಾದರಿಯ ಜೆರ್ಸಿ) ಧರಿಸಿದ್ದ ವ್ಯಕ್ತಿಯೊಬ್ಬ ರಾಹುಲ್‌ನ ಬಳಿಗೆ ಬಂದಿದ್ದ. ಹತ್ತಿರ ಬಂದಾಗ ಅದು ನನ್ನ ತಂದೆ ಅನ್ನೋದು ಗೊತ್ತಾಯ್ತ. ಅವರ ಕೈಯಲ್ಲಿ ಬಂದೂಕು ಇತ್ತು. ನನ್ನ ಕಣ್ಮುಂದೆಯೇ ನನ್ನ ಗಂಡನ ಎದೆಗೆ ಗುಂಡು ಹಾರಿಸಿದ್ರು. ನನ್ನ ಗಂಡ ನನ್ನ ಮಡಿಲಲ್ಲಿ ಪ್ರಾಣ ಬಿಟ್ಟರು ಅಂತ ತನ್ನು ಕಣ್ಣೀರಿಟ್ಟಿದ್ದಾಳೆ. ಇದನ್ನೂ ಓದಿ: ಟ್ರಂಪ್‌ ಬೆದರಿಕೆಗೆ ಡೋಂಟ್‌ ಕೇರ್‌ – ಸಂಬಂಧ ಬಲಪಡಿಸಲು ರಷ್ಯಾಗೆ ಅಜಿತ್ ದೋವಲ್ ಭೇಟಿ

    ನನ್ನ ಇಡೀ ಕುಟುಂಬ ಈ ಸಂಚಿನಲ್ಲಿ ಭಾಗಿಯಾಗಿದೆ. ನನ್ನ ಸಹೋದರ ಮತ್ತು ತಂದೆಯಿಂದ ನಮ್ಮ ಜೀವಕ್ಕೆ ಬೆದರಿಕೆಯಿದೆ ಎಂದು ದೂರು ನೀಡಿ ನ್ಯಾಯಾಲಯಕ್ಕೂ ಹೋಗಿದ್ದೆವು ಎಂದು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಇದು ಮರ್ಯಾದೆಗೇಡು ಹತ್ಯೆ ಎಂದು ತಿಳಿದುಬಂದಿದೆ ಎಂದು ವದರಿಯಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: 24 ಗಂಟೆಗಳಲ್ಲಿ ಭಾರತದ ಎಲ್ಲ ಆಮದುಗಳ ಮೇಲೆ ಸುಂಕ ಗಣನೀಯ ಏರಿಕೆ – ಟ್ರಂಪ್‌ ಮತ್ತೆ ಬೆದರಿಕೆ

  • ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಕಾವೇರಿ ಕುಡಿಯುವ ನೀರು ಪೂರೈಕೆ: ಡಿಕೆಶಿ

    ಕನಕಪುರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಕಾವೇರಿ ಕುಡಿಯುವ ನೀರು ಪೂರೈಕೆ: ಡಿಕೆಶಿ

    – ನಮ್ಮ ಅವಧಿಯಲ್ಲಿಯೇ ಮೆಡಿಕಲ್ ಕಾಲೇಜು ಬರಲಿದೆ: ಡಿಸಿಎಂ

    ರಾಮನಗರ: ಬೆಂಗಳೂರು (Bengaluru) ಮಾದರಿಯಲ್ಲಿ ಸಂಗಮದ ಬಳಿ ಕಾವೇರಿ ನೀರನ್ನು (Cauvery Water) ಪಂಪ್ ಮಾಡಿ ಕ್ಷೇತ್ರದ 250ಕ್ಕೂ ಹೆಚ್ಚು ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರನ್ನು ತಲುಪಿಸುವ ಯೋಜನೆ ರೂಪಿಸಲಾಗುತ್ತಿದೆ. ಜೊತೆಗೆ ಕ್ಷೇತ್ರದ ಕೆರೆಗಳಿಗೂ ನೀರನ್ನು ತುಂಬಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದರು.

    ಕನಕಪುರದ (Kanakapura) ಕೋಡಿಹಳ್ಳಿ ಹೋಬಳಿಯಲ್ಲಿ ಸೋಮವಾರ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೀರಾವರಿ ಸಚಿವನಾದ ನಾನು ನನ್ನ ಕ್ಷೇತ್ರದ ಕೆರೆಗಳನ್ನು ತುಂಬಿಸುವ ಕೆಲಸ ಮಾಡುತ್ತಿದ್ದೇನೆ. ಶಿಂಷಾದಿಂದ ಸಾತನೂರು ಹೋಬಳಿಗೆ ನೀರು ತರಲಾಗುತ್ತಿದೆ. ಅರ್ಕಾವತಿಯಿಂದ ಕಸಬಾ ಹೋಬಳಿ ಕೆರೆಗಳನ್ನು ತುಂಬಿಸುವ ಕೆಲಸ ಮಾಡಲಾಗುತ್ತಿದೆ. ಹೊಸದುರ್ಗ ಭಾಗದ ಕೆರೆಗಳನ್ನು ಕಾವೇರಿ ನದಿ ನೀರಿನಿಂದ ತುಂಬಿಸಲಾಗುವುದು. ಈ ಅವಧಿಯಲ್ಲೇ ಮೆಡಿಕಲ್ ಕಾಲೇಜಿಗೆ ಮುಕ್ತಿ ನೀಡಲಾಗುವುದು. ಕ್ಷೇತ್ರದಲ್ಲಿ ಎರಡು ಮೆಡಿಕಲ್ ಕಾಲೇಜು ಇರಲಿದೆ. ಕನಕಪುರದಲ್ಲಿ ಇನ್ಫೋಸಿಸ್ ಸಹಾಯದಲ್ಲಿ ತಾಯಿ ಮಗು ಆಸ್ಪತ್ರೆ ತೆರೆಯಲಾಗಿದೆ. ಇಂತಹ ಸರ್ಕಾರಿ ಆಸ್ಪತ್ರೆ ಬೇರೆ ಎಲ್ಲಾದರೂ ಇದೆಯೇ? ನಾವು ಮಾಡುತ್ತಿರುವ ಕೆಲಸ ದೇಶಕ್ಕೆ ಮಾದರಿ. ನಾವು ಶುದ್ಧ ಕುಡಿಯುವ ನೀರಿನ ಘಟಕ, ಸೋಲಾರ್ ಪಾರ್ಕ್ ಮಾಡಿದೆವು. ನಂತರ ಈ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ. ನಮ್ಮ ಮೆಡಿಕಲ್ ಕಾಲೇಜನ್ನು ಯಡಿಯೂರಪ್ಪ ಅವರು ಚಿಕ್ಕಬಳ್ಳಾಪುರಕ್ಕೆ ಹಾಕಿಬಿಟ್ಟರು. ಇಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣವಾದರೆ ನೀವುಗಳು ಯಾರೂ ಬೆಂಗಳೂರಿಗೆ ಹೋಗಬೇಕಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: CBSE ಯಿಂದ ಸೇಫ್ಟಿ ಗೈಡ್‌ಲೈನ್ಸ್ ‌- ಶೌಚಾಲಯ ಹೊರತುಪಡಿಸಿ ಶಾಲೆಯ ಉಳಿದೆಲ್ಲಕಡೆ ಆಡಿಯೋವಿಶುವಲ್ ಸಿಸಿಟಿವಿ ಕಡ್ಡಾಯ

    ಆನೆಗಳ ಹಾವಳಿ ತಡೆಯಲು ಸುಮಾರು 50 ಕಿ.ಮೀ ಉದ್ದ ತಡೆಗೋಡೆ ನಿರ್ಮಾಣ ಮಾಡಲಾಗಿದೆ. ಮಿಕ್ಕ 50 ಕಿಮೀ ಅನ್ನು ಶೀಘ್ರವೇ ಪೂರ್ಣಗೊಳಿಸಿ ರೈತರ ಪರವಾಗಿ ಕೆಲಸ ಮಾಡುತ್ತೇವೆ. ನಮ್ಮ ಕ್ಷೇತ್ರದಲ್ಲಿ ಇಬ್ಬರು ರೈತರಂತೆ ಟ್ರಾನ್ಸ್ಫಾರ್ಮರ್ ನೀಡಿ ವಿದ್ಯುತ್ ಕ್ರಾಂತಿ ಮಾಡಿದ್ದೇವೆ. 25 ಸಾವಿರ ರೈತರಿಗೆ ಇದರಿಂದ ಉಪಯೋಗವಾಗಿದೆ. ಪಕ್ಕದ ಯಾವುದೇ ಕ್ಷೇತ್ರದಲ್ಲಿಯೂ ಈ ಸೌಲಭ್ಯವಿಲ್ಲ. ಹುಣಸನಹಳ್ಳಿ ಸೇರಿದಂತೆ ದೊಡ್ಡಾಲಹಳ್ಳಿಯಲ್ಲಿ ಸೋಲರ್ ವಿದ್ಯುತ್ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಹಗಲು ಹೊತ್ತಿನಲ್ಲಿಯೇ ರೈತರಿಗೆ ವಿದ್ಯುತ್ ನೀಡಲಾಗುವುದು. ಕ್ಷೇತ್ರದ 60-70 ಸಾವಿರ ಜನ ವಿದ್ಯಾಭ್ಯಾಸ, ಕೆಲಸದ ನಿಮಿತ್ತ ನಗರ ಪ್ರದೇಶ ಸೇರಿದ್ದಾರೆ. ನನ್ನನ್ನು ನಮ್ಮ ತಂದೆ ಬೆಂಗಳೂರು ಸೇರಿಸಿದ್ದರು. ಆದರೆ ನಮ್ಮ ಜನರು ಪಾನಿಪುರಿ, ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಊರಿಗೆ ಒಂದೆರಡು ಜನ ಉದ್ಧಾರವಾಗಿದ್ದಾರೆ. ಆದರೆ ಹೆಚ್ಚಿನ ಜನರಿಗೆ ಉತ್ತಮ ಜೀವನ ನೀಡಬೇಕು ಎಂದು ನಾನು ಪಣತೊಟ್ಟಿದ್ದೇನೆ. ಅದಕ್ಕೆ ಕೆಪಿಎಸ್ ಶಾಲೆಗಳನ್ನು ಪ್ರಾರಂಭ ಮಾಡಲಾಗುತ್ತಿದೆ. ಕೋಡಿಹಳ್ಳಿಯಲ್ಲಿ 10 ಎಕರೆ, ದೊಡ್ಡ ಆಲಹಳ್ಳಿಯಲ್ಲಿ ಶಾಲೆಗಾಗಿ ನಮ್ಮ ಸ್ವಂತ ಭೂಮಿಯನ್ನು ನೀಡಿದ್ದೇನೆ ಎಂದರು. ಇದನ್ನೂ ಓದಿ: ಸೋಪ್ ಬಾಕ್ಸ್‌ಲ್ಲಿ 14.69 ಕೋಟಿ ಮೌಲ್ಯದ ಕೊಕೇನ್ ಸ್ಮಗ್ಲಿಂಗ್ – ಇಬ್ಬರು ಮಹಿಳೆಯರು ಅರೆಸ್ಟ್

    ಸುರೇಶ್ ವಿರುದ್ಧ ದೇವೇಗೌಡರು ಅವರ ಅಳಿಯನನ್ನು ಬಿಜೆಪಿಯಿಂದ ನಿಲ್ಲಿಸಿದರು. ಅನಂತರ ಕುಮಾರಸ್ವಾಮಿ ಮಗನ ವಿರುದ್ಧ ಸುರೇಶ್ ಅವರನ್ನು ನಿಲ್ಲಿಸಬೇಕು ಎಂದು ಒತ್ತಡ ತರಲಾಯಿತು. ಅನಂತರ ಬೆಳವಣಿಗೆಯಲ್ಲಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರಿದರು. ಅವರು ಜನರ ಆಶೀರ್ವಾದಿಂದ 22 ಸಾವಿರ ಮತಗಳ ಅಂತರದಿಂದ ಗೆದ್ದರು. ಬೆಂಗಳೂರು ದಕ್ಷಿಣ ಜಿಲ್ಲೆಯಿಂದ 4 ಜನ ಶಾಸಕರು ವಿಧಾನಸಭೆಯಲ್ಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಮ್ಮ ಜನ ಮೋಸ ಮಾಡಿಲ್ಲ. ನಮಗೆ ಬೆಂಗಳೂರಿನಲ್ಲಿ ಮೋಸ ಆಗಿದೆ. ನಮ್ಮ ಗ್ರಾಮೀಣ ಭಾಗದಲ್ಲಿ ನಮಗೆ ಮೋಸ ಆಗಿಲ್ಲ. ಬೇರೆ ಕಡೆ ವಾಲಿರುವವರಿಗೆ ಬುದ್ಧಿ ಹೇಳಿ. ಚುನಾವಣೆ ಸಮಯದಲ್ಲಿ ಅನೇಕರು ಬಂದು ತಲೆ ಕೆಡಿಸುವ ಪ್ರಯತ್ನ ಮಾಡುತ್ತಾರೆ. ನೀವು ಯಾವುದಕ್ಕೂ ಮಣಿಯಬಾರದು. ನಿಮ್ಮ ಹೆಣ ಹಾಗೂ ಪಲ್ಲಕ್ಕಿ ಹೊರುವವನು ನಾನು. ನನ್ನ ಹೆಣ, ಪಲ್ಲಕ್ಕಿ ಹೊರುವವರು ನೀವು. ನಿಮ್ಮ ಹಾಗೂ ನಮ್ಮ ಸಂಬಂಧ ಭಕ್ತ ಹಾಗೂ ಭಗವಂತನ ನಡುವಿನ ಸಂಬಂಧ. ಚನ್ನಪಟ್ಟಣದಲ್ಲಿ ಒಂಬತ್ತು ಜಿಲ್ಲಾ ಪಂಚಾಯತಿಗಳಿಗೆ ತೆರಳಿ ಜನಸಂಪರ್ಕ ಸಭೆ ಮೂಲಕ ಜನರ ಬಳಿಗೆ ಹೋಗಿ ನೂತನ ಪ್ರಯೋಗ ಮಾಡಲಾಯಿತು. ಸುರೇಶ್ ಅವರನ್ನು ಸೋಲಿಸಲು ಅವರು ಹೇಗೆ ತಂತ್ರ ಮಾಡಿದರೋ ಅದೇ ರೀತಿ ನಾವು ಸಹ ತಂತ್ರ ನಡೆಸಲಾಯಿತು. ಅಲ್ಲಿನ ಜನರಿಂದ 22 ಸಾವಿರ ಅರ್ಜಿಗಳನ್ನು ಸ್ವೀಕಾರ ಮಾಡಲಾಯಿತು. ಸುಮಾರು 500 ಕೋಟಿಗೂ ಹೆಚ್ಚು ಅನುದಾನ ನೀಡಲಾಯಿತು. 5 ಸಾವಿರಕ್ಕೂ ಹೆಚ್ಚು ಮನೆಗಳನ್ನು ಮಂಜೂರು ಮಾಡಲಾಯಿತು. ನೂರಾರು ಎಕರೆ ಜಮೀನು ಗುರುತಿಸಿ ಬಡವರಿಗೆ ನಿವೇಶನ ಹಂಚಲಾಯಿತು ಎಂದು ಹೇಳಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರ ವೇಳೆ ಭಾರತದ ಸೇನಾ ಶಕ್ತಿಯನ್ನ ಇಡೀ ವಿಶ್ವವೇ ನೋಡಿದೆ; ಸಂಸತ್ ಅಧಿವೇಶನಕ್ಕೂ ಮುನ್ನ ಮೋದಿ ಮಾತು

  • ಕೋಲಾರ ಜಿಲ್ಲೆಗೆ ಮೆಡಿಕಲ್ ಕಾಲೇಜು – `ಕೈ’ ಮುಖಂಡರ ಸಂಭ್ರಮಾಚರಣೆ

    ಕೋಲಾರ ಜಿಲ್ಲೆಗೆ ಮೆಡಿಕಲ್ ಕಾಲೇಜು – `ಕೈ’ ಮುಖಂಡರ ಸಂಭ್ರಮಾಚರಣೆ

    ಕೋಲಾರ: ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಜಿಲ್ಲೆಗೆ ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ ಎಂದು ಕೋಲಾರದಲ್ಲಿ (Kolar) ಕಾಂಗ್ರೆಸ್ (Congress) ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

    ನಗರದ ಹೊಸ ಬಸ್ ನಿಲ್ದಾಣ ವೃತ್ತದಲ್ಲಿ ನೂರಾರು ಕಾಂಗ್ರೆಸ್ ಮುಖಂಡರು ಸಂಭ್ರಮಾಚರಣೆ ಮಾಡಿದರು. ಬಜೆಟ್‌ನಲ್ಲಿ ಕೋಲಾರಕ್ಕೆ ಮೆಡಿಕಲ್ ಕಾಲೇಜು, ಕೆಜಿಎಫ್‌ನಲ್ಲಿ ಹೈಟೆಕ್ ಕೃಷಿ ಮಾರುಕಟ್ಟೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಅಲ್ಲದೇ ರಸ್ತೆ ಅಭಿವೃದ್ದಿಗೆ 300 ಕೋಟಿ ರೂ., ಎತ್ತಿನಹೊಳೆ ಯೋಜನೆಗೆ 556 ಕೋಟಿ ರೂ. ನೀಡಿರುವ ಸಿಎಂಗೆ ಅಭಿನಂದನೆ ಸಲ್ಲಿಸಿದರು. ಇದನ್ನೂ ಓದಿ: ‘ಭಗವಂತ ಕೇಸರಿ’ ನಿರ್ದೇಶಕನ ಸಿನಿಮಾಗೆ ಮೆಗಾಸ್ಟಾರ್ ಚಿರಂಜೀವಿ ಗ್ರೀನ್ ಸಿಗ್ನಲ್

    ಕೋಲಾರಕ್ಕೆ ಯಾವುದೇ ಅನುದಾನ ನೀಡಿಲ್ಲ, ಯಾವುದೇ ಅಭಿವೃದ್ಧಿ ಮಾಡಿಲ್ಲ ಎನ್ನುವ ವಿರೋಧಿಗಳೇ ಇತ್ತ ನೋಡಿ ಎಂದು ವಿರೋಧ ಪಕ್ಷಗಳಿಗೆ ಕಾಂಗ್ರೆಸ್ ನಾಯಕರು ಸಂಭ್ರಮಾಚರಣೆ ಮಾಡುವ ಮೂಲಕ ಟಾಂಗ್ ನೀಡಿದರು. ಸಿದ್ದರಾಮಯ್ಯ ಅವರಿಗೆ ಜಯವಾಗಲಿ ಎಂದು ಘೋಷಣೆ ಕೂಗಿ, ಬಜೆಟ್‌ನಲ್ಲಿ ಹೆಚ್ಚು ಯೋಜನೆಗಳನ್ನ ತಂದುಕೊಟ್ಟ ಜಿಲ್ಲೆಯ ಸಚಿವರಿಗೆ, ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು. ಇದನ್ನೂ ಓದಿ: ಏಪ್ರಿಲ್‌ನಲ್ಲಿ ಪ್ರಧಾನಿ ಮೋದಿ ಶ್ರೀಲಂಕಾ ಭೇಟಿ ಸಾಧ್ಯತೆ

  • ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇರಿಸಿ ಚಿತ್ರೀಕರಣಕ್ಕೆ ಯತ್ನ!

    ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇರಿಸಿ ಚಿತ್ರೀಕರಣಕ್ಕೆ ಯತ್ನ!

    – ಪೊಲೀಸರಿಂದ ಅಪ್ರಾಪ್ತನ ಬಂಧನ

    ಮಂಗಳೂರು: ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್‌ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನಸಿದ್ದ ಅಪ್ರಾಪ್ತನೊಬ್ಬ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಖಾಸಗಿ ಮೆಡಿಕಲ್ ಕಾಲೇನಲ್ಲಿ ನಡೆದಿದೆ. ಮೇ 6ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಖತರ್ನಾಕ್ ಪ್ಲ್ಯಾನ್‌ ಮಾಡಿದ್ದ ಆಸಾಮಿ:
    ಮೆಡಿಕಲ್ ಕಾಲೇಜಿಗೆ ರೋಗಿ ನೆಪದಲ್ಲಿ ಬಂದಿದ್ದ ಅಪ್ರಾಪ್ತ, ಬಳಿಕ ಅಲ್ಲೇ ಇದ್ದ ಲೇಡಿಸ್ ಟಾಯ್ಲೆಟ್‌ಗೆ ನುಗ್ಗಿ ಮೊಬೈಲ್ ಇಟ್ಟಿದ್ದಾನೆ. ಮೊಬೈಲ್ ಇಟ್ಟುಬಂದ ಸ್ವಲ್ಪ ಹೊತ್ತಿನಲ್ಲೇ ಮೊಬೈಲ್ ರಿಂಗ್ ಆಗುವುದು ಕೇಳಿಸಿದೆ. ಇದನ್ನೂ ಓದಿ: ಹಿಂದೆ ಡಿಕೆಶಿ ಟೆಂಟ್‌ನಲ್ಲಿ ಸಿನಿಮಾ ತೋರಿಸುತ್ತಿದ್ದ ಪ್ರವೃತ್ತಿ ಮುಂದುವರಿಸಿದ್ದಾರೆ: ಸಿಪಿವೈ ವಾಗ್ದಾಳಿ

    ಕೂಡಲೇ ಟಾಯ್ಲೆಟ್ ಕೊಠಡಿಯೊಳಗೆ ಬಂದ ಭದ್ರತಾ ಸಿಬ್ಬಂದಿ ಹುಡುಕಾಡಿದಾಗ ಮೊಬೈಲ್ ಕಣ್ಣಿಗೆ ಬಿದ್ದಿದೆ. ಸದ್ಯ ಮೊಬೈಲ್‌ನಲ್ಲಿ ಯಾವುದೇ ದೃಶ್ಯ ಸೆರೆಯಾಗಿಲ್ಲ ಎಂದು ತಿಳಿದುಬಂದಿದೆ. ಬಳಿಕ ಬಂದರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

    ಈ ಸಂಬಂಧ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸದು ಕಾಲೇಜು ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ 17 ವರ್ಷದ ಅಪ್ರಾಪ್ತನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: Stardom: ಕ್ಲೈಮ್ಯಾಕ್ಸ್‌ ಶೂಟಿಂಗ್‌ನಲ್ಲಿ ಬ್ಯುಸಿಯಾದ ಆರ್ಯನ್‌ಗೆ ಸಾಥ್ ಕೊಟ್ಟ ಶಾರುಖ್ ಖಾನ್

  • ಬಿಬಿಎಂಪಿ ಬಜೆಟ್ 2024: ಮುಂಬೈ ಮಾದರಿ ಬಿಬಿಎಂಪಿ ಮೆಡಿಕಲ್ ಕಾಲೇಜು ಸ್ಥಾಪನೆ

    ಬಿಬಿಎಂಪಿ ಬಜೆಟ್ 2024: ಮುಂಬೈ ಮಾದರಿ ಬಿಬಿಎಂಪಿ ಮೆಡಿಕಲ್ ಕಾಲೇಜು ಸ್ಥಾಪನೆ

    ಬೆಂಗಳೂರು: ನಾಡಿನ ಜನರಿಗೆ ಉತ್ತಮ ಆರೋಗ್ಯ ಸೇವೆ ಸಿಗಬೇಕು ಎಂಬ ನಿಟ್ಟಿನಲ್ಲಿ ಬಿಬಿಎಂಪಿ (BBMP) ಮಹತ್ವದ ಹೆಜ್ಜೆ ಇಟ್ಟಿದೆ. ಎಲ್ಲವೂ ಬಿಬಿಎಂಪಿ ಅಂದುಕೊಂಡಂತೆಯೇ ಆದರೆ ಬೆಂಗಳೂರಿನಲ್ಲಿ (Bengaluru) ಬಿಬಿಎಂಪಿಯಿಂದಲೇ ಮೆಡಿಕಲ್ ಕಾಲೇಜು (Medicle College) ಸ್ಥಾಪನೆಯಾಗಲಿದೆ.

    2024ರ ಬಿಬಿಎಂಪಿ ಬಜೆಟ್‌ನಲ್ಲಿ ಮೆಡಿಕಲ್ ಕಾಲೇಜು ವಿಷಯ ಪ್ರಸ್ತಾಪವಾಗಿದ್ದು, ಇದರ ಡಿಪಿಆರ್ ಸಿದ್ಧಪಡಿಸಲು ಕ್ರಮಕೈಗೊಳ್ಳಲು ಬಿಬಿಎಂಪಿ ಮುಂದಾಗಿದೆ. ಇದನ್ನೂ ಓದಿ: BBMP Budget 2024: ಬಡವರ ಹಸಿವು ನೀಗಿಸಲು 50 ಹೊಸ ಇಂದಿರಾ ಕ್ಯಾಂಟೀನ್

    ಮುಂಬೈ ಮಾದರಿ ಮೆಡಿಕಲ್ ಕಾಲೇಜು:
    ‘ಆರೋಗ್ಯಕರ ಬೆಂಗಳೂರು’ ಯೋಜನೆಯಡಿ ಈ ವಿಷಯವನ್ನು ಬಿಬಿಎಂಪಿ ಬಜೆಟ್‌ನಲ್ಲಿ ಮಂಡಿಸಲಾಗಿದೆ. ಈಗಾಗಲೇ ಬೃಹತ್ ಮುಂಬೈ ನಗರ ಪಾಲಿಕೆ ಅಡಿಯಲ್ಲಿ ವೈದ್ಯಕೀಯ ಮಹಾ ವಿದ್ಯಾಲಯ ನಡೆಯುತ್ತಿದೆ. ಹಲವಾರು ವರ್ಷಗಳಿಂದ ಉತ್ತಮ ಆರೋಗ್ಯ ಸೇವೆ ನೀಡುತ್ತಾ ಮುಂಬೈ ಪಾಲಿಕೆಯ ಮೆಡಿಕಲ್ ಕಾಲೇಜುಗಳು ಮೇಲ್ಪಂಕ್ತಿಯಲ್ಲಿವೆ. ಇದನ್ನೂ ಓದಿ: BBMP Budget 2024: ಪಾಲಿಕೆಯ ಶಾಲಾ/ಕಾಲೇಜು ವಿದ್ಯಾರ್ಥಿಗಳು, ಪೋಷಕರಿಗೆ ‘ಆಯುಷ್ಮಾನ್‌ ಭಾರತ್‌’ ವಿಮೆ!

    ಅದೇ ಮಾದರಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕೂಡಾ ಹೊಸದಾಗಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಡಿಪಿಆರ್ ಸಿದ್ಧಪಡಿಸಲು ಕ್ರಮಕೈಗೊಳ್ಳಲಾಗುವುದು ಎಂದು ಬಜೆಟ್‌ನಲ್ಲಿ ಘೋಷಿಸಲಾಗಿದೆ. ಇದನ್ನೂ ಓದಿ: BBMP Budget 2024: ಆಟದ ಮೈದಾನದ ಕೆಳಗೆ ಬರಲಿದೆ ಅಂಡರ್‌ಗ್ರೌಂಡ್‌ ಪಾರ್ಕಿಂಗ್!‌

    ಬಿಎಂಸಿ ಮಾದರಿ ಏನು?
    ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೋರೇಷನ್ ಒಟ್ಟು 4 ಮೆಡಿಕಲ್ ಕಾಲೇಜು ಹಾಗೂ 1 ಡೆಂಟಲ್ ಕಾಲೇಜುಗಳನ್ನು ನಡೆಸುತ್ತಿದೆ. ಪ್ರತಿವರ್ಷ ಈ ಕಾಲೇಜುಗಳಲ್ಲಿ ಒಟ್ಟು 1,600 ವಿದ್ಯಾರ್ಥಿಗಳು ಸೇರ್ಪಡೆಯಾಗುತ್ತಿದ್ದಾರೆ. ಈ ಐದು ಮೆಡಿಕಲ್ ಕಾಲೇಜುಗಳಲ್ಲಿ ವರ್ಷಕ್ಕೆ ಸರಾಸರಿ 1.10 ಕೋಟಿ ಹೊರರೋಗಿಗಳು ಚಿಕಿತ್ಸೆ ಪಡೆಯುತ್ತಾರೆ. ಇದನ್ನೂ ಓದಿ: BBMP Budget 2024: ಬೆಂಗಳೂರು ನಗರದಲ್ಲಿ ನಿರ್ಮಾಣವಾಗಲಿದೆ 2 ಸುರಂಗ ಮಾರ್ಗ

  • ರಾಮನಗರ, ಕನಕಪುರ ಎರಡೂ ಕಡೆಯೂ ಮೆಡಿಕಲ್ ಕಾಲೇಜು ಆಗುತ್ತೆ, ರಾಜಕೀಯಕ್ಕಾಗಿ ಗೊಂದಲ ಮಾಡಲಾಗ್ತಿದೆ: ಡಿಕೆ ಸುರೇಶ್

    ರಾಮನಗರ, ಕನಕಪುರ ಎರಡೂ ಕಡೆಯೂ ಮೆಡಿಕಲ್ ಕಾಲೇಜು ಆಗುತ್ತೆ, ರಾಜಕೀಯಕ್ಕಾಗಿ ಗೊಂದಲ ಮಾಡಲಾಗ್ತಿದೆ: ಡಿಕೆ ಸುರೇಶ್

    ರಾಮನಗರ: ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಸ್ಥಳಾಂತರ ವಿಚಾರಕ್ಕೆ ದಿನೇ ದಿನೇ ಹೋರಾಟ ಹೆಚ್ಚಾಗುತ್ತಿರುವ ಕುರಿತು ಚನ್ನಪಟ್ಟಣದ ವಂದಾರಗುಪ್ಪೆ ಗ್ರಾಮದಲ್ಲಿ ಸಂಸದ ಡಿಕೆ ಸುರೇಶ್ (DK Suresh) ಪ್ರತಿಕ್ರಿಯೆ ನೀಡಿದ್ದಾರೆ.

    ರಾಮನಗರದ (Ramanagara) ಮೆಡಿಕಲ್ ಕಾಲೇಜು ಎಲ್ಲೂ ಹೋಗಲ್ಲ. ರಾಜಕೀಯ ಉದ್ದೇಶದಿಂದ ಬಂದ್ ಮಾಡುವವರಿಗೆ ನಮ್ಮದೇನು ತಕರಾರಿಲ್ಲ. ಜಿಲ್ಲೆಯ ಜನರ ಹಿತ ಕಾಪಾಡುವುದು ನಮ್ಮ ಕರ್ತವ್ಯ. ಯಾರು ಗೊಂದಲ ಹುಟ್ಟುಹಾಕುತ್ತಿದ್ದಾರೋ ಗೊತ್ತಿಲ್ಲ. ಕನಕಪುರದ (Kanakapura) ಮೆಡಿಕಲ್ ಕಾಲೇಜು ಕನಕಪುರದಲ್ಲೇ ಆಗುತ್ತದೆ. ರಾಮನಗರದ ಮೆಡಿಕಲ್ ಕಾಲೇಜು ರಾಮನಗರದಲ್ಲೇ ಆಗುತ್ತದೆ. ಐದು ವರ್ಷದಲ್ಲಿ ನಮ್ಮ ಕೆಲಸ ಪೂರ್ಣ ಮಾಡುತ್ತೇವೆ. ರಾಜಕೀಯಕ್ಕಾಗಿ ಗೊಂದಲ ಮಾಡುವವರು ಮಾಡಲಿ. 20 ವರ್ಷದಿಂದ ಮಲಗಿದ್ದವರು ಈಗ ಎದ್ದಿದ್ದಾರೆ. ಅವರ ಪಾಡಿಗೆ ಅವರು ಆರೋಪ ಮಾಡಲಿ ಎಂದು ಪರೋಕ್ಷವಾಗಿ ಜೆಡಿಎಸ್‌ಗೆ ಟಾಂಗ್ ನೀಡಿದರು. ಇದನ್ನೂ ಓದಿ: ಸಮಾನತೆ ಇಲ್ಲದ ಧರ್ಮ ಧರ್ಮವೇ ಅಲ್ಲ – ಪ್ರಿಯಾಂಕ್ ಖರ್ಗೆ

    ದಿನೇ ದಿನೇ ಕಾವೇರಿ (Kaveri Water) ಹೋರಾಟ ಹೆಚ್ಚಾಗುತ್ತಿರುವ ವಿಚಾರದ ಕುರಿತು ಮಾತನಾಡಿದ ಅವರು, ರೈತರಿಗೆ ನೀರು ಉಳಿಸಬೇಕು. ರಾಜ್ಯದ ಹಿತ ಕಾಯಬೇಕೆಂಬುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಾನು ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಆದಷ್ಟು ಬೇಗ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಮನವಿ ಮಾಡಿ ರಾಜ್ಯದ ವಸ್ತುಸ್ಥಿತಿಯನ್ನು ಕೋರ್ಟ್‌ಗೆ ಅರ್ಥ ಮಾಡಿಸುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವಿದ್ಯುತ್ ಕ್ಷಾಮ ತಂದಿರಿಸಿದೆ: ಬೊಮ್ಮಾಯಿ

    ರಾಜ್ಯದಲ್ಲಿ ಬರಪೀಡಿತ ಪ್ರದೇಶ ಘೋಷಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಳೆ ಆಗಿಲ್ಲ. 46% ರಷ್ಟು ಮಳೆ ಕಡಿಮೆ ಆಗಿದೆ. ರಾಮನಗರದಲ್ಲೂ ಮಳೆ ಇಲ್ಲದೆ ಬಿತ್ತನೆ ಕಾರ್ಯ ನಡೆದಿಲ್ಲ. ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಲಿದೆ ಎಂದರು. ಇದನ್ನೂ ಓದಿ: ರಾಜಕೀಯ ಲಾಭಕ್ಕೆ ಮಾಡುವ ಉಚಿತ ಯೋಜನೆಗಳ ಆಯಸ್ಸು ಸ್ವಲ್ಪ ದಿನ ಮಾತ್ರ: ಬೊಮ್ಮಾಯಿ

    ಬಿಎಲ್ ಸಂತೋಷ್ (B.L.Santhosh) ಸಂಪರ್ಕದಲ್ಲಿ ಕಾಂಗ್ರೆಸ್‌ನ (Congress) 45 ಶಾಸಕರಿದ್ದಾರೆ ಎಂಬ ವಿಚಾರದ ಕುರಿತು, ಅವರ ಹೇಳಿಕೆಯನ್ನು ಉಲ್ಟಾ ಮಾಡಿಕೊಳ್ಳಿ ಎಂದಿದ್ದಾರೆ. ಬಿಜೆಪಿಯವರೇ (BJP) 45 ಜನ ನಮ್ಮ ಹತ್ತಿರ ಬರುತ್ತಾರೆ ಅಂದುಕೊಳ್ಳಿ ಎಂದು ಪರೋಕ್ಷವಾಗಿ ಆಪರೇಷನ್ ಹಸ್ತದ ಬಗ್ಗೆ ಸುಳಿವು ನೀಡಿದ್ದಾರೆ. ಇದನ್ನೂ ಓದಿ: ಉದಯ್ ಸ್ಟಾಲಿನ್‌ದು ಹಿಟ್ಲರ್ ಮನಸ್ಥಿತಿ: ಬೊಮ್ಮಾಯಿ ವಾಗ್ದಾಳಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ರಾಮನಗರದಲ್ಲೇ ಮೆಡಿಕಲ್ ಕಾಲೇಜು ಉಳಿಯುತ್ತೆ, ವಿಪಕ್ಷಗಳು ರಾಜಕೀಯಕ್ಕೆ ಗೊಂದಲ ಮಾಡ್ತಿವೆ: ಇಕ್ಬಾಲ್ ಹುಸೇನ್

    ರಾಮನಗರದಲ್ಲೇ ಮೆಡಿಕಲ್ ಕಾಲೇಜು ಉಳಿಯುತ್ತೆ, ವಿಪಕ್ಷಗಳು ರಾಜಕೀಯಕ್ಕೆ ಗೊಂದಲ ಮಾಡ್ತಿವೆ: ಇಕ್ಬಾಲ್ ಹುಸೇನ್

    ರಾಮನಗರ: ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಶಿಫ್ಟ್‌ಗೆ ವಿರೋಧಿಸಿ ಸೆಪ್ಟೆಂಬರ್ 8ಕ್ಕೆ ರಾಮನಗರ ಬಂದ್‌ಗೆ ಕರೆ ನೀಡಿರುವ ಕುರಿತು ರಾಮನಗರ (Ramanagara) ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಪ್ರತಿಕ್ರಿಯೆ ನೀಡಿದರು.

    ನಮ್ಮ ಕಾಲೇಜು, ನಮ್ಮ ಯೂನಿವರ್ಸಿಟಿ ಇಲ್ಲೇ ಇರುತ್ತದೆ. ಅದಕ್ಕಾಗಿ ಬಂದ್ ಮಾಡುವುದರಲ್ಲಿ ಅರ್ಥ ಇಲ್ಲ. ನಾನು ವೈದ್ಯಕೀಯ ಸಚಿವ ಶರಣಪ್ರಕಾಶ್ ಅವರನ್ನು ಭೇಟಿ ಆಗಿದ್ದೇನೆ. ಡಿಕೆ ಸುರೇಶ್ (DK Suresh) ಹಾಗೂ ನಾನು ಇಬ್ಬರೂ ಅವರ ಜೊತೆ ಮಾತನಾಡಿದ್ದೇವೆ. ಮೆಡಿಕಲ್ ಕಾಲೇಜು ರಾಮನಗರದಲ್ಲೇ ಉಳಿಯುತ್ತೆ. ಸಚಿವರೇ ಬಂದು ಗುದ್ದಲಿ ಪೂಜೆ ಮಾಡುತ್ತಾರೆ. ಸುರೇಶ್ ಅವರ ನೇತೃತ್ವದಲ್ಲಿ ನಾನೇ ಆ ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: ಆದಿತ್ಯ L1 ಮಿಷನ್‍ನ ಯಶಸ್ವಿ ಉಡಾವಣೆಗೆ ರಾಜ್ಯಪಾಲ ಅಭಿನಂದನೆ

    ಈ ಕಾಲೇಜಿಗೂ ಕನಕಪುರ ಕಾಲೇಜಿಗೂ ಸಂಬಂಧ ಇಲ್ಲ. ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು 20 ವರ್ಷದ ಹಿಂದೆ ಆಗಿರೋದು. ಆದರೆ ಕನಕಪುರಕ್ಕೆ ಮಂಜೂರಾಗಿದ್ದ ಕಾಲೇಜು ಚಿಕ್ಕಬಳ್ಳಾಪುರಕ್ಕೆ ಶಿಪ್ಟ್ ಆಗಿತ್ತು. ಈಗ ಮತ್ತೆ ಕನಕಪುರಕ್ಕೆ ನಮ್ಮ ನಾಯಕರು ಹೊಸ ಕಾಲೇಜು ತರುತ್ತಾರೆ. ರಾಜೀವ್ ಗಾಂಧಿ ಮೆಡಿಕಲ್ ಕಾಲೇಜಿಗೂ ಅದಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಇಸ್ರೋಗೆ ಜಾಗ ಕೊಟ್ಟಿದ್ದು ಕಾಂಗ್ರೆಸ್: ಬಿ.ಕೆ ಹರಿಪ್ರಸಾದ್

    ಇದರಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ನವರು ರಾಜಕೀಯ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಸರ್ಕಾರ ಟೇಕಫ್ ಆಗ್ತಾ ಇದೆ. ಕಾಂಗ್ರೆಸ್ ಬಗ್ಗೆ ಜನರಿಗೆ ಒಳ್ಳೆಯ ಆಸಕ್ತಿ, ವಿಶ್ವಾಸ ಇದೆ. ಇಷ್ಟೆಲ್ಲಾ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆಯಲ್ವಾ ಎನ್ನುವ ಹೊಟ್ಟೆಕಿಚ್ಚಿಗೆ ಹೀಗೆಲ್ಲಾ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: Aditya L1 ಮಿಷನ್ ಯಶಸ್ವಿ: ಇಸ್ರೋ ಅಧ್ಯಕ್ಷ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೆಡಿಕಲ್ ಕಾಲೇಜು ಆರಂಭ ಮಾಡದಿದ್ರೆ ಉಪವಾಸ ಸತ್ಯಾಗ್ರಹ ಮಾಡ್ತೇನೆ: ಸುಧಾಕರ್

    ಮೆಡಿಕಲ್ ಕಾಲೇಜು ಆರಂಭ ಮಾಡದಿದ್ರೆ ಉಪವಾಸ ಸತ್ಯಾಗ್ರಹ ಮಾಡ್ತೇನೆ: ಸುಧಾಕರ್

    ಚಿಕ್ಕಬಳ್ಳಾಪುರ: ಜಿಲ್ಲೆಯ ವೈದ್ಯಕೀಯ ಕಾಲೇಜು ನಿರ್ಮಾಣ ವಿಚಾರದಲ್ಲಿ ಯಾವ ತನಿಖೆ ಬೇಕಾದರೂ ಮಾಡಿ. ಆದರೆ ಆದಷ್ಟು ಬೇಗ ಕಾಲೇಜು ಕಟ್ಟಡ ಹ್ಯಾಂಡ್ ಓವರ್ ಮಾಡಿಕೊಳ್ಳಿ. ಇಲ್ಲವಾದರೆ ನಾನು ಮೆಡಿಕಲ್ ಕಾಲೇಜು (Medical College) ಮುಂದೆಯೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಮಾಜಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ (Dr. K Sudhakar) ಹೇಳಿದ್ದಾರೆ.

    ಚಿಕ್ಕಬಳ್ಳಾಪುರ (Chikkaballapur) ನಗರದ ಗೃಹಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದರು. ಮಂತ್ರಿಗಳಾಗಿ ಎರಡು ತಿಂಗಳಾಗಿದೆ. ಜಿಲ್ಲಾಸ್ಪತ್ರೆಗೆ ಎಷ್ಟು ಬಾರಿ ಭೇಟಿ ಕೊಟ್ಟಿದ್ದೀರಿ. ಜಿಲ್ಲಾಸ್ಪತ್ರೆಯಲ್ಲಿ ಎಷ್ಟು ಐಸಿಯುಗಳಿವೆ ನಿಮಗೆ ಗೊತ್ತಾ. ನೀವು ಸಹ ವೈದ್ಯರಾಗಿದ್ದೀರಿ, ನಿಮಗೆ ಜವಾಬ್ದಾರಿ ಇಲ್ಲವಾ ಅಂತ ವಾಗ್ದಾಳಿ ನಡೆಸಿದರು.

    ನಾನು ಬಹಳ ಗಲಾಟೆ ಮಾಡಿ ಮೆಡಿಕಲ್ ಕಾಲೇಜು ತಂದಿದ್ದೇನೆ. ಶೀಘ್ರದಲ್ಲೇ ಕಾಲೇಜು ಆರಂಭ ಮಾಡಿ. ನಮ್ಮ ಜಿಲ್ಲೆಯಲ್ಲಿ ಆದ ಕಟ್ಟೆ ರಾಜ್ಯದಲ್ಲಿ ಎಲ್ಲೂ ಆಗಿಲ್ಲ. ಹೀಗಾಗಿ ನಿಮಗೆ ಹೊಟ್ಟೆ ಉರಿನಾ..? ನಾವ್ ಮಾಡೋಕೆ ಅಗಿಲ್ಲ ಅಂತ ಹೊಟ್ಟೆ ಉರಿನಾ..? ಒಳ್ಳೆಯ ಕೆಲಸ ಮಾಡಿದ್ರೂ ಸಹಿಸಲ್ಲ. ಕಾಲೇಜು ಪ್ರಾರಂಭ ಮಾಡದಿದ್ದರೆ ನಾನು ಮೆಡಿಕಲ್ ಕಾಲೇಜು ಮುಂದೆಯೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದರು. ಇದನ್ನೂ ಓದಿ: ಪ್ರದೀಪ್ ಈಶ್ವರ್ ಕನಸಲ್ಲೂ ನಾನು ಬರ್ತೀನಿ: ಸುಧಾಕರ್

    ಇದೇನು ಸಾಮ್ರಾಜ್ಯನಾ..? ರಾಜರ ಕಾಲ ಅಲ್ಲ. ಟಾರ್ಗೆಟ್ ಮಾಡಿದ್ದರಲ್ಲ ದ್ವೇಷದ ರಾಜಕಾರಣ ಮಾಡ್ತಿದ್ದರಲ್ಲ. ವೈಯಕ್ತಿಕವಾಗಿ ದ್ವೇಷ ಸಾಧಿಸೋದಾದರೆ ಮಾಡಿ. ಅದೇನು ಮಾಡಬೇಕೋ ಮಾಡಿ. ಕಾನೂನು ವ್ಯವಸ್ಥೆ ಇದೆ. ನಾನು ಹೆದರಿಕೊಳ್ಳೋದು ಇಲ್ಲ. ನನ್ನ ಜಿಲ್ಲೆಗೆ ಆದ ಅನ್ಯಾಯ ಸರಿಪಡಿಸಿ ಅಂತ ಆಗ್ರಹಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಡಿಶಾದಲ್ಲಿ ಮತ್ತೊಂದು ಭೀಕರ ಅಪಘಾತ – ಮದುವೆ ಮುಗಿಸಿ ಮನೆಗೆ ತೆರಳುತ್ತಿದ್ದ 12 ಮಂದಿ ಮಸಣಕ್ಕೆ

    ಒಡಿಶಾದಲ್ಲಿ ಮತ್ತೊಂದು ಭೀಕರ ಅಪಘಾತ – ಮದುವೆ ಮುಗಿಸಿ ಮನೆಗೆ ತೆರಳುತ್ತಿದ್ದ 12 ಮಂದಿ ಮಸಣಕ್ಕೆ

    ಭುವನೇಶ್ವರ: ಇತ್ತೀಚೆಗಷ್ಟೇ ಭೀಕರ ರೈಲು ದುರಂತ (Odisha Train Accident) ಸಂಭವಿಸಿದ್ದ ಒಡಿಶಾದಲ್ಲಿ (Odisha) ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು 12 ಮಂದಿ ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ.

    ಎರಡು ಬಸ್ಸುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮದುವೆ (Marriage) ಮುಗಿಸಿ ಮನೆಗೆ ತೆರಳುತ್ತಿದ್ದ 12 ಮಂದಿ ಮೃತಪಟ್ಟಿದ್ದು, 7 ಮಂದಿ ಗಾಯಗೊಂಡಿರುವ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆಯ ಮೇಲಲ್ಲ, ಕೋರ್ಟ್‍ನಲ್ಲಿ ಹೋರಾಟ ಮುಂದುವರೆಯಲಿದೆ – ಸಿಂಗ್‍ಗೆ ಕುಸ್ತಿಪಟುಗಳ ಎಚ್ಚರಿಕೆ

    ಒಡಿಶಾದಿಂದ ಸುಮಾರು 35 ಕಿಮೀ ದೂರದಲ್ಲಿರುವ ಬರ್ಹಾಂಪುರ-ತಪ್ತಪಾಣಿ ರಸ್ತೆಯ ದಿಗಪಹಂಡಿ ಪ್ರದೇಶದ ಬಳಿ ಭಾನುವಾರ ತಡರಾತ್ರಿ ಅಪಘಾತ ಸಂಭವಿಸಿದೆ ಎಂದು ಬರ್ಹಾಂಪುರ ಪೊಲೀಸ್ ವರಿಷ್ಠಾಧಿಕಾರಿ ಎಂ. ಶರವಣ ವಿವೇಕ್ ತಿಳಿಸಿದ್ದಾರೆ.

    ಬರ್ಹಾಂಪುರದಲ್ಲಿ ವಿವಾಹಮಹೋತ್ಸವ ಮುಗಿಸಿಕೊಂಡು ಪ್ರಯಾಣಿಕರು ದಿಗಪಹಂಡಿ ಬಳಿಕ ಖಂಡದೇಲಿಗೆ ಹಿಂದಿರುಗುತ್ತಿದ್ದರು, ಈ ವೇಳೆ ಅಪಘಾತ ಸಂಭವಿಸಿದೆ. ಇದರಲ್ಲಿ ಒಂದೇ ಕುಟುಂಬದ 7 ಮಂದಿ ಸೇರಿ 12 ಮಂದಿ ಮೃತಪಟ್ಟಿದ್ದಾರೆ. 7 ಮಂದಿ ಗಾಯಗೊಂಡಿದ್ದು, ಅವರನ್ನ ಎಂಕೆಸಿಜಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಡ್ರಗ್ಸ್ ಗಾಗಿ ಪೆಡ್ಲರ್ ಜೊತೆ ಅನೈತಿಕ ಸಂಬಂಧ: ಹೆಂಡತಿ ವಿರುದ್ಧವೇ ಸ್ಯಾಂಡಲ್ ವುಡ್ ನಟ ದೂರು

    ಅಪಘಾತದಲ್ಲಿ ಗಾಯಗೊಂಡ ಪ್ರತಿಯೊಬ್ಬರ ಚಿಕಿತ್ಸೆಗೆ ಒಡಿಶಾ ಸರ್ಕಾರ (Odisha Government) ತಲಾ 30 ಸಾವಿರ ರೂ. ಪರಿಹಾರ ಮಂಜೂರು ಮಾಡಿದೆ. ಸದ್ಯ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    ಮರೆಯದ ರೈಲು ದುರಂತ:
    ಇತ್ತೀಚೆಗಷ್ಟೇ ಒಡಿಶಾದ ಬಾಲಾಸೋರ್‌ ಬಳಿ ಪ್ರಯಾಣಿಕರಿದ್ದ ಎರಡು ರೈಲು ಹಾಗೂ ಸರಕು ತುಂಬಿದ್ದ ಒಂದು ರೈಲು ಅಪಘಾತಕ್ಕೀಡಾಗಿದ್ದವು. ಈ ಭೀಕರ ದುರಂತದಲ್ಲಿ ಸುಮಾರು 275 ಮಂದಿ ದುರ್ಮರಣಕ್ಕೀಡಾಗಿದ್ದರು. 1,100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಬೆಚ್ಚಿಬೀಳಿಸುವಂತಹ ದುರಂತಕ್ಕೆ ವಿಶ್ವಾದ್ಯಂತ ವಿಷಾದ ವ್ಯಕ್ತವಾಗಿತ್ತು. ಅಪಘಾತವು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ನಂತರ ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಲಾಗಿತ್ತು.