Tag: ಮೆಡಿಕಲ್ ಕಾಲೇಜ್

  • ತಾಲೂಕಿಗೊಂದು ಮೆಡಿಕಲ್ ಕಾಲೇಜ್ ಕೊಡೋಕ್ಕಾಗಲ್ಲ – ಡಿಕೆಶಿಗೆ ಬಿಎಸ್‍ವೈ ಶಾಕ್

    ತಾಲೂಕಿಗೊಂದು ಮೆಡಿಕಲ್ ಕಾಲೇಜ್ ಕೊಡೋಕ್ಕಾಗಲ್ಲ – ಡಿಕೆಶಿಗೆ ಬಿಎಸ್‍ವೈ ಶಾಕ್

    – ಟಿಪ್ಪು ಪಠ್ಯ ತೆಗ್ದು ಹಾಕೋ ವಿಷ್ಯದಲ್ಲಿ ಗೊಂದಲವಿಲ್ಲ

    ಬೆಂಗಳೂರು: ತಾಲೂಕಿಗೊಂದು ಮೆಡಿಕಲ್ ಕಾಲೇಜು ಕೋಡೋಕ್ಕಾಗಲ್ಲ ಎಂದು ಹೇಳುವ ಮೂಲಕ ಸಿಎಂ ಯಡಿಯೂರಪ್ಪ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಶಾಕ್ ನೀಡಿದ್ದಾರೆ.

    ಇಂದು ನಗರದಲ್ಲಿ ಮಾತನಾಡಿದ ಅವರು, ಮೆಡಿಕಲ್ ಕಾಲೇಜು ಸಂಬಂಧ ಗೊಂದಲ ಇಲ್ಲ. ಜಿಲ್ಲೆಗೊಂದು ಮೆಡಿಕಲ್ ಕಾಲೇಜು ಎಂದು ಈಗಾಗಲೇ ನಿರ್ಧರಿಸಲಾಗಿದೆ. ಹೀಗಿರುವಾಗ ತಾಲೂಕಿಗೆ ಒಂದು ಕಾಲೇಜು ಕೊಡಕ್ಕಾಗುತ್ತಾ? ಇದರ ಬಗ್ಗೆ ನಾನು ಡಿ.ಕೆ ಶಿವಕುಮಾರ್ ಜೊತೆ ಮಾತನಾಡುತ್ತೇನೆ ಎಂದು ಹೇಳಿದರು.

    ಇದೇ ವೇಳೆ ಟಿಪ್ಪು ಪಠ್ಯದ ವಿಚಾರದ ಬಗ್ಗೆ ಮಾತನಾಡಿದ ಅವರು, ಟಿಪ್ಪು ಪಠ್ಯ ಬಗ್ಗೆ ಯಾವುದೇ ಗೊಂದಲ ಇಲ್ಲ. ಇಂದು ಬೆಳಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬಂದಿದ್ದರು. ಟಿಪ್ಪು ಸುಲ್ತಾನ್ ಪಠ್ಯದ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಒಂದು ಸಮಿತಿ ಮಾಡಿದ್ದಾರೆ. ಆ ಸಮಿತಿ ವರದಿ ಬಂದ ಬಳಿಕ ನಿರ್ಧಾರ ತೆಗೆದುಕೊಳ್ಳುತ್ತೇವೆ. ಇದರಲ್ಲಿ ಗೊಂದಲ ಏನೂ ಇಲ್ಲ. ಟಿಪ್ಪು ಸುಲ್ತಾನ್ ಸಂಬಂಧ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.

    ನೆರೆಪರಿಹಾರ ವಿಚಾರದಲ್ಲಿ ಸಿದ್ದರಾಮಯ್ಯನವರ ಟೀಕೆಗೆ ತಿರುಗೇಟು ನೀಡಿದ ಬಿಎಸ್‍ವೈ, ನಾವು ಮಾಡಿರುವ ಕೆಲಸದ ಬಗ್ಗೆ ವಿವರವಾಗಿ ಜಾಹೀರಾತು ಕೊಡಲಾಗಿದೆ. ಸಿದ್ದರಾಮಯ್ಯ ಅವರು ಸರ್ಕಾರ ಸತ್ತು ಹೋಗಿದೆ ಎಂದು ಆರೋಪ ಮಾಡಿದ್ದಾರೆ. ಈಗಾಗಲೇ ಕೇಂದ್ರದ ಸಚಿವರಾದ ನಿರ್ಮಲಾ ಸೀತಾರಾಮನ್ ನಿನ್ನೆ ಬಂದಾಗಲೂ ನೆರೆ ಸ್ಥಿತಿಗತಿ ಬಗ್ಗೆ ತಿಳಿಸಿದ್ದೇನೆ. ನಿರ್ಮಲಾ ಸೀತಾರಾಮನ್ ಇನ್ನಷ್ಟು ಸಹಕಾರ ಕೊಟ್ಟರೆ ಪರಿಹಾರ ಕಾರ್ಯ ಮತ್ತಷ್ಟೂ ವೇಗವಾಗಿ ಮಾಡಬಹುದು. ರಾಜ್ಯ ಸರ್ಕಾರ ನೆರೆ ಪರಿಹಾರ ಕಾಮಗಾರಿ ಉತ್ತಮವಾಗಿ ಮಾಡುತ್ತಿದೆ ಎಂದು ತಿಳಿಸಿದರು.

  • ಜಂಜಾಟವೇ ಸಾಕಾಗಿದೆ, ದೊಡ್ಡವ್ರ ವಿಚಾರ ನನಗೆ ಬೇಡ- ಡಿಕೆಶಿ

    ಜಂಜಾಟವೇ ಸಾಕಾಗಿದೆ, ದೊಡ್ಡವ್ರ ವಿಚಾರ ನನಗೆ ಬೇಡ- ಡಿಕೆಶಿ

    – ಸಿಎಂಗೆ ನಿಜ ಗೊತ್ತಿದ್ದರೆ ಸ್ಥಳಾಂತರ ಮಾಡ್ತಿರಲಿಲ್ಲ

    ಬೆಂಗಳೂರು: ದೊಡ್ಡವರ ನ್ಯಾಯ ನನಗೆ ಬೇಡ. ನನ್ನ ಲೆವೆಲ್‍ನ ವಿಚಾರ ಮಾತ್ರ ನಾನು ಮಾತನಾಡುತ್ತೇನೆ. ಇಲ್ಲಿನ ಜಂಜಾಟವೇ ನನಗೆ ಸಾಕಾಗಿದೆ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

    ಸದಾಶಿವನಗರದಲ್ಲಿಂದು ಹೆಚ್‍ಡಿಕೆ ಮತ್ತು ಸಿದ್ದರಾಮಯ್ಯ ನಡುವಿನ ವಾಕ್ಸಮರ ವಿಚಾರ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಕನಕಪುರ ಬಂಡೆ, ದೊಡ್ಡವರ ನ್ಯಾಯದ ವಿಚಾರ ನನಗೆ ಬೇಡ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಏನೇನು ಹೇಳಿಕೆಗಳನ್ನು ನೀಡಿದ್ದಾರೆ ಎಂದು ನನಗೆ ಗೊತ್ತಿಲ್ಲ ಎಂದರು.

    ದೊಡ್ಡವರ ನ್ಯಾಯ ನನಗೆ ಬೇಡ. ನನ್ನ ಲೆವೆಲ್‍ನ ವಿಚಾರ ಮಾತ್ರ ಮಾತನಾಡುತ್ತೇನೆ. ಇಲ್ಲಿನ ಜಂಜಾಟವೇ ಸಾಕಾಗಿದೆ. ಆರೋಗ್ಯ ಸಮಸ್ಯೆಯನ್ನೇ ಮೊದಲು ಸರಿ ಮಾಡಿಕೊಳ್ಳಬೇಕಾಗಿದೆ. ಆಸ್ಪತ್ರೆಗೆ ಹೋಗೋದಕ್ಕೂ ನನಗೆ ಆಗುತ್ತಿಲ್ಲ. ಏನು ಪಾಲಿಟಿಕ್ಸ್ ಆಗಿದೆಯೋ ಗೊತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬಿಎಸ್‍ವೈ-ಎಚ್‍ಡಿಕೆ ನಡುವೆ ಒಳ ಒಪ್ಪಂದ: ಸಿದ್ದರಾಮಯ್ಯ ಆರೋಪ

    ಇದೇ ವೇಳೆ ಮೆಡಿಕಲ್ ಕಾಲೇಜು ಸ್ಥಳಾಂತರ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪಗೆ ನಿಜ ಸಂಗತಿ ಗೊತ್ತಿಲ್ಲ. ಗೊತ್ತಿದ್ದರೆ ಮೆಡಿಕಲ್ ಕಾಲೇಜ್ ಸ್ಥಳಾಂತರ ಮಾಡುತ್ತಿರಲಿಲ್ಲ. ನಾನು ಸುಧಾಕರ್ ವಿಚಾರದಲ್ಲಿ ಟೀಕೆ ಮಾಡೋದಿಲ್ಲ. ಚಿಕ್ಕಬಳ್ಳಾಪುರಕ್ಕಲ್ಲ, ಬೇರೆ ನೂರು ಕಡೆ ಬೇಕಾದ್ರೂ ಕೊಡಲಿ. ಆದರೆ ನಮಗೆ ಹಂಚಿಕೆಯಾಗಿದ್ದನ್ನ ಕಿತ್ತುಕೊಂಡಿದ್ದು ಸರಿಯಲ್ಲ. ನಾನು ಸಚಿವನಾಗಿದ್ದಾಗ ಒಂದೇ ಒಂದು ಕೆಲಸ ಮಾಡಿಸಿಕೊಳ್ಳಲೂ ಸಾಧ್ಯವಾಗಲಿಲ್ಲ. ಎಷ್ಟು ಕಷ್ಟಪಟ್ಟು ನನ್ನ ಕ್ಷೇತ್ರಕ್ಕೆ ಮೆಡಿಕಲ್ ಕಾಲೇಜು ತೆಗೆದುಕೊಂಡು ಹೋದೆ ಎಂದು ಬೇಸರಗೊಂಡರು.

    ಕಾವೇರಿ ನೀರಿನ ವಿಚಾರದಲ್ಲೂ ಹೀಗೇ ಆಗಿದ್ದು. ಮೇಕೆದಾಟು ಯೋಜನೆ ಜಾರಿಗೆ ಬಂದರೆ ಹೆಚ್ಚು ತೊಂದರೆ ಆಗೋದು ನಮ್ಮ ಕ್ಷೇತ್ರಕ್ಕೆ ಆದರೂ ನಾವು ಬೆಂಗಳೂರಿಗಾಗಿ ತ್ಯಾಗಕ್ಕೆ ಸಿದ್ಧರಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡಲೇ ಬಾರದು ಸಿಎಂಗೆ ಪತ್ರ ಬರೆಯುತ್ತೇನೆ.

  • ಕೋಟ್ಯಂತರ ರೂ. ವಂಚನೆ ಆರೋಪ – ಸಿದ್ಧಾರ್ಥ್ ಕಾಲೇಜ್ ಮೇಲೆ ಐಟಿ ದಾಳಿ

    ಕೋಟ್ಯಂತರ ರೂ. ವಂಚನೆ ಆರೋಪ – ಸಿದ್ಧಾರ್ಥ್ ಕಾಲೇಜ್ ಮೇಲೆ ಐಟಿ ದಾಳಿ

    ಬೆಂಗಳೂರು: ಡಿಕೆ ಶಿವಕುಮಾರ್ ಬಳಿಕ ಮಾಜಿ ಡಿಸಿಎಂ ಪರಮೇಶ್ವರ್ ಅವರಿಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು, ಪರಮೇಶ್ವರ್ ಒಡೆತನದ ಸಿದ್ಧಾರ್ಥ್ ಶಿಕ್ಷಣ ಸಂಸ್ಥೆಯ ಮೇಲೆ ಐಟಿ ದಾಳಿ ನಡೆದಿದೆ.

    ತುಮಕೂರು, ನೆಲಮಂಗಲದಲ್ಲಿರುವ ಸಿದ್ಧಾರ್ಥ್ ಕಾಲೇಜುಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

    ದಾಳಿ ಯಾಕೆ?
    ಸಿದ್ಧಾರ್ಥ್ ಶಿಕ್ಷಣ ಸಂಸ್ಥೆಯಲ್ಲಿ ಮೆಡಿಕಲ್ ಮತ್ತು ಎಂಜಿನಿಯರಿಂಗ್ ಸೀಟ್ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎನ್ನುವ ಆರೋಪ ಕೇಳಿ ಬಂದಿದೆ. ಮೆಡಿಕಲ್, ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸರ್ಕಾರಿ ಸೀಟ್ ಹೊರತುಪಡಿಸಿ ಮ್ಯಾನೇಜ್‍ಮೆಂಟ್ ಸೀಟ್ ಗಳು ಇರುತ್ತವೆ. ಈ ಸೀಟ್ ಗಳಿಗೆ ಕಾಲೇಜುಗಳು ಲ್ಕ ವಿಧಿಸಬಹುದಾಗಿದ್ದು, ಇದರಲ್ಲಿ ಕೋಟ್ಯಂತರ ರೂ. ಅಕ್ರಮ ನಡೆದಿದೆ. ಅಷ್ಟೇ ಅಲ್ಲದೇ ತೆರಿಗೆಯನ್ನು ಮರೆಮಾಚಲು ಶುಲ್ಕವನ್ನು ನಗದು ರೂಪದಲ್ಲಿ ಪಾವತಿಸಲಾಗಿದೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

  • ಹಿರಿಯ ವಿದ್ಯಾರ್ಥಿಗಳ ರ‍್ಯಾಗಿಂಗ್ ನಿಂದಾಗಿ ಎಂಬಿಬಿಎಸ್ ವಿದ್ಯಾರ್ಥಿ ನೇಣಿಗೆ ಶರಣು!

    ಹಿರಿಯ ವಿದ್ಯಾರ್ಥಿಗಳ ರ‍್ಯಾಗಿಂಗ್ ನಿಂದಾಗಿ ಎಂಬಿಬಿಎಸ್ ವಿದ್ಯಾರ್ಥಿ ನೇಣಿಗೆ ಶರಣು!

    ಶಿವಮೊಗ್ಗ: ನಗರದ ಮೆಡಿಕಲ್ ಕಾಲೇಜಿನ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಕೊಂಡಿರುವ ಘಟನೆ ನಡೆದಿದೆ.

    ರಾಘು ಎಂಬಾತನೇ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯಾಗಿದ್ದು, ಈತ ಸೀನಿಯರ್ ವಿದ್ಯಾರ್ಥಿಗಳ ರ‍್ಯಾಗಿಂಗ್ ನಿಂದಾಗಿ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಲಾಗಿದೆ.

    ಹಾಸ್ಟೆಲ್‍ ನ ತನ್ನ ರೂಮಿನಲ್ಲೇ ನೇಣು ಬಿಗಿದುಕೊಂಡಿರುವ ರಾಘು ಮೃತದೇಹವನ್ನು ಸೀನಿಯರ್ ವಿದ್ಯಾರ್ಥಿಗಳೇ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಿದ್ದರು. ಪೊಲೀಸರು ಬರುವ ಮುನ್ನವೇ ನೇಣು ಹಾಕಿಕೊಂಡಿದ್ದ ದೇಹವನ್ನು ಕೆಳಗಿಳಿಸಿ, ಆಸ್ಪತ್ರೆಗೆ ಸೇರಿಸಲಾಗಿತ್ತು. ವಾರ್ಡನ್, ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು ರಾಘುವಿನ ಪೋಷಕರನ್ನು ಮಾತನಾಡಿಸಿಲ್ಲ.

    ಮೂಲತಃ ಶಿಕಾರಿಪುರ ತಾಲೂಕು ಹೊಸೂರಿನ ರಾಘು ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದು, ಊರಿನಲ್ಲಿ ದೀಪಾವಳಿ ಹಬ್ಬ ಮುಗಿಸಿ ಭಾನುವಾರ ಮಧ್ಯಾಹ್ನವಷ್ಟೇ ಹಾಸ್ಟೆಲ್‍ ಗೆ ಮರಳಿದ್ದ. ಮನೆಯಲ್ಲಿ ಯಾವುದೇ ತೊಂದರೆ ಇರಲಿಲ್ಲ. ರೂಮಿಗೆ ಬಂದವನೇ ಸ್ವಲ್ಪ ಸಮಯದಲ್ಲೇ ನೇಣು ಹಾಕಿಕೊಂಡಿರುವುದು ಇದೀಗ ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ.

    ಈ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.