Tag: ಮೆದುಳು ಜ್ವರ

  • ಮೆದುಳು ಜ್ವರಕ್ಕೆ ಬಾಲಕ ಬಲಿ

    ಮೆದುಳು ಜ್ವರಕ್ಕೆ ಬಾಲಕ ಬಲಿ

    ವಿಜಯಪುರ: ಮೆದುಳು ಜ್ವರಕ್ಕೆ (Brain Fever) ಬಾಲಕ ಬಲಿಯಾದ ಘಟನೆ ನಡೆದಿದೆ. ವಿಜಯಪುರ ನಗರದ ಗೋಳಗುಮ್ಮಟ ಏರಿಯಾದಲ್ಲಿ ಘಟನೆ ನಡೆದಿದೆ.

    ಮೃತ ಬಾಲಕನನ್ನು ರಜಿತ್ ಮಿಥುನ್ ಅಳ್ಳಿಮೋರೆ (10) ಎಂದು ಗುರುತಿಸಲಾಗಿದೆ. ಈತ ಗೋಳಗುಮ್ಮಟ ಬಡವಾಣೆ ನಿವಾಸಿ. ಇದನ್ನೂ ಓದಿ: ಈಶ್ವರಪ್ಪ ಸ್ವಲ್ಪ ಉಗ್ರವಾದಿ, ಆದ್ರೆ ಗುಂಡು ಹಾರಿಸುವಷ್ಟು ಉಗ್ರರಲ್ಲ: ಸದಾನಂದ ಗೌಡ

    ಕಳೆದ ವಾರದ ಹಿಂದೆ ರಜಿತ್ ತೀವ್ರ ಜ್ವರದಿಂದ ಬಳಲುತ್ತಿದ್ದ. ಚಿಕಿತ್ಸೆಗಾಗಿ ಮಹಾರಾಷ್ಟ್ರದ ಸೊಲ್ಲಾಪುರ ಆಸ್ಪತ್ರೆಗೆ ರಜಿತ್ ನನ್ನ ದಾಖಲಿಸಲಾಗಿತ್ತು. ಜ್ವರ ನೆತ್ತಿಗೆ ಏರಿ ಮೆದುಳಲ್ಲಿ ಕಾಣಿಸಿಕೊಂಡ ಬಾವು ಬಂದಿತ್ತು. ಕಾರಣ ಚಿಕಿತ್ಸೆ ಫಲಿಸದೆ ಬಾಲಕನಿಂದು ಸಾವನ್ನಪ್ಪಿದ್ದಾನೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಮೆದುಳು ಜ್ವರದ ಲಕ್ಷಣಗಳು
    * ಜ್ವರ, ತಲೆನೋವು
    * ಮಗುವಿನ ತಲೆಯಲ್ಲಿ ಮೃದುವಾದ ಗುಳ್ಳೆಗಳು ಏಳುವುದು
    * ಬೆಳಕಿಗೆ ಕಣ್ಣು ತೆರೆಯಲು ಸಾಧ್ಯವಾಗದಿರುವುದು
    * ಕುತ್ತಿಗೆ ಬಿಗಿಯಾಗುವುದು
    * ಕೋಮಾವಸ್ಥೆ
    * ತ್ವಚೆಯಲ್ಲಿ ಗುಳ್ಳೆಗಳು
    * ಹಸಿವು ಇಲ್ಲದಿರುವುದು
    * ಮಾತನಾಡುವಾಗ ತೊದಲುವುದು
    * ಮೈಯಲ್ಲಿ ನಡುಕ

  • ಕೋಲಾರದಲ್ಲಿ ಮೆದುಳು ಜ್ವರ ಪತ್ತೆ- ಆರೋಗ್ಯ ಇಲಾಖೆಯಿಂದ ಅಲರ್ಟ್

    ಕೋಲಾರದಲ್ಲಿ ಮೆದುಳು ಜ್ವರ ಪತ್ತೆ- ಆರೋಗ್ಯ ಇಲಾಖೆಯಿಂದ ಅಲರ್ಟ್

    ಕೋಲಾರ: ಜಿಲ್ಲೆಯಲ್ಲಿ ಮೆದುಳು ಜ್ವರ (Brain Fever) ಪತ್ತೆಯಾಗಿದ್ದು, ಆರೋಗ್ಯ ಇಲಾಖೆಯಿಂದ ಅಲರ್ಟ್ ಘೊಷಿಸಲಾಗಿದೆ.

    ಕೋಲಾರ ತಾಲೂಕು ತೊಟ್ಲಿ ಗ್ರಾಮದಲ್ಲಿ ಮೆದುಳು ಜ್ವರ ಪ್ರಕರಣ ಪತ್ತೆಯಾಗಿದೆ. ಇದೊಂದು ಸಾಂಕ್ರಾಮಿಕ ರೋಗವಾದ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ.

    ತೊಟ್ಲಿ ಗ್ರಾಮದ ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಹಂದಿ ಸಾಕಾಣಿಕೆ ನಿಷೇಧ ಮಾಡಲಾಗಿದೆ. ಅಲ್ಲದೆ ಗ್ರಾಮ ಪಂಚಾಯತಿಯಿಂದ ಶುಚಿತ್ವ ಕಾಪಾಡುವಂತೆ ಆರೋಗ್ಯ ಇಲಾಖೆಯಿಂದ ಪತ್ರ ಬರೆಯಲಾಗಿದೆ. ಒಂದರಿಂದ 15 ವರ್ಷದ ಮಕ್ಕಳಿಗೆ ಲಸಿಕೆ ಹಾಕಿಸುವಂತೆಯೂ ಇಲಾಖೆ ತಿಳುವಳಿಕೆ ನೀಡುತ್ತಿದೆ.

    ಮೆದುಳು ಜ್ವರದ ಲಕ್ಷಣಗಳೆನು..?: ಜ್ವರ, ತಲೆನೋವು, ತ್ವಚೆಯಲ್ಲಿ ಗುಳ್ಳೆಗಳು, ಹಸಿವು ಇಲ್ಲದಿರುವುದು, ಮೈಯಲ್ಲಿ ನಡುಕ, ಬೆಳಕಿಗೆ ಕಣ್ಣು ತೆರೆಯಲು ಸಾಧ್ಯವಾಗದಿರುವುದು, ಮಾತನಾಡುವಾಗ ತೊದಲುವುದು ಮೊದಲಾದವುಗಳಾಗಿವೆ.

    ಪಾರಾಗುವುದು ಹೇಗೆ?: ಸೊಳ್ಳೆಯಿಂದ ಹರಡುವ ರೋಗವನ್ನು ತಡೆಯಲು ನಿಮ್ಮ ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛ ಗೊಳಿಸುವುದು ಮತ್ತು ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ನಿಲ್ಲಿಸುವುದು. ಅಲ್ಲದೆ ಸಾಕಷ್ಟು ನೀರು ಕುಡಿಯುವುದರಿಂದ ಮೆದುಳು ಜ್ವರದಿಂದ ಪಾರಾಗಬಹುದು.

    Live Tv
    [brid partner=56869869 player=32851 video=960834 autoplay=true]

  • ಮಿದುಳು ಜ್ವರದಿಂದ ಬಳಲುತ್ತಿದ್ದ ಬಾಲಕ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಶಿಫ್ಟ್

    ಮಿದುಳು ಜ್ವರದಿಂದ ಬಳಲುತ್ತಿದ್ದ ಬಾಲಕ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಶಿಫ್ಟ್

    ಬೆಳಗಾವಿ: ಮಿದುಳು ಜ್ವರದಿಂದ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದ ಬಾಲಕನನ್ನು ಬೆಳಗಾವಿಯ ಯಶ್ ಆಸ್ಪತ್ರೆಗೆ ಕರೆತರಲಾಗಿದೆ.

    ಪಬ್ಲಿಕ್ ಟಿವಿಯ ಕಳಕಳಿಯ ಸುದ್ದಿಗೆ ಸ್ಪಂದಿಸಿರುವ ಬೆಳಗಾವಿ ಫೇಸ್‍ಬುಕ್ ಫ್ರೆಂಡ್ಸ್ ಸರ್ಕಲ್ ತಂಡದವರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯ ವೆಚ್ಚವನ್ನು ಭರಿಸಿದ್ದಾರೆ. ಈಗಾಗಲೇ ಬಾಲಕನನ್ನು ನಗರದ ಯಶ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಅಂಬರಡಾ ಗ್ರಾಮದ ಶೈಲೇಶ್(8)ಗೆ ಮಿದುಳು ಜ್ವರ ಬಂದು ಕೋಮಾದಲ್ಲಿದ್ದನು. ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದನು. ಇತ್ತ ಮಗನನ್ನು ಉಳಿಸಿಕೊಳ್ಳಲು ತಂದೆ-ತಾಯಿ ಆಸ್ಪತ್ರೆಗಳಿಗೆ ಅಲೆದಾಡಿ ಕೊನೆಗೆ ದೇವರ ಮೊರೆ ಹೋಗಿದ್ದರು. ಈ ಕುರಿತು ಪಬ್ಲಿಕ್ ಟಿವಿ ಇಂದು ಬೆಳಗ್ಗೆ ಮಾನವೀಯ ಸುದ್ದಿಯನ್ನು ಪ್ರಕಟಿಸಿತ್ತು. ಇದನ್ನೂ ಓದಿ: ನನ್ನ ಮಗನನ್ನು ಉಳಿಸು ದೇವರೇ – ಶಿಲುಬೆ ಮುಂದೆ ಕಂದನನ್ನು ಮಲಗಿಸಿದ ದಂಪತಿ 

    ಪಬ್ಲಿಕ್ ಟಿವಿ ಸುದ್ದಿಯನ್ನು ಗಮನಿಸಿದ ಫೇಸ್‍ಬುಕ್ ಫ್ರೆಂಡ್ ಸರ್ಕಲ್ ಯುವಕರು ಕೋಮಾದಲ್ಲಿದ್ದ ಬಾಲಕನನ್ನು ಖಾನಾಪೂರ ತಾಲೂಕಿನ ನಂದಗಡ ಗ್ರಾಮದಿಂದ ಬೆಳಗಾವಿಯ ಯಶ್ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ಕರೆದುಕೊಂಡು ಬಂದಿದ್ದಾರೆ. ಸದ್ಯ ಯಶ್ ಆಸ್ಪತ್ರೆಯಲ್ಲಿ ಶೈಲೇಶ್ ಆರೋಗ್ಯವನ್ನ ವೈದ್ಯರು ತಪಾಸಣೆ ಮಾಡುತ್ತಿದ್ದಾರೆ.

    ಯಶ್ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಎಸ್.ಕೆ.ಪಾಟೀಲ್ ಅವರಿಂದ ಚಿಕಿತ್ಸೆ ಪ್ರಾರಂಭಿಸಲಾಗಿದೆ. ಬಾಲಕನನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತ ಆಸ್ಪತ್ರೆಗೆ ಬೆಳಗಾವಿ ಡಿಎಚ್‍ಓ ಅವರು ಭೇಟಿ ನೀಡಿ ಮಗುವಿನ ಆರೋಗ್ಯವನ್ನ ಪರಿಶೀಲನೆ ನಡೆಸಿದ್ದಾರೆ. ಮಗವಿನ ಚಿಕಿತ್ಸೆಗೆ ಬೇಕಾದ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಭರವಸೆ ಕೊಟ್ಟಿದ್ದಾರೆ. ಇದನ್ನೂ ಓದಿ: ರಾಜ್ಯಾದ್ಯಂತ ಮುಂದಿನ 4 ದಿನ ಭಾರೀ ಮಳೆ – 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ 

    ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಕೂಡ ಮಗುವಿನ ಆರೋಗ್ಯ ತಪಾಸಣೆಗೆ ಬೇಕಾದ ಅಗತ್ಯ ಖರ್ಚುವೆಚ್ಚವನ್ನು ಭರಿಸುವುದಾಗಿ ತಿಳಿಸಿದ್ದಾರೆ.

    Live Tv

  • ಮೆದುಳು ಜ್ವರಕ್ಕೆ ಮೃತಪಟ್ಟ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು

    ಮೆದುಳು ಜ್ವರಕ್ಕೆ ಮೃತಪಟ್ಟ ಮಕ್ಕಳ ಸಂಖ್ಯೆ 108ಕ್ಕೆ ಏರಿಕೆ- 290 ಮಕ್ಕಳು ಆಸ್ಪತ್ರೆಗೆ ದಾಖಲು

    ಪಾಟ್ನಾ: ಅಕ್ಯೂಟ್ ಎನ್ಸೆಫಾಲಿಟಿಸ್ ಸಿಂಡ್ರೋಮ್(ಎಇಎಸ್)ಗೆ ಬಿಹಾರದ ಮುಜಾಫರ್​​​ನಗರ ತತ್ತರಿಸಿ ಹೋಗಿದ್ದು, ಈವರೆಗೆ ಮೆದುಳು ಜ್ವರಕ್ಕೆ ಬರೋಬ್ಬರಿ 108 ಮಕ್ಕಳು ಬಲಿಯಾಗಿದ್ದಾರೆ.

    ಈ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ನಿತೀಶ್ ಕುಮಾರ್, ಶ್ರೀಕೃಷ್ಣ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಿದರು. ಜಿಲ್ಲಾಧಿಕಾರಿಗಳ ಪ್ರಕಾರ, ಮಿದುಳು ಜ್ವರದಿಂದ ಬಳಲುತ್ತಿದ್ದ 89 ಮಕ್ಕಳು ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟರೆ, 19 ಮಕ್ಕಳು ಕೇಜ್ರಿವಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಶ್ರೀಕೃಷ್ಣ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಇನ್ನೂ 290 ಮಕ್ಕಳು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಸೋಮವಾರದಂದು ನಡೆದ ರಾಜ್ಯ ಆರೋಗ್ಯ ಇಲಾಖೆಯ ಸಭೆ ವೇಳೆ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಮಕ್ಕಳು ಮೆದುಳು ಜ್ವರದಿಂದ ಸಾವನ್ನಪ್ಪುತ್ತಿರುವುದರ ಬಗ್ಗೆ ಮಾತನಾಡುವ ಬದಲು ಕ್ರಿಕೆಟ್ ಪಂದ್ಯದ ಕುರಿತು ಪ್ರಶ್ನಿಸುತ್ತಿದ್ದು ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರುತ್ತಿರುದಕ್ಕೆ ಉದಾಹರಣೆಯಾಗಿದೆ. ‘ಕ್ರಿಕೆಟ್ ಪಂದ್ಯದ ಫಲಿತಾಂಶ ಏನಾಯ್ತು?’ ಎಂದು ಸಚಿವರು ಪ್ರಶ್ನಿಸುತ್ತಿರುವುದು ಮತ್ತು ಮತ್ತೊಬ್ಬ ವ್ಯಕ್ತಿ `4ನೇ ವಿಕೆಟ್ ಹೊಗಿದೆ’ ಎಂದು ಸಭೆಯಲ್ಲಿ ಹೇಳಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಮಕ್ಕಳ ಸಾವಿನ ಕುರಿತು ರಾಜ್ಯದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿರುವುದು ಸರ್ಕಾರಕ್ಕೆ ತೀವ್ರ ಮುಜುಗರ ಸೃಷ್ಟಿಸಿದ್ದು, ಸಚಿವರ ಈ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

    ಈ ಹಿಂದೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಹಾಯಕ ಸಚಿವ ಅಶ್ವಿನಿ ಕುಮಾರ್ ಚೌಬೆ ತೂಕಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿತ್ತು. ಆ ಬಳಿಕ ಈ ಬಗ್ಗೆ ಚೌಬೆ ಅವರು ಸ್ಪಷ್ಟಿಕರಿಸಿ, ‘ನಾನು ನಿದ್ರಿಸುತ್ತಿರಲಿಲ್ಲ, ಪತ್ರಿಕಾಗೋಷ್ಠಿ ಬಗ್ಗೆ ಯೋಚಿಸುತ್ತಿದ್ದೆ’ ಎಂದು ಹೇಳಿದ್ದರು. ಆ ಬಳಿಕ ಸೋಮವಾರ ಸ್ವತಃ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರೇ, ಸಾವಿನ ಬಗ್ಗೆ ಪ್ರತಿದಿನ ಹೇಳಿಕೆಗಳನ್ನು ನೀಡುವುದಿಲ್ಲ ಎಂದಿದ್ದರು.

    ಆಸ್ಪತ್ರೆಗೆ ದಾಖಲಾಗಿರುವವರು, ನೀಡಲಾಗುತ್ತಿರುವ ಚಿಕಿತ್ಸೆ, ಮೃತಪಟ್ಟ ಕುಟುಂಬಕ್ಕೆ ನೀಡುವ ಪರಿಹಾರ, ನೆರವುಗಳ ಕುರಿತು ವರದಿ ಸಲ್ಲಿಸುವಂತೆ ಮಾನವ ಹಕ್ಕುಗಳ ಆಯೋಗ ಆರೋಗ್ಯ ಸಚಿವಾಲಯಕ್ಕೆ ಕೇಳಿದೆ. ಹಾಗೆಯೇ ಈ ಬಗ್ಗೆ ನಾಲ್ಕು ವಾರದೊಳಗೆ ಉತ್ತರ ನೀಡುವಂತೆ ತಿಳಿಸಿದೆ.