Tag: ಮೆಡಿಕಲ್ ವಿದ್ಯಾರ್ಥಿನಿ

  • ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಹಿರಿಯ ವೈದ್ಯರ ಕಿರುಕುಳವೇ ಕಾರಣ: ಸಂಬಂಧಿಕರ ಆಕ್ರೋಶ

    ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಹಿರಿಯ ವೈದ್ಯರ ಕಿರುಕುಳವೇ ಕಾರಣ: ಸಂಬಂಧಿಕರ ಆಕ್ರೋಶ

    ಕೋಲಾರ: ಆಕೆ ಮಕ್ಕಳ ವೈದ್ಯೆಯಾಗುವ ಕನಸು ಹೊತ್ತು ದೂರದ ಬಳ್ಳಾರಿಯಿಂದ ಬೆಂಗಳೂರಿಗೆ ಬಂದಿದ್ದಳು. ತಂದೆಯನ್ನು ಕಳೆದುಕೊಂಡಿದ್ದ ಆಕೆ ಕೆಲಸದ ಒತ್ತಡ, ಹಿರಿಯ ವೈದ್ಯರ ಕಿರಕುಳದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಳು. ಅಲ್ಲದೆ ತನ್ನ ಸ್ನೇಹಿತನ ಬಳಿ ಆತ್ಮಹತ್ಯೆ (Suicide) ಮಾಡಿಕೊಳ್ಳುವ ಬಗ್ಗೆ ಹೇಳಿ ಕೊನೆಗೆ ಆಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ಭಾನುವಾರ ಹೊಸಕೋಟೆಯ ಎಂವಿಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ (Medical Student) ದರ್ಶಿನಿ (24) ಕೋಲಾರ ತಾಲೂಕಿನ ಕೆಂದಟ್ಟಿ ಬಳಿಯ ಕ್ವಾರಿಯಲ್ಲಿರುವ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯರವ ಕಿರುಕುಳದ ಆರೋಪ ಕೇಳಿ ಬರುತ್ತಿದೆ.

    ಪ್ರಕರಣಕ್ಕೆ ಸಬಂಧಿಸಿದಂತೆ ಕಾಲೇಜು ಆಡಳಿತ ಮಂಡಳಿಯವರ ಕಿರುಕುಳ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ. ಕೊಪ್ಪಳದಲ್ಲಿ ಎಂಬಿಬಿಎಸ್ ಮುಗಿಸಿ, ಕಳೆದ 7 ತಿಂಗಳ ಹಿಂದೆ ಹೊಸಕೋಟೆ ಬಳಿ ಇರುವ ಎಂವಿಜೆ ಮೆಡಿಕಲ್ ಕಾಲೇಜಿನಲ್ಲಿ ಎಂಡಿ ವಿದ್ಯಾಭ್ಯಾಸಕ್ಕೆ ಆಗಮಿಸಿದ್ದಳು. ಕಳೆದ 2 ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡಿದ್ದ ವಿದ್ಯಾರ್ಥಿನಿ ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದು ವೈದ್ಯಳಾಗಬೇಕೆಂಬ ಕನಸು ಹೊತ್ತಿದ್ದಳು. ಆದರೆ ಭಾನುವಾರ ಕೋಲಾರದ ಬಳಿ ಇರುವ ಕ್ವಾರಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಚುನಾವಣೆ ವೇಳೆ ಸೌಲಭ್ಯ ನೀಡಿ ಬಳಿಕ ಸ್ಥಗಿತ – ಗ್ರಾ.ಪಂ. ಕಚೇರಿಗೆ ಮುತ್ತಿಗೆ ಹಾಕಿ ಸಿಬ್ಬಂದಿಯನ್ನು ಕೂಡಿ ಹಾಕಿದ ಗ್ರಾಮಸ್ಥರು

    ಮಕ್ಕಳ ತಜ್ಞೆಯಾಗಿ ಉಚಿತ ಪ್ರವೇಶವನ್ನು ಪಡೆದಿದ್ದ ದರ್ಶಿನಿಗೆ ಕಾಲೇಜು ಆಡಳಿತ ಮಂಡಳಿಯವರು ಕಿರುಕುಳ ಕೊಡುತ್ತಿದ್ದರು ಎನ್ನಲಾಗಿದೆ. ದಿನದ 24 ಗಂಟೆಗಳ ಕಾಲ ವಿಶ್ರಾಂತಿ ಇಲ್ಲದೆ ಕೆಲಸ ಮಾಡಬೇಕಾಗಿದ್ದು ಊಟಕ್ಕೂ ಸಹ ಬಿಡುತ್ತಿರಲಿಲ್ಲ ಎನ್ನಲಾಗಿದೆ. ಜೊತೆಗೆ ಹಿರಿಯ ವೈದ್ಯ ಮಹೇಶ್ ಎಂಬಾತನ ಕಿರುಕುಳ ಹೆಚ್ಚಾಗಿದ್ದು, ಕಾಫಿ ಹೆಸರಿನಲ್ಲಿ ದರ್ಶಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಎಂದು ಪೋಷಕರು ಆರೋಪಿಸಿದ್ದಾರೆ. ಹೀಗಾಗಿ ಆಡಳಿತ ಮಂಡಳಿಯವರ ಕಿರುಕುಳವನ್ನು ಪ್ರಶ್ನೆ ಮಾಡಿದರೆ ಇಂಟರ್ನಲ್ ಮಾರ್ಕ್ ಕೊಡುವುದಿಲ್ಲ ಎಂಬ ಭಯದಿಂದ, ಮನೆಯವರಿಗೆ ಕಿರುಕುಳದ ಕುರಿತು ತಿಳಿಸದೆ, ಸ್ನೇಹಿತ ಮಣಿ ಎಂಬುವರ ಬಳಿ ತನ್ನ ಅಳಲನ್ನು ತೋಡಿಕೊಂಡಿದ್ದಳು.

    ಆತ್ಮಹತ್ಯೆಗೂ ಮುನ್ನ ಸ್ನೇಹಿತ ಮಣಿಗೆ ಕರೆ ಮಾಡಿ ಘಟನೆಯನ್ನು ತಿಳಿಸಿ ಫೋನ್ ಕಟ್ ಮಾಡಿದ್ದಾಳೆ. ನಂತರ ಮಣಿಯ ಕರೆಗೂ ಸ್ಪಂದಿಸದೇ ಕ್ವಾರಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದರ್ಶಿನಿ ಕಾಲೇಜಿನಿಂದ ಇಷ್ಟು ದೂರು ಬಂದು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿನಿಯ ತಮ್ಮ ಅನುಮಾನ ವ್ಯಕ್ತಪಡಿಸಿದ್ದಾನೆ. ಘಟನೆ ಸಂಬಂಧ ಆಡಳಿತ ಮಂಡಳಿ ಹಾಗೂ ಹಿರಿಯ ವೈದ್ಯನ ವಿರುದ್ಧ ಪೋಷಕರು ದೂರು ನೀಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸರು ಐಪಿಸಿ ಸೆಕ್ಷನ್ 306 ಹಾಗೂ 345 ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಟಿ. ನರಸೀಪುರದ ದೇಗುಲದಲ್ಲಿ ಕಾಣಿಸಿಕೊಂಡ ಚಿರತೆ

  • ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

    ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

    ಕೋಲಾರ: ಕಲ್ಲು ಕ್ವಾರಿಯಲ್ಲಿನ ನೀರಿನಲ್ಲಿ ಮೆಡಿಕಲ್ ವಿದ್ಯಾರ್ಥಿನಿ (Medical Student) ಶವ ಪತ್ತೆಯಾಗಿದೆ.

    ಕೋಲಾರ (Kolar) ತಾಲೂಕಿನ ಕೆಂದಟ್ಟಿ ಗ್ರಾಮದ ಬಳಿ ಇರುವ ಕ್ವಾರಿಯಲ್ಲಿ ಈ ಘಟನೆ ನಡೆದಿದೆ. ಕ್ವಾರಿಯ ನೀರಿಗೆ ಜಿಗಿದು ಮೆಡಿಕಲ್ ವಿಧ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಎದುರಾಗಿದೆ. ಹೊಸಕೋಟೆ ತಾಲೂಕಿನ ಎಂವಿಜೆ ಮೆಡಿಕಲ್ ಕಾಲೇಜಿನ ದರ್ಶಿನಿ (24) ಆತ್ಮಹತ್ಯೆ (Suicide) ಮಾಡಿಕೊಂಡ ವಿಧ್ಯಾರ್ಥಿನಿ.

    ಬಳ್ಳಾರಿ ಮೂಲದ ದರ್ಶಿನಿ ಸ್ನೇಹಿತರಿಗೆ ದೂರವಾಣಿ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಿದ್ಯಾರ್ಥಿನಿಯ ಸ್ನೇಹಿತರು ತಿಳಿಸಿದ್ದಾರೆ. ಎಂವಿಜೆ ಮೆಡಿಕಲ್ ಕಾಲೇಜಿನಲ್ಲಿ ಎಂಡಿ ಪಿಡಿಯಾಟ್ರಿಕ್ ವಿದ್ಯಾರ್ಥಿನಿಯಾಗಿದ್ದಳು. ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ – ಪೊಲೀಸರಿಂದ ಖಡಕ್ ಎಚ್ಚರಿಕೆ

    ಇದೀಗ ವಿಧ್ಯಾರ್ಥಿನಿಯ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಮದುವೆಯಾಗಿ ಕೊಠಡಿ ಸೇರಿದ ನವದಂಪತಿ ಶವವಾಗಿ ಪತ್ತೆ – ಇಬ್ಬರಿಗೂ ಹೃದಯಾಘಾತ!

  • ರೈಲಿಗೆ ತಲೆಕೊಟ್ಟು ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

    ರೈಲಿಗೆ ತಲೆಕೊಟ್ಟು ಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆ

    ಕೊಪ್ಪಳ: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮೆಡಿಕಲ್‌ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳದ ಕಿಡದಾಳ್ ರೈಲ್ವೇ ಗೇಟ್ ಬಳಿ ನಡೆದಿದೆ.

    ತೇಜಶ್ರೀ(22) ಆತ್ಮಹತ್ಯೆ ಮಾಡಿಕೊಂಡ‌ ವಿದ್ಯಾರ್ಥಿನಿಯಾಗಿದ್ದಾಳೆ. ತೇಜಶ್ರೀ ಮೂಲತಃ ಬಳ್ಳಾರಿ ಜಿಲ್ಲೆಯವರಾಗಿದ್ದು, ಆಸ್ಪತ್ರೆಯಲ್ಲಿ ಇಂಟರ್ನ್‌ಶಿಪ್‌ ಕೆಲಸವನ್ನು ಮಾಡುತ್ತಿದ್ದಳು. ಆದರೆ ಮಾನಸಿಕವಾಗಿ ನೊಂದಿದ್ದ ಈಕೆ ಇಂದು ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಗಂಭೀರವಾಗಿ ಗಾಯಗೊಂಡ ತೇಜಶ್ರೀಯನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಯಲ್ಲಿ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ತೇಜಶ್ರೀ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ: ಸರ್ಕಾರಿ ಶಾಲಾ ಶಿಕ್ಷಕನ ಕಾಮಚೇಷ್ಟೆ ಪ್ರಕರಣ – ಗೋವಾದಲ್ಲಿ ಕಾಮುಕ ಅರೆಸ್ಟ್

    ಕಳೆದ ಮೂರು ತಿಂಗಳಿಂದ ಮಾನಸಿಕ ಖಿನ್ನತೆಗೆ ತೇಜಶ್ರೀ ಒಳಗಾಗಿದ್ದಳು ಎಂದು ಪೋಷಕರು ತಿಳಿಸಿದ್ದು, ಗದಗ ರೈಲ್ವೆ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ಸಾವಿನ ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ನೂತನ ಸ್ಪೀಕರ್ ಆಗಿ ರಾಹುಲ್ ನಾರ್ವೇಕರ್ ಆಯ್ಕೆ

    Live Tv

  • ಎಕ್ಸಾಂನಲ್ಲಿ ಫೇಲ್ – ಆತ್ಮಹತ್ಯೆಗೆ ಶರಣಾದ ಮೆಡಿಕಲ್ ವಿದ್ಯಾರ್ಥಿನಿ

    ಎಕ್ಸಾಂನಲ್ಲಿ ಫೇಲ್ – ಆತ್ಮಹತ್ಯೆಗೆ ಶರಣಾದ ಮೆಡಿಕಲ್ ವಿದ್ಯಾರ್ಥಿನಿ

    ನವದೆಹಲಿ: ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ 19 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ದೆಹಲಿಯ ಐಟಿಒನಲ್ಲಿರುವ ಮೌಲಾನಾ ಆಜಾದ್ ಮೆಡಿಕಲ್ ಕಾಲೇಜಿನ ಮಹಿಳಾ ಹಾಸ್ಟೆಲ್‍ನಲ್ಲಿ ಯುವತಿ ತನ್ನ ಕೋಣೆಯಲ್ಲಿ ಆತ್ಮಹತ್ಯೆಗೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತ ಯುವತಿಯನ್ನು ದಿವ್ಯಾ ಯಾದವ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕೋವಿಡ್‌ ಲಸಿಕೆಯ 4ನೇ ಬೂಸ್ಟರ್‌ ಡೋಸ್‌ಗೆ ಇಸ್ರೇಲ್‌ ಅನುಮೋದನೆ

    ಇತ್ತೀಚೆಗೆ ನಡೆದ ಪರೀಕ್ಷೆಯ ಎರಡು ಪೇಪರ್ ಗಳಲ್ಲಿ ದಿವ್ಯಾ ಫೇಲ್ ಆಗಿದ್ದಾಳೆ ಎಂದು ಆಕೆಯ ರೂಮ್ ಮೇಟ್‌ಗಳು ತಿಳಿಸಿದ್ದಾರೆ. ಡಿಸೆಂಬರ್ 29 ರ ಸಂಜೆ ಫಲಿತಾಂಶ ಪ್ರಕಟನೆಗೊಂಡಿದ್ದು, ಅಂದಿನಿಂದ ದಿವ್ಯಾ ಖಿನ್ನತೆಗೆ ಒಳಗಾಗಿದ್ದಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ಆಂಧ್ರ ವ್ಯಕ್ತಿಯ ಕೈ ಹಿಡಿದ ಟರ್ಕಿ ಮಹಿಳೆ

    ಬೆಳಗ್ಗೆ ಕೊಠಡಿ ಸಂಖ್ಯೆ 64ರಲ್ಲಿ ಯಾರೂ ಇಲ್ಲದ ವೇಳೆ ದಿವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಲ್ಲದೇ ಕೊಠಡಿಯ ಒಳಗಿನಿಂದ ಚಿಲಕ ಹಾಕಿದ್ದ ಕಾರಣ ಹಾಸ್ಟೆಲ್ ಸಿಬ್ಬಂದಿ ಬಾಗಿಲನ್ನು ಒಡೆದು ತೆರೆದರು. ಈ ವೇಳೆ ರಿಜಿಸ್ಟರ್‌ನಲ್ಲಿ ಸೂಸೈಡ್ ನೋಟ್ ಪತ್ತೆಯಾಗಿದೆ. ಇದೀಗ ದಿವ್ಯಾ ಮೊಬೈಲ್ ವಶಕ್ಕೆ ಪಡೆಯಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಆಕೆಯ ಕುಟುಂಬಕ್ಕೆ ಪೊಲೀಸರು ಹಸ್ತಾಂತರಿಸಲಿದ್ದಾರೆ.

  • ಅಪಘಾತದಲ್ಲಿ ವಿದ್ಯಾರ್ಥಿ ಸಾವು – ನುಚ್ಚು ನೂರಾದ ಮೆಡಿಕಲ್ ಕನಸು

    ಅಪಘಾತದಲ್ಲಿ ವಿದ್ಯಾರ್ಥಿ ಸಾವು – ನುಚ್ಚು ನೂರಾದ ಮೆಡಿಕಲ್ ಕನಸು

    ದಾವಣಗೆರೆ: ಸ್ಕೂಟಿ ಹಾಗೂ ಕಾರ್ ನಡುವೆ ಡಿಕ್ಕಿಯಾಗಿ ಸ್ಕೂಟಿಯಲ್ಲಿದ್ದ ಹೈದರಾಬಾದ್ ಮೂಲದ ಮೆಡಿಕಲ್ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.

    ದಾವಣಗೆರೆಯ ಎಂಸಿಸಿ ‘ಬಿ’ ಬ್ಲಾಕ್ ನಲ್ಲಿ ಈ ಘಟನೆ ಜರುಗಿದೆ. ಜೆಜೆಎಂ ಮೆಡಿಕಲ್ ಕಾಲೇಜ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕಾ(26) ಸಾವನ್ನಪ್ಪಿದ್ದ ಮೆಡಿಕಲ್ ವಿದ್ಯಾರ್ಥಿನಿ. ಇಂದು ಬೆಳಗ್ಗೆ ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುವ ವೇಳೆ ಅನಿರೀಕ್ಷಿತವಾಗಿ ಕಾರ್ ಡಿಕ್ಕಿಯಾಗಿ ಸ್ಕೂಟಿಯಿಂದ ಕೆಳಗೆ ಬಿದ್ದ ಪ್ರಿಯಾಂಕಾ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದಿದೆ. ಈ ಪರಿಣಾಮ ರಕ್ತ ಸ್ರಾವ ಆಗಿ ಆಸ್ಪತ್ರೆಗೆ ಸಾಗಿಸುವಾಗ ಸಾವನಪ್ಪಿದ್ದಾಳೆ. ಇದನ್ನು ಓದಿ: ಬಂಗಾರ ಕರಗಿಸಿ ಕೊಡುವುದಾಗಿ ನಂಬಿಸಿ ವಂಚನೆ ಮಾಡಿದ ವ್ಯಾಪಾರಿಯ ಬಂಧನ

    ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕೆಳಗಡೆ ಬಿದ್ದ ಯುವತಿಯ ತಲೆ ಫುಟ್ ಪಾತ್ ನ ಸಿಮೆಂಟ್ ಕಲ್ಲಿಗೆ ಬಡಿದಿದೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೆಡಿಕಲ್ ಮಾಡುವ ಮೃತ ವಿದ್ಯಾರ್ಥಿನಿ ಪ್ರಿಯಾಂಕಾಳ ಆಸೆ ನುಚ್ಚು ನೂರಾಗಿದೆ.

    ಹೆಲ್ಮೆಟ್ ಸರಿಯಾಗಿ ಧರಿಸಿದ್ದರೆ ಅವಘಡ ನಡೆಯುತ್ತಿರಲಿಲ್ಲ ಎಂದು ಸ್ಥಳೀಯರು ತಿಳಿಸಿದ್ದು, ಮೃತ ವಿದ್ಯಾರ್ಥಿನಿ ವಿಚಾರ ಪೋಷಕರಿಗೆ ತಿಳಿಸಲಾಗಿದೆ. ಕೆಎಲ್ 02 ಬಿಜಿ 8173 ನೊಂದಣಿಯ ಕೇರಳ ಮೂಲದ ಕಾರಾಗಿದ್ದು, ಅಪಘಾತ ಮಾಡಿದ ವ್ಯಕ್ತಿ ಕಾರು ಬಿಟ್ಟು ಪರಾರಿಯಾಗಿದ್ದಾನೆ. ಇದರ ಬಗ್ಗೆ ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯ ಪೊಲಿಸರು ತನಿಖೆ ನಡೆಸುತ್ತಿದ್ದಾರೆ.

  • ಕಾಲೇಜಿನ ಅನತಿ ದೂರದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಶವ ಪತ್ತೆ

    ಕಾಲೇಜಿನ ಅನತಿ ದೂರದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಶವ ಪತ್ತೆ

    -ವೈದ್ಯನಿಂದ ಕಿರುಕುಳ, ಬೆದರಿಕೆ ಆರೋಪ
    -ವಿದ್ಯಾರ್ಥಿನಿ ಪೋಷಕರಿಂದ ದೂರು ದಾಖಲು

    ಲಕ್ನೋ: ಉತ್ತರ ಪ್ರದೇಶದ ಆಗ್ರಾದಲ್ಲಿ ಬುಧವಾರ ಬೆಳಗ್ಗೆ 25 ವರ್ಷದ ಮೆಡಿಕಲ್ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಕಾಲೇಜಿನ ಅನತಿ ದೂರದಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.

    ವಿದ್ಯಾರ್ಥಿನಿ ಯೋಗಿತಾ ಗೌತಮ್ ದೆಹಲಿಯ ಶಿವಪುರಿಯ ನಿವಾಸಿಯಾಗಿದ್ದು, ಆಗ್ರಾದಲ್ಲಿ ವಾಸವಾಗಿದ್ದರು. ಯುವತಿಯ ದೇಹದ ಮೇಲೆ ಗಾಯದ ಗುರುತುಗಳು ಕಂಡು ಬಂದಿದ್ದು, ಕೊಲೆ ಎಂದು ಶಂಕಿಸಲಾಗಿದೆ. ಮಂಗಳವಾರ ರಾತ್ರಿ ಯುವತಿ ಪೋಷಕರು ಮಗಳು ಕಾಣೆಯಾಗಿರುವ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೋಷಕರು ದೂರು ದಾಖಲಿಸಿದ ಕೆಲ ಗಂಟೆಯಲ್ಲಿ ಯುವತಿ ಶವ ಪತ್ತೆಯಾಗಿದೆ.

    ಕಾಲೇಜಿನ ಓರ್ವ ವೈದ್ಯ ಪುತ್ರಿಗೆ ಕಿರುಕುಳ ನೀಡುತ್ತಿದ್ದ. ಬೆದರಿಕೆ ಸಹ ಹಾಕಿದ್ದನು ಎಂದು ಯುವತಿ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪೋಷಕರ ದೂರನಿನ್ವಯ ಪೊಲೀಸರು ವೈದ್ಯನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

    ಪ್ರಕರಣದ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ ಬಬಲೂ ಕುಮಾರ್, ಪೋಷಕರ ಪ್ರಕಾರ ಜಾಲೌನ್ ನಗರದ ವೈದ್ಯನೋರ್ವ ಮಗಳಿಗೆ ಕಿರುಕುಳ ನೀಡುತ್ತಿದ್ದ ಹಾಗೂ ಧಮ್ಕಿ ಸಹ ಹಾಕಿದ್ದನು. ಬುಧವಾರ ಬೆಳಗ್ಗೆ ದೊರೆತ ಶವವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಯುವತಿಯ ಕತ್ತು ಮತ್ತು ತಲೆಯ ಭಾಗಗಳಲ್ಲಿ ಗಾಯಗಳು ಕಂಡು ಬಂದಿವೆ. ಘಟನೆಗೂ ಮುನ್ನ ಯುವತಿ ಜೊತೆ ಗಲಾಟೆ ನಡೆದಿರೋದು ಬೆಳಕಿಗೆ ಬಂದಿದೆ. ಘಟನಾ ಸ್ಥಳದ ವ್ಯಾಪ್ತಿಯ ಸಿಸಿಟಿವಿ ಫೂಟೇಜ್ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.